ಅಪರಾಧ

ಬೆಂಗಳೂರಿನಲ್ಲಿ ಪಾಕ್ ಪ್ರಜೆಗಳು ಪತ್ತೆ-ದೋಷಾರೋಪಣ ಪಟ್ಟಿ ಸಲ್ಲಿಕೆ

ಬೆಂಗಳೂರು: ಬೆಂಗಳೂರಿನಲ್ಲಿ ಪಾಕ್ ಪ್ರಜೆಗಳ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ, ರಾಜಧಾನಿಯ ಹೊರವಲಯದಲ್ಲಿ ಪಾಕ್ ಪ್ರಜೆಗಳ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಪೂರ್ಣಗೊಳಿಸಿದ ಜಿಗಣಿ ಪೊಲೀಸರು ಕೋರ್ಟ್ ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ,
ಸುಮಾರು 1,350 ಕ್ಕೂ ಹೆಚ್ಚು ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದ್ದು, 18 ಆರೋಪಿಗಳ ವಿರುದ್ಧ ಚಾರ್ಜ್‍ಶೀಟ್ ಸಲ್ಲಿಸಿದ್ದಾರೆ, ಇನ್ನು ಪೊಲೀಸರ ತನಿಖೆ ವೇಳೆ ಹಲವು ಮಹತ್ವದ ವಿಚಾರಗಳ ಬೆಳಕಿಗೆ ಬಂದಿದೆ, ಹಣ ವರ್ಗಾವಣೆ, ಅಕ್ರಮವಾಗಿ ಭಾರತಕ್ಕೆ ಎಂಟ್ರಿ, ಉದ್ಯೋಗ, ಧರ್ಮ ಬೋಧನೆ ವಿಚಾರಗಳನ್ನು ಪೊಲೀಸರು ಬಯಲಿಗೆಳೆದಿದ್ದಾರೆ,
ಬಂಧಿತ 18 ಮಂದಿಯೂ ಪಾಕ್ ಮೂಲದ ಪ್ರಜೆಗಳಾಗಿದ್ದು, ದೇಶದಿಂದ ಬಹಿಷ್ಕರಿಸಲ್ಪಟ್ಟಿದ್ದಾರು, ಹಾಗಾಗಿಯೇ ಕಳೆದ ಮೂರು ನಾಲ್ಕು ವರ್ಷಗಳ ಹಿಂದೆಯೇ ಭಾರತಕ್ಕೆ ಬಂದು ಬೇರೆ ಬೇರೆ ರಾಜ್ಯಗಳಲ್ಲಿ ವಾಸ ಮಾಡುತ್ತಿದ್ದರು, ಹೆಚ್ಚಾಗಿ ದೆಹಲಿ, ಕರ್ನಾಟಕದ ಬೆಂಗಳೂರು ಮತ್ತು ದಾವಣಗೆರೆಯಲ್ಲಿ ನೆಲೆಸಿದ್ದರು, ಅಕ್ರಮವಾಗಿ ಭಾರತಕ್ಕೆ ಬಂದಿದ್ದು ಇವರು ತಮ್ಮದೇ ಯೂಟ್ಯೂಬ್ ಚಾನೆಲ್ ತೆರೆದು ಧರ್ಮ ಬೋಧನೆ ಮಾಡುತ್ತಿದ್ದರು, ಈ ಎಲ್ಲಾ ಅಂಶಗಳನ್ನು ಆಧರಿಸಿ ತನಿಖೆ ನಡೆಸಿದ್ದ ಪೊಲೀಸರು ಹಲವು ಮಹತ್ವದ ಸಾಕ್ಷ್ಯಗಳನ್ನು ಕಲೆಹಾಕಿದ್ದರು, ಚಾರ್ಚ್ ಶೀಟ್ ನಲ್ಲಿ ಎಲ್ಲವನ್ನು ಉಲ್ಲೇಖಿಸಿಸಲಾಗಿದೆ,

Leave a Reply

Your email address will not be published. Required fields are marked *

Trending

Exit mobile version