ರಾಜಕೀಯ
ವೀರಸೌಧದಲ್ಲಿ ಗಾಂಧೀಜಿ ಪ್ರತಿಮೆ ಅನಾವರಣ: ವಿಶೇಷ ಸರಸ್ ಮೇಳ, ಖಾದಿ ಉತ್ಸವಕ್ಕೆ ಚಾಲನೆ – GANDHIJI STATUE AT VEERA SOUDHA
ಬೆಳಗಾವಿ: ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಜರುಗಿದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಅಂಗವಾಗಿ ನಗರದ ಟಿಳಕವಾಡಿಯಲ್ಲಿನ ವೀರಸೌಧದಲ್ಲಿ ಗುರುವಾರ ಮಹಾತ್ಮಾ ಗಾಂಧೀಜಿಯವರ ನೂತನ ಪ್ರತಿಮೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅನಾವರಣಗೊಳಿಸಿದರು. ಜೊತೆಗೆ, ನಗರದ ಸರ್ದಾರ್ ಹೈಸ್ಕೂಲ್ ಮೈದಾನದಲ್ಲಿ ವಿಶೇಷ ಸರಸ್ ಮೇಳ ಮತ್ತು ಖಾದಿ ಉತ್ಸವ, ವಸ್ತುಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಾಲನೆ ನೀಡಿದರು.
ತದನಂತರ ವೀರಸೌಧದ ಆವರಣದಲ್ಲಿನ ಗಾಂಧೀಜಿ ಸ್ಮಾರಕ ಭವನದಲ್ಲಿನ ನವೀಕೃತ ಪೋಟೋ ಗ್ಯಾಲರಿಯನ್ನು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉದ್ಘಾಟಿಸಿದರು. ವೀರಸೌಧದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಇದೇ ವೇಳೆ ವೀರಸೌಧ (ಕಾಂಗ್ರೆಸ್ ಬಾವಿ) ಆವರಣದಲ್ಲಿ ಡಿ.ಕೆ.ಶಿವಕುಮಾರ್ ಅವರು ಸಸಿ ನೆಟ್ಟು ನೀರೆರೆದರು. ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೂ ಇದೇ ವೇಳೆ ಮುಖ್ಯಮಂತ್ರಿ ಚಾಲನೆ ನೀಡಿದರು.
ವಿಶೇಷ ಸರಸ್ ಮೇಳ, ಖಾದಿ ಉತ್ಸವ: ನಗರದ ಟಿಳಕವಾಡಿಯಲ್ಲಿನ ವೀರಸೌಧದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಬಳಿಕ ನೇರವಾಗಿ ಸರ್ದಾರ್ ಹೈಸ್ಕೂಲ್ ಮೈದಾನಕ್ಕೆ ಆಗಮಿಸಿದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳಿಗೆ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಚಿವರಾದ ಡಾ.ಶರಣಪ್ರಕಾಶ ಪಾಟೀಲ ಹಾಗೂ ಇನ್ನೀತರ ಗಣ್ಯರು ಆತ್ಮೀಯವಾಗಿ ಬರಮಾಡಿಕೊಂಡರು. ಸ್ವ-ಸಹಾಯ ಗುಂಪಿನ ಮಹಿಳೆಯರ ಉತ್ಪನ್ನಗಳು ಹಾಗೂ ಖಾದಿ ಉತ್ಪನ್ನಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳ ‘ಅಸ್ಮಿತೆ’ ವ್ಯಾಪಾರ ಮೇಳ-2024ವನ್ನು ಉದ್ಘಾಟಿಸಿದರು.
ಜನವರಿ 4ರವರೆಗೆ ಸರಸ್ ಮೇಳ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ರಾಜ್ಯ ಜೀವನೋಪಾಯ ಅಭಿಯಾನ ಮತ್ತು ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಮತ್ತು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಾನಗರ ಪಾಲಿಕೆ ಸಹಭಾಗಿತ್ವದಲ್ಲಿ ಈ ಸರಸ್ ಮೇಳ ಮತ್ತು ಖಾದಿ ಉತ್ಸವವು ಆರಂಭವಾಗಿದ್ದು, ಡಿ.26ರಿಂದ ಜನವರಿ 4ರವರೆಗೆ ನಡೆಯಲಿದೆ.
ಸ್ವ-ಸಹಾಯ ಗುಂಪಿನ ಮಹಿಳೆಯರು ಭಾಗಿ: ಈ ಕಾರ್ಯಕ್ರಮದಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಿಂದ ಸ್ವ-ಸಹಾಯ ಗುಂಪಿನ ಮಹಿಳೆಯರು ತಮ್ಮ ತಮ್ಮ ಜಿಲ್ಲೆಯ ಪ್ರಮುಖ ಉತ್ಪನ್ನಗಳೊಂದಿಗೆ ಭಾಗವಹಿಸಿದ್ದು, ಒಟ್ಟು 150 ಮಳಿಗೆಗಳನ್ನು ಸ್ಥಾಪಿಸಲಾಗಿದೆ. ಅದರಲ್ಲಿ 10 ಆಹಾರ ಮೇಳದ ಮಳಿಗೆಗಳು ಮತ್ತು 50 ಖಾದಿ ಉತ್ಪನ್ನಗಳ ಮೇಳಗಳು ಒಳಗೊಂಡಿದೆ. ಈ ಮೇಳಕ್ಕೆ ಸಾರ್ವಜನಿಕರಿಗೆ ಉಚಿತ ಪ್ರವೇಶವಿದ್ದು, ಡಿ.26ರಿಂದ ಜ.04ರವರೆಗೆ ಪ್ರತಿ ದಿನ ಬೆಳಿಗ್ಗೆ 10.30 ಯಿಂದ ರಾತ್ರಿ 9.30 ರವರೆಗೆ ಪ್ರದರ್ಶನ ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ.
ಪ್ರತಿ ದಿನ ಸಾಂಸ್ಕೃತಿಕ ಕಾರ್ಯಕ್ರಮ: ಪ್ರತಿ ದಿನ ಸಂಜೆ 6.30 ರಿಂದ 9.00 ಗಂಟೆಯವರೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಬೆಳಗಾವಿಯಲ್ಲಿ ಆಯೋಜಿಸಲಾಗುತ್ತಿರುವ ಸತತ 4ನೇ ವರ್ಷದ ಈ ಮೇಳದಲ್ಲಿ ಪ್ರಮುಖವಾಗಿ ನಗರ ಹಾಗೂ ಗ್ರಾಮೀಣ ಸ್ವ-ಸಹಾಯ ಗುಂಪಿನ ಮಹಿಳೆಯರು ಉತ್ಪಾದಿಸುವ ಉತ್ಪನ್ನಗಳು ಮಾರಾಟ ಮಾಡುವುದು ವಿಶೇಷತೆಯಾಗಿದೆ.
ಆಕರ್ಷಣೀಯ ಅಕ್ಕ ಕೆಫೆ: ಸರ್ಕಾರವು 2024-25ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವಂತೆ ರಾಜ್ಯದಲ್ಲಿ 50 ‘ಅಕ್ಕ ಕೆಫೆ’ಗಳನ್ನು ಒಂದೇ ಮಾದರಿ ವಿನ್ಯಾಸದಡಿ ಅನುಷ್ಠಾನಗೊಳಿಸಲಾಗುತ್ತಿದೆ. ಈ ಕಾರ್ಯಕ್ರಮದಡಿ ಅಂದಾಜು 1200 ಸ್ವ-ಸಹಾಯ ಗುಂಪಿನ ಮಹಿಳೆಯರಿಗೆ ಜೀವನೋಪಾಯಕ್ಕೆ ಅನುಕೂಲ ಕಲ್ಪಿಸಲಾಗುತ್ತಿದೆ. ಮುಂದುವರೆದು, ‘ಅಕ್ಕ-ಕಫೆ’ ಕಾರ್ಯಕ್ರಮದ ಭಾಗವಾಗಿ ಈ ಮೇಳದ ಮೈದಾನದಲ್ಲಿನ ಆಹಾರ ಕೋರ್ಟ್‌ನ್ನು “ಅಕ್ಕ-ಕೆಫೆ” ಶೀರ್ಷಿಕೆಯಡಿ ಆಕರ್ಷಣೀಯವಾಗಿ ಸಿದ್ದಪಡಿಸಲಾಗಿದೆ.
ಸ್ಥಳದಲ್ಲೇ ಆಹಾರ ತಯಾರಿಕೆ: ಈ ಆಹಾರ ಮಳಿಗೆಗಳಲ್ಲಿ ಉತ್ತರ ಕರ್ನಾಟಕದಲ್ಲಿ ಹೆಸರುವಾಸಿಯಾದ ಗಿರಮಿಟ್/ಚುರುಮರಿ ಮಂಡಕ್ಕಿ, ಜೋಳದ ಖಡಕ್ ರೊಟ್ಟಿ ಸೇರಿದಂತೆ ಹೋಳಿಗೆ, ಮಂಗಳೂರು ನೀರ್‌ದೋಸೆ ಮತ್ತು ಮಾಂಸಹಾರಿ ಆಹಾರಗಳಾದ ಬ್ಯಾಂಬು ಬಿರಿಯಾನಿ ಮುಂತಾದವುಗಳನ್ನು ಸ್ಥಳದಲ್ಲೇ ತಯಾರಿಸಿ ಕೊಡಲಾಗುತ್ತಿದೆ.
ವಿಶೇಷ ಅಭಿಯಾನ: ರಾಜ್ಯದಲ್ಲಿ ಅಭಿಯಾನದಡಿ 2.79 ಲಕ್ಷ ಸ್ವ-ಸಹಾಯ ಗುಂಪುಗಳಡಿ 29.66 ಲಕ್ಷ ಕುಟುಂಬಗಳನ್ನು ಗ್ರಾಮೀಣ ಹಾಗೂ ನಗರ ಜೀವನೋಪಾಯ ಅಭಿಯಾನದಡಿ ಹಾಗೂ 45 ಸಾವಿರ ಸ್ವ-ಸಹಾಯ ಗುಂಪುಗಳಡಿ 4.50 ಲಕ್ಷ ಕುಟುಂಬಗಳನ್ನು ಗ್ರಾಮೀಣ ಹಾಗೂ ನಗರ ಜೀವನೋಪಾಯ ಅಭಿಯಾನದಡಿ ಸಂಘಟಿಸಲಾಗಿದ್ದು, ಪ್ರತಿಯೊಬ್ಬ ಮಹಿಳೆಯು ಸ್ಮಾವಲಂಬನೆಯ ಬದುಕಿನೊಂದಿಗೆ ತನ್ನ ಕುಟುಂಬದ ಅಭಿವೃದ್ಧಿಗೆ ಪೂರಕ ಸೇವೆಗಳನ್ನು ಪಡೆಯುವಲ್ಲಿ ಪೂರಕ ವ್ಯವಸ್ಥೆಗಳನ್ನು ಕಲ್ಪಿಸಲಾಗುತ್ತಿದೆ.
ಉತ್ಪನ್ನಗಳಿಗೆ ಮಾರುಕಟ್ಟೆ: ರಾಜ್ಯದಲ್ಲಿ ಈ ಮಹಿಳೆಯರು ಉತ್ಪನ್ನಗಳ ಮಾರಾಟಕ್ಕೆ ಪ್ರತಿಯೊಂದು ಹಳ್ಳಿ, ಸಂತೆ, ತಾಲೂಕು ಮಟ್ಟದಲ್ಲಿ ಮಾಸಿಕ ಸಂತೆ, ಜಿಲ್ಲಾ ವಸ್ತು ಪ್ರದರ್ಶನ ಮಾರಾಟ ಮೇಳ ಏರ್ಪಡಿಸುವುದಷ್ಟೆ ಅಲ್ಲದೆ ಇತರೆ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ನಡೆಯುವ ಮೇಳಗಳಿಗೆ ರಾಜ್ಯದ ಮಹಿಳೆಯರನ್ನು ನಿಯೋಜನೆ ಮಾಡುವ ಮೂಲಕ ಅವರ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಬೆಳಗಾವಿಯಲ್ಲಿ ಕಳೆದ 3 ವರ್ಷದಿಂದ ಬೃಹತ್ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಆಯೋಜಿಸಿದಂತೆ ಈ ವರ್ಷವು ಸಹ ಮೇಳ ಆಯೋಜಿಸಲಾಗಿದೆ ಎಂದು ರಾಷ್ಟ್ರೀಯ ಜೀವನೋಪಾಯ ಅಭಿಯಾನದ ನಿರ್ದೇಶಕಿ ಪಿ.ಐ.ವಿದ್ಯಾ ಅವರು ತಿಳಿಸಿದರು.
ನವ ನವೀನ ಉತ್ಪನ್ನಗಳು: ಬೆಳಗಾವಿಯ ಈ ಮೇಳದ ಮಳಿಗೆಗಳಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶದ ಸ್ವ-ಸಹಾಯ ಗುಂಪಿನ ಮಹಿಳೆಯರು ಉತ್ಪಾದಿಸಿರುವ ಉತ್ಪನ್ನಗಳಾದ ಚನ್ನಪಟ್ಟಣದ ಮರದ ಗೊಂಬೆಗಳು, ಕೊಪ್ಪಳದ ಕಿನ್ನಾಳ ಆಟದ ಸಾಮಾನುಗಳು, ಮೊಳಕಾಲ್ಮೂರು ಸೀರೆಗಳು, ಇಳಕಲ್ ಸೀರೆಗಳು, ರೇಷ್ಮೆ ಸೀರೆಗಳು, ವಿವಿಧ ನವಾಕರ್ಷಣೆಯ ಬಟ್ಟೆಗಳು, ನಾರಿನ ಉತ್ಪನ್ನದ ಬ್ಯಾಗ್ ಗಳು, ಮಸಾಲಾ ಉತ್ಪನ್ನಗಳು, ಸಿರಿ ಧಾನ್ಯ ಉತ್ಪನ್ನಗಳು, ಮೌಲ್ಯವರ್ಧಿತ ಕರಾವಳಿ ಉತ್ಪನ್ನಗಳು, ವಿವಿಧ ಬಗೆಯ ಖಾದಿ ಉತ್ಪನ್ನಗಳು, ಬಾಳೆ ನಾರಿನಿಂದ ಉತ್ಪಾದಿಸಿದ ಉತ್ಪನ್ನಗಳು, ಗೃಹಾಲಂಕಾರಿಕ ವಸ್ತುಗಳು, ಆಯುರ್ವೇದ ಔಷಧಿಯುತ ಉತ್ಪನ್ನಗಳು, ಪಾರಂಪರಿಕ ವಸ್ತುಗಳು, ಗೃಹೋಪಯೋಗಿ ವಸ್ತುಗಳು, ನವೀನ ವಿನ್ಯಾಸದ ಆಭರಣಗಳು, ಆಹಾರ ಉತ್ಪನ್ನಗಳು ಸೇರಿದಂತೆ ಅನೇಕ ಉತ್ಪನ್ನಗಳು ಸಾರ್ವಜನಿಕರಿಗೆ ಕೈಗೆಟುಕುವ ಬೆಲೆಯಲ್ಲಿ ಲಭ್ಯವಿವೆ.
ಬೆಳಗಾವಿಗೆ ಆಗಮಿಸಿದ ಕಾಂಗ್ರೆಸ್ ನಾಯಕರು: ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವಕ್ಕೆ ಹಿನ್ನೆಲೆಯಲ್ಲಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ದೇಶದ ವಿವಿಧ ಭಾಗಗಳಿಂದ ಬರುತ್ತಿರುವ ಗಣ್ಯರಿಗೆ ಸ್ಥಳಿಯ ಕಾಂಗ್ರೆಸ್ ಮಹಿಳಾಮಣಿಗಳು ಆರತಿ ಬೆಳಗಿ ಹಣೆಗೆ ಕುಂಕುಮ ಇಟ್ಟು ಸ್ವಾಗತಿಸಿದರು. ಕನ್ಹಯ್ಯ ಕುಮಾರ್ ಸೇರಿದಂತೆ ದೆಹಲಿಯಿಂದ ವಿಶೇಷ ವಿಮಾನದಲ್ಲಿ ಆಗಮಿಸಿದ 120ಕ್ಕೂ ಅಧಿಕ ಗಣ್ಯರಿಗೆ ಸ್ವಾಗತಿಸಲಾಯಿತು. ದಾವಣಗೆರೆಯ ತಂಡದಿಂದ ಬಂಜಾರಾ ನೃತ್ಯದ ಮೂಲಕ ಸ್ವಾಗತ ಕೋರಲಾಯಿತು.
ದೇಶ
“ಚಾಮರಾಜಪೇಟೆಗೆ ಬಂದ್ರೆ ಸುಮ್ಮನೆ ಇರ್ತಿನಾ?”: ಜಮೀರ್ ಟಾಂಗ್, ದಾವಣಗೆರೆ ರಾಜಕೀಯ ಕುತೂಹಲ
ದಾವಣಗೆರೆ ದಕ್ಷಿಣ ಉಪಚುನಾವಣೆ ರಾಜಕೀಯ ಕಣ ದಿನೇದಿನೇ ರಂಗೇರುತ್ತಿದ್ದು, ಸಚಿವ ಜಮೀರ್ ಅಹ್ಮದ್ ಖಾನ್ ಅವರ ಆಗಮನದಿಂದ ಹೊಸ ತಿರುವು ಪಡೆದುಕೊಂಡಿದೆ. ಹಲವು ದಿನಗಳಿಂದ ಮುಂದುವರಿದಿದ್ದ ಭಿನ್ನಾಭಿಪ್ರಾಯಗಳ ನಡುವೆಯೇ ಅವರು ಕೊನೆಗೂ ದಾವಣಗೆರೆಗೆ ಭೇಟಿ ನೀಡಿ ಪ್ರಚಾರ ಆರಂಭಿಸಿದ್ದಾರೆ.
ಟಿಕೆಟ್ ಹಂಚಿಕೆ ವೇಳೆ ಉಂಟಾದ ಗಲಾಟೆ ಸಂದರ್ಭದಲ್ಲಿ ಎಸ್‌ಎಸ್ ಮಲ್ಲಿಕಾರ್ಜುನ್ ಅವರು “ಯಾರ್ರಿ ಜಮೀರ್ ದಾವಣಗೆರೆ ಬಗ್ಗೆ ಮಾತನಾಡಲು” ಎಂದು ಹೇಳಿದ್ದರಿಂದ ವಿವಾದ ಸೃಷ್ಟಿಯಾಗಿತ್ತು. ಅಲ್ಪಸಂಖ್ಯಾತ ಅಭ್ಯರ್ಥಿಗೆ ಟಿಕೆಟ್ ಸಿಕ್ಕಿಲ್ಲ ಎಂಬ ಕಾರಣಕ್ಕೂ ಜಮೀರ್ ಅಸಮಾಧಾನಗೊಂಡಿದ್ದರು.
ಆದರೆ ಇದೀಗ ರಾಜಕೀಯ ವಾತಾವರಣ ಬದಲಾಗಿದ್ದು, ಜಮೀರ್ ಅವರನ್ನು ಸ್ವತಃ ಮಲ್ಲಿಕಾರ್ಜುನ್ ಅವರು ಸ್ವಾಗತಿಸಿ ಪ್ರಚಾರಕ್ಕೆ ಕರೆಸಿಕೊಂಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಜಮೀರ್, “ನಾವಿಬ್ಬರೂ ಸ್ನೇಹಿತರು. ಯಾವುದೇ ಬೇಸರ ಇಲ್ಲ. ಸಿಟ್ಟಿನಲ್ಲಿ ಹೇಳಿದ ಮಾತು ಅಷ್ಟೇ,” ಎಂದು ಸ್ಪಷ್ಟಪಡಿಸಿದರು.
ಇದೇ ವೇಳೆ ಅವರು ಪರೋಕ್ಷವಾಗಿ ಟಾಂಗ್ ಕೊಡುತ್ತಾ, “ನನ್ನ ಕ್ಷೇತ್ರ ಚಾಮರಾಜಪೇಟೆಗೆ ಬಂದು ಯಾರಾದರೂ ಮಾತನಾಡಿದರೆ ನಾನು ಸುಮ್ಮನೆ ಇರ್ತಿನಾ?” ಎಂದು ಪ್ರತಿಕ್ರಿಯೆ ನೀಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಮಲ್ಲಿಕಾರ್ಜುನ್, “ಈಗ ಎಲ್ಲವೂ ಬಗೆಹರಿದಿದೆ. ನಾವು ಬಹಳ ವರ್ಷಗಳಿಂದ ಸ್ನೇಹಿತರು,” ಎಂದು ಹೇಳಿದರು.
ಈ ಬೆಳವಣಿಗೆ ದಾವಣಗೆರೆ ರಾಜಕೀಯದಲ್ಲಿ ಹೊಸ ಚೈತನ್ಯ ಮೂಡಿಸಿದ್ದು, ಉಪಚುನಾವಣೆ ಕಣದಲ್ಲಿ ಕಾಂಗ್ರೆಸ್ ಬಲ ಹೆಚ್ಚಿದಂತೆ ಕಾಣುತ್ತಿದೆ.
ದೇಶ
ಜಮೀರ್ ಅಹ್ಮದ್‌ಗೆ ಎಐಸಿಸಿಯಲ್ಲಿ ಮಹತ್ವದ ಹುದ್ದೆ!
ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಅಲ್ಪಸಂಖ್ಯಾತ ಸಮುದಾಯದ ಜನಪ್ರಿಯ ನಾಯಕನಾಗಿ ಹೊರಹೊಮ್ಮುತ್ತಿರುವ ವಸತಿ ಸಚಿವ Zameer Ahmed Khan ಅವರಿಗೆ ಎಐಸಿಸಿಯಲ್ಲಿ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಅವರ ಪ್ರಭಾವವನ್ನು ಗಮನಿಸಿ ಎಐಸಿಸಿ ಪ್ರಧಾನ ಕಾರ್ಯದರ್ಶಿ K. C. Venugopal ಈ ನಿರ್ಧಾರ ಕೈಗೊಂಡಿದ್ದಾರೆ.
ಪ್ರಸ್ತುತ ಕೇರಳ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಜಮೀರ್ ಅಹ್ಮದ್, ರಾಜ್ಯದ ಉಪಚುನಾವಣೆಗಳ ಪ್ರಚಾರಕ್ಕೆ ಬರಲು ಸಾಧ್ಯವಾಗದೇ ಬ್ಯುಸಿಯಾಗಿದ್ದಾರೆ. ಕೇರಳದ ಹಲವು ಕ್ಷೇತ್ರಗಳಲ್ಲಿ ಮುಸ್ಲಿಂ ಮತಗಳು ನಿರ್ಣಾಯಕವಾಗಿರುವ ಹಿನ್ನೆಲೆಯಲ್ಲಿ, ಅವರನ್ನು ಅಲ್ಲಿಯೇ ಪ್ರಚಾರಕ್ಕೆ ಬಳಸಿಕೊಳ್ಳಲಾಗುತ್ತಿದೆ ಎಂದು ತಿಳಿದುಬಂದಿದೆ.
ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆಯಲ್ಲಿ ಭಾಗವಹಿಸಲು ಜಮೀರ್ ಅವರಿಗೆ ಆಹ್ವಾನ ನೀಡಲಾಗಿದ್ದರೂ, ಕೇರಳದ ಪ್ರಚಾರ ಕಾರ್ಯದಿಂದ ಬಿಡುವಿಲ್ಲ ಎಂಬುದಾಗಿ ಅವರು ಪ್ರತಿಕ್ರಿಯಿಸಿದ್ದಾರೆ. ಮುಖ್ಯಮಂತ್ರಿ Siddaramaiah ಸೂಚನೆ ಇದ್ದರೂ, ಎಐಸಿಸಿ ನಾಯಕತ್ವದಿಂದಲೇ ತಡೆಯಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.
ಇದಕ್ಕೂ ನಡುವೆ, ಎಐಸಿಸಿ ಅಲ್ಪಸಂಖ್ಯಾತ ಘಟಕದ ಸಲಹಾ ಪರಿಷತ್ತಿನ ಸದಸ್ಯರಾಗಿ ಜಮೀರ್ ಅಹ್ಮದ್ ಅವರನ್ನು ನೇಮಿಸಲಾಗಿದೆ. ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆಲುವಿಗೆ ಕೇರಳದಲ್ಲಿ ಹೆಚ್ಚಿನ ಮಹತ್ವ ನೀಡಲಾಗುತ್ತಿದ್ದು, ಭವಿಷ್ಯದಲ್ಲಿ ನಾಯಕತ್ವದ ಮಟ್ಟದಲ್ಲೂ ಬದಲಾವಣೆ ಸಾಧ್ಯತೆಗಳಿವೆ ಎಂಬ ಚರ್ಚೆ ನಡೆಯುತ್ತಿದೆ.
ಅಲ್ಪಸಂಖ್ಯಾತ ಸಮುದಾಯದ ನಾಯಕರನ್ನು ರಾಷ್ಟ್ರಮಟ್ಟದಲ್ಲಿ ಗುರುತಿಸುವ ಉದ್ದೇಶದಿಂದ ಈ ನೇಮಕಾತಿ ನಡೆದಿದ್ದು, ಜಮೀರ್ ಅವರ ಜನಪ್ರಿಯತೆ ದಿನೇದಿನೇ ಏರುತ್ತಿರುವುದಕ್ಕೆ ಇದು ಸಾಕ್ಷಿಯಾಗಿದೆ. ರಾಜ್ಯದಲ್ಲೂ ಉಪಚುನಾವಣೆಗಳ ನಡುವೆ ಅವರ ಗೈರುಹಾಜರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ.
ದೇಶ
ಸೋಮಣ್ಣ ವಿರುದ್ಧ ಸಿಎಂ ಸಿಡಿತ: “ಕೆಲಸವಿಲ್ಲದ ಮಂತ್ರಿ!”
ಬಾಗಲಕೋಟೆ: ಬಿಜೆಪಿ ನಾಯಕ V. Somanna ವಿರುದ್ಧ ಮುಖ್ಯಮಂತ್ರಿ Siddaramaiah ತೀವ್ರ ವಾಗ್ದಾಳಿ ನಡೆಸಿದ್ದು, “ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದ ಮಂತ್ರಿ, ಅವರಿಗೆ ಯಾವುದೇ ಕಡತ ಹೋಗುವುದಿಲ್ಲ” ಎಂದು ಟೀಕಿಸಿದರು.
ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಸಂದರ್ಭದಲ್ಲಿ ಮಾತನಾಡಿದ ಸಿಎಂ, “ನಾವು ಸೋಲುತ್ತೇವೆ ಎಂಬ ಭಯದಿಂದ ಬಿಜೆಪಿ ನಾಯಕರು ಅಸಂಬದ್ಧ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಸೋಮಣ್ಣ ಅವರಿಗೆ ಕ್ಷೇತ್ರದಲ್ಲಿ ಪ್ರಚಾರ ಮಾಡಲು ಸಮಯವಿಲ್ಲ” ಎಂದು ಕಿಡಿಕಾರಿದರು. ಮುಖ್ಯಮಂತ್ರಿಗಳ ಸ್ಥಾನ ಕುರಿತು ಬಿಜೆಪಿ ನಾಯಕರು ಮಾತನಾಡುವುದಕ್ಕೆ ಯಾವುದೇ ಅರ್ಥವಿಲ್ಲ, ಅವರು ಕಾಂಗ್ರೆಸ್ ಹೈಕಮಾಂಡ್ ಅಲ್ಲ ಎಂದರು.
ಬಿಜೆಪಿಯ ಮೇಲೆ ವಾಗ್ದಾಳಿ ಮುಂದುವರೆಸಿದ ಸಿದ್ದರಾಮಯ್ಯ, “ಬಿಜೆಪಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಮಾತಿನಲ್ಲಿ ಸತ್ಯವಿಲ್ಲ, ನಡೆದಲ್ಲಿ ನಂಬಿಕೆ ಇಲ್ಲ” ಎಂದು ಟೀಕಿಸಿದರು. ಜೊತೆಗೆ, ಪಕ್ಷದಿಂದ ಉಚ್ಛಾಟನೆಯಾದ Basanagouda Patil Yatnal ಅವರನ್ನು ಮತ್ತೆ ಪ್ರಚಾರಕ್ಕೆ ಕರೆತಂದು ಬಳಸಿಕೊಳ್ಳುತ್ತಿರುವುದು ಬಿಜೆಪಿ ದ್ವಂದ್ವ ನೀತಿಗೆ ಉದಾಹರಣೆ ಎಂದು ಹೇಳಿದರು.
ಇಂಧನ ಹಾಗೂ ಗ್ಯಾಸ್ ಸಿಲಿಂಡರ್ ಸಮಸ್ಯೆ ಕುರಿತು ಮಾತನಾಡಿದ ಅವರು, “ಇದು ಕೇಂದ್ರ ಸರ್ಕಾರದ ಜವಾಬ್ದಾರಿ. ರಾಜ್ಯ ಸರ್ಕಾರ ಕೇವಲ ವಿತರಣೆಯನ್ನು ಮಾಡುತ್ತದೆ” ಎಂದು ಸ್ಪಷ್ಟಪಡಿಸಿದರು. ಈ ಸಂದರ್ಭದಲ್ಲಿ ಪ್ರಧಾನಿ Narendra Modi ಅವರ ಮನೆಗೆ ಮುತ್ತಿಗೆ ಹಾಕಬೇಕು ಎಂಬ ಹೇಳಿಕೆಯನ್ನೂ ನೀಡಿದರು.
ಇನ್ನೂ, ಕಾಂಗ್ರೆಸ್ ಹೈಕಮಾಂಡ್ ಬಗ್ಗೆ ಸ್ಪಷ್ಟನೆ ನೀಡಿದ ಸಿಎಂ, Rahul Gandhi, Sonia Gandhi, Mallikarjun Kharge ಮತ್ತು Priyanka Gandhi ಅವರೇ ಪಕ್ಷದ ಹೈಕಮಾಂಡ್ ಎಂದು ಹೇಳಿದರು.
ಒಟ್ಟಿನಲ್ಲಿ, ಉಪಚುನಾವಣೆ ಹಿನ್ನಲೆಯಲ್ಲಿ ರಾಜಕೀಯ ವಾಗ್ವಾದ ಮತ್ತಷ್ಟು ತೀವ್ರಗೊಂಡಿದೆ.
-
ದೇಶ7 hours ago“ಚಾಮರಾಜಪೇಟೆಗೆ ಬಂದ್ರೆ ಸುಮ್ಮನೆ ಇರ್ತಿನಾ?”: ಜಮೀರ್ ಟಾಂಗ್, ದಾವಣಗೆರೆ ರಾಜಕೀಯ ಕುತೂಹಲ
-
ದೇಶ6 hours agoಕಾಗದ-ಇಂಕ್ ಬೆಲೆ ಏರಿಕೆ: ಪ್ರಿಂಟಿಂಗ್ ಪ್ರೆಸ್ಗಳಿಗೆ ಶಾಕ್
-
ದೇಶ5 hours agoಪೊಲೀಸ್ ವಾಹನವೇ ಪ್ರವೇಶಿಸದ ಗ್ರಾಮ: ಶಾಂತಿಯುತ ಬದುಕಿನ ಅದ್ಭುತ ಕಥೆ
-
ದೇಶ6 hours agoIndian Railways: ರೈಲಲ್ಲೇ ಮದುವೆ ಸಂಭ್ರಮ: Indian Railwaysನಲ್ಲಿ ಹೊಸ ಟ್ರೆಂಡ್!
-
ಕ್ರೀಡೆ3 hours agoಚಿನ್ನಸ್ವಾಮಿಯಲ್ಲಿ ರನ್ ಮಳೆ: ಆರ್ಸಿಬಿ 250 ರನ್ ಸಿಡಿತ!
-
ದೇಶ7 hours ago‘I Love My Daughter’ ಟೀ ಶರ್ಟ್ನಲ್ಲಿ ಸಂಭ್ರಮ: ವಿಚ್ಛೇದನಕ್ಕೆ ಹೊಸ ಅರ್ಥ ನೀಡಿದ ಕುಟುಂಬ
-
ದೇಶ6 hours agoಎನ್ಎಂಎಸಿಸಿ ವೇದಿಕೆಯಲ್ಲಿ ನೀತಾ ಅಂಬಾನಿ ಸೀರೆ ಸದ್ದು: ಐವರಿ-ಗೋಲ್ಡ್ ಲುಕ್ ವೈರಲ್
-
ದೇಶ6 hours agoಟ್ರಂಪ್ ದೇಶದಲ್ಲಿ ಭಾರತೀಯರ ಸದ್ದು: ಮೇಯರ್ ರೇಸ್ನಲ್ಲಿ ತಮಿಳುನಾಡಿನ ಕುವರಿ
