ದೇಶ
ಪುಲ್ವಾಮಾ ದಾಳಿಗೆ 6 ವರ್ಷ – 2019ರ ಫೆ.14 ರಂದು ನಡೆದಿದ್ದು ಏನು?
ಪ್ರತಿ ವರ್ಷ ಪ್ರೇಮಿಗಳ ದಿನವನ್ನಾಗಿ ಆಚರಿಸುವ ಪ್ರತಿಯೊಬ್ಬರಿಗೂ ಇದು ಭಾರತದ ಇತಿಹಾಸದಲ್ಲೇ ಅತ್ಯಂತ ಕರಾಳ ದಿನ ಅನ್ನೋದು ಮತ್ತೆ ಮತ್ತೆ ನೆನಪಿಗೆ ಬರುತ್ತೆ. ಏಕೆಂದರೆ ಇದೇ ದಿನ ಸರಿಯಾಗಿ 6 ವರ್ಷಗಳ ಹಿಂದೆ ಭಾರತೀಯ ಸೇನೆ (Indian Army) ಭದ್ರತಾಪಡೆಗಳ ಮೇಲೆ ನಡೆದ ದಾಳಿಯಲ್ಲಿ 40 ಸಿಆರ್ಪಿಎಫ್ (CRPF) ಯೋಧರು ಹುತಾತ್ಮರಾಗಿದ್ದರು. ಇಡೀ ಭಾರತವೇ ಶೋಕಾಚರಣೆ ಆಚರಿಸಿ, ಮರುಕ ವ್ಯಕ್ತಪಡಿಸಿತ್ತು.
ಈಗಲೂ ಪ್ರತಿ ವರ್ಷ ಫೆಬ್ರವರಿ 14, ಭಾರತೀಯರ ಪಾಲಿಗೆ ಮರೆಯಲಾಗದ ದಿನ, ಕರಾಳ ದಿನ ಎಂದೇ ಹೇಳಬಹುದು. ಹೌದು.. 5 ವರ್ಷಗಳ ಹಿಂದೆ ಫೆಬ್ರವರಿ 14 ರಂದು 40 ಸಿಆರ್ಪಿಎಫ್ ಅಧಿಕಾರಿಗಳು ಹುತಾತ್ಮರಾಗಿದ್ದರು. ಈ ಸುದ್ದಿ ಕೇಳಿ ಇಡೀ ಭಾರತವೇ ಶೋಕಸಾಗರದಲ್ಲಿ ಮುಳುಗಿತ್ತು.
ಜೈಶ್-ಎ-ಮೊಹಮ್ಮದ್ (JEM) ಸಂಘಟನೆಯ ಉಗ್ರಗಾಮಿಗಳು ನಡೆಸಿದ್ದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಸೇನೆಯ ವಾಹನದಲ್ಲಿ ಹೋಗುತ್ತಿದ್ದ ಯೋಧರು ಕ್ಷಣಾರ್ಧದಲ್ಲಿ ಜೀವ ಕಳೆದುಕೊಂಡರು. ಸ್ಫೋಟಕ ತುಂಬಿದ ವಾಹನವನ್ನು ಕೇಂದ್ರೀಯ ಮೀಸಲು ಪೊಲೀಸ್ ಪಡೆ ಬೆಂಗಾವಲು ಪಡೆಯ ಮೇಲೆ ಭೀಕರವಾಗಿ ದಾಳಿ ನಡೆಸಲಾಗಿತ್ತು. ಈ ಕರಾಳ ಘಟನೆಯ ಬಗ್ಗೆ ನೆಟ್ಟಿಗರು #BlackDay ಹೆಸರಿನಲ್ಲಿ ಪೋಸ್ಟ್ ಮಾಡಿ ವೀರ ಯೋಧರ ಬಲಿದಾನವನ್ನು ಸ್ಮರಿಸುತ್ತಿದ್ದಾರೆ.
ದಾಳಿಯ ಪ್ರಮುಖ ಅಂಶಗಳು
14 ಫೆಬ್ರವರಿ 2019:
ಜಮ್ಮು ಮತ್ತು ಕಾಶ್ಮೀರದಲ್ಲಿ 40 ಸಿಆರ್ಪಿಎಫ್ ಯೋಧರು ಪ್ರಯಾಣಿಸುತ್ತಿದ್ದ 2 ಬಸ್ಗಳನ್ನು ಗುರಿಯಾಗಿಸಿಕೊಂಡು ಆತ್ಮಾಹುತಿ ಬಾಂಬ್ ದಾಳಿ ನಡೆಸಲಾಗಿತ್ತು. ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಬಸ್ಗಳು ಹೆದ್ದಾರಿಯಲ್ಲಿ ಪ್ರಯಾಣಿಸುತ್ತಿದ್ದ ಅರೆಸೇನಾಪಡೆಯ ವಾಹನಗಳ ದೊಡ್ಡ ಗುಂಪಿನ ಭಾಗವಾಗಿತ್ತು. ದಾಳಿಯ ಸ್ವಲ್ಪ ಸಮಯದ ನಂತರ ಜೈಶ್-ಇ-ಮೊಹಮ್ಮದ್ ಸಂಘಟನೆ ವೀಡಿಯೋ ಬಿಡುಗಡೆ ಮಾಡಿತು. ದಾಳಿಯ ಹೊಣೆ ಹೊತ್ತುಕೊಂಡಿತ್ತು. ಆತ್ಮಾಹುತಿ ಬಾಂಬರ್ ಆದಿಲ್ ಅಹ್ಮದ್ ದಾರ್, ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಗುಂಡಿಬಾಗ್, ಕಾಕಪೋರಾದಲ್ಲಿ ವಾಸಿಸುತ್ತಿದ್ದ ಸ್ಥಳೀಯ ಕಾಶ್ಮೀರಿ ಜಿಹಾದಿ ಎಂದು ಹೇಳಿಕೊಂಡಿದ್ದನು.
15 ಫೆಬ್ರವರಿ 2019:
ಫೆಬ್ರವರಿ 15, 2019 ರಂದು ಪತ್ರಿಕಾ ಪ್ರಕಟಣೆಯಲ್ಲಿ ವಿದೇಶಾಂಗ ಸಚಿವಾಲಯವು, ಪಾಕಿಸ್ತಾನವು ಭಯೋತ್ಪಾದನೆ ಬೆಂಬಲಿಸುತ್ತಿದೆ ಎಂದು ಆರೋಪಿಸಿತು. ಪಾಕಿಸ್ತಾನಿ ನಿಯಂತ್ರಿತ ಪ್ರದೇಶಗಳಲ್ಲಿ ತನ್ನ ಭಯೋತ್ಪಾದಕ ಮೂಲಸೌಕರ್ಯವನ್ನು ನಿರ್ವಹಿಸಲು ಮತ್ತು ವಿಸ್ತರಿಸಲು, ಭಾರತ ಇತರೆಡೆ ದಾಳಿಗಳನ್ನು ನಡೆಸಲು ಜೈಷ್ ನಾಯಕ ಮಸೂದ್ ಅಜರ್ಗೆ ಸಂಪೂರ್ಣ ಸ್ವಾತಂತ್ರ್ಯವನ್ನು ನೀಡಲಾಗಿದೆ ಎಂದು ವಿದೇಶಾಂಗ ಇಲಾಖೆ ಆರೋಪಿಸಿತು.
ಪುಲ್ವಾಮಾ ದಾಳಿಯಲ್ಲಿ ಪಾಕ್ ಭಾಗವಹಿಸಿದೆ ಎಂಬ ಆರೋಪವನ್ನು ಪಾಕಿಸ್ತಾನ ನಿರಾಕರಿಸಿತು. ಮಸೂದ್ ಅಜರ್ ಭಯೋತ್ಪಾದಕ ಸಂಘಟನೆಗೆ ಸೇರಿದವನಲ್ಲ ಎಂದು ಚೀನಾ ಸಮರ್ಥಿಸಿಕೊಂಡಿತು. ಇದಕ್ಕೆ ಕಾರಣರಾದವರು ಭಾರೀ ಬೆಲೆ ತೆರಬೇಕಾಗುತ್ತದೆ ಮತ್ತು ಭಯೋತ್ಪಾದಕರನ್ನು ಎದುರಿಸಲು ಭದ್ರತಾ ಪಡೆಗಳಿಗೆ ಮುಕ್ತ ನಿಯಂತ್ರಣ ನೀಡಲಾಗುವುದು. ಉಗ್ರರು ಎಲ್ಲೇ ಅಡಗಿದ್ದರೂ ಅವರ ಮನೆಗೆ ನುಗ್ಗಿ ಹೊಡೆದು ಬರುತ್ತೇವೆ ಎಂದು ಅಂದು ಮೋದಿ ಗುಡುಗಿದ್ದರು. ಇಂತಹ ದಾಳಿಗಳನ್ನು ಸಂಘಟಿಸಿ ಭಾರತವನ್ನು ದುರ್ಬಲಗೊಳಿಸಲು ಸಾಧ್ಯವಿಲ್ಲ ಎಂದು ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದರು. ಪುಲ್ವಾಮಾ ಭಯೋತ್ಪಾದಕ ದಾಳಿಯ ವಿರುದ್ಧ ಪ್ರತಿಭಟನೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯಾಗಿ ಜಮ್ಮುವಿನಲ್ಲಿ ಕರ್ಫ್ಯೂ ಜಾರಿಗೊಳಿಸಲಾಯಿತು. ಮಿಲಿಟರಿ ಪಡೆಗಳ ನಿಯೋಜನೆಯಿಂದ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲಾಯಿತು.
16 ಫೆಬ್ರವರಿ 2019:
ರಾಜಕೀಯ ಪಕ್ಷಗಳು ಭದ್ರತಾ ಪಡೆಗಳನ್ನು ಬೆಂಬಲಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದವು, ಸ್ವಲ್ಪ ಸಮಯದ ನಂತರ ಎಲ್ಲಾ ಪಾಕಿಸ್ತಾನಿ ಸರಕುಗಳ ಮೇಲಿನ ಕಸ್ಟಮ್ಸ್ ಸುಂಕವನ್ನು 200 ಪ್ರತಿಶತಕ್ಕೆ ಹೆಚ್ಚಿಸಲಾಯಿತು. – ಜೆಎಂ ಜೊತೆ ಆಪಾದಿತ ಸಂಪರ್ಕ ಹೊಂದಿರುವ ಕನಿಷ್ಠ 7 ಜನರನ್ನು ಪುಲ್ವಾಮದಲ್ಲಿ ಬಂಧಿಸಲಾಯಿತು.
ಈ ದಾಳಿ ಪರಿಣಾಮದಿಂದ ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಬಂಧ ಮತ್ತಷ್ಟೂ ಹದಗೆಟ್ಟಿತ್ತು. ಭಾರತವು ತನ್ನ ಅತ್ಯಂತ ಆದ್ಯತೆಯ ರಾಷ್ಟ್ರವಾಗಿ ಪಾಕಿಸ್ತಾನದ ಸ್ಥಾನಮಾನವನ್ನು ತೆಗೆದುಹಾಕಿತು. ಭಾರತಕ್ಕೆ ಆಮದು ಮಾಡಿಕೊಳ್ಳುವ ಎಲ್ಲಾ ಪಾಕಿಸ್ತಾನಿ ಸರಕುಗಳ ಮೇಲಿನ ಕಸ್ಟಮ್ಸ್ ಹೆಚ್ಚಿಸಲಾಯಿತು. ಭಾರತದ ಸರ್ಕಾರದ ಪ್ರಕಾರ, ಪಾಕಿಸ್ತಾನವನ್ನು ಮನಿ ಲಾಂಡರಿಂಗ್ (ಎಫ್ಎಟಿಎಫ್) ಕಪ್ಪುಪಟ್ಟಿಗೆ ಹಣಕಾಸು ಆಕ್ಷನ್ ಟಾಸ್ಕ್ ಫೋರ್ಸ್ ಸೇರಿಸಬೇಕು. ಜಮ್ಮು ಮತ್ತು ಕಾಶ್ಮೀರ ಆಡಳಿತವು ಫೆಬ್ರವರಿ 17 ರಂದು ಪ್ರತ್ಯೇಕತಾವಾದಿ ನಾಯಕರ ಭದ್ರತೆಯನ್ನು ಹಿಂದಕ್ಕೆ ಪಡೆದುಕೊಂಡಿತು.
26 ಫೆಬ್ರವರಿ 2019:
ಭಾರತೀಯ ವಾಯುಪಡೆಯ ಜೆಟ್ಗಳು 12 ದಿನಗಳ ನಂತರ ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾದಲ್ಲಿರುವ ಬಾಲಾಕೋಟ್ನಲ್ಲಿರುವ ಜೆಇಎಂ ಶಿಬಿರದ ಮೇಲೆ ಬಾಂಬ್ ದಾಳಿ ನಡೆಸಿತು. 1971ರ ಭಾರತ-ಪಾಕಿಸ್ತಾನ ಯುದ್ಧದ ನಂತರ, ದಾಳಿಯ ವಿಮಾನವು ನಿಯಂತ್ರಣ ರೇಖೆಯನ್ನು ದಾಟಿದ್ದು ಇದೇ ಮೊದಲಾಗಿತ್ತು. ಫೆಬ್ರವರಿ 26 ರಂದು, ಭಾರತೀಯ ವಾಯುಪಡೆಯ 12 ಮಿರಾಜ್-2000 ಜೆಟ್ಗಳು, ಗಡಿ ನಿಯಂತ್ರಣ ರೇಖೆಯನ್ನು ದಾಟಿ ಬಾಲಕೋಟ್ನಲ್ಲಿದ್ದ ಉಗ್ರಗಾಮಿ ನೆಲೆಗಳ ಮೇಲೆ ವೈಮಾನಿಕ ದಾಳಿ ಮಾಡಿತು. ಇದು ಜೈಶ್-ಇ-ಮೊಹಮ್ಮದ್ ತರಬೇತಿ ಶಿಬಿರದ ಮೇಲೆ ನಡೆಸಿದ ದಾಳಿ ಮತ್ತು ಈ ದಾಳಿಯಲ್ಲಿ ಸುಮಾರು 250 ಉಗ್ರಗಾಮಿಗಳು ಬಲಿಯಾದರು ಎಂದು ವರದಿ ಹೇಳಿತ್ತು.
27 ಫೆಬ್ರವರಿ 2019:
ಪಾಕಿಸ್ತಾನದ ಎಫ್-16 ಯುದ್ಧ ವಿಮಾನಗಳು ಭಾರತದ ವಾಯುನೆಲೆಯನ್ನು ಪ್ರವೇಶಿಸಿದವು. ಈ ಯುದ್ಧವಿಮಾನಗಳು ಭಾರತೀಯ ಮಿಗ್-21 ಬೈಸನ್ ಎರಡು ಯುದ್ಧವಿಮಾನಗಳನ್ನು ನಾಶಪಡಿಸಿದವು. ಇದೇ ವೇಳೆ ಪಾಕಿಸ್ತಾನದ ಎಫ್-16 ವಿಮಾನವನ್ನು ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಪಲ್ಟಿಹೊಡೆಯುವಂತೆ ಮಾಡಿದ್ದರು. ಈ ವೇಳೆ ಅಭಿನಂದನ್ ಅವರನ್ನ ಪಾಕಿಸ್ತಾನ ಸೆರೆಹಿಡಿಯಿತು.
28 ಫೆಬ್ರವರಿ 2019:
ಬಂಧಿತ ಐಎಎಫ್ ಪೈಲಟ್ ವಿಂಗ್ ಕಮಾಂಡರ್ ಅಭಿನಂದನ್ ಅವರನ್ನು ಬಿಡುಗಡೆ ಮಾಡುವುದಾಗಿ ಇಮ್ರಾನ್ ಖಾನ್ ಫೆಬ್ರವರಿ 28 ರಂದು ಘೋಷಿಸಿದರು.
ರಾಜ್ಯ
DK Shivakumar: ಜಾತಿಗಿಂತ ಮಾನವೀಯತೆಯೇ ಮುಖ್ಯ 40 ವರ್ಷಗಳ ರಾಜಕಾರಣದಲ್ಲಿ ಯಾರ ಜಾತಿಯನ್ನೂ ಕೇಳಿಲ್ಲ ಎಂದ ಸಿಎಂ ಡಿ.ಕೆ. ಶಿವಕುಮಾರ್
ರಾಮನಗರ: ನನಗೆ ಜಾತಿಯ ಮೇಲೆ ನಂಬಿಕೆ ಇಲ್ಲ. ಮನುಷ್ಯತ್ವವೇ ಮುಖ್ಯ. ಡಾ. ಬಿ.ಆರ್. ಅಂಬೇಡ್ಕರ್ ಅವರ ತತ್ವಗಳು ಹಾಗೂ ಬಸವಣ್ಣನವರ ಆಶಯಗಳನ್ನು ಮುಂದಿಟ್ಟುಕೊಂಡೇ ರಾಜಕಾರಣ ಮಾಡುತ್ತಿದ್ದೇನೆ. ಕಳೆದ 40 ವರ್ಷಗಳ ರಾಜಕೀಯ ಜೀವನದಲ್ಲಿ ಯಾರನ್ನೂ ನೀನು ಯಾವ ಜಾತಿ ಎಂದು ಕೇಳಿಲ್ಲ. ಮಾನವೀಯತೆಯೇ ಎಲ್ಲಕ್ಕಿಂತ ದೊಡ್ಡ ಧರ್ಮ ಎಂದು ನಂಬಿದ್ದೇನೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್(DK Shivakumar) ಹೇಳಿದರು.
ಕನಕಪುರದ ಮುನ್ಸಿಪಲ್ ಹೈಸ್ಕೂಲ್ ಮೈದಾನದಲ್ಲಿ ಪರಿಶಿಷ್ಟ ಜಾತಿ ಒಕ್ಕೂಟದ ವತಿಯಿಂದ ಶನಿವಾರ ಆಯೋಜಿಸಿದ್ದ ಕೃತಜ್ಞತಾ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ತಮ್ಮ ರಾಜಕೀಯ ಜೀವನದಲ್ಲಿ ಕನಕಪುರ ಹಾಗೂ ಸಾತನೂರು ಜನರು ನೀಡಿದ ಬೆಂಬಲವನ್ನು ಸ್ಮರಿಸಿದ ಶಿವಕುಮಾರ್, ನನಗೆ ಸಿಕ್ಕಿರುವ ಅಧಿಕಾರ ನನ್ನದಲ್ಲ, ಅದು ನಿಮ್ಮದು. ಸಾತನೂರು ಮತ್ತು ಕನಕಪುರದ ಜನತೆ ನನ್ನನ್ನು 10 ಬಾರಿ ಆಯ್ಕೆ ಮಾಡಿ ಆಶೀರ್ವದಿಸಿದ್ದಾರೆ. ಇಂದು ನಡೆಯುತ್ತಿರುವ ಈ ಅಭಿಮಾನದ ಸನ್ಮಾನದ ಶ್ರೇಯಸ್ಸು ನಿಮಗೇ ಸಲ್ಲಬೇಕು. ಜನರ ಸೇವೆ ಮಾಡುವ ಅವಕಾಶವನ್ನು ನೀಡಿದ್ದೀರಿ. ನೀವು ನನ್ನ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಂಡು ಕ್ಷೇತ್ರದ ಘನತೆಯನ್ನು ಹೆಚ್ಚಿಸುವ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.
DK Shivakumar ನಾನು ನಿಮ್ಮ ಮನೆ ಮಗ, ನುಡಿದಂತೆ ನಡೆಯುತ್ತೇನೆ
ಇಲ್ಲಿಯವರೆಗೆ ಜನರಿಗೆ ನೀಡಿದ ಮಾತಿನಂತೆ ನಡೆದುಕೊಂಡಿದ್ದೇನೆ. ಮುಂದೆಯೂ ಅದೇ ರೀತಿ ನಡೆದುಕೊಳ್ಳುತ್ತೇನೆ. ಕನಕಪುರ ಕ್ಷೇತ್ರದ ರಸ್ತೆ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಿದ್ದೇನೆ. ಕನಕಪುರ ಎಂದಾಕ್ಷಣ ಇಡೀ ದೇಶವೇ ತಿರುಗಿ ನೋಡುವಂತೆ ಮಾಡುವುದು ನನ್ನ ಗುರಿ ಎಂದು ಹೇಳಿದರು.
ಹಿಂದೆ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ರಾಮನಗರ ಜಿಲ್ಲಾ ಪಂಚಾಯಿತಿ ಚುನಾವಣೆಗೆ ವೈರಮುಡಿ ಅವರನ್ನು ಆಯ್ಕೆ ಮಾಡಿದ್ದನ್ನು ನೆನಪಿಸಿಕೊಂಡ ಶಿವಕುಮಾರ್, ನನ್ನ ನಿರ್ಧಾರವನ್ನು ನೋಡಿ ಹಲವರು ನಕ್ಕಿದ್ದರು. ನನ್ನನ್ನು ಆ ತೀರ್ಮಾನದಿಂದ ಹಿಂದೆ ಸರಿಸಲು ಸಾಕಷ್ಟು ಪ್ರಯತ್ನ ಮಾಡಿದರು. ಆದರೆ ನಾನು ಜಗ್ಗಲಿಲ್ಲ. ನನಗೆ ಜಾತಿ ಮುಖ್ಯವಲ್ಲ. ವ್ಯಕ್ತಿ ಮತ್ತು ಅವರ ಮೇಲಿನ ನಂಬಿಕೆ ಮುಖ್ಯ ಎಂದು ಹೇಳಿದರು.
ಮಳವಳ್ಳಿಯಿಂದ ಕುಣಿಗಲ್ ಗಡಿ ಹಾಗೂ ದೇವನಹಳ್ಳಿವರೆಗೆ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರೇ. ಈಗ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಹೆಸರಿಟ್ಟ ಬಳಿಕ ಆಸ್ತಿಗಳ ಮೌಲ್ಯ ಹೆಚ್ಚಾಗಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಡಿ.ಕೆ. ಶಿವಕುಮಾರ್ ರಿಯಲ್ ಎಸ್ಟೇಟ್ ಮಾಡಲು ಜಿಲ್ಲೆಗೆ ಹೆಸರು ಬದಲಿಸಿದ್ದಾರೆ ಎಂದು ಕೆಲವರು ಆರೋಪಿಸಿದ್ದಾರೆ. ನಾನು ಎಂದಾದರೂ ನಿಮ್ಮ ಬಳಿ ಬಂದು ಭೂ ವ್ಯವಹಾರ ಮಾಡಿದ್ದೀನಾ ಎಂದು ಪ್ರಶ್ನಿಸಿದರು.
ನಾನು ನಿಮ್ಮ ಮನೆ ಮಗನಂತೆ. ನಿಮಗೆ ಗೌರವ ತರುವ ಕೆಲಸ ಮಾಡುತ್ತೇನೆ. ನಾನು ಮುಖ್ಯಮಂತ್ರಿ ಆಗಿರಬಹುದು. ಆದರೆ ನಿಮ್ಮ ಬಳಿ ಮುಖ್ಯಮಂತ್ರಿ ಎಂದು ತೋರಿಸಿಕೊಳ್ಳುವ ಅಗತ್ಯ ನನಗಿಲ್ಲ ಎಂದು ಹೇಳಿದರು.
ಚಂದ್ರಶೇಖರ್ ಮೂರ್ತಿ ಮತ್ತು ತಮ್ಮ ನಡುವೆ ಭಿನ್ನಾಭಿಪ್ರಾಯ ಉಂಟಾದ ಸಂದರ್ಭದಲ್ಲಿ ಟಿಕೆಟ್ ತಪ್ಪಿದ್ದ ಘಟನೆಯನ್ನೂ ಅವರು ನೆನಪಿಸಿಕೊಂಡರು. ಆಗ ಕ್ಷೇತ್ರದ ಜನರು ತಮ್ಮ ಬೆಂಬಲಕ್ಕೆ ನಿಂತಿದ್ದರು. ಸೈಕಲ್ ಗುರುತಿನಡಿ ಚುನಾವಣೆ ಎದುರಿಸಿದಾಗ ಇಂದಿರಾಗಾಂಧಿ ಮತ್ತು ರಾಜೀವ್ ಗಾಂಧಿ ಅವರ ಫೋಟೋಗಳನ್ನು ಇಟ್ಟುಕೊಂಡು ಜನರು ಪ್ರಚಾರ ಮಾಡಿದ್ದರು. ಪರಿಶಿಷ್ಟ ಜಾತಿ, ಧರ್ಮ ಹಾಗೂ ಹಿಂದುಳಿದ ವರ್ಗಗಳ ಜನರು ತಮ್ಮನ್ನು ಬೆಂಬಲಿಸಿದ್ದರು. ಆ ಚುನಾವಣೆಯಲ್ಲಿ ಕೇವಲ 3 ಸಾವಿರ ಮತಗಳನ್ನು ಪಡೆದಿದ್ದರೂ, ನಂತರದ ಚುನಾವಣೆಯಲ್ಲಿ ಜನರು ತುಂಬು ಹೃದಯದಿಂದ ಗೆಲ್ಲಿಸಿ ವಿಧಾನಸೌಧಕ್ಕೆ ಕಳುಹಿಸಿಕೊಟ್ಟರು. ಇದನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದರು.
DK Shivakumar ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ
ತಾವು ಶಿಕ್ಷಣದಿಂದ ವಂಚಿತವಾದಂತಹ ಪರಿಸ್ಥಿತಿ ಕ್ಷೇತ್ರದ ಮಕ್ಕಳಿಗೆ ಎದುರಾಗಬಾರದು ಎಂಬ ಉದ್ದೇಶದಿಂದ ಕನಕಪುರ ಕ್ಷೇತ್ರದಲ್ಲಿ ಸುಮಾರು 10 ಕಡೆ ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಪರಿವರ್ತಿಸಲಾಗುತ್ತಿದೆ ಎಂದು ಶಿವಕುಮಾರ್ ಹೇಳಿದರು.
ಸಿಎಸ್ಆರ್ ಅನುದಾನದ ನೆರವಿನಿಂದ ಎಗ್ಗನೂರು, ದೊಡ್ಡಾಲಹಳ್ಳಿ, ಕೋಡಿಹಳ್ಳಿ, ಹೊಸದುರ್ಗ, ಚಿಕ್ಕಮುದುವಾಡಿ ಸೇರಿದಂತೆ ಹಲವು ಕಡೆ ಶಾಲೆಗಳ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಮುಂದಿನ ದಿನಗಳಲ್ಲಿ ಕೆಮ್ಮಳೆ ಮತ್ತು ಸಾತನೂರು ಸಮೀಪವೂ ಶಾಲೆಗಳನ್ನು ಆರಂಭಿಸಲಾಗುವುದು ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ಸುಮಾರು 26 ಲಕ್ಷ ಐಟಿ ವೃತ್ತಿಪರರು ಕೆಲಸ ಮಾಡುತ್ತಿದ್ದಾರೆ. ಅದೇ ರೀತಿಯಲ್ಲಿ ಗ್ರಾಮೀಣ ಭಾಗದ ಯುವಕರಿಗೂ ತಂತ್ರಜ್ಞಾನ ಮತ್ತು ಕೌಶಲ್ಯ ಆಧಾರಿತ ಉದ್ಯೋಗಾವಕಾಶಗಳು ಸಿಗಬೇಕು. ಈ ಉದ್ದೇಶದಿಂದ ಶಿಕ್ಷಣ, ತಾಂತ್ರಿಕ ತರಬೇತಿ ಹಾಗೂ ಕೈಗಾರಿಕೆಗಳ ಸಹಭಾಗಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದರು.
ವಿದ್ಯೆ ಯಾರೂ ಕಳ್ಳತನ ಮಾಡಲಾಗದ, ಅಗ್ನಿಯಲ್ಲಿ ಸುಡಲಾಗದ ಹಾಗೂ ನೀರಿನಲ್ಲಿ ನೆನೆಯಲಾಗದ ಗುಪ್ತನಿಧಿ ಎಂದು ಹಿರಿಯರು ಹೇಳುತ್ತಿದ್ದರು. ಅಂತಹ ಅಮೂಲ್ಯ ಸಂಪತ್ತನ್ನು ವಿದ್ಯಾರ್ಥಿ ಜೀವನದಲ್ಲಿ ಕಳೆದುಕೊಳ್ಳಬಾರದು. ತಾನು ಪದವಿ ಪಡೆಯಲು ಸಾಧ್ಯವಾಗದೆ 43ರಿಂದ 47ನೇ ವಯಸ್ಸಿನಲ್ಲಿ ಪದವಿ ಪೂರ್ಣಗೊಳಿಸಿದೆ. ಆದರೆ ನೀವು ಸಮಯಕ್ಕೆ ಸರಿಯಾಗಿ ಪದವಿ ಪಡೆದು ಉತ್ತಮ ವಿದ್ಯಾವಂತರಾಗಿ, ಬುದ್ಧಿವಂತರಾಗಿ ಕನಕಪುರಕ್ಕೆ ಮಾತ್ರವಲ್ಲ, ದೇಶಕ್ಕೆ ಆಸ್ತಿಯಾಗಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
DK Shivakumar ಶಿಕ್ಷಣಕ್ಕೆ ಸೀಟು ಸಿಗದ ನೋವೇ ರಾಜಕೀಯಕ್ಕೆ ಬರಲು ಕಾರಣ
ತಮ್ಮ ಬಾಲ್ಯದ ದಿನಗಳನ್ನು ನೆನಪಿಸಿಕೊಂಡ ಶಿವಕುಮಾರ್, ಕರಿಯಪ್ಪನವರು ಹಾಗೂ ತಮ್ಮ ಹಿರಿಯರು ಹೈಸ್ಕೂಲ್ಗೆ ಸೇರಿಸಲು ಪ್ರಯತ್ನಿಸಿದ್ದರು. ಅಂದಿನ ಶಿಕ್ಷಣ ಸಚಿವ ಮಲ್ಲಿಕಾರ್ಜುನ ಸ್ವಾಮಿ ಅವರ ಬಳಿಗೂ ಕರೆದೊಯ್ದಿದ್ದರು. ಆದರೆ ಶಿಕ್ಷಣಕ್ಕೆ ಪ್ರವೇಶ ಸಿಗಲಿಲ್ಲ. ಅಂದೇ ರಾಜಕೀಯಕ್ಕೆ ಬಂದು ಶಾಸಕನಾಗಬೇಕು ಎಂದು ನಿರ್ಧರಿಸಿದ್ದೆ ಎಂದು ಹೇಳಿದರು.
ರಾಜಕೀಯದಲ್ಲಿ ಬೆಳೆದು ಇಂದು ರಾಜ್ಯದ ಪ್ರತಿನಿಧಿಯಾಗಿ ಹಾಗೂ ಮುಖ್ಯಮಂತ್ರಿಯಾಗಿ ನಿಮ್ಮ ಮುಂದೆ ನಿಂತಿದ್ದೇನೆ. ಆದರೆ ಬೆಂಗಳೂರಿನಲ್ಲಿ ಏನೇ ಇದ್ದರೂ ಕನಕಪುರ ಕ್ಷೇತ್ರಕ್ಕೆ ಬಂದಾಗ ನಾನು ನಿಮ್ಮ ಸೇವಕ, ನಿಮ್ಮ ಮನೆ ಮಗ. ನಿಮ್ಮ ತಂದೆ-ತಾಯಂದಿರು ಹಾಗೂ ಕಾರ್ಯಕರ್ತರ ಮುಂದೆ ಮುಖ್ಯಮಂತ್ರಿ ಎಂಬ ಸ್ಥಾನಕ್ಕಿಂತ ನನ್ನ ಕರ್ತವ್ಯವೇ ಮುಖ್ಯ ಎಂದು ಶಿವಕುಮಾರ್ ಹೇಳಿದರು.
DK Shivakumar ಐದು ಗ್ಯಾರಂಟಿಗಳಿಗಾಗಿ ₹52 ಸಾವಿರ ಕೋಟಿ ವೆಚ್ಚ
ಈ ಬಾರಿ ನಿಮ್ಮ ಬಳಿ ಮತ ಕೇಳಲು ಬರಲೇ ಇಲ್ಲ. ಸಿದ್ದರಾಮಯ್ಯ ಮತ್ತು ನಾನು ರಾಜ್ಯಾದ್ಯಂತ ಪ್ರವಾಸ ಮಾಡಿದ್ದೆವು. ಜನರು ಕಾಂಗ್ರೆಸ್ಗೆ 136 ಸ್ಥಾನಗಳನ್ನು ನೀಡಿದ್ದಾರೆ. ಕ್ಷೇತ್ರದ ಹಾಗೂ ರಾಜ್ಯದ ಜನತೆಗೆ ನೀಡಿದ ಮಾತನ್ನು ಉಳಿಸಿಕೊಂಡಿದ್ದೇವೆ ಎಂದು ಹೇಳಿದರು.
ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಿದ ಅವರು, ಮನೆ ಯಜಮಾನಿಯ ಖಾತೆಗೆ ₹2 ಸಾವಿರ ನೀಡಲಾಗುತ್ತಿದೆ. ಮಹಿಳೆಯರಿಗೆ ಬಸ್ಗಳಲ್ಲಿ ಉಚಿತ ಪ್ರಯಾಣದ ಅವಕಾಶ ಕಲ್ಪಿಸಲಾಗಿದೆ. ಗ್ಯಾರಂಟಿ ಯೋಜನೆಗಳಿಗಾಗಿ ಸರ್ಕಾರ ₹52 ಸಾವಿರ ಕೋಟಿ ವೆಚ್ಚ ಮಾಡುತ್ತಿದೆ ಎಂದು ತಿಳಿಸಿದರು.
DK Shivakumar ಮೇಕೆದಾಟು ಯೋಜನೆ ಪೂರ್ಣಗೊಳಿಸುವ ಭರವಸೆ
ನಮ್ಮ ಕ್ಷೇತ್ರದ ಜನರು ಕ್ಷೇತ್ರದಲ್ಲೇ ಉದ್ಯೋಗ ಪಡೆಯಬೇಕು. ಉದ್ಯೋಗಕ್ಕಾಗಿ ಯಾರೂ ವಲಸೆ ಹೋಗಬಾರದು ಎಂಬ ಉದ್ದೇಶದಿಂದ ಚನ್ನಪಟ್ಟಣ-ರಾಮನಗರದ ಮಧ್ಯೆ ಬೃಹತ್ ಡೈರಿ ನಿರ್ಮಿಸಲಾಗಿದೆ. ಹಾಲಿನ ಬೆಲೆಯನ್ನು ₹7 ಹೆಚ್ಚಿಸಿ ರೈತರ ಬದುಕಿಗೆ ನೆರವಾಗುವ ಪ್ರಯತ್ನ ಮಾಡಲಾಗಿದೆ ಎಂದು ಶಿವಕುಮಾರ್ ಹೇಳಿದರು.
ಕೆರೆಗಳಿಗೆ ನೀರು ತುಂಬಿಸುವ ಯೋಜನೆ ರೂಪಿಸಲಾಗಿದೆ. ಇನ್ನೆರಡು ತಿಂಗಳಲ್ಲಿ ಪ್ರತಿ ಹಳ್ಳಿಗೂ ಕಾವೇರಿ ನೀರು ಹರಿಸುವ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಂಗಳೂರು ದಕ್ಷಿಣ ಎಂದು ಜಿಲ್ಲೆಗೆ ಹೆಸರು ಇಟ್ಟಿದ್ದೀರಿ. ಮೇಕೆದಾಟು ಯೋಜನೆಯನ್ನು ಪೂರ್ಣಗೊಳಿಸಬೇಕು ಎಂದು ಕ್ಷೇತ್ರದ ಜನರು ಆದೇಶಿಸಿದ್ದಾರೆ. ಅದಕ್ಕೆ ತಲೆಬಾಗಿ ಯೋಜನೆ ರೂಪಿಸಿದ್ದೇವೆ. ಸುಪ್ರೀಂ ಕೋರ್ಟ್ನಲ್ಲೂ ನಮಗೆ ನ್ಯಾಯ ಸಿಕ್ಕಿದೆ. ಈ ಯೋಜನೆ ನನ್ನ ಅವಧಿಯಲ್ಲೇ ಪೂರ್ಣಗೊಳ್ಳಬೇಕು. ಅದಕ್ಕಾಗಿ ಅಗತ್ಯ ಕ್ರಮ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದರು.
also read: https://hosasuddi.in/dk-shivakumar-japan-visit/
DK Shivakumar ಬೆಂಗಳೂರು ದಕ್ಷಿಣದಲ್ಲಿ ನಾಲ್ಕು ಮೆಡಿಕಲ್ ಕಾಲೇಜುಗಳಿವೆ
ಬೆಂಗಳೂರು ದಕ್ಷಿಣ ಭಾಗದಲ್ಲಿ ನಾಲ್ಕು ಮೆಡಿಕಲ್ ಕಾಲೇಜುಗಳಿವೆ ಎಂದು ಶಿವಕುಮಾರ್ ಹೇಳಿದರು. ಚನ್ನಪಟ್ಟಣದ ಚಾಮುಂಡೇಶ್ವರಿ ಮೆಡಿಕಲ್ ಕಾಲೇಜು, ರಾಮನಗರದ ವಿಶ್ವವಿದ್ಯಾಲಯ, ಹಾರೋಹಳ್ಳಿ ಹಾಗೂ ಕನಕಪುರದ ಮಧ್ಯೆ ದಯಾನಂದ ಸಾಗರ ಕಾಲೇಜು ಸೇರಿದಂತೆ ವೈದ್ಯಕೀಯ ಶಿಕ್ಷಣಕ್ಕೆ ಹಲವು ಅವಕಾಶಗಳು ಸೃಷ್ಟಿಯಾಗಿವೆ.
ಇಡೀ ಭಾರತದಲ್ಲಿ ಒಂದೇ ಕ್ಷೇತ್ರದ ವ್ಯಾಪ್ತಿಯಲ್ಲಿ ನಾಲ್ಕು ಮೆಡಿಕಲ್ ಕಾಲೇಜುಗಳು ಇರುವ ಉದಾಹರಣೆ ಇಲ್ಲ. ಆದರೆ ನಮ್ಮ ಕ್ಷೇತ್ರದಲ್ಲಿ ಈ ಅವಕಾಶ ಸಿಕ್ಕಿದೆ. ಕ್ಷೇತ್ರದ ಜನರ ಬದುಕಿನಲ್ಲಿ ಬದಲಾವಣೆ ಆಗಬೇಕು ಎಂಬುದು ನಮ್ಮ ಉದ್ದೇಶ ಎಂದರು.
ಸಾತನೂರು-ಕೆಂಬಾಳ ಬಳಿ, ಕಲ್ಲಹಳ್ಳಿ, ಮರಿಯ್ಯನ ದೊಡ್ಡಿ ಸೇರಿದಂತೆ ಸುಮಾರು 10 ಕಡೆ ಶಾಲೆಗಳ ನಿರ್ಮಾಣ ಕಾರ್ಯ ನಡೆಯುತ್ತಿದೆ. ನಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗಬೇಕು. ನಾನು ಪಡೆದ ಶಿಕ್ಷಣಕ್ಕಿಂತ ನೀವು ಉತ್ತಮ ಶಿಕ್ಷಣ ಪಡೆಯಬೇಕು. ಸ್ವಾಭಿಮಾನ ಮತ್ತು ಸ್ವಾವಲಂಬನೆಯಿಂದ ಬದುಕಬೇಕು ಎಂಬುದು ನನ್ನ ಆಸೆ ಎಂದು ಹೇಳಿದರು.
DK Shivakumar ಸಾತನೂರು ಟ್ಯಾಲೆಂಟ್ ಪಾರ್ಕ್ ಆಗಿಸುವ ಗುರಿ
ಇದೇ ಸಂದರ್ಭದಲ್ಲಿ ಸಾತನೂರಿನಲ್ಲಿ ರೂರಲ್ ಎಜುಕೇಷನ್ ಸೊಸೈಟಿ ವತಿಯಿಂದ ಆರಂಭಿಸಿರುವ ಕೌಶಲ್ಯಾಭಿವೃದ್ಧಿ ಕೇಂದ್ರವನ್ನು ಶಿವಕುಮಾರ್ ಉದ್ಘಾಟಿಸಿದರು.
ಸಾತನೂರನ್ನು ಟ್ಯಾಲೆಂಟ್ ಪಾರ್ಕ್ ಆಗಿ ರೂಪಿಸುವ ಉದ್ದೇಶದಿಂದ ಈ ಕೇಂದ್ರವನ್ನು ಸ್ಥಾಪಿಸಲಾಗಿದೆ. ಗ್ರಾಮೀಣ ಭಾಗದ ಯುವಕರಿಗೂ ನಗರ ಪ್ರದೇಶದ ಯುವಕರಿಗೆ ಸಿಗುವಂತಹ ಗುಣಮಟ್ಟದ ಶಿಕ್ಷಣ ಮತ್ತು ಉದ್ಯೋಗಾಧಾರಿತ ತರಬೇತಿ ದೊರೆಯಬೇಕು. ಈ ಮೂಲಕ ಗ್ರಾಮೀಣ ಯುವಕರಿಗೆ ಉತ್ತಮ ಭವಿಷ್ಯ ರೂಪಿಸಬೇಕು ಎಂಬುದು ಸರ್ಕಾರದ ಆಶಯ ಎಂದು ಶಿವಕುಮಾರ್ ಹೇಳಿದರು.
ದೇಶ
China Pakistan Space Cooperation: ಚೀನಾ ನೆರವಿನಿಂದ ಪಾಕಿಸ್ತಾನದ ಬಾಹ್ಯಾಕಾಶ ಸಾಮರ್ಥ್ಯ ಹೆಚ್ಚಳ ಭಾರತದ ತ್ರಿದಳಾಧಿಪತಿ ಎಚ್ಚರಿಕೆ
ನವದೆಹಲಿ: ಚೀನಾ ನೆರವಿನೊಂದಿಗೆ ಪಾಕಿಸ್ತಾನ ತನ್ನ ಬಾಹ್ಯಾಕಾಶ ಕ್ಷೇತ್ರದ ಸಾಮರ್ಥ್ಯವನ್ನು(China Pakistan Space Cooperation) ಮತ್ತಷ್ಟು ಸುಧಾರಿಸಿಕೊಳ್ಳುತ್ತಿದೆ ಎಂದು ಭಾರತದ ತ್ರಿದಳಾಧಿಪತಿ ಜನರಲ್ ಎನ್.ಎಸ್. ರಾಜಾ ಸುಬ್ರಮಣಿ ಹೇಳಿದ್ದಾರೆ. ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾಕಿಸ್ತಾನ ಪಡೆಯುತ್ತಿರುವ ಹೊಸ ಸಾಮರ್ಥ್ಯಗಳನ್ನು ಭಾರತದ ಭವಿಷ್ಯದ ಕಾರ್ಯತಂತ್ರ ರೂಪಿಸುವಾಗ ಗಂಭೀರವಾಗಿ ಪರಿಗಣಿಸಬೇಕಿದೆ ಎಂದು ಅವರು ಹೇಳಿದ್ದಾರೆ.
ದೆಹಲಿಯಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಜನರಲ್ ಎನ್.ಎಸ್. ರಾಜಾ ಸುಬ್ರಮಣಿ, ಪಾಕಿಸ್ತಾನವು ಚೀನಾದೊಂದಿಗೆ ಹೊಂದಿರುವ ಸಹಕಾರದ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ತನ್ನ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳುತ್ತಿರುವುದಾಗಿ ತಿಳಿಸಿದ್ದಾರೆ. ಇದು ಕೇವಲ ಬಾಹ್ಯಾಕಾಶ ಕ್ಷೇತ್ರಕ್ಕೆ ಸೀಮಿತವಾಗಿಲ್ಲ. ದೇಶದ ಭದ್ರತೆ ಮತ್ತು ಕಾರ್ಯತಂತ್ರಕ್ಕೆ ಸಂಬಂಧಿಸಿದ ಇತರ ಸಾಮರ್ಥ್ಯಗಳ ಮೇಲೂ ಇದರ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಅವರು ವಿವರಿಸಿದ್ದಾರೆ.
ಇತ್ತೀಚೆಗೆ ಚೀನಾ Shenzhou-24 ಬಾಹ್ಯಾಕಾಶ ನೌಕೆಯನ್ನು ಉಡಾವಣೆ ಮಾಡಿರುವ ಹಿನ್ನೆಲೆಯಲ್ಲಿ ಕೇಳಲಾದ ಪ್ರಶ್ನೆಗೆ ತ್ರಿದಳಾಧಿಪತಿ ಈ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಾಹ್ಯಾಕಾಶ ಯಾನದಲ್ಲಿ ಪಾಕಿಸ್ತಾನದ ಪ್ರಜೆಯೂ ಸೇರಿದಂತೆ ಮೂವರು ಗಗನಯಾತ್ರಿಗಳು ಭಾಗವಹಿಸಿದ್ದರು ಎಂಬ ವಿಚಾರವನ್ನು ಉಲ್ಲೇಖಿಸಿ ಪ್ರಶ್ನೆ ಕೇಳಲಾಗಿತ್ತು.
ಅದಕ್ಕೆ ಉತ್ತರಿಸಿದ ಜನರಲ್ ರಾಜಾ ಸುಬ್ರಮಣಿ, ಚೀನಾ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಂದಿರುವ ಸಾಮರ್ಥ್ಯಗಳ ಪ್ರಯೋಜನವನ್ನು ಪಾಕಿಸ್ತಾನವೂ ಪಡೆದುಕೊಳ್ಳುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ. ವಿಶೇಷವಾಗಿ ಗುಪ್ತಚರ ಮತ್ತು ನ್ಯಾವಿಗೇಷನ್ ಸೇರಿದಂತೆ ಹಲವು ಪ್ರಮುಖ ಸೇವೆಗಳಲ್ಲಿ ಚೀನಾ ಹೊಂದಿರುವ ಸಾಮರ್ಥ್ಯಗಳನ್ನು ಪಾಕಿಸ್ತಾನ ಬಳಸಿಕೊಳ್ಳುವ ಅವಕಾಶವಿದೆ ಎಂದು ಅವರು ತಿಳಿಸಿದ್ದಾರೆ.
China Pakistan Space Cooperation ಗುಪ್ತಚರ, ನ್ಯಾವಿಗೇಷನ್ ಸಾಮರ್ಥ್ಯಗಳ ಬಗ್ಗೆ ಎಚ್ಚರಿಕೆ
ಬಾಹ್ಯಾಕಾಶ ತಂತ್ರಜ್ಞಾನವು ಇಂದಿನ ಭದ್ರತಾ ವ್ಯವಸ್ಥೆಯಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತಿದೆ. ಉಪಗ್ರಹಗಳ ಮೂಲಕ ಗುಪ್ತಚರ ಮಾಹಿತಿ ಸಂಗ್ರಹಿಸುವುದು, ನ್ಯಾವಿಗೇಷನ್ ಸೇವೆಗಳನ್ನು ಒದಗಿಸುವುದು ಹಾಗೂ ವಿವಿಧ ರೀತಿಯ ಕಾರ್ಯತಂತ್ರದ ಮಾಹಿತಿಯನ್ನು ಪಡೆಯುವುದು ಸಾಧ್ಯವಾಗುತ್ತದೆ. ಇಂತಹ ಕ್ಷೇತ್ರಗಳಲ್ಲಿ ಚೀನಾ ಈಗಾಗಲೇ ಹೊಂದಿರುವ ಸಾಮರ್ಥ್ಯಗಳನ್ನು ಪಾಕಿಸ್ತಾನ ಬಳಸಿಕೊಳ್ಳುವ ಸಾಧ್ಯತೆ ಇರುವುದರಿಂದ ಭಾರತ ಇದನ್ನು ತನ್ನ ರಕ್ಷಣಾ ಯೋಜನೆಗಳಲ್ಲಿ ಪರಿಗಣಿಸಬೇಕಾಗಿದೆ ಎಂಬ ಸಂದೇಶವನ್ನು ತ್ರಿದಳಾಧಿಪತಿ ನೀಡಿದ್ದಾರೆ.
ಪಾಕಿಸ್ತಾನವು ಚೀನಾದೊಂದಿಗೆ ರಕ್ಷಣಾ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ಹಲವು ವರ್ಷಗಳಿಂದ ಸಹಕಾರ ಹೊಂದಿದೆ. ಇದೀಗ ಬಾಹ್ಯಾಕಾಶ ಕ್ಷೇತ್ರದಲ್ಲೂ ಈ ಸಹಕಾರ ಮುಂದುವರಿದಿರುವುದು ಭಾರತದ ಭದ್ರತಾ ದೃಷ್ಟಿಯಿಂದ ಗಮನಾರ್ಹ ಬೆಳವಣಿಗೆಯಾಗಿದೆ.
ಚೀನಾದ ಬಾಹ್ಯಾಕಾಶ ಸಾಮರ್ಥ್ಯವು ವೇಗವಾಗಿ ವಿಸ್ತರಿಸುತ್ತಿರುವ ಸಂದರ್ಭದಲ್ಲಿ ಪಾಕಿಸ್ತಾನಕ್ಕೆ ಅದರ ತಂತ್ರಜ್ಞಾನ ಮತ್ತು ಸೇವೆಗಳ ಲಭ್ಯತೆ ಹೆಚ್ಚಾದರೆ, ಅದು ಭಾರತದ ಭದ್ರತಾ ಲೆಕ್ಕಾಚಾರಗಳ ಮೇಲೂ ಪರಿಣಾಮ ಬೀರಬಹುದು. ಹೀಗಾಗಿ ಬಾಹ್ಯಾಕಾಶ ಕ್ಷೇತ್ರದಲ್ಲಿ ಎದುರಾಗಬಹುದಾದ ಹೊಸ ಸವಾಲುಗಳನ್ನು ಭಾರತದ ರಕ್ಷಣಾ ಕಾರ್ಯತಂತ್ರದಲ್ಲಿ ಸೇರಿಸಿಕೊಳ್ಳಬೇಕಾದ ಅಗತ್ಯವಿದೆ ಎಂದು ರಾಜಾ ಸುಬ್ರಮಣಿ ಹೇಳಿದ್ದಾರೆ.
also read: https://hosasuddi.in/karnataka-assembly-election-2029-st-somashekar/
China Pakistan Space Cooperationಭಾರತದ ಕಾರ್ಯತಂತ್ರದಲ್ಲಿ ಬಾಹ್ಯಾಕಾಶಕ್ಕೆ ಮಹತ್ವ
ಆಧುನಿಕ ಯುದ್ಧ ಮತ್ತು ರಾಷ್ಟ್ರೀಯ ಭದ್ರತೆಯಲ್ಲಿ ಬಾಹ್ಯಾಕಾಶ ಕ್ಷೇತ್ರದ ಮಹತ್ವ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಉಪಗ್ರಹ ಆಧಾರಿತ ನ್ಯಾವಿಗೇಷನ್, ಸಂವಹನ ಮತ್ತು ಗುಪ್ತಚರ ವ್ಯವಸ್ಥೆಗಳು ಸೇನಾ ಕಾರ್ಯಾಚರಣೆಗಳಲ್ಲಿ ಪ್ರಮುಖವಾಗಿವೆ. ಈ ಹಿನ್ನೆಲೆಯಲ್ಲಿ ಎದುರಾಳಿ ರಾಷ್ಟ್ರಗಳು ಬಾಹ್ಯಾಕಾಶ ತಂತ್ರಜ್ಞಾನವನ್ನು ಯಾವ ರೀತಿಯಲ್ಲಿ ಬಳಸಿಕೊಳ್ಳುತ್ತಿವೆ ಎಂಬುದನ್ನು ನಿರಂತರವಾಗಿ ಗಮನಿಸುವುದು ಅಗತ್ಯವಾಗಿದೆ.
ಚೀನಾ ತನ್ನ ಬಾಹ್ಯಾಕಾಶ ಕಾರ್ಯಕ್ರಮವನ್ನು ವೇಗವಾಗಿ ವಿಸ್ತರಿಸುತ್ತಿದ್ದು, ಪಾಕಿಸ್ತಾನದೊಂದಿಗೆ ಅದರ ಸಹಕಾರವೂ ಹೊಸ ಆಯಾಮ ಪಡೆಯುತ್ತಿದೆ. ಇಂತಹ ಬೆಳವಣಿಗೆಗಳನ್ನು ಕೇವಲ ಬಾಹ್ಯಾಕಾಶ ಕ್ಷೇತ್ರದ ಸಾಧನೆಗಳಾಗಿ ನೋಡದೆ, ರಾಷ್ಟ್ರೀಯ ಭದ್ರತೆ ಮತ್ತು ಕಾರ್ಯತಂತ್ರದ ದೃಷ್ಟಿಯಿಂದಲೂ ವಿಶ್ಲೇಷಿಸಬೇಕು ಎಂಬುದನ್ನು ತ್ರಿದಳಾಧಿಪತಿಯ ಹೇಳಿಕೆ ಸೂಚಿಸುತ್ತದೆ.
ಪಾಕಿಸ್ತಾನದ ಸಾಮರ್ಥ್ಯ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾರತ ತನ್ನದೇ ಆದ ಬಾಹ್ಯಾಕಾಶ ಆಧಾರಿತ ರಕ್ಷಣಾ ಮತ್ತು ಗುಪ್ತಚರ ವ್ಯವಸ್ಥೆಗಳನ್ನು ಮತ್ತಷ್ಟು ಬಲಪಡಿಸುವ ಅಗತ್ಯವೂ ಎದುರಾಗಿದೆ. ವಿಶೇಷವಾಗಿ ಚೀನಾ ಹೊಂದಿರುವ ಗುಪ್ತಚರ ಹಾಗೂ ನ್ಯಾವಿಗೇಷನ್ ಸಾಮರ್ಥ್ಯಗಳನ್ನು ಪಾಕಿಸ್ತಾನ ಬಳಸಿಕೊಳ್ಳುವ ಸಾಧ್ಯತೆ ಇರುವುದರಿಂದ ಭವಿಷ್ಯದ ಭದ್ರತಾ ಯೋಜನೆಗಳಲ್ಲಿ ಈ ಅಂಶಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಾಗಿದೆ.
ಒಟ್ಟಿನಲ್ಲಿ, ಚೀನಾ ನೆರವಿನಿಂದ ಪಾಕಿಸ್ತಾನ ಬಾಹ್ಯಾಕಾಶ ಕ್ಷೇತ್ರದಲ್ಲಿ ತನ್ನ ಸಾಮರ್ಥ್ಯ ಹೆಚ್ಚಿಸಿಕೊಳ್ಳುತ್ತಿರುವುದು ಭಾರತದ ಭದ್ರತಾ ಕಾರ್ಯತಂತ್ರಕ್ಕೆ ಹೊಸ ಸವಾಲಾಗಬಹುದು ಎಂದು ಜನರಲ್ ಎನ್.ಎಸ್. ರಾಜಾ ಸುಬ್ರಮಣಿ ಅವರ ಹೇಳಿಕೆ ಸ್ಪಷ್ಟಪಡಿಸಿದೆ. ಬಾಹ್ಯಾಕಾಶ, ಗುಪ್ತಚರ ಮತ್ತು ನ್ಯಾವಿಗೇಷನ್ ಕ್ಷೇತ್ರಗಳಲ್ಲಿ ಎದುರಾಗುವ ಬದಲಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಭಾರತದ ಕಾರ್ಯತಂತ್ರವನ್ನು ರೂಪಿಸಬೇಕಾದ ಅಗತ್ಯವಿದೆ.
ದೇಶ
Yogi Adityanath Bulldozer Statement: ಬುಲ್ಡೋಜರ್ ಬಗ್ಗೆ ಮಾತನಾಡುವುದು ಸುಲಭ ಓಡಿಸಲು ಧೈರ್ಯ ಬೇಕು: ಯೋಗಿ ಆದಿತ್ಯನಾಥ್
ವಾರಾಣಸಿ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬುಲ್ಡೋಜರ್ ರಾಜಕೀಯದ(Yogi Adityanath Bulldozer Statement) ಕುರಿತು ನೀಡಿರುವ ಹೇಳಿಕೆ ಇದೀಗ ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ. ವಾರಾಣಸಿಯಲ್ಲಿ ನಡೆಯುತ್ತಿರುವ NDTV Creators Manch 2026 ಕಾರ್ಯಕ್ರಮದಲ್ಲಿ ನಡೆದ ಸಂದರ್ಶನದಲ್ಲಿ ಮಾತನಾಡಿದ ಯೋಗಿ ಆದಿತ್ಯನಾಥ್, ಬುಲ್ಡೋಜರ್ ಬಗ್ಗೆ ಮಾತನಾಡುವುದು ಸುಲಭ. ಆದರೆ ಅದನ್ನು ಓಡಿಸುವುದು ಅಷ್ಟು ಸುಲಭವಲ್ಲ ಎಂದು ಹೇಳಿದ್ದಾರೆ.
ಬುಲ್ಡೋಜರ್ ಅನ್ನು ಚಲಾಯಿಸಲು ಇಚ್ಛಾಶಕ್ತಿ ಮತ್ತು ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ ಅಗತ್ಯ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಈ ಮೂಲಕ ತಮ್ಮ ಸರ್ಕಾರದ ಆಡಳಿತ ಶೈಲಿಯೊಂದಿಗೆ ಗುರುತಿಸಿಕೊಂಡಿರುವ ಬುಲ್ಡೋಜರ್ ವಿಚಾರದ ಬಗ್ಗೆ ಅವರು ಮತ್ತೊಮ್ಮೆ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.
also read: https://hosasuddi.in/thiruparankundram-deepam-dispute-crpf-security/
Thiruparankundram: ತಿರುಪರಂಕುಂದ್ರಂ ದೀಪ ವಿವಾದ ದೀಪತ್ತೂಣ್ನಲ್ಲಿ ಸಿಆರ್ಪಿಎಫ್ ಬಿಗಿ ಭದ್ರತೆ
Yogi Adityanath Bulldozer Statement ಉತ್ತರ ಪ್ರದೇಶದಲ್ಲಿ ಅಕ್ರಮ ಕಟ್ಟಡಗಳು ಮತ್ತು ಅಪರಾಧಿಗಳೊಂದಿಗೆ ಸಂಬಂಧ ಹೊಂದಿರುವ ಆಸ್ತಿಗಳ ವಿರುದ್ಧ ನಡೆಯುವ ತೆರವು ಕಾರ್ಯಾಚರಣೆಗಳಿಗೆ ಬುಲ್ಡೋಜರ್ಗಳು ಪ್ರಮುಖ ಸಂಕೇತವಾಗಿ ಕಾಣಿಸಿಕೊಂಡಿವೆ. ಯೋಗಿ ಸರ್ಕಾರದ ಅವಧಿಯಲ್ಲಿ ಇಂತಹ ಕಾರ್ಯಾಚರಣೆಗಳು ಸಾಕಷ್ಟು ಚರ್ಚೆಗೆ ಕಾರಣವಾಗಿದ್ದು, ಸರ್ಕಾರದ ಕ್ರಮವನ್ನು ಬೆಂಬಲಿಸುವವರ ಜೊತೆಗೆ ವಿರೋಧಿಸುವವರೂ ಇದ್ದಾರೆ. ಇಂತಹ ಕ್ರಮಗಳಲ್ಲಿ ಕಾನೂನು ಪ್ರಕ್ರಿಯೆ ಮತ್ತು ನ್ಯಾಯಸಮ್ಮತತೆಯ ಕುರಿತು ಹಲವು ಪ್ರಶ್ನೆಗಳು ಕೂಡ ಎದ್ದಿವೆ.
ಸಂದರ್ಶನದ ವೇಳೆ ಯೋಗಿ ಆದಿತ್ಯನಾಥ್ ಅವರು ಉತ್ತರ ಪ್ರದೇಶದ ರಾಜಕೀಯ ಪರಿಸ್ಥಿತಿ ಹಾಗೂ ಮುಂದಿನ ವಿಧಾನಸಭಾ ಚುನಾವಣೆಯ ಬಗ್ಗೆಯೂ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ವಿಶೇಷವಾಗಿ ಗೋರಖ್ಪುರದಲ್ಲಿ ಬಿಜೆಪಿ ಸಾಧಿಸಿರುವ ಚುನಾವಣಾ ಫಲಿತಾಂಶಗಳನ್ನು ಅವರು ಉಲ್ಲೇಖಿಸಿದ್ದಾರೆ.
Yogi Adityanath Bulldozer Statement ಗೋರಖ್ಪುರದಲ್ಲಿ ಬಿಜೆಪಿ ಹಲವು ಚುನಾವಣೆಗಳಲ್ಲಿ ಉತ್ತಮ ಸಾಧನೆ ಮಾಡಿದೆ ಎಂದು ಯೋಗಿ ಹೇಳಿದ್ದಾರೆ. 2017 ಮತ್ತು 2022ರ ವಿಧಾನಸಭಾ ಚುನಾವಣೆಗಳಲ್ಲೂ, 2024ರ ಚುನಾವಣೆಯಲ್ಲೂ ಗೋರಖ್ಪುರದ ಎಲ್ಲಾ ಸ್ಥಾನಗಳನ್ನು ಬಿಜೆಪಿ ಗೆದ್ದಿದೆ ಎಂದು ಅವರು ತಿಳಿಸಿದ್ದಾರೆ. ಈ ಚುನಾವಣಾ ಫಲಿತಾಂಶಗಳನ್ನು ಉಲ್ಲೇಖಿಸಿದ ಅವರು, ಉತ್ತರ ಪ್ರದೇಶದಾದ್ಯಂತ ಇದೇ ರೀತಿಯ ಫಲಿತಾಂಶವನ್ನು ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು ಸಾಧಿಸಲಿವೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಗೋರಖ್ಪುರ ಮಾತ್ರವಲ್ಲ, ಇಡೀ ಉತ್ತರ ಪ್ರದೇಶವೇ ತಮ್ಮ ಪಾಲಿಗೆ ಮನೆ ಇದ್ದಂತೆ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲೂ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು ಉತ್ತಮ ಫಲಿತಾಂಶ ಪಡೆಯುವ ನಿರೀಕ್ಷೆ ಹೊಂದಿರುವುದಾಗಿ ಅವರು ಹೇಳಿದ್ದಾರೆ.
2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಯೋಗಿ ಆದಿತ್ಯನಾಥ್ ಅವರ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ. ರಾಜ್ಯದಲ್ಲಿ ಮುಂದಿನ ಚುನಾವಣೆಗೆ ರಾಜಕೀಯ ಪಕ್ಷಗಳು ಈಗಾಗಲೇ ಸಿದ್ಧತೆ ಆರಂಭಿಸಿರುವ ಸಂದರ್ಭದಲ್ಲಿ, ಯೋಗಿ ಅವರ ಮಾತುಗಳು ಬಿಜೆಪಿ ತನ್ನ ಆಡಳಿತದ ಸಾಧನೆ ಹಾಗೂ ಚುನಾವಣಾ ಕಾರ್ಯತಂತ್ರದ ಬಗ್ಗೆ ಹೊಂದಿರುವ ಆತ್ಮವಿಶ್ವಾಸವನ್ನು ತೋರಿಸುತ್ತವೆ.
NDTV Creators Manch 2026ರಲ್ಲಿ ಯೋಗಿ ಆದಿತ್ಯನಾಥ್ ಅವರು ಬುಲ್ಡೋಜರ್ ವಿಚಾರದ ಜೊತೆಗೆ ಉತ್ತರ ಪ್ರದೇಶದ ಅಭಿವೃದ್ಧಿ ದೃಷ್ಟಿಕೋನ, ಮಹಿಳಾ ಮೀಸಲಾತಿ ಹಾಗೂ ಕ್ಷೇತ್ರ ಪುನರ್ವಿಂಗಡಣೆ ಸೇರಿದಂತೆ ಹಲವು ಪ್ರಮುಖ ವಿಚಾರಗಳ ಬಗ್ಗೆಯೂ ಮಾತನಾಡಿದ್ದಾರೆ.
ವಾರಾಣಸಿಯ ನಮೋ ಘಾಟ್ನಲ್ಲಿ ನಡೆಯುತ್ತಿರುವ ಮೂರು ದಿನಗಳ NDTV Creators Manch ಕಾರ್ಯಕ್ರಮದಲ್ಲಿ ಕಲೆ, ಸಂಸ್ಕೃತಿ, ಸಂಗೀತ, ಸಾಹಿತ್ಯ, ಪ್ರವಾಸೋದ್ಯಮ ಮತ್ತು ಸಾರ್ವಜನಿಕ ನೀತಿ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆಗಳು ನಡೆಯುತ್ತಿವೆ. ನವೆಂಬರ್ 28ರಿಂದ 30ರವರೆಗೆ ನಡೆಯುತ್ತಿರುವ ಕಾರ್ಯಕ್ರಮದ ಮೊದಲ ದಿನದ ಪ್ರಮುಖ ಆಕರ್ಷಣೆಯಾಗಿ ಯೋಗಿ ಆದಿತ್ಯನಾಥ್ ಅವರ ಸಂವಾದವೂ ಇದೆ.
ಒಟ್ಟಿನಲ್ಲಿ, “ಬುಲ್ಡೋಜರ್ ಬಗ್ಗೆ ಮಾತನಾಡುವುದು ಸುಲಭ, ಆದರೆ ಅದನ್ನು ಓಡಿಸಲು ಇಚ್ಛಾಶಕ್ತಿ ಬೇಕು” ಎಂಬ ಯೋಗಿ ಆದಿತ್ಯನಾಥ್ ಅವರ ಹೇಳಿಕೆ ಉತ್ತರ ಪ್ರದೇಶದ ರಾಜಕೀಯದಲ್ಲಿ ಮತ್ತೆ ಬುಲ್ಡೋಜರ್ ವಿಚಾರವನ್ನು ಮುನ್ನೆಲೆಗೆ ತಂದಿದೆ. 2027ರ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಈ ಹೇಳಿಕೆ ರಾಜಕೀಯವಾಗಿ ಮತ್ತಷ್ಟು ಚರ್ಚೆಗೆ ಕಾರಣವಾಗುವ ಸಾಧ್ಯತೆ ಇದೆ.
