Connect with us

ರಾಜ್ಯ

ಮಂಗಳೂರು ಸಿದ್ಧವಾಗುತ್ತಿದೆ ವಂದೇ ಭಾರತ್ ರೈಲುನ್ನು ಸ್ವಾಗತಿಸಲು!

Published

on

ಭಾರತೀಯ ರೈಲ್ವೆಯ ಸೆಮಿ-ಹೈ ಸ್ಪೀಡ್ ರೈಲು ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಭಾರೀ ಬೇಡಿಕೆ ಇದೆ. ರ‍್ನಾಟಕದಲ್ಲಿ ಸದ್ಯ ಎರಡು ಮರ‍್ಗದಲ್ಲಿ ರೈಲುಗಳು ಓಡುತ್ತಿವೆ. ಇನ್ನೂ ಹಲವು ಮಾರ್ಗಗಳಲ್ಕಿ ರೈಲು ಓಡಿಸಬೇಕು ಎಂಬ ಬೇಡಿಕೆ ಇದೆ. ಎಲ್ಲಾ ರಾಜ್ಯಗಳಿಂದಲೂ ಈ ರೈಲಿಗೆ ಬೇಡಿಕೆ ಬರುತ್ತಿದೆ. ಈ ಕಾರಣಕ್ಕಾಗಿ ರೈಲ್ವೆ ಸಚಿವಾಲಯವು ಈ ರೈಲುಗಳ ಸಂಖ್ಯೆಯನ್ನು ನಿರಂತರವಾಗಿ ಹೆಚ್ಚಿಸುತ್ತಿದೆ.

ದೇಶದಲ್ಲಿ ವಂದೇ ಭಾರತ್ ರೈಲು ಕ್ರಾಂತಿಯನ್ನೇ ಮಾಡುತ್ತಿದೆ. ಮಂಗಳೂರಿನಿಂದ ವಂದೇ ಭಾರತ್ ರೈಲು ಶೀಘ್ರದಲ್ಲೇ ಕರ‍್ಯಾಚರಣೆಯನ್ನು ಪ್ರಾರಂಭಿಸಲಿದೆ. ಅದಕ್ಕೆ ಎಲ್ಲಾ ಸಿದ್ಧತೆ ನಡೆದಿದೆ. ಕೊಂಚ ದುಬಾರಿಯಾದರೂ ಈ ಸೆಮಿ ಹೈಸ್ಪೀಡ್ ರೈಲು ಎಕ್ಸ್‌ಪ್ರೆಸ್ ನ್ನು ಪ್ರಯಾಣಿಕರು ತುಂಬಾ ಇಷ್ಟಪಡುತ್ತಿದ್ದಾರೆ. ಈಗಾಗಲೇ ದೇಶಾದ್ಯಂತ ವಂದೇ ಭಾರತ್ ರೈಲುಗಳು ಸಂಚಾರ ನಡೆಸುತ್ತಿವೆ. ಚೆನ್ನೈನಲ್ಲಿ ವಂದೇ ಭಾರತ್‌ ಲೋಕೋ ಪೈಲಟ್‌ಗಳಿಗೆ ತರಬೇತಿ ಕೂಡ ಆರಂಭವಾಗಿದೆ. ಮಂಗಳೂರಿನಲ್ಲಿ ಪಿಟ್‌ಲೈನ್ ಕೂಡ ಸ್ಥಾಪಿಸಲಾಗಿದೆ. ಈಗಾಗಲೇ ಸೇವೆಯಲ್ಲಿರುವ ಮೊದಲ ಕೇರಳದ ವಂದೇ ಭಾರತ್ (20634) ತಿರುವನಂತಪುರದಿಂದ ಬೆಳಿಗ್ಗೆ 5:20 ಕ್ಕೆ ಹೊರಟು ಮಧ್ಯಾಹ್ನ 1:20 ಕ್ಕೆ ಕಾಸರಗೋಡು ತಲುಪುತ್ತದೆ. ವರದಿಗಳ ಪ್ರಕಾರ, ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ಮಂಗಳೂರಿನಿಂದ ಅದೇ ಸಮಯದಲ್ಲಿ ತನ್ನ ಪ್ರಯಾಣವನ್ನು ಪುನರಾರಂಭಿಸುತ್ತದೆ. ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ದೇಶದ ರೈಲ್ವೆ ವಲಯದಲ್ಲಿ ಕ್ರಾಂತಿಕಾರಿ ಹೆಜ್ಜೆಯಾಗಿದೆ. ಇವು, ಸಾಮಾನ್ಯ ಎಕ್ಸ್‌ಪ್ರೆಸ್ ಗಳಿಗಿಂತ ಗರಿಷ್ಠ ವೇಗದಲ್ಲಿ ಸಂಚರಿಸುವುದರಿಂದ ನಿಗದಿತ ನಿಲ್ದಾಣವನ್ನು ಒಂದಷ್ಟು ಗಂಟೆ ಬೇಗನೇ ತಲುಪುತ್ತವೆ. ಸ್ವಯಂ ಚಾಲಿತ ಬಾಗಿಲು, ಸಂಪೂರ್ಣ ಎಸಿ ವ್ಯವಸ್ಥೆ ಹೊಂದುವ ಮೂಲಕ ಪ್ರೀಮಿಯಂ ರೈಲು ಎಂಬ ಹೆಗ್ಗಳಿಕೆಗೆ ವಂದೇ ಭಾರತ್ ಪಾತ್ರವಾಗಿವೆ.

Continue Reading

ದೇಶ

ಗೃಹಜ್ಯೋತಿ ಯೋಜನೆಗೆ ಹೊಸ ರೂಲ್ಸ್: ಬಾಡಿಗೆ ಒಪ್ಪಂದ ಇಲ್ಲದಿದ್ದರೂ ಉಚಿತ ವಿದ್ಯುತ್ ಪಡೆಯಬಹುದು!

Published

on

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಜ್ಯೋತಿ ಯೋಜನೆ (Gruha Jyothi Scheme) ಅಡಿಯಲ್ಲಿ ಉಚಿತ ವಿದ್ಯುತ್ ಸೌಲಭ್ಯ ಪಡೆಯಲು ಬಾಡಿಗೆದಾರರಿಗೆ ಇಂಧನ ಇಲಾಖೆ ಮಹತ್ವದ ಸಡಿಲಿಕೆ ನೀಡಿದೆ. ಇನ್ನು ಮುಂದೆ ಬಾಡಿಗೆ ಒಪ್ಪಂದದ ಪತ್ರ (Rent Agreement) ಇಲ್ಲದಿದ್ದರೂ ಸಹ ಬಾಡಿಗೆದಾರರು ಯೋಜನೆಗೆ ಅರ್ಜಿ ಸಲ್ಲಿಸಿ ಉಚಿತ ವಿದ್ಯುತ್ ಸೌಲಭ್ಯ ಪಡೆಯಬಹುದಾಗಿದೆ.

ಇಲ್ಲಿಯವರೆಗೆ ಅಧಿಕೃತ ಬಾಡಿಗೆ ಕರಾರು ಪತ್ರ ಇಲ್ಲದ ಕಾರಣ ಅನೇಕ ಬಾಡಿಗೆದಾರರು ಯೋಜನೆಗೆ ನೋಂದಣಿ ಮಾಡಿಕೊಳ್ಳಲು ತೊಂದರೆ ಅನುಭವಿಸುತ್ತಿದ್ದರು. ಈ ಸಮಸ್ಯೆಯನ್ನು ಗಮನಿಸಿದ ಇಂಧನ ಇಲಾಖೆ ಹೊಸ ವ್ಯವಸ್ಥೆಯನ್ನು ಜಾರಿಗೆ ತಂದಿದೆ. ಅದರಂತೆ, ಬಾಡಿಗೆ ಒಪ್ಪಂದದ ಪ್ರತಿ ಇಲ್ಲದಿದ್ದರೆ ಸಂಬಂಧಿತ ಬೆಸ್ಕಾಂ (BESCOM) ಅಥವಾ ಆಯಾ ಎಸ್ಕಾಂ ಕಚೇರಿಯಿಂದ ನೀಡಲಾಗುವ ವಿಶೇಷ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು. ಈ ನಮೂನೆಗೆ ಬಾಡಿಗೆದಾರ ಮತ್ತು ಮನೆಯ ಮಾಲೀಕರು ಇಬ್ಬರೂ ಸಹಿ ಹಾಕಿ ಸಲ್ಲಿಸಿದರೆ ಗೃಹಜ್ಯೋತಿ ಯೋಜನೆಗೆ ನೋಂದಣಿ ಪೂರ್ಣಗೊಳ್ಳಲಿದೆ.

ಇದರ ಜೊತೆಗೆ ಜುಲೈ ತಿಂಗಳ ವಿದ್ಯುತ್ ಬಿಲ್ಲಿಗೂ ಮಹತ್ವದ ಬದಲಾವಣೆ ಮಾಡಲಾಗಿದೆ. ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮಾಹಿತಿಯನ್ನು ಪರಿಷ್ಕರಿಸುವ ಕಾರ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ತಿಂಗಳು ಮನೆ ಮನೆಗೆ ತೆರಳಿ ಮೀಟರ್ ರೀಡಿಂಗ್ ಮಾಡುವ ಪ್ರಕ್ರಿಯೆ ಇರುವುದಿಲ್ಲ ಎಂದು ವಿದ್ಯುತ್ ಸರಬರಾಜು ಕಂಪನಿಗಳು ಸ್ಪಷ್ಟಪಡಿಸಿವೆ.

ಹೀಗಾಗಿ ಜುಲೈ ತಿಂಗಳ ವಿದ್ಯುತ್ ಬಿಲ್ ಅನ್ನು ಕಳೆದ ಮೂರು ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಲೆಕ್ಕ ಹಾಕಲಾಗುತ್ತದೆ. ಈ ಸರಾಸರಿ ಬಳಕೆಯನ್ನು ಪರಿಗಣಿಸಿ ಬಿಲ್ ಸಿದ್ಧಪಡಿಸಿ ಗ್ರಾಹಕರಿಗೆ ನೀಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯ ಸರ್ಕಾರದ ಈ ಹೊಸ ಕ್ರಮದಿಂದ ಬಾಡಿಗೆದಾರರಿಗೆ ಗೃಹಜ್ಯೋತಿ ಯೋಜನೆಯ ಲಾಭ ಪಡೆಯುವುದು ಮತ್ತಷ್ಟು ಸುಲಭವಾಗಿದ್ದು, ಬಾಡಿಗೆ ಕರಾರು ಪತ್ರ ಇಲ್ಲದ ಕಾರಣ ಇದುವರೆಗೆ ಅರ್ಜಿ ಸಲ್ಲಿಸಲು ಸಾಧ್ಯವಾಗದ ಸಾವಿರಾರು ಕುಟುಂಬಗಳಿಗೆ ಇದು ದೊಡ್ಡ ಅನುಕೂಲವಾಗಲಿದೆ.

Continue Reading

ದೇಶ

ಭಾರೀ ಮಳೆಗೆ ಅಂಬೋಲಿ ಘಾಟ್‌ನಲ್ಲಿ ಗುಡ್ಡ ಕುಸಿತ: ಬೆಳಗಾವಿ-ವೆಂಗುರ್ಲಾ ಹೆದ್ದಾರಿ ಸಂಚಾರ ಸ್ಥಗಿತ

Published

on

ಬೆಳಗಾವಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಅಂಬೋಲಿ ಘಾಟ್ ಸಮೀಪ ಮಂಗಳವಾರ ರಾತ್ರಿ ಭೂಕುಸಿತ ಸಂಭವಿಸಿದ್ದು, ಬೆಳಗಾವಿ–ವೆಂಗುರ್ಲಾ ರಾಜ್ಯ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತು. ರಸ್ತೆಯ ಮೇಲೆಯೇ ಬೃಹತ್ ಬಂಡೆಗಲ್ಲುಗಳು ಉರುಳಿ ಬಿದ್ದ ಪರಿಣಾಮ ಭಾರೀ ಅನಾಹುತ ಸಂಭವಿಸುವ ಸಾಧ್ಯತೆ ಎದುರಾಗಿದ್ದರೂ, ಅದೃಷ್ಟವಶಾತ್ ಮಹಾರಾಷ್ಟ್ರ ಸಾರಿಗೆ ಬಸ್ ಹಾಗೂ ಕಾರಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಪ್ರತ್ಯಕ್ಷದರ್ಶಿಗಳ ಮಾಹಿತಿ ಪ್ರಕಾರ, ಮಹಾರಾಷ್ಟ್ರ ಸಾರಿಗೆ ಬಸ್ ಹಾಗೂ ಕಾರು ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗುಡ್ಡ ಕುಸಿದು ಬಂಡೆಗಲ್ಲುಗಳು ರಸ್ತೆಗೆ ಉರುಳಿ ಬಿದ್ದವು. ಚಾಲಕರ ಸಮಯಪ್ರಜ್ಞೆಯಿಂದ ವಾಹನಗಳು ಕ್ಷಣಾರ್ಧದಲ್ಲಿ ಅಪಾಯದಿಂದ ಪಾರಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳೀಯ ಪೊಲೀಸರು ಹಾಗೂ ಆಡಳಿತದ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ಪರಿಶೀಲಿಸಿದರು. ಬಳಿಕ ಜೆಸಿಬಿ ಯಂತ್ರಗಳ ಸಹಾಯದಿಂದ ರಸ್ತೆಯ ಮೇಲಿದ್ದ ಬಂಡೆಗಲ್ಲುಗಳನ್ನು ತೆರವುಗೊಳಿಸಿ ವಾಹನ ಸಂಚಾರವನ್ನು ಹಂತಹಂತವಾಗಿ ಪುನರಾರಂಭಿಸಲಾಯಿತು.

ಸದ್ಯ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆಯ ಅಬ್ಬರ ಮುಂದುವರಿದಿರುವ ಕಾರಣ ಮತ್ತಷ್ಟು ಭೂಕುಸಿತ ಸಂಭವಿಸುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಅಂಬೋಲಿ ಘಾಟ್‌ನಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ಅಗತ್ಯವಿಲ್ಲದಿದ್ದರೆ ಘಾಟ್ ರಸ್ತೆಯಲ್ಲಿ ಸಂಚರಿಸದಂತೆ ಹಾಗೂ ಅತ್ಯಂತ ಎಚ್ಚರಿಕೆಯಿಂದ ವಾಹನ ಚಲಾಯಿಸುವಂತೆ ಮಹಾರಾಷ್ಟ್ರ ಸರ್ಕಾರ ಸಾರ್ವಜನಿಕರಿಗೆ ಸೂಚಿಸಿದೆ.

ಪ್ರತಿ ವರ್ಷ ಸಾವಿರಾರು ಪ್ರವಾಸಿಗರು ಅಂಬೋಲಿ ಫಾಲ್ಸ್ ವೀಕ್ಷಣೆಗೆ ಭೇಟಿ ನೀಡುತ್ತಾರೆ. ಆದರೆ ಇತ್ತೀಚಿನ ಭೂಕುಸಿತದಿಂದ ಪ್ರವಾಸಿಗರಲ್ಲಿ ಆತಂಕ ಹೆಚ್ಚಾಗಿದ್ದು, ಹವಾಮಾನ ಪರಿಸ್ಥಿತಿಯನ್ನು ಗಮನಿಸಿ ಮಾತ್ರ ಪ್ರವಾಸ ಕೈಗೊಳ್ಳುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

Continue Reading

ದೇಶ

ತುಂಗಾ ಜಲಾಶಯ ಭರ್ತಿ: ಉಕ್ಕಡಗಾತ್ರಿ ಸ್ನಾನಘಟ್ಟ ಜಲಾವೃತ, ಭಕ್ತರಿಗೆ ಎಚ್ಚರಿಕೆ

Published

on

ಮಲೇಬೆನ್ನೂರು: ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದ ತುಂಗಾ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಸುರಕ್ಷತಾ ಕ್ರಮವಾಗಿ 30 ಸಾವಿರ ಕ್ಯೂಸೆಕ್ ನೀರನ್ನು ತುಂಗಭದ್ರಾ ನದಿಗೆ ಬಿಡುಗಡೆ ಮಾಡಲಾಗಿದೆ. ಇದರ ಪರಿಣಾಮ ದಾವಣಗೆರೆ ಜಿಲ್ಲೆಯ ಸಮೀಪದ ಉಕ್ಕಡಗಾತ್ರಿ ಸ್ನಾನಘಟ್ಟ ಜಲಾವೃತಗೊಂಡಿದ್ದು, ನದಿ ತಟದ ಹಲವೆಡೆ ಪ್ರವಾಹದ ವಾತಾವರಣ ನಿರ್ಮಾಣವಾಗಿದೆ.

ಜಲಾಶಯಕ್ಕೆ ಪ್ರಸ್ತುತ ಸುಮಾರು 32 ಸಾವಿರ ಕ್ಯೂಸೆಕ್ ನೀರಿನ ಒಳಹರಿವು ದಾಖಲಾಗಿದ್ದು, ಹೊರಹರಿವಿನ ಪ್ರಮಾಣವೂ ಹೆಚ್ಚಿಸಲಾಗಿದೆ. ಪರಿಣಾಮವಾಗಿ ತುಂಗಭದ್ರಾ ನದಿ ತುಂಬಿ ಹರಿಯುತ್ತಿದ್ದು, ನದಿ ತಟದಲ್ಲಿರುವ ಹಲವು ಅಂಗಡಿ-ಮುಂಗಟ್ಟುಗಳು ಹಾಗೂ ತಗ್ಗು ಪ್ರದೇಶಗಳು ನೀರಿನಿಂದ ಆವೃತಗೊಂಡಿವೆ.

ಉಕ್ಕಡಗಾತ್ರಿಯ ಶ್ರೀ ಕರಿಬಸವೇಶ್ವರ ಅಜ್ಜಯ್ಯನ ಗದ್ದಿಗೆಗೆ ಆಗಮಿಸುವ ಭಕ್ತರು ಸಂಪ್ರದಾಯದಂತೆ ಸ್ನಾನಘಟ್ಟದಲ್ಲಿ ಪುಣ್ಯಸ್ನಾನ ಮಾಡಿ ವಿಶೇಷ ಪೂಜೆ ಸಲ್ಲಿಸುತ್ತಾರೆ. ಆದರೆ ಸ್ನಾನಘಟ್ಟ ಸಂಪೂರ್ಣ ಜಲಾವೃತಗೊಂಡಿರುವುದರಿಂದ ಈ ಧಾರ್ಮಿಕ ಚಟುವಟಿಕೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಭಕ್ತರು ಹಾಗೂ ಸಾರ್ವಜನಿಕರು ನದಿಗೆ ಇಳಿಯದಂತೆ ಗ್ರಾಮಾಡಳಿತ ಮತ್ತು ಶ್ರೀ ಕರಿಬಸವೇಶ್ವರ ಅಜ್ಜಯ್ಯನ ಗದ್ದಿಗೆ ಟ್ರಸ್ಟ್ ಜಂಟಿಯಾಗಿ ಎಚ್ಚರಿಕೆ ನೀಡಿವೆ. ಜನರು ಹಾಗೂ ಜಾನುವಾರುಗಳು ನದಿ ತೀರಕ್ಕೆ ತೆರಳದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದ್ದು, ಪ್ರವಾಹದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಹವಾಮಾನ ಇಲಾಖೆ ಇನ್ನೂ ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆ, ತುಂಗಾ ಜಲಾಶಯದಿಂದ ಮತ್ತಷ್ಟು ನೀರು ಬಿಡುಗಡೆ ಮಾಡುವ ಸಾಧ್ಯತೆಯಿದೆ. ಹೀಗಾದರೆ ತುಂಗಭದ್ರಾ ನದಿ ತಟದ ಗ್ರಾಮಗಳು, ಕೃಷಿ ಜಮೀನುಗಳು, ತೋಟಗಳು ಹಾಗೂ ಬೆಳೆಗಳಿಗೆ ಹಾನಿಯಾಗುವ ಆತಂಕ ರೈತರಲ್ಲಿ ಹೆಚ್ಚಾಗಿದೆ. ಜಿಲ್ಲಾಡಳಿತ ಪರಿಸ್ಥಿತಿಯ ಮೇಲೆ ನಿಗಾ ವಹಿಸಿದ್ದು, ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡದೆ ಅಧಿಕೃತ ಮಾಹಿತಿಯನ್ನು ಮಾತ್ರ ಪಾಲಿಸುವಂತೆ ಮನವಿ ಮಾಡಿದೆ.

Continue Reading

Trending