ಬೆಂಗಳೂರು
ಬೆದರಿಕೆ ಆರೋಪ-ಎಫ್‍ಐಆರ್ ರದ್ದು ಕೋರಿ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ ಹೆಡಿಕೆ, ನಿಖಿಲ್

ಬೆಂಗಳೂರು: ಲೋಕಾಯುಕ್ತ ಎಡಿಜಿಪಿ ಎಂ ಚಂದ್ರಶೇಖರ್ ಅವರಿಗೆ ಬೆದರಿಕೆ ಆರೋಪಕ್ಕೆ ಸಂಬಂಧಿಸಿದಂತೆ ಎಫ್‍ಐಆರ್ ರದ್ದು ಕೋರಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹಾಗೂ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದಾರೆ,
ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ತಮ್ಮ ವಿರುದ್ಧ ಮಾನಹಾನಿ ಹೇಳಿಕೆ ನೀಡಿದ್ದಾರೆ, ಅಲ್ಲದೇ ತನಗೆ ಬೆದರಿಕೆ ಹಾಕಿದ್ದಾರೆ ಎಂಬುದಾಗಿ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಅವರು ಬೆಂಗಳೂರಿನ ಸಂಜಯ್ ನಗರ ಠಾಣೆಗೆ ದೂರು ನೀಡಿದ್ದರು, ಈ ದೂರಿನ ಆಧಾರದ ಮೇರೆಗೆ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಹಾಗೂ ಶಾಸಕ ಸುರೇಶ್ ಬಾಬು ವಿರುದ್ಧ ಎಫ್‍ಐಆರ್ ದಾಖಲಾಗಿತ್ತು,
ಇದೀಗ ನಿಖಲ್ ಹಾಗೂ ಕುಮಾರಸ್ವಾಮಿ ಅವರು ಎಫ್‍ಐಆರ್ ರದ್ದುಕೋರಿ ಅರ್ಜಿ ಸಲ್ಲಿಸಿದ್ದಾರೆ, ಈ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರನ್ನೊಳಗೊಂಡ ನ್ಯಾಯಪೀಠ ವಿಚಾರಣೆ ನಡೆಸಲಿದೆ,