Connect with us

ದೇಶ

ಆಂಬ್ಯುಲೆನ್ಸ್‌ನಲ್ಲಿ ಆಕ್ಸಿಜನ್‌ ಸಿಲಿಂಡರ್‌ ಸ್ಫೋಟ: 150 ಅಡಿ ಎತ್ತರಕ್ಕೆ ಹಾರಿದ ವಾಹನ, ಕೂದಲೆಳೆ ಅಂತರದಲ್ಲಿ ಗರ್ಭಿಣಿ ಪಾರು

ಜಲಗಾಂವ್ (ಮಹಾರಾಷ್ಟ್ರ): ಗರ್ಭಿಣಿಯನ್ನು ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸ್‌ನ ಇಂಜಿನ್‌ಗೆ ಬೆಂಕಿ ಹೊತ್ತಿಕೊಂಡು ಆಕ್ಸಿಜನ್ ಸಿಲಿಂಡರ್ ಸ್ಫೋಟಗೊಂಡ ಘಟನೆ ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯಲ್ಲಿ ನಡೆದಿದೆ. ಗುಜರಾತ್ ಪೆಟ್ರೋಲ್ ಪಂಪ್ ಬಳಿಯ ಜಲಗಾಂವ್ ನಗರದ ರಾಷ್ಟ್ರೀಯ ಹೆದ್ದಾರಿ ಫ್ಲೈಓವರ್‌ ಮೇಲೆ ಬುಧವಾರ ರಾತ್ರಿ 9.30ರ ಸುಮಾರಿಗೆ ಈ ಘಟನೆ ನಡೆದಿದೆ. MH14 CL0716 ಎಂಬ ಆಂಬ್ಯುಲೆನ್ಸ್‌ ಇದಾಗಿದ್ದು, ಮನೀಶಾ ಎಂಬ ಗರ್ಭಿಣಿಯನ್ನು ಕರೆದೊಯ್ಯುತ್ತಿತ್ತು. ಈ ವೇಳೆ ಈ ಘಟನೆ ನಡೆದಿದೆ.

ಬೆಂಕಿ ಹೊತ್ತಿಕೊಂಡಿರುವುದನ್ನು ಅರಿತ ಚಾಲಕ ಆಂಬ್ಯುಲೆನ್ಸ್​ನಿಂದ ಕೆಳಗೆ ಜಿಗಿದಿದ್ದಾನೆ. ಸ್ಫೋಟದಲ್ಲಿ ಆಂಬ್ಯುಲೆನ್ಸ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಸ್ಫೋಟದ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿಯೂ ವೈರಲ್‌ ಆಗಿದೆ. ಆಂಬ್ಯುಲೆನ್ಸ್​ಗೆ ಬೆಂಕಿಹೊತ್ತಿಕೊಂಡ ಕೆಲವೇ ಹೊತ್ತಿನಲ್ಲಿ ಬೆಂಕಿ ಸುತ್ತಲೂ ಆವರಿಸುತ್ತಾ ಬಂದಿದ್ದು, ಬಳಿಕ ಆಂಬುಲೆನ್ಸ್​ ಒಳಗಿದ್ದ ಆಕ್ಸಿಜನ್‌ ಸಿಲಿಂಡರ್‌ ಸ್ಫೋಟಗೊಂಡ ಪರಿಣಾಮ ಸಮೀಪದಲ್ಲಿದ್ದ ಕೆಲವು ಮನೆಗಳ ಕಿಟಕಿ ಗಾಜುಗಳು ಒಡೆದು ಹೋಗಿರುವುದು ಸೆರೆಯಾಗಿದೆ. ಸ್ಫೋಟದ ತೀವ್ರತೆಗೆ ಬೆಂಕಿ ಭಾರೀ ಎತ್ತರಕ್ಕೆ ಚಿಮ್ಮಿದೆ. ವಾಹನ ತುಂಡಾಗಿ 150 ಅಡಿ ಎತ್ತರಕ್ಕೆ ಹಾರಿದೆ. ಸ್ಫೋಟದ ನಡುಕ ಸುಮಾರು 500 ಮೀಟರ್ ದೂರದವರೆಗೆ ಆವರಿಸಿತ್ತು. ಭಯದಲ್ಲಿ ಜನ ದಿಕ್ಕಾಪಾಲಾಗಿ ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಘಟನೆಯಲ್ಲಿ ಯಾರಿಗೂ ಹಾನಿಯಾದ ಬಗ್ಗೆ ವರದಿಯಾಗಿಲ್ಲ.

ಆಂಬ್ಯುಲೆನ್ಸ್‌ ಧರಂಗಾವ್‌ನಿಂದ ಜಲಗಾಂವ್‌ಗೆ ಬರುತ್ತಿತ್ತು. ಈ ವೇಳೆ ಆಂಬ್ಯುಲೆನ್ಸ್ ಇಂಜಿನ್‌ನಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ಚಾಲಕ, ಆಂಬ್ಯುಲೆನ್ಸ್‌ನಲ್ಲಿದ್ದ ಗರ್ಭಿಣಿ ಮತ್ತು ಅವರ ಕುಟುಂಬಸ್ಥರನ್ನು ಸುರಕ್ಷಿತವಾಗಿ ಕೆಳಗಿಳಿಸಿ ಬೇರೊಂದು ಆಂಬ್ಯುಲೆನ್ಸ್​ಗೆ ಹತ್ತಿಸಿದ್ದ. ಬಳಿಕ ಸ್ಪಲ್ಪ ಮುಂದೆ ಹೋಗುತ್ತಿದ್ದಂತೆ ಆಂಬುಲೆನ್ಸ್‌ನ ಇಂಜಿನ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ಕೆಲವೇ ನಿಮಿಷಗಳಲ್ಲಿ ವಾಹನದಲ್ಲಿದ್ದ ಆಮ್ಲಜನಕ ಸಿಲಿಂಡರ್ ಸ್ಫೋಟಗೊಂಡಿದೆ. ಚಾಲಕನ ಸಮಯ ಪ್ರಜ್ಞೆಯಿಂದ ಎಲ್ಲರ ಪ್ರಾಣ ಉಳಿದಿದೆ.

ಘಟನೆ ಕುರಿತು ಮಾಹಿತಿ ಪಡೆದ ನಗರಸಭೆ ಹಾಗೂ ಅಗ್ನಿಶಾಮಕ ದಳದವರು ಕೂಡಲೇ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಒಡೆದ ಸಿಲಿಂಡರ್‌ಗಳು ರಸ್ತೆಯ ಇನ್ನೊಂದು ಬದಿಯಲ್ಲಿ ಬಿದ್ದಿದ್ದರೆ, ಖಾಲಿ ಸಿಲಿಂಡರ್‌ ವಾಹನದ ಬಳಿ ಬಿದ್ದಿದೆ. ಸೇತುವೆಯ ಕೆಳಗೆ ವಾಹನದ ಇತರೆ ತುಕಡಿಗಳು ಬಿದ್ದಿವೆ. ಸ್ಫೋಟ ತೀವ್ರತೆ ಎಷ್ಟಿತ್ತೆಂದರೆ ಸುತ್ತಲಿನ ಮನೆಗಳಿಗೂ ಇದರ ಬಿಸಿ ತಟ್ಟಿದ್ದು, ಮನೆಯ ಗೋಡೆಗಳು ಬಿರುಕುಬಿಟ್ಟಿವೆ. ಒಂದು ರೀತಿ ಭೂಕಂಪದಂತಹ ಅನುಭವ ತರಿಸಿತು. ಶಬ್ಧ ಕೇಳಿ ಮಲಗಿದ್ದವರೂ ಎದ್ದು ಕುಳಿತರು. ಘಟನೆಯಿಂದಾಗಿ ಹೆದ್ದಾರಿ ಬಂದ್ ಆಗಿತ್ತು. ಅರೆ ಕ್ಷಣ ಏನಾಯಿತೆಂದು ಯಾರಿಗೂ ಅರ್ಥವಾಗಿರಲಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ಘಟನೆಯ ವಿವರ ನೀಡಿದ್ದಾರೆ.

ದೇಶ

ಪಿಎಂ ಮೋದಿ ಆಗಸ್ಟ್ 10ರಂದು ಬೆಂಗಳೂರಿಗೆ: ನಮ್ಮ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ

ಬೆಂಗಳೂರು: ನಮ್ಮ ಮೆಟ್ರೋ (Namma Metro) ಹಳದಿ ಮಾರ್ಗದ (Yellow Line) ಉದ್ಘಾಟನೆಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು (PM Modi) ಆಗಸ್ಟ್ 10ರಂದು ಬೆಂಗಳೂರಿಗೆ ಬರುವುದಾಗಿ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ತಿಳಿಸಿದ್ದಾರೆ.

ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪ್ರಧಾನಿಯವರು ಆಗಸ್ಟ್ 10ರಂದು ನಮ್ಮ ಮೆಟ್ರೋ ಹಳದಿ ಮಾರ್ಗವನ್ನು ಉದ್ಘಾಟನೆ ಮಾಡುವ ಉದ್ದೇಶದಿಂದ ಬರುತ್ತಿದ್ದಾರೆ. ಅವರ ಭೇಟಿಗೆ ಸಿದ್ಧತೆಗಳು ನಡೆಯುತ್ತಿವೆ. ಟೈಮ್ ಟು ಟೈಮ್ ಕಾರ್ಯಕ್ರಮಗಳ ಬಗ್ಗೆ ಇನ್ನೂ ವಿವರ ಬಾಕಿಯಿದೆ,” ಎಂದು ಹೇಳಿದರು.

ವೈಭವದಿಂದ ಕಾರ್ಯಕ್ರಮ?
ಆದರೆ, ಮೂಲ ಯೋಜನೆಗೆ ಬದಲಾವಣೆ ಆಗಿದೆ. ಈಗ ಪ್ರಧಾನಿಯವರು ಕೇವಲ ಹಳದಿ ಮಾರ್ಗದ ಮೆಟ್ರೋ ಮತ್ತು ವಂದೇ ಭಾರತ್ ರೈಲು ಉದ್ಘಾಟನೆಗೆ ಮಾತ್ರ ಭಾಗಿಯಾಗಲಿದ್ದಾರೆ. ಬಿಜೆಪಿ ಕಾರ್ಯಕರ್ತರ ಸಮಾವೇಶ ಮತ್ತು ರೋಡ್ ಶೋ ಕಾರ್ಯಾಚರಣೆಗಳು ರದ್ದುಪಡಿಸಲಾಗಿದೆ.

ಇದರ ಪರಿಣಾಮವಾಗಿ, ಒಂದು ವರ್ಷದಿಂದ ಮೋದಿಯವರ ಆಗಮನದ ನಿರೀಕ್ಷೆಯಲ್ಲಿದ್ದ ಬಿಜೆಪಿ ಕಾರ್ಯಕರ್ತರು ನಿರಾಸೆಗೊಳಗಾಗಿದ್ದಾರೆ ಎಂದು ವರದಿಯಾಗಿದೆ.

Continue Reading

ದೇಶ

ಭಾರತ vs ಅಮೆರಿಕ: ರಷ್ಯಾದ ತೈಲದ ಬಗ್ಗೆ ಉದ್ವಿಗ್ನತೆ, ಸೇನೆಯಿಂದ ತಿರುಗೇಟು

ಬೆಂಗಳೂರು: ರಷ್ಯಾದಿಂದ ಕಚ್ಚಾ ತೈಲ ಖರೀದಿಯ ಕುರಿತು ಭಾರತ-ಅಮೆರಿಕ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವಂತಾಗಿದೆ. ಭಾರತ ರಷ್ಯಾದಿಂದ ತೈಲ ಆಮದು ಮಾಡುತ್ತಿರುವುದಕ್ಕೆ ಅಮೆರಿಕ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, ಭಾರತೀಯ ಸೇನೆ ಅಮೆರಿಕದ ದ್ವೇಧಾಚರಣೆ ವಿರುದ್ಧ ತಿರುಗೇಟು ನೀಡಿದೆ.

ಸೋಷಿಯಲ್ ಮೀಡಿಯಾದಲ್ಲಿ “ಈ ದಿನ ಆ ವರ್ಷ – ಯುದ್ಧದ ನಿರ್ಮಾಣ – 05 ಆಗಸ್ಟ್ 1971” ಎಂಬ ಶೀರ್ಷಿಕೆಯಡಿ ಸೇನೆಯು 1971ರ ಯುದ್ಧದ ಕಾಲದ ಪತ್ರಿಕಾ ಕಟಿಂಗ್‌ ಹಂಚಿಕೊಂಡಿದೆ. 1954ರಿಂದ 1971ರವರೆಗೆ ಅಮೆರಿಕ ಪಾಕಿಸ್ತಾನಕ್ಕೆ ಶಸ್ತ್ರಾಸ್ತ್ರ ಪೂರೈಸಿದ ಬಗ್ಗೆ ಪೇಪರ್ ಕಟಿಂಗ್‌ ಉಲ್ಲೇಖಿಸುತ್ತಾ, “ಅಮೆರಿಕ ಪಾಕ್ ಪರ ಕೆಲಸ ಮಾಡಿತ್ತಲ್ಲವೆ?” ಎಂದು ಪ್ರಶ್ನಿಸಿದೆ.

ಇದು ಉಕ್ರೇನ್ ವಿರುದ್ಧದ ಯುದ್ಧಕ್ಕೆ ಭಾರತ ಹಣ ಒದಗಿಸುತ್ತಿದೆ ಎಂಬ ಅಮೆರಿಕದ ಆರೋಪಕ್ಕೆ ಪ್ರತಿಕ್ರಿಯೆಯಾಗಿದೆ. ಭಾರತವು ಅಮೆರಿಕ ಮತ್ತು ಯುರೋಪಿಯನ್ ಒಕ್ಕೂಟದ ಟೀಕೆಗಳನ್ನು ‘ಅಸಮರ್ಥನೀಯ ಹಾಗೂ ಅಸಮಂಜಸ’ವೆಂದು ತಿರಸ್ಕರಿಸಿದೆ. ಭಾರತ ತನ್ನ ತೈಲ ನೀತಿಯನ್ನು ಆರ್ಥಿಕ ಶಕ್ತಿಯ ದೃಷ್ಟಿಯಿಂದ ಮುಂದುವರಿಸುತ್ತಿದೆ.

Continue Reading

ದೇಶ

ಸೇನೆ ಕುರಿತ ಹೇಳಿಕೆ: ಸುಪ್ರೀಂ ಕೋರ್ಟ್ ಟೀಕೆಗೆ ಪ್ರಿಯಾಂಕಾ ಗಾಂಧಿಯಿಂದ ಕಠಿಣ ಪ್ರತಿಕ್ರಿಯೆ

ನವದೆಹಲಿ: ಭಾರತೀಯ ಸೇನೆ ಬಗ್ಗೆ ನೀಡಿದ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಇದೀಗ ಅವರ ಸಹೋದರಿ ಹಾಗೂ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ.

ರಾಹುಲ್ ಗಾಂಧಿಯ ವಿರುದ್ಧ ಸುಪ್ರೀಂ ಕೋರ್ಟ್ ನೀಡಿದ ಟೀಕೆಗೆ ಪ್ರತಿಕ್ರಿಯಿಸಿ ಪ್ರಿಯಾಂಕಾ ಗಾಂಧಿ,

“ಯಾರು ನಿಜವಾದ ಭಾರತೀಯರು ಎಂಬುದನ್ನು ನಿರ್ಧರಿಸಲು ನ್ಯಾಯಾಧೀಶರು ಯೋಗ್ಯರಲ್ಲ. ರಾಹುಲ್ ಗಾಂಧಿಗೆ ಭಾರತೀಯ ಸೇನೆಯ ಬಗ್ಗೆ ಅಪಾರ ಗೌರವವಿದೆ. ಅವರು ಎಂದಿಗೂ ಸೇನೆಯ ವಿರುದ್ಧ ಕೆಟ್ಟ ಮಾತುಗಳನ್ನು ಮಾತನಾಡಲ್ಲ,” ಎಂದು ತಿಳಿಸಿದ್ದಾರೆ.

ಗಲ್ವಾನ್ ಕಣಿವೆ ಸಂಘರ್ಷ ಕುರಿತು ಮಾತನಾಡಿದ ವೇಳೆ ರಾಹುಲ್ ಗಾಂಧಿ ನೀಡಿದ ಹೇಳಿಕೆಯನ್ನು ಸುಪ್ರೀಂ ಕೋರ್ಟ್ ‘ಅನುಚಿತ’ ಎಂದು ಖಂಡಿಸಿದ್ದು, “ನಿಜವಾದ ಭಾರತೀಯರು ಈ ರೀತಿ ಮಾತನಾಡುವುದಿಲ್ಲ” ಎಂದು ಹೇಳಿದ್ದಾರೆ. ಇದನ್ನು ಪ್ರಿಯಾಂಕಾ ಗಾಂಧಿ ಪ್ರಶ್ನಿಸಿದ್ದು, “ವಿರೋಧ ಪಕ್ಷದ ನಾಯಕರಾಗಿ ಸರ್ಕಾರವನ್ನು ಪ್ರಶ್ನಿಸುವುದು ರಾಹುಲ್ ಅವರ ಕರ್ತವ್ಯ. ನ್ಯಾಯಮೂರ್ತಿಗಳು ಇಂತಹ ಹೇಳಿಕೆ ನೀಡುವುದು ಸರಿಯಲ್ಲ,” ಎಂದಿದ್ದಾರೆ.

ಅದೇ ರೀತಿ, ಪ್ರಿಯಾಂಕಾ ಗಾಂಧಿ ಸರ್ಕಾರದ ನಡೆಗೆ ಶಂಕೆ ವ್ಯಕ್ತಪಡಿಸಿ,

“ರಾಹುಲ್ ಗಾಂಧಿಯ ಪ್ರಶ್ನೆಗಳಿಗೆ ಸರ್ಕಾರದ ಬಳಿ ಉತ್ತರಗಳಿಲ್ಲ. ಅವರು ಚರ್ಚೆಗೆ ತಯಾರಿಲ್ಲ. ಸಂಸತ್ತನ್ನು ಸರಿಯಾಗಿ ನಡೆಸಲಾಗುತ್ತಿಲ್ಲ. ಇದನ್ನೆಲ್ಲಾ ಮರೆಮಾಚಲು ಈ ರೀತಿಯ ತಂತ್ರಗಳನ್ನು ಬಳಸುತ್ತಿದ್ದಾರೆ,” ಎಂದು ವಾಗ್ದಾಳಿ ನಡೆಸಿದ್ದಾರೆ.

Continue Reading

Trending