ದೇಶ
ಮೇಕೆದಾಟು ಯೋಜನೆಗೆ ಪ್ರಧಾನಿ ಮೋದಿಯಿಂದ ಒಪ್ಪಿಗೆ ಕೊಡಿಸುವೆ: ಹೆಚ್.ಡಿ.ದೇವೇಗೌಡ

- /home/u521927855/domains/hosasuddi.in/public_html/wp-content/plugins/mvp-social-buttons/mvp-social-buttons.php on line 27
https://hosasuddi.in/wp-content/uploads/2024/11/Capture-3-1000x600.png&description=ಮೇಕೆದಾಟು ಯೋಜನೆಗೆ ಪ್ರಧಾನಿ ಮೋದಿಯಿಂದ ಒಪ್ಪಿಗೆ ಕೊಡಿಸುವೆ: ಹೆಚ್.ಡಿ.ದೇವೇಗೌಡ', 'pinterestShare', 'width=750,height=350'); return false;" title="Pin This Post">
- Share
- Tweet /home/u521927855/domains/hosasuddi.in/public_html/wp-content/plugins/mvp-social-buttons/mvp-social-buttons.php on line 72
https://hosasuddi.in/wp-content/uploads/2024/11/Capture-3-1000x600.png&description=ಮೇಕೆದಾಟು ಯೋಜನೆಗೆ ಪ್ರಧಾನಿ ಮೋದಿಯಿಂದ ಒಪ್ಪಿಗೆ ಕೊಡಿಸುವೆ: ಹೆಚ್.ಡಿ.ದೇವೇಗೌಡ', 'pinterestShare', 'width=750,height=350'); return false;" title="Pin This Post">
ರಾಮನಗರ: ನಾನು ನನ್ನ ಕೊನೆಯುಸಿರೆಳೆಯುವ ಮುನ್ನ ಮೇಕೆದಾಟು ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಒಪ್ಪಿಗೆ ಕೊಡಿಸುತ್ತೇನೆ. ಈ ಯೋಜನೆ ಮೋದಿ ಅವರಿಂದ ಮಾತ್ರ ಸಾಧ್ಯ ಎಂಬುದರಲ್ಲಿ ಎರಡು ಮಾತಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ತಿಳಿಸಿದ್ದಾರೆ.
ಹೊಡಿಕೆಹೊಸಹಳ್ಳಿ ಗ್ರಾಮದಲ್ಲಿ ಗುರುವಾರ ಎನ್ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಮತಯಾಚಿಸುತ್ತಾ ಅವರು ಮಾತನಾಡಿದರು.
ನಾನು ಇಗ್ಗಲೂರು ಅಣೆಕಟ್ಟು ಕಟ್ಟಿದ್ದು ದೊಡ್ಡ ವಿಷಯ ಅಲ್ಲ. ನಾನು ಪ್ರಧಾನಿ ಆಗಿದ್ದು ದೈವದ ಆಟ. ಮೇಕೆದಾಟು ಯೋಜನೆ ಬಗ್ಗೆ ಮೋದಿ ಅವರಿಗೆ ವಾಸ್ತವ ಸ್ಥಿತಿ ಮನವರಿಕೆ ಮಾಡಿಕೊಡುತ್ತೇನೆ. ಈಗಾಗಲೇ ಹಲವಾರು ಸಲ ಅವರು ನನ್ನ ಮನವಿ ಆಲಿಸಿದ್ದಾರೆ. ಈ ಯೋಜನೆಯಲ್ಲಿ ತಮಿಳುನಾಡಿನವರು ನಮ್ಮ ಕುತ್ತಿಗೆ ಹಿಡಿದಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ಆರು ತಿಂಗಳಿಂದ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಾನೇ ಅಭ್ಯರ್ಥಿ ಅಂದರು. ರಾಜ್ಯದ ಮಾನ ಮಾರ್ಯಾದೆಯನ್ನು ತೀರಾ ಕೆಳಮಟ್ಟಕ್ಕೆ ತೆಗೆದುಕೊಂಡು ಹೋದರು. 55 ವರ್ಷದಿಂದ ಚನ್ನಪಟ್ಟಣದಲ್ಲಿ ನಾನು ಸಂಘಟನೆ ಮಾಡಿದ್ದೇನೆ. ಕಡಿಮೆ ದರದಲ್ಲಿ ಪಡಿತರ ನೀಡಿದ್ದೇನೆ. ಅದನ್ನು ಸಿದ್ದರಾಮಯ್ಯ ಬಳಿ ನೀವು ಕೇಳಿ. ಆಲಮಟ್ಟಿ, ಹಾರಂಗಿ, ಹೇಮಾವತಿ, ಯಗಚಿ ಅಣೆಕಟ್ಟು ಕಟ್ಟಿದವರು ಯಾರು? ಬರೀ ಇಗ್ಗಲೂರು ಡ್ಯಾಂ ಅಷ್ಟೇ ಅಲ್ಲ. ನಿಮ್ಮನ್ನು ನಾನು ನೋಡುತ್ತಿದ್ದರೆ 92 ವರ್ಷದ ನನಗೆ 18ರ ಶಕ್ತಿ ಬರುತ್ತದೆ. ಇನ್ನೂ ನಾಲ್ಕಾರು ವರ್ಷ ಬದುಕುತ್ತೇನೆ ಎಂದು ದೇವೇಗೌಡರು ತಿಳಿಸಿದರು.
Where is Kumaranna? Where is DK? ಹಿಮಾಲಯ ಪರ್ವತಕ್ಕೂ ಇಲ್ಲಿನ ಸಣ್ಣ ಗುಡ್ಡಕ್ಕೂ ಎಲ್ಲಿಯ ಹೋಲಿಕೆ?. ಒಂದು ಶಾಲೆ ಮಾಡಲು ಜಾಗ ಕೇಳಿದರೆ ದುಡ್ಡು ದುಡ್ಡು ಅಂತಾರೆ ಎಂದು ಮಾಜಿ ಪ್ರಧಾನಿ ಗುಡುಗಿದರು. ನಿಖಿಲ್ನನ್ನ ನಾನೇ ರಾಜ್ಯ ನಾಯಕನನ್ನಾಗಿ ಮಾಡ್ತೇನೆ. ತೋಟದಲ್ಲಿ ಕುಳಿತು ಹೇಳಿಕೊಟ್ಟು ರಾಜ್ಯ ನಾಯಕನನ್ನಾಗಿ ಮಾಡುವ ಕಾಲ ಬರಲಿದೆ. ಅವನನ್ನು ದೊಡ್ಡ ನಾಯಕನನ್ನಾಗಿ ರೂಪಿಸುತ್ತೇನೆ ಎಂದು ದೇವೆಗೌಡ ಹೇಳಿದರು.
ದೇಶ
ಪಿಎಂ ಮೋದಿ ಆಗಸ್ಟ್ 10ರಂದು ಬೆಂಗಳೂರಿಗೆ: ನಮ್ಮ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ

ಬೆಂಗಳೂರು: ನಮ್ಮ ಮೆಟ್ರೋ (Namma Metro) ಹಳದಿ ಮಾರ್ಗದ (Yellow Line) ಉದ್ಘಾಟನೆಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು (PM Modi) ಆಗಸ್ಟ್ 10ರಂದು ಬೆಂಗಳೂರಿಗೆ ಬರುವುದಾಗಿ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ತಿಳಿಸಿದ್ದಾರೆ.
ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪ್ರಧಾನಿಯವರು ಆಗಸ್ಟ್ 10ರಂದು ನಮ್ಮ ಮೆಟ್ರೋ ಹಳದಿ ಮಾರ್ಗವನ್ನು ಉದ್ಘಾಟನೆ ಮಾಡುವ ಉದ್ದೇಶದಿಂದ ಬರುತ್ತಿದ್ದಾರೆ. ಅವರ ಭೇಟಿಗೆ ಸಿದ್ಧತೆಗಳು ನಡೆಯುತ್ತಿವೆ. ಟೈಮ್ ಟು ಟೈಮ್ ಕಾರ್ಯಕ್ರಮಗಳ ಬಗ್ಗೆ ಇನ್ನೂ ವಿವರ ಬಾಕಿಯಿದೆ,” ಎಂದು ಹೇಳಿದರು.
ವೈಭವದಿಂದ ಕಾರ್ಯಕ್ರಮ?
ಆದರೆ, ಮೂಲ ಯೋಜನೆಗೆ ಬದಲಾವಣೆ ಆಗಿದೆ. ಈಗ ಪ್ರಧಾನಿಯವರು ಕೇವಲ ಹಳದಿ ಮಾರ್ಗದ ಮೆಟ್ರೋ ಮತ್ತು ವಂದೇ ಭಾರತ್ ರೈಲು ಉದ್ಘಾಟನೆಗೆ ಮಾತ್ರ ಭಾಗಿಯಾಗಲಿದ್ದಾರೆ. ಬಿಜೆಪಿ ಕಾರ್ಯಕರ್ತರ ಸಮಾವೇಶ ಮತ್ತು ರೋಡ್ ಶೋ ಕಾರ್ಯಾಚರಣೆಗಳು ರದ್ದುಪಡಿಸಲಾಗಿದೆ.
ಇದರ ಪರಿಣಾಮವಾಗಿ, ಒಂದು ವರ್ಷದಿಂದ ಮೋದಿಯವರ ಆಗಮನದ ನಿರೀಕ್ಷೆಯಲ್ಲಿದ್ದ ಬಿಜೆಪಿ ಕಾರ್ಯಕರ್ತರು ನಿರಾಸೆಗೊಳಗಾಗಿದ್ದಾರೆ ಎಂದು ವರದಿಯಾಗಿದೆ.
ದೇಶ
ಭಾರತ vs ಅಮೆರಿಕ: ರಷ್ಯಾದ ತೈಲದ ಬಗ್ಗೆ ಉದ್ವಿಗ್ನತೆ, ಸೇನೆಯಿಂದ ತಿರುಗೇಟು

ಬೆಂಗಳೂರು: ರಷ್ಯಾದಿಂದ ಕಚ್ಚಾ ತೈಲ ಖರೀದಿಯ ಕುರಿತು ಭಾರತ-ಅಮೆರಿಕ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವಂತಾಗಿದೆ. ಭಾರತ ರಷ್ಯಾದಿಂದ ತೈಲ ಆಮದು ಮಾಡುತ್ತಿರುವುದಕ್ಕೆ ಅಮೆರಿಕ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, ಭಾರತೀಯ ಸೇನೆ ಅಮೆರಿಕದ ದ್ವೇಧಾಚರಣೆ ವಿರುದ್ಧ ತಿರುಗೇಟು ನೀಡಿದೆ.
ಸೋಷಿಯಲ್ ಮೀಡಿಯಾದಲ್ಲಿ “ಈ ದಿನ ಆ ವರ್ಷ – ಯುದ್ಧದ ನಿರ್ಮಾಣ – 05 ಆಗಸ್ಟ್ 1971” ಎಂಬ ಶೀರ್ಷಿಕೆಯಡಿ ಸೇನೆಯು 1971ರ ಯುದ್ಧದ ಕಾಲದ ಪತ್ರಿಕಾ ಕಟಿಂಗ್ ಹಂಚಿಕೊಂಡಿದೆ. 1954ರಿಂದ 1971ರವರೆಗೆ ಅಮೆರಿಕ ಪಾಕಿಸ್ತಾನಕ್ಕೆ ಶಸ್ತ್ರಾಸ್ತ್ರ ಪೂರೈಸಿದ ಬಗ್ಗೆ ಪೇಪರ್ ಕಟಿಂಗ್ ಉಲ್ಲೇಖಿಸುತ್ತಾ, “ಅಮೆರಿಕ ಪಾಕ್ ಪರ ಕೆಲಸ ಮಾಡಿತ್ತಲ್ಲವೆ?” ಎಂದು ಪ್ರಶ್ನಿಸಿದೆ.
ಇದು ಉಕ್ರೇನ್ ವಿರುದ್ಧದ ಯುದ್ಧಕ್ಕೆ ಭಾರತ ಹಣ ಒದಗಿಸುತ್ತಿದೆ ಎಂಬ ಅಮೆರಿಕದ ಆರೋಪಕ್ಕೆ ಪ್ರತಿಕ್ರಿಯೆಯಾಗಿದೆ. ಭಾರತವು ಅಮೆರಿಕ ಮತ್ತು ಯುರೋಪಿಯನ್ ಒಕ್ಕೂಟದ ಟೀಕೆಗಳನ್ನು ‘ಅಸಮರ್ಥನೀಯ ಹಾಗೂ ಅಸಮಂಜಸ’ವೆಂದು ತಿರಸ್ಕರಿಸಿದೆ. ಭಾರತ ತನ್ನ ತೈಲ ನೀತಿಯನ್ನು ಆರ್ಥಿಕ ಶಕ್ತಿಯ ದೃಷ್ಟಿಯಿಂದ ಮುಂದುವರಿಸುತ್ತಿದೆ.
ದೇಶ
ಸೇನೆ ಕುರಿತ ಹೇಳಿಕೆ: ಸುಪ್ರೀಂ ಕೋರ್ಟ್ ಟೀಕೆಗೆ ಪ್ರಿಯಾಂಕಾ ಗಾಂಧಿಯಿಂದ ಕಠಿಣ ಪ್ರತಿಕ್ರಿಯೆ

ನವದೆಹಲಿ: ಭಾರತೀಯ ಸೇನೆ ಬಗ್ಗೆ ನೀಡಿದ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಇದೀಗ ಅವರ ಸಹೋದರಿ ಹಾಗೂ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ.
ರಾಹುಲ್ ಗಾಂಧಿಯ ವಿರುದ್ಧ ಸುಪ್ರೀಂ ಕೋರ್ಟ್ ನೀಡಿದ ಟೀಕೆಗೆ ಪ್ರತಿಕ್ರಿಯಿಸಿ ಪ್ರಿಯಾಂಕಾ ಗಾಂಧಿ,
“ಯಾರು ನಿಜವಾದ ಭಾರತೀಯರು ಎಂಬುದನ್ನು ನಿರ್ಧರಿಸಲು ನ್ಯಾಯಾಧೀಶರು ಯೋಗ್ಯರಲ್ಲ. ರಾಹುಲ್ ಗಾಂಧಿಗೆ ಭಾರತೀಯ ಸೇನೆಯ ಬಗ್ಗೆ ಅಪಾರ ಗೌರವವಿದೆ. ಅವರು ಎಂದಿಗೂ ಸೇನೆಯ ವಿರುದ್ಧ ಕೆಟ್ಟ ಮಾತುಗಳನ್ನು ಮಾತನಾಡಲ್ಲ,” ಎಂದು ತಿಳಿಸಿದ್ದಾರೆ.
ಗಲ್ವಾನ್ ಕಣಿವೆ ಸಂಘರ್ಷ ಕುರಿತು ಮಾತನಾಡಿದ ವೇಳೆ ರಾಹುಲ್ ಗಾಂಧಿ ನೀಡಿದ ಹೇಳಿಕೆಯನ್ನು ಸುಪ್ರೀಂ ಕೋರ್ಟ್ ‘ಅನುಚಿತ’ ಎಂದು ಖಂಡಿಸಿದ್ದು, “ನಿಜವಾದ ಭಾರತೀಯರು ಈ ರೀತಿ ಮಾತನಾಡುವುದಿಲ್ಲ” ಎಂದು ಹೇಳಿದ್ದಾರೆ. ಇದನ್ನು ಪ್ರಿಯಾಂಕಾ ಗಾಂಧಿ ಪ್ರಶ್ನಿಸಿದ್ದು, “ವಿರೋಧ ಪಕ್ಷದ ನಾಯಕರಾಗಿ ಸರ್ಕಾರವನ್ನು ಪ್ರಶ್ನಿಸುವುದು ರಾಹುಲ್ ಅವರ ಕರ್ತವ್ಯ. ನ್ಯಾಯಮೂರ್ತಿಗಳು ಇಂತಹ ಹೇಳಿಕೆ ನೀಡುವುದು ಸರಿಯಲ್ಲ,” ಎಂದಿದ್ದಾರೆ.
ಅದೇ ರೀತಿ, ಪ್ರಿಯಾಂಕಾ ಗಾಂಧಿ ಸರ್ಕಾರದ ನಡೆಗೆ ಶಂಕೆ ವ್ಯಕ್ತಪಡಿಸಿ,
“ರಾಹುಲ್ ಗಾಂಧಿಯ ಪ್ರಶ್ನೆಗಳಿಗೆ ಸರ್ಕಾರದ ಬಳಿ ಉತ್ತರಗಳಿಲ್ಲ. ಅವರು ಚರ್ಚೆಗೆ ತಯಾರಿಲ್ಲ. ಸಂಸತ್ತನ್ನು ಸರಿಯಾಗಿ ನಡೆಸಲಾಗುತ್ತಿಲ್ಲ. ಇದನ್ನೆಲ್ಲಾ ಮರೆಮಾಚಲು ಈ ರೀತಿಯ ತಂತ್ರಗಳನ್ನು ಬಳಸುತ್ತಿದ್ದಾರೆ,” ಎಂದು ವಾಗ್ದಾಳಿ ನಡೆಸಿದ್ದಾರೆ.
-
ಬಿಬಿಎಂಪಿ3 months ago
ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ಗ್ರೇಟರ್ ಬೆಂಗಳೂರು ಪ್ರದೇಶಕ್ಕೆ
-
ಬೆಂಗಳೂರು1 year ago
ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಮುಖ್ಯ – ಡಾ. ಕೆ.ಸಿ ರೋಹಿತ್
-
ದೇಶ2 years ago
ಫೀನಿಕ್ಸ್ ನಲ್ಲಿ ವೈಭವದ ರಥೋತ್ಸವದೊಂದಿಗೆ ಹತ್ತು ದಿನಗಳ ಉತ್ಸವಕ್ಕೆ ತೆರೆ
-
ಚುನಾವಣೆ2 years ago
ಬಿಬಿಎಂಪಿ ಚುನಾವಣೆ ಡಿಸೆಂಬರ್ನಲ್ಲಿ ನಡೆಯುವ ಸಾಧ್ಯತೆ: ಸಚಿವರಾಮಲಿಂಗಾರೆಡ್ಡಿ
-
ರಾಜಕೀಯ2 years ago
Gruhalaxmi ಗೃಹಲಕ್ಷಿö್ಮ ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಹೀಗೆ ಚೆಕ್ ಮಾಡಿ
-
ಬೆಂಗಳೂರು1 year ago
ನೀರಿಲ್ಲ ನೀರಿಲ್ಲ ನಾಳೆ ನಲ್ಲಿಯಲ್ಲಿ ನೀರು ಬರೋದಿಲ್ಲ
-
ಬೆಂಗಳೂರು8 months ago
ಯಶವಂತಪುರ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಖ್ಯ ಉದ್ದೇಶ -ಎಸ್ ಟಿ ಸೋಮಶೇಖರ್
-
ರಾಜ್ಯ2 years ago
ದೇಶದ ಎಲ್ಲಾ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ನೀಡಲು ಮುಂದಾದ ಸರ್ಕಾರ! ಇಂದೇ ಅರ್ಜಿ ಸಲ್ಲಿಸಿ