Connect with us

ಕ್ರೀಡೆ

0 ಎಸೆತಕ್ಕೆ 8 ರನ್​ ಬಿಟ್ಟುಕೊಟ್ಟ ವಿಶ್ವದ ಏಕೈಕ ಬೌಲರ್! ಯಾರ ಹೆಸರಲ್ಲಿದೆ ಗೊತ್ತೇ ಈ ದಾಖಲೆ?

8 Runs in 0 ball: ಕ್ರಿಕೆಟ್​ನಲ್ಲಿ ನಿರ್ಮಾಣವಾಗಿರುವ ಕೆಲ ಅಪರೂಪದ ದಾಖಲೆಗಳು ಇಂದಿಗೂ ಅಚ್ಚರಿಪಡಿಸುತ್ತವೆ. ಅದರಲ್ಲೊಂದು 0 ಬಾಲ್​ಗೆ 8 ರನ್​ ಬಿಟ್ಟುಕೊಟ್ಟಿರುವುದು. ಈ ದಾಖಲೆ ಏಷ್ಯಾಕಪ್‌ನಲ್ಲಿ ನಿರ್ಮಾಣವಾಗಿದೆ.

2014ರಲ್ಲಿ ಬಾಂಗ್ಲಾದೇಶ ಮತ್ತು ಪಾಕಿಸ್ತಾನ ತಂಡಗಳ ಮಧ್ಯೆ ನಡೆದ ಏಷ್ಯಾಕಪ್ ಪಂದ್ಯದಲ್ಲಿ ಇದು ಸಂಭವಿಸಿತ್ತು. ಪಂದ್ಯದಲ್ಲಿ ಮೊದಲು ಬ್ಯಾಟ್​ ಮಾಡಿದ್ದ ಬಾಂಗ್ಲಾ ಭರ್ಜರಿ ಪ್ರದರ್ಶನ ತೋರಿತ್ತು. 50 ಓವರ್​​ಗಳಲ್ಲಿ 3 ವಿಕೆಟ್​ ನಷ್ಟಕ್ಕೆ 326 ರನ್​ ಕಲೆ ಹಾಕಿತ್ತು. ಬಾಂಗ್ಲಾ ಪರ ಅನ್ಮೂಲ್​ ಹಖ್​ 6 ಬೌಂಡರಿ ಮತ್ತು 4 ಸಿಕ್ಸರ್​ ಸಹಾಯದಿಂದ ಶತಕ ಸಿಡಿಸಿದ್ದರು. ಇಮ್ರುಲ್​ ಕೇಯೆಸ್ (59), ಮಾಮಿನುಲ್​ ಹಖ್​ (51), ಮಶ್ಪೀಖರ್​ ರೆಹ​ಮಾನ್​ (51) ಅರ್ಧಶತಕ ಸಿಡಿಸಿ ಪಾಕಿಸ್ತಾನಕ್ಕೆ ಬೃಹತ್​ ಮೊತ್ತದ ಗುರಿ ನೀಡಿದ್ದರು.

ಈ ಗುರಿ ಬೆನ್ನತ್ತಿದ ಪಾಕಿಸ್ತಾನ ಕೂಡ ಉತ್ತಮ ಪ್ರದರ್ಶನ ತೋರಿತ್ತು. ಅಹ್ಮದ್​ ಶೆಹಜಾದ್​ (103) ಶತಕ ಮತ್ತು ಮೊಹ್ಮದ್​ ಹಫೀಜ್​ (52), ಫಾಹದ್​ ಆಲಾಮ್​ (74), ಶಾಹೀದ್​ ಆಫ್ರಿದಿ (59) ಅರ್ಧಶತಕ ಸಿಡಿಸಿ ಇನ್ನೂ 1 ಎಸೆತ ಬಾಕಿ ಇರುವಂತೆಯೇ ತಂಡವನ್ನು ಗೆಲುವಿನ ದಡ ಸೇರಿಸಿದ್ದರು. ಆದ್ರೆ ಈ ಪಂದ್ಯದಲ್ಲಿ ಪಾಕ್​ ಬೌಲರ್​ ಕಳಪೆ ಪ್ರದರ್ಶನ ತೋರಿ ಕೆಟ್ಟ ದಾಖಲೆ ಬರೆದಿದ್ದರು.

ಬಾಂಗ್ಲಾದೇಶ ಬ್ಯಾಟಿಂಗ್​ ವೇಳೆ ಪಾಕ್​ ಸ್ಪಿನ್​ ​ಬೌಲರ್​ ಅಬ್ದುರ್​ ರೆಹಮಾನ್​ 0 ಬೌಲ್​ಗೆ 8 ರನ್​ ಬಿಟ್ಟುಕೊಟ್ಟಿದ್ದರು. ಇದು ಕ್ರಿಕೆಟ್​ ಇತಿಹಾಸದಲ್ಲೇ ನಿರ್ಮಾಣವಾಗಿರುವ ಕೆಟ್ಟ ದಾಖಲೆ. ಇದು ಹೇಗೆ ಸಾಧ್ಯವಾಯಿತು? ಎಂಬುದನ್ನು ಈಗ ತಿಳಿಯಿರಿ.

0 ಬಾಲ್​ಗೆ 8 ರನ್​: ಈ ಪಂದ್ಯದಲ್ಲಿ 11 ಓವರ್​ ಬೌಲಿಂಗ್​ ಮಾಡಿದ್ದ ಅಬ್ದುರ್​ ರೆಹಮಾನ್​ 3 ಇಲ್ಲೀಗಲ್​ ಡೆಲಿವರಿ ಎಸೆದಿದ್ದರು. ಮೊದಲ ಎಸೆತ ವೈಡ್ ಆಗಿತ್ತು. ಇದರಿಂದಾಗಿ 1 ರನ್​ ಬಂದಿತ್ತು. ನಂತರ ಎರಡನೇ ಬೌಲಿಂಗ್​ ಫುಲ್ಟಾಸ್​ ಅನ್ನು ಬಾಂಗ್ಲಾ ಬ್ಯಾಟರ್​ ಬೌಂಡರಿಗೆ ಬಾರಿಸಲು ಯತ್ನಿಸಿ ಕ್ಯಾಚ್​ ನೀಡಿದ್ದರು. ಆದರೆ ಇದು ನೋ ಬಾಲ್​ ಆಗಿತ್ತು. ಈ ವೇಳೆ ಬಾಂಗ್ಲಾ ಬ್ಯಾಟರ್​ಗಳು ಒಂದು ರನ್​ ಕಲೆಹಾಕಿದ್ದರು. ಈ ಎಸೆತದಲ್ಲಿ 2 ರನ್​ ಬಂದವು. ಇಲ್ಲಿಗೆ ಶೂನ್ಯ ಬಾಲ್​ಗೆ 3 ರನ್​ ಬಂದಂತಾಯಿತು.

ಬಳಿಕ ಅಬ್ದುರ್​ ಮತ್ತೆ ಒಂದು ಫುಲ್ಟಾಸ್​ ನೋ ಬಾಲ್ ಎಸೆದರು. ಬಾಂಗ್ಲಾ ಬ್ಯಾಟರ್​ ಈ ಬಾಲ್​ ಅನ್ನು ಬೌಂಡರಿಗೆ ಕಳುಹಿಸುವಲ್ಲಿ ಯಶಸ್ವಿಯಾದರು. ಇದರಿಂದ ಒಟ್ಟು 5 ರನ್​ ಸೇರ್ಪಡೆಗೊಂಡವು. ಮೊದಲ ಎಸೆತದಲ್ಲಿ 1 ರನ್​ ಎರಡನೇ ಎಸೆತದಲ್ಲಿ 2ರನ್​ ಮತ್ತು ಮೂರನೇ ಎಸೆತದಲ್ಲಿ 5 ರನ್​ ಬಂದವು. ಇದರಿಂದಾಗಿ 0 ಎಸೆತಕ್ಕೆ 8 ರನ್ ಬಿಟ್ಟುಕೊಟ್ಟರು. ಬಳಿಕ ಸತತ 3 ನೋ ಬಾಲ್ ಹಾಕಿದ ಕಾರಣ ಅಬ್ದುರ್​ ಅವರನ್ನು ಮತ್ತೆ ಬೌಲಿಂಗ್​ ಮಾಡದಂತೆ ನಿರ್ಬಂಧಿಸಲಾಯಿತು.​

ಕ್ರೀಡೆ

IND vs PAK ಹೈವೋಲ್ಟೇಜ್ ಪಂದ್ಯಕ್ಕೆ ಮುನ್ನ ಉಸ್ಮಾನ್ ತಾರಿಕ್ ಎಚ್ಚರಿಕೆ: “ಭಾರತೀಯರು ನನ್ನ ಬೌಲಿಂಗ್‌ಗೆ ಹೆದರುತ್ತಿದ್ದಾರೆ!”

ಟಿ20 ವಿಶ್ವಕಪ್ ಟೂರ್ನಿಯ ಬಹು ನಿರೀಕ್ಷಿತ ಭಾರತ–ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯ ಫೆಬ್ರವರಿ 15ರಂದು ಶ್ರೀಲಂಕಾದ ಕೊಲಂಬೊದಲ್ಲಿ ನಡೆಯಲಿದೆ. ಶಿವರಾತ್ರಿ ಹಬ್ಬದಂದೇ ನಡೆಯಲಿರುವ ಈ ನಿರ್ಣಾಯಕ ಸಮರಕ್ಕಾಗಿ ಎರಡೂ ತಂಡಗಳು ಭರ್ಜರಿ ಸಿದ್ಧತೆಯಲ್ಲಿ ತೊಡಗಿವೆ.

ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಮ್ ಇಂಡಿಯಾ, ಫೆ.12ರಂದು ನಮೀಬಿಯಾ ವಿರುದ್ಧ ಕಣಕ್ಕಿಳಿದು ಗೆಲುವಿನ ಆತ್ಮವಿಶ್ವಾಸದೊಂದಿಗೆ ಪಾಕಿಸ್ತಾನ ಎದುರಿಸಲು ಸಜ್ಜಾಗಿದೆ.

ಈ ಮಧ್ಯೆ, ಪಾಕಿಸ್ತಾನದ ನಿಗೂಢ ಸ್ಪಿನ್ನರ್ ಉಸ್ಮಾನ್ ತಾರಿಕ್ ಭಾರತಕ್ಕೆ ಬಲವಾದ ಎಚ್ಚರಿಕೆ ನೀಡಿದ್ದಾರೆ. “ಭಾರತೀಯರು ನನ್ನ ಬೌಲಿಂಗ್‌ಗೆ ಹೆದರುತ್ತಿದ್ದಾರೆ. ಅದಕ್ಕಾಗಿ ನನ್ನ ಬೌಲಿಂಗ್ ಶೈಲಿಯ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ” ಎಂದು ಸಂಚಲನಕಾರಿ ಹೇಳಿಕೆ ನೀಡಿದ್ದಾರೆ.


ಮಾತಿನ ಸಮರ ಜೋರಾಗಿದೆ

ಟಿ20 ವಿಶ್ವಕಪ್ ಈಗ ರೋಚಕ ಹಂತ ತಲುಪಿದ್ದು, ಈಗಾಗಲೇ 15ಕ್ಕೂ ಹೆಚ್ಚು ಪಂದ್ಯಗಳು ಪೂರ್ಣಗೊಂಡಿವೆ. ಭಾರತ–ಪಾಕಿಸ್ತಾನ ಪಂದ್ಯ ನಡೆಯುತ್ತದೆಯೇ? ಎಂಬ ಅನುಮಾನಕ್ಕೆ ತೆರೆಬಿದ್ದಿದ್ದು, ಪಾಕಿಸ್ತಾನ ಪಂದ್ಯಕ್ಕೆ ಒಪ್ಪಿಗೆ ನೀಡಿದೆ.

ಪಂದ್ಯ ಖಚಿತವಾದ ಬೆನ್ನಲ್ಲೇ ಎರಡೂ ತಂಡಗಳ ನಡುವೆ ಮಾತಿನ ಸಮರ ಜೋರಾಗಿದೆ. ಪಾಕಿಸ್ತಾನಿ ಆಟಗಾರರು ಭಾರತವನ್ನು ಸೋಲಿಸುತ್ತೇವೆ ಎಂದು ಹೇಳುತ್ತಿದ್ದರೆ, ಭಾರತೀಯರು ಪಾಕಿಸ್ತಾನವನ್ನು ಮಣಿಸುತ್ತೇವೆ ಎಂದು ತಿರುಗೇಟು ನೀಡುತ್ತಿದ್ದಾರೆ.


ತಾರಿಕ್ ಸಮರ್ಥನೆ

ಭಾರತೀಯರು ನನ್ನ ಬೌಲಿಂಗ್ ಕುರಿತು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಐಸಿಸಿ ನಿಯಮಗಳ ಪ್ರಕಾರ ನನ್ನ ಬೌಲಿಂಗ್ ಶೈಲಿ ಮಾನ್ಯವಾಗಿದೆ ಎಂದು ಉಸ್ಮಾನ್ ತಾರಿಕ್ ಸಮರ್ಥಿಸಿಕೊಂಡಿದ್ದಾರೆ.

“ಭಾರತೀಯ ಆಟಗಾರರಿಗೆ ನನ್ನ ಬೌಲಿಂಗ್‌ನಿಂದ ಹೆಚ್ಚುವರಿ ಒತ್ತಡ ಇದೆ. ಅದಕ್ಕಾಗಿಯೇ ಆರೋಪ ಮಾಡುತ್ತಿದ್ದಾರೆ. ಫೆಬ್ರವರಿ 15ರಂದು ಭಾರತದ ಅಗ್ರ ಕ್ರಮಾಂಕವನ್ನು ಕೆಡವುತ್ತೇನೆ” ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.

“ನನ್ನ ಬಗ್ಗೆ ಏನು ಚರ್ಚೆ ನಡೆಯುತ್ತಿದೆ ಎಂಬುದನ್ನು ನಾನು ಪರಿಗಣಿಸುವುದಿಲ್ಲ. ನನ್ನ ಗಮನ ಪಂದ್ಯದಲ್ಲೇ ಇದೆ” ಎಂದು ತಾರಿಕ್ ಹೇಳಿದ್ದಾರೆ.

Continue Reading

ಕ್ರೀಡೆ

RCB ಮಾರಾಟ ಪ್ರಕ್ರಿಯೆ ಆರಂಭ: ಜೈಲಿನಿಂದಲೇ ಸುಕೇಶ್ ₹8,300 ಕೋಟಿ ಬಿಡ್?

ಬೆಂಗಳೂರು, ಫೆ.12: ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಮಾರಾಟ ಪ್ರಕ್ರಿಯೆಯ ಮೊದಲ ಹಂತ ಅಧಿಕೃತವಾಗಿ ಆರಂಭವಾಗಿದೆ. ಫ್ರಾಂಚೈಸಿಯ ಮಾಲೀಕತ್ವ ಹೊಂದಿರುವ ಡಿಯಾಜಿಯೋ (Diageo) ಕಂಪನಿಯು ಆಸಕ್ತ ಖರೀದಿದಾರರಿಗೆ ಮಾಹಿತಿ ಪತ್ರಗಳನ್ನು ವಿತರಿಸಿದೆ. ಈ ನಡುವೆ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಜೈಲಿನಲ್ಲಿರುವ ಸುಕೇಶ್ ಚಂದ್ರಶೇಖರ್ ಅವರು RCB ಖರೀದಿಗೆ ಬಿಡ್ ಸಲ್ಲಿಸಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.

ಕೇಂದ್ರ ಕಾನೂನು ಸಚಿವಾಲಯದ ಅಧಿಕಾರಿ ಎಂದು ಬಿಂಬಿಸಿಕೊಂಡು ವಂಚನೆ ಆರೋಪದಡಿ ಬಂಧನದಲ್ಲಿರುವ ಸುಕೇಶ್, ತಮ್ಮ ಎಲ್‌ಎಸ್ ಹೋಲ್ಡಿಂಗ್ಸ್ (LS Holdings) ಸಂಸ್ಥೆ ಮೂಲಕ ಡಿಯಾಜಿಯೋಗೆ ಪತ್ರ ಬರೆದು 1 ಬಿಲಿಯನ್ ಯುಎಸ್ ಡಾಲರ್ (ಸುಮಾರು ₹8,300 ಕೋಟಿ) ಮೊತ್ತದ ಸಂಪೂರ್ಣ ನಗದು ಬಿಡ್ ನೀಡಲು ಸಿದ್ಧ ಎಂದು ತಿಳಿಸಿದ್ದಾರೆ. 48 ಗಂಟೆಗಳೊಳಗೆ ಪಾವತಿ ಪೂರ್ಣಗೊಳಿಸಲು ಸಿದ್ಧತೆ ಇದೆ ಎಂದು ಕೂಡ ಹೇಳಿದ್ದಾರೆ.

ಸುಕೇಶ್, RCB ಅನ್ನು ತಮ್ಮ ತವರು ತಂಡ ಎಂದು ಬಣ್ಣಿಸಿ, ಫ್ರಾಂಚೈಸಿಯನ್ನು ಸ್ವಾಧೀನಪಡಿಸಿಕೊಂಡರೆ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್‌ಗೆ ಉಡುಗೊರೆಯಾಗಿ ನೀಡುವುದಾಗಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.

ಇದೇವರೆಗೆ 9 ಬಿಡ್‌ಗಳು ಸಲ್ಲಿಕೆಯಾಗಿವೆ ಎಂದು ವರದಿಗಳು ಸೂಚಿಸುತ್ತವೆ. ಸೀರಂ ಇನ್‌ಸ್ಟಿಟ್ಯೂಟ್‌ನ ಅದಾರ್ ಪೂನಾವಾಲಾ ಹಾಗೂ ಮ್ಯಾಂಚೆಸ್ಟರ್ ಯುನೈಟೆಡ್ ಸಹ ಮಾಲೀಕತ್ವ ಹೊಂದಿರುವ ಗ್ಲೇಝರ್ಸ್ ಕಂಪನಿಗಳು ಪೈಪೋಟಿಯಲ್ಲಿ ಇದ್ದಾರೆ. ಗ್ಲೇಝರ್ಸ್ ಸಂಸ್ಥೆ ಸುಮಾರು ₹16,300 ಕೋಟಿ ಮೊತ್ತದ ಬಿಡ್ ಸಲ್ಲಿಸಿದೆ ಎನ್ನಲಾಗಿದೆ.

RCB ಮಾರಾಟ ಪ್ರಕ್ರಿಯೆ ಈಗ ಕ್ರಿಕೆಟ್ ಮತ್ತು ಉದ್ಯಮ ವಲಯದಲ್ಲಿ ಭಾರೀ ಕುತೂಹಲ ಹುಟ್ಟಿಸಿದೆ.

Continue Reading

ಕ್ರೀಡೆ

ಕನ್ನಡದ ಹೆಮ್ಮೆ ಜಿಆರ್ ವಿಶ್ವನಾಥ್‌ಗೆ ಜನ್ಮದಿನ ಸಂಭ್ರಮ: ವಿಶಿಯ ಕಲಾತ್ಮಕ ಬ್ಯಾಟಿಂಗ್‌ಗೆ 77ನೇ ವಸಂತ

ಬೆಂಗಳೂರು: ಭಾರತೀಯ ಕ್ರಿಕೆಟ್ ಇತಿಹಾಸದ ಕಲಾತ್ಮಕ ಬ್ಯಾಟ್ಸ್‌ಮನ್‌ಗಳಲ್ಲಿ ಅಗ್ರಸ್ಥಾನ ಪಡೆದಿರುವ ಗುಂಡಪ್ಪ ರಂಗನಾಥ್ ವಿಶ್ವನಾಥ್ (GR Vishwanath) ಅವರಿಗೆ ಫೆಬ್ರವರಿ 12ರಂದು ಜನ್ಮದಿನ ಸಂಭ್ರಮ. ವಿಶಿ ಕ್ರೀಸಿಗೆ ಬಂದರೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹಬ್ಬದ ವಾತಾವರಣವೇ ಸೃಷ್ಟಿಯಾಗುತ್ತಿತ್ತು. ಶತಕ ಸಿಡಿಸಿದ ಯಾವುದೇ ಪಂದ್ಯದಲ್ಲಿ ಭಾರತ ಸೋತ ಉದಾಹರಣೆ ಇಲ್ಲ — ಒಂದೋ ಗೆಲುವು, ಇಲ್ಲವೇ ಡ್ರಾ!

1969ರಲ್ಲಿ ಕಾನ್ಪುರದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಪಾದಾರ್ಪಣೆ ಮಾಡಿದ ವಿಶಿ, ಮೊದಲ ಇನ್ನಿಂಗ್ಸ್‌ನಲ್ಲಿ ಶೂನ್ಯಕ್ಕೆ ಔಟ್ ಆದರೂ, ಎರಡನೇ ಇನ್ನಿಂಗ್ಸ್‌ನಲ್ಲಿ 25 ಬೌಂಡರಿಗಳೊಂದಿಗೆ 137 ರನ್ ಸಿಡಿಸಿ ಕ್ರಿಕೆಟ್ ಲೋಕದ ಗಮನ ಸೆಳೆದರು. ಅವರ ಸ್ಕ್ವೇರ್ ಕಟ್ ಶಾಟ್ ಕ್ರಿಕೆಟ್ ಅಭಿಮಾನಿಗಳ ಮನಸ್ಸು ಗೆದ್ದಿತ್ತು.

ಗವಾಸ್ಕರ್ ಪ್ರಶಂಸೆ, ಹೆಲ್ಮೆಟ್ ಇಲ್ಲದೆ ವೇಗದ ಬೌಲರ್ ಎದುರಿಸಿದ ಧೈರ್ಯ

“ನನ್ನಂತಹ ನೂರು ಗವಾಸ್ಕರ್ ಬರಬಹುದು, ಆದರೆ ವಿಶಿಯಂತವರು ಬರಲಾರರು” ಎಂಬ ಸುನಿಲ್ ಗವಾಸ್ಕರ್ ಮಾತುಗಳು ವಿಶಿಯ ಮಹತ್ವ ಸಾರುತ್ತವೆ. ಆಂಡಿ ರಾಬರ್ಟ್ಸ್, ಜೆಫ್ ಥಾಂಪ್ಸನ್‌ಂತಹ ವೇಗದ ಬೌಲರ್‌ಗಳನ್ನು ಹೆಲ್ಮೆಟ್ ಇಲ್ಲದೆ ಎದುರಿಸಿದ ಧೈರ್ಯವೂ ವಿಶಿಯ ವಿಶೇಷ.

ಕ್ರೀಡಾಸ್ಪೂರ್ತಿಗೆ ಮಾದರಿ

1980ರ ಸುವರ್ಣ ಮಹೋತ್ಸವ ಟೆಸ್ಟ್‌ನಲ್ಲಿ ಅಂಪೈರ್ ತಪ್ಪು ತೀರ್ಪು ನೀಡಿದಾಗ ಬಾಬ್ ಟೇಲರ್ ಅವರನ್ನು ಮರು ಕ್ರೀಸಿಗೆ ಕರೆಸಿದ ವಿಶಿಯ ಕ್ರೀಡಾಸ್ಫೂರ್ತಿ ಕ್ರಿಕೆಟ್ ಇತಿಹಾಸದಲ್ಲಿ ಅಚ್ಚಳಿಯದೆ ಉಳಿದಿದೆ.

ರಣಜಿ ಫೈನಲ್‌ಗೂ ಮದುವೆಯೂ ಒಂದೇ ಸಮಯ

1978ರಲ್ಲಿ ಗವಾಸ್ಕರ್ ಸಹೋದರಿ ಕವಿತಾ ಅವರನ್ನು ಮದುವೆಯಾದ ವಿಶಿ, ಮದುವೆಯ ಬಳಿಕ ನೇರವಾಗಿ ಮೈದಾನಕ್ಕಿಳಿದು ರಣಜಿ ಫೈನಲ್‌ನಲ್ಲಿ 247 ರನ್ ಸಿಡಿಸಿ ಕರ್ನಾಟಕಕ್ಕೆ ಕಿರೀಟ ತಂದುಕೊಟ್ಟರು.

ವಿಶಿಯ ಮೂರು ಸ್ಮರಣೀಯ ಇನ್ನಿಂಗ್ಸ್

  • 1975, ಮದ್ರಾಸ್: ವೆಸ್ಟ್ ಇಂಡೀಸ್ ವಿರುದ್ಧ ಅಜೇಯ 97 ರನ್
  • 1969, ಕಾನ್ಪುರ: ಪಾದಾರ್ಪಣೆ ಪಂದ್ಯದಲ್ಲೇ 137 ರನ್
  • 1981, ಎಂಸಿಜಿ: ಆಸ್ಟ್ರೇಲಿಯಾ ವಿರುದ್ಧ 114 ರನ್

77ನೇ ವಸಂತಕ್ಕೆ ಕಾಲಿಡುತ್ತಿರುವ ಕನ್ನಡದ ಹೆಮ್ಮೆ ಜಿಆರ್ ವಿಶ್ವನಾಥ್ ಅವರಿಗೆ ಹಾರ್ದಿಕ ಶುಭಾಶಯಗಳು.

Continue Reading

Trending