Connect with us

ರಾಜಕೀಯ

ಎಲ್ಲ ಪಕ್ಷದ ಶಾಸಕರ ಕ್ಷೇತ್ರಗಳಿಗೂ ₹2000 ಕೋಟಿ ವಿತರಣೆ: ಸಿಎಂ‌ ಘೋಷಣೆ – CM SIDDARAMAIAH

ಬೆಳಗಾವಿ: ”ಅಪೆಂಡಿಕ್ಸ್ ಇ ನಲ್ಲಿ 4,000 ಕೋಟಿ ರೂ., ಗ್ರಾಮೀಣ ರಸ್ತೆಗೆ 2,000 ಕೋಟಿ ರೂ. ಹಾಗೆಯೇ ಸಿಟಿ, ಟೌನ್ ರಸ್ತೆಗಳಿಗೂ ಹೆಚ್ಚುವರಿ ಹಣ ಕೊಡುತ್ತಿದ್ದೇವೆ. ಎಲ್ಲಾ ಪಕ್ಷದ ಶಾಸಕರ ಕ್ಷೇತ್ರಗಳಿಗೂ 2000 ಕೋಟಿ ರೂ. ವಿತರಣೆ ಮಾಡುತ್ತೇವೆ. ರಾಜ್ಯದ ಜನತೆ ಈಗಲೂ ನಮ್ಮ ಪರವಾಗಿದ್ದಾರೆ. ನಾಳೆಯೂ ನಮ್ಮ ಪರವಾಗಿರಲಿದ್ದಾರೆ. ಮುಂದಿನ ಚುನಾವಣೆಯಲ್ಲೂ ನಮ್ಮ‍ ಪರವಾಗಿರುತ್ತಾರೆ. ಇದು ಖಚಿತ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು, ”ಅಭಿವೃದ್ಧಿ ಪರ್ವ ರಾಜ್ಯದಲ್ಲಿ ನಿರಂತರತೆ ಕಾಯ್ದುಕೊಂಡಿದೆ. ವಿಧಾನಸಭೆ, ಪರಿಷತ್​ನಲ್ಲಿ ಮತ್ತು ಸದನದ ಹೊರಗೆ ನಮ್ಮ ಅಭಿವೃದ್ಧಿಯ ದಾಖಲೆಗಳು, ಅಂಕಿ ಅಂಶಗಳನ್ನು ಮನೆ ಮನೆ ತಲುಪಿಸಿ. ಎದೆ ಎತ್ತಿ ಮಾತನಾಡಿ” ಎಂದು ಕಾಂಗ್ರೆಸ್ ಶಾಸಕರಿಗೆ ಕರೆ ನೀಡಿದರು.

ಸತ್ಯದ ದಾಖಲೆಗಳನ್ನು, ಅಂಕಿ – ಅಂಶಗಳನ್ನು ಜನರ ಮುಂದಿಟ್ಟು ಎದೆ ಎತ್ತಿ ಸತ್ಯ ಹೇಳಿ. ವಕ್ಫ್ ವಿಚಾರ ಬಿಜೆಪಿಗೆ ತಿರುಗುಬಾಣವಾಗಿದೆ. ಅತಿ ಹೆಚ್ಚು ನೋಟಿಸ್ ಕೊಟ್ಟಿರುವುದು, ವಕ್ಫ್ ಆಸ್ತಿ ಒತ್ತುವರಿ ತೆರವುಗೊಳಿಸುವುದಾಗಿ ಬಿಜೆಪಿ ತನ್ನ ಪ್ರಣಾಳಿಕೆಯಲ್ಲೇ ಹೇಳಿದೆ. ಯಡಿಯೂರಪ್ಪ, ಬೊಮ್ಮಾಯಿ ಅವರು ಮುಖ್ಯಮಂತ್ರಿ ಆಗಿದ್ದಾಗಲೇ ವಕ್ಫ್ ಆಸ್ತಿ ತೆರವುಗೊಳಿಸಲು ನೋಟಿಸ್ ಕೊಡಲಾಗಿದೆ. ಹೀಗಾಗಿ, ಬಿಜೆಪಿಗೆ ಈ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ” ಎಂದು ಕಿಡಿಕಾರಿದರು.

”once a waqf property… Always a waqf property ಅಂತ ಸುಪ್ರೀಂಕೋರ್ಟ್ ತೀರ್ಪು ಬಂದಿವೆ. ಸಚಿವ ಜಮೀರ್ ಅವರು ಸಮರ್ಥವಾಗಿ ಉತ್ತರ ನೀಡುತ್ತಾರೆ. ಪರಿಷತ್​​ನಲ್ಲಿ ಈಗಾಗಲೇ ಕೊಟ್ಟಿದ್ದಾರೆ. ಬಿಜೆಪಿ 9 ವರ್ಷಗಳ ಕಾಲ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ, ಸಮ್ಮಿಶ್ರ ಸರ್ಕಾರದಲ್ಲಿದ್ದಾಗಲೂ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಬಿಜೆಪಿ ಕೆಲಸ ಮಾಡಲಿಲ್ಲ. ಪ್ರಾದೇಶಿಕ ತಾರತಮ್ಯ ಹೋಗಲಾಡಿಸಲು ಬಿಜೆಪಿ ಪ್ರಯತ್ನವನ್ನೇ ಮಾಡಲಿಲ್ಲ” ಎಂದು ಆರೋಪಿಸಿದರು.

ಇದು ಬಿಜೆಪಿಯ ಸತ್ಯವಾದ ಮುಖ- ಸಿದ್ದರಾಮಯ್ಯ ಲೇವಡಿ: ”ನಂಜುಂಡಪ್ಪ ವರದಿಯ ಪ್ರಕಾರ ಅತ್ಯಂತ ಹಿಂದುಳಿದ ತಾಲೂಕುಗಳು ಇರುವುದೇ ಉತ್ತರ ಕರ್ನಾಟಕದಲ್ಲಿ. 176ರಲ್ಲಿ 116 ತಾಲೂಕುಗಳು ಹಿಂದುಳಿದಿವೆ. ಇವುಗಳ ಅಭಿವೃದ್ಧಿಗೆ ವಿಶೇಷ ಅನುದಾನ ಕೊಡಬೇಕು ಅಂತಲೂ ಹೇಳಿದ್ದಾರೆ. ನಂಜುಂಡಪ್ಪ ವರದಿಯ ಅನುಷ್ಠಾನ ಮತ್ತು ಸಾಮಾಜಿಕ, ಆರ್ಥಿಕ ಬದಲಾವಣೆ ಕುರಿತಂತೆ ಅಧ್ಯಯನ ನಡೆಸಿ ವರದಿ ನೀಡಲು ಗೋವಿಂದರಾವ್ ಅವರ ಸಮಿತಿಯನ್ನು ರಚಿಸಲಾಗಿದೆ. ಉತ್ತರ ಕರ್ನಾಟಕದ ಅಭಿವೃದ್ಧಿಗೆ 371ಜೆ ಸಂವಿಧಾನ ತಿದ್ದುಪಡಿ ಮಾಡಲು ಸಾಧ್ಯವೇ ಇಲ್ಲ ಎಂದು ಕೇಂದ್ರದಲ್ಲಿದ್ದ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದ ಎಲ್.ಕೆ.ಅಡ್ವಾಣಿ ಅವರು ತಿರಸ್ಕರಿಸಿದ್ದರು. ಇದು ಬಿಜೆಪಿಯ ಸತ್ಯವಾದ ಮುಖ” ಎಂದು ಆಪಾದಿಸಿದರು.

”ಬಿಜೆಪಿ ನೈತಿಕವಾಗಿ ಕುಸಿದಿದೆ. ಮೂರೂಕ್ಕೆ ಮೂರೂ ಉಪಚುನಾವಣೆಯಲ್ಲಿ ನಾವು ಗೆದ್ದಿರುವುದು, ಬಿಜೆಪಿ ಕೈಯಿಂದ ಎರಡು ಸೀಟುಗಳನ್ನು ಕಾಂಗ್ರೆಸ್ ಗೆದ್ದಿರುವುದು ಅವರನ್ನು ರಾಜ್ಯದ ಜನತೆ ತಿರಸ್ಕರಿಸಿರುವುದಕ್ಕೆ ಸ್ಪಷ್ಟ ನಿದರ್ಶನ. ನನ್ನ ಮೇಲೆ, ನಮ್ಮ ಸರ್ಕಾರದ ಮೇಲೆ ಮಾಡಿದ ಸರಣಿ ಸುಳ್ಳು ಆರೋಪ, ಅಪಪ್ರಚಾರ ಮಾಡಿದರೂ ಅದೆಲ್ಲವನ್ನೂ ತಿರಸ್ಕರಿಸಿ ರಾಜ್ಯದ ಜನತೆ ನಮ್ಮ ಕೈ ಹಿಡಿದಿದ್ದಾರೆ. ಇತ್ತೀಚೆಗೆ ನಾವು ಹಾಸನದಲ್ಲಿ ಮಾಡಿದ ಸ್ವಾಭಿಮಾನಿ ಸಮಾವೇಶ ಐತಿಹಾಸಿಕವಾದುದು” ಎಂದರು.

”ನಾವು 2013ರಿಂದ 2018ರವರೆಗೆ ಅಧಿಕಾರದಲ್ಲಿದ್ದಾಗ ಅವರು ಕೇಳಿದ್ದನ್ನೆಲ್ಲಾ ಸಿಬಿಐ ತನಿಖೆಗೆ ಒಪ್ಪಿಸಿದೆವು. ಆದರೂ ಸಿಬಿಐ ತನಿಖೆಯಲ್ಲಿ ಬಿಜೆಪಿಯ ಒಂದೂ ಆರೋಪ ಸಾಬೀತಾಗಲಿಲ್ಲ. ಅವರು ಅಧಿಕಾರದಲ್ಲಿದ್ದಾಗ ನಾವು ಕೇಳಿದ ಒಂದನ್ನೂ ಸಿಬಿಐ ತನಿಖೆಗೆ ಕೊಡಲಿಲ್ಲ. ಈಗ ಮತ್ತೆ ಅದೇ ಸಿಬಿಐ ರಾಗ ಎಳೆಯುತ್ತಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರು ಸಿಬಿಐ ಅನ್ನು “ಚೋರ್ ಬಚಾವೋ ಸಂಸ್ಥೆ” ಎಂದಿದ್ದರು. ಈಗ ಇವರಿಗೆ ಸಿಬಿಐ ಮೇಲೆ ಪ್ರೀತಿ ಬಂದಿದೆ” ಎಂದು ವ್ಯಂಗ್ಯವಾಡಿದರು.

ಹೆಚ್ಚೆಚ್ಚು ಜನ ಸಂಪರ್ಕ ಸಭೆ ಮಾಡಿ: ”ನಮ್ಮ ಸಚಿವರು ಮತ್ತು ಶಾಸಕರು ಅವರವರ ಉಸ್ತುವಾರಿಯ ಜಿಲ್ಲೆ, ಕ್ಷೇತ್ರಗಳಲ್ಲಿ ಹೆಚ್ಚೆಚ್ಚು ಜನಸಂಪರ್ಕ ಸಭೆ ನಡೆಸಿ ಜನರ ಸಮಸ್ಯೆಗಳನ್ನು ಬಗೆಹರಿಸಿ. ಹಣಕ್ಕೆ ಸಮಸ್ಯೆ ಇಲ್ಲ, ಹಣ ಇದೆ. ಜನರ ಕೆಲಸ ಮಾಡಿ. ಬಿಜೆಪಿ ಅಧಿಕಾರದಲ್ಲಿದ್ದಾಗ ಒಂದೇ ಒಂದು ಮನೆ ಕೊಡಲಿಲ್ಲ. ಅವರು ಯಾವ ಮುಖ ಇಟ್ಟುಕೊಂಡು ನಮ್ಮನ್ನು ಪ್ರಶ್ನಿಸುತ್ತಿದ್ದಾರೆ” ಎಂದು ಶಾಸಕರನ್ನು ಪ್ರಶ್ನಿಸಿದರು.

ಎಲ್ಲ ಕ್ಷೇತ್ರಗಳಿಗೆ ₹2000 ಕೋಟಿ ವಿತರಣೆ: ”ಮಳೆ ಹಾನಿ ಸರಿಪಡಿಸಲು ಅಪೆಂಡಿಕ್ಸ್ ಇ ನಲ್ಲಿ ₹4,000 ಕೋಟಿ, ಗ್ರಾಮೀಣ ರಸ್ತೆ ಹಾಳಾಗಿರುವುದಕ್ಕೆ ₹2000 ಕೋಟಿ ಹಾಗೆಯೇ ಸಿಟಿ, ಟೌನ್ ರಸ್ತೆಗಳಿಗೂ ಹೆಚ್ಚುವರಿ ಹಣ ಕೊಡುತ್ತಿದ್ದೇವೆ. ಮುಂದಿನ ವರ್ಷದಿಂದ ರಾಜ್ಯದ ಆರ್ಥಿಕ ಸಾಮರ್ಥ್ಯ ಇನ್ನಷ್ಟು ಹೆಚ್ಚುತ್ತದೆ. ಆಗ ಇನ್ನಷ್ಟು ಅಭಿವೃದ್ಧಿಯ ವೇಗ ಹೆಚ್ಚುತ್ತದೆ. ಎಲ್ಲಾ ಕ್ಷೇತ್ರಗಳಿಗೂ ಎಲ್ಲಾ ಪಕ್ಷದ ಶಾಸಕರ ಕ್ಷೇತ್ರಗಳಿಗೂ ₹2000 ಕೋಟಿ ವಿತರಣೆ ಮಾಡುತ್ತೇವೆ. ಆದ್ದರಿಂದ ನಮ್ಮ ಶಾಸಕರು ಎದೆ ಎತ್ತಿ ಮಾತನಾಡಿ. ಅವರ ಬಾಯಿ ಮುಚ್ಚಿಸಿ” ಎಂದು ತಿಳಿಸಿದರು.

ಚುನಾವಣೆ

ತಮಿಳುನಾಡು ಚುನಾವಣೆಗೂ ಮುನ್ನ 1.31 ಕೋಟಿ ಮಹಿಳೆಯರಿಗೆ ₹5,000 ಜಮೆ: ಡಿಎಂಕೆ ಸರ್ಕಾರದ ಘೋಷಣೆ

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುನ್ನ Dravida Munnetra Kazhagam (DMK) ಸರ್ಕಾರ ಮಹಿಳಾ ಫಲಾನುಭವಿಗಳಿಗೆ ₹5,000 ಹಣ ಜಮೆ ಮಾಡಿದೆ.

Kalaignar Magalir Urimai Thogai Scheme ಯೋಜನೆಯಡಿ ರಾಜ್ಯದ 1.31 ಕೋಟಿ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ತಲಾ ₹5,000 ಜಮೆಯಾಗಿದೆ. ಫೆಬ್ರವರಿ, ಮಾರ್ಚ್ ಹಾಗೂ ಏಪ್ರಿಲ್ ತಿಂಗಳ ಹಣದ ಜೊತೆಗೆ ಬೇಸಿಗೆ ಸಮಯದ ನೆರವಿಗಾಗಿ ಹೆಚ್ಚುವರಿಯಾಗಿ ₹2,000 ನೀಡಲಾಗಿದೆ ಎಂದು ಸರ್ಕಾರ ತಿಳಿಸಿದೆ.

‘ದ್ರಾವಿಡ 2.0’ ಭರವಸೆ

ಮುಂದಿನ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ ‘ದ್ರಾವಿಡ 2.0’ ಸರ್ಕಾರದ ಅಡಿಯಲ್ಲಿ ತಿಂಗಳಿಗೆ ನೀಡುವ ಮೊತ್ತವನ್ನು ₹2,000ಕ್ಕೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ M. K. Stalin ಭರವಸೆ ನೀಡಿದ್ದಾರೆ.

ಯೋಜನೆಯ ಹಿನ್ನೆಲೆ

ಈ ಯೋಜನೆಯನ್ನು ಸೆಪ್ಟೆಂಬರ್ 2023ರಲ್ಲಿ ಆರಂಭಿಸಲಾಗಿತ್ತು. ಆರಂಭದಲ್ಲಿ 1.13 ಕೋಟಿ ಮಹಿಳೆಯರಿಗೆ ಪ್ರತಿ ತಿಂಗಳು ₹1,000 ನೀಡಲಾಗುತ್ತಿತ್ತು. ಈಗ ಫಲಾನುಭವಿಗಳ ಸಂಖ್ಯೆಯನ್ನು 1.31 ಕೋಟಿಗೆ ವಿಸ್ತರಿಸಲಾಗಿದೆ.

ಎಐಎಡಿಎಂಕೆ ಪ್ರತಿಕ್ರಿಯೆ

ಇದೇ ರೀತಿಯ ಭರವಸೆಯನ್ನು ಕಳೆದ ತಿಂಗಳು ತಮ್ಮ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ All India Anna Dravida Munnetra Kazhagam ಪ್ರಧಾನ ಕಾರ್ಯದರ್ಶಿ Edappadi K. Palaniswami ನೀಡಿದ್ದರು.

ರಾಜಕೀಯ ವಲಯದಲ್ಲಿ ಈ ಘೋಷಣೆ ಚುನಾವಣಾ ಪೂರ್ವ ತಂತ್ರವೆಂದು ಚರ್ಚೆ ನಡೆಯುತ್ತಿದೆ.

Continue Reading

ದೇಶ

ಮೇಕೆದಾಟು, ಕೃಷ್ಣಾ ಮೇಲ್ದಂಡೆ ಯೋಜನೆಗಳಿಗೆ ಕೇಂದ್ರ ಅನುಮತಿ ನಿರೀಕ್ಷೆ: ಡಿ.ಕೆ. ಶಿವಕುಮಾರ್

ಬೆಂಗಳೂರು: ಕೇಂದ್ರ ಸರ್ಕಾರ ಅಗತ್ಯ ಅನುಮತಿ ನೀಡಿದರೆ ಕರ್ನಾಟಕ ಸರ್ಕಾರ ಮೇಕೆದಾಟು ಹಾಗೂ ಕೃಷ್ಣಾ ಮೇಲ್ದಂಡೆ ಬಾಕಿ ಯೋಜನೆಗಳನ್ನು ಜಾರಿ ಮಾಡಲಿದೆ ಎಂದು ಡಿಸಿಎಂ D. K. Shivakumar ವಿಶ್ವಾಸ ವ್ಯಕ್ತಪಡಿಸಿದರು.

ಭಾರತೀಯ ವಿಜ್ಞಾನ ಸಂಸ್ಥೆ (IISc)ಯ ಜೆಜೆ ಟಾಟಾ ಸಭಾಂಗಣದಲ್ಲಿ ನಡೆದ ಅಂತಾರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಸಮ್ಮೇಳನ (ICDS) ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೇಂದ್ರದಿಂದ ಸಹಕಾರ ಸಿಗುವ ಭರವಸೆ ವ್ಯಕ್ತಪಡಿಸಿದರು.

ಮೇಕೆದಾಟು ಯೋಜನೆ ಜಾರಿಗೆ ಸಿದ್ಧತೆ

Mekedatu ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ಯೋಜನೆ ಪರವಾಗಿದೆ. ಕೇಂದ್ರ ಅನುಮತಿ ದೊರೆತ ಕೂಡಲೇ ಯೋಜನೆ ಜಾರಿಗೊಳಿಸಲಾಗುವುದು ಎಂದು ಹೇಳಿದರು. ಈ ಯೋಜನೆಯಿಂದ ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಿಗೆ ಕುಡಿಯುವ ನೀರು ಹಾಗೂ ಸುಮಾರು 400 ಮೆಗಾವಾಟ್ ವಿದ್ಯುತ್ ಉತ್ಪಾದನೆ ಸಾಧ್ಯವಾಗಲಿದೆ ಎಂದು ತಿಳಿಸಿದರು.

ಕೃಷ್ಣಾ ಮೇಲ್ದಂಡೆ ಯೋಜನೆ – ರೈತರಿಗೆ ಪರಿಹಾರ

Krishna River ಮೇಲ್ದಂಡೆ ಯೋಜನೆ ವಿಚಾರದಲ್ಲಿ 2013ರ ಕಾಯ್ದೆಯಂತೆ ಭೂಮಿ ಕಳೆದುಕೊಳ್ಳುವ ರೈತರಿಗೆ ಸೂಕ್ತ ಪರಿಹಾರ ನೀಡಲಾಗುತ್ತದೆ. 2025ರ ಡಿಸೆಂಬರ್ ವೇಳೆಗೆ 1.72 ಲಕ್ಷ ಎಕರೆ ಕೃಷಿಭೂಮಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದರು.

ಅಣೆಕಟ್ಟು ಸುರಕ್ಷತೆ ರಾಷ್ಟ್ರದ ಆದ್ಯತೆ

ಅಣೆಕಟ್ಟುಗಳು ದೇಶದ ಶಕ್ತಿ ಹಾಗೂ ಪ್ರಗತಿಯ ಪ್ರತೀಕವಾಗಿದ್ದು, ಭಾರತದಲ್ಲಿ ಸುಮಾರು 6,500 ಅಣೆಕಟ್ಟುಗಳಿವೆ. ವಿಶ್ವದಲ್ಲಿ ಅತಿ ಹೆಚ್ಚು ಅಣೆಕಟ್ಟುಗಳಿರುವ ದೇಶಗಳಲ್ಲಿ ಭಾರತ ಮೂರನೇ ಸ್ಥಾನದಲ್ಲಿದೆ. ಕರ್ನಾಟಕದಲ್ಲಿ 232 ಅಣೆಕಟ್ಟುಗಳಿದ್ದು, ಅವುಗಳಲ್ಲಿ ಬಹುಪಾಲು 25 ವರ್ಷಕ್ಕಿಂತ ಹಳೆಯದಾಗಿದೆ.

ಕೇಂದ್ರ ಸರ್ಕಾರವು ವಿಶ್ವ ಬ್ಯಾಂಕ್ ನೆರವಿನೊಂದಿಗೆ ಜಾರಿಗೊಳಿಸಿರುವ Dam Rehabilitation and Improvement Project (DRIP) ಯೋಜನೆಯಡಿ ರಾಜ್ಯದಲ್ಲಿ 58 ಅಣೆಕಟ್ಟುಗಳ ದುರಸ್ತಿಗೆ ಸುಮಾರು 1,500 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಅಣೆಕಟ್ಟುಗಳ ಬಳಿ ಪ್ರವಾಸೋದ್ಯಮಕ್ಕೆ ಮನವಿ

ಅಣೆಕಟ್ಟುಗಳ ಸುತ್ತ 500 ಮೀಟರ್ ವ್ಯಾಪ್ತಿಯಲ್ಲಿ ವಿಧಿಸಿರುವ ನಿರ್ಬಂಧಗಳನ್ನು ಸಡಿಲಗೊಳಿಸಿ ಪ್ರವಾಸೋದ್ಯಮಕ್ಕೆ ಅವಕಾಶ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು.

“ಜಲವೇ ಸಂಪತ್ತು, ಜಲವೇ ಇಂಧನ, ಜಲವೇ ಜೀವನ” ಎಂದು ಹೇಳಿದ ಅವರು, ಅಣೆಕಟ್ಟು ಸುರಕ್ಷತೆ ವಿಚಾರದಲ್ಲಿ ಕರ್ನಾಟಕವನ್ನು ಮಾದರಿ ರಾಜ್ಯವನ್ನಾಗಿ ಮಾಡುವ ಬದ್ಧತೆ ವ್ಯಕ್ತಪಡಿಸಿದರು.

Continue Reading

ದೇಶ

karnataka ಅಧಿಕಾರದಿಂದ ಬಂಧನದವರೆಗೆ: ಜೈಲು ಸೇರಿದ್ದ ಕರ್ನಾಟಕದ ಪ್ರಮುಖ ಜನಪ್ರತಿನಿಧಿಗಳ ಸಂಪೂರ್ಣ ಪಟ್ಟಿ

ಬೆಂಗಳೂರು: ಬಿಕ್ಲು ಶಿವು ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ Bairathi Basavaraj ಬಂಧನಕ್ಕೊಳಗಾಗಿದ್ದಾರೆ. ಸಿಐಡಿ ತಂಡ ಅವರು ಬೆಂಗಳೂರಿನ ವಿಮಾನ ನಿಲ್ದಾಣದಲ್ಲೇ ವಶಕ್ಕೆ ಪಡೆದಿದೆ. ವಿಧಾನಸಭೆಯಲ್ಲಿ ಕಾನೂನು ರೂಪಿಸಬೇಕಾದ ಜನಪ್ರತಿನಿಧಿಗಳೇ ಕಾನೂನು ಉಲ್ಲಂಘನೆ ಆರೋಪದಲ್ಲಿ ಜೈಲು ಸೇರಿದ ಹಲವು ಉದಾಹರಣೆಗಳು ಕರ್ನಾಟಕ ರಾಜಕೀಯದಲ್ಲಿ ಕಂಡುಬಂದಿವೆ.


ವಿನಯ್ ಕುಲಕರ್ಣಿಗೂ ಜೈಲು ಅನುಭವ

ಹುಬ್ಬಳ್ಳಿ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ Vinay Kulkarni ಬಂಧನಕ್ಕೊಳಗಾಗಿದ್ದರು. 2020ರಲ್ಲಿ Central Bureau of Investigation (CBI) ಅವರು ಅವರನ್ನು ಬಂಧಿಸಿತ್ತು. ಸುಪ್ರೀಂ ಕೋರ್ಟ್ 2021ರಲ್ಲಿ ಜಾಮೀನು ನೀಡಿದರೂ, ಸಾಕ್ಷಿಗಳಿಗೆ ಬೆದರಿಕೆ ಆರೋಪ ಹಿನ್ನೆಲೆ 2025ರಲ್ಲಿ ಜಾಮೀನು ರದ್ದುಗೊಂಡಿತ್ತು.


ವೀರೇಂದ್ರ ಪಪ್ಪಿ ವಿರುದ್ಧ ಬೆಟ್ಟಿಂಗ್ ಆರೋಪ

ಚಿತ್ರದುರ್ಗ ಕ್ಷೇತ್ರದ ಕಾಂಗ್ರೆಸ್ ಶಾಸಕ Veerendra Pappi ಅಕ್ರಮ ಬೆಟ್ಟಿಂಗ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಾಲ್ಕು ತಿಂಗಳು ಕಳೆದಿದ್ದರು. ಪ್ರಕರಣವನ್ನು ಪ್ರಶ್ನಿಸಿ Enforcement Directorate (ED) ಹೈಕೋರ್ಟ್ ಮೆಟ್ಟಿಲೇರಿದೆ.


ಮುನಿರತ್ನ ವಿರುದ್ಧ ಗಂಭೀರ ಆರೋಪ

ಬಿಜೆಪಿ ಶಾಸಕ Munirathna ಬೆದರಿಕೆ ಹಾಗೂ ಅತ್ಯಾಚಾರ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದರು. ಪ್ರಕರಣದ ತನಿಖೆಗೆ ಎಸ್‌ಐಟಿ ರಚನೆ ಮಾಡಲಾಗಿತ್ತು.


ಗಣಿ ಹಗರಣದಲ್ಲಿ ಜನಾರ್ದನ ರೆಡ್ಡಿ

ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಚಿವ Gali Janardhana Reddy ಅವರಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು. ಬಳಿಕ ಹೈಕೋರ್ಟ್ ಶಿಕ್ಷೆಯನ್ನು ಅಮಾನತುಗೊಳಿಸಿದೆ.


ಸತೀಶ್ ಸೈಲ್‌ಗೆ ಶಿಕ್ಷೆ

ಬೇಲೆಕೇರಿ ಅದಿರು ಸಾಗಾಟ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ Satish Sail ಅವರಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು. ನಂತರ ಹೈಕೋರ್ಟ್ ತೀರ್ಪು ಅಮಾನತುಗೊಳಿಸಿದೆ.


ಜೀವಾವಧಿ ಶಿಕ್ಷೆ ಪಡೆದ ಪ್ರಜ್ವಲ್ ರೇವಣ್ಣ

ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ Prajwal Revanna ಜೀವಾವಧಿ ಶಿಕ್ಷೆಗೆ ಒಳಗಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಇದೇ ಪ್ರಕರಣದಲ್ಲಿ H. D. Revanna ಹಾಗೂ Suraj Revanna ಹೆಸರುಗಳು ಕೂಡ ಕೇಳಿಬಂದಿವೆ.

Continue Reading

Trending