karnataka
BLR-MYS Expressway: ಅಪಘಾತ-ಸಾವಿನ ಸಂಖ್ಯೆ ಇಳಿಕೆ, ಆಗಸ್ಟ್ ಅಂಕಿ ಸಂಖ್ಯೆ ನೀಡಿದ ಎಡಿಜಿಪಿ
ಬೆಂಗಳೂರು: ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ (Bengaluru-Mysuru Expressway) ಓಡಾಡುವವರಿಗೆ ನೆಮ್ಮದಿಯ ಸುದ್ದಿಯೊಂದು ಬಹಿರಂಗಗೊಂಡಿದೆ. ಹೌದು ಸೂಕ್ತ ರಸ್ತೆ ಸುರಕ್ಷತಾ ಕ್ರಮ ಜರುಗಿಸಿದ್ದರಿಂದ ಕಳೆದ ತಿಂಗಳ ಆಗಸ್ಟ್ ತಿಂಗಳಲ್ಲಿ ಅಪಘಾತಗಳು ಮತ್ತು ಸಾವಿನ ಸಂಖ್ಯೆಯಲ್ಲಿ ಇಳಿಕೆ ಕಂಡಿದೆ ಎಂದು ಸ್ವತಃ ಕರ್ನಾಟಕ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಸಂಚಾರ ಮತ್ತು ಸುರಕ್ಷತೆ) ಅಲೋಕ್ ಕುಮಾರ್ ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ X ನಲ್ಲಿ ಟ್ವೀಟ್ ಮಾಡಿರುವ ಅಲೋಕ್ ಕುಮಾರ್ ಅವರು, ಅಪಘಾತ ಮತ್ತು ಸಾವಿನ ಸಂಖ್ಯೆಗಳ ಮಾಹಿತಿ ನೀಡಿದ್ದಾರೆ. ಈ ಎಕ್ಸ್‌ಪ್ರೆಸ್ ವೇನಲ್ಲಿ ರಸ್ತೆ ಅಪಘಾತಗಳು, ಸಾವು ನೋವುಗಳ ಹೆಚ್ಚಾಗಿದ್ದವು. ಇದರಿಂದ ಪೊಲೀಸ್ ಇಲಾಖೆ ಜೊತೆಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಕೈಗೊಂಡ ದಿಟ್ಟ ಕ್ರಮಗಳಿಂದ ಇದೀಗ ಅಪಘಾತಗಳು ಹತೋಟಿ ಬಂದಿವೆ
ಎಕ್ಸ್‌ಪ್ರೆಸ್ ವೇ ನಲ್ಲಿ ರಸ್ತೆ ಅಪಘಾತದಲ್ಲಿ ಕಳೆದ ನಾಲ್ಕು ತಿಂಗಳಲ್ಲಿ ಆದ ಸಾವುಗಳನ್ನು ನೋಡಿವುದಾದರೆ, ಮೇ ತಿಂಗಳಲ್ಲಿ 29ಮಂದಿ, ಜೂನ್-28, ಜುಲೈ- 8 ಹಾಗೂ ಕಳೆದ ತಿಂಗಳು ಆಗಸ್ಟ್ನಲ್ಲಿ ಕೇವಲ 06 ಮಂದಿ ಅಪಘಾತಕ್ಕೀಡಾಗಿ ಸಾವನ್ನಪ್ಪಿದ್ದಾರೆ ಎಂದು ಅಲೋಕ್ ಕುಮಾರ್ ಅವರು ತಿಳಿಸಿದ್ದಾರೆ. ಇದಕ್ಕೆ ಕಾರಣವಾದ ಪೊಲೀಸ್ ಸಿಬ್ಬಂದಿಗೆ ಅವರು ಅಭಿನಂದನೆ ತಿಳಿಸಿದ್ದಾರೆ
ಇನ್ನೂ ಹೆದ್ದಾರಿಯಲ್ಲಿ ವೇಗದಕ್ಕೆ 100 kmph ಮೀತಿ ಹೇರಲಾಗಿದ್ದು, ಕೆಲವು ತಂತ್ರಜ್ಞಾನ ಅಳವಡಿಸಿಕೊಳ್ಳಲಾಗಿತ್ತು. ಜೊತೆಗೆ ವೇಗದ ಮಿತಿ ಉಲ್ಲಂಘನೆ ಸೇರಿದಂತೆ ಸಂಚಾರ ನಿಯಮ ಮೀರುವ ವಾಹನ ಸವಾರರಿಂದ ದಂಡ ವಸೂಲಾತಿಕ್ರಮ ಮುಂದುವರಿದಿದೆ.
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಅಪಘಾತ ಸಾವಿನ ಸಂಖ್ಯೆ ವಿಚಾರ ಪಾರ್ಲಿಮೆಂಟ್‌ನಲ್ಲೂ ಸದ್ದು ಮಾಡಿತ್ತು. ಸಂಸದರಾದ ಸುಮಲತಾ ಮತ್ತು ಪ್ರಜ್ವಲ್ ದೇವರಾಜ್ ಅವರು ಕೇಳಿದ್ದ ಪ್ರಶ್ನೆಗೆ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಅಪಘಾತ ಮತ್ತು ಕೈಗೊಂಡ ಕ್ರಮಗಳ ಕುರಿತು ವಿವರಿಸಿದ್ದರು. ಎಕ್ಸ್‌ಪ್ರೆಸ್‌ವೇನಲ್ಲಿ 24 ಕಡೆ ಸ್ಕೈವಾಕ್ ಈ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ, ಸಾವಿನ ಸಂಖ್ಯೆ ನಿಯಂತ್ರಣಕ್ಕೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ರಸ್ತೆ ದಾಟುವ ಸಾರ್ವಜನಿಕರ ಅನುಕೂಲಕ್ಕಾಗಿ ಸಂಭವನೀಯ ಅಪಘಾತ ಸ್ಥಳದಲ್ಲಿ ಸ್ಕೈವಾಕ್ ನಿರ್ಮಿಸಲು ಯೋಜನೆ ರೂಪಿಸಿದೆ
ಕ್ಸ್‌ಪ್ರೆಸ್‌ವೇಯಲ್ಲಿ ಸುಮಾರು ಪ್ರದೇಶಗಳನ್ನು ಗುರುತಿಸಿರುವ ಹೆದ್ದಾರಿ ಪ್ರಾಧಿಕಾರ ಒಟ್ಟು 24 ಕಡೆಗಳಲ್ಲಿ ಸ್ಕೈವಾಕ್ ನಿರ್ಮಾಣ ಮಾಡುವ ಚಿಂತನೆ ನಡೆದಿದೆ. ಮುಂದಿನ ಒಂದು ವರ್ಷಕ್ಕೆ ಈ ಯೋಜನೆ ಪೂರ್ಣಗೊಳಿಸುವ ಗುರಿ ಹೊಂದಿದೆ.
karnataka
ಹಿಂದೂಗಳಿಗೆ ಮಾತ್ರವಲ್ಲ, ದಲಿತರಿಗೂ ವಿರೋಧಿಗಳು – ಕಾಂಗ್ರೆಸ್ ವಿರುದ್ಧ ಜೋಶಿ ಆಕ್ರೋಶ
ಬೆಂಗಳೂರು: ಕಾಂಗ್ರೆಸ್ಸಿನವರು ಕೇವಲ ಹಿಂದೂ ವಿರೋಧಿಯಲ್ಲ, ದಲಿತ ವಿರೋಧಿ ಕೂಡ ಎಂದು ಜನರಿಗೆ ಭೀಮ ಹೆಜ್ಜೆ ಕಾರ್ಯಕ್ರಮದ ಮೂಲಕ ತಿಳಿಸುತ್ತೇವೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಟೀಕಿಸಿದರು.
ಭೀಮ ಹೆಜ್ಜೆ 100ರ ಸಂಭ್ರಮ’ ಕಾರ್ಯಕ್ರಮದ ಉದ್ಘಾಟನೆಯ ಸಂದರ್ಭದ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಡಾ.ಬಿ.ಆರ್.ಅಂಬೇಡ್ಕರ್ ಅವರು ನಿಪ್ಪಾಣಿಗೆ ಬಂದು 100 ವರ್ಷಗಳಾದ ಹಿನ್ನೆಲೆಯಲ್ಲಿ, ಅಂಬೇಡ್ಕರರ ಜನ್ಮದಿನವೂ ಬರುತ್ತಿರುವ ಸಲುವಾಗಿ 100 ವರ್ಷದ ನೆನಪನ್ನು ಭೀಮ ಹೆಜ್ಜೆ ಹೆಸರಿನಲ್ಲಿ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದರು.
ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರು ಯಾವ ಕಾರಣಕ್ಕಾಗಿ ತಮ್ಮ ಜೀವನವನ್ನು ಮೀಸಲಿಟ್ಟಿದ್ದರೋ ಅದನ್ನು ಜನರಿಗೆ ನೆನಪಿಸಲಾಗುವುದು. ಕಾಂಗ್ರೆಸ್ ಪಕ್ಷವು ಅವರಿಗೆ ಅನ್ಯಾಯ ಮಾಡಿದ್ದರು. ಅವರು ಸಂವಿಧಾನ ರಚನಾ ಸಭೆಯಲ್ಲಿ ಇರಬಾರದೆಂಬ ಕಾರಣಕ್ಕೆ ಹಿಂದೂ ಬಾಹುಳ್ಯದ ಕ್ಷೇತ್ರಗಳನ್ನು ಪಾಕಿಸ್ತಾನಕ್ಕೆ
ಬಿಟ್ಟು ಕೊಟ್ಟ ಸಂಗತಿಯನ್ನು, ಎರಡೆರಡು ಬಾರಿ ಅವರನ್ನು ಸೋಲಿಸಿದ್ದು, ಮಧ್ಯಂತರ ಸರ್ಕಾರ ಬಾರದಂತೆ ತಡೆದುದ್ದನ್ನು ತಿಳಿಸುತ್ತೇವೆ ಎಂದು ಹೇಳಿದರು.
ಅಧಿವೇಶನದಲ್ಲಿ ನಮ್ಮ ಶಾಸಕಿ ಶಶಿಕಲಾ ಜೊಲ್ಲೆ ಅವರು ನಿಪ್ಪಾಣಿಗೆ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರು ಬಂದು 100 ವರ್ಷವಾಗುತ್ತಿದೆ ಎಂದು ಸರ್ಕಾರದ ಗಮನ ಸೆಳೆದಿದ್ದಾರೆ. ಬೆಳಗಾವಿಗೆ ಮಹಾತ್ಮ ಗಾಂಧಿಯವರು ಬಂದ ಕಾರ್ಯಕ್ರಮವನ್ನು ಅವರು ಮಾಡಿದ್ದಾರೆ. ಅದಕ್ಕೆ ನಮ್ಮ ಆಕ್ಷೇಪ ಇಲ್ಲ ಎಂದು ತಿಳಿಸಿದರು.
karnataka
ಫೀಲ್ಡ್ ನಲ್ಲಿ ಕೆಲಸ ಮಾಡೋರು ಬೇಕು- ಡಿಕೆಶಿ
ಬೆಂಗಳೂರು: ಡಿಸಿಎಂ ಡಿಕೆಶಿ ದೆಹಲಿ ದಂಡಯಾತ್ರೆ ಕೈಗೊಂಡಿದ್ದು, ಕಾಂಗ್ರೆಸ್ ನಲ್ಲಿ ತೀವ್ರ ಚರ್ಚೆ ಹುಟ್ಟುಹಾಕಿದೆ, ಈ ಮಧ್ಯೆ ದೆಹಲಿಗೆ ತೆರಳುವ ಮುನ್ನ ಫೀಲ್ಡ್ ನಲ್ಲಿ ಕೆಲಸ ಮಾಡುವ ಕಾರ್ಯಕರ್ತರಿಗೆ ಮಾತ್ರ ಮುಂದೆ ಸ್ಧಾನಮಾನ, ನಮ್ಮ ಸುತ್ತಮುತ್ತ ಗಿರಿಗಿಟ್ಲೆ ಹೊಡೆಯುವರಿಂದ ಪ್ರಯೋಜನ ಇಲ್ಲ ಎಂದು ಗರಂ ಆಗಿದ್ದಾರೆ,
ಬೆಂಗಳೂರಿನಲ್ಲಿ ಮಾತನಾಡಿದ ಅವರು ಪದಾಧಿಕಾರಿಗಳ ಲಿಸ್ಟ್ ಫೈನಲ್ ಆಗಿದೆ, ಯಾರು ಫೀಲ್ಡ್ ನಲ್ಲಿ ನಿಂತು ಪಕ್ಷ ಸಂಘಟನೆ ಮಾಡ್ತಾರೆ ಹಾಗೂ ಜನರ ಸಮಸ್ಯೆಗೆ ಸ್ಪಂದಿಸುತ್ತಾರೆ ಅಂಥವರಿಗೆ ಮೊದಲ ಆದ್ಯತೆ ನೀಡಲಾಗುವುದು, ಈ ಬಗ್ಗೆ ಎಐಸಿಸಿ ಅಧ್ಯಕ್ಷರು ಕೂಡ ಸ್ಪಷ್ಟ ಸಂದೇಶ ನೀಡಿದ್ದು, ಯಾರದ್ದೋ ಬೆಂಬಲಿಗರು ಅಥವಾ ಮಂತ್ರಿಗಳಿಂದ ಪ್ರಭಾವ ಬೀರುವವರನ್ನು ಪರಿಗಣಿಸಲಾಗುವುದಿಲ್ಲ ಎಂದು ಹೇಳಿದರು,
ರಾಜಸ್ಧಾನದಲ್ಲಿ ನಡೆದ ಜಲಶಕ್ತಿ ಸಮ್ಮೇಳನದಲ್ಲಿ ನಾನು ರಾಜ್ಯದ ನೀರಾವರಿ ಯೋಜನೆಗಳ ಪ್ರಸ್ತಾಪ ಮಾಡಿದ್ದೆ, ನೀರಾವರಿ ವಿಚಾರದಲ್ಲಿ ನಮ್ಮ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ತಿಳಿಸಿದ್ದೆ, ಕೆಲವು ಯೋಜನೆಗೆ ಘೋಷಣೆ ಮಾಡಿದ ಹಣ ಬಿಡುಗಡೆ ಮಾಡಿಲ್ಲ, ಮತ್ತು ಕೆಲವು ಯೋಜನೆಗಳಿಗೆ ಅನುಮತಿ ನೀಡಿಲ್ಲ, ಈ ವಿಚಾರಗಳನ್ನು ಪ್ರಸ್ತಾಪಿಸಿದಾಗ ಸಚಿವರು ರಾಜ್ಯದ ನೀರಾವರಿ ವಿಚಾರವಾಗಿ ಪ್ರತ್ಯೇಕ ಸಭೆ ಮಾಡುವುದಾಗಿ ಭರವಸೆ ನೀಡಿ ಸಮಯ ನಿಗದಿ ಮಾಡಿದ್ದರು, ಇವತ್ತು ಬೆಳಗ್ಗೆ 11 ಗಂಟೆಗೆ ಕೇಂದ್ರ ಸಚಿವರು ಸಭೆ ನಿಗದಿ ಮಾಡಿದ್ದರು, ಒಂದು ದಿನ ಮುಂಚಿತವಾಗಿ ನಮ್ಮ ಇಲಾಖೆ ಅಧಿಕಾರಿಗಳನ್ನು ದೆಹಲಿಗೆ ಕಳುಹಿಸಿ ಪೂರ್ವಭಾವಿ ಸಭೆ ಮಾಡಲಾಗಿದೆ, ಈ ಸಭೆಯಲ್ಲಿ ನಮ್ಮ ನೀರಾವರಿ ಯೋಜನೆಗಳಿಗೆ ಅಗತ್ಯವಿರುವ ಅನುಮತಿ ನೀಡುವಂತೆ ಮನವಿ ಮಾಡುತ್ತೇನೆ ಎಂದು ತಿಳಿಸಿದರು,
karnataka
KPCC ಅಧ್ಯಕ್ಷ ಸ್ಥಾನ ಬದಲಾವಣೆಗೆ ಕಸರತ್ತು: ಎದುರಾಳಿಗಳಿಗೆ ‘ಡಿಕೆಶಿ’ ಚೆಕ್ ಮೆಟ್
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆಗೆ ಕಸರತ್ತು ನಡೆಸುತ್ತಿರುವ ಕಾಂಗ್ರೆಸ್ ನಾಯಕರಿಗೆ ಡಿಕೆ ಶಿವಕುಮಾರ್ ಚೆಕ್ ಮೆಟ್ ಕೊಟ್ಟಿದ್ದಾರೆ. 2028ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ನಾನೇ ಪಕ್ಷವನ್ನು ಮುನ್ನಡೆಸುತ್ತೇನೆ. ಇನ್ನು 8-10 ವರ್ಷಗಳ ಕಾಲ ರಾಜಕೀಯದಲ್ಲಿ ಸಕ್ರಿಯವಾಗಿರುತ್ತೇನೆ ಎಂದು ಹೇಳುವ ಮೂಲಕ ಪಕ್ಷದೊಳಗಿನ ಸ್ನೇಹಿತರು ಮತ್ತು ಶತ್ರುಗಳಿಗೆ ಸಂದೇಶ ರವಾನಿಸಿದ್ದಾರೆ.
ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಬದಲಾಯಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಪ್ತ ಸಚಿವರು ಪ್ರಯತ್ನಿಸುತ್ತಿರುವ ಹೊತ್ತಿನಲ್ಲಿ ಡಿಕೆ ಶಿವಕುಮಾರ್ ಈ ಹೇಳಿಕೆ ನೀಡಿದ್ದಾರೆ.
ಇತ್ತೀಚಿಗೆ ನಡೆದ ರಾಜ್ಯ ಸರ್ಕಾರಿ ನೌಕರರ ಸಮಾವೇಶದಲ್ಲಿ ಡಿಕೆಶಿ, ಡಿಕೆಶಿ ಎಂದು ಘೋಷಣೆ ಕೂಗುತ್ತಿದ್ದ ಜನರನ್ನುದ್ದೇಶಿಸಿ ಮಾತನಾಡಿದ ಅವರು, ಮುಂದಿನ ಚುನಾವಣೆಯಲ್ಲಿ ನಾನು ಗೆದ್ದು ನನ್ನ ನೇತೃತ್ವದಲ್ಲಿ ಪಕ್ಷ ಗೆದ್ದಾಗ ನೀವು ಇಂತಹ ಘೋಷಣೆಗಳನ್ನು ಕೂಗಬಹುದು. ನನ್ನ ಆರೋಗ್ಯ ಚೆನ್ನಾಗಿದ್ದು, ಇನ್ನು 8-10 ವರ್ಷ ರಾಜಕೀಯದಲ್ಲಿ ಇರುತ್ತೇನೆ. ನನ್ನ ಮೇಲೆ ನಂಬಿಕೆ ಇಡಿ ಎಂದರು ಸಿದ್ದರಾಮಯ್ಯ ಅವರು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆ ಇಲ್ಲ ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ ಶಿವಕುಮಾರ್ ಅವರೇ ಪಕ್ಷದೊಳಗೆ ರಣಕಹಳೆ ಮೊಳಗಿಸಬಲ್ಲ ಭವಿಷ್ಯದ ನಾಯಕ ಎಂದು ಬಿಂಬಿಸಿಕೊಳ್ಳಲು ಆರಂಭಿಸಿದ್ದಾರೆ ಎಂದು ಕಾಂಗ್ರೆಸ್ ಮುಖಂಡರೊಬ್ಬರು ಹೇಳಿದ್ದಾರೆ.
ಇದು ಖಂಡಿತವಾಗಿಯೂ ಅವರ ಬೆಂಬಲಿಗರಲ್ಲಿ ಸ್ಥೈರ್ಯವನ್ನು ಹೆಚ್ಚಿಸುತ್ತದೆ ಮತ್ತು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್‌ನಲ್ಲಿ ಸ್ಪರ್ಧಿಸಲು ಬಯಸುವ ಎರಡನೇ ಸಾಲಿನ ನಾಯಕರಿಗೆ, ವಿಶೇಷವಾಗಿ ಮೊದಲ ಬಾರಿಯ ಶಾಸಕರಿಗೆ ಎಚ್ಚರಿಕೆಯ ಸಂದೇಶವನ್ನು ಕಳುಹಿಸುತ್ತದೆ. 62 ವರ್ಷದ ಶಿವಕುಮಾರ್ ಅವರು ಸಿದ್ದರಾಮಯ್ಯ ಅವರಂತೆ ಕ್ರಿಯಾಶೀಲರಾಗುವ ನಿರೀಕ್ಷೆಯಲ್ಲಿದ್ದಾರೆ ಎಂದು ಶಿವಕುಮಾರ್ ಪರ ಒಲವು ಹೊಂದಿರುವ ನಾಯಕರೊಬ್ಬರು ಹೇಳಿದರು.
ಯುವ ಪೀಳಿಗೆಯು ಯುವ ಮತ್ತು ಪ್ರಬಲ ನಾಯಕತ್ವವನ್ನು ನೋಡುತ್ತದೆ. ಶಿವಕುಮಾರ್ ಅವರು ಫಿಟ್ ಮತ್ತು ಫೈನ್ ಎಂದು ಹೇಳುತ್ತಿದ್ದಾರೆ. ಇದು ಅವರ ಮಹತ್ವಕಾಂಕ್ಷೆಯನ್ನು ಎತ್ತಿತೋರಿಸುತ್ತದೆ ಎಂದು ರಾಜಕೀಯ ವಿಶ್ಲೇಷಕರು ಹೇಳುತ್ತಾರೆ.
ಯುವ ಕಾಂಗ್ರೆಸ್ ಕರ್ನಾಟಕ ಘಟಕದ ನೂತನ ಅಧ್ಯಕ್ಷರಾಗಿ ತಮ್ಮ ನಿಷ್ಠಾವಂತ ಬೆಂಬಲಿಗ ಮಂಜುನಾಥ ಅವರನ್ನು ಗೆಲ್ಲಿಸುವುದರಲ್ಲಿ ಡಿಕೆ ಶಿವಕುಮಾರ್ ಯಶಸ್ವಿಯಾಗಿದ್ದಾರೆ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಅವರ ನಾಯಕತ್ವವಿಲ್ಲದೆ ನಾವು ಚುನಾವಣೆಗೆ ಹೋಗಲು ಸಾಧ್ಯವಿಲ್ಲ. ಅವರ ನಾಯಕತ್ವ ನಮಗೆ ಶಾಶ್ವತವಾಗಿ ಬೇಕು. ಆದರೆ, ಆರೋಗ್ಯ ವಿಚಾರದಲ್ಲಿ ಡಿಕೆ ಶಿವಕುಮಾರ್ 8-10 ವರ್ಷ ಅಲ್ಲ. ಇನ್ನೂ 20 ವರ್ಷ ರಾಜಕೀಯ ಮಾಡಬಹುದು ಎಂದು ಎರಡು ಬಾರಿ ರಾಜ್ಯಸಭಾ ಸದಸ್ಯರಾಗಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿಸಿ ಚಂದ್ರಶೇಖರ್ ಹೇಳಿದರು.
ಚುನಾವಣೆಗೆ ಇನ್ನೂ ಮೂರೂವರೆ ವರ್ಷ ಬಾಕಿ ಇದೆ. ಶಿವಕುಮಾರ್ ಸದ್ಯ ಕೆಪಿಸಿಸಿ ಅಧ್ಯಕ್ಷರಾಗಿದ್ದು, ಅವರು ಹೇಳುವುದರಲ್ಲಿ ತಪ್ಪೇನಿಲ್ಲ. ಕೆಪಿಸಿಸಿ ಅಧ್ಯಕ್ಷರೇ ರಾಜ್ಯದಲ್ಲಿ ಪಕ್ಷದ ಪರಮೋಚ್ಚ ನಾಯಕರಾಗಿದ್ದಾರೆ. ನನ್ನ ಅಭಿಪ್ರಾಯದಲ್ಲಿ ಅವರು ಹೇಳಿದ್ದು ಸ್ಥಳೀಯ ಸಂಸ್ಥೆಗಳು ಮತ್ತು ಬಿಬಿಎಂಪಿ ಚುನಾವಣೆಗಳ ಬಗ್ಗೆ ಇರಬೇಕು. ಅವರ ನಾಯಕತ್ವದಲ್ಲಿ ನಾವು ಈ ಚುನಾವಣೆಗಳನ್ನು ಎದುರಿಸುತ್ತೇವೆ ಎಂದು ಅವರು ಸಮರ್ಥಿಸಿಕೊಂಡರು. ಶಿವಕುಮಾರ್ ಅವರ ಹೇಳಿಕೆ ಸಮರ್ಥಿಸಿಕೊಂಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ. “ಅದರಲ್ಲಿ ತಪ್ಪೇನು? ಏನಾದ್ರೂ ತಪ್ಪು ಕಂಡು ಹಿಡಿದಿದ್ದೀರಾ” ಎಂದು ಸುದ್ದಿಗಾರರನ್ನು ಕೇಳಿದರು.
-
ದೇಶ5 hours agoರಾಷ್ಟ್ರಗೀತೆಗೆ ಮುನ್ನ ವಂದೇ ಮಾತರಂ ಹಾಡುವುದು ಕಡ್ಡಾಯ
-
ದೇಶ11 hours agoಬಿ.ಕೆ. ಹರಿಪ್ರಸಾದ್ ಅವರನ್ನು ತಕ್ಷಣವೇ ರಾಜ್ಯ ಸಂಪುಟಕ್ಕೆ ಸೇರಿಸಿ ಉಪ ಮುಖ್ಯಮಂತ್ರಿ ಮಾಡಬೇಕು: ರಾಷ್ಟ್ರೀಯ ಅಹಿಂದ ಸಂಘಟನೆ ಆಗ್ರಹ
-
ಚುನಾವಣೆ11 hours agoBENGALURU : ವಾರ್ಡ್ ಮರುವಿಂಗಡಣೆ ವಿರೋಧಿಸಿ ಶಾಸಕ ಎಂ. ಕೃಷ್ಣಪ್ಪ ಹೈಕೋರ್ಟ್ ಅರ್ಜಿ
-
ದೇಶ3 hours agoBIG NEWS : ಫೆ.12 ರಾಷ್ಟ್ರವ್ಯಾಪಿ ಮುಷ್ಕರ: 30 ಕೋಟಿ ಕಾರ್ಮಿಕರು ಬೀದಿಗೆ? ಬ್ಯಾಂಕ್, ಸಾರಿಗೆ ಸೇವೆಗೆ ಹೊಡೆತ ಸಾಧ್ಯತೆ
-
ದೇಶ12 hours agoDigital Services Tax: ಡಿಜಿಟಲ್ ತೆರಿಗೆಗೆ ಅಮೆರಿಕದ ವಿರೋಧ ಏಕೆ?
-
ದೇಶ11 hours agoಚರ್ಚೆ ಮುಗಿಯುವವರೆಗೆ ಸದನಕ್ಕೆ ಹಾಜರಾಗಲ್ಲ ಎಂದ ಲೋಕಸಭಾ ಸ್ಪೀಕರ್
-
ಕ್ರೀಡೆ4 hours agoT20 WORLD CUP : ಡಬಲ್ ಸೂಪರ್ ಓವರ್ನಲ್ಲಿ ದಕ್ಷಿಣ ಆಫ್ರಿಕಾದ ರೋಚಕ ಗೆಲುವು
-
ಅಪರಾಧ4 hours agoBENGALURU : ಬೆಂಗಳೂರು ರಸ್ತೆ ಅಪಘಾತಕ್ಕೆ ಇಬ್ಬರು ಪುಟ್ಟ ಮಕ್ಕಳ ಬಲಿ
