Connect with us

ರಾಜಕೀಯ

ಅವರೇನು ನಮ್ಮನ್ನೇನು ಕೊಂಡುಕೊಂಡಿದ್ದಾರಾ? : ಸಿಪಿವೈ ಹೇಳಿಕೆಗೆ ಶಾಸಕಿ ಶಾರದಾ ಪೂರ್ಯನಾಯ್ಕ್ ತಿರುಗೇಟು

ಶಿವಮೊಗ್ಗ: ಅವರು ಯಾರು?, ಅವರೇನು ನಮ್ಮನ್ನೇನು ಕೊಂಡುಕೊಂಡಿದ್ದಾರಾ? ಎಂದು ಜೆಡಿಎಸ್ ಶಾಸಕರನ್ನು ಕಾಂಗ್ರೆಸ್​ಗೆ ಕರೆದು ತರುತ್ತೇನೆ ಎಂದಿರುವ ಶಾಸಕ ಸಿ. ಪಿ ಯೋಗೇಶ್ವರ್​ ಹೇಳಿಕೆಗೆ ಶಾಸಕಿ ಶಾರದಾ ಪೂರ್ಯನಾಯ್ಕ್ ತಿರುಗೇಟು ನೀಡಿದ್ದಾರೆ.

ಈ ಕುರಿತು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವೇನು ಅವರನ್ನು ನಂಬಿಕೊಂಡು ನಮ್ಮ ನಮ್ಮ ಕ್ಷೇತ್ರದಲ್ಲಿ ನಿಂತು ಗೆದ್ದು ಬಂದಿದ್ದೇವಾ? ಎಂದು‌ ಪ್ರಶ್ನಿಸಿದ್ದಾರೆ. ಅವರು ಯಾರು? ಎಲ್ಲರನ್ನು ಕೊಂಡುಕೊಳ್ಳುತ್ತೇವೆ ಎನ್ನುವ ರೀತಿಯಲ್ಲಿ ಮಾತನಾಡುತ್ತಿದ್ದಾರೆ. ಅವರು ಮೊದಲು ಶಾಸಕರಾಗಿ ಗೌರವಯುತವಾಗಿ ನಡೆದುಕೊಳ್ಳುವುದನ್ನು ಕಲಿತುಕೊಳ್ಳಬೇಕು ಎಂದು ಸಲಹೆ ನೀಡಿದರು.

ನಮಗೆ ಟಾಸ್ಕ್ ಕೊಟ್ಟರೆ ಅವರನ್ನು ಸೆಳೆಯುತ್ತೇವೆ, ಇವರನ್ನು ಕರೆದುಕೊಂಡು ಬರುತ್ತೇವೆ ಎನ್ನುವುದನ್ನು ಬಿಡಬೇಕು. ಅವರಿಗೆ ಇದನ್ನೇ ಮಾಡಿ ಅಭ್ಯಾಸ. ಹಾಗಾಗಿ ಅವರು ಇದನ್ನೇ ಹೇಳುತ್ತಿದ್ದಾರೆ‌. ಎಲ್ಲಿ ಹೋದ ಕಡೆಯಲ್ಲಿ ಅದನ್ನೇ ನೆನಪಿಸಿಕೊಳ್ಳುತ್ತಾರೆ ಎಂದು ಹೇಳಿದರು.

ಉಪಚುನಾವಣೆಯಲ್ಲಿ ಗೆದ್ದ ತಕ್ಷಣ ಈ ರೀತಿ ಹೇಳಿದ್ದಾರೆ ಎಂಬ ಪ್ರಶ್ನೆಗೆ, ಅಹಂ ಮನುಷ್ಯನಿಗೆ, ಏನು ಮಾಡೋಕೆ ಆಗುತ್ತೆ. ಅಹಂ ಇರುತ್ತಲ್ಲ? ಎಂದಿದ್ದಾರೆ.

ನಮ್ಮ ಪಕ್ಷದ ಬಗ್ಗೆ ತೀರ್ಮಾನ ತೆಗೆದುಕೊಳ್ಳಲು ಯೋಗೇಶ್ವರ್ ಯಾರು?: ಜೆಡಿಎಸ್​ ನಡೆಸಲು ನಾಯಕತ್ವವೇ ಇಲ್ಲ, ಮುಂದೊಂದು ದಿನ ಜೆಡಿಎಸ್​ ಇರಲ್ಲ ಎಂಬ ಸಿಪಿವೈ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಮ್ಮ ಪಕ್ಷದ ಬಗ್ಗೆ ತೀರ್ಮಾನ ತೆಗೆದುಕೊಳ್ಳಲು ಯೋಗೇಶ್ವರ್ ಯಾರು? ಎಂದರು‌. ನಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರು ನಮ್ಮ ಜೊತೆಗೆ ಇದ್ದಾರೆ. ಯೋಗೇಶ್ವರ್ ಅವರು ಅವರ ಪಾರ್ಟಿಯನ್ನು ಬಿಟ್ಟು ಬೇರೆ ಪಕ್ಷಕ್ಕೆ ಹೋಗಿ ನಿಂತು ಗೆದ್ದಿರುವವರು‌. ಅವರು ನಮ್ಮ ಬಗ್ಗೆ ಏನು ಹೇಳ್ತಾರೆ. ಎಲ್ಲರನ್ನೂ ಅವರದ್ದೇ ಲೆಕ್ಕದಲ್ಲಿ ತೆಗೆದುಕೊಂಡು ಹೋದರೆ ರಾಜಕಾರಣದಲ್ಲಿ ಯಾರೂ ಇರುವುದಿಲ್ಲ ಎಂದರು.

ಜೆಡಿಎಸ್ ಪಕ್ಷ ಫಿನಿಕ್ಸ್ ಹಕ್ಕಿ ಇದ್ದಂತೆ : ನಿಖಿಲ್ ಕುಮಾರಸ್ವಾಮಿ ಸೋಲಿನ ಕುರಿತು ಪ್ರತಿಕ್ರಿಯಿಸಿದ ಅವರು, ನಾವು ಒಂದು ತರ ಫಿನಿಕ್ಸ್ ಹಕ್ಕಿ ಇದ್ದ ಹಾಗೆ, ನಾವು ಮತ್ತೆ ಎದ್ದು ಬರುತ್ತೇವೆ ಎಂಬ ದೃಢವಾದ ನಂಬಿಕೆ ಇದೆ. ರಾಜಕಾರಣದಲ್ಲಿ ಜೆಡಿಎಸ್ ಗೆ ಖಂಡಿತವಾಗಿಯೂ ಮುಂದಿನ ದಿನಗಳಲ್ಲಿ ಭವಿಷ್ಯವಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಎಲ್ಲ ಶಾಸಕರು ಜೆಡಿಎಸ್​ನಲ್ಲೇ ಇರುತ್ತಾರಾ? ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನನ್ನ ಪ್ರಕಾರ ಜೆಡಿಎಸ್​ನಲ್ಲಿಯೇ ಎಲ್ಲರೂ ಇರುತ್ತಾರೆ ಎನ್ನುವ ಗ್ಯಾರಂಟಿ ಇದೆ. ಒಂದಿಬ್ಬರ ಬಗ್ಗೆ ಕೆಲವೊಂದು ಸರಿ ಹೇಳಲು ಆಗುವುದಿಲ್ಲ. ಓವರ್ ಕಾನ್ಫಿಡೆನ್ಸ್​ ಅಲ್ಲ, ಪಕ್ಷದಲ್ಲಿ ಇರುವವರೆಲ್ಲರೂ ಗಟ್ಟಿಯಾಗಿ ಪಕ್ಷದಲ್ಲಿ ಇದ್ದಾರೆ ಎಂದು ಹೇಳಿದರು.

ಮಧು ಬಂಗಾರಪ್ಪ ಹೇಳಿಕೆಗೆ ಪ್ರತಿಕ್ರಿಯೆ : ಸಚಿವ ಮಧು ಬಂಗಾರಪ್ಪನವರು ಜೆಡಿಎಸ್ ಶಾಸಕರನ್ನು ಸೆಳೆಯುವ ಯತ್ನ ಶಿವಮೊಗ್ಗದಿಂದಲೇ ಯಾಕೆ ಪ್ರಾರಂಭವಾಗಬಾರದು? ಎಂದು ಹೇಳಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶಾಸಕರು, ಮಧು ಬಂಗಾರಪ್ಪ ಸಹ ಜೆಡಿಎಸ್​ ಪಕ್ಷದಲ್ಲಿ ಇದ್ದು ಹೋದವರು. ಎಲ್ಲರನ್ನ ಎಳೆದುಕೊಂಡು ಹೋಗುತ್ತೇವೆ ಎನ್ನುವುದು ತಪ್ಪು. ಮಧು ಬಂಗಾರಪ್ಪ ಅವರ ಮೇಲೆ ಗೌರವವಿದೆ. ಪಕ್ಷಾನೆ ಬೇರೆ, ವಿಶ್ವಾಸನೇ ಬೇರೆ. ಪಕ್ಷ ಅಂತ ಬಂದಾಗ ನಮ್ಮ ಪಕ್ಷ ನಮಗೆ, ಅವರ ಪಕ್ಷ ಅವರಿಗೆ ಎಂದರು.

ದೇಶ

ಸಿಎಂ ಕುರ್ಚಿ ಉಳಿಸಿಕೊಳ್ಳಲು ಶಾಸಕರ ವಿದೇಶ ಪ್ರವಾಸ? ವಿಜಯೇಂದ್ರ ಗಂಭೀರ ಆರೋಪ

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಕುರ್ಚಿ ಉಳಿಸಿಕೊಳ್ಳುವ ಸಲುವಾಗಿ ಕಾಂಗ್ರೆಸ್ ಶಾಸಕರನ್ನು ವಿದೇಶ ಪ್ರವಾಸಕ್ಕೆ ಕಳುಹಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಗಂಭೀರ ಆರೋಪ ಮಾಡಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದರು. ಸರ್ಕಾರ ಬಂದ ಬಳಿಕ ಅನುದಾನ ಬೇಡಿಕೆ ಇಟ್ಟಿದ್ದರೂ ಗಂಗಕಲ್ಯಾಣ ಯೋಜನೆ, ಮನೆ ನಿರ್ಮಾಣ ಸೇರಿದಂತೆ ಹಲವು ಕಾರ್ಯಗಳು ನಡೆಯದೆ ಜನರಲ್ಲಿ ಅಸಮಾಧಾನ ಮೂಡಿದೆ ಎಂದು ಆರೋಪಿಸಿದರು. ಶಾಸಕರು ತಮ್ಮ ಖರ್ಚಿನಲ್ಲಿ ವಿದೇಶಕ್ಕೆ ಹೋಗುತ್ತಿದ್ದಾರೆ ಎಂಬ ಸಿಎಂ ಹೇಳಿಕೆಯನ್ನು ಪ್ರಶ್ನಿಸಿ, “ತಮ್ಮ ಕುರ್ಚಿ ಉಳಿಸಿಕೊಳ್ಳಲು ತಾವೇ ಅವರನ್ನು ಕಳಿಸುತ್ತಿದ್ದಾರೆ” ಎಂದು ಟೀಕಿಸಿದರು.

ರೆಸಾರ್ಟ್ ರಾಜಕೀಯದ ಮೇಲೆ ಲೇವಡಿ

ಕಾಂಗ್ರೆಸ್ ಶಾಸಕರು ರೆಸಾರ್ಟ್ ಬುಕ್ ಮಾಡಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ವಿಜಯೇಂದ್ರ, “ಅವರಿಗೆ ಅನುಕೂಲವಾಗಲಿ ಎಂದು ಬಿಜೆಪಿಯಿಂದ ಬಡಿಗೆ ರೆಡಿ ಮಾಡಿಸಿದ್ದೇವೆ” ಎಂದು ವ್ಯಂಗ್ಯವಾಡಿದರು. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವೆ ಅಂತರದ ರಾಜಕೀಯ ನಡೆಯುತ್ತಿದೆ ಎಂದು ಹೇಳಿದರು.

₹5,000 ಕೋಟಿ ಎಲ್ಲಿಗೆ ಹೋಯ್ತು?

ಗೃಹ ಲಕ್ಷ್ಮೀ ಯೋಜನೆಯ ₹5,000 ಕೋಟಿ ಹಣದ ಬಗ್ಗೆ ಸ್ಪಷ್ಟ ಉತ್ತರ ಸಿಗಲಿಲ್ಲ ಎಂದು ಆರೋಪಿಸಿದ ಅವರು, “ಹಣ ಉಪಯೋಗ ಆಯ್ತಾ? ದುರಪಯೋಗ ಆಯ್ತಾ? ಸಿಎಂ ಉತ್ತರ ಕೊಡಬೇಕು” ಎಂದು ಆಗ್ರಹಿಸಿದರು. ಕೇಂದ್ರ ಸರ್ಕಾರಕ್ಕೆ ನಕಲಿ ದಾಖಲೆ ನೀಡಿರುವ ವಿಚಾರದಲ್ಲೂ ಮುಂದಿನ ದಿನಗಳಲ್ಲಿ ವಿವರವಾದ ಸುದ್ದಿಗೋಷ್ಠಿ ನಡೆಸುವುದಾಗಿ ತಿಳಿಸಿದರು.

ಪ್ರಾದೇಶಿಕ ಅಸಮಾನತೆ ಹೆಚ್ಚಳ

ಪ್ರಾದೇಶಿಕ ಅಸಮಾನತೆ ನಿವಾರಣೆ ಸಮಿತಿ ವರದಿ ಉಲ್ಲೇಖಿಸಿ, ರಾಜ್ಯದಲ್ಲಿ ಅಸಮಾನತೆ ಶೇಕಡಾ 60ರಿಂದ 72.08ಕ್ಕೆ ಏರಿಕೆಯಾಗಿದೆ ಎಂದು ಹೇಳಿದರು. ಕಿತ್ತೂರು ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಭಿವೃದ್ಧಿ ಹಿಂದುಳಿದಿದೆ ಎಂದು ಆರೋಪಿಸಿದರು.

ಕುರಿಗಾರರಿಗೆ ಪರಿಹಾರ ಬಾಕಿ

ಅನುಗ್ರಹ ಯೋಜನೆಯಡಿ 45 ಕೋಟಿ ರೂ. ಬಾಕಿ ಇಟ್ಟಿದ್ದು, 90 ಸಾವಿರ ಸಾವಿನ ಪೈಕಿ ಕೇವಲ 30 ಸಾವಿರ ಕುರಿಮರಿಗಳಿಗೆ ಮಾತ್ರ ಪರಿಹಾರ ನೀಡಲಾಗಿದೆ ಎಂದು ಆರೋಪಿಸಿದರು.

ಬಿಜೆಪಿ ಕಾರ್ಯಕಾರಿಣಿ ಸಭೆ

ಫೆಬ್ರವರಿ 19ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಸರ್ಕಾರದ ವೈಫಲ್ಯಗಳು ಮತ್ತು ಮುಂದಿನ ಚುನಾವಣಾ ತಂತ್ರಗಳ ಬಗ್ಗೆ ಚರ್ಚೆ ಮಾಡಲಾಗುತ್ತದೆ ಎಂದು ಹೇಳಿದರು.

Continue Reading

ದೇಶ

LATEST : “ದೆಹಲಿಗೆ ಬಂದಿರೋದೇ ರಾಜಕಾರಣಕ್ಕೆ”: ಡಿಕೆಶಿ ಹೇಳಿಕೆ ಕುತೂಹಲ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು ಮತ್ತೆ ತೀವ್ರಗೊಂಡಿರುವ ನಡುವೆಯೇ ಡಿಸಿಎಂ ಡಿ.ಕೆ. ಶಿವಕುಮಾರ್ ದೆಹಲಿಯಲ್ಲಿ ಸಂಸದೆ ಪ್ರಿಯಾಂಕಾ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಸೋನಿಯಾ ಗಾಂಧಿ ನಿವಾಸಕ್ಕೆ ಭೇಟಿ ನೀಡಿದ ಡಿಕೆಶಿ, ಅಸ್ಸಾಂ ಚುನಾವಣೆಗೆ ಸಂಬಂಧಿಸಿದಂತೆ ಚರ್ಚೆ ನಡೆದಿದೆ ಎಂದು ತಿಳಿಸಿದ್ದರೂ, ಅವರ ಹೇಳಿಕೆಗಳು ರಾಜಕೀಯ ವಲಯದಲ್ಲಿ ಕುತೂಹಲ ಹೆಚ್ಚಿಸಿವೆ.

“ನಾನು ದೆಹಲಿಗೆ ಬಂದಿರೋದೇ ರಾಜಕಾರಣ ಮಾಡಲು. ಏನೂ ಮಾತನಾಡದೆ ಸುಮ್ಮನೆ ಹೋಗಲು ಸಾಧ್ಯವೇ?” ಎಂದು ಡಿಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ. ರೂಪೇಶ್ ಬಘೇಲ್ ಜೊತೆಗೆ ಪ್ರಿಯಾಂಕಾ ಗಾಂಧಿ ಅವರನ್ನು ಭೇಟಿ ಮಾಡಿದ ಅವರು, ಅಸ್ಸಾಂ ಸೇರಿದಂತೆ ಇತರೆ ರಾಜ್ಯಗಳ ಚುನಾವಣಾ ಸ್ಥಿತಿಗತಿಗಳ ಕುರಿತು ಚರ್ಚೆ ನಡೆದಿದೆ ಎಂದರು. “ಎಲ್ಲಾ ವಿಚಾರಗಳನ್ನು ಮಾತನಾಡಲೇಬೇಕು. ಕಾಲವೇ ಎಲ್ಲಕ್ಕೂ ಉತ್ತರ ಕೊಡಲಿದೆ” ಎಂಬ ಅವರ ಮಾತುಗಳಿಗೆ ಹಲವು ಅರ್ಥಗಳು ನೀಡಲಾಗುತ್ತಿದೆ.

ಇದೇ ವೇಳೆ ಬಜೆಟ್ ಪೂರ್ವಸಿದ್ಧತಾ ಸಭೆಗೆ ಗೈರಾಗಿದ್ದ ಡಿಕೆಶಿ ದೆಹಲಿಗೆ ತೆರಳಿರುವುದು ಗಮನಾರ್ಹ. ಸಿಎಂ ಸಿದ್ದರಾಮಯ್ಯ ಅವರ ಅನುಮತಿ ಪಡೆದುಕೊಂಡೇ ಅವರು ತೆರಳಿದ್ದಾರೆ ಎನ್ನಲಾಗಿದ್ದರೂ, ದೆಹಲಿಯ ರಾಜಕೀಯ ಚಟುವಟಿಕೆಗಳು ಕುತೂಹಲ ಹುಟ್ಟಿಸಿವೆ. ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದರಾ? ಎಂಬ ಪ್ರಶ್ನೆಗೆ ಅವರು ಸ್ಪಷ್ಟ ಉತ್ತರ ನೀಡಿಲ್ಲ.

ರಾಜ್ಯ ನಾಯಕತ್ವ ವಿಚಾರದಲ್ಲಿ ರಾಹುಲ್ ಗಾಂಧಿಯ ನಿರ್ಧಾರವೇ ಅಂತಿಮ ಎಂಬುದು ಕಾಂಗ್ರೆಸ್ ವಲಯದ ನಿಲುವು. ಇದೀಗ ಡಿಕೆಶಿ ರಾಹುಲ್ ಗಾಂಧಿಯನ್ನು ಭೇಟಿ ಮಾಡುವ ಸಾಧ್ಯತೆಗಳೂ ಚರ್ಚೆಯಾಗುತ್ತಿವೆ. ರಾಜ್ಯ ರಾಜಕೀಯದಲ್ಲಿ ಈ ಬೆಳವಣಿಗೆ ಹೊಸ ತಿರುವು ಪಡೆಯುವ ಸೂಚನೆ ನೀಡಿದೆ.

Continue Reading

ಅಪರಾಧ

BAIRATHI BASAVARJU BREAKING NEWS : ಸಿಐಡಿ ಲುಕ್‌ಔಟ್ ನೋಟಿಸ್ ಜಾರಿ, ತನಿಖೆ ತೀವ್ರ

ಬೆಂಗಳೂರು: ರೌಡಿಶೀಟರ್ ಬಿಲ್ಲು ಶಿವ ಕೊಲೆ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜ್ ಅವರಿಗೆ ಮತ್ತೊಂದು ಕಾನೂನು ಹಿನ್ನಡೆ ಎದುರಾಗಿದೆ. ನಿರೀಕ್ಷಣಾ ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ಅವರ ಬಂಧನದ ಭೀತಿ ಮತ್ತಷ್ಟು ಗಟ್ಟಿಯಾಗಿದೆ.

ಈ ಹಿಂದೆ ಇದೇ ಪ್ರಕರಣದಲ್ಲಿ ಹೈಕೋರ್ಟ್ ಕೂಡ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಅದರ ನಂತರ ಬೈರತಿ ಬಸವರಾಜ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಅಲ್ಲಿ ಸಹ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿದೆ. ವಿಚಾರಣೆ ವೇಳೆ ನಿಯಮಿತ ಜಾಮೀನಿಗೆ ಅರ್ಜಿ ಸಲ್ಲಿಸುವುದು ಸೂಕ್ತ ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿರುವುದು ಗಮನಾರ್ಹ.

ಈ ಬೆಳವಣಿಗೆಯೊಂದಿಗೆ ತನಿಖಾ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ಈಗಾಗಲೇ ಸಿಐಡಿ ಪೊಲೀಸರು ಬೈರತಿ ಬಸವರಾಜ್ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ ಮಾಡಿದ್ದಾರೆ. ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಮುಂದಿನ ದಿನಗಳಲ್ಲಿ ಕಾನೂನು ಕ್ರಮಗಳು ಮತ್ತಷ್ಟು ಗಟ್ಟಿಯಾಗುವ ಸಾಧ್ಯತೆಗಳಿವೆ.

ರಾಜಕೀಯ ವಲಯದಲ್ಲೂ ಈ ವಿಚಾರ ಚರ್ಚೆಗೆ ಗ್ರಾಸವಾಗಿದ್ದು, ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಪ್ರಕರಣ ಹೊಸ ತಿರುವು ಪಡೆದಿದೆ.

Continue Reading

Trending