ಬೆಂಗಳೂರು
BWSSBಯಿಂದ ಮನೆ ಮನೆಗೂ ಕಾವೇರಿ ನೀರು ಸಂಪರ್ಕ ಅಭಿಯಾನ ಆರಂಭ

ಬೆಂಗಳೂರು: ಕಾವೇರಿ 5ನೇ ಹಂತದ ಕುಡಿಯುವ ನೀರಿನ ಸಂಪರ್ಕ ನೀಡುವ ನಿಟ್ಟಿನಲ್ಲಿ ಮಧ್ಯವರ್ತಿಗಳ ಹಸ್ತಕ್ಷೇಪ ತಡೆಗಟ್ಟಿ, ವ್ಯವಸ್ಥೆಯನ್ನು ಸರಳೀಕರಣಗೊಳಿಸಿ ಜನರ ಮನೆ ಬಾಗಿಲಿಗೆ ತೆರಳಿ ಕಾವೇರಿ ಕುಡಿಯುವ ನೀರಿನ ಸಂಪರ್ಕ ನೀಡುವಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಿರ್ದೇಶನ ನೀಡಿದ್ದಾರೆ. ಈ ನಿಟ್ಟಿನಲ್ಲಿ ಬೆಂಗಳೂರು ಜಲಮಂಡಳಿಯಿಂದ ಮನೆ ಮನೆಗೂ ಕಾವೇರಿ ನೀರು ಸಂಪರ್ಕ ಅಭಿಯಾನ ಪ್ರಾರಂಭಿಸಲಾಗಿದೆ ಎಂದು ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ಅಧ್ಯಕ್ಷ ಡಾ.ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಬೃಹತ್ ಬೆಂಗಳೂರಿನ 110 ಹಳ್ಳಿಗಳಿಗೆ ಸಮರ್ಪಕವಾಗಿ ಕುಡಿಯುವ ನೀರು ಒದಗಿಸುವ ಯೋಜನೆಯಾದ ಕಾವೇರಿ 5 ಹಂತವನ್ನು ಅಕ್ಟೋಬರ್ 16ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಲೋಕಾರ್ಪಣೆಗೊಳಿಸಿದ್ದರು. ಈ ಯೋಜನೆಯ ಅನುಷ್ಠಾನದಿಂದ ನಗರಕ್ಕೆ 775 ಎಂ.ಎಲ್.ಡಿಯಷ್ಟು ಹೆಚ್ಚುವರಿ ನೀರು ಲಭ್ಯವಾಗುತ್ತಿದೆ.
ಕಾವೇರಿ ಕುಡಿಯುವ ನೀರಿನ ಹೊಸ ಸಂಪರ್ಕಗಳನ್ನು ಪಡೆಯಲು ಈಗಾಗಲೇ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ. ಆದರೆ ಕೆಲವು ಕಡೆಗಳಲ್ಲಿ ಮಧ್ಯವರ್ತಿಗಳ ಹಸ್ತಕ್ಷೇಪದ ಬಗ್ಗೆ ದೂರುಗಳು ಕೇಳಿಬಂದಿವೆ. ಅಲ್ಲದೇ, ಆನ್‌ಲೈನ್ ಅರ್ಜಿ ಸಲ್ಲಿಕೆಯ ಬಗ್ಗೆ ಹಲವು ಗೊಂದಲಗಳ ಬಗ್ಗೆ ಗ್ರಾಹಕರು ಗಮನ ಸೆಳೆದಿದ್ದರು. ಈ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಿ ಹೊಸದಾಗಿ ಕುಡಿಯುವ ನೀರಿನ ಸಂಪರ್ಕ ಪಡೆಯುವ ವ್ಯವಸ್ಥೆಯನ್ನು ಸರಳೀಕರಣಗೊಳಿಸಿ, ಮಧ್ಯವರ್ತಿಗಳ ಹಸ್ತಕ್ಷೇಪವನ್ನು ತಪ್ಪಿಸುವ ನಿಟ್ಟಿನಲ್ಲಿ ಜನರ ಮನೆ ಬಾಗಿಲಿಗೆ ತೆರಳಿ ಕಾವೇರಿ ಕುಡಿಯುವ ನೀರಿನ ಸಂಪರ್ಕ ನೀಡುವಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಿರ್ದೇಶನ ನೀಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಅಭಿಯಾನದಿಂದ ಹೊಸದಾಗಿ ಕಾವೇರಿ ನೀರಿನ ಸಂಪರ್ಕ ಪಡೆಯುವುದು ಬಹಳ ಸುಲಭವಾಗಿದೆ. ನಿಮ್ಮ ವ್ಯಾಪ್ತಿಯಲ್ಲಿ ನಡೆಯಲಿರುವ ಸಂಪರ್ಕ ಅಭಿಯಾನದಲ್ಲಿ ಪಾಲ್ಗೊಳ್ಳುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಯಾವುದೇ ಮಧ್ಯವರ್ತಿಗಳ ಸಹಾಯವಿಲ್ಲದೆ ಜನರು ಸಂಪರ್ಕ ಪಡೆದುಕೊಳ್ಳಬಹುದಾಗಿದೆ. ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು ಹಾಗೂ ಸಂಪರ್ಕ ಅಭಿಯಾನಗಳಲ್ಲಿ ಆಫ್‌ಲೈನ್ ಮೂಲಕವೂ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈಗಾಗಲೇ 8 ಗ್ರಾಮಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಗ್ರಾಮಗಳಿಗೂ ನೀರು ತಲುಪಿದ್ದು, ಸಂಪರ್ಕ ಪಡೆಯುವ ಗ್ರಾಹಕರಿಗೆ ಶೀಘ್ರವಾಗಿ ನೀರು ಸರಬರಾಜು ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು
ಅಲ್ಪಸಂಖ್ಯಾತರ ಸಾಮೂಹಿಕ ವಿವಾಹಕ್ಕೆ ₹50,000 ಸಹಾಯಧನ: ಜಮೀರ್ ಅಹ್ಮದ್ ಘೋಷಣೆ
ಬೆಂಗಳೂರು:
ಕರ್ನಾಟಕದ ಅಲ್ಪಸಂಖ್ಯಾತ ಸಮುದಾಯದ ಸಾಮೂಹಿಕ ವಿವಾಹಗಳಿಗೆ ಇನ್ಮುಂದೆ ಸರ್ಕಾರದಿಂದ ₹50,000 ಸಹಾಯಧನ ಸಿಗಲಿದೆ ಎಂದು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು.
ಸಿಎಂ ಸಿದ್ದರಾಮಯ್ಯ ಘೋಷಿಸಿರುವ ಬಜೆಟ್ ಯೋಜನೆಗೆ ಈಗ ಅನುಮೋದನೆ ಲಭಿಸಿದ್ದು, ಈ ನಿಟ್ಟಿನಲ್ಲಿ ಬಡ ಅಲ್ಪಸಂಖ್ಯಾತರಿಗೆ ಸಹಾಯ ಮಾಡಲು ಸರ್ಕಾರ ಸಜ್ಜಾಗಿದೆ ಎಂದು ಅವರು ಮಾಧ್ಯಮಗಳಿಗೆ ತಿಳಿಸಿದರು.
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೆರವು:
ಮೌಲಾನಾ ಅಬ್ದುಲ್ ಕಲಾಂ ಸ್ಕೂಲ್ ಸೇರಿದಂತೆ ಪ್ರತಿಭಾವಂತ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಧನ ಸಹಾಯ ನೀಡಲಾಗುತ್ತಿದೆ. ಈಗಾಗಲೇ 214 ವಿದ್ಯಾರ್ಥಿಗಳಿಗೆ ವೈಯಕ್ತಿಕವಾಗಿ ಲ್ಯಾಪ್‌ಟಾಪ್ ವಿತರಣೆ ನಡೆಸಲಾಗಿದೆ.
ಮದರಸಾಗಳಲ್ಲಿ ಕನ್ನಡ ಕಲಿಕೆ:
ಮದರಸಾಗಳಲ್ಲಿ ಕನ್ನಡ ಕಲಿಕೆ ಆರಂಭಿಸುವ ಯೋಜನೆಯೊಂದಿಗೆ, ಮೊದಲ ಹಂತದಲ್ಲಿ 200 ಮೌಲ್ವಿಗಳನ್ನು ಆಯ್ಕೆ ಮಾಡಲಾಗಿದೆ. ಮೂವರು ತಿಂಗಳಲ್ಲಿ ಅವರಿಗೆ ಕನ್ನಡ ಭಾಷಾ ತರಬೇತಿ ನೀಡಲಾಗುವುದು.
2,000 ಮದರಸಾಗಳಿಗೆ ಕನ್ನಡ ಪಾಠ್ಯಕ್ರಮ:
ರಾಜ್ಯದಲ್ಲಿ 2 ಸಾವಿರ ಮದರಸಾಗಳಿಗೆ ಕನ್ನಡ ಕಲಿಕೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮುಂದಾಗಿದ್ದು, ಅಲ್ಪಸಂಖ್ಯಾತ ಆಯೋಗ ಸಂಪೂರ್ಣ ಸಹಕಾರ ನೀಡಲಿದೆ ಎಂದು ಅಧ್ಯಕ್ಷ ಯು. ನಿಸಾರ್ ಅಹಮದ್ ಹೇಳಿದ್ದಾರೆ. very soon ಈ ಪಾಠ್ಯಕ್ರಮ ಮುದ್ರಣಕ್ಕೂ ಕ್ರಮ ಜರಗಲಿದೆ.
ಬೆಂಗಳೂರು
ಸು ಫ್ರಮ್ ಸೋ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಕಲೆಕ್ಷನ್ ಸೆನ್ಸೇಷನ್: ಶ್ರಾವಣದ ಹಬ್ಬಕ್ಕೂ ಮುನ್ನ ಧನಲಕ್ಷ್ಮೀ ವರ!
ಬೆಂಗಳೂರು: ಶ್ರಾವಣ ತಿಂಗಳು ಅಂದ್ರೆ ಬಂಗಾರದ ತಿಂಗಳು. ಮನೆಮಾಲೀಕರಿಗೆ ವರಮಹಾಲಕ್ಷ್ಮೀ ಹಬ್ಬ, ಕನ್ನಡ ಚಿತ್ರರಂಗಕ್ಕೆ “ಸು ಫ್ರಮ್ ಸೋ” ಚಿತ್ರದ ಯಶಸ್ಸು! ರಾಜ್ ಬಿ.ಶೆಟ್ಟಿ ಅಭಿನಯದ ಈ ಹಾರರ್-ಕಾಮಿಡಿ ಸಿನಿಮಾ ಇದೀಗ ಮೂರನೇ ವಾರದಲ್ಲೂ ಭರ್ಜರಿಯಾಗಿ ಓಡುತ್ತಿದ್ದು, ಬಾಕ್ಸ್ ಆಫೀಸ್‌ನಲ್ಲಿ ಹವಾ ಸೃಷ್ಟಿಸಿದೆ.
ಇತ್ತೀಚೆಗೆ ಕನ್ನಡ ಚಿತ್ರರಂಗದಲ್ಲಿ ಉತ್ತಮ ಕಂಟೆಂಟ್ ಹೊಂದಿರುವ ಸಿನಿಮಾಗಳಿಗೆ ಅಭಿಮಾನಿಗಳ ಮೆಚ್ಚುಗೆ ಹೆಚ್ಚಾಗುತ್ತಿದೆ. ‘ಎಕ್ಕ’, ‘ಜೂನಿಯರ್’ ನಂತರ ‘ಸು ಫ್ರಮ್ ಸೋ’ ಕೂಡ ಜನಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ.
75 ಲಕ್ಷ ಬಜೆಟ್‌ನಲ್ಲಿ ತಯಾರಾದ ಈ ಸಿನಿಮಾ ಈಗಾಗಲೇ ₹25 ಕೋಟಿ ಕಲೆಕ್ಷನ್ ಮಾಡಿದ್ದು, ಶೀಘ್ರದಲ್ಲೇ ₹50 ಕೋಟಿ ಕ್ಲಬ್ ಸೇರುವ ಲಕ್ಷಣವಿದೆ.
ಮುಂಬೈ, ದೆಹಲಿ, ಚೆನ್ನೈ, ಹೈದರಾಬಾದ್, ಕೇರಳ ಹಾಗೂ ವಿದೇಶಗಳಲ್ಲೂ ರಿಲೀಸ್ ಆದ ಈ ಸಿನಿಮಾ ಎಲ್ಲೆಡೆ ಹೌಸ್‌ಫುಲ್ ಪ್ರದರ್ಶನ ಪಡೆಯುತ್ತಿದೆ. ರಾಜ್ ಬಿ.ಶೆಟ್ಟಿ ಹಾಗೂ ನಿರ್ದೇಶಕ ಜೆ.ಪಿ. ತುಮಿನಾಡ್ ಅವರ ಶ್ರದ್ಧೆ ಫಲ ನೀಡಿದ್ದು, “ಬಂದರೋ ಬಂದರು.. ಬಾವ ಬಂದರು” ಹಾಡು ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್ ಆಗುತ್ತಿದೆ.
ಇನ್ನು ಮಲಯಾಳಂ ಡಬ್ಬಿಂಗ್ ಆಗಿ ಆಗಸ್ಟ್ 1ರಂದು ಬಿಡುಗಡೆಗೊಂಡ ‘ಸು ಫ್ರಮ್ ಸೋ’ ಚಿತ್ರ, ಕೊಚ್ಚಿಯಲ್ಲಿ ಒಂದೇ ದಿನ 8 ಸಾವಿರ ಟಿಕೆಟ್ ಮಾರಾಟ ಮಾಡಿದ ದಾಖಲೆ ಸ್ಥಾಪಿಸಿದೆ. ಆದುದರಿಂದ, ಚಿತ್ರದ ಬಯೋಪಿಕ್ ಮತ್ತಷ್ಟು ಭಾಷೆಗಳಿಗೆ ವಿಸ್ತರಿಸುವ ಸಾಧ್ಯತೆ ಇದೆ.
ಬೆಂಗಳೂರು
ವೇತನ ವಿವಾದದಲ್ಲಿ ಸಿಎಂ ಸ್ಪಷ್ಟನೆ: 14 ತಿಂಗಳ ಹಿಂಬಾಕಿಗೆ ಮಾತ್ರ ಸರ್ಕಾರ ಸಿದ್ಧ
ಬೆಂಗಳೂರು: ಸಾರಿಗೆ ನೌಕರರ 38 ತಿಂಗಳ ವೇತನ ಹಿಂಬಾಕಿ ಪಾವತಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. “ಈ ಬೇಡಿಕೆ ಸಮಂಜಸವಲ್ಲ. ಸರ್ಕಾರ ಕೇವಲ 14 ತಿಂಗಳ ಹಿಂಬಾಕಿಗೆ ಸಿದ್ಧ” ಎಂದು ಅವರು ಮಂಗಳವಾರ ವಿಧಾನಸೌಧದಲ್ಲಿ ನಡೆದ ಸಂಧಾನ ಸಭೆಯಲ್ಲಿ ತಿಳಿಸಿದ್ದಾರೆ.
2020ರಿಂದ 2023ರ ಫೆಬ್ರವರಿವರೆಗಿನ ಬಾಕಿ ವೇತನ ಪಾವತಿಗೆ ನೌಕರ ಸಂಘಗಳು ಒತ್ತಾಯಿಸಿದ್ದರೊಂದಿಗೆ, 2024ರಿಂದ ನೂತನ ವೇತನವನ್ನೂ ಜಾರಿಗೆ ತರುವಂತೆ ಒತ್ತಾಯಿಸಲಾಗಿದೆ. ಈ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, “ನಿಗಮಗಳ ಆರ್ಥಿಕ ಪರಿಸ್ಥಿತಿ ಮತ್ತು ಹಿಂದಿನ ಸರ್ಕಾರದ ಆದೇಶಗಳ ದೋಷಗಳನ್ನು ಪರಿಗಣಿಸಿ 14 ತಿಂಗಳ ವೇತನ ಹಿಂಬಾಕಿಗೆ ಸಮ್ಮತಿಯಿದೆ,” ಎಂದು ಸ್ಪಷ್ಟಪಡಿಸಿದರು.
ವೇತನ ಪರಿಷ್ಕರಣೆ ಪಶ್ಚಾತ್ಪಟ
2016ರಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ 12.5% ವೇತನ ಹೆಚ್ಚಳ ಜಾರಿಗೆ ಬಂದಿತ್ತು. ಆದರೆ 2020ರ ಕೋವಿಡ್ ಕಾರಣದಿಂದ ಆ ವೇಳೆಗೆ ಯಾವುದೇ ಪರಿಷ್ಕರಣೆ ಆಗಿರಲಿಲ್ಲ. ನಂತರದ ಕಾಂಗ್ರೆಸ್ ಸರ್ಕಾರದಲ್ಲಿ ಶ್ರೀನಿವಾಸ ಮೂರ್ತಿ ಸಮಿತಿ ಶಿಫಾರಸ್ಸಿನಂತೆ 2022ರ ಜೂನ್ 01ರಿಂದ 2023ರ ಫೆಬ್ರವರಿವರೆಗೆ ಹಿಂಬಾಕಿ ಪಾವತಿ ಮಾಡಲು ತೀರ್ಮಾನಿಸಲಾಗಿತ್ತು.
ಸರ್ಕಾರದ ಆರ್ಥಿಕ ಹೊಣೆಗಾರಿಕೆ
ಸಿದ್ದರಾಮಯ್ಯ ಅವರು ಹೇಳಿದ್ದಾರೆ: “ನಾವು ಅಧಿಕಾರಕ್ಕೆ ಬಂದಾಗ ನಿಗಮಗಳಿಗೆ ಒಟ್ಟಾರೆ ₹4000 ಕೋಟಿ ಸಾಲ ಇತ್ತು. 2018 ರಲ್ಲಿ ಈ ಮೊತ್ತ ಕೇವಲ ₹14 ಕೋಟಿ ಮಾತ್ರ ಇತ್ತು. ಯಾವುದೇ ನಿಗಮ ಲಾಭದಲ್ಲಿ ಇಲ್ಲ.” ಅಂತಹ ಪರಿಸ್ಥಿತಿಯಲ್ಲಿ ಎಲ್ಲಾ ನೌಕರರ ಬೇಡಿಕೆಗಳನ್ನು ಈಡೇರಿಸಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.
ಸಂಘದ ಚುನಾವಣೆ ಮತ್ತು ಮುಂದಿನ ಕ್ರಮ
ಸಾರಿಗೆ ನೌಕರರ ಸಂಘದ ಚುನಾವಣೆ ಹಾಗೂ ಬೇಡಿಕೆಗಳ ಕುರಿತಂತೆ ಸರ್ಕಾರ ಪರಿಶೀಲನೆ ನಡೆಸಲಿದ್ದು, ಮಾತುಕತೆ ಮೂಲಕ ಎಲ್ಲ ಅಹವಾಲುಗಳನ್ನು ಬಗೆಹರಿಸಲು ಸಿದ್ಧವಾಗಿದೆ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.
-
ಬಿಬಿಎಂಪಿ3 months ago
ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ಗ್ರೇಟರ್ ಬೆಂಗಳೂರು ಪ್ರದೇಶಕ್ಕೆ
-
ಬೆಂಗಳೂರು2 years ago
ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಮುಖ್ಯ – ಡಾ. ಕೆ.ಸಿ ರೋಹಿತ್
-
ದೇಶ2 years ago
ಫೀನಿಕ್ಸ್ ನಲ್ಲಿ ವೈಭವದ ರಥೋತ್ಸವದೊಂದಿಗೆ ಹತ್ತು ದಿನಗಳ ಉತ್ಸವಕ್ಕೆ ತೆರೆ
-
ಚುನಾವಣೆ2 years ago
ಬಿಬಿಎಂಪಿ ಚುನಾವಣೆ ಡಿಸೆಂಬರ್ನಲ್ಲಿ ನಡೆಯುವ ಸಾಧ್ಯತೆ: ಸಚಿವರಾಮಲಿಂಗಾರೆಡ್ಡಿ
-
ರಾಜಕೀಯ2 years ago
Gruhalaxmi ಗೃಹಲಕ್ಷಿö್ಮ ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಹೀಗೆ ಚೆಕ್ ಮಾಡಿ
-
ಬೆಂಗಳೂರು1 year ago
ನೀರಿಲ್ಲ ನೀರಿಲ್ಲ ನಾಳೆ ನಲ್ಲಿಯಲ್ಲಿ ನೀರು ಬರೋದಿಲ್ಲ
-
ಬೆಂಗಳೂರು8 months ago
ಯಶವಂತಪುರ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಖ್ಯ ಉದ್ದೇಶ -ಎಸ್ ಟಿ ಸೋಮಶೇಖರ್
-
ಕ್ರೀಡೆ2 months ago
ಇಂದು ಐಪಿಎಲ್ ಫೈನಲ್- ಆರ್ಸಿಬಿಗೆ ಶುಭಕೋರಿದ ಎಸ್ಟಿಎಸ್!