Connect with us

ಬೆಂಗಳೂರು

ಒಪ್ಪಂದ ಆಗಿದ್ದರೆ ಅವರಿಬ್ಬರೇ ರಾಜಕಾರಣ ನಡೆಸಲಿ, ನಾವೆಲ್ಲ ಯಾಕಿರಬೇಕು?: ಸಚಿವ ಜಿ.ಪರಮೇಶ್ವರ್

Published

on

ಬೆಂಗಳೂರು: ”ರಾಜ್ಯದಲ್ಲಿ ಅಧಿಕಾರ ಹಂಚಿಕೆ ಬಗ್ಗೆ ಒಪ್ಪಂದ ಆಗಿರುವ ವಿಚಾರ ನನಗೆ ಗೊತ್ತಿಲ್ಲ. ಒಪ್ಪಂದ ಆಗಿದೆ ಎನ್ನುವುದಾದರೆ ನಾವೆಲ್ಲ ಯಾಕಿರಬೇಕು?. ಅವರಿಬ್ಬರೇ ರಾಜಕಾರಣ ನಡೆಸಲಿ. ಬೇರೆಯವರು ಇರುವುದೇ ಬೇಡವೇ?. ಆ ರೀತಿ ಒಪ್ಪಂದ ಆಗಿರಲು ಸಾಧ್ಯವಿಲ್ಲ” ಎಂದು ಗೃಹ ಸಚಿವ ಸಚಿವ ಜಿ.ಪರಮೇಶ್ವರ್ ಸೂಚ್ಯವಾಗಿ ಪ್ರತಿಕ್ರಿಯಿಸಿದ್ದಾರೆ.

ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಹುದ್ದೆ ಒಪ್ಪಂದ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ”ಈ ಬಗ್ಗೆ ದೆಹಲಿ ಮತ್ತು ರಾಜ್ಯದಲ್ಲಿ ಇಬ್ಬರು, ಮೂವರನ್ನು ಕೇಳಿದ್ದೇನೆ. ಒಪ್ಪಂದ ಆಗಿದೆ ಅಂತ ಯಾರು ಹೇಳಿಲ್ಲ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಯಾವ ಅರ್ಥದಲ್ಲಿ ಹೇಳಿದ್ದಾರೋ ನನಗೆ ಗೊತ್ತಿಲ್ಲ. ಅಂತಹ ಒಪ್ಪಂದ ಆಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ಸ್ಪಷ್ಟವಾಗಿ ಹೇಳಿದ್ದಾರೆ” ಎಂದರು.

”ಒಪ್ಪಂದ ಆಗಿರಲು ಸಾಧ್ಯವಿಲ್ಲ. ಹೈಕಮಾಂಡ್ ಅಂತಿಮವಾಗಿ ಏನು ತೀರ್ಮಾನ ಮಾಡುತ್ತದೆಯೋ ಅದಕ್ಕೆ ನಾವು ಬದ್ಧವಾಗಿರುತ್ತೇವೆ. ನಾವ್ಯಾರೂ ಕೂಡ ಹೈಕಮಾಂಡ್ ಅನ್ನು ಬಿಟ್ಟು ಹೋದವರಲ್ಲ‌. ಹೈಕಮಾಂಡ್ ಏನು ತೀರ್ಮಾನ ಮಾಡುತ್ತದೆಯೋ ಅದನ್ನು ಒಪ್ಪಿಕೊಳ್ಳುತ್ತೇವೆ” ಎಂದು ತಿಳಿಸಿದರು.

ಸಮಾವೇಶದ ಬಗ್ಗೆ ಯಾವುದೇ ಗೊಂದಲ ಇಲ್ಲ: ”ಕೆಪಿಸಿಸಿ ಮತ್ತು ಸ್ವಾಭಿಮಾನಿಗಳ ಒಕ್ಕೂಟ ಒಟ್ಟಾಗಿ ಸಮಾವೇಶ ಮಾಡುತ್ತಿದ್ದು, ಯಾವುದೇ ಗೊಂದಲಗಳು ಇಲ್ಲ‌. ಕಾಂಗ್ರೆಸ್ ಪಕ್ಷ‌ ಮತ್ತು ಸರ್ಕಾರದ ಮೇಲೆ ಸ್ವಾಭಿಮಾನಿ ಒಕ್ಕೂಟಕ್ಕೆ ಸಹಾನುಭೂತಿ ಇದೆ. ಹೀಗಾಗಿ, ಒಟ್ಟಿಗೆ ಸಮಾವೇಶ ಮಾಡುತ್ತಿದ್ದು, ಇದರಲ್ಲಿ ಯಾವುದೇ ಗೊಂದಲವಿಲ್ಲ. ಗೊಂದಲ ಇದೆ ಎಂಬಂತೆ ಅವರಿರವರು ಸೃಷ್ಟಿ ಮಾಡುತ್ತಿದ್ದಾರೆ” ಎಂದು ಹೇಳಿದರು.

ಪ್ರತಿಪಕ್ಷದವರ ಆಪಾದನೆಗಳಿಗೆ ರಾಜಕೀಯವಾಗಿ ಉತ್ತರ: ”ನಾವು ರಾಜ್ಯದ ಜನತೆಗೆ ಚುನಾವಣೆಯ ಸಂದರ್ಭದಲ್ಲಿ ರಾಜಕೀಯವಾಗಿ ಏನೆಲ್ಲ ಮಾತನಾಡಿದ್ದೇವೆ, ಅದೆಲ್ಲವನ್ನು ನಾವು ಜನಗಳಿಗೆ ಹೇಳಬೇಕು. ಸರ್ಕಾರದ ಕಾರ್ಯಕ್ರಮಗಳಲ್ಲಿ ಅನೇಕ ರಾಜಕೀಯ ವಿಚಾರಗಳನ್ನು ಪ್ರಸ್ತಾಪ ಮಾಡಲು ಆಗುವುದಿಲ್ಲ. ಅದಕ್ಕಾಗಿ ಈ ಸಮಾವೇಶದಲ್ಲಿ ರಾಜಕೀಯ ವಿಚಾರಗಳನ್ನು ಪ್ರಸ್ತಾಪ‌ ಮಾಡುತ್ತೇವೆ. ಜನಗಳಿಗೆ ಸತ್ಯಾಂಶ ಗೊತ್ತಾಗಬೇಕು. ಅನೇಕ ವಿಚಾರದಲ್ಲಿ ಪ್ರತಿಪಕ್ಷದವರು ಮಾಡುವ ಆಪಾದನೆಗಳಿಗೆ ರಾಜಕೀಯವಾಗಿ ಉತ್ತರ ಕೊಡುತ್ತೇವೆ” ಎಂದು ಪ್ರತಿಕ್ರಿಯಿಸಿದರು.

”ಕಾಂಗ್ರೆಸ್‌ ಪಕ್ಷದ ಸಮಾವೇಶ ಆಗಿರುವುದರಿಂದ ಯಾವುದೇ ಬಣ ಇಲ್ಲ. ಬಿಜೆಪಿಯಲ್ಲಿ ಮೂರು ಬಣ ಮಾಡಿಕೊಂಡಿದ್ದರಲ್ಲ. ಆ ರೀತಿ ನಮ್ಮ ಪಕ್ಷದಲ್ಲಿ ಬಣ ಇಲ್ಲ. ನಾವೆಲ್ಲ ಒಟ್ಟಿಗಿದ್ದೇವೆ, ಒಟ್ಟಾಗಿ ಆಡಳಿತ ಮಾಡುತ್ತಿದ್ದೇವೆ. ಬಿಜೆಪಿ ಮತ್ತು ಜೆಡಿಎಸ್‌ನವರು ನಮ್ಮನ್ನು ಜನಸಮುದಾಯದಿಂದ ಬೇರ್ಪಡಿಸಲು ಪ್ರಯತ್ನ ಮಾಡಬಹುದು. ಅದು ಸಾಧ್ಯವಾಗುವುದಿಲ್ಲ” ಎಂದರು.

ಕುಮಾರಸ್ವಾಮಿಗೆ ಸಂದರ್ಭ ಬಂದಾಗ ಪ್ರತಿಕ್ರಿಯೆ: ”ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರು ಅನೇಕ ವಿಚಾರಗಳನ್ನು ಪ್ರಸ್ತಾಪ ಮಾಡುತ್ತಾರೆ. ಅದಕ್ಕೆಲ್ಲ‌ ನಾವು ಉತ್ತರ ಕೊಡಬೇಕಿಲ್ಲ. ಅವರು ತಮ್ಮ ಅಭಿಪ್ರಾಯವನ್ನು ಹೇಳಿಕೊಂಡಿರುತ್ತಾರೆ. ಸಂದರ್ಭ ಬಂದಾಗ ನಾವು ಉತ್ತರ ಕೊಡುತ್ತೇವೆ‌” ಎಂದು ತಿಳಿಸಿದರು.

ಕ್ರೀಡೆ

ವಾಂಖೆಡೆನಲ್ಲಿ RCB ದಬ್ಬಾಳಿಕೆ: ಚಿನ್ನಸ್ವಾಮಿ ಕಾದಿದೆ!

Published

on

By

ಮುಂಬೈ: Indian Premier League 2026ರ ಪಂದ್ಯದಲ್ಲಿ Royal Challengers Bengaluru ತಂಡವು Mumbai Indians ವಿರುದ್ಧ 18 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ RCB ತನ್ನ ಇತಿಹಾಸದಲ್ಲೇ ಅತಿ ಹೆಚ್ಚು ಮೊತ್ತವನ್ನು ದಾಖಲಿಸಿದೆ.

ಈ ಪಂದ್ಯದಲ್ಲಿ Phil Salt 36 ಎಸೆತಗಳಲ್ಲಿ 78 ರನ್ ಸಿಡಿಸಿ ‘ಪ್ಲೇಯರ್ ಆಫ್ ದ ಮ್ಯಾಚ್’ ಪ್ರಶಸ್ತಿ ಪಡೆದರು. ನಾಯಕ Rajat Patidar ಕೇವಲ 20 ಎಸೆತಗಳಲ್ಲಿ 53 ರನ್ ಸಿಡಿಸಿ ತಂಡಕ್ಕೆ ಬಲವಾದ ವೇದಿಕೆ ಒದಗಿಸಿದರು. ಪಾಟಿದಾರ್ 17 ಎಸೆತಗಳಲ್ಲಿ ಅರ್ಧಶತಕ ಪೂರೈಸಿ ಟೂರ್ನಿಯ ಇತಿಹಾಸದಲ್ಲೇ ವೇಗವಾದ ಫಿಫ್ಟಿ ಸಿಡಿಸಿದ ನಾಯಕ ಎಂಬ ದಾಖಲೆ ನಿರ್ಮಿಸಿದರು.

ಬೌಲಿಂಗ್ ವಿಭಾಗದಲ್ಲಿ Krunal Pandya (1/26) ಮತ್ತು Suyash Sharma (2/47) ಪ್ರಮುಖ ಪಾತ್ರವಹಿಸಿ ಮುಂಬೈ ತಂಡವನ್ನು ನಿಯಂತ್ರಿಸಿದರು.

ಪಂದ್ಯದ ಬಳಿಕ ಮಾತನಾಡಿದ ಪಾಟಿದಾರ್, “ಪ್ರತಿ ಪಂದ್ಯದಲ್ಲೂ 200ಕ್ಕೂ ಹೆಚ್ಚು ರನ್‌ಗಳು ಬರುತ್ತಿವೆ. ಇದು ತಂಡಕ್ಕೆ ಆತ್ಮವಿಶ್ವಾಸ ಹೆಚ್ಚಿಸುತ್ತಿದೆ” ಎಂದು ಹೇಳಿದರು. ತಮ್ಮ ಬ್ಯಾಟಿಂಗ್ ಬಗ್ಗೆ ಮಾತನಾಡಿ, “ನಾನು ಬಾಲ್‌ಗೆ ಪ್ರತಿಕ್ರಿಯಿಸುತ್ತೇನೆ, ಸ್ಪಷ್ಟತೆಯಿಂದ ಆಟ ಆಡುತ್ತೇನೆ” ಎಂದು ತಿಳಿಸಿದ್ದಾರೆ.

ಕೃಣಾಲ್ ಪಾಂಡ್ಯಾ ತಂಡದ ಬ್ಯಾಟಿಂಗ್ ಶಕ್ತಿಯನ್ನು ಮೆಚ್ಚಿ, “ವಿರಾಟ್, ಸಾಲ್ಟ್, ಟಿಮ್ ಎಲ್ಲರೂ ಕೊಡುಗೆ ನೀಡಿದ್ದಾರೆ” ಎಂದರು. ಕೋಚ್ Malolan Rangarajan ರಸಿಖ್‌ರ ಹೋರಾಟ ಮನೋಭಾವವನ್ನು ಶ್ಲಾಘಿಸಿದರು.

ಈ ಗೆಲುವಿನೊಂದಿಗೆ RCB ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದ್ದು, ಮುಂದಿನ ಚಿನ್ನಸ್ವಾಮಿ ಪಂದ್ಯಕ್ಕಾಗಿ ಕಾತುರವಾಗಿದೆ.

Continue Reading

ದೇಶ

ಕಾಂಗ್ರೆಸ್‌ನಲ್ಲಿ ಭೂಕಂಪ: ನಜೀರ್ ಅಹ್ಮದ್‌ಗೆ ಸುರ್ಜೇವಾಲಾ ಅಲ್ಟಿಮೇಟಂ

Published

on

By

ಬೆಂಗಳೂರು: ಕಾಂಗ್ರೆಸ್‌ನಲ್ಲಿ ಒಳಅಸಮಾಧಾನ ತೀವ್ರಗೊಂಡಿರುವ ನಡುವೆಯೇ, ರಾಜ್ಯ ಉಸ್ತುವಾರಿ Randeep Singh Surjewala ಅವರು ಸಿಎಂ ರಾಜಕೀಯ ಕಾರ್ಯದರ್ಶಿ Naseer Ahmed ಅವರಿಗೆ ಕಠಿಣ ಡೆಡ್‌ಲೈನ್ ನೀಡಿದ್ದಾರೆ.

ಇಂದು (ಏಪ್ರಿಲ್ 13) ಸಂಜೆಯೊಳಗೆ ರಾಜೀನಾಮೆ ಸಲ್ಲಿಸುವಂತೆ ಸೂಚಿಸಿರುವ ಸುರ್ಜೇವಾಲಾ, ಸಮಯಕ್ಕೆ ರಾಜೀನಾಮೆ ನೀಡದಿದ್ದರೆ ಅವರನ್ನು ಸ್ಥಾನದಿಂದ ವಜಾಗೊಳಿಸಲು ಮುಖ್ಯಮಂತ್ರಿ Siddaramaiah ಅವರಿಗೆ ಶಿಫಾರಸು ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಇದಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿ, “ನಸೀರ್ ಅಹ್ಮದ್ ಇನ್ನೂ ರಾಜೀನಾಮೆ ನೀಡಿಲ್ಲ. ಮುಂದಿನ ದಿನಗಳಲ್ಲಿ ಕೊಡಬಹುದು. ಕಾಂಗ್ರೆಸ್ ಸೋಲನ್ನು ಒಪ್ಪಿಕೊಂಡಿಲ್ಲ. ಉಪಚುನಾವಣೆಯಲ್ಲಿ ನಾವು ಗೆಲ್ಲುತ್ತೇವೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು.

ದಾವಣಗೆರೆ ದಕ್ಷಿಣ ಉಪಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷದೊಳಗಿನ ಭಿನ್ನಾಭಿಪ್ರಾಯಗಳು ಹೆಚ್ಚಾಗಿದ್ದು, ಕೆಲವು ನಾಯಕರ ಹೇಳಿಕೆಗಳು ವಿವಾದಕ್ಕೆ ಕಾರಣವಾಗಿವೆ. ನಸೀರ್ ಅಹ್ಮದ್ ಅವರು ಪಕ್ಷ ವಿರೋಧಿ ಚಟುವಟಿಕೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರೆಂದು ಸಿಎಂ ಹೇಳಿದ್ದಾರೆ.

ಇದಕ್ಕೂ ಮೊದಲು ಸುರ್ಜೇವಾಲಾ ಅವರು ಸಚಿವ Zameer Ahmed Khan, Abdul Jabbar ಹಾಗೂ ನಸೀರ್ ಅಹ್ಮದ್ ವಿರುದ್ಧ ವರದಿ ಸಲ್ಲಿಸಿದ್ದರು. ಈಗಾಗಲೇ ಅಬ್ದುಲ್ ಜಬ್ಬಾರ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದು, ಅದನ್ನು D. K. Shivakumar ಅಂಗೀಕರಿಸಿದ್ದಾರೆ.

ಈ ಬೆಳವಣಿಗೆ ಕಾಂಗ್ರೆಸ್ ಒಳರಾಜಕೀಯದಲ್ಲಿ ಮತ್ತಷ್ಟು ಚರ್ಚೆಗೆ ಕಾರಣವಾಗಿದ್ದು, ಮುಂದಿನ ಕ್ರಮಗಳ ಮೇಲೆ ಎಲ್ಲರ ಕಣ್ಣು ನೆಟ್ಟಿದೆ.

Continue Reading

ದೇಶ

ಸಚಿವ ಸ್ಥಾನ ಕೇಳೋದು ತಪ್ಪಲ್ಲ: ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ

Published

on

By

ಬೆಂಗಳೂರು: ಹಿರಿಯ ಶಾಸಕರು ಸಚಿವ ಸ್ಥಾನ ಕೇಳುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಗೃಹ ಸಚಿವ G. Parameshwara ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಅದೇನು ಗ್ಯಾಂಬ್ಲಿಂಗ್ ಅಲ್ಲ, ಶಾಸಕರು ತಮ್ಮ ಅರ್ಹತೆಯ ಆಧಾರದಲ್ಲಿ ಕೇಳುತ್ತಿದ್ದಾರೆ” ಎಂದು ಹೇಳಿದ್ದಾರೆ.

ಎರಡು ಮೂರು ಬಾರಿ ಗೆದ್ದಿರುವ ಶಾಸಕರು ಸಚಿವರಾಗಲು ಸಮರ್ಥರು. ಹೀಗಾಗಿ ಸಚಿವ ಸ್ಥಾನಕ್ಕಾಗಿ ಕೇಳುವುದು ಸಹಜ. ಆದರೆ ಅಂತಿಮ ನಿರ್ಧಾರ ಮುಖ್ಯಮಂತ್ರಿ ಮತ್ತು ಹೈಕಮಾಂಡ್ ಕೈಯಲ್ಲಿದೆ ಎಂದು ಅವರು ತಿಳಿಸಿದ್ದಾರೆ.

ಪಕ್ಷ ಪುನಾರಚನೆ ಕುರಿತು ಮಾತನಾಡಿದ ಪರಮೇಶ್ವರ್, “ನಾಯಕತ್ವ ವಿಚಾರವಾಗಲಿ, ಸಚಿವ ಸಂಪುಟ ಪುನಾರಚನೆ ಆಗಲಿ, ಎಲ್ಲವೂ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಬಹಿರಂಗವಾಗಿ ಕೇಳುವುದರಲ್ಲಿ ತಪ್ಪೇನಿಲ್ಲ” ಎಂದು ಹೇಳಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನ ಕುರಿತು ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಈಗ ಪುನಾರಚನೆ ಚರ್ಚೆ ನಡೆಯುತ್ತಿದೆ. ಅಧ್ಯಕ್ಷ ಸ್ಥಾನ ವಿಚಾರವನ್ನು ಹೈಕಮಾಂಡ್‌ಗೆ ಬಿಟ್ಟಿದ್ದೇವೆ” ಎಂದು ಹೇಳಿದರು.

ಇನ್ನೂ ದಾವಣಗೆರೆ ಕ್ಷೇತ್ರದಲ್ಲಿ Abdul Jabbar ಅವರಿಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನ ವ್ಯಕ್ತವಾಗಿದ್ದು, ಅವರು ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವುದನ್ನು ಉಲ್ಲೇಖಿಸಿದರು. D. K. Shivakumar ಹೊಸ ಸಮಿತಿ ರಚನೆ ಮಾಡಲಿದ್ದಾರೆ ಎಂದು ತಿಳಿಸಿದರು.

ಪುನಾರಚನೆ ನಡೆದರೆ ಹಿರಿಯರು ಸ್ಥಾನ ಬಿಟ್ಟುಕೊಡಬೇಕಾದರೆ ನಾವು ಒಪ್ಪಲೇಬೇಕು. ಹೈಕಮಾಂಡ್ ತೀರ್ಮಾನಕ್ಕೆ ಯಾರೂ ವಿರೋಧಿಸುವ ಪ್ರಶ್ನೆಯೇ ಇಲ್ಲ ಎಂದು ಪರಮೇಶ್ವರ್ ಹೇಳಿದ್ದಾರೆ.

Continue Reading

Trending