Connect with us

ರಾಜಕೀಯ

ನಾವೇ ರಾಜ್ಯಕ್ಕೆ ಬರಬೇಕೇ? ಶೀಘ್ರವೇ ಎಲ್ಲದ್ದಕ್ಕೂ ಬ್ರೇಕ್‌ – ಡಿಕೆಶಿಗೆ ಹೈಕಮಾಂಡ್‌ ಹೇಳಿದ್ದೇನು?

ಬೆಂಗಳೂರು: ಎರಡು ವಾರದ ಒಳಗಡೆ ಎಲ್ಲಾ ಗೊಂದಲಗಳನ್ನು ಬಗೆ ಹರಿಸುವುದಾಗಿ ಡಿಸಿಎಂ ಡಿಕೆ ಶಿವಕುಮಾರ್‌ಗೆ (DK Shivakumar) ಕಾಂಗ್ರೆಸ್‌ ಹೈಕಮಾಂಡ್‌ ಭರವಸೆ ನೀಡಿದೆ.

ವಿದೇಶ ಪ್ರವಾಸ ಮುಗಿಸಿ ದೆಹಲಿಯಲ್ಲೇ ಬೀಡು ಬಿಟ್ಟಿದ್ದ ಡಿಕೆ ಶಿವಕುಮಾರ್‌ ಮಂಗಳವಾರ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಭೇಟಿ ಮಾಡಿ ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಮಾನಗಳನ್ನು ಗಮನಕ್ಕೆ ತಂದಿದ್ದಾರೆ. ಈ ಭೇಟಿಯ ಬಳಿಕ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಅವರ ಸೂಚನೆ ಮೇರೆಗೆ ಪರಮೇಶ್ವರ್‌ ಅವರು ತಾವು ಆಯೋಜನೆ ಮಾಡಿದ್ದ ಡಿನ್ನರ್‌ ಮುಂದೂಡಿದ್ದಾರೆ.

ಶೀಘ್ರವೇ ಎಲ್ಲದ್ದಕ್ಕೂ ಬ್ರೇಕ್‌ ಹಾಕುತ್ತೇವೆ. ನಾವು ರಾಜ್ಯಕ್ಕೆ ಬರಬೇಕಾ? ಅಥವಾ ದೆಹಲಿಗೆ ನಾಯಕರನ್ನು ಕರೆಸಿಕೊಳ್ಳಬೇಕಾ ಎಂಬುದನ್ನು ನಿರ್ಧರಿಸುತ್ತೇವೆ. ಎರಡು ವಾರದೊಳಗೆ ಎಲ್ಲಾ ಗೊಂದಲ ಬಗೆಹರಿಸುತ್ತೇವೆ ಎಂಬ ಭರವಸೆಯನ್ನು ಹೈಕಮಾಂಡ್‌ ನೀಡಿದೆ ಎನ್ನಲಾಗುತ್ತಿದೆ.

ಡಿಕೆಶಿ ದೂರು:
ಡಿಕೆಶಿ ವಿದೇಶ ಪ್ರವಾಸ ಕೈಗೊಂಡಿದ್ದಾಗಲೇ ಸಿಎಂ ಸಿದ್ದರಾಮಯ್ಯ (CM Siddaramaiah) ಆಪ್ತರ ಜೊತೆ ಡಿನ್ನರ್ ಪಾಲಿಟಿಕ್ಸ್ (Dinner Politics) ನಡೆಸಿದ್ದರು. ಕನಕ ಜಯಂತಿ ನೆಪದಲ್ಲಿ ದಾವಣಗೆರೆಯಲ್ಲಿ ಸಿಎಂ ಸಿದ್ದರಾಮಯ್ಯ ಬಲ ಪ್ರದರ್ಶನ ಮಾಡಿದ್ದರು.

ವಿದೇಶದಿಂದ ಭಾರತಕ್ಕೆ ವಾಪಸ್ಸಾಗಿ 2 ದಿನ ಕಳೆದರೂ ಬೆಂಗಳೂರಿನತ್ತ ಮುಖ ಮಾಡದೇ ಇದ್ದ ಡಿಕೆಶಿ ಮಂಗಳವಾರ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಭೇಟಿ ಮಾಡಿ ಸಿಎಂ ಬಣದ ನಡೆಯನ್ನು ಆಕ್ಷೇಪಿಸಿದ್ದರು. ನಾನು ವಿದೇಶಕ್ಕೆ ಹೋಗಿದ್ದಾಗ ಸಿಎಂ ಬಣ ಸಭೆ ಮಾಡಿದ್ದಾರೆ. ಡಿನ್ನರ್ ಹೆಸರಲ್ಲಿ ಪ್ರತ್ಯೇಕ ಸಭೆ ಮಾಡಿದ್ದು ಸರಿಯಲ್ಲ. ಡಿನ್ನರ್ ಮೀಟಿಂಗ್ ಬಗ್ಗೆ ತರಹೇವಾರಿ ಸುದ್ದಿ ಹಬ್ಬಿದೆ. ಡಿನ್ನರ್ ರಾಜಕೀಯದಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆ ಆಗುತ್ತದೆ. ಇಂತಹ ಚಟುವಟಿಕೆಗಳನ್ನು ಕೂಡಲೇ ನಿಲ್ಲಿಸುವಂತೆ ಸೂಚಿಸಬೇಕು. ನಾನು ಡಿನ್ನರ್ ಪಾಲಿಟಿಕ್ಸ್ ಮಾಡಿದರೆ ಬೇರೆ ಸಂದೇಶ ಹೋಗುತ್ತದೆ. ಪಕ್ಷದ ಅಧ್ಯಕ್ಷನಾಗಿ ಪಕ್ಷದ ಶಿಸ್ತು ಮುಖ್ಯ ಎಂದು ಸುಮ್ಮನಿದ್ದೇನೆ ಎಂದು ದೂರು ನೀಡಿದ್ದಾರೆ ಎನ್ನಲಾಗುತ್ತಿದೆ.

Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

ಅಗಸ್ಟ್ 10 ರಂದು ಬೆಂಗಳೂರು ಮೆಟ್ರೋ ಫೇಸ್-3 ಶಂಕುಸ್ಥಾಪನೆ: ಪ್ರಧಾನಿ ಮೋದಿ ಉದ್ಘಾಟನೆ ನೆರವೇರಿಸಲಿದ್ದಾರೆ

ಬೆಂಗಳೂರು: ರಾಜಧಾನಿ ಬೆಂಗಳೂರಿಗೆ ಮತ್ತೊಂದು ಸಿಹಿ ಸುದ್ದಿ. ಬೆಂಗಳೂರು ಮೆಟ್ರೋ ಫೇಸ್-3 ಯೋಜನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಸ್ಟ್ 10ರಂದು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಸಂಸದ ತೇಜಸ್ವಿ ಸೂರ್ಯ ಪ್ರಕಟಿಸಿದ್ದಾರೆ.

ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಆಗಸ್ಟ್ 10ರಂದು ಪ್ರಧಾನಿ ಮೋದಿ ಮೆಟ್ರೋ ಯೆಲ್ಲೋ ಲೈನ್ ಅನ್ನು ಉದ್ಘಾಟಿಸುವುದರ ಜೊತೆಗೆ ಜೆಪಿ ನಗರ ವೆಗಾಸಿಟಿ ಮಾಲ್‌ನಿಂದ ಕಡಬಗೆರೆವರೆಗೆ ವಿಸ್ತರಿಸಲಾಗಿರುವ ಮೆಟ್ರೋ ಮಾರ್ಗದ ಶಂಕುಸ್ಥಾಪನೆ ಕಾರ್ಯವನ್ನು ಸಹ ನೆರವೇರಿಸಲಿದ್ದಾರೆ,” ಎಂದು ಹೇಳಿದರು.

ಈ ಯೋಜನೆಯು ಸುಮಾರು ₹17,000 ಕೋಟಿ ವೆಚ್ಚದ ಫೇಸ್-3 ಯೋಜನೆಯ ಭಾಗವಾಗಿದೆ. ಮೊದಲೇ ಯೆಲ್ಲೋ ಲೈನ್ ಶಂಕುಸ್ಥಾಪನೆಗೆ ಮೋದಿ ಅವರೇ ಆಗಿದ್ದರೆ, ಈಗ ಉದ್ಘಾಟನೆಯ ಗೌರವವೂ ಅವರಿಗೇ ಸಲ್ಲಲಿದೆ.

ಡಿಸಿಎಂ ಹೇಳಿಕೆಗೆ ತೀವ್ರ ಪ್ರತಿಕ್ರಿಯೆ:
ಡಿಸಿಎಂ ಡಿ.ಕೆ. ಶಿವಕುಮಾರ್ ಮೆಟ್ರೋ ಯೋಜನೆಯಲ್ಲಿ ರಾಜ್ಯದ ಪಾತ್ರವಿದೆ ಎಂದು ಹೇಳಿರುವುದರ ಬಗ್ಗೆ ತೇಜಸ್ವಿ ಸೂರ್ಯ ಪ್ರತಿಕ್ರಿಯಿಸುತ್ತಾ, “ಇದುವರೆಗೆ ಈ ಯೋಜನೆಯ ಬಗ್ಗೆ ಯಾವ ರಾಜ್ಯ ಸಚಿವರೂ ಚಿಂತೆ ಮಾಡಿಲ್ಲ. ಪ್ರಧಾನಿ ಬರುವ ಸುದ್ದಿ ತಿಳಿಯುತ್ತಿದ್ದಂತೆ ಕ್ರೆಡಿಟ್ ಕಳಿಸಲು ಮುಂದಾಗಿದ್ದಾರೆ,” ಎಂದು ಟೀಕಿಸಿದರು.

ಫ್ಲೈಓವರ್ ಪ್ರಗತಿಯ ಮೇಲೂ ಟೀಕೆ:
“ಈಜಿಪುರದ 2.5 ಕಿ.ಮೀ ಫ್ಲೈಓವರ್‌ನ್ನು ಎಂಟು ವರ್ಷಗಳಿಂದ ಪೂರ್ಣಗೊಳಿಸಲಾಗಿಲ್ಲ. ಅದರೆ ಇದೀಗ 100 ಕಿ.ಮೀ ರಸ್ತೆಗಳ ಯೋಜನೆ ಪ್ರಾರಂಭಿಸಿದ್ದಾರೆ,” ಎಂದು ಹೇಳಿದ್ದಾರೆ.

ಮೆಟ್ರೋ ಯೋಜನೆಗೆ ಹಿಂದೆ ಸರ್ಕಾರದ ಕೊಡುಗೆ:
ಕೊರೋನಾ ಸಮಯದಲ್ಲೂ ಯಡಿಯೂರಪ್ಪ ಮತ್ತು ಬೊಮ್ಮಾಯಿ ಸರ್ಕಾರಗಳು ಅನುದಾನ ಒದಗಿಸಿ ಕೆಲಸ ಮುಂದುವರೆದಿದ್ದವು. ಆದರೆ ಇದೀಗ ಎಂಡಿ ನೇಮಕ ಮಾಡುವಲ್ಲಿ ಕಾಂಗ್ರೆಸ್ ಸರ್ಕಾರ ವಿಳಂಬ ಮಾಡಿದೆ ಎಂದು ಅವರು ಆರೋಪಿಸಿದ್ದಾರೆ.

Continue Reading

ರಾಜಕೀಯ

ಮಾಜಿ ಡಿಸಿಎಂ ಈಶ್ವರಪ್ಪ ಮತ್ತೆ ಭಾರೀ ವಾಗ್ದಾಳಿ: ಯಡಿಯೂರಪ್ಪ ಕುಟುಂಬ, ಬಿಜೆಪಿಗೆ ತೀವ್ರ ಕಿಡಿ

ಬಳ್ಳಾರಿ:
ಬಿಜೆಪಿಯಿಂದ ಉಚ್ಚಾಟನೆಯಾದ ನಂತರ ಸೈಲೆಂಟ್ ಆಗಿದ್ದ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಇದೀಗ ಮತ್ತೆ ಸುದ್ದಿಯಲ್ಲಿ ಮೂಡಿದ್ದಾರೆ. ಬಳ್ಳಾರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನನ್ನದು ಭಾರತೀಯ ಬಿಜೆಪಿಯ ಟೀಮ್, ಯಾವುದೇ ಗುಂಪಿನೊಂದಿಗೆ ನಾನು ಹೋಗುವುದಿಲ್ಲ. ಆದರೆ ಬಿಜೆಪಿ ಶುದ್ಧೀಕರಣಗೊಳ್ಳಬೇಕು ಎಂಬುದು ಎಲ್ಲರ ಅಭಿಪ್ರಾಯ. ಅದು ನನ್ನದು ಸಹ ಆಗಿದೆ,” ಎಂದು ಪರೋಕ್ಷವಾಗಿ ಯಡಿಯೂರಪ್ಪ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈಶ್ವರಪ್ಪನ ಈ ಹೇಳಿಕೆ ಕೇಸರಿಪಾಳ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿದೆ. ಅನೇಕ ನಾಯಕರು ಈಶ್ವರಪ್ಪನ ನೇರ ಭಾಷೆಯ ವಿರುದ್ಧ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ.

ಯಡಿಯೂರಪ್ಪನ ಕುಟುಂಬದ ಮದುವೆಯಲ್ಲಿ ಭಾಗವಹಿಸಿದ ಈಶ್ವರಪ್ಪ:
ಇತ್ತೀಚೆಗೆ ಈಶ್ವರಪ್ಪ ಯಡಿಯೂರಪ್ಪನ ಮೊಮ್ಮಗನ ಮದುವೆಯಲ್ಲಿ ಭಾಗವಹಿಸಿ ಎಲ್ಲರಿಗೂ ಆಶ್ಚರ್ಯ ತಂದಿದ್ದರು. ಈ ಘಟನೆಯ ಬಳಿಕ ಅವರು ಮತ್ತೆ ಪಕ್ಷದ ಪರ ನಿಂತು ಮಾತನಾಡಿದ್ದಾರೆ.

ಎಫ್‌ಐಆರ್ ದಾಖಲು:
ಇದಕ್ಕೂ ಮಿಕ್ಕಿ, ಮಾಜಿ ಡಿಸಿಎಂ ಈಶ್ವರಪ್ಪ ಪುತ್ರ ಕಾಂತೇಶ್ ಮತ್ತು ಸೊಸೆ ಶಾಲಿನಿ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲಾಗಿದೆ. ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದ್ದು, ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿಯಲ್ಲಿ ಕೇಸ್ ದಾಖಲಾಗಿದೆ.

ಅದಕ್ಕೂ ಹಿಂದಿನ ಘಟನೆಗಳು:
ಈ ಪ್ರಕರಣ ಸಂಬಂಧ ಕಳೆದ ಏಪ್ರಿಲ್‌ನಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಲೋಕಾಯುಕ್ತರಿಗೆ ವರದಿ ಸಲ್ಲಿಸಲು ಸೂಚಿಸಿತ್ತು. ಇದೀಗ ಖಾಸಗಿ ವಕೀಲ ವಿನೋದ್ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ.

Continue Reading

ರಾಜಕೀಯ

ಮತಗಳ್ಳತನದ ದಾಖಲೆ ಬಿಡುಗಡೆಗೆ ರಾಹುಲ್ ಗಾಂಧಿ ಸಜ್ಜು: ಪ್ರಿಯಾಂಕ್ ಖರ್ಗೆ ಸ್ಪಷ್ಟನೆ

ಬೆಂಗಳೂರು: ಕಾಂಗ್ರೆಸ್ ಯಾವತ್ತೂ “ಹಿಟ್ ಅಂಡ್ ರನ್” ರಾಜಕೀಯ ಮಾಡಲ್ಲ, ಎಲ್ಲದಕ್ಕೂ ದಾಖಲಾತಿಗಳಿವೆ. ಕರ್ನಾಟಕದಲ್ಲಿ ನಡೆದ ಮತಗಳ್ಳತನದ ಬಗ್ಗೆ ದಾಖಲೆಗಳನ್ನು ರಾಹುಲ್ ಗಾಂಧಿ ಬಹಿರಂಗಪಡಿಸುತ್ತಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಶುಕ್ರವಾರ ವಿಧಾನಸೌಧದಲ್ಲಿ ಮಾತನಾಡಿದ ಅವರು, “ಇಂದು ದೆಹಲಿಯಲ್ಲಿ ರಾಹುಲ್ ಗಾಂಧಿ ಸುದ್ದಿಗೋಷ್ಠಿ ಮೂಲಕ ಮತಗಳ್ಳತನದ ದಾಖಲೆಗಳನ್ನು ಬಿಡುಗಡೆ ಮಾಡಲಿದ್ದಾರೆ. ಆ.8 ರಂದು ಇದೇ ಕುರಿತು ಕರ್ನಾಟಕದಲ್ಲಿಯೂ ಸಾಕ್ಷ್ಯ ಬಿಡುಗಡೆ ಮಾಡಲಾಗುತ್ತದೆ” ಎಂದು ಹೇಳಿದರು.

ಇದೊಂದು ತೀವ್ರ ರಾಜಕೀಯ ಚರ್ಚೆಗೆ ಕಾರಣವಾಗಿದ್ದು, ಚುನಾವಣಾ ಆಯೋಗ ಯಾರ ನಿಯಂತ್ರಣದಲ್ಲಿದೆ ಎಂಬುದನ್ನು ಜನತೆಯೇ ನಿರ್ಧರಿಸಬೇಕಿದೆ ಎಂದು ಅವರು ಹೇಳಿದ್ದಾರೆ.

BJP ಪ್ರತಿಕ್ರಿಯೆ ಬಗ್ಗೆ ಖರ್ಗೆ ಪ್ರತಿಸ್ಪಂದನೆ:

“ನಾವು ಆರೋಪವನ್ನೇ ಮಾಡಿಲ್ಲ. documentation ಇದೆ, ಅದನ್ನೇ ತೋರಿಸುತ್ತಿದ್ದೇವೆ. ಬಿಜೆಪಿಯವರು ಏಕೆ ಎಲ್ಲಾ ಸಂಸ್ಥೆಗಳ ವಕ್ತಾರರಂತೆ ಮಾತನಾಡುತ್ತಿದ್ದಾರೆ? ಆಯಾ ಸಂಸ್ಥೆಗಳಿಗೆ ತಮ್ಮದೇ ಆದ ವಕ್ತಾರರು ಇದ್ದಾರೆ, ಅವರು ಸ್ಪಷ್ಟನೆ ನೀಡಲಿ,” ಎಂದು ತೀವ್ರ ಟೀಕೆ ಮಾಡಿದರು.

Continue Reading

Trending