ರಾಜಕೀಯ

ಜನರ ದಿಕ್ಕು ತಪ್ಪಿಸುವುದೇ ಬಿಜೆಪಿ ಕೆಲಸ – ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿ: ಕೇಸರಿಪಡೆ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ಮುಂದುವರೆಸಿದ್ದಾರೆ, ವಕ್ಫ್ ವಿಚಾರವಾಗಿ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆಗೆ ಕೆಂಡಕಾರಿದ್ದಾರೆ, ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ವಕ್ಫ್ ವಿಚಾರವಾಗಿ ಈಗಾಗಲೇ ಸ್ಪಷ್ಟಪಡಿಸಿದ್ದೇನೆ, ಅಧಿಕಾರಿಗಳಿಗೂ ಸೂಚನೆ ನೀಡಲಾಗಿದೆ, ಆದರೆ ಬಿಜೆಪಿಯವರು ರಾಜಕಾಂಣಕ್ಕಾಗಿ ಹೋರಾಟ ಮಾಡುತ್ತಿದ್ದಾರೆ, ಇವರ ಕಾಲದಲ್ಲಿ ನೋಟಿಸ್ ನೀಡಿರುವ ಬಗ್ಗೆ ಯಾಕೆ ಮಾತನಾಡುತ್ತಿಲ್ಲ, ಬಿಜೆಪಿ ಅವರು ಯಾವಾಗಲೂ ಸಮಸ್ಯೆ ಮೇಲೆ ಹೋರಾಟ ಮಾಡುವುದಿಲ್ಲ, ಇಡೀ ಪಕ್ಷ ಸುಳ್ಳು ಆರೋಪ ಮಾಡಿ ಜನರ ದಿಕ್ಕು ತಪ್ಪಿಸಿ ಹೋರಾಟ ಮಾಡುವುದೆ ಇವರ ಕೆಲಸ ಎಂದು ತಿಳಿಸಿದರು,
ಇವರ ಕಾಲದಲ್ಲಿ 246 ಪ್ರಕರಣಗಳಲ್ಲಿ ನೋಟಿಸ್ ನೀಡಿದ್ದಾರೆ, ಇದರ ಬಗ್ಗೆ ಬಿಜೆಪಿಯವರು ಯಾಕೆ ಮಾತನಾಡುತ್ತಿಲ್ಲ ಅಂದು ನೋಟಿಸ್ ನೀಡಿದ ಬೊಮ್ಮಾಯಿ ಇದೀಗ ಉಲ್ಪಾ ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಪ್ರತಾಪ್ ಸಿಂಹ ಮಹಾನ್ ಕೋಮುವಾದಿ..!

ಮಾಜಿ ಸಂಸದ ಪ್ರತಾಪ್ ಸಿಂಹ ಮುಖ್ಯಮಂತ್ರಿಗಳು ಸಂಪೂರ್ಣ ಮುಸ್ಲಿಂ ಆಗಿದ್ದಾರೆ ಎಂದು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಅವರೊಬ್ಬ ಮಹಾನ್ ಕೋಮುವಾದಿಗಳಿಂದ ಇನ್ನೇನು ನಿರೀಕ್ಷೆ ಮಾಡಲಾಗುತ್ತದೆ ಎಂದರು, ಅವರಿಗೆ ಸಂವಿಧಾನ, ಪ್ರಜಾಪ್ರಭುತ್ವದ ಬಗ್ಗೆ ಗೌರವವಿಲ್ಲ, ಕೋಮುವಾದ ಮಾಡುವುದೇ ಅವರ ಕಸಬು, ಸಮಾಜವನ್ನು ಜಾತಿ, ಧರ್ಮದ ಹೆಸರಿನಲ್ಲಿ ಒಡೆಯುವುದೇ ಅವರ ರಾಜಕಾರಣ, ಕೋಮುವಾದದಲ್ಲಿ ತೊಡಗಿ ರಾಜಕೀಯದಲ್ಲಿ ಬದುಕಲು ಹಾಗು ಮತ ಪಡೆಯಲು ಪ್ರಯತ್ನ ಮಾಡುತ್ತಾರೆ ಎಂದರು…

Leave a Reply

Your email address will not be published. Required fields are marked *

Trending

Exit mobile version