Connect with us

ಬೆಂಗಳೂರು

BWSSBಯಿಂದ ಮನೆ ಮನೆಗೂ ಕಾವೇರಿ ನೀರು ಸಂಪರ್ಕ ಅಭಿಯಾನ ಆರಂಭ

ಬೆಂಗಳೂರು: ಕಾವೇರಿ 5ನೇ ಹಂತದ ಕುಡಿಯುವ ನೀರಿನ ಸಂಪರ್ಕ ನೀಡುವ ನಿಟ್ಟಿನಲ್ಲಿ ಮಧ್ಯವರ್ತಿಗಳ ಹಸ್ತಕ್ಷೇಪ ತಡೆಗಟ್ಟಿ, ವ್ಯವಸ್ಥೆಯನ್ನು ಸರಳೀಕರಣಗೊಳಿಸಿ ಜನರ ಮನೆ ಬಾಗಿಲಿಗೆ ತೆರಳಿ ಕಾವೇರಿ ಕುಡಿಯುವ ನೀರಿನ ಸಂಪರ್ಕ ನೀಡುವಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಿರ್ದೇಶನ ನೀಡಿದ್ದಾರೆ. ಈ ನಿಟ್ಟಿನಲ್ಲಿ ಬೆಂಗಳೂರು ಜಲಮಂಡಳಿಯಿಂದ ಮನೆ ಮನೆಗೂ ಕಾವೇರಿ ನೀರು ಸಂಪರ್ಕ ಅಭಿಯಾನ ಪ್ರಾರಂಭಿಸಲಾಗಿದೆ ಎಂದು ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ಅಧ್ಯಕ್ಷ ಡಾ.ರಾಮ್‌ ಪ್ರಸಾತ್‌ ಮನೋಹರ್‌ ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಬೃಹತ್​ ಬೆಂಗಳೂರಿನ 110 ಹಳ್ಳಿಗಳಿಗೆ ಸಮರ್ಪಕವಾಗಿ ಕುಡಿಯುವ ನೀರು ಒದಗಿಸುವ ಯೋಜನೆಯಾದ ಕಾವೇರಿ 5 ಹಂತವನ್ನು ಅಕ್ಟೋಬರ್​ 16ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​​ ಲೋಕಾರ್ಪಣೆಗೊಳಿಸಿದ್ದರು. ಈ ಯೋಜನೆಯ ಅನುಷ್ಠಾನದಿಂದ ನಗರಕ್ಕೆ 775 ಎಂ.ಎಲ್‌.ಡಿಯಷ್ಟು ಹೆಚ್ಚುವರಿ ನೀರು ಲಭ್ಯವಾಗುತ್ತಿದೆ.

ಕಾವೇರಿ ಕುಡಿಯುವ ನೀರಿನ ಹೊಸ ಸಂಪರ್ಕಗಳನ್ನು ಪಡೆಯಲು ಈಗಾಗಲೇ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ. ಆದರೆ ಕೆಲವು ಕಡೆಗಳಲ್ಲಿ ಮಧ್ಯವರ್ತಿಗಳ ಹಸ್ತಕ್ಷೇಪದ ಬಗ್ಗೆ ದೂರುಗಳು ಕೇಳಿಬಂದಿವೆ. ಅಲ್ಲದೇ, ಆನ್‌ಲೈನ್‌ ಅರ್ಜಿ ಸಲ್ಲಿಕೆಯ ಬಗ್ಗೆ ಹಲವು ಗೊಂದಲಗಳ ಬಗ್ಗೆ ಗ್ರಾಹಕರು ಗಮನ ಸೆಳೆದಿದ್ದರು. ಈ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಿ ಹೊಸದಾಗಿ ಕುಡಿಯುವ ನೀರಿನ ಸಂಪರ್ಕ ಪಡೆಯುವ ವ್ಯವಸ್ಥೆಯನ್ನು ಸರಳೀಕರಣಗೊಳಿಸಿ, ಮಧ್ಯವರ್ತಿಗಳ ಹಸ್ತಕ್ಷೇಪವನ್ನು ತಪ್ಪಿಸುವ ನಿಟ್ಟಿನಲ್ಲಿ ಜನರ ಮನೆ ಬಾಗಿಲಿಗೆ ತೆರಳಿ ಕಾವೇರಿ ಕುಡಿಯುವ ನೀರಿನ ಸಂಪರ್ಕ ನೀಡುವಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಿರ್ದೇಶನ ನೀಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಅಭಿಯಾನದಿಂದ ಹೊಸದಾಗಿ ಕಾವೇರಿ ನೀರಿನ ಸಂಪರ್ಕ ಪಡೆಯುವುದು ಬಹಳ ಸುಲಭವಾಗಿದೆ. ನಿಮ್ಮ ವ್ಯಾಪ್ತಿಯಲ್ಲಿ ನಡೆಯಲಿರುವ ಸಂಪರ್ಕ ಅಭಿಯಾನದಲ್ಲಿ ಪಾಲ್ಗೊಳ್ಳುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಯಾವುದೇ ಮಧ್ಯವರ್ತಿಗಳ ಸಹಾಯವಿಲ್ಲದೆ ಜನರು ಸಂಪರ್ಕ ಪಡೆದುಕೊಳ್ಳಬಹುದಾಗಿದೆ. ಆನ್‌ಲೈನ್‌ ಮೂಲಕ ಅರ್ಜಿಯನ್ನು ಸಲ್ಲಿಸಬಹುದು ಹಾಗೂ ಸಂಪರ್ಕ ಅಭಿಯಾನಗಳಲ್ಲಿ ಆಫ್‌ಲೈನ್‌ ಮೂಲಕವೂ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈಗಾಗಲೇ 8 ಗ್ರಾಮಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಗ್ರಾಮಗಳಿಗೂ ನೀರು ತಲುಪಿದ್ದು, ಸಂಪರ್ಕ ಪಡೆಯುವ ಗ್ರಾಹಕರಿಗೆ ಶೀಘ್ರವಾಗಿ ನೀರು ಸರಬರಾಜು ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಂಗಳೂರು

ಇಂದಿನಿಂದ ಮೂರು ದಿನಗಳ ಕಾಲ ನಂದಿಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧ

ಚಿಕ್ಕಬಳ್ಳಾಪುರ: ಜೂ.19ರಂದು ನಂದಿಗಿರಿಧಾಮದಲ್ಲಿ (Nandi Hills) ರಾಜ್ಯ ಸಚಿವ ಸಂಪುಟ (Cabinet Meeting) ಸಭೆ ನಡೆಯಲಿರುವ ಹಿನ್ನೆಲೆ ಇಂದಿನಿಂದ ಮೂರು ದಿನಗಳ ಕಾಲ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

ಈ ಕುರಿತು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಆದೇಶ ಹೊರಡಿಸಿದ್ದು, ಇಂದು ಸಂಜೆ 5 ಗಂಟೆಯಿಂದ ಜೂ.20ರ ಬೆಳಿಗ್ಗೆ 5 ಗಂಟೆಯವರೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಜೊತೆಗೆ ನಂದಿಗಿರಿಧಾಮದ ಮೇಲ್ಭಾಗದಲ್ಲಿರುವ ವಸತಿ ಕೊಠಡಿಗಳ ಬುಕಿಂಗ್‌ಗೂ ನಿಷೇಧ ವಿಧಿಸಿದ್ದಾರೆ.

ಇದೇ ಮೊದಲ ಬಾರಿಗೆ ನಂದಿಬೆಟ್ಟದಲ್ಲಿ ವಿಶೇಷ ಸಚಿವ ಸಂಪುಟ ನಡೆಯಲಿದ್ದು, ಸಭೆಗೆ ಬೇಕಾದ ಅಗತ್ಯ ಸಿದ್ಧತೆ ಸಲುವಾಗಿ ಮೂರು ದಿನಗಳ ಮೊದಲೇ ಪ್ರವಾಸಿಗರ ಪ್ರವೇಶ ಹಾಗೂ ವಾಹನಗಳ ಸಂಚಾರಕ್ಕೂ ಬ್ರೇಕ್ ಹಾಕಲಾಗಿದೆ.

ಸಚಿವ ಸಂಪುಟ ಸಭೆಗೆ ಸಿಎಂ, ಡಿಸಿಎಂ ಹಾಗೂ ಕರ್ನಾಟಕ ಸರ್ಕಾರದ ಸಚಿವ ಸಂಪುಟ ದರ್ಜೆಯ ಎಲ್ಲಾ ಮಂತ್ರಿಗಳು, ಶಾಸನ ಸಭಾ ಹಾಗೂ ವಿಧಾನಸಭಾ ಸದಸ್ಯರು, ಇಲಾಖಾ ಮುಖ್ಯಸ್ಥರು ಹಾಗೂ ಪತ್ರಕರ್ತರು ಆಗಮಿಸುತ್ತಿದ್ದಾರೆ. ಆದ್ದರಿಂದ ನಂದಿಗಿರಿಧಾಮಕ್ಕೆ ಹೋಗಲು ಮತ್ತು ಬರಲು ಒಂದೇ ರಸ್ತೆ ಇರುವುದರಿಂದ ವಾಹನ ದಟ್ಟಣೆ ಹೆಚ್ಚಾಗಿರುತ್ತದೆ. ಜೊತೆಗೆ ನಂದಿಬೆಟ್ಟದಲ್ಲಿ ಕಡಿದಾದ ತಿರುವುಗಳಿಂದ ಕೂಡಿದ ರಸ್ತೆಗಳಲ್ಲಿ ವಾಹನ ಮತ್ತು ಪ್ರವಾಸಿಗರನ್ನು ನಿಯಂತ್ರಿಸುವುದು ಅತಿ ಕಷ್ಟಕರವಾಗಿರುತ್ತದೆ. ಅಪಘಾತಗಳಾಗುವ ಸಾಧ್ಯತೆಗಳು ಹೆಚ್ಚಾಗಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.

Continue Reading

ಬೆಂಗಳೂರು

ನಮ್ಮ ಹೊಟ್ಟೆಯ ಮೇಲೆ ಹೊಡೆಯಬೇಡಿ ರಾಹುಲ್ ಗಾಂಧಿಗೆ ಅಸೋಸಿಯೇಷನ್ ಪತ್ರ!

ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ನಿಷೇಧಗೊಂಡಿದೆ, ಈ ಹಿನ್ನೆಲೆ ನಮ್ಮ ಬೈಕ್ ಟ್ಯಾಕ್ಸಿ ಅಸೋಸಿಯೇಷನ್ ಅಧ್ಯಕ್ಷ ಮೊಹಮ್ಮದ್ ಸಲೀಂ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದು ನಿಷೇಧ ಮಾಡಿದರುವಂತೆ ಮನವಿ ಮಾಡಿದ್ದಾರೆ,
ಲಕ್ಷಾಂತರ ಮಂದಿ ವಿದ್ಯಾರ್ಥಿಗಳು, ನಿರುದ್ಯೋಗಿಗಳು, ಪೋಷಕರು ಹಾಗೂ ದಿನಗೂಲಿ ಕಾರ್ಮಿಕರು ಬೈಕ್ ಟ್ಯಾಕ್ಸಿ ಸೇವೆಯಿಂದ ದಿನನಿತ್ಯ ಹೊಟ್ಟೆ ಹೊರೆದುಕೊಳ್ಳುತ್ತಿದ್ದಾರೆ, ಇವು ನಮ್ಮ ಬಿಡುವಿನ ವೇಳೆಯ ಕೆಲಸವಾಗಿರದೇ ಮೂಲ ಉದ್ಯೋಗವೇ ಆಗಿದೆ, ಈ ರೀತಿ ಏಕಾಏಕಿ ನಿಷೇಧ ಮಾಡುವುದರಿಂದ ನಮ್ಮ ಕುಟುಂಬಗಳು ಬೀದಿಗೆ ಬೀಳುತ್ತವೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ,
ಸುರಕ್ಷತೆ, ವಿಮೆ ನಿಯಮ ಹಾಗೂ ತರಬೇತಿ ನಿಯಮಗಳನ್ನು ಜಾರಿಗೆ ತಂದು ನಮ್ಮನ್ನು ಅಧಿಕೃತ ಉದ್ಯೋಗಿಗಳನ್ನಾಗಿ ಮಾಡುವ ಬದಲು ನಿಷೇಧಗೊಳಿಸುವುದು ಎಷ್ಟು ಸರಿ ಎಂದು ಪತ್ರದಲ್ಲಿ ಪ್ರಶ್ನಿಸಲಾಗಿದ್ದು, ಗಿಗ್ ಕಾರ್ಮಿಕರಾದ ನಮಗೆ ನೀವು ಚುನಾವಣೆಯ ಮುನ್ನ ನೀಡಿದ್ದ ಭರವಸೆಯನ್ನು ಮರೆತಿದ್ದೀರಿ ಎಂದು ಹೇಳಲಾಗಿದೆ,

Continue Reading

ಬೆಂಗಳೂರು

ಮೆಟ್ರೋ ನಿಲ್ದಾಣಕ್ಕೆ ಫೀಲ್ಡ್ ಮಾರ್ಷಲ್ ಕಾರಿಯಪ್ಪ ಹೆಸರು-ಡಿಸಿಎಂ ಡಿಕೆಶಿ

ಬೆಂಗಳೂರು: ಮೆಟ್ರೋ ನಿಲ್ದಾಣಕ್ಕೆ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹೆಸರಿಡುವ ಬಗ್ಗೆ ನಾನು ಹಾಗೂ ಮುಖ್ಯಮಂತ್ರಿಗಳು ಚರ್ಚೆ ಮಾಡಿ ತೀರ್ಮಾನಿಸುತ್ತೇವೆ, ಕಾರ್ಯಪ್ಪ ಹೆಸರಿಡುವುದು ನಮ್ಮ ಭಾಗ್ಯ ಎಂದು ಡಿಸಿಎಂ ಡಿಕೆ ಶಿಮಕುಮಾರ್ ಅವರು ಹೇಳಿದರು,
ರಾಜ್ಯ ಸರ್ಕಾರವು ಬೆಂಗಳೂರಿನಲ್ಲಿ ಏಳು ಎಕರೆ ಭೂಮಿ ಮಂಜೂರು ಮಾಡಿರುವ ಹಿನ್ನೆಲೆಯಲ್ಲಿ ಕೊಡವ ಸಮಾಜದವರು ನಗರದಲ್ಲಿ ಭಾನುವಾರ ಏರ್ಪಡಿಸಿದ್ದ ಅಭಿನಂದನಾ ಸಮಾರಂಭ ಉದ್ದೇಶಿಸಿ ಡಿಸಿಎಂ ಡಿಕೆಶಿ ಅವರು ಮಾತನಾಡಿದರು,
ಈ ವಿಚಾರವಾಗಿ ನಾವು ಮುಕ್ತ ಮನಸ್ಸು ಹೊಂದಿದ್ದೇವೆ, ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಹಾಗೂ ಈ ಡಿಕೆ ಶಿವಕುಮಾರ್ ಸೇರಿ ಕಾರ್ಯಪ್ಪ ಅವರ ಹೆಸರನ್ನು ಉಳಿಸುವ ಕೆಲಸ ಮಾಡುತ್ತೇವೆ ಎಂದು ಭರವಸೆ ನೀಡಿದರು,
ಇಡೀ ದೇಶಕ್ಕೆ ಕೊಡಗು ಹಾಗೂ ಕೊಡವರು ಆಭರಣವಿದ್ದಂತೆ, ಇತಿಹಾಸ ನೋಡಿದಾಗ ನಿಮಗೆ ಯಾವುದೇ ಜವಾಬ್ದಾರಿ ಕೊಟ್ಟರೂ ಅದನ್ನು ಸಮರ್ಥವಾಗಿ ನಿಭಾಯಿಸಿದ್ದೀರಿ, ರಾಜಕೀಯ ಮಾತ್ರವಲ್ಲ ಕ್ರೀಡೆ, ಕಾನೂನು ವ್ಯವಸ್ಧೆ ಸೇನೆ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಕೊಡವರ ಕೊಡುಗೆ ಅಪಾರ, ದೇಶದ ಸ್ವಾತಂತ್ರ್ಯ ಹೋರಾಟಕ್ಕೂ ನಿಮ್ಮ ಕೊಡುಗೆ ಇದೆ, ಎಂದು ಬಣ್ಣೀಸಿದರು,

Continue Reading

Trending