ಬೆಂಗಳೂರು
ಬಿಜೆಪಿ ಅವಧಿಯಲ್ಲಿ 2,900 ಎಕ್ರೆಗೆ ವಕ್ಫ್ ನೋಟಿಸ್; ಬಿಎಸ್‌ವೈಗೆ ಮುಖಭಂಗ ಮಾಡಲು ಯತ್ನಾಳ್ ಹೋರಾಟ: ಪರಮೇಶ್ವರ್
ಬೆಂಗಳೂರು: ಬಿಜೆಪಿ ಅಧಿಕಾರ ಅವಧಿಯಲ್ಲಿ 2,900 ಎಕರೆಗೆ ವಕ್ಫ್ ನೋಟಿಸ್ (Waqf Notice) ಜಾರಿಯಾಗಿದೆ. ಇದು ಯಡಿಯೂರಪ್ಪ, ಬೊಮ್ಮಾಯಿ ಕಾಲದಲ್ಲಿ ಆಗಿತ್ತು. ಅದಕ್ಕಾಗಿ ಶಾಸಕ ಯತ್ನಾಳ್ ಅವರು ಬಿಜೆಪಿ ಹಾಗೂ ಯಡಿಯೂರಪ್ಪ, ಬೊಮ್ಮಾಯಿಗೆ ಮುಜುಗರ ಉಂಟುಮಾಡಲು ಹೋರಾಟಕ್ಕೆ ಹೊರಟಿದ್ದಾರೆ ಎಂದು ಗೃಹಸಚಿವ ಜಿ. ಪರಮೇಶ್ವರ್ (G Parameshwar) ಕುಟುಕಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಅವಧಿಯಲ್ಲಿ ಹೆಚ್ಚು ವಕ್ಫ್ ನೊಟೀಸ್ ಕೊಟ್ಟಿರುವ ವಿಚಾರ ಹಾಗೂ ವಕ್ಫ್ ವಿರೋಧಿಸಿ ಬಿಜೆಪಿ ರೆಬಲ್ಸ್ ಟೀಂ ಹೋರಾಟಕ್ಕೆ ಪ್ರತಿಕ್ರಿಯಿಸಿದರು. ಜಾಸ್ತಿ ದಿನ ಸತ್ಯ ಮುಚ್ಚಿಡಲು ಆಗಲ್ಲ. ಬಿಜೆಪಿಯವರು ನಮ್ಮ ಮೇಲೆ ನೊಟೀಸ್ ಕೊಟ್ಟಿರೋ ಬಗ್ಗೆ ಆರೋಪ ಮಾಡ್ತಿದ್ರು. ಇವರು ಅಧಿಕಾರದಲ್ಲಿ ಇದ್ದಾಗ ಏನು ಮಾಡಿದ್ರು? ಕುಮಾರ್ ಬಂಗಾರಪ್ಪ ಅಧ್ಯಕ್ಷತೆಯಲ್ಲಿ ಸಮಿತಿ ಮಾಡಿ ವಕ್ಫ್ ನೊಟೀಸ್ ಜಾರಿ ಮಾಡಿದ್ದಾರೆ. ಈ ಸಮಿತಿ 2,900 ಎಕರೆಗೆ ನೊಟೀಸ್ ಜಾರಿ ಮಾಡಿದೆ. ಸಿದ್ದರಾಮಯ್ಯ (Siddaramaiah) ಅವಧಿಯಲ್ಲಿ 300 ಎಕರೆಗೆ ನೊಟೀಸ್ ಜಾರಿ ಆಗಿದೆ. ಯಾರ ಅವಧಿಯಲ್ಲಿ ನೊಟೀಸ್ ಜಾಸ್ತಿ ಜಾರಿ ಮಾಡಿದ್ದಾರೆ ಅಂತ ಗೊತ್ತಾಯ್ತಲ್ಲ. ನಾವು ಯಾರ ಮೇಲೆ ಆರೋಪ ಮಾಡಬೇಕು? ಈಗ ಬಿಜೆಪಿಯವರು ವಕ್ಫ್ ವಿಚಾರದಲ್ಲಿ ರಾಜ್ಯ ಪ್ರವಾಸ ಮಾಡಲು ಹೊರಟಿದ್ದಾರಲ್ಲ, ಇದು ಮೊದಲು ಅವರಿಗೆ ಅರ್ಥ ಆಗಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.
ಬಹುಶಃ ಯತ್ನಾಳ್ ಟೀಮ್ ಹೊರಟಿರೋದು ಬಿಜೆಪಿಯವರಿಗೆ ಮುಖಭಂಗ ಮಾಡೋದಕ್ಕೆ. ಬಿಜೆಪಿಯವರು ಹೆಚ್ಚು ನೊಟೀಸ್ ಕೊಟ್ಟಿದ್ದಾರೆ ಎಂದು ಗೊತ್ತಾದ ಮೇಲೂ ಇವರು ಪ್ರವಾಸ ಹೊರಟಿದ್ದಾರೆ ಅಂದ್ರೆ, ಬಿಜೆಪಿಯವರಿಗೆ ಮುಜುಗರ ಮಾಡಲು ಹೊರಟಿದ್ದಾರೆ ಅಂತ ನನಗನ್ನಿಸುತ್ತೆ. ಇಲ್ಲ ಅಂದ್ರೆ ಯಾಕ್ ಹೋಗ್ತಾರೆ ಅವರು? ಬಿಜೆಪಿ ಕಾಲದಲ್ಲೇ ಹೆಚ್ಚು ವಕ್ಫ್ ನೊಟೀಸ್ ಕೊಟ್ಟಿದ್ದಾರಲ್ಲ, ಅದನ್ನೆಲ್ಲ ಎಕ್ಸ್‌ಪೋಸ್ ಮಾಡಲು ಯತ್ನಾಳ್ ಹೋಗ್ತಿದ್ದಾರೆ ಅಂತ ಅರ್ಥ. ಯಡಿಯೂರಪ್ಪ, ಬೊಮ್ಮಾಯಿ ಕಾಲದಲ್ಲಿ ಆಗಿತ್ತು ಅಂತ ಇದೆಯಲ್ಲ, ಆದ್ದರಿಂದ ಅವರಿಬ್ಬರನ್ನೂ ಎಕ್ಸ್‌ಪೋಸ್ ಮಾಡಲು ಹೊರಟಿದ್ದಾರೆ ಅನಿಸುತ್ತೆ. ಹಿಂದೆ ಬಿಜೆಪಿ ವಕ್ಫ್ ನೊಟೀಸ್ ಕೊಟ್ಟಿದ್ದು ನಮ್ಮ ಗಮನಕ್ಕೆ ಬಂದಿರಲಿಲ್ಲ ಆ ಸಂಧರ್ಭದಲ್ಲಿ. ಅದನ್ನ ನಾವು ಇಶ್ಯೂ ಆಗಿ ತೆಗೆದುಕೊಂಡಿರಲಿಲ್ಲ. ಈಗ ಎಚ್ಚರಿಕೆ ವಹಿಸಿಕೊಂಡು ಕೆಲಸ ಮಾಡ್ತೀವಿ ಎಂದು ಹೇಳಿದ್ದಾರೆ.
ಇವಿಎಂ ಹ್ಯಾಕ್ ಸಮರ್ಥಿಸಿಕೊಂಡ ಸಚಿವರು:
ಇದೇ ವೇಳೆ ಮಹಾರಾಷ್ಟ್ರದಲ್ಲಿ ಇವಿಎಂ ಹ್ಯಾಕ್ ಟ್ಯಾಂಪರ್ ಮಾಡಿರುವ ಆರೋಪವನ್ನು ಗೃಹ ಸಚಿವರು ಸಮರ್ಥಿಸಿಕೊಂಡಿದ್ದಾರೆ. ನಾವು ಮೊದಲಿಂದಲೂ ಇದನ್ನು ಹೇಳಿಕೊಂಡೇ ಬರುತ್ತಿದ್ದೇವೆ. ಸೆಲೆಕ್ಟಿವ್ ಆಗಿ ರಾಜ್ಯ, ಕ್ಷೇತ್ರಗಳನ್ನು ಆಯ್ಕೆ ಮಾಡಿಕೊಂಡು ಇವಿಎಂ ಹ್ಯಾಕ್ ಮಾಡ್ತಾರೆ. 2014 ರಿಂದಲೂ ಇದು ನಡೆದುಕೊಂಡು ಬರ್ತಿದೆ. ಮಹಾರಾಷ್ಟ್ರದಲ್ಲೂ ಆರೀತಿ ಆಗಿದೆ ಅಂತ ಚರ್ಚೆ ಆಗ್ತಿದೆ, ಅದನ್ನೇ ನಾನು ಹೇಳಿದ್ದು. ಬಿಜೆಪಿಯವರಿಗೆ ನನ್ನ ಹೇಳಿಕೆ ಸರಿಯಾಗಿ ಅರ್ಥ ಮಾಡಿಕೊಳ್ಳಲು ಹೇಳಿ ಎಂದು ಕುಟುಕಿದ್ದಾರೆ.
ಕ್ರೀಡೆ
JAIN UNIVERSITY : ಜೈನ್ ಯುನಿವರ್ಸಿಟಿಯಲ್ಲಿ ಮಹಿಳಾ ಬಾಸ್ಕೆಟ್‌ಬಾಲ್ ಹಬ್ಬ
ಬೆಂಗಳೂರು, ಫೆ.11: ಕನಕಪುರ ರಸ್ತೆಯ ಜೈನ್ ಯುನಿವರ್ಸಿಟಿ ಗ್ಲೋಬಲ್ ಕ್ಯಾಂಪಸ್‌ನಲ್ಲಿ ನಡೆಯುತ್ತಿರುವ ಆಲ್ ಇಂಡಿಯಾ ಅಂತರ್ ವಿಶ್ವವಿದ್ಯಾಲಯ ಮಹಿಳಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ (All India Inter University Women’s Basketball Championship) ಎರಡನೇ ದಿನದ ಲೀಗ್ ಪಂದ್ಯಗಳು ರೋಚಕತೆಯಿಂದ ಸಾಗಿದವು.
ಮೊದಲ ಪಂದ್ಯದಲ್ಲಿ ಚಂಡೀಗಢ ವಿಶ್ವವಿದ್ಯಾಲಯ 70-59 ಅಂತರದಲ್ಲಿ ಡಿಎವಿ ಇಂಡೋರ್ ತಂಡವನ್ನು ಮಣಿಸಿತು. ಕುಸುಭು (25) ಮತ್ತು ದೀಪ್ಷಿಖಾ (19) ಚಂಡೀಗಢ ತಂಡದ ಪರ ಮಿಂಚಿದರು.
ಎರಡನೇ ಪಂದ್ಯದಲ್ಲಿ ಆತಿಥೇಯ ಜೈನ್ ವಿಶ್ವವಿದ್ಯಾಲಯ 65-25 ಅಂತರದಲ್ಲಿ ಯುನಿವರ್ಸಿಟಿ ಆಫ್ ಕಲ್ಕತ್ತಾ ವಿರುದ್ಧ ಭರ್ಜರಿ ಗೆಲುವು ದಾಖಲಿಸಿತು. ಹರ್ಷಿತಾ (13) ಮತ್ತು ಆದ್ಯಾ ಗೌಡ (10) ಗಮನಾರ್ಹ ಆಟವಾಡಿದರು.
ಮೂರನೇ ಪಂದ್ಯದಲ್ಲಿ ಎಸ್‌ಆರ್‌ಎಂ ವಿಶ್ವವಿದ್ಯಾಲಯ 58-15 ಅಂತರದಲ್ಲಿ ಎಂಭಿಎಸ್‌ಪಿಎಸ್‌ಯು ಪಟಿಯಾಲಾ ವಿರುದ್ಧ ಜಯ ಸಾಧಿಸಿತು.
ನಾಲ್ಕನೇ ಪಂದ್ಯದಲ್ಲಿ ಲವ್ಲಿ ಪ್ರೊಫೆಷನಲ್ ಯುನಿವರ್ಸಿಟಿ 63-58 ಅಂತರದಲ್ಲಿ ಕ್ರೈಸ್ಟ್ ವಿಶ್ವವಿದ್ಯಾಲಯವನ್ನು ರೋಚಕವಾಗಿ ಸೋಲಿಸಿತು.
ಐದನೇ ಪಂದ್ಯದಲ್ಲಿ ಐಟಿಎಂ ವಿಶ್ವವಿದ್ಯಾಲಯ 65-30 ಅಂತರದಲ್ಲಿ ಎಸ್‌ಜಿಜಿವಿಎ ಯುನಿವರ್ಸಿಟಿಯನ್ನು ಮಣಿಸಿತು.
ಆರನೇ ಪಂದ್ಯದಲ್ಲಿ ಎಲ್‌ಎನ್‌ಐಪಿಇ ವಿಶ್ವವಿದ್ಯಾಲಯ 68-28 ಅಂತರದಲ್ಲಿ ಪಂಡಿತ್ ರವಿ ಶಂಕರ್ ವಿಶ್ವವಿದ್ಯಾಲಯವನ್ನು ಸೋಲಿಸಿತು.
ಇದಕ್ಕೂ ಮೊದಲು ಫೆ.10ರ ಸಂಜೆ ನಡೆದ ಲೀಗ್ ಪಂದ್ಯಗಳಲ್ಲಿ ಚಂಡೀಗಢ ವಿಶ್ವವಿದ್ಯಾಲಯ, ಲವ್ಲಿ ಪ್ರೊಫೆಷನಲ್ ಯುನಿವರ್ಸಿಟಿ ಹಾಗೂ ಎಂಜಿ ಯುನಿವರ್ಸಿಟಿ ಕೊಟ್ಟಾಯಂ ಜಯಗಳಿಸಿದ್ದವು.
ಟೂರ್ನಿಯ ಮುಂದಿನ ಲೀಗ್ ಪಂದ್ಯಗಳು ಹಾಗೂ ನಾಕೌಟ್ ಹಂತದ ಪಂದ್ಯಗಳಿಗೆ ಕ್ರೀಡಾಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.
ಅಪರಾಧ
ಬಿಕ್ಲು ಶಿವ ಕೊಲೆ ಪ್ರಕರಣ: ಸುಪ್ರೀಂಕೋರ್ಟ್ ಮೊರೆ ಹೋದ ಶಾಸಕ ಬೈರತಿ ಬಸವರಾಜ್
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿಯಲ್ಲಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್ (Bairati Basavaraj) ಇದೀಗ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ನಿರೀಕ್ಷಣಾ ಜಾಮೀನು ಕೋರಿ ಅವರು ಅರ್ಜಿ ಸಲ್ಲಿಸಿದ್ದಾರೆ.
ನಿನ್ನೆ ಮಾತ್ರ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿತ್ತು. ಹೈಕೋರ್ಟ್ ಏಕ ಸದಸ್ಯ ಪೀಠದಲ್ಲಿ ನಡೆದ ವಿಚಾರಣೆಯಲ್ಲಿ ನ್ಯಾಯಮೂರ್ತಿ ನ್ಯಾಸುನೀಲ್ ದತ್ ಯಾದವ್ ಅವರು ಅರ್ಜಿಯನ್ನು ತಿರಸ್ಕರಿಸಿದರು. ಈ ಬೆಳವಣಿಗೆಯ ಬೆನ್ನಲ್ಲೇ ಬೈರತಿ ಬಸವರಾಜ್ ತಲೆಮರೆಸಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಬಿಕ್ಲು ಶಿವ ಭೀಕರ ಹತ್ಯೆ ಪ್ರಕರಣದಲ್ಲಿ ಈಗಾಗಲೇ 20 ಆರೋಪಿಗಳ ಪೈಕಿ ಎ-1 ಆರೋಪಿ ಜಗದೀಶ್ ಸೇರಿ 18 ಮಂದಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಡೀಫಾಲ್ಟ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು 42ನೇ ಎಸಿಎಂಎಂ ಕೋರ್ಟ್ ತಿರಸ್ಕರಿಸಿತ್ತು.
ಇದಕ್ಕೂ ಮುನ್ನ ಬೆಳಗಾವಿ ಅಧಿವೇಶನದ ಸಮಯದಲ್ಲಿ ನಾಪತ್ತೆಯಾಗಿದ್ದ ಬೈರತಿ ಬಸವರಾಜ್ ಬಂಧನಕ್ಕೆ ಪೊಲೀಸರು ಶೋಧ ಕಾರ್ಯಾಚರಣೆ ಆರಂಭಿಸಿದ್ದರು. ಮಧ್ಯಂತರ ಜಾಮೀನು ಮಂಜೂರಾದರೂ, ನಂತರ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಬೇಲ್ ರದ್ದುಪಡಿಸಿತ್ತು.
ಇದೀಗ ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ಯಾವಾಗ ನಡೆಯಲಿದೆ ಎಂಬುದು ಕುತೂಹಲ ಮೂಡಿಸಿದೆ.
ಅಪರಾಧ
BENGALURU : ಬೆಂಗಳೂರು ರಸ್ತೆ ಅಪಘಾತಕ್ಕೆ ಇಬ್ಬರು ಪುಟ್ಟ ಮಕ್ಕಳ ಬಲಿ
ಬೆಂಗಳೂರು: ನಗರದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಶಾಲಾ ಬಸ್ ಹರಿದು ಇಬ್ಬರು ಪುಟ್ಟ ಮಕ್ಕಳು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ (Bengaluru Accident) ಹೆಣ್ಣೂರು ಸಂಚಾರ ಠಾಣಾ ವ್ಯಾಪ್ತಿಯ ಥಣಿಸಂದ್ರದಲ್ಲಿ ನಡೆದಿದೆ.
ಮೃತರನ್ನು ನಗರದ ಸಿಎಆರ್ ವಿಭಾಗದ ಕಾನ್ಸ್‌ಟೇಬಲ್ ನಾಗನಗೌಡ ಅವರ ಮಕ್ಕಳಾದ ವರ್ಷ (2) ಮತ್ತು ಭಾನು (4) ಎಂದು ಗುರುತಿಸಲಾಗಿದೆ.
ಇಂದು ಬೆಳಗ್ಗೆ ನಾಗನಗೌಡ ಅವರು ಸ್ಕೂಟರ್‌ನಲ್ಲಿ ಇಬ್ಬರು ಮಕ್ಕಳನ್ನು ಕೂರಿಸಿಕೊಂಡು ಹಾಲು ತರಲು ತೆರಳಿದ್ದರು. ಥಣಿಸಂದ್ರ ಮುಖ್ಯರಸ್ತೆಯ ಬಳಿ ಎದುರುಗಡೆಯಿಂದ ಬಂದ ಅಜ್ ಮೋನಿ ಶಾಲೆಯ ಬಸ್ ಏಕಾಏಕಿ ತಿರುವು ಪಡೆದುಕೊಂಡಿದೆ. ಈ ವೇಳೆ ಸ್ಕೂಟರ್ ಮೇಲೆ ಬಸ್ ಹರಿದ ಪರಿಣಾಮ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆ ನಂತರ ಸ್ಥಳಕ್ಕೆ ಉತ್ತರ ವಿಭಾಗದ ಸಂಚಾರ ಪೊಲೀಸ್ ಡಿಸಿಪಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೆಣ್ಣೂರು ಸಂಚಾರ ಪೊಲೀಸರು ಮಹಜರು ನಡೆಸಿ, ಶಾಲಾ ಬಸ್ ಹಾಗೂ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಅಜಾಗರೂಕತೆಯಿಂದ ಬಸ್ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.
ನಗರದಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತಗಳು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ್ದು, ಸಂಚಾರ ನಿಯಮಗಳ ಕಟ್ಟುನಿಟ್ಟಿನ ಜಾರಿಯ ಅವಶ್ಯಕತೆ ಮತ್ತೆ ಒತ್ತಿ ಹೇಳಲಾಗಿದೆ.
-
ದೇಶ5 hours agoರಾಷ್ಟ್ರಗೀತೆಗೆ ಮುನ್ನ ವಂದೇ ಮಾತರಂ ಹಾಡುವುದು ಕಡ್ಡಾಯ
-
ದೇಶ11 hours agoಬಿ.ಕೆ. ಹರಿಪ್ರಸಾದ್ ಅವರನ್ನು ತಕ್ಷಣವೇ ರಾಜ್ಯ ಸಂಪುಟಕ್ಕೆ ಸೇರಿಸಿ ಉಪ ಮುಖ್ಯಮಂತ್ರಿ ಮಾಡಬೇಕು: ರಾಷ್ಟ್ರೀಯ ಅಹಿಂದ ಸಂಘಟನೆ ಆಗ್ರಹ
-
ಚುನಾವಣೆ11 hours agoBENGALURU : ವಾರ್ಡ್ ಮರುವಿಂಗಡಣೆ ವಿರೋಧಿಸಿ ಶಾಸಕ ಎಂ. ಕೃಷ್ಣಪ್ಪ ಹೈಕೋರ್ಟ್ ಅರ್ಜಿ
-
ದೇಶ4 hours agoBIG NEWS : ಫೆ.12 ರಾಷ್ಟ್ರವ್ಯಾಪಿ ಮುಷ್ಕರ: 30 ಕೋಟಿ ಕಾರ್ಮಿಕರು ಬೀದಿಗೆ? ಬ್ಯಾಂಕ್, ಸಾರಿಗೆ ಸೇವೆಗೆ ಹೊಡೆತ ಸಾಧ್ಯತೆ
-
ದೇಶ12 hours agoDigital Services Tax: ಡಿಜಿಟಲ್ ತೆರಿಗೆಗೆ ಅಮೆರಿಕದ ವಿರೋಧ ಏಕೆ?
-
ದೇಶ12 hours agoಚರ್ಚೆ ಮುಗಿಯುವವರೆಗೆ ಸದನಕ್ಕೆ ಹಾಜರಾಗಲ್ಲ ಎಂದ ಲೋಕಸಭಾ ಸ್ಪೀಕರ್
-
ಕ್ರೀಡೆ5 hours agoT20 WORLD CUP : ಡಬಲ್ ಸೂಪರ್ ಓವರ್ನಲ್ಲಿ ದಕ್ಷಿಣ ಆಫ್ರಿಕಾದ ರೋಚಕ ಗೆಲುವು
-
ಅಪರಾಧ4 hours agoBENGALURU : ಬೆಂಗಳೂರು ರಸ್ತೆ ಅಪಘಾತಕ್ಕೆ ಇಬ್ಬರು ಪುಟ್ಟ ಮಕ್ಕಳ ಬಲಿ
