Connect with us

ರಾಜಕೀಯ

ಬೇಲಿನೇ ಎದ್ದು ಹೊಲ ಮೇಯ್ದಂತೆ”: ವಕ್ಫ್ ಬೋರ್ಡ್​ಗೆ ಜಮೀರ್​ ಅಹಮದ್ ಕುಮ್ಮಕ್ಕು – ಬಿ.ವೈ. ವಿಜಯೇಂದ್ರ

Published

on

ಹಾಸನ: “ರೈತರು ಉಳುಮೆ ಮಾಡುವ ಭೂಮಿಯನ್ನು ಕಿತ್ತುಕೊಳ್ಳುವ ಕೆಲಸ ವಕ್ಫ್ ಬೋರ್ಡ್ ಮಾಡುತ್ತಿದ್ದು, ಇದಕ್ಕೆ ಕುಮ್ಮಕ್ಕು ಕೊಡುವ ಕೆಲಸ ಜಮೀರ್​ ಅಹಮದ್​ ಖಾನ್​ ಮಾಡುತ್ತಿರುವುದು ದುರದೃಷ್ಠಕರ, ತಕ್ಷಣದಲ್ಲಿ ಸುಧಾರಿಸದೇ ಹೋದರೇ ಹಚ್ಚಿರುವ ಬೆಂಕಿ ಆರಿಸಲು ಸಾಧ್ಯವಾಗುವುದಿಲ್ಲ. ಮುಂದೆ ಸರಕಾರದ ವಿರುದ್ಧ ಹೋರಾಟ ಮಾಡಬೇಕಾಗುತ್ತದೆ” ಎಂದು ರಾಜ್ಯ ಸರಕಾರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಎಚ್ಚರಿಕೆ ನೀಡಿದ್ದಾರೆ.

ಹಾಸನಾಂಬ ದರ್ಶನದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿ, “ಇವತ್ತು ಬೇಲಿನೇ ಎದ್ದು ಹೊಲ ಮೇಯ್ದಂತೆ ಆಗಿದೆ. ರಾಜ್ಯದಲ್ಲಿ ಅಶಾಂತಿ ಮೂಡಿಸುವ ಕೆಲಸ ಜಮೀರ್​ ಮಾಡುತ್ತಿದ್ದಾರೆ. ಹಲವಾರು ದಶಕಗಳಿಂದ ರೈತರು ಉಳುಮೆ ಮಾಡುತ್ತಿದ್ದು, ಇದನ್ನು ವಕ್ಫ್​​ ಬೋರ್ಡ್​ ಕಿತ್ತುಕೊಳ್ಳುವ ಕೆಲಸ ಮಾಡುತ್ತಿದೆ. ಇದಕ್ಕೆ ಕುಮ್ಮಕ್ಕು ಕೊಡುವ ಕೆಲಸ ಜಮೀರ್ ಅಹಮದ್ ಮಾಡುತ್ತಿರುವುದು ದುರದೃಷ್ಠಕರ”.

“ತಕ್ಷಣ ಇದನ್ನು ಸುಧಾರಿಸದೇ ಹೋದರೇ ನೀವು ಹಚ್ಚಿರುವ ಕಿಡಿ ರಾಜ್ಯಾದ್ಯಂತ ಬೆಂಕಿ ಹಚ್ಚಿಕೊಳ್ಳುತ್ತದೆ. ಅದನ್ನು ಆರಿಸಲು ಸಾಧ್ಯವಾಗುವುದಿಲ್ಲ ಈ ಸರಕಾರಕ್ಕೆ” ಎಂದು ಎಚ್ಚರಿಸಿ, “ಇಂತಹ ಕಿಚ್ಚು ಹಚ್ಚುವ ಕೆಲಸ ಬಿಟ್ಟು ದೇವರು ಮೆಚ್ಚುವ ಕೆಲಸ ಮಾಡಿದರೇ ಒಳ್ಳೆಯದು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಮನೆಗೆ ಅತಿಥಿಗಳು ಬಂದಾಗ ಚೆನ್ನಾಗಿ ನೋಡಿಕೊಳ್ಳಬೇಕಾಗುತ್ತದೆ. ಮನೆಯಿಂದ ಹೊರ ಹೋದ ಮೇಲೆ ಅದರ ಪ್ರಶ್ನೆಯೇ ಇಲ್ಲ. ಹೊರ ಹೋದ ಮೇಲೆ ಯಾರಾರು ಅಡ್ಜಸ್ಟ್ಮೆಂಟ್ ಪಾಲಿಟಿಕ್ಸ್ ಮಾಡುತ್ತಾರೆ. ಒಬ್ಬೊಬ್ಬರನ್ನೇ ಪಕ್ಷದಿಂದ ಹೊರ ಹಾಕುವ ಕೆಲಸವನ್ನು ಯಶಸ್ವಿಯಾಗಿ ಮಾಡುತ್ತಿದ್ದೇವೆ. ನಮ್ಮ ಪಕ್ಷ ಶುದ್ದೀಕರಣ ಆಗಬೇಕೆಂದು ಅನೇಕ ಹಿರಿಯರ ಒಂದು ಆಸೆ ಇತ್ತು. ಅವರ ಆಸೆಗೆ ತಕ್ಕಂತೆ ಶುದ್ದೀಕರಣ ಕೂಡ ಆಗುತ್ತಿದೆ. ಬರುವ ದಿನಗಳಲ್ಲಿ ಎಲ್ಲವೂ ಕೂಡ ಸರಿ ಹೋಗುತ್ತದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಾನಂತೂ ಅದರ ಬಗ್ಗೆ ಏನು ತಲೆಕೆಡಿಸಿಕೊಳ್ಳುವ ಪ್ರಶ್ನೆ ಇಲ್ಲ: ಮುಂದುವರೆದು, ಯತ್ನಾಳ್, ರಮೇಶ್ ಜಾರಕಿಹೋಳಿ ಅಸಮಾಧಾನ ವಿಚಾರದ ಕುರಿತು ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿ, “ಅವರ ಅಸಮಾಧಾನ ಹೊರಹಾಕಲು ಬೇರೆ ವ್ಯವಸ್ಥೆ ಮಾಡಿಕೊಡಬೇಕು. ಆ ದಿಕ್ಕಿನಲ್ಲಿ ಯೋಚನೆ ಮಾಡುತ್ತಾ ಇದ್ದೇವೆ. ನಾನಂತೂ ಅದರ ಬಗ್ಗೆ ಏನು ತಲೆಕೆಡಿಸಿಕೊಳ್ಳುವ ಪ್ರಶ್ನೆ ಇಲ್ಲ. ಮಾಡಲು ಬೇಕಾದಷ್ಟು ಕೆಲಸವಿದೆ. ಅದರಲ್ಲೂ ಸಂಘಟನೆ ಕೆಲಸ ಇದ್ದು, ಉಪಚುನಾವಣೆ ನಡೆಯುತ್ತಿದ್ದು, ಚುನಾವಣೆಯಲ್ಲಿ ಫಲಿತಾಂಶ ನಮ್ಮ ಪರವಾಗಿರುತ್ತದೆ ಎಂದರು.

“ಇವತ್ತು ವಕ್ಫ್ ವಿಚಾರವಾಗಿ ಹೋರಾಟವನ್ನು ಕೈಗೊಳ್ಳಬೇಕಾಗುತ್ತದೆ. ಆ ವಿಚಾರವನ್ನು ಗಂಭೀರವಾಗಿ ತೆಗೆದುಕೊಳ್ತೇವೆ. ಗೋವಿಂದ್ ಕಾರಜೋಳ ನೇತೃತ್ವದ ತಂಡ ವಿಜಯಪುರದ ಎಲ್ಲಾ ಕಡೆ ಭೇಟಿ ನೀಡಿದ್ದು, ಅಧಿಕಾರಿಗಳು, ರೈತರನ್ನು ಭೇಟಿ ಮಾಡುತ್ತಿದ್ದಾರೆ” ಎಂದು ಮಾಹಿತಿ ನೀಡಿದರು.

“ಹಿಂದೆ ಬ್ರಿಟಿಷರು ಒಡೆದು ಆಳುವ ನೀತಿ ಅನುಸರಿಸುತ್ತಿದ್ದರು. ಆ ನೀತಿ ಕುತಂತ್ರವನ್ನು ಕಾಂಗ್ರೆಸ್​ ಸರಕಾರ ಅನುಸರಿಸುತ್ತಿದೆ. ಜಮೀರ್​ ಅಹಮದ್ ಬಾಯಿಯಲ್ಲಿ ಮಾತು ಕೇಳಿದರೇ ಇವರು ಸಂವಿಧಾನದ ಹೆಸರು ಹೇಳಿಕೊಂಡು ಅದಕ್ಕೆ ಬದ್ಧವಾಗಿ ನಡೆದುಕೊಳ್ಳದೇ ಅದಕ್ಕೆ ಅಪಚಾರದ ರೀತಿ ನಡೆದುಕೊಳ್ಳುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ಇದೇ ವೇಳೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಜೆ. ಗೌಡ, ಶಾಸಕ ಸಿಮೆಂಟ್ ಮಂಜು, ಹುಲ್ಲಳ್ಳಿ ಸುರೇಶ್, ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ ಇತರರು ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

ದೇಶ

ಅಶೋಕ್ ರೈ ಕಂಬಳಕ್ಕೆ ಸಿದ್ಧ, ಯದುವೀರ್-ಪ್ರತಾಪ್ ಸಿಂಹ ವಿರೋಧ; ದಸರಾದಲ್ಲಿ ಹೊಸ ವಿವಾದ

Published

on

ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ (Mysuru Dasara) ಮಹೋತ್ಸವದ ಸಿದ್ಧತೆಗಳು ಆರಂಭವಾಗುತ್ತಿದ್ದಂತೆಯೇ ಈ ಬಾರಿ ದಸರಾ ಕಾರ್ಯಕ್ರಮದಲ್ಲಿ ಕಂಬಳ (Kambala) ಆಯೋಜನೆ ಮಾಡುವ ವಿಚಾರ ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಒಂದೆಡೆ ಪುತ್ತೂರು ಶಾಸಕ ಅಶೋಕ್ ರೈ (Ashok Rai) ಕಂಬಳ ಆಯೋಜನೆಗೆ ಸಿದ್ಧತೆ ಆರಂಭಿಸಿರುವುದಾಗಿ ತಿಳಿಸಿದ್ದರೆ, ಮತ್ತೊಂದೆಡೆ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ (Yaduveer Wadiyar) ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ (Pratap Simha) ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

ವಿಧಾನಸೌಧದಲ್ಲಿ ನಡೆದ ದಸರಾ ಉನ್ನತ ಮಟ್ಟದ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ನೇತೃತ್ವದಲ್ಲಿ ಮಹೋತ್ಸವದ ಸಿದ್ಧತೆ ಕುರಿತು ಚರ್ಚೆ ನಡೆಯಿತು. ಆಗಸ್ಟ್ 26ರಂದು ಗಜಪಯಣ ಆರಂಭವಾಗಲಿದ್ದು, ಅಕ್ಟೋಬರ್ 11ರಂದು ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನೆಯಾಗಲಿದೆ. ಅಕ್ಟೋಬರ್ 21ರಂದು ವಿಜಯದಶಮಿಯಂದು ಮಧ್ಯಾಹ್ನ 4:10ಕ್ಕೆ ಮೀನಾ ಲಗ್ನದಲ್ಲಿ ಐತಿಹಾಸಿಕ ಜಂಬೂ ಸವಾರಿ ನಡೆಯಲಿದೆ.

ಸಭೆಯಲ್ಲಿ ಕಂಬಳ ಆಯೋಜನೆ ವಿಚಾರವೂ ಪ್ರಸ್ತಾಪವಾಗಿದ್ದು, ಅಂತಿಮ ನಿರ್ಧಾರವನ್ನು ಮುಂದಿನ ಸಭೆಯಲ್ಲಿ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ. ಅಶೋಕ್ ರೈ ಅವರ ಪ್ರಕಾರ, ಕಂಬಳ ಆಯೋಜನೆಗೆ ಸುಮಾರು ₹5 ರಿಂದ ₹6 ಕೋಟಿ ವೆಚ್ಚವಾಗಲಿದ್ದು, ಜುಲೈ 15ರಿಂದಲೇ ಸಿದ್ಧತೆ ಆರಂಭಿಸಲು ಯೋಜಿಸಲಾಗಿದೆ. ಕಂಬಳದ ಮೂಲಕ ಕರಾವಳಿಯ ಸಾಂಸ್ಕೃತಿಕ ಪರಂಪರೆಯನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸುವ ಉದ್ದೇಶವಿದೆ ಎಂದು ಅವರು ಹೇಳಿದ್ದಾರೆ.

ಆದರೆ, ಯದುವೀರ್ ಒಡೆಯರ್ ದಸರಾದಲ್ಲಿ ಕಂಬಳ ಸೇರಿಸುವ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಮಾಜಿ ಸಂಸದ ಪ್ರತಾಪ್ ಸಿಂಹ ಕೂಡ ದಸರಾ, ಕಂಬಳ ಮತ್ತು ಇತರೆ ಜಾತ್ರೆಗಳಿಗೆ ತಮ್ಮದೇ ಆದ ವೈಶಿಷ್ಟ್ಯವಿದ್ದು, ಪ್ರತಿಯೊಂದು ಆಚರಣೆಯೂ ತನ್ನ ಸಾಂಪ್ರದಾಯಿಕ ಸ್ವರೂಪದಲ್ಲೇ ನಡೆಯಬೇಕು ಎಂದು ಹೇಳಿದ್ದಾರೆ. ಕಂಬಳದ ಬಗ್ಗೆ ವಿರೋಧವಿಲ್ಲದಿದ್ದರೂ ದಸರಾದ ಮೂಲ ಪರಂಪರೆಯಲ್ಲಿ ಬದಲಾವಣೆ ಬೇಡ ಎಂಬುದು ಅವರ ನಿಲುವಾಗಿದೆ.

Continue Reading

ದೇಶ

ತಮಿಳುನಾಡು ಸರ್ಕಾರದ ಹೊಸ ಆದೇಶ: ಸರ್ಕಾರಿ ಶಾಲೆಗಳಲ್ಲಿ ರಾಜಕೀಯ ಚಟುವಟಿಕೆ ಸಂಪೂರ್ಣ ನಿಷೇಧ

Published

on

ಚೆನ್ನೈ: ತಮಿಳುನಾಡು (Tamil Nadu) ಸರ್ಕಾರವು ಸರ್ಕಾರಿ ಶಾಲೆಗಳ ಶೈಕ್ಷಣಿಕ ವಾತಾವರಣವನ್ನು ಕಾಪಾಡುವ ಉದ್ದೇಶದಿಂದ ಮಹತ್ವದ ಆದೇಶ ಹೊರಡಿಸಿದೆ. ಇನ್ನು ಮುಂದೆ ರಾಜ್ಯದ ಸರ್ಕಾರಿ ಶಾಲೆಗಳು (Government Schools) ಹಾಗೂ ತರಗತಿ ಕೊಠಡಿಗಳಲ್ಲಿ (Classrooms) ರಾಜಕೀಯ ಪಕ್ಷಗಳ ಕಾರ್ಯಕರ್ತರು ಮತ್ತು ಖಾಸಗಿ ವ್ಯಕ್ತಿಗಳ ಪ್ರವೇಶವನ್ನು ಕಟ್ಟುನಿಟ್ಟಾಗಿ ನಿಯಂತ್ರಿಸಲಾಗುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ.

ತಮಿಳುನಾಡು ಶಾಲಾ ಶಿಕ್ಷಣ ಸಚಿವ ರಾಜ್ ಮೋಹನ್ (Raj Mohan) ಹೊರಡಿಸಿರುವ ಸುತ್ತೋಲೆಯ ಪ್ರಕಾರ, ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಜನಪ್ರತಿನಿಧಿಗಳಿಗೆ ಮಾತ್ರ ಶಾಲಾ ಆವರಣ ಪ್ರವೇಶಕ್ಕೆ ಅನುಮತಿ ನೀಡಲಾಗುತ್ತದೆ. ಉಳಿದ ಯಾವುದೇ ರಾಜಕೀಯ ಚಟುವಟಿಕೆ ಅಥವಾ ಖಾಸಗಿ ಕಾರ್ಯಕ್ರಮಗಳಿಗೆ ಶಾಲಾ ಆವರಣವನ್ನು ಬಳಸಲು ಅವಕಾಶ ಇರುವುದಿಲ್ಲ.

ಹೊಸ ನಿಯಮಗಳ ಅನ್ವಯ, ಶಾಲಾ ತರಗತಿ ಕೊಠಡಿಗಳನ್ನು ಯಾವುದೇ ರಾಜಕೀಯ ನಾಯಕರು ಅಥವಾ ನಿರ್ದಿಷ್ಟ ವ್ಯಕ್ತಿಗಳ ಸನ್ಮಾನ, ಹೊಗಳಿಕೆ, ಪ್ರಶಂಸಾ ಕಾರ್ಯಕ್ರಮಗಳು ಅಥವಾ ಹುಟ್ಟುಹಬ್ಬದ ಆಚರಣೆಗಳಿಗೆ ಬಳಸುವುದನ್ನು ನಿಷೇಧಿಸಲಾಗಿದೆ. ಶಿಕ್ಷಣ ಸಂಸ್ಥೆಗಳು ಸಂಪೂರ್ಣವಾಗಿ ವಿದ್ಯಾರ್ಥಿಗಳ ಕಲಿಕೆ ಮತ್ತು ಶೈಕ್ಷಣಿಕ ಚಟುವಟಿಕೆಗಳಿಗೆ ಮಾತ್ರ ಸೀಮಿತವಾಗಿರಬೇಕು ಎಂಬುದನ್ನು ಸರ್ಕಾರ ಪುನರುಚ್ಚರಿಸಿದೆ.

ಇದಲ್ಲದೆ, ಸರ್ಕಾರಿ ಶಾಲೆಗಳಲ್ಲಿ ನಡೆಯುವ ಎಲ್ಲಾ ಕಾರ್ಯಕ್ರಮಗಳು ರಾಜಕೀಯ ತಟಸ್ಥತೆಯನ್ನು ಕಾಯ್ದುಕೊಂಡು, ಶಿಕ್ಷಣ ಮತ್ತು ವಿದ್ಯಾರ್ಥಿಗಳ ಅಭಿವೃದ್ಧಿಗೆ ಸಂಬಂಧಿಸಿದ ವಿಷಯಗಳನ್ನಷ್ಟೇ ಒಳಗೊಂಡಿರಬೇಕು ಎಂದು ಸೂಚಿಸಲಾಗಿದೆ. ಈ ಆದೇಶದ ಅನುಷ್ಠಾನಕ್ಕಾಗಿ ಪಾಲಿಸಬೇಕಾದ ವಿವರವಾದ ಮಾರ್ಗಸೂಚಿಗಳನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

ಸರ್ಕಾರದ ಈ ಕ್ರಮವು ಶಾಲಾ ಆವರಣದಲ್ಲಿ ರಾಜಕೀಯ ಪ್ರಭಾವವನ್ನು ತಡೆಯುವ ಜೊತೆಗೆ, ವಿದ್ಯಾರ್ಥಿಗಳಿಗೆ ಶಾಂತ ಹಾಗೂ ತಟಸ್ಥ ಶೈಕ್ಷಣಿಕ ವಾತಾವರಣ ಒದಗಿಸುವ ಉದ್ದೇಶ ಹೊಂದಿದೆ.

Continue Reading

ದೇಶ

GBA ಚುನಾವಣೆ, ಒತ್ತುವರಿ ತೆರವು, ಮೋಡ ಬಿತ್ತನೆ: CM ಡಿಕೆ ಶಿವಕುಮಾರ್ ಮಹತ್ವದ ಹೇಳಿಕೆ

Published

on

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಹೊಸ ಮಹಾನಗರ ಪಾಲಿಕೆಗಳ ಚುನಾವಣೆಯನ್ನು ಆಗಸ್ಟ್ ತಿಂಗಳೊಳಗೆ ನಡೆಸುವ ವಿಚಾರದಲ್ಲಿ ಕೆಲವು ತಾಂತ್ರಿಕ ಸವಾಲುಗಳಿದ್ದು, ಸರ್ಕಾರವು ಸುಪ್ರೀಂ ಕೋರ್ಟ್ (Supreme Court) ನೀಡುವ ನಿರ್ದೇಶನಗಳಿಗೆ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (D.K. Shivakumar) ತಿಳಿಸಿದ್ದಾರೆ.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಿಬಿಎ ವ್ಯಾಪ್ತಿಯ ಪಾಲಿಕೆ ಚುನಾವಣೆಗಳಿಗೆ ಸರ್ಕಾರ ಅಗತ್ಯ ಸಿದ್ಧತೆ ನಡೆಸಿದೆ. ಆದರೆ ಚುನಾವಣಾ ಆಯೋಗ (Election Commission) ರಾಜ್ಯಾದ್ಯಂತ ನಡೆಸುತ್ತಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಕಾರ್ಯದಿಂದಾಗಿ ಚುನಾವಣಾ ಪ್ರಕ್ರಿಯೆಯಲ್ಲಿ ಸ್ವಲ್ಪ ವಿಳಂಬ ಉಂಟಾಗಿದೆ ಎಂದು ವಿವರಿಸಿದರು.

ಸುಪ್ರೀಂ ಕೋರ್ಟ್ ಈ ಹಿಂದೆ ಆಗಸ್ಟ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ಸೂಚನೆ ನೀಡಿತ್ತು. ಆದರೆ ತಾಂತ್ರಿಕ ಕಾರಣಗಳಿಂದ ಗಡುವನ್ನು ಡಿಸೆಂಬರ್‌ವರೆಗೆ ವಿಸ್ತರಿಸುವಂತೆ ಅಧಿಕಾರಿಗಳು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಸಿಎಂ, “ನಾನು ಈ ವಿಚಾರದಲ್ಲಿ ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ. ಅಧಿಕಾರಿಗಳು ಮತ್ತು ನ್ಯಾಯಾಲಯದ ಪ್ರಕ್ರಿಯೆಯಂತೆ ಮುಂದಿನ ಕ್ರಮ ನಡೆಯಲಿದೆ” ಎಂದು ಹೇಳಿದರು.

ಇದೇ ವೇಳೆ, ಬೆಂಗಳೂರಿನಲ್ಲಿ ಸಂಚಾರಕ್ಕೆ ಅಡ್ಡಿಯಾಗಿರುವ ಒತ್ತುವರಿಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ತಿಳಿಸಿದರು. ನಗರದಲ್ಲಿ ಸುಮಾರು 60,000 ಬೀದಿಬದಿ ವ್ಯಾಪಾರಿಗಳನ್ನು ಗುರುತಿಸಲಾಗಿದ್ದು, ಅವರಲ್ಲಿ 30,000 ಮಂದಿಗೆ ತಳ್ಳುಗಾಡಿ ಹಾಗೂ ವ್ಯಾಪಾರಕ್ಕೆ ಅಗತ್ಯ ವಾಹನಗಳನ್ನು ವಿತರಿಸಲು ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ಮಾಹಿತಿ ನೀಡಿದರು.

ಮುಖ್ಯ ರಸ್ತೆಗಳಲ್ಲಿ ಶಾಶ್ವತ ಶೆಡ್ ಅಥವಾ ಟೆಂಟ್‌ಗಳನ್ನು ನಿರ್ಮಿಸಲು ಸುಪ್ರೀಂ ಕೋರ್ಟ್ ನಿರ್ಬಂಧವಿದ್ದು, ಸರ್ಕಾರ ನಿಗದಿಪಡಿಸಿದ ಸ್ಥಳಗಳಲ್ಲಿ ಮಾತ್ರ ವ್ಯಾಪಾರ ನಡೆಸಬೇಕು ಎಂದು ಸಿಎಂ ಸ್ಪಷ್ಟಪಡಿಸಿದರು. ಜೊತೆಗೆ, ಮೋಡ ಬಿತ್ತನೆ, ಬೆಳಗಾವಿಗೆ ವಿಶೇಷ ಪ್ಯಾಕೇಜ್ ಹಾಗೂ ಮುಜರಾಯಿ ದೇವಸ್ಥಾನಗಳ ಹುಂಡಿ ಹಣದ ಭದ್ರತೆ ಕುರಿತು ಸರ್ಕಾರ ಪರಿಶೀಲನೆ ನಡೆಸುತ್ತಿದೆ ಎಂದರು.

Continue Reading

Trending