Connect with us

ದೇಶ

70 ವರ್ಷ ಮೇಲ್ಪಟ್ಟವರಿಗೆ ಆರೋಗ್ಯ ರಕ್ಷಣೆ ಯೋಜನೆಗೆ ಚಾಲನೆ ನೀಡಿದ ಮೋದಿ

Published

on

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ ಅಡಿಯಲ್ಲಿ 70 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಎಲ್ಲಾ ಹಿರಿಯ ನಾಗರಿಕರಿಗೆ ಆರೋಗ್ಯ ರಕ್ಷಣೆ ಯೋಜನೆಯನ್ನು ಬಿಡುಗಡೆ ಮಾಡಿದ್ದಾರೆ,
ಈ ಯೋಜನೆಯ ಅಡಿಯಲ್ಲಿ ಆಯುಷ್ಮಾನ್ ಕಾರ್ಡ್ ಅನ್ನು ಪಡೆದುಕೊಳ್ಳುವವರು ಅಕ್ಟೋಬರ್ 29 ರಿಂದ ಯಾವುದೇ ಎಬಿ ಪಿಎಂಜಿಎವೈ ಎಂಪನೆಲ್ ಆಸ್ಪತ್ರೆಗಳಲ್ಲಿ 5 ಲಕ್ಷ ರೂ ವರೆಗಿನ ಉಚಿತ ಚಿಕಿತ್ಸೆಯನ್ನು ಪಡೆಯಬಹುದು.
ವ್ಯಕ್ತಿಯ ಆಧಾರ್ ಕಾರ್ಡ್‍ನ ಪ್ರಕಾರ 70 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಎಲ್ಲಾ ನಾಗರಿಕರು ಆದಾಯದ ಸ್ಧಿತಿ ಏನೇ ಇದ್ದರೂ ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ ಅಡಿಯಲ್ಲಿ ಆರೋಗ್ಯ ರಕ್ಷಣೆಗೆ ಅರ್ಹರಾಗಿರುತ್ತಾರೆ, ಈ ಯೋಜನೆಯು ಸುಮಾರು 4.5 ಕೋಟಿ ಕುಟುಂಬಗಳಲ್ಲಿನ ಅಂದಾಜು ಆರು ಕೋಟಿ ನಾಗರಿಕರಿಗೆ ಪ್ರಯೋಜನವನ್ನು ನೀಡಲಿದೆ,
ದೆಹಲಿ, ಒಡಿಶಾ ಮತ್ತು ಪಶ್ಚಿಮ ಬಂಗಾಳವನ್ನು ಜೊರತುಪಡಿಸಿ ಪ್ರಸ್ತುತ 33 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಈ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ,
ಆರೋಗ್ಯ ರಕ್ಷಣೆಯನ್ನು ಯೋಜನೆಯ ಉಪಯೋಗ ಪಡೆಯಲು ಜನರು ಪಿಎಂಜಿಎವೈ ಪೋರ್ಟಲ್ ನಲ್ಲಿ ಅಥವಾ ಆಯುಷ್ಮಾನ್ ಅಪ್ಲಿಕೇಶನ್ ನಲ್ಲಿ ನೋಂದಾಯಿಸಿಕೊಳ್ಳಬೇಕು, ಈಗಾಗಲೇ ಆಯುಷ್ಮಾನ್ ಕಾರ್ಡ್ ಹೊಂದಿರುವವರು ಪೋರ್ಟಲ್ ಅಥವಾ ಆ್ಯಪ್‍ನಲ್ಲಿ ಮತ್ತೊಮ್ಮೆ ಅರ್ಜಿ ಸಲ್ಲಿಸಬೇಕು ಮತ್ತು ಹೊಸ ಕಾರ್ಡ್‍ಗಾಗಿ ತಮ್ಮ ಇಕೆವೈಸಿ ಅನ್ನು ಪೂರ್ಣಗೊಳಿಸಬೇಕು…

ದೇಶ

ಸಾರ್ವಜನಿಕರಿಗೆ ಗುಡ್ ನ್ಯೂಸ್! ಭಾನುವಾರವೂ ಸಿಗಲಿವೆ ನೋಂದಣಿ ಸೇವೆಗಳು

Published

on

ಬೆಂಗಳೂರು: ರಾಜ್ಯದಾದ್ಯಂತ ಇರುವ ಎಲ್ಲಾ ಉಪ ನೋಂದಣಿ ಕಚೇರಿಗಳು ಜುಲೈ 12ರ ಭಾನುವಾರ ರಜಾ ದಿನವಾಗಿದ್ದರೂ ಸಾರ್ವಜನಿಕರ ಅನುಕೂಲಕ್ಕಾಗಿ ಎಂದಿನಂತೆ ಕಾರ್ಯನಿರ್ವಹಿಸಲಿವೆ ಎಂದು ನೋಂದಣಿ ಮತ್ತು ಮುದ್ರಾಂಕಗಳ ಇಲಾಖೆ ಮಹತ್ವದ ಪ್ರಕಟಣೆ ಹೊರಡಿಸಿದೆ.

ಸಾಮಾನ್ಯವಾಗಿ ಭಾನುವಾರ ಸರ್ಕಾರಿ ಕಚೇರಿಗಳಿಗೆ ರಜೆ ಇರುತ್ತದೆ. ಆದರೆ ಇಲಾಖೆಯಲ್ಲಿ ಹೆಚ್ಚುತ್ತಿರುವ ಕಾರ್ಯದೊತ್ತಡವನ್ನು ಕಡಿಮೆ ಮಾಡುವ ಜೊತೆಗೆ ಸಾರ್ವಜನಿಕರಿಗೆ ತ್ವರಿತ ಸೇವೆ ಒದಗಿಸುವ ಉದ್ದೇಶದಿಂದ ಈ ವಿಶೇಷ ನಿರ್ಧಾರ ಕೈಗೊಳ್ಳಲಾಗಿದೆ. ಇದರಿಂದ ಆಸ್ತಿ ನೋಂದಣಿ ಸೇರಿದಂತೆ ವಿವಿಧ ಸೇವೆಗಳನ್ನು ಪಡೆಯಲು ಕಾಯುತ್ತಿದ್ದವರಿಗೆ ಅನುಕೂಲವಾಗಲಿದೆ.

ಇಲಾಖೆಯ ಪ್ರಕಟಣೆಯ ಪ್ರಕಾರ, ಜುಲೈ 12ರಂದು ಎಲ್ಲಾ ಉಪ ನೋಂದಣಿ ಕಚೇರಿಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲಿವೆ. ಸಾರ್ವಜನಿಕರು ಎಂದಿನಂತೆ ಆಸ್ತಿ ನೋಂದಣಿ, ಮುದ್ರಾಂಕ (Stamp) ಖರೀದಿ ಹಾಗೂ ಇಲಾಖೆಗೆ ಸಂಬಂಧಿಸಿದ ಇತರ ಸೇವೆಗಳನ್ನು ಯಾವುದೇ ಅಡಚಣೆಯಿಲ್ಲದೆ ಪಡೆಯಬಹುದಾಗಿದೆ.

ಈ ವಿಶೇಷ ವ್ಯವಸ್ಥೆಯಿಂದ ವಾರದ ಕೆಲಸದ ದಿನಗಳಲ್ಲಿ ಕಚೇರಿಗೆ ತೆರಳಲು ಸಾಧ್ಯವಾಗದ ಉದ್ಯೋಗಿಗಳು, ವ್ಯಾಪಾರಸ್ಥರು ಹಾಗೂ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ. ಈಗಾಗಲೇ ನೋಂದಣಿ ಪ್ರಕ್ರಿಯೆಗೆ ಸಮಯ ನಿಗದಿಪಡಿಸಿಕೊಂಡಿರುವವರು ಕೂಡ ಈ ಅವಕಾಶವನ್ನು ಬಳಸಿಕೊಳ್ಳಬಹುದು.

ನೋಂದಣಿ ಮತ್ತು ಮುದ್ರಾಂಕಗಳ ಇಲಾಖೆ ಸಾರ್ವಜನಿಕರು ಈ ವಿಶೇಷ ಸೇವೆಯ ಸದುಪಯೋಗ ಪಡೆದು ತಮ್ಮ ನೋಂದಣಿ ಸಂಬಂಧಿತ ಕೆಲಸಗಳನ್ನು ಪೂರ್ಣಗೊಳಿಸಿಕೊಳ್ಳುವಂತೆ ಮನವಿ ಮಾಡಿದೆ. ಭಾನುವಾರವೂ ಸೇವೆ ಲಭ್ಯವಿರುವುದರಿಂದ ನೋಂದಣಿ ಪ್ರಕ್ರಿಯೆಯಲ್ಲಿ ಉಂಟಾಗುವ ವಿಳಂಬವೂ ಕಡಿಮೆಯಾಗುವ ನಿರೀಕ್ಷೆಯಿದೆ.

Continue Reading

ದೇಶ

14 ಗಂಟೆಯಲ್ಲಿ 265 ಕಿ.ಮೀ ಪಯಣ; MLA ಸುರೇಶ್ ಕುಮಾರ್ ಅವರ ಫಿಟ್ನೆಸ್‌ಗೆ ಜನ ಫಿದಾ

Published

on

ಬೆಂಗಳೂರು: ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಸ್. ಸುರೇಶ್ ಕುಮಾರ್ ಅವರು ಮತ್ತೊಮ್ಮೆ ತಮ್ಮ ಫಿಟ್ನೆಸ್ ಮತ್ತು ಆರೋಗ್ಯದ ಬಗ್ಗೆ ಇರುವ ಬದ್ಧತೆಯನ್ನು ಸಾಬೀತುಪಡಿಸಿದ್ದಾರೆ. 70 ವರ್ಷದ ವಯಸ್ಸಿನಲ್ಲಿಯೂ ಯುವಕರಿಗೆ ಮಾದರಿಯಾಗುವಂತೆ ಅವರು ಬೆಂಗಳೂರುದಿಂದ ತಿರುಪತಿವರೆಗೆ 265 ಕಿಲೋಮೀಟರ್‌ಗಳನ್ನು ಸೈಕಲ್‌ನಲ್ಲಿ ಕ್ರಮಿಸಿ ಗಮನ ಸೆಳೆದಿದ್ದಾರೆ.

ರಾಜಾಜಿನಗರ ಪೆಡಲ್ ಪವರ್-ಸೈಕ್ಲಿಂಗ್‘ ತಂಡದ ಸದಸ್ಯರೊಂದಿಗೆ ಅವರು ಜುಲೈ 10ರಂದು ಆರಂಭವಾದ ಈ ಸೈಕ್ಲಿಂಗ್ ಯಾತ್ರೆಯಲ್ಲಿ ಭಾಗವಹಿಸಿದ್ದರು. ಜುಲೈ 9ರಂದು ಬೆಳಗ್ಗೆ 4:30ಕ್ಕೆ ಬಸವೇಶ್ವರನಗರದಿಂದ ಹೊರಟ ತಂಡವು ಶುಕ್ರವಾರ ಮಧ್ಯಾಹ್ನ ಸುಮಾರು 2 ಗಂಟೆಗೆ ತಿರುಪತಿ ತಲುಪಿತು. ಮಧ್ಯದಲ್ಲಿ ಮದನಪಲ್ಲಿಯಲ್ಲಿ ರಾತ್ರಿ ವಾಸ್ತವ್ಯ ಮಾಡಿದ್ದ ತಂಡ ಒಟ್ಟು 265 ಕಿಲೋಮೀಟರ್‌ಗಳನ್ನು ಸುಮಾರು 14 ಗಂಟೆ 10 ನಿಮಿಷಗಳಲ್ಲಿ ಪೂರ್ಣಗೊಳಿಸಿದೆ.

ವಿಶೇಷವೆಂದರೆ, ಇದು ಸುರೇಶ್ ಕುಮಾರ್ ಅವರ ಮೊದಲ ತಿರುಪತಿ ಸೈಕಲ್ ಯಾತ್ರೆಯಲ್ಲ. 2024 ಮತ್ತು 2025ರಲ್ಲೂ ಇದೇ ರೀತಿಯಲ್ಲಿ ಸೈಕಲ್ ಮೂಲಕ ತಿರುಪತಿಗೆ ತೆರಳಿ ಆರೋಗ್ಯಕರ ಜೀವನಶೈಲಿಯ ಮಹತ್ವವನ್ನು ಸಾರಿದ್ದರು. ಈ ವರ್ಷವೂ ತಮ್ಮ ತಂಡದೊಂದಿಗೆ ಪೆಡಲ್ ಹೊಡೆದು ಯಶಸ್ವಿಯಾಗಿ ಗುರಿ ತಲುಪಿದ್ದಾರೆ.

ಪ್ರಯಾಣದ ಬಳಿಕ ಮಾತನಾಡಿದ ಶಾಸಕ ಎಸ್. ಸುರೇಶ್ ಕುಮಾರ್, “ಈ ಯಾತ್ರೆ ನಮ್ಮ ತಂಡಕ್ಕೆ ಹೊಸ ಉತ್ಸಾಹ ಮತ್ತು ಆತ್ಮವಿಶ್ವಾಸ ನೀಡಿದೆ. ಇಂತಹ ಸೈಕ್ಲಿಂಗ್ ಚಟುವಟಿಕೆಗಳು ಆರೋಗ್ಯ ಕಾಪಾಡಿಕೊಳ್ಳಲು ಅತ್ಯುತ್ತಮ ಮಾರ್ಗ” ಎಂದು ಹೇಳಿದರು.

ಸಾರ್ವಜನಿಕ ಜೀವನದ ಜೊತೆಗೆ ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡಿರುವ ಸುರೇಶ್ ಕುಮಾರ್ ಅವರ ಈ ಸಾಧನೆ ಸಾಮಾಜಿಕ ಜಾಲತಾಣಗಳಲ್ಲೂ ಮೆಚ್ಚುಗೆಗೆ ಪಾತ್ರವಾಗಿದ್ದು, ಯುವಜನತೆಗೆ ಮಾತ್ರವಲ್ಲದೆ ಎಲ್ಲ ವಯೋಮಾನದವರಿಗೂ ಫಿಟ್ನೆಸ್ ಬಗ್ಗೆ ಜಾಗೃತಿ ಮೂಡಿಸುವ ಸಂದೇಶವಾಗಿದೆ.

Continue Reading

ಚುನಾವಣೆ

ನರೋತ್ತಮ್ ಮಿಶ್ರಾಗೆ ಬಿಜೆಪಿ ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ಭಾರೀ ಬಂಡಾಯ! ರಸ್ತೆ ತಡೆ, ಕಲ್ಲು ತೂರಾಟ, ಹಲವು ರಾಜೀನಾಮೆ

Published

on

ಭೋಪಾಲ್: ಮಧ್ಯಪ್ರದೇಶದ ದತಿಯಾ ವಿಧಾನಸಭಾ ಉಪಚುನಾವಣೆಗೆ ಮಾಜಿ ಗೃಹಸಚಿವ ನರೋತ್ತಮ್ ಮಿಶ್ರಾ ಅವರಿಗೆ ಬಿಜೆಪಿ ಟಿಕೆಟ್ ನೀಡದೆ, ಅವರ ಬದಲಿಗೆ ಅಶುತೋಷ್ ತಿವಾರಿ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿರುವುದು ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಈ ನಿರ್ಧಾರವನ್ನು ವಿರೋಧಿಸಿ ದತಿಯಾ ಬಿಜೆಪಿ ಘಟಕದಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದ್ದು, ಜಿಲ್ಲಾಧ್ಯಕ್ಷ ರಘುವೀರ್ ಶರಣ್ ಸೇರಿದಂತೆ ಹಲವು ಕೌನ್ಸಿಲರ್‌ಗಳು ತಮ್ಮ ಸ್ಥಾನಗಳಿಗೆ ರಾಜೀನಾಮೆ ಸಲ್ಲಿಸಿದ್ದಾರೆ.

ಟಿಕೆಟ್ ನಿರಾಕರಣೆಯ ಸುದ್ದಿ ಹೊರಬಿದ್ದ ತಕ್ಷಣ ಸಾವಿರಾರು ಬೆಂಬಲಿಗರು NH-44 ಝಾನ್ಸಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಪರಿಣಾಮ ಸುಮಾರು 15 ಕಿಲೋಮೀಟರ್‌ಗಳಷ್ಟು ಸಂಚಾರ ದಟ್ಟಣೆ ಉಂಟಾಗಿ ಸಾರ್ವಜನಿಕರು ಪರದಾಡುವಂತಾಯಿತು. ಪ್ರತಿಭಟನೆ ವೇಳೆ ಕೆಲವರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡ ಹಿನ್ನೆಲೆಯಲ್ಲಿ ಹೆಚ್ಚುವರಿ ಪೊಲೀಸ್ ಪಡೆಯನ್ನು ನಿಯೋಜಿಸಲಾಯಿತು.

ದತಿಯಾ ಎಸ್‌ಪಿ ಮಯೂರ್ ಖಾಂಡೇಲ್ವಾಲ್ ಅವರ ಪ್ರಕಾರ, 3,000ಕ್ಕೂ ಹೆಚ್ಚು ಪ್ರತಿಭಟನಾಕಾರರು ಮಾರುಕಟ್ಟೆ ಬಂದ್ ಮಾಡಲು ಯತ್ನಿಸಿದ್ದು, ಹಲವು ಬಾರಿ ಮನವಿ ಮಾಡಿದರೂ ರಸ್ತೆ ತಡೆ ಹಿಂಪಡೆಯಲಿಲ್ಲ. ಬಳಿಕ ಪೊಲೀಸರು ಅಶ್ರುವಾಯು ಬಳಸಿದರೂ ಕಲ್ಲು ತೂರಾಟ ಮತ್ತಷ್ಟು ತೀವ್ರಗೊಂಡಿತು. ಘಟನೆಯಲ್ಲಿ ಆರುಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದು, ಹೆಚ್ಚುವರಿ ಎಸ್‌ಪಿ ಹಾಗೂ ಎಸ್‌ಪಿಗೂ ಗಾಯಗಳಾಗಿವೆ. ಕೆಲವರನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.

ಯಾರು ನರೋತ್ತಮ್ ಮಿಶ್ರಾ?

ನರೋತ್ತಮ್ ಮಿಶ್ರಾ ಮಧ್ಯಪ್ರದೇಶದ ಹಿರಿಯ ಬಿಜೆಪಿ ನಾಯಕ ಹಾಗೂ ಮಾಜಿ ಗೃಹಸಚಿವರಾಗಿದ್ದಾರೆ. 2008ರಿಂದ ದತಿಯಾ ಕ್ಷೇತ್ರವನ್ನು ಪ್ರತಿನಿಧಿಸಿರುವ ಅವರು ಶಿವರಾಜ್ ಸಿಂಗ್ ಚೌಹಾಣ್ ಸರ್ಕಾರದಲ್ಲಿ ಗೃಹ, ಆರೋಗ್ಯ, ವೈದ್ಯಕೀಯ ಶಿಕ್ಷಣ, ಜಲಸಂಪನ್ಮೂಲ, ನಗರಾಭಿವೃದ್ಧಿ ಸೇರಿದಂತೆ ಹಲವು ಪ್ರಮುಖ ಸಚಿವಾಲಯಗಳನ್ನು ನಿರ್ವಹಿಸಿದ್ದರು.

ಉಪಚುನಾವಣೆ ಏಕೆ ನಡೆಯುತ್ತಿದೆ?

ಕಾಂಗ್ರೆಸ್ ಶಾಸಕ ರಾಜೇಂದ್ರ ಭಾರತಿ ವಿರುದ್ಧ ವಂಚನೆ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಬಳಿಕ ಅವರ ಶಾಸಕ ಸ್ಥಾನ ರದ್ದುಗೊಂಡಿದೆ. ಇದರ ಪರಿಣಾಮವಾಗಿ ದತಿಯಾ ಕ್ಷೇತ್ರಕ್ಕೆ ಜುಲೈ 30ರಂದು ಉಪಚುನಾವಣೆ ನಡೆಯಲಿದ್ದು, ಆಗಸ್ಟ್ 3ರಂದು ಮತ ಎಣಿಕೆ ನಡೆಯಲಿದೆ. ಟಿಕೆಟ್ ಘೋಷಣೆಯ ಬೆನ್ನಲ್ಲೇ ಬಿಜೆಪಿ ಒಳಜಗಳ ತೀವ್ರಗೊಂಡಿರುವುದು ಚುನಾವಣೆಗೆ ಹೊಸ ತಿರುವು ನೀಡಿದೆ.

Continue Reading

Trending