ಅಪರಾಧ
ಸೈಫ್ ಬೆನ್ನಿನಲ್ಲಿ ಚಾಕು ಸಿಕ್ಕಿಕೊಂಡಿತ್ತು: ವೈದ್ಯರು ಕೊಟ್ರು ಶಾಕಿಂಗ್ ಮಾಹಿತಿ
ಮುಂಬೈ: ಸೈಫ್ ಅಲಿ ಖಾನ್ ದುಷ್ಕರ್ಮಿಯ ಕೃತ್ಯದಿಂದ ತೀವ್ರ ಪೆಟ್ಟು ತಿಂದಿದ್ದಾರೆ, ಮುಂಬೈನ ತಮ್ಮ ಮನೆಯಲ್ಲಿ ಕಳ್ಳನ ದಾಳಿಗೆ ಚಾಕು ಇರಿತಕ್ಕೆ ಗುರಿಯಾಗಿದ್ದಾರೆ, ಗಾಯಗೊಂಡ ಅವರನ್ನು ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸೈಫ್ ಅಲಿ ಖಾನ್ ಜೀವಕ್ಕೆ ಯಾವುದೇ ಅಪಾಯವಿಲ್ಲ ಎಂದು ಆಸ್ಪತ್ರೆ ವೈದ್ಯರು ಸ್ಪಷ್ಟಪಡಿಸಿದ್ದಾರೆ,
ಲೀಲಾವತಿ ಆಸ್ಪತ್ರೆ ವೈದ್ಯ ಡಾ.ನಿತಿನ್ ಮಾಹಿತಿ ನೀಡಿದ್ದು, ಸೈಫ್ ಅಲಿ ಖಾನ್ ಆರೋಗ್ಯ ಸುಧಾರಿಸುತ್ತಿದೆ ಎಂದಿದ್ದಾರೆ, ಅವರ ಬೆನ್ನಲ್ಲಿ ಚಾಕು ಸಿಲುಕಿತ್ತು, ಅದನ್ನು ಹೊರತೆಗೆದು ಚಿಕಿತ್ಸೆ ನೀಡಲಾಗಿದೆ,ಸ್ಪೈನಲ್ ಕಾರ್ಡ್, ಕುತ್ತಿಗೆ ಹಾಗೂ ಎಡಗೈ ಭಾಗಕ್ಕೆ ಬಲವಾದ ಏಟು ಬಿದ್ದಿದ್ದು, ಆಪರೇಷನ್ ನಡೆಸಲಾಗಿದೆ, ಸದ್ಯ ಅವರ ಆರೋಗ್ಯ ಸ್ಧಿತಿ ಸ್ಧಿರವಾಗಿದೆ ಎಂದಿದ್ದಾರೆ.
ಇನ್ನು ಶಾರುಖ್ ಖಾನ್ ಸೇರಿದಂತೆ ಬಾಲಿವುಡ್ ಮತ್ತು ಟಾಲಿವುಡ್ ನಟರು ಸೈಫ್ ಅವರ ಬೇಗನೆ ಚೇತರಿಕೆಗೆ ಹಾರೈಸಿದ್ದಾರೆ, ಶಾರುಖ್ ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಧೈರ್ಯ ಹೇಳಿದ್ದಾರೆ,
ಬಾಲಿವುಡ್ ಕಿಂಗ್ ಶಾರುಖ್ ಖಾನ್ ತಮ್ಮ ಬಹುಕೋಟಿ ವೆಚ್ಚದ ರೋಲ್ಸ್ ರಾಯ್ಸ್ನಲ್ಲಿ ಮುಂಬೈನ ಲೀಲಾವತಿ ಆಸ್ಪತ್ರೆಗೆ ಆಗಮಿಸಿದ್ದಾರೆ, ಸೈಫ್ ಶಸ್ತ್ರಚಿಕಿತ್ಸೆಯ ಅಪಡೇಟ್ ಪಡೆದಿದ್ದಾರೆ, ಅವರು ಕರೀನಾ ಹಾಗೂ ಕುಟುಂಬದವರಿಗೆ ಧೈರ್ಯ ತುಂಬಿದ್ದಾರೆ,
ಅಪರಾಧ
KANPUR ಲ್ಯಾಂಬೋರ್ಗಿನಿ ಅಪಘಾತ: ಕೆಕೆ ಮಿಶ್ರಾ ಪುತ್ರ ಶಿವಂ ಬಂಧನ
ಲಕ್ನೋ: ಕಾನ್ಪುರದಲ್ಲಿ ಇತ್ತೀಚೆಗೆ ನಡೆದ ಲ್ಯಾಂಬೋರ್ಗಿನಿ (Lamborghini Revuelto) ಕಾರು ಅಪಘಾತ ಪ್ರಕರಣದಲ್ಲಿ ತಂಬಾಕು ಉದ್ಯಮಿ ಕೆ.ಕೆ. ಮಿಶ್ರಾ ಅವರ ಪುತ್ರ ಶಿವಂ ಮಿಶ್ರಾ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧನದ ಬಳಿಕ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಶೀಘ್ರದಲ್ಲೇ ಕೋರ್ಟ್ ಮುಂದೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಕಾನ್ಪುರದ ವಿಐಪಿ ರಸ್ತೆಯಲ್ಲಿ ಶಿವಂ ಮಿಶ್ರಾ ಚಲಾಯಿಸುತ್ತಿದ್ದ ಲ್ಯಾಂಬೋರ್ಗಿನಿ ರೆವೆಲ್ಟೊ ಕಾರು ಪಾದಚಾರಿಗಳು ಹಾಗೂ ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿತ್ತು. ಈ ಅಪಘಾತದಲ್ಲಿ ಆರು ಮಂದಿ ಗಾಯಗೊಂಡಿದ್ದರು. ಪ್ರತ್ಯಕ್ಷದರ್ಶಿಗಳ ಪ್ರಕಾರ, ಶಿವಂ ಮಿಶ್ರಾ ಕುಡಿದ ಮತ್ತಿನಲ್ಲಿ ಅತಿ ವೇಗದಲ್ಲಿ ಕಾರು ಚಲಾಯಿಸುತ್ತಿದ್ದರು ಎನ್ನಲಾಗಿದೆ.
ವೇಗವಾಗಿ ಬಂದ ಕಾರು ಮೊದಲು ಆಟೋ ರಿಕ್ಷಾಗೆ ಡಿಕ್ಕಿ ಹೊಡೆದು, ಬಳಿಕ ನಿಲ್ಲಿಸಿದ್ದ ರಾಯಲ್ ಎನ್ಫೀಲ್ಡ್ ಬೈಕ್ಗೆ ಗುದ್ದಿತ್ತು. ಬೈಕ್ ಕಾರಿನ ಕೆಳಗೆ ಸಿಲುಕಿ ಕೆಲ ಅಂತರ ಎಳೆದುಕೊಂಡು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ನಿಂತಿತ್ತು. ಗಾಯಗೊಂಡವರಲ್ಲಿ ತೌಫಿಕ್ ಅಹ್ಮದ್ ಅವರ ಕಾಲಿಗೆ ಗಂಭೀರ ಗಾಯಗಳಾಗಿದ್ದು, ಇತರರಿಗೆ ಮೂಳೆ ಮುರಿತ ಉಂಟಾಗಿದೆ.
ಪ್ರಾರಂಭದಲ್ಲಿ ಕುಟುಂಬದ ವಕೀಲರು ಡ್ರೈವರ್ ಮೋಹನ್ ಕಾರು ಚಲಾಯಿಸುತ್ತಿದ್ದರೆಂದು ಹೇಳಿದ್ದರೂ, ಸಿಸಿಟಿವಿ ದೃಶ್ಯಾವಳಿ ಚಾಲಕನ ಸೀಟಿನಲ್ಲಿ ಶಿವಂ ಮಿಶ್ರಾ ಇದ್ದುದನ್ನು ಸ್ಪಷ್ಟಪಡಿಸಿದೆ. ಇ-ರಿಕ್ಷಾ ಚಾಲಕ ಮೊಹಮ್ಮದ್ ತೌಫೀಕ್ ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ.
ಅಪರಾಧ
BAIRATHI BASAVARJU BREAKING NEWS : ಸಿಐಡಿ ಲುಕ್ಔಟ್ ನೋಟಿಸ್ ಜಾರಿ, ತನಿಖೆ ತೀವ್ರ
ಬೆಂಗಳೂರು: ರೌಡಿಶೀಟರ್ ಬಿಲ್ಲು ಶಿವ ಕೊಲೆ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜ್ ಅವರಿಗೆ ಮತ್ತೊಂದು ಕಾನೂನು ಹಿನ್ನಡೆ ಎದುರಾಗಿದೆ. ನಿರೀಕ್ಷಣಾ ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ಅವರ ಬಂಧನದ ಭೀತಿ ಮತ್ತಷ್ಟು ಗಟ್ಟಿಯಾಗಿದೆ.
ಈ ಹಿಂದೆ ಇದೇ ಪ್ರಕರಣದಲ್ಲಿ ಹೈಕೋರ್ಟ್ ಕೂಡ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಅದರ ನಂತರ ಬೈರತಿ ಬಸವರಾಜ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಅಲ್ಲಿ ಸಹ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿದೆ. ವಿಚಾರಣೆ ವೇಳೆ ನಿಯಮಿತ ಜಾಮೀನಿಗೆ ಅರ್ಜಿ ಸಲ್ಲಿಸುವುದು ಸೂಕ್ತ ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿರುವುದು ಗಮನಾರ್ಹ.
ಈ ಬೆಳವಣಿಗೆಯೊಂದಿಗೆ ತನಿಖಾ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ಈಗಾಗಲೇ ಸಿಐಡಿ ಪೊಲೀಸರು ಬೈರತಿ ಬಸವರಾಜ್ ವಿರುದ್ಧ ಲುಕ್ಔಟ್ ನೋಟಿಸ್ ಜಾರಿ ಮಾಡಿದ್ದಾರೆ. ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಮುಂದಿನ ದಿನಗಳಲ್ಲಿ ಕಾನೂನು ಕ್ರಮಗಳು ಮತ್ತಷ್ಟು ಗಟ್ಟಿಯಾಗುವ ಸಾಧ್ಯತೆಗಳಿವೆ.
ರಾಜಕೀಯ ವಲಯದಲ್ಲೂ ಈ ವಿಚಾರ ಚರ್ಚೆಗೆ ಗ್ರಾಸವಾಗಿದ್ದು, ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಪ್ರಕರಣ ಹೊಸ ತಿರುವು ಪಡೆದಿದೆ.
ಅಪರಾಧ
CRIME : ಬೆಂಗಳೂರಿನಲ್ಲಿ ಮತ್ತೆ ರೋಡ್ ರೇಜ್: ಬಾನೆಟ್ ಮೇಲೆ ವ್ಯಕ್ತಿ ಇದ್ದರೂ 1 ಕಿ.ಮೀ ಕಾರು ಚಲಾಯಿಸಿದ ಚಾಲಕ
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ರೋಡ್ ರೇಜ್ ಪ್ರಕರಣಗಳು ಹೆಚ್ಚುತ್ತಿರುವ ನಡುವೆಯೇ ಫೆ.11ರಂದು ಮತ್ತೊಂದು ಬೆಚ್ಚಿಬೀಳಿಸುವ ಘಟನೆ ನಡೆದಿದೆ. ಹೆಚ್ಎಎಲ್ ರಸ್ತೆಯಲ್ಲಿ ಮಧ್ಯಾಹ್ನ ಸುಮಾರು 12.45ರ ವೇಳೆಗೆ ಕಾರು ಮತ್ತು ಗೂಡ್ಸ್ ವಾಹನ ಟಚ್ ಆದ ವಿಚಾರಕ್ಕೆ ಚಾಲಕರ ನಡುವೆ ವಾಗ್ವಾದ ನಡೆದಿದೆ.
ಈ ವೇಳೆ ಗೂಡ್ಸ್ ವಾಹನ ಚಾಲಕ ನಂಜುಂಡ ಕಾರಿನ ಮುಂದೆ ನಿಂತು ನಷ್ಟಪೂರೈಕೆ ಕೇಳಿದ್ದಾನೆ. ಆದರೆ ಕಾರು ಚಾಲಕ ಏಕಾಏಕಿ ವಾಹನ ಚಲಾಯಿಸಿದ್ದು, ನಂಜುಂಡ ಬಾನೆಟ್ ಮೇಲೆ ಬಿದ್ದರೂ ಸುಮಾರು 1 ಕಿ.ಮೀ ಹೆಚ್ಚು ದೂರ ಕಾರು ನಿಲ್ಲಿಸದೆ ಚಲಾಯಿಸಿದ್ದಾನೆ. ಟ್ರಿನಿಟಿ ಜಂಕ್ಷನ್ನಿಂದ ಸಿಬಿ ಜಂಕ್ಷನ್ ಹಾಗೂ ASC ಸೆಂಟರ್ ಕಾಲೇಜು ವರೆಗೆ ಕಾರು ಸಾಗಿದ ದೃಶ್ಯ ರಸ್ತೆಬದಿ ಜನರನ್ನು ಬೆಚ್ಚಿಬೀಳುವಂತೆ ಮಾಡಿತು. ಕೆಲವರು ಮೊಬೈಲ್ನಲ್ಲಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.
ಇತರೆ ವಾಹನ ಚಾಲಕರು ಅಡ್ಡಹಾಕಿದ ಬಳಿಕ ಕಾರು ನಿಲ್ಲಿಸಲಾಯಿತು.
ಕಾರು ಚಾಲಕ ಬಂಧನ
ಪೊಲೀಸರು ಕಾರು ಚಾಲಕನನ್ನು ಪುಲಕೇಶಿ ನಗರದ 52 ವರ್ಷದ ಸುರೇಶ್ ಎಂದು ಗುರುತಿಸಿದ್ದಾರೆ. ಘಟನೆಯ ವೇಳೆ ಕಾರಿನಲ್ಲಿ ಪತ್ನಿಯೂ ಇದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆ ಯತ್ನ (Attempt to Murder) ಅಡಿಯಲ್ಲಿ ಆರೋಪಿಯನ್ನು ಬಂಧಿಸಿ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ತನಿಖೆಯಲ್ಲಿ ಸುರೇಶ್ ವಿರುದ್ಧ ಈ ಹಿಂದೆಯೂ ಅತಿವೇಗ ಚಾಲನೆ ಹಾಗೂ ಮೋಟಾರು ವಾಹನ ಕಾಯ್ದೆ ಉಲ್ಲಂಘನೆ ಪ್ರಕರಣಗಳು ಇರುವುದಾಗಿ ತಿಳಿದುಬಂದಿದೆ.
ರಾಜಧಾನಿಯಲ್ಲಿ ಹೆಚ್ಚುತ್ತಿರುವ ರೋಡ್ ರೇಜ್
ಇತ್ತೀಚೆಗೆ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮತ್ತೊಂದು ರೋಡ್ ರೇಜ್ ಪ್ರಕರಣದಲ್ಲಿ ಕಾರು ಚಾಲಕ ತನ್ನ ಸ್ನೇಹಿತನನ್ನೇ ಗೋಡೆ ಹಾಗೂ ಮರಕ್ಕೆ ಡಿಕ್ಕಿ ಹೊಡೆದು ಸಾವಿಗೆ ಕಾರಣನಾಗಿದ್ದ ಘಟನೆ ಸ್ಮರಣೀಯವಾಗಿದೆ.
ನಗರದಲ್ಲಿ ಹೆಚ್ಚುತ್ತಿರುವ ರೋಡ್ ರೇಜ್ ಘಟನೆಗಳು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿವೆ.
-
ಕ್ರೀಡೆ18 hours agoIND vs PAK ಹೈವೋಲ್ಟೇಜ್ ಪಂದ್ಯಕ್ಕೆ ಮುನ್ನ ಉಸ್ಮಾನ್ ತಾರಿಕ್ ಎಚ್ಚರಿಕೆ: “ಭಾರತೀಯರು ನನ್ನ ಬೌಲಿಂಗ್ಗೆ ಹೆದರುತ್ತಿದ್ದಾರೆ!”
-
ದೇಶ23 hours agoGBA ELECTION : 5 ಪಾಲಿಕೆಗಳಿಗೆ ವಾರ್ಡ್ ಗಡಿ ಪಾಲನೆ ಕಡ್ಡಾಯ – ಮುಖ್ಯ ಆಯುಕ್ತ ಸೂಚನೆ
-
ಅಪರಾಧ23 hours agoCRIME : ಬೆಂಗಳೂರಿನಲ್ಲಿ ಮತ್ತೆ ರೋಡ್ ರೇಜ್: ಬಾನೆಟ್ ಮೇಲೆ ವ್ಯಕ್ತಿ ಇದ್ದರೂ 1 ಕಿ.ಮೀ ಕಾರು ಚಲಾಯಿಸಿದ ಚಾಲಕ
-
ದೇಶ21 hours ago2026 ಪ್ರೇಮಿಗಳ ದಿನ ಶನಿವಾರ: ರೋಮ್ಯಾಂಟಿಕ್ ವಾರಾಂತ್ಯಕ್ಕೆ ಟಾಪ್ 5 ಪ್ರವಾಸ ತಾಣಗಳು
-
ದೇಶ19 hours agoHAL ಠಾಣೆ ಇನ್ಸ್ಪೆಕ್ಟರ್ ವಿರುದ್ಧ ಗಂಭೀರ ಆರೋಪ: ಅರವಿಂದ್ ರೆಡ್ಡಿ ಕಾಲಿಗೆ ಬೀಳಲು ಬೆದರಿಕೆ?
-
ದೇಶ21 hours agoLATEST : “ದೆಹಲಿಗೆ ಬಂದಿರೋದೇ ರಾಜಕಾರಣಕ್ಕೆ”: ಡಿಕೆಶಿ ಹೇಳಿಕೆ ಕುತೂಹಲ
-
ದೇಶ19 hours agoಜೈರಾಮ್ ರಮೇಶ್ಗೆ ಸುಪ್ರೀಂಕೋರ್ಟ್ ಕಿಡಿ: “ಮಾಧ್ಯಮ ಪ್ರಚಾರಕ್ಕೇ ಅರ್ಜಿ?”
-
ದೇಶ18 hours agoವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್ ಎಚ್ಚರಿಕೆ: “ಭಾರತಕ್ಕೆ ಮರಳದಿದ್ದರೆ ಅರ್ಜಿ ವಿಚಾರಣೆ ಇಲ್ಲ”
