Connect with us

ರಾಜಕೀಯ

ಪ್ರತಿಪಕ್ಷ ನಾಯಕ ಅಶೋಕ್‌ ಕಾರ್ಯವೈಖರಿಗೆ ಬಿಜೆಪಿಯಲ್ಲೇ ಅಪಸ್ವರ!

ಬೆಳಗಾವಿ: ವಿಧಾನ ಸಭೆಯ ಪ್ರತಿಪಕ್ಷ ನಾಯಕ ಆರ್ ಅಶೋಕ್ (R Ashok) ಕಾರ್ಯವೈಖರಿಗೆ ಬಿಜೆಪಿಯಲ್ಲೇ (BJP) ಅಪಸ್ವರ ಕೇಳಿಬಂದಿದೆ. ಬಿಜೆಪಿಯ ಕೆಲ ಶಾಸಕರು ಅಶೋಕ್ ಕಳೆದ ವಾರ ನಡೆದ ಕಲಾಪಗಳಲ್ಲಿ ಸರಿಯಾಗಿ ಕಾರ್ಯನಿರ್ವಹಣೆ ಮಾಡಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಮುಖ್ಯವಾಗಿ ಆರ್‌ಎಸ್‌ಎಸ್ (RSS) ಮತ್ತು ಪಂಚಮಸಾಲಿ ಮೀಸಲಾತಿ ವಿಚಾರದಲ್ಲಿ (Panchamasali Reservation) ಅಶೋಕ್ ನಡೆಗೆ ಕಮಲ ಶಾಸಕರು ಅತೃಪ್ತಿ ಹೊಂದಿರುವ ವಿಚಾರ ಮೂಲಗಳಿಂದ ಪಬ್ಲಿಕ್‌ ಟಿವಿಗೆ ತಿಳಿದುಬಂದಿದೆ.

ಅಸಮಾಧಾನ ಯಾಕೆ?
ಪಂಚಮಸಾಲಿ ಮೀಸಲಾತಿ ಪ್ರತಿಭಟನೆಯ ವೇಳೆ ಆರ್‌ಎಸ್‌ಎಸ್‌ನವರು ಬಂದು ಕಲ್ಲು ಹೊಡೆದರು ಎಂಬ ವಿಜಯಾನಂದ ಕಾಶಪ್ಪನವರ್ (Vijayanand Kashappanavar) ಹೇಳಿಕೆಗೆ ಸಂಘದ ಹಿನ್ನೆಲೆಯ ಶಾಸಕರು ಬೇಸರ ವ್ಯಕ್ತಪಡಿಸಿದ್ದಾರೆ. ಕಾಶಪ್ಪನವರ್ ಹಾಗೂ ಕಾಂಗ್ರೆಸ್ ವಿರುದ್ಧ ಅಶೋಕ್ ಅವರು ಸರಿಯಾಗಿ ಖಂಡಿಸಿ ತಿರುಗೇಟು ನೀಡಬೇಕಿತ್ತು. ಆದರೆ ಅಶೋಕ್‌ ಸರಿಯಾಗಿ ಹೇಳಿಕೆಯನ್ನು ಖಂಡಿಸಲಿಲ್ಲ.

ಸ್ಪೀಕರ್ ಅವರು ಪಕ್ಷಪಾತಿ ಧೋರಣೆ ತಳೆದಿರುವ ಆರೋಪ ವಿಚಾರದಲ್ಲೂ ಶಾಸಕರಿಗೆ ಅಶೋಕ್ ಸಾಥ್‌ ಕೊಡಲಿಲ್ಲ. ಸ್ಪೀಕರ್ ಕಚೇರಿಗೆ ಘೇರಾವ್ ಹಾಕಲು ಕೆಲ ಶಾಸಕರು ಮುಂದಾದಾಗ ಅಶೋಕ್ ದ್ವಂದ್ವ ಮನಸ್ಸಿನಿಂದ ಸಹಕಾರ ನೀಡಿದ್ದರು.

ಬೆಳಿಗ್ಗೆ ಚರ್ಚೆ ಮಾಡಿ ಬಂದಿರುತ್ತೇವೆ. ಆದರೆ ಸದನ ನಡೆಯುವಾಗ ಬೇರೆಯೇ ಆಗಿರುತ್ತದೆ. ಆಡಳಿತ ಪಕ್ಷದ ಕೆಲವು ಸದಸ್ಯರು ಚರ್ಚೆ ಹಳಿ ತಪ್ಪಿಸಲು ಪದೇ ಪದೇ ವಾಗ್ದಾಳಿ ನಡೆಸುತ್ತಲೇ ಇರುತ್ತಾರೆ. ಅವರ ಬಾಯಿ ಮುಚ್ಚಿಸುವ ಕೆಲಸ ಮಾಡುವುದಿಲ್ಲ. ವಿರೋಧ ಪಕ್ಷದ ನಾಯಕರೆಂಬ ಬೆಲೆ ಕೊಡದೇ ವರ್ತಿಸುತ್ತಾರೆ.

ರಾಜ್ಯಾಧ್ಯಕ್ಷರಾಗಿರುವ ವಿಜಯೇಂದ್ರ ಮತ್ತು ಅಶೋಕ್ ಮಧ್ಯೆಯೂ ಸರಿಯಾದ ಸಮನ್ವಯತೆ ಸೃಷ್ಟಿಯಾಗುತ್ತಿಲ್ಲ. ಸದನದಲ್ಲಿ ಹಾಗೂ ಸದನದ ಹೊರಗೆ ಅಶೋಕ್ ಒಂದು ದಿಕ್ಕು, ವಿಜಯೇಂದ್ರ ಇನ್ನೊಂದು ದಿಕ್ಕು ಎಂಬಂತೆಯಾಗಿದೆ ಎಂದು ಹೇಳಿಕೊಂಡಿದ್ದಾರೆ.

ದೇಶ

karnataka ಅಧಿಕಾರದಿಂದ ಬಂಧನದವರೆಗೆ: ಜೈಲು ಸೇರಿದ್ದ ಕರ್ನಾಟಕದ ಪ್ರಮುಖ ಜನಪ್ರತಿನಿಧಿಗಳ ಸಂಪೂರ್ಣ ಪಟ್ಟಿ

ಬೆಂಗಳೂರು: ಬಿಕ್ಲು ಶಿವು ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ Bairathi Basavaraj ಬಂಧನಕ್ಕೊಳಗಾಗಿದ್ದಾರೆ. ಸಿಐಡಿ ತಂಡ ಅವರು ಬೆಂಗಳೂರಿನ ವಿಮಾನ ನಿಲ್ದಾಣದಲ್ಲೇ ವಶಕ್ಕೆ ಪಡೆದಿದೆ. ವಿಧಾನಸಭೆಯಲ್ಲಿ ಕಾನೂನು ರೂಪಿಸಬೇಕಾದ ಜನಪ್ರತಿನಿಧಿಗಳೇ ಕಾನೂನು ಉಲ್ಲಂಘನೆ ಆರೋಪದಲ್ಲಿ ಜೈಲು ಸೇರಿದ ಹಲವು ಉದಾಹರಣೆಗಳು ಕರ್ನಾಟಕ ರಾಜಕೀಯದಲ್ಲಿ ಕಂಡುಬಂದಿವೆ.


ವಿನಯ್ ಕುಲಕರ್ಣಿಗೂ ಜೈಲು ಅನುಭವ

ಹುಬ್ಬಳ್ಳಿ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ Vinay Kulkarni ಬಂಧನಕ್ಕೊಳಗಾಗಿದ್ದರು. 2020ರಲ್ಲಿ Central Bureau of Investigation (CBI) ಅವರು ಅವರನ್ನು ಬಂಧಿಸಿತ್ತು. ಸುಪ್ರೀಂ ಕೋರ್ಟ್ 2021ರಲ್ಲಿ ಜಾಮೀನು ನೀಡಿದರೂ, ಸಾಕ್ಷಿಗಳಿಗೆ ಬೆದರಿಕೆ ಆರೋಪ ಹಿನ್ನೆಲೆ 2025ರಲ್ಲಿ ಜಾಮೀನು ರದ್ದುಗೊಂಡಿತ್ತು.


ವೀರೇಂದ್ರ ಪಪ್ಪಿ ವಿರುದ್ಧ ಬೆಟ್ಟಿಂಗ್ ಆರೋಪ

ಚಿತ್ರದುರ್ಗ ಕ್ಷೇತ್ರದ ಕಾಂಗ್ರೆಸ್ ಶಾಸಕ Veerendra Pappi ಅಕ್ರಮ ಬೆಟ್ಟಿಂಗ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಾಲ್ಕು ತಿಂಗಳು ಕಳೆದಿದ್ದರು. ಪ್ರಕರಣವನ್ನು ಪ್ರಶ್ನಿಸಿ Enforcement Directorate (ED) ಹೈಕೋರ್ಟ್ ಮೆಟ್ಟಿಲೇರಿದೆ.


ಮುನಿರತ್ನ ವಿರುದ್ಧ ಗಂಭೀರ ಆರೋಪ

ಬಿಜೆಪಿ ಶಾಸಕ Munirathna ಬೆದರಿಕೆ ಹಾಗೂ ಅತ್ಯಾಚಾರ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದರು. ಪ್ರಕರಣದ ತನಿಖೆಗೆ ಎಸ್‌ಐಟಿ ರಚನೆ ಮಾಡಲಾಗಿತ್ತು.


ಗಣಿ ಹಗರಣದಲ್ಲಿ ಜನಾರ್ದನ ರೆಡ್ಡಿ

ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಚಿವ Gali Janardhana Reddy ಅವರಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು. ಬಳಿಕ ಹೈಕೋರ್ಟ್ ಶಿಕ್ಷೆಯನ್ನು ಅಮಾನತುಗೊಳಿಸಿದೆ.


ಸತೀಶ್ ಸೈಲ್‌ಗೆ ಶಿಕ್ಷೆ

ಬೇಲೆಕೇರಿ ಅದಿರು ಸಾಗಾಟ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ Satish Sail ಅವರಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು. ನಂತರ ಹೈಕೋರ್ಟ್ ತೀರ್ಪು ಅಮಾನತುಗೊಳಿಸಿದೆ.


ಜೀವಾವಧಿ ಶಿಕ್ಷೆ ಪಡೆದ ಪ್ರಜ್ವಲ್ ರೇವಣ್ಣ

ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ Prajwal Revanna ಜೀವಾವಧಿ ಶಿಕ್ಷೆಗೆ ಒಳಗಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಇದೇ ಪ್ರಕರಣದಲ್ಲಿ H. D. Revanna ಹಾಗೂ Suraj Revanna ಹೆಸರುಗಳು ಕೂಡ ಕೇಳಿಬಂದಿವೆ.

Continue Reading

ದೇಶ

ಸಿಎಂ ಕುರ್ಚಿ ಉಳಿಸಿಕೊಳ್ಳಲು ಶಾಸಕರ ವಿದೇಶ ಪ್ರವಾಸ? ವಿಜಯೇಂದ್ರ ಗಂಭೀರ ಆರೋಪ

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಕುರ್ಚಿ ಉಳಿಸಿಕೊಳ್ಳುವ ಸಲುವಾಗಿ ಕಾಂಗ್ರೆಸ್ ಶಾಸಕರನ್ನು ವಿದೇಶ ಪ್ರವಾಸಕ್ಕೆ ಕಳುಹಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಗಂಭೀರ ಆರೋಪ ಮಾಡಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದರು. ಸರ್ಕಾರ ಬಂದ ಬಳಿಕ ಅನುದಾನ ಬೇಡಿಕೆ ಇಟ್ಟಿದ್ದರೂ ಗಂಗಕಲ್ಯಾಣ ಯೋಜನೆ, ಮನೆ ನಿರ್ಮಾಣ ಸೇರಿದಂತೆ ಹಲವು ಕಾರ್ಯಗಳು ನಡೆಯದೆ ಜನರಲ್ಲಿ ಅಸಮಾಧಾನ ಮೂಡಿದೆ ಎಂದು ಆರೋಪಿಸಿದರು. ಶಾಸಕರು ತಮ್ಮ ಖರ್ಚಿನಲ್ಲಿ ವಿದೇಶಕ್ಕೆ ಹೋಗುತ್ತಿದ್ದಾರೆ ಎಂಬ ಸಿಎಂ ಹೇಳಿಕೆಯನ್ನು ಪ್ರಶ್ನಿಸಿ, “ತಮ್ಮ ಕುರ್ಚಿ ಉಳಿಸಿಕೊಳ್ಳಲು ತಾವೇ ಅವರನ್ನು ಕಳಿಸುತ್ತಿದ್ದಾರೆ” ಎಂದು ಟೀಕಿಸಿದರು.

ರೆಸಾರ್ಟ್ ರಾಜಕೀಯದ ಮೇಲೆ ಲೇವಡಿ

ಕಾಂಗ್ರೆಸ್ ಶಾಸಕರು ರೆಸಾರ್ಟ್ ಬುಕ್ ಮಾಡಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ವಿಜಯೇಂದ್ರ, “ಅವರಿಗೆ ಅನುಕೂಲವಾಗಲಿ ಎಂದು ಬಿಜೆಪಿಯಿಂದ ಬಡಿಗೆ ರೆಡಿ ಮಾಡಿಸಿದ್ದೇವೆ” ಎಂದು ವ್ಯಂಗ್ಯವಾಡಿದರು. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವೆ ಅಂತರದ ರಾಜಕೀಯ ನಡೆಯುತ್ತಿದೆ ಎಂದು ಹೇಳಿದರು.

₹5,000 ಕೋಟಿ ಎಲ್ಲಿಗೆ ಹೋಯ್ತು?

ಗೃಹ ಲಕ್ಷ್ಮೀ ಯೋಜನೆಯ ₹5,000 ಕೋಟಿ ಹಣದ ಬಗ್ಗೆ ಸ್ಪಷ್ಟ ಉತ್ತರ ಸಿಗಲಿಲ್ಲ ಎಂದು ಆರೋಪಿಸಿದ ಅವರು, “ಹಣ ಉಪಯೋಗ ಆಯ್ತಾ? ದುರಪಯೋಗ ಆಯ್ತಾ? ಸಿಎಂ ಉತ್ತರ ಕೊಡಬೇಕು” ಎಂದು ಆಗ್ರಹಿಸಿದರು. ಕೇಂದ್ರ ಸರ್ಕಾರಕ್ಕೆ ನಕಲಿ ದಾಖಲೆ ನೀಡಿರುವ ವಿಚಾರದಲ್ಲೂ ಮುಂದಿನ ದಿನಗಳಲ್ಲಿ ವಿವರವಾದ ಸುದ್ದಿಗೋಷ್ಠಿ ನಡೆಸುವುದಾಗಿ ತಿಳಿಸಿದರು.

ಪ್ರಾದೇಶಿಕ ಅಸಮಾನತೆ ಹೆಚ್ಚಳ

ಪ್ರಾದೇಶಿಕ ಅಸಮಾನತೆ ನಿವಾರಣೆ ಸಮಿತಿ ವರದಿ ಉಲ್ಲೇಖಿಸಿ, ರಾಜ್ಯದಲ್ಲಿ ಅಸಮಾನತೆ ಶೇಕಡಾ 60ರಿಂದ 72.08ಕ್ಕೆ ಏರಿಕೆಯಾಗಿದೆ ಎಂದು ಹೇಳಿದರು. ಕಿತ್ತೂರು ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಭಿವೃದ್ಧಿ ಹಿಂದುಳಿದಿದೆ ಎಂದು ಆರೋಪಿಸಿದರು.

ಕುರಿಗಾರರಿಗೆ ಪರಿಹಾರ ಬಾಕಿ

ಅನುಗ್ರಹ ಯೋಜನೆಯಡಿ 45 ಕೋಟಿ ರೂ. ಬಾಕಿ ಇಟ್ಟಿದ್ದು, 90 ಸಾವಿರ ಸಾವಿನ ಪೈಕಿ ಕೇವಲ 30 ಸಾವಿರ ಕುರಿಮರಿಗಳಿಗೆ ಮಾತ್ರ ಪರಿಹಾರ ನೀಡಲಾಗಿದೆ ಎಂದು ಆರೋಪಿಸಿದರು.

ಬಿಜೆಪಿ ಕಾರ್ಯಕಾರಿಣಿ ಸಭೆ

ಫೆಬ್ರವರಿ 19ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಸರ್ಕಾರದ ವೈಫಲ್ಯಗಳು ಮತ್ತು ಮುಂದಿನ ಚುನಾವಣಾ ತಂತ್ರಗಳ ಬಗ್ಗೆ ಚರ್ಚೆ ಮಾಡಲಾಗುತ್ತದೆ ಎಂದು ಹೇಳಿದರು.

Continue Reading

ದೇಶ

LATEST : “ದೆಹಲಿಗೆ ಬಂದಿರೋದೇ ರಾಜಕಾರಣಕ್ಕೆ”: ಡಿಕೆಶಿ ಹೇಳಿಕೆ ಕುತೂಹಲ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು ಮತ್ತೆ ತೀವ್ರಗೊಂಡಿರುವ ನಡುವೆಯೇ ಡಿಸಿಎಂ ಡಿ.ಕೆ. ಶಿವಕುಮಾರ್ ದೆಹಲಿಯಲ್ಲಿ ಸಂಸದೆ ಪ್ರಿಯಾಂಕಾ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಸೋನಿಯಾ ಗಾಂಧಿ ನಿವಾಸಕ್ಕೆ ಭೇಟಿ ನೀಡಿದ ಡಿಕೆಶಿ, ಅಸ್ಸಾಂ ಚುನಾವಣೆಗೆ ಸಂಬಂಧಿಸಿದಂತೆ ಚರ್ಚೆ ನಡೆದಿದೆ ಎಂದು ತಿಳಿಸಿದ್ದರೂ, ಅವರ ಹೇಳಿಕೆಗಳು ರಾಜಕೀಯ ವಲಯದಲ್ಲಿ ಕುತೂಹಲ ಹೆಚ್ಚಿಸಿವೆ.

“ನಾನು ದೆಹಲಿಗೆ ಬಂದಿರೋದೇ ರಾಜಕಾರಣ ಮಾಡಲು. ಏನೂ ಮಾತನಾಡದೆ ಸುಮ್ಮನೆ ಹೋಗಲು ಸಾಧ್ಯವೇ?” ಎಂದು ಡಿಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ. ರೂಪೇಶ್ ಬಘೇಲ್ ಜೊತೆಗೆ ಪ್ರಿಯಾಂಕಾ ಗಾಂಧಿ ಅವರನ್ನು ಭೇಟಿ ಮಾಡಿದ ಅವರು, ಅಸ್ಸಾಂ ಸೇರಿದಂತೆ ಇತರೆ ರಾಜ್ಯಗಳ ಚುನಾವಣಾ ಸ್ಥಿತಿಗತಿಗಳ ಕುರಿತು ಚರ್ಚೆ ನಡೆದಿದೆ ಎಂದರು. “ಎಲ್ಲಾ ವಿಚಾರಗಳನ್ನು ಮಾತನಾಡಲೇಬೇಕು. ಕಾಲವೇ ಎಲ್ಲಕ್ಕೂ ಉತ್ತರ ಕೊಡಲಿದೆ” ಎಂಬ ಅವರ ಮಾತುಗಳಿಗೆ ಹಲವು ಅರ್ಥಗಳು ನೀಡಲಾಗುತ್ತಿದೆ.

ಇದೇ ವೇಳೆ ಬಜೆಟ್ ಪೂರ್ವಸಿದ್ಧತಾ ಸಭೆಗೆ ಗೈರಾಗಿದ್ದ ಡಿಕೆಶಿ ದೆಹಲಿಗೆ ತೆರಳಿರುವುದು ಗಮನಾರ್ಹ. ಸಿಎಂ ಸಿದ್ದರಾಮಯ್ಯ ಅವರ ಅನುಮತಿ ಪಡೆದುಕೊಂಡೇ ಅವರು ತೆರಳಿದ್ದಾರೆ ಎನ್ನಲಾಗಿದ್ದರೂ, ದೆಹಲಿಯ ರಾಜಕೀಯ ಚಟುವಟಿಕೆಗಳು ಕುತೂಹಲ ಹುಟ್ಟಿಸಿವೆ. ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದರಾ? ಎಂಬ ಪ್ರಶ್ನೆಗೆ ಅವರು ಸ್ಪಷ್ಟ ಉತ್ತರ ನೀಡಿಲ್ಲ.

ರಾಜ್ಯ ನಾಯಕತ್ವ ವಿಚಾರದಲ್ಲಿ ರಾಹುಲ್ ಗಾಂಧಿಯ ನಿರ್ಧಾರವೇ ಅಂತಿಮ ಎಂಬುದು ಕಾಂಗ್ರೆಸ್ ವಲಯದ ನಿಲುವು. ಇದೀಗ ಡಿಕೆಶಿ ರಾಹುಲ್ ಗಾಂಧಿಯನ್ನು ಭೇಟಿ ಮಾಡುವ ಸಾಧ್ಯತೆಗಳೂ ಚರ್ಚೆಯಾಗುತ್ತಿವೆ. ರಾಜ್ಯ ರಾಜಕೀಯದಲ್ಲಿ ಈ ಬೆಳವಣಿಗೆ ಹೊಸ ತಿರುವು ಪಡೆಯುವ ಸೂಚನೆ ನೀಡಿದೆ.

Continue Reading

Trending