Connect with us

ರಾಜಕೀಯ

ನಾನು ಸಂಸದನಾಗಲು, ಶಾಸಕನಾಗಲು ಎಂದೂ ಹಪಹಪಿಸಿಲ್ಲ: ನಿಖಿಲ್

ಹಾಸನ: ನಾನು ಸಂಸದನಾಗಲು, ಶಾಸಕನಾಗಲು ಎಂದು ಕೂಡ ಹಪಹಪಿಸಿಲ್ಲ. ಹಾಗಿದ್ದರೆ ನಾನು ಚಿತ್ರರಂಗಕ್ಕೆ ಹೋಗುತ್ತಿರಲಿಲ್ಲ. ರಾಜಕಾರಣಕ್ಕೆ ಬರುತ್ತಿದ್ದೆ ಎಂದು ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದ್ದಾರೆ.

ಹಾಸನ (Hassan) ಜಿಲ್ಲೆ, ಅರಕಲಗೂಡಿನಲ್ಲಿ ಮಾಜಿಸಚಿವ ಎ.ಮಂಜು ಅವರ ಹುಟ್ಟುಹಬ್ಬ ಹಾಗೂ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಹಾಸನ ಜಿಲ್ಲೆಯ ಜನತೆ ಒಬ್ಬ ಸಾಧಾರಣ ರೈತ ಕುಟುಂಬದ ಮಗನಾಗಿ ಜನಿಸಿರುವ ದೇವೇಗೌಡರನ್ನು ಕೆಂಪುಕೋಟೆ ಮೇಲೆ ಬಾವುಟ ಹಾರಿಸುವ ಶಕ್ತಿಯನ್ನು ತುಂಬಿ ಇತಿಹಾಸ ಸೃಷ್ಟಿ ಮಾಡಿದ್ದಾರೆ. ನಿಮ್ಮ ಹೃದಯದಲ್ಲಿ ನಮ್ಮ ಕುಟುಂಬದ ಮೇಲೆ ಇಟ್ಟಿರುವ ಪ್ರೀತಿ, ಗೌರವ ಎಷ್ಟು ಜನ್ಮ ಎತ್ತಿ ಬಂದರೂ ತೀರಿಸಲು ಸಾಧ್ಯವಿಲ್ಲ. ನಿಮ್ಮ ಋಣಕ್ಕಾಗಿ ಪ್ರಾಮಾಣಿಕವಾಗಿ ನಮ್ಮ ಇಡೀ ಪಕ್ಷ, ನಮ್ಮ ಕುಟುಂಬ ನಿಮ್ಮ ಜೊತೆಯಲ್ಲಿ ಸದಾಕಾಲ ಇರುತ್ತೇವೆ. ರಾಮನಗರ ಜಿಲ್ಲೆಯ ಜನತೆ ಕೂಡ ನಮ್ಮ ಕುಟುಂಬಕ್ಕೆ ಎಂಟು ಬಾರಿ ಶಾಸಕ ಸ್ಥಾನ, ಮೂರು ಬಾರಿ ಕುಮಾರಣ್ಣ ಅವರನ್ನು ಸಂಸದರನ್ನಾಗಿ ಆಯ್ಕೆ ಮಾಡಿದ್ದಾರೆ ಎಂದರು

ಚುನಾವಣೆಯಲ್ಲಿ ಏಳುಬೀಳು ಸರ್ವೇ ಸಾಮಾನ್ಯ. ನಾನು ರಾಜಕಾರಣದ ಹಿನ್ನೆಲೆಯಲ್ಲಿ ಬಂದಿರುವ ವ್ಯಕ್ತಿಯಾಗಿದ್ದರೂ ಚಿತ್ರರಂಗದಲ್ಲಿ ನನ್ನದೇ ಆದಷ್ಟು ಸವಾಲುಗಳನ್ನು ಸ್ವೀಕಾರ ಮಾಡಿದೆ. ಜಾಗ್ವಾರ್ ಮೂಲಕ ನಮ್ಮ ತಂದೆ ನನ್ನನ್ನು ಚಿತ್ರರಂಗಕ್ಕೆ ಪರಿಚಯಿಸಿದ್ದು, ಅನೇಕ ಚಿತ್ರಗಳನ್ನು ಮಾಡಿದೆ. ತದನಂತರ ಸಾರ್ವಜನಿಕ ಬದುಕಿನಲ್ಲಿ ಜವಾಬ್ದಾರಿಗಳನ್ನು ಅರಿತಿದ್ದೇನೆ. ಆ ಒಂದು ಕಾರಣದಿಂದ ಸಂಪೂರ್ಣವಾಗಿ ಸಾರ್ವಜನಿಕ ಬದುಕಿಗೆ ಧುಮುಕಿದ್ದೇನೆ ಎಂದು ಹೇಳಿದರು.

ದೇವೇಗೌಡರಿಗೆ 92 ವಯಸ್ಸಾದರೂ ರಾಜ್ಯಸಭೆಯಲ್ಲಿ ಏಕಾಂಗಿಯಾಗಿ ನೆಲ, ಜಲ, ಭಾಷೆ ಉಳಿಸುವ ಕೆಲಸ ಮಾಡುತ್ತಿದ್ದಾರೆ. ನನ್ನ ಜೀವನದ ಸ್ಪೂರ್ತಿ ದೇವೇಗೌಡರು. ನನ್ನ ಜವಾಬ್ದಾರಿಯನ್ನು ಅರಿತಿದ್ದೇನೆ. ಅನಿರೀಕ್ಷಿತವಾದ ಬೆಳವಣಿಗೆಯಿಂದ ಉಪಚುನಾವಣೆಯಲ್ಲಿ ಸ್ಪರ್ಧಿಸಬೇಕಾಗಿ ಬಂತು. ಈ ಚುನಾವಣೆಯ ಸೋಲಿನ ಬಗ್ಗೆ ಹೆಚ್ಚಾಗಿ ಪರಾಮರ್ಶೆ ಮಾಡಲ್ಲ. ಕರ್ನಾಟಕ ರಾಜ್ಯದಲ್ಲಿ ಕಟ್ಟಿರುವ ರೈತ ಪರವಾದ ಪಕ್ಷ, ಪ್ರಾದೇಶಿಕ ಪಕ್ಷ ಜೆಡಿಎಸ್. ಲಕ್ಷಾಂತರ ಕಾರ್ಯಕರ್ತರ ದುಡಿಮೆ, ಎಲ್ಲಾ ತಂದೆ, ತಾಯಿಯರ ಆಶೀರ್ವಾದ, ರೈತರ ಆಶೀರ್ವಾದ ಮಾಡಿ ಇಲ್ಲಿಯವರೆಗೆ ಬೆಳೆಸಿ, ಉಳಿಸಿದ್ದೀರಿ. ಹಲವಾರು ಸಂದರ್ಭದಲ್ಲಿ ಅಖಾಡ ಸಿದ್ಧವಾಗಿತ್ತು. ಬಹಳ ಸುಲಭವಾಗಿ ಶಾಸಕನಾಗಬಹುದಿತ್ತು. ಆದರೆ ಇಲ್ಲಿಯವರೆಗೂ ನಾನು, ಪಕ್ಷ ಸಂಕಷ್ಟದಲ್ಲಿತ್ತು. ಆ ಸಂದರ್ಭದಲ್ಲಿ ಒಬ್ಬ ಪಕ್ಷದ ಶಿಸ್ತಿನ ಸಿಪಾಯಿಯಾಗಿ, ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಪಕ್ಷದ ಕಾರ್ಯಕರ್ತರ ಭಾವನೆಗಳಿಗೆ ಸ್ಪಂದಿಸುವ ಕೆಲಸ ಮಾಡಿದ್ದೇನೆ. 19 ಸ್ಥಾನ ಗೆದ್ದು 18ಕ್ಕೆ ಇಳಿದಿದ್ದೇವೆ. ನಿಮ್ಮೆಲ್ಲರ ಆಶೀರ್ವಾದಿಂದ ಇಡೀ ರಾಜ್ಯ ಪ್ರವಾಸ ಮಾಡುತ್ತೇನೆ. ಮೂಲೇಲಿ ಕೂರುವ ಜಾಯಮಾನ ನನ್ನದಲ್ಲ ಎಂದು ನುಡಿದರು.

ನಾನು ಸೋತು ಒಂದು ವಾರ ಆಗಿದೆ. ನೀವು ಎದೆಗುಂದಬಾರದು ಎಂದು ಅನೇಕರು ಹೇಳಿದ್ದಾರೆ. ನನಗಿನ್ನು 36 ವರ್ಷ. ನನ್ನ ಮುಂದೆ ಇರುವುದು ಒಂದೇ ಸವಾಲು. ಜನತಾದಳ ಪಕ್ಷವನ್ನು ದಡ ಮುಟ್ಟಿಸಬೇಕು. ನಾನು ಶಾಸಕನಾಗಬೇಕು ಎನ್ನುವುದು ನನ್ನ ಮುಂದೆ ಇರುವ ಪ್ರಶ್ನೆ ಅಲ್ಲ. ಪ್ರಾದೇಶಿಕ ಪಕ್ಷ ಉಳಿಯಬೇಕಿದೆ. ಕನ್ನಡಿಗರ ಅಸ್ಮಿತೆಗಾಗಿ ಈ ಪಕ್ಷ ಉಳಿಯಬೇಕಿದೆ. ಆ ಹಿನ್ನೆಲೆಯಲ್ಲಿ ಹೋರಾಟ ಮಾಡುತ್ತೇನೆ. ಕೊನೆ ಉಸಿರು ಇರುವವರೆಗೂ ಹೋರಾಡುತ್ತೇನೆ. ಮಾತನಾಡಲು ವೇದಿಕೆಗಳು ಮುಂದಿನ ದಿನಗಳಲ್ಲಿ ಸಜ್ಜಾಗುತ್ತದೆ. ಹೋರಾಟ ಎನ್ನುವುದನ್ನು ರಕ್ತಗತವಾಗಿ ಮೈಗೂಡಿಸಿಕೊಂಡಿದ್ದೇನೆ. ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಒಬ್ಬ ಯುವಕನಾಗಿ ನಿಖಿಲ್ ಕುಮಾರಸ್ವಾಮಿ ನಿಮ್ಮ ಜೊತೆಯಲ್ಲಿ ಪ್ರಾಮಾಣಿಕವಾಗಿ ಇರುತ್ತಾನೆ ಎಂದು ಭರವಸೆ ನೀಡಿದರು.

ಬೆಂಗಳೂರು

ವೇತನ ವಿವಾದದಲ್ಲಿ ಸಿಎಂ ಸ್ಪಷ್ಟನೆ: 14 ತಿಂಗಳ ಹಿಂಬಾಕಿಗೆ ಮಾತ್ರ ಸರ್ಕಾರ ಸಿದ್ಧ

ಬೆಂಗಳೂರು: ಸಾರಿಗೆ ನೌಕರರ 38 ತಿಂಗಳ ವೇತನ ಹಿಂಬಾಕಿ ಪಾವತಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. “ಈ ಬೇಡಿಕೆ ಸಮಂಜಸವಲ್ಲ. ಸರ್ಕಾರ ಕೇವಲ 14 ತಿಂಗಳ ಹಿಂಬಾಕಿಗೆ ಸಿದ್ಧ” ಎಂದು ಅವರು ಮಂಗಳವಾರ ವಿಧಾನಸೌಧದಲ್ಲಿ ನಡೆದ ಸಂಧಾನ ಸಭೆಯಲ್ಲಿ ತಿಳಿಸಿದ್ದಾರೆ.

2020ರಿಂದ 2023ರ ಫೆಬ್ರವರಿವರೆಗಿನ ಬಾಕಿ ವೇತನ ಪಾವತಿಗೆ ನೌಕರ ಸಂಘಗಳು ಒತ್ತಾಯಿಸಿದ್ದರೊಂದಿಗೆ, 2024ರಿಂದ ನೂತನ ವೇತನವನ್ನೂ ಜಾರಿಗೆ ತರುವಂತೆ ಒತ್ತಾಯಿಸಲಾಗಿದೆ. ಈ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, “ನಿಗಮಗಳ ಆರ್ಥಿಕ ಪರಿಸ್ಥಿತಿ ಮತ್ತು ಹಿಂದಿನ ಸರ್ಕಾರದ ಆದೇಶಗಳ ದೋಷಗಳನ್ನು ಪರಿಗಣಿಸಿ 14 ತಿಂಗಳ ವೇತನ ಹಿಂಬಾಕಿಗೆ ಸಮ್ಮತಿಯಿದೆ,” ಎಂದು ಸ್ಪಷ್ಟಪಡಿಸಿದರು.

ವೇತನ ಪರಿಷ್ಕರಣೆ ಪಶ್ಚಾತ್ಪಟ
2016ರಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ 12.5% ವೇತನ ಹೆಚ್ಚಳ ಜಾರಿಗೆ ಬಂದಿತ್ತು. ಆದರೆ 2020ರ ಕೋವಿಡ್ ಕಾರಣದಿಂದ ಆ ವೇಳೆಗೆ ಯಾವುದೇ ಪರಿಷ್ಕರಣೆ ಆಗಿರಲಿಲ್ಲ. ನಂತರದ ಕಾಂಗ್ರೆಸ್ ಸರ್ಕಾರದಲ್ಲಿ ಶ್ರೀನಿವಾಸ ಮೂರ್ತಿ ಸಮಿತಿ ಶಿಫಾರಸ್ಸಿನಂತೆ 2022ರ ಜೂನ್‌ 01ರಿಂದ 2023ರ ಫೆಬ್ರವರಿವರೆಗೆ ಹಿಂಬಾಕಿ ಪಾವತಿ ಮಾಡಲು ತೀರ್ಮಾನಿಸಲಾಗಿತ್ತು.

ಸರ್ಕಾರದ ಆರ್ಥಿಕ ಹೊಣೆಗಾರಿಕೆ
ಸಿದ್ದರಾಮಯ್ಯ ಅವರು ಹೇಳಿದ್ದಾರೆ: “ನಾವು ಅಧಿಕಾರಕ್ಕೆ ಬಂದಾಗ ನಿಗಮಗಳಿಗೆ ಒಟ್ಟಾರೆ ₹4000 ಕೋಟಿ ಸಾಲ ಇತ್ತು. 2018 ರಲ್ಲಿ ಈ ಮೊತ್ತ ಕೇವಲ ₹14 ಕೋಟಿ ಮಾತ್ರ ಇತ್ತು. ಯಾವುದೇ ನಿಗಮ ಲಾಭದಲ್ಲಿ ಇಲ್ಲ.” ಅಂತಹ ಪರಿಸ್ಥಿತಿಯಲ್ಲಿ ಎಲ್ಲಾ ನೌಕರರ ಬೇಡಿಕೆಗಳನ್ನು ಈಡೇರಿಸಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.

ಸಂಘದ ಚುನಾವಣೆ ಮತ್ತು ಮುಂದಿನ ಕ್ರಮ
ಸಾರಿಗೆ ನೌಕರರ ಸಂಘದ ಚುನಾವಣೆ ಹಾಗೂ ಬೇಡಿಕೆಗಳ ಕುರಿತಂತೆ ಸರ್ಕಾರ ಪರಿಶೀಲನೆ ನಡೆಸಲಿದ್ದು, ಮಾತುಕತೆ ಮೂಲಕ ಎಲ್ಲ ಅಹವಾಲುಗಳನ್ನು ಬಗೆಹರಿಸಲು ಸಿದ್ಧವಾಗಿದೆ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.

Continue Reading

ಬೆಂಗಳೂರು

ಸಾರಿಗೆ ನೌಕರರ ಮುಷ್ಕರ ಆರಂಭ: ಡಿಸಿಎಂ ಡಿ.ಕೆ.ಶಿವಕುಮಾರ್ ಮನವಿ – “ಹಠವಿಲ್ಲದೆ ಸಹಕಾರ ನೀಡಿ”

ಬೆಂಗಳೂರು: ಹಲವಾರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದಿನಿಂದ ಸಾರಿಗೆ ನೌಕರರು ಮುಷ್ಕರಕ್ಕೆ (Transport Employees Strike) ಇಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ತಮ್ಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, “ಸಾರಿಗೆ ನೌಕರರು ಕೇಳಿರುವ ಬೇಡಿಕೆಯಲ್ಲಿ ತಪ್ಪಿಲ್ಲ. ಆದರೆ ಸರ್ಕಾರದ ಪರಿಸ್ಥಿತಿಯನ್ನೂ ಅವರು ಗಮನದಲ್ಲಿಟ್ಟುಕೊಳ್ಳಬೇಕು. ಹಠವಿಲ್ಲದೆ ಸಹಕಾರ ನೀಡಬೇಕು” ಎಂದು ಹೇಳಿದ್ದಾರೆ. ಮುಖ್ಯಮಂತ್ರಿಗಳು ಹಾಗೂ ಸಚಿವರು ನೌಕರರೊಂದಿಗೆ ಸಭೆ ನಡೆಸಿದ್ದಾರೆ ಎಂಬುದನ್ನು ಅವರು ನೆನಪಿಸಿದ್ದಾರೆ.

“ಸಾರ್ವಜನಿಕರ ಹಿತವೇ ಮೊದಲಾದ್ದು. ಕೆಲವು ನೌಕರರು ಈಗಾಗಲೇ ಕೆಲಸಕ್ಕೆ ಹಾಜರಾಗಿದ್ದಾರೆ. ಅವರಿಗೆ ಅಭಿನಂದನೆ” ಎಂದು ಡಿಸಿಎಂ ಹೇಳಿದ್ದಾರೆ.

ಇತ್ತ, ಹಳದಿ ಮೆಟ್ರೊ ಮಾರ್ಗದ (Yellow Metro Line) ಉದ್ಘಾಟನೆಯ ಕುರಿತು ಮಾತನಾಡಿದ ಡಿ.ಕೆ.ಶಿವಕುಮಾರ್, “ಪ್ರಧಾನಿ ನರೇಂದ್ರ ಮೋದಿ (Narendra Modi) ಆಗಸ್ಟ್ 10ರಂದು ಬರುವ ಸಾಧ್ಯತೆ ಇದೆ. ನಾವು ಈಗಾಗಲೇ ತಯಾರಿ ಪರಿಶೀಲನೆ ಆರಂಭಿಸಿದ್ದೇವೆ. ಕಾರ್ಯಕ್ರಮದ ಅಧಿಕೃತ ಸಮಯ ಇನ್ನೂ ಘೋಷಣೆಯಾಗಿಲ್ಲ” ಎಂದು ತಿಳಿಸಿದ್ದಾರೆ.

ಇದೇ ದಿನ ಬಿಜೆಪಿ ವತಿಯಿಂದ ರೈಲ್ವೆ ಸಂಬಂಧಿತ ಕಾರ್ಯಕ್ರಮವೂ ನಡೆಯಲಿದೆ ಎಂದು ಅವರು ಹೇಳಿದ್ದಾರೆ.

Continue Reading

ಬೆಂಗಳೂರು

ಕೆಆರ್‌ಎಸ್ ಡ್ಯಾಂ ಕಟ್ಟಲು ಮೈಸೂರಿನ ರಾಜಮಾತೆಯ ತ್ಯಾಗ: ಟಿಪ್ಪು ವಿವಾದದ ನಡುವೆ ಪೀಠಾಧಿಪತಿಯ ಸ್ಪಷ್ಟನೆ!

ರಾಯಚೂರು: ಕಾವೇರಿ ನದೀಪ್ರಾಂತ್ಯದ ಜನರಿಗೆ ನೀರಿನ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಮೈಸೂರಿನ ರಾಜಮಾತೆ ತಮ್ಮ ಆಭರಣಗಳನ್ನು ಮಾರಾಟ ಮಾಡಿ ಕೆಆರ್‌ಎಸ್ ಡ್ಯಾಂವನ್ನು ನಿರ್ಮಿಸಿದರು ಎಂದು ಗುರುರಾಘವೇಂದ್ರ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿ ಹೇಳಿದ್ದಾರೆ.

ಮಂತ್ರಾಲಯದಲ್ಲಿ ಮಾತನಾಡಿದ ಅವರು, ಕೆಆರ್‌ಎಸ್ ಜಲಾಶಯಕ್ಕೆ ಟಿಪ್ಪು ಸುಲ್ತಾನ್ ಅಡಿಗಲ್ಲು ಹಾಕಿದ್ದಾರೆ ಎಂಬ ಸಚಿವ ಮಹಾದೇವಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, “ಇದು ರಾಜಮನೆತನದ ತ್ಯಾಗದ ಫಲ. ಇತಿಹಾಸವನ್ನು ನಿಖರವಾಗಿ ತಿಳಿದುಕೊಳ್ಳಬೇಕಾದದ್ದು ಇತಿಹಾಸ ತಜ್ಞರ ಕೆಲಸ” ಎಂದು ಹೇಳಿದರು.

ಇದೇ ವೇಳೆ ಧರ್ಮಸ್ಥಳದ ತಾತ್ಕಾಲಿಕ ವಿವಾದಗಳ ಕುರಿತು ಮಾತನಾಡಿದ ಶ್ರೀಗಳು, “ಧಾರ್ಮಿಕ ಕ್ಷೇತ್ರಗಳ ಪಾವಿತ್ರ್ಯತೆಗಿಂತ ವ್ಯವಸ್ಥೆ ಬಗ್ಗೆ ಚರ್ಚೆ ಮಾಡಬೇಕು. ಜನ ಭಕ್ತಿಯಿಂದ ನಂಬುವ ಕ್ಷೇತ್ರಗಳನ್ನು ರಾಜಕೀಯವಾಗಿಸಬಾರದು” ಎಂದು ಎಚ್ಚರಿಸಿದರು.

ಸಾರಿಗೆ ನೌಕರರ ಮುಷ್ಕರದ ವಿಚಾರಕ್ಕೂ ಪ್ರತಿಕ್ರಿಯೆ ನೀಡಿದ ಅವರು, “ಅವರ ಬೇಡಿಕೆಗಳನ್ನು ಸರಕಾರ ಗಂಭೀರವಾಗಿ ಪರಿಗಣಿಸಬೇಕು. ಭಕ್ತರಿಗೆ ತೊಂದರೆಯಾಗದಂತೆ ಸೂಕ್ತ ಪರಿಹಾರ ಒದಗಿಸಲಿ” ಎಂದಿದ್ದಾರೆ.

ಇದಕ್ಕೂ ಮುನ್ನ ಸಚಿವ ಎಚ್.ಸಿ. ಮಹಾದೇವಪ್ಪ ಟಿಪ್ಪು ಸುಲ್ತಾನ್ ಕನ್ನಂಬಾಡಿ ಡ್ಯಾಂಗೆ ಅಡಿಗಲ್ಲು ಹಾಕಿದರೆಂದು ಹೇಳಿಕೆ ನೀಡಿದ್ದರು. ಆದರೆ, ಇತಿಹಾಸವನ್ನ ತಿರುವುಮಾಡುವುದು ಸರಿಯಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

Continue Reading

Trending