ರಾಜಕೀಯ
ಚನ್ನಪಟ್ಟಣ ಉಪಚುನಾವಣೆ: ಪ್ರಜ್ವಲ್ ಸಿಡಿ ವಿಚಾರ ಪ್ರಸ್ತಾಪ, ಹಾಸನದಲ್ಲಿ ಕಣ್ಣೀರು ಹಾಕುವಂತೆ ದೇವೇಗೌಡರಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

- /home/u521927855/domains/hosasuddi.in/public_html/wp-content/plugins/mvp-social-buttons/mvp-social-buttons.php on line 27
https://hosasuddi.in/wp-content/uploads/2024/11/siddu-channapatna-1000x576.avif&description=ಚನ್ನಪಟ್ಟಣ ಉಪಚುನಾವಣೆ: ಪ್ರಜ್ವಲ್ ಸಿಡಿ ವಿಚಾರ ಪ್ರಸ್ತಾಪ, ಹಾಸನದಲ್ಲಿ ಕಣ್ಣೀರು ಹಾಕುವಂತೆ ದೇವೇಗೌಡರಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು', 'pinterestShare', 'width=750,height=350'); return false;" title="Pin This Post">
- Share
- Tweet /home/u521927855/domains/hosasuddi.in/public_html/wp-content/plugins/mvp-social-buttons/mvp-social-buttons.php on line 72
https://hosasuddi.in/wp-content/uploads/2024/11/siddu-channapatna-1000x576.avif&description=ಚನ್ನಪಟ್ಟಣ ಉಪಚುನಾವಣೆ: ಪ್ರಜ್ವಲ್ ಸಿಡಿ ವಿಚಾರ ಪ್ರಸ್ತಾಪ, ಹಾಸನದಲ್ಲಿ ಕಣ್ಣೀರು ಹಾಕುವಂತೆ ದೇವೇಗೌಡರಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು', 'pinterestShare', 'width=750,height=350'); return false;" title="Pin This Post">
ರಾಮನಗರ: ಚನ್ನಪಟ್ಟಣ ಉಪಚುನಾವಣೆ ಕಾವು ದಿನೇ ದಿನೇ ಹೆಚ್ಚಾಗುತ್ತಿದ್ದು, ರಾಜಕೀಯ ಘಟಾನುಘಟಿ ನಾಯಕರುಗಳು ತಮ್ಮ ಅಭ್ಯರ್ಥಿಗಳ ಪರವಾಗಿ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಈ ನಡವೆ ಪ್ರಜ್ವಲ್ ರೇವಣ್ಣ ಅವರ ಸಿಡಿ ಪ್ರಕರಣ ಹಿಡಿದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್ಡಿ ದೇವೇಗೌಡ ಅವರ ವಿರುದ್ಧ ಬುಧವಾರ ವಾಗ್ದಾಳಿ ನಡೆಸಿದ್ದಾರೆ.
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಕೂಡ್ಲೂರು ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ ಪರ ಪ್ರಚಾರ ನಡೆಸಿದ ಸಿದ್ದರಾಮಯ್ಯ ಅವರು, ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಅವರಿಗೆ ಅವಕಾಶ ಕೊಡಿ. ಈ ಉಪಚುನಾವಣೆಯಲ್ಲಿ ಅವರಿಗೆ ಆಶೀರ್ವಾದ ಮಾಡಿ, ಯೋಗೇಶ್ವರ್ ಗೆ ಎಲ್ಲರೂ ಕೈ ಎತ್ತಿ ಆಶೀರ್ವಾದ ಮಾಡಿದ್ದೀರಿ, ನಾನು ಚನ್ನಪಟ್ಟಣಕ್ಕೆ ಮತ್ತೊಮ್ಮೆ ಬರ್ತೀನಿ, 11ಕ್ಕೆ ಸಾರ್ವಜನಿಕ ಸಭೆ ಇದೆ, ಅಲ್ಲಿ ಹೆಚ್ಚು ಹೊತ್ತು ಮಾತನಾಡುತ್ತೇನೆ. ಇದು ಉಪಚುನಾವಣೆ, ಸಾಮಾನ್ಯ ಚುನಾವಣೆ ಅಲ್ಲ. ಇದೇನು ಸರ್ಕಾರ ರಚನೆ ಮಾಡುವ ಚುನಾವಣೆಯಲ್ಲ ಎಂದು ಹೇಳಿದರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕುಮಾರಸ್ವಾಮಿ ಅವರನ್ನು ಆಯ್ಕೆ ಮಾಡಿದ್ದಿರಿ, ಆದರೆ, ಅವರು ಬಿಜೆಪಿ ಜೊತೆ ಸೇರಿ ಕೇಂದ್ರದಲ್ಲಿ ಮಂತ್ರಿ ಆಗುವ ಆಸೆಯಿಂದ ಮಂಡ್ಯಕ್ಕೆ ಹೋಗಿ ನಿಂತರು. ಕೇಂದ್ರದಲ್ಲಿ ಮಂತ್ರಿಯಾಗಿ ಐದಾರು ತಿಂಗಳು ಆಯಿತು. ಐದಾರು ತಿಂಗಳಲ್ಲಿ ಐದು ತಿಂಗಳು ಮಂಡ್ಯದಲ್ಲೇ ಇದ್ದಾರೆ. ಇವರು ದೇಶದ ಮಂತ್ರಿ, ಬೇರೆ ರಾಜ್ಯಗಳಿಗೆ ಹೋಗಲ್ಲ. ಯಾಕಂದ್ರೆ ಇವರು ಜನರ ಪರವಾಗಿ ಕೆಲಸ ಮಾಡಲ್ಲ.
2018ರಲ್ಲಿ ನಾವೆಲ್ಲಾ ಸೇರಿ ಕುಮಾರಸ್ವಾಮಿಯವರನ್ನು ಸಿಎಂ ಮಾಡಿದ್ದೆವು, ಕೇವಲ 37 ಸ್ಥಾನ ಗೆದ್ದಿದ್ದರೂ ಸಿಎಂ ಮಾಡಿದ್ದೆವು. ಈ ಕುಮಾರಸ್ವಾಮಿ, ದೇವೇಗೌಡರು ಯಾವತ್ತೂ ಬಡವರ ಪರ ಕೆಲಸ ಮಾಡಿಲ್ಲ. ಯಾವಾಗಲೂ ಭಾವನಾತ್ಮಕವಾಗಿ ಜನರ ಅನುಕಂಪ ಗಿಟ್ಟಿಸಿಕೊಂಡು ಅಧಿಕಾರಕ್ಕೆ ಬರುತ್ತಾರೆ. ದೇವೇಗೌಡ ಕುಟುಂಬಕ್ಕೆ ಇದೇ ಕೆಲಸವಾಗಿದೆ. ಈ ಚುನಾವಣೆಯಲ್ಲಿ ಸೋಲುತ್ತೇವೆಂದು ಅವರಿಗೆ ಗೊತ್ತಾಗಿದೆ. ಹಾಗಾಗಿ ಈಗಲೇ ಅಳೋಕೆ ಶುರು ಮಾಡಿದ್ದಾರೆ.
ದೇವೇಗೌಡರೆ ಯಾಕೆ ಇಲ್ಲಿ ಬಂದು ಅಳ್ತೀರಾ? ನಿಮ್ಮ ಮೊಮ್ಮಗ ಹಾಸನದಲ್ಲಿ ನೂರಾರು ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಮಾಡಿದ್ನಲ್ಲ ಅಲ್ಲಿ ಹೋಗಿ ಅಳಿ. ಇಲ್ಲಿ ಮೊಮ್ಮಗ 3ನೇ ಬಾರಿಗೆ ಸೋತುಬಿಡ್ತಾನೆ ಅಂತ ಬಂದು ಇಲ್ಲಿ ಅಳ್ತಾ ಇದ್ದಾರೆ. ದೇವೇಗೌಡರು, ಕುಮಾರಸ್ವಾಮಿ ಆಯ್ತು ಈಗ ಅವರ ಮಗ ನಿಖಿಲ್ ಕುಮಾರಸ್ವಾಮಿ ಅವರು ಅಳೋದು ಕಲ್ತಿದ್ದಾರೆ. ಅಳೋ ಗಂಡಸರನ್ನ ನಂಬಬಾರದಂತೆ. ಯಾಕೆ ಅಳಬೇಕು? ಕೆಲಸ ಮಾಡಿದ್ದರೆ ಯಾಕೆ ಅಳಬೇಕು? ಕರುಳು ಹಿಂಡಿ ಬಿಡುತ್ತಂತೆ, ಯಾಕೆ ಹಾಸನದಲ್ಲಿ ಅತಿ ದೊಡ್ಡ ಲೈಂಗಿಕ ಹಗರಣ ಆದಾಗ ಯಾಕೆ ಅಳಲಿಲ್ಲಾ? ಅಲ್ಲಿ ದೇವೇಗೌಡರಿಗೆ, ನಿಖಿಲ್ಗೆ ಅಳು ಬರಲಿಲ್ಲ. ಈಗ ಚನ್ನಪಟ್ಟಣದಲ್ಲಿ ಅಳು ಬರುತ್ತಾ? ಎಂದು ಲೇವಡಿ ಮಾಡಿದರು.
40 ವರ್ಷಗಳಿಂದ ರಾಜಕಾರಣದಲ್ಲಿದ್ದೇನೆ. ಒಂದೇ ಒಂದು ಕಪ್ಪು ಚುಕ್ಕಿ ನನ್ನ ಮೇಲೆ ಇಲ್ಲ. ಆದರೆ, ಈಗ ಬಿಜೆಪಿಯವರು ನನ್ನನ್ನ ಅಧಿಕಾರದಿಂದ ಕೆಳಗಿಳಿಸುವ ಪ್ರಯತ್ನ ಮಾಡುತ್ತಿದ್ದಾರೆ. ಅವರು ಏನೇ ಮಾಡಿದರೂ ನನ್ನನ್ನ ಅಧಿಕಾರದಿಂದ ಕೆಳಗಿಳಿಸಲು ಸಾಧ್ಯವಿಲ್ಲ ಎಂದು ಗುಡುಗಿದರು.
ದೇವೇಗೌಡ ಅವರು ಈ ವಯಸ್ಸಿನಲ್ಲೂ ಮೊಮ್ಮಗನ ಪರ ಪ್ರಚಾರ ಮಾಡುವುದಕ್ಕೆ ಬಂದಿದ್ದಾರೆ, ಸಿದ್ದರಾಮಯ್ಯನ ಗರ್ವ ಇಳಿಸಬೇಕು ಎಂದು ದೇವೇಗೌಡ ಅವರು ಹೇಳಿದ್ದಾರೆ. ಈ ರೀತ ಹೇಳಿ ಜನರ ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ. ನಾನು ಯವಾತ್ತೂ ಅಧಿಕಾರ ಬಂದಾಗ ಗರ್ವದಿಂದ, ಅಹಂ ನಿಂದ ನಡೆದುಕೊಂಡಿಲ್ಲ. ಜನರ ಉತ್ಸಾಹ ನೋಡುತ್ತಿದ್ದಾರೆ ಯೋಗೆಶ್ವರ್ ಗೆಲುವು ನಿಶ್ಚಿತ, ನೂರಕ್ಕೆ ನೂರರಷ್ಟು ಯೋಗೇಶ್ವರ್ ಗೆಲ್ಲುತ್ತಾರೆ. ಯೋಗೇಶ್ವರ್ ಈ ತಾಲೂಕಿನವರು, ಇಲ್ಲಿನ ಜನರ ಕಷ್ಟ ಗೊತ್ತಿರುವವರು. ನಿಖಿಲ್ ಕುಮಾರಸ್ವಾಮಿಗೆ ಗೊತ್ತಾ, ಹಳ್ಳಿಗಳು ಗೊತ್ತಾ? ಕುಮಾರಸ್ವಾಮಿಗೂ ಗೊತ್ತಿಲ್ಲ ಎಂದರು.
ಕುಮಾರಸ್ವಾಮಿ ಕೇಂದ್ರ ಮಂತ್ರಿ ಆಗಿದ್ದಾರೆ, ನಾವು ಮೇಕೆದಾಟು ಯೋಜನಗೆ ಮುಂದಾಗಿದ್ದೇವೆ. ಈಗ ರೈತನ ಮಗ, ಮಣ್ಣಿನ ಮಗ ಅದನ್ನು ಮಾಡಿಸಲಿ, ಕೇಂದ್ರದಲ್ಲಿ ಅನುಮತಿ ಕೊಡಿಸಲಿ, 24 ಗಂಟೆಗಳಲ್ಲಿ ಸೈನ್ ಹಾಕಿಸುತ್ತೇನಂದು ಹೇಳಿದ್ದರು. ಮಾಡಿದ್ದಾರಾ? ಎಂದು ಪ್ರಶ್ನಿಸಿದರು.
ದೇವೇಗೌಡರು ಇಲ್ಲಿಗೆ ಬಂದು ಕಣ್ಣೀರು ಹಾಕಿದರೆ. ಮೇಕೆದಾಟು ಮಾಡಲು ಆಗಲ್ಲ, ರಾಜ್ಯದ ಪರವಾಗಿ ಬಿಜೆಪಿ-ಜೆಡಿಎಸ್ ನವರು ಬಾಯಿ ಬಿಡಲ್ಲ. ಇಂತವರಿಗೆ ಓಟ್ ಹಾಕ್ತೀರಾ? ಇಂತವರನ್ನ ನೀವು ಆಯ್ಕೆ ಮಾಡಬಾರದು ನಿಖಿಲ್ ಕುಮಾರಸ್ವಾಮಿ ಸೋಲಿಸಿ ಯೋಗೇಶ್ವರ್ ಅವರನ್ನು ಗೆಲ್ಲಿಸಿ ಎಂದು ಕರೆ ನೀಡಿದರು.
ಬೆಂಗಳೂರು
ವೇತನ ವಿವಾದದಲ್ಲಿ ಸಿಎಂ ಸ್ಪಷ್ಟನೆ: 14 ತಿಂಗಳ ಹಿಂಬಾಕಿಗೆ ಮಾತ್ರ ಸರ್ಕಾರ ಸಿದ್ಧ

ಬೆಂಗಳೂರು: ಸಾರಿಗೆ ನೌಕರರ 38 ತಿಂಗಳ ವೇತನ ಹಿಂಬಾಕಿ ಪಾವತಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. “ಈ ಬೇಡಿಕೆ ಸಮಂಜಸವಲ್ಲ. ಸರ್ಕಾರ ಕೇವಲ 14 ತಿಂಗಳ ಹಿಂಬಾಕಿಗೆ ಸಿದ್ಧ” ಎಂದು ಅವರು ಮಂಗಳವಾರ ವಿಧಾನಸೌಧದಲ್ಲಿ ನಡೆದ ಸಂಧಾನ ಸಭೆಯಲ್ಲಿ ತಿಳಿಸಿದ್ದಾರೆ.
2020ರಿಂದ 2023ರ ಫೆಬ್ರವರಿವರೆಗಿನ ಬಾಕಿ ವೇತನ ಪಾವತಿಗೆ ನೌಕರ ಸಂಘಗಳು ಒತ್ತಾಯಿಸಿದ್ದರೊಂದಿಗೆ, 2024ರಿಂದ ನೂತನ ವೇತನವನ್ನೂ ಜಾರಿಗೆ ತರುವಂತೆ ಒತ್ತಾಯಿಸಲಾಗಿದೆ. ಈ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, “ನಿಗಮಗಳ ಆರ್ಥಿಕ ಪರಿಸ್ಥಿತಿ ಮತ್ತು ಹಿಂದಿನ ಸರ್ಕಾರದ ಆದೇಶಗಳ ದೋಷಗಳನ್ನು ಪರಿಗಣಿಸಿ 14 ತಿಂಗಳ ವೇತನ ಹಿಂಬಾಕಿಗೆ ಸಮ್ಮತಿಯಿದೆ,” ಎಂದು ಸ್ಪಷ್ಟಪಡಿಸಿದರು.
ವೇತನ ಪರಿಷ್ಕರಣೆ ಪಶ್ಚಾತ್ಪಟ
2016ರಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ 12.5% ವೇತನ ಹೆಚ್ಚಳ ಜಾರಿಗೆ ಬಂದಿತ್ತು. ಆದರೆ 2020ರ ಕೋವಿಡ್ ಕಾರಣದಿಂದ ಆ ವೇಳೆಗೆ ಯಾವುದೇ ಪರಿಷ್ಕರಣೆ ಆಗಿರಲಿಲ್ಲ. ನಂತರದ ಕಾಂಗ್ರೆಸ್ ಸರ್ಕಾರದಲ್ಲಿ ಶ್ರೀನಿವಾಸ ಮೂರ್ತಿ ಸಮಿತಿ ಶಿಫಾರಸ್ಸಿನಂತೆ 2022ರ ಜೂನ್ 01ರಿಂದ 2023ರ ಫೆಬ್ರವರಿವರೆಗೆ ಹಿಂಬಾಕಿ ಪಾವತಿ ಮಾಡಲು ತೀರ್ಮಾನಿಸಲಾಗಿತ್ತು.
ಸರ್ಕಾರದ ಆರ್ಥಿಕ ಹೊಣೆಗಾರಿಕೆ
ಸಿದ್ದರಾಮಯ್ಯ ಅವರು ಹೇಳಿದ್ದಾರೆ: “ನಾವು ಅಧಿಕಾರಕ್ಕೆ ಬಂದಾಗ ನಿಗಮಗಳಿಗೆ ಒಟ್ಟಾರೆ ₹4000 ಕೋಟಿ ಸಾಲ ಇತ್ತು. 2018 ರಲ್ಲಿ ಈ ಮೊತ್ತ ಕೇವಲ ₹14 ಕೋಟಿ ಮಾತ್ರ ಇತ್ತು. ಯಾವುದೇ ನಿಗಮ ಲಾಭದಲ್ಲಿ ಇಲ್ಲ.” ಅಂತಹ ಪರಿಸ್ಥಿತಿಯಲ್ಲಿ ಎಲ್ಲಾ ನೌಕರರ ಬೇಡಿಕೆಗಳನ್ನು ಈಡೇರಿಸಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.
ಸಂಘದ ಚುನಾವಣೆ ಮತ್ತು ಮುಂದಿನ ಕ್ರಮ
ಸಾರಿಗೆ ನೌಕರರ ಸಂಘದ ಚುನಾವಣೆ ಹಾಗೂ ಬೇಡಿಕೆಗಳ ಕುರಿತಂತೆ ಸರ್ಕಾರ ಪರಿಶೀಲನೆ ನಡೆಸಲಿದ್ದು, ಮಾತುಕತೆ ಮೂಲಕ ಎಲ್ಲ ಅಹವಾಲುಗಳನ್ನು ಬಗೆಹರಿಸಲು ಸಿದ್ಧವಾಗಿದೆ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು
ಸಾರಿಗೆ ನೌಕರರ ಮುಷ್ಕರ ಆರಂಭ: ಡಿಸಿಎಂ ಡಿ.ಕೆ.ಶಿವಕುಮಾರ್ ಮನವಿ – “ಹಠವಿಲ್ಲದೆ ಸಹಕಾರ ನೀಡಿ”

ಬೆಂಗಳೂರು: ಹಲವಾರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದಿನಿಂದ ಸಾರಿಗೆ ನೌಕರರು ಮುಷ್ಕರಕ್ಕೆ (Transport Employees Strike) ಇಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ತಮ್ಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.
ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, “ಸಾರಿಗೆ ನೌಕರರು ಕೇಳಿರುವ ಬೇಡಿಕೆಯಲ್ಲಿ ತಪ್ಪಿಲ್ಲ. ಆದರೆ ಸರ್ಕಾರದ ಪರಿಸ್ಥಿತಿಯನ್ನೂ ಅವರು ಗಮನದಲ್ಲಿಟ್ಟುಕೊಳ್ಳಬೇಕು. ಹಠವಿಲ್ಲದೆ ಸಹಕಾರ ನೀಡಬೇಕು” ಎಂದು ಹೇಳಿದ್ದಾರೆ. ಮುಖ್ಯಮಂತ್ರಿಗಳು ಹಾಗೂ ಸಚಿವರು ನೌಕರರೊಂದಿಗೆ ಸಭೆ ನಡೆಸಿದ್ದಾರೆ ಎಂಬುದನ್ನು ಅವರು ನೆನಪಿಸಿದ್ದಾರೆ.
“ಸಾರ್ವಜನಿಕರ ಹಿತವೇ ಮೊದಲಾದ್ದು. ಕೆಲವು ನೌಕರರು ಈಗಾಗಲೇ ಕೆಲಸಕ್ಕೆ ಹಾಜರಾಗಿದ್ದಾರೆ. ಅವರಿಗೆ ಅಭಿನಂದನೆ” ಎಂದು ಡಿಸಿಎಂ ಹೇಳಿದ್ದಾರೆ.
ಇತ್ತ, ಹಳದಿ ಮೆಟ್ರೊ ಮಾರ್ಗದ (Yellow Metro Line) ಉದ್ಘಾಟನೆಯ ಕುರಿತು ಮಾತನಾಡಿದ ಡಿ.ಕೆ.ಶಿವಕುಮಾರ್, “ಪ್ರಧಾನಿ ನರೇಂದ್ರ ಮೋದಿ (Narendra Modi) ಆಗಸ್ಟ್ 10ರಂದು ಬರುವ ಸಾಧ್ಯತೆ ಇದೆ. ನಾವು ಈಗಾಗಲೇ ತಯಾರಿ ಪರಿಶೀಲನೆ ಆರಂಭಿಸಿದ್ದೇವೆ. ಕಾರ್ಯಕ್ರಮದ ಅಧಿಕೃತ ಸಮಯ ಇನ್ನೂ ಘೋಷಣೆಯಾಗಿಲ್ಲ” ಎಂದು ತಿಳಿಸಿದ್ದಾರೆ.
ಇದೇ ದಿನ ಬಿಜೆಪಿ ವತಿಯಿಂದ ರೈಲ್ವೆ ಸಂಬಂಧಿತ ಕಾರ್ಯಕ್ರಮವೂ ನಡೆಯಲಿದೆ ಎಂದು ಅವರು ಹೇಳಿದ್ದಾರೆ.
ಬೆಂಗಳೂರು
ಕೆಆರ್ಎಸ್ ಡ್ಯಾಂ ಕಟ್ಟಲು ಮೈಸೂರಿನ ರಾಜಮಾತೆಯ ತ್ಯಾಗ: ಟಿಪ್ಪು ವಿವಾದದ ನಡುವೆ ಪೀಠಾಧಿಪತಿಯ ಸ್ಪಷ್ಟನೆ!

ರಾಯಚೂರು: ಕಾವೇರಿ ನದೀಪ್ರಾಂತ್ಯದ ಜನರಿಗೆ ನೀರಿನ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಮೈಸೂರಿನ ರಾಜಮಾತೆ ತಮ್ಮ ಆಭರಣಗಳನ್ನು ಮಾರಾಟ ಮಾಡಿ ಕೆಆರ್ಎಸ್ ಡ್ಯಾಂವನ್ನು ನಿರ್ಮಿಸಿದರು ಎಂದು ಗುರುರಾಘವೇಂದ್ರ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿ ಹೇಳಿದ್ದಾರೆ.
ಮಂತ್ರಾಲಯದಲ್ಲಿ ಮಾತನಾಡಿದ ಅವರು, ಕೆಆರ್ಎಸ್ ಜಲಾಶಯಕ್ಕೆ ಟಿಪ್ಪು ಸುಲ್ತಾನ್ ಅಡಿಗಲ್ಲು ಹಾಕಿದ್ದಾರೆ ಎಂಬ ಸಚಿವ ಮಹಾದೇವಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, “ಇದು ರಾಜಮನೆತನದ ತ್ಯಾಗದ ಫಲ. ಇತಿಹಾಸವನ್ನು ನಿಖರವಾಗಿ ತಿಳಿದುಕೊಳ್ಳಬೇಕಾದದ್ದು ಇತಿಹಾಸ ತಜ್ಞರ ಕೆಲಸ” ಎಂದು ಹೇಳಿದರು.
ಇದೇ ವೇಳೆ ಧರ್ಮಸ್ಥಳದ ತಾತ್ಕಾಲಿಕ ವಿವಾದಗಳ ಕುರಿತು ಮಾತನಾಡಿದ ಶ್ರೀಗಳು, “ಧಾರ್ಮಿಕ ಕ್ಷೇತ್ರಗಳ ಪಾವಿತ್ರ್ಯತೆಗಿಂತ ವ್ಯವಸ್ಥೆ ಬಗ್ಗೆ ಚರ್ಚೆ ಮಾಡಬೇಕು. ಜನ ಭಕ್ತಿಯಿಂದ ನಂಬುವ ಕ್ಷೇತ್ರಗಳನ್ನು ರಾಜಕೀಯವಾಗಿಸಬಾರದು” ಎಂದು ಎಚ್ಚರಿಸಿದರು.
ಸಾರಿಗೆ ನೌಕರರ ಮುಷ್ಕರದ ವಿಚಾರಕ್ಕೂ ಪ್ರತಿಕ್ರಿಯೆ ನೀಡಿದ ಅವರು, “ಅವರ ಬೇಡಿಕೆಗಳನ್ನು ಸರಕಾರ ಗಂಭೀರವಾಗಿ ಪರಿಗಣಿಸಬೇಕು. ಭಕ್ತರಿಗೆ ತೊಂದರೆಯಾಗದಂತೆ ಸೂಕ್ತ ಪರಿಹಾರ ಒದಗಿಸಲಿ” ಎಂದಿದ್ದಾರೆ.
ಇದಕ್ಕೂ ಮುನ್ನ ಸಚಿವ ಎಚ್.ಸಿ. ಮಹಾದೇವಪ್ಪ ಟಿಪ್ಪು ಸುಲ್ತಾನ್ ಕನ್ನಂಬಾಡಿ ಡ್ಯಾಂಗೆ ಅಡಿಗಲ್ಲು ಹಾಕಿದರೆಂದು ಹೇಳಿಕೆ ನೀಡಿದ್ದರು. ಆದರೆ, ಇತಿಹಾಸವನ್ನ ತಿರುವುಮಾಡುವುದು ಸರಿಯಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
-
ಬಿಬಿಎಂಪಿ3 months ago
ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ಗ್ರೇಟರ್ ಬೆಂಗಳೂರು ಪ್ರದೇಶಕ್ಕೆ
-
ಬೆಂಗಳೂರು1 year ago
ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಮುಖ್ಯ – ಡಾ. ಕೆ.ಸಿ ರೋಹಿತ್
-
ದೇಶ2 years ago
ಫೀನಿಕ್ಸ್ ನಲ್ಲಿ ವೈಭವದ ರಥೋತ್ಸವದೊಂದಿಗೆ ಹತ್ತು ದಿನಗಳ ಉತ್ಸವಕ್ಕೆ ತೆರೆ
-
ಚುನಾವಣೆ2 years ago
ಬಿಬಿಎಂಪಿ ಚುನಾವಣೆ ಡಿಸೆಂಬರ್ನಲ್ಲಿ ನಡೆಯುವ ಸಾಧ್ಯತೆ: ಸಚಿವರಾಮಲಿಂಗಾರೆಡ್ಡಿ
-
ರಾಜಕೀಯ2 years ago
Gruhalaxmi ಗೃಹಲಕ್ಷಿö್ಮ ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಹೀಗೆ ಚೆಕ್ ಮಾಡಿ
-
ಬೆಂಗಳೂರು1 year ago
ನೀರಿಲ್ಲ ನೀರಿಲ್ಲ ನಾಳೆ ನಲ್ಲಿಯಲ್ಲಿ ನೀರು ಬರೋದಿಲ್ಲ
-
ಬೆಂಗಳೂರು8 months ago
ಯಶವಂತಪುರ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಖ್ಯ ಉದ್ದೇಶ -ಎಸ್ ಟಿ ಸೋಮಶೇಖರ್
-
ರಾಜ್ಯ2 years ago
ದೇಶದ ಎಲ್ಲಾ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ನೀಡಲು ಮುಂದಾದ ಸರ್ಕಾರ! ಇಂದೇ ಅರ್ಜಿ ಸಲ್ಲಿಸಿ