Connect with us

ದೇಶ

ಡ್ಯಾಂಡ್ರಫ್ ಜಾಹೀರಾತಿನಿಂದ ದಾಂಪತ್ಯ ಜೀವನಕ್ಕೆ ಕಾಲಿಟ್ಟ ವಿರುಷ್ಕಾ! – ಇಬ್ಬರ ಲವ್‌ ಸ್ಟೋರಿಯನ್ನು ನೀವು ಓದಲೇಬೇಕು

Published

on

ಇಂದು ಪ್ರೇಮಿಗಳ ದಿನಾಚರಣೆ. ಈ ದಿನಾಚರಣೆಯಂದು (Valentine’s Day) ಹಲವರು ಪ್ರೇಮ ಕಥೆಗಳನ್ನು ನೀವು ಓದಿರಬಹುದು. ಈ ಪಟ್ಟಿಗೆ ನೀವು ಓದಲೇಬೇಕಾದ ಮತ್ತು ನೆನಪಿನಲ್ಲಿ ಇಟ್ಟುಕೊಳ್ಳಲೇಬೇಕಾದ ಪ್ರೇಮ ಕಥೆ ಯಾವುದು ಎಂದರೆ ವಿರಾಟ್‌ ಕೊಹ್ಲಿ (Virat kohli) ಮತ್ತು ಅನುಷ್ಕಾ (Anushka Sharma) ಲವ್‌ ಸ್ಟೋರಿ. ಸೆಲೆಬ್ರಿಟಿಗಳು ಲವ್‌ (Love) ಮಾಡಿ ನಂತರ ಬ್ರೇಕಪ್‌ ಆಗುವುದು ಇಂದು ಹೊಸದೆನಲ್ಲ. ಆದರೆ ವಿರಷ್ಕಾ ಜೋಡಿ ಪ್ರೀತಿ ಮಾಡಿ ಮದುವೆಯಾಗುವುದರ ಜೊತೆ ಈಗಲೂ ಅನ್ಯೋನ್ಯವಾಗಿದ್ದಾರೆ. ಈ ಮೂಲಕ ನಿಜವಾದ ಪ್ರೇಮಿಗಳಿಗೆ ಆದರ್ಶವಾಗಿದ್ದಾರೆ.

ವಿರಾಟ್‌ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಇಬ್ಬರು ಸೆಲೆಬ್ರಿಟಿಗಳು. ಈ ಇಬ್ಬರು ಸ್ಟಾರ್‌ಗಳು ಮೊದಲು ಭೇಟಿಯಾಗಿದ್ದು ಡ್ಯಾಂಡ್ರಫ್ ಜಾಹೀರಾತಿನಲ್ಲಿ. 2013ರಲ್ಲಿ ಟಿವಿ ಜಾಹೀರಾತಿನಲ್ಲಿ ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ಕೊಹ್ಲಿ ಆರ್‌ಸಿಬಿ ತಂಡದ ನಾಯಕನಾಗಿದ್ದರೆ ಅನುಷ್ಕಾ ಬಾಲಿವುಡ್‌ ಬೇಡಿಕೆಯ ನಟಿಯಾಗಿದ್ದರು.

ಜಾಹೀರಾತಿನಲ್ಲಿ ಇಬ್ಬರ ನಟನೆಯ ಕೆಮಿಸ್ಟ್ರಿ ವರ್ಕ್‌ ಆಯಿತು. ಪರಸ್ಪರ ಫೋನ್‌ ನಂಬರ್‌ ಬದಲಾವಣೆ ಆಯಿತು. ಆರಂಭದಲ್ಲಿ ಇಬ್ಬರು ಕದ್ದು ಮುಚ್ಚಿ ಡೇಟ್‌ ಮಾಡಲು ಆರಂಭಿಸಿದರು. ಈ ವೇಳೆ ವಿರಾಟ್‌ ಕೊಹ್ಲಿ ಟೀಂ ಇಂಡಿಯಾದ (Team India) ಸ್ಟಾರ್‌ ಬ್ಯಾಟ್ಸ್‌ಮನ್‌ ಆಗಿ ಹೊರಹೊಮ್ಮಿದ್ದರು. ಪರಿಣಾಮ ಕದ್ದು ಮುಚ್ಚಿ ಸಾರ್ವಜನಿಕ ಸ್ಥಳಗಳಲ್ಲಿ ಹೋಗಲು ಸಾಧ್ಯವಾಗುತ್ತಿರಲಿಲ್ಲ. ಹೋದರೂ ಜನರು ಗುರುತು ಹಿಡಿಯುತ್ತಿದ್ದರು ಜೊತೆಗೆ ಮಾಧ್ಯಮಗಳ ಕ್ಯಾಮೆರಾದ ಕಣ್ಣು ಇವರನ್ನು ಸೆರೆ ಹಿಡಿಯುತ್ತಿದ್ದವು. ಇಬ್ಬರ ಬಗ್ಗೆ ಅಂತೆ ಕಂತೆ ಸುದ್ದಿಗಳು ಪ್ರಕಟವಾಗುತ್ತಿದ್ದಂತೆ ಕೊಹ್ಲಿ ಮತ್ತು ಅನುಷ್ಕಾ ಸಾರ್ವಜನಿಕವಾಗಿಯೇ ಜೊತೆಯಾಗಿ ಕಾಣಿಸಿಕೊಳ್ಳಲು ಆರಂಭಿಸಿದರು.

2014ರಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸದ ಬಳಿಕ ಮುಂಬೈಗೆ ಲ್ಯಾಂಡ್‌ ಆದ ಕೊಹ್ಲಿ ತಮ್ಮ ನಿವಾಸಕ್ಕೆ ಹೋಗಿರಲಿಲ್ಲ. ಮೊದಲು ಹೋಗಿದ್ದು ಪ್ರಿಯತಮೆ ಅನುಷ್ಕಾ ಮನೆಗೆ. ಆ ವರ್ಷವೇ ನ್ಯೂಜಿಲೆಂಡ್ ಪ್ರವಾಸದ ಬಳಿಕ ವಿರಾಟ್ ಮನೆಗೂ ಅನುಷ್ಕಾ ಭೇಟಿ ನೀಡಿ ಸರ್‌ಪ್ರೈಸ್‌ ನೀಡಿದ್ದರು. ಇಬ್ಬರು ಜೊತೆಯಾಗಿ ಕಾಣಿಸಿಕೊಳ್ಳುತ್ತಿದ್ದರೂ ಹೆಚ್ಚು ಸುದ್ದಿಯಾಗಿದ್ದು 2014-15 ರ ಆಸ್ಟ್ರೇಲಿಯಾ ಪ್ರವಾಸದಲ್ಲಿ. ಧೋನಿ ಟೆಸ್ಟ್‌ ಕ್ರಿಕೆಟಿಗೆ ನಿವೃತ್ತಿ ನಿರ್ಧಾರ ತೆಗೆದುಕೊಂಡಾಗ ಕೊಹ್ಲಿಗೆ ನಾಯಕತ್ವ ಪಟ್ಟ ಸಿಕ್ಕಿತು. ಆಸ್ಟ್ರೇಲಿಯಾ ಪ್ರವಾಸದ ಸಂದರ್ಭದಲ್ಲಿ ಅನುಷ್ಕಾ ಶರ್ಮಾ ಗ್ಯಾಲರಿಯಲ್ಲಿ ಕುಳಿತು ವಿರಾಟ್ ಹುರಿದುಂಬಿಸುತ್ತಿದ್ದರು. ಮೆಲ್ಬರ್ನ್ ಕ್ರೀಡಾಂಗಣದಲ್ಲಿ ನಡೆದ ಬಾಕ್ಸಿಂಗ್‌ ಡೇ ಟೆಸ್ಟ್‌ ವೇಳೆ ಶತಕ ಬಾರಿಸಿದ ಬಳಿಕ ವಿರಾಟ್ ಬ್ಯಾಟ್ ಮೂಲಕ ಅನುಷ್ಕಾಗೆ ಫ್ಲೈಯಿಂಗ್ ಕಿಸ್ ಸಹ ನೀಡಿದ್ದರು.

ಇಬ್ಬರು ಪ್ರೇಮಿಗಳ ಬಗ್ಗೆ ಅಂದಿನ ಟೀಂ ಇಂಡಿಯಾದ ಕೋಚ್‌ ಆಗಿದ್ದ ರವಿಶಾಸ್ತ್ರಿ ಮಾಧ್ಯಮದ ಬಳಿಯೂ ಹಂಚಿಕೊಂಡಿದ್ದರು. ಟೆಸ್ಟ್‌ ಕ್ರಿಕೆಟ್‌ಗೆ ವಿರಾಟ್‌ ಕೊಹ್ಲಿ ನಾಯಕರಾಗಿದ್ದರು. ಈ ವೇಳೆ ಅವರು ನನ್ನ ಬಳಿ ಬಂದು ಪ್ರವಾಸದ ಸಂದರ್ಭದಲ್ಲಿ ಪತ್ನಿಯರನ್ನು ಮಾತ್ರ ಕರೆದುಕೊಂಡು ಬರಲು ಬಿಸಿಸಿಐ ನುಮತಿ ನೀಡುತ್ತದೆ. ಆದರೆ ನಾನು ನನ್ನ ಗೆಳತಿಯನ್ನು ಕರೆದುಕೊಂಡು ಬರಬಹುದೇ ಎಂದು ಕೇಳಿದ್ದರು. ಕೊಹ್ಲಿಯಿಂದ ಈ ಪ್ರಸ್ತಾಪ ಬರುತ್ತಿದ್ದಂತೆ ನಾನು ಬಿಸಿಸಿಐ ಜೊತೆ ಕರೆ ಮಾಡಿ ಅನುಷ್ಕಾಗೆ ಬರಲು ಅನುಮತಿ ನೀಡಿದ್ದೆ ಎಂದು ತಿಳಿಸಿದ್ದರು.

ಇದಾದ ಬಳಿಕ ಆಸ್ಟ್ರೇಲಿಯಾ ಪ್ರವಾಸದಲ್ಲಿ ಇಂಡಿಯನ್ ಹೈ ಕಮಿಷನ್‌ಗೆ ಭೇಟಿ ನೀಡಿದಾಗಲೂ ಇಬ್ಬರು ಜೊತೆಯಾಗಿ ಕಾಣಿಸಿಕೊಂಡಿದ್ದರು. ನಂತರ ಶ್ರೀಲಂಕಾ ವಿರುದ್ಧ ನಡೆದ ಸರಣಿಯಲ್ಲೂ ಫ್ಲೈಯಿಂಗ್ ಕಿಸ್ ನೀಡಿ ಅನುಷ್ಕಾಗೆ ಸರ್‌ಪ್ರೈಸ್‌ ನೀಡಿದ್ದರು. ಇಂಡಿಯನ್ ಸೂಪರ್ ಲೀಗ್ (ಐಎಸ್‌ಎಲ್) ಫುಟ್ಬಾಲ್ ಟೂರ್ನಮೆಂಟ್‌ನಲ್ಲಿ ಎಫ್‌ಸಿ ಗೋವಾ ತಂಡದ ಮಾಲೀಕರಾಗಿದ್ದ ಕೊಹ್ಲಿ ಅವರು ಅನುಷ್ಕಾ ಜೊತೆಗೂಡಿ ತಂಡವನ್ನು ಹುರಿದುಂಬಿಸುತ್ತಿದ್ದರು. ಆರ್‌ಸಿಬಿ ಪಂದ್ಯಗಳಲ್ಲಿ ಭಾಗವಹಿಸಿ ಕೊಹ್ಲಿಗೆ ಅನುಷ್ಕಾ ಚಿಯರ್‌ ಮಾಡುತ್ತಿದ್ದರು. ಆದರಲ್ಲೂ ಕೊಹ್ಲಿ ಬೇಗನೇ ಔಟಾದರೆ ಅನುಷ್ಕಾ ಬಹಳ ಬೇಜಾರ್‌ ಆಗುತ್ತಿದ್ದರು ಮತ್ತು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಕೆಲವೇ ಕ್ಷಣಗಳಲ್ಲಿ ವೈರಲ್‌ ಆಗುತ್ತಿತ್ತು.

ಯುವರಾಜ್ ಸಿಂಗ್ ಹಾಗೂ ಮಾಜಿ ವೇಗಿ ಜಹೀರ್ ಖಾನ್ ವಿವಾಹ ಸಮಾರಂಭದಲ್ಲೂ ಇಬ್ಬರು ಜೊತೆಯಾಗಿ ಡ್ಯಾನ್ಸ್‌ ಮಾಡಿ ರಂಜಿಸಿದ್ದರು. 2015 ಮತ್ತು 2016 ರಲ್ಲಿ ಕೊಹ್ಲಿ ಆಟ ಮಂಕಾಗಿತ್ತು. ಕೊಹ್ಲಿ ಕಳಪೆ ಆಟಕ್ಕೆ ಅನುಷ್ಕಾನೇ ಕಾರಣ ಎಂದು ಕ್ರಿಕೆಟ್‌ ಅಭಿಮಾನಿಗಳು ಟೀಕಿಸಲು ಆರಂಭಿಸಿದ್ದರು. ಪದೇ ಗ್ಯಾಲರಿಯಲ್ಲಿ ಅನುಷ್ಕಾ ಕಾಣಿಸಿಕೊಳ್ಳುತ್ತಿರುವುದರಿಂದ ವಿರಾಟ್ ಕೆಟ್ಟ ಪ್ರದರ್ಶನ ನೀಡುತ್ತಿದ್ದಾರೆ ಎಂಬ ಮಾತುಗಳು ಬರತೊಡಗಿತು. ಜೊತೆ ಅನುಷ್ಕಾ ಶರ್ಮಾ ಅವರ ಪೇಜ್‌ನಲ್ಲೂ ಕೆಟ್ಟ ಕೆಟ್ಟ ಕಮೆಂಟ್‌ಗಳು ಬರತೊಡಗಿತು. ಸಾಮಾಜಿಕ ಜಾಲತಾಣದಲ್ಲಿ ಅನುಷ್ಕಾ ವಿರುದ್ಧ ಟ್ರೋಲ್‌ಗಳು ಹೆಚ್ಚಾಯಿತು.

ಟೀಕೆಗಳು ಜಾಸ್ತಿ ಆಗುತ್ತಿದ್ದಂತೆ ಅನುಷ್ಕಾ ಪರ ಮಾತನಾಡಿದ ಕೊಹ್ಲಿ, ಟ್ರೋಲ್ ಮಾಡುವ ಜನರಿಗೆ ನಾಚಿಕೆಯಾಗಬೇಕು. ಆಕೆ ಯಾವತ್ತೂ ತನಗೆ ಧನಾತ್ಮಕ ಚಿಂತನೆಯನ್ನು ನೀಡಿದ್ದಾಳೆ ಎಂದು ಬರೆದು ‘SHAME’ ಎಂದು ಬರೆದಿರುವ ಪೋಸ್ಟರ್‌ ಅನ್ನು ಪೋಸ್ಟ್‌ ಮಾಡಿ ಟ್ರೋಲಿಗರಿಗೆ ತಿರುಗೇಟು ನೀಡಿದ್ದರು. 2016 ರಲ್ಲಿ ಮಾಡಿದ ಈ ಟ್ವೀಟ್‌ ಅನ್ನು 98 ಸಾವಿರ ಮಂದಿ ಲೈಕ್‌ ಮಾಡಿದ್ದರೆ 35 ಸಾವಿರ ಜನ ರಿಟ್ವೀಟ್‌ ಮಾಡಿ ಕೊಹ್ಲಿಗೆ ಬೆಂಬಲ ನೀಡಿದ್ದರು.

ಲವ್‌ ಸ್ಟೋರಿ ಚರ್ಚೆಯಾಗುತ್ತಿದ್ದಂತೆ ಇಬ್ಬರು ಪರಸ್ಪರ ಇನ್‌ಸ್ಟಾದಿಂದ ಅನ್‌ಫಾಲೋ ಮಾಡಿದ್ದರು. ಅಷ್ಟೇ ಅಲ್ಲದೇ ಇಬ್ಬರೂ ಸಾರ್ವಜನಿಕವಾಗಿ ಕಾಣಿಸುವುದನ್ನು ನಿಲ್ಲಿಸಿದ್ದರು. ಈ ವಿಚಾರ ಸುದ್ದಿಯಾಗುತ್ತಿದ್ದಂತೆ ಇಬ್ಬರ ಮಧ್ಯೆ ಬ್ರೇಕಪ್‌ ಆಗಿದೆ ಎಂಬ ವದಂತಿಯೂ ಬರತೊಡಗಿತು. ಮತ್ತೆ ನಮ್ಮ ವಿರುದ್ಧ ನೆಗೆಟಿವ್‌ ಅಭಿಪ್ರಾಯ ಬರಬಾರದು ಎಂದು ಇವರಿಬ್ಬರೂ ಉದ್ದೇಶಪೂರ್ವಕವಾಗಿ ಈ ನಿರ್ಧಾರ ಕೈಗೊಂಡಿದ್ದರು ಎಂಬ ಮಾತು ನಂತರ ಬಂದಿತ್ತು. ಕೆಲ ದಿನಗಳಲ್ಲಿ ಇಬ್ಬರು ಪರಸ್ಪರ ಫಾಲೋ ಮಾಡಿಕೊಂಡರು ಮತ್ತು ಸಾರ್ವಜನಿಕವಾಗಿ ಕಾಣಿಸಿಕೊಳ್ಳುವ ಮೂಲಕ ಬ್ರೇಕಪ್‌ ವದಂತಿಗೆ ಬ್ರೇಕ್‌ ಹಾಕಿದರು.

ಅಂತಿಮವಾಗಿ ಡಿಸೆಂಬರ್ 2017 ರಲ್ಲಿ ವಿರುಷ್ಕಾ (ವಿರಾಟ್‌+ ಅನುಷ್ಕಾ) ಜೋಡಿ ಇಟಲಿಯ ಟಸ್ಕನಿಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿತು. ಆಪ್ತ ಸ್ನೇಹಿತರು ಮತ್ತು ಕುಟುಂಬದವರಿಗೆ ಮಾತ್ರ ಈ ಮದುವೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿತ್ತು. ಜನವರಿ 2021 ರಲ್ಲಿ ಮಗಳು ವಾಮಿಕಾ ಜನಿಸಿದರೆ, ಫೆಬ್ರವರಿ 2024 ರಲ್ಲಿ ಅಕಾಯ್ ಜನಿಸಿದ್ದ.

ಹಲವು ಸಂದರ್ಶನಗಳಲ್ಲಿ ವಿರಾಟ್‌ ಕೊಹ್ಲಿ ಅನುಷ್ಕಾ ಬಗ್ಗೆ ಮೆಚ್ಚುಗೆಯ ಮಾತನ್ನು ಆಡಿದ್ದಾರೆ. ಅನುಷ್ಕಾ ಬಂದಾಗಿನಿಂದ ನನ್ನಲ್ಲಿರುವ ಸಾಕಷ್ಟು ನೆಗೆಟಿವ್‌ ಯೋಚನೆಗಳು ದೂರ ಆಗಿದೆ. ನನಗೆ ಅನುಷ್ಕಾ ತುಂಬಾ ಕಫರ್ಟ್‌ ಜೋನ್‌ ಆಗಿದ್ದಾಳೆ ಎಂದು ಪತ್ನಿಯ ಮೇಲಿನ ಪ್ರೀತಿಯನ್ನು ವಿರಾಟ್‌ ಬಹಿರಂಗವಾಗಿಯೇ ಹೇಳಿಕೊಂಡಿದ್ದರು.

Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ರಾಜ್ಯ

Bakrid ವೇಳೆ ಗೋಹತ್ಯೆ ತಡೆ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ; ತಮಿಳುನಾಡು ಸರ್ಕಾರಕ್ಕೆ ಸದ್ಯದ ನೆಮ್ಮದಿ

Published

on

ಚೆನ್ನೈ, ಜು.13: Bakrid ಹಬ್ಬದ ಸಂದರ್ಭದಲ್ಲಿ ರಾಜ್ಯದಲ್ಲಿ ಗೋಹತ್ಯೆ ನಡೆಯದಂತೆ ತಮಿಳುನಾಡು ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ನೀಡಿದ್ದ ನಿರ್ದೇಶನಕ್ಕೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ ನೀಡಿದೆ. ನ್ಯಾಯಮೂರ್ತಿಗಳಾದ ವಿಕ್ರಂ ನಾಥ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠವು ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಿ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿದೆ.

ಮದ್ರಾಸ್ ಹೈಕೋರ್ಟ್ ಮೇ 27ರಂದು ನೀಡಿದ್ದ ಆದೇಶದಲ್ಲಿ, ಅಧಿಕೃತ ಕಸಾಯಿಖಾನೆಗಳಲ್ಲಿ ಮಾತ್ರ ಪ್ರಾಣಿವಧೆ ನಡೆಸಬೇಕು ಎಂದು ತಿಳಿಸುವುದರ ಜೊತೆಗೆ, ಬಕ್ರೀದ್ ಹಬ್ಬದಂದು ಅಥವಾ ಇತರ ಯಾವುದೇ ದಿನ ಹಸು ಹಾಗೂ ಕರುಗಳ ಹತ್ಯೆ ನಡೆಯದಂತೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುವಂತೆ ಸೂಚಿಸಿತ್ತು. ಈ ಆದೇಶವನ್ನು ರಾಜ್ಯಾದ್ಯಂತ ಜಾರಿಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿತ್ತು.

ಆದರೆ, ತಮಿಳುನಾಡು ಸರ್ಕಾರ ಈ ಆದೇಶವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿ, 1958ರ ಜಾನುವಾರು ಸಂರಕ್ಷಣಾ ಕಾಯ್ದೆಯಡಿ ನಿಗದಿತ ಷರತ್ತುಗಳನ್ನು ಪೂರೈಸಿದ ಕೆಲವು ಸಂದರ್ಭಗಳಲ್ಲಿ ಗೋಹತ್ಯೆಗೆ ಅವಕಾಶವಿದೆ ಎಂದು ವಾದಿಸಿತು. ಜಾನುವಾರು 10 ವರ್ಷಕ್ಕಿಂತ ಹೆಚ್ಚು ವಯಸ್ಸಾಗಿದ್ದರೆ ಅಥವಾ ಕೃಷಿ ಹಾಗೂ ಸಂತಾನೋತ್ಪತ್ತಿಗೆ ಯೋಗ್ಯವಿಲ್ಲವೆಂದು ಪ್ರಮಾಣೀಕರಿಸಿದರೆ ಮಾತ್ರ ವಧೆಗೆ ಅನುಮತಿ ಇದೆ ಎಂದು ಸರ್ಕಾರ ತನ್ನ ಅರ್ಜಿಯಲ್ಲಿ ತಿಳಿಸಿದೆ.

ಈ ವಾದವನ್ನು ಪರಿಗಣಿಸಿದ ಸುಪ್ರೀಂ ಕೋರ್ಟ್, ಹೈಕೋರ್ಟ್ ಆದೇಶಕ್ಕೆ ತಿದ್ದುಪಡಿ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದ್ದು, ಮುಂದಿನ ಆದೇಶದವರೆಗೆ ಅದರ ಜಾರಿಗೆ ತಡೆ ನೀಡಿದೆ.

ಈ ಪ್ರಕರಣವು ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮ ಗೋಹತ್ಯೆ ನಡೆಯುತ್ತಿದೆ ಎಂದು ಆರೋಪಿಸಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಿಂದ ಆರಂಭವಾಗಿತ್ತು. ಇದೀಗ ಸುಪ್ರೀಂ ಕೋರ್ಟ್‌ನ ಮಧ್ಯಂತರ ಆದೇಶದೊಂದಿಗೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಮುಂದಿನ ವಿಚಾರಣೆಯಲ್ಲಿ ಅಂತಿಮ ಕಾನೂನು ಸ್ಪಷ್ಟತೆ ಸಿಗುವ ನಿರೀಕ್ಷೆಯಿದೆ.

Continue Reading

ರಾಜ್ಯ

Bidadi Township ವಿರೋಧಕ್ಕೆ ರೈತರ ರಣಕಹಳೆ; JMC ಕಾರಿನ ಮೇಲೆ ಕಲ್ಲು ತೂರಾಟ

Published

on

ಬೆಂಗಳೂರು ದಕ್ಷಿಣ: Bidadi Township (Bidadi Smart Township) ಯೋಜನೆಗೆ ವಿರೋಧವಾಗಿ ರೈತರ ಹೋರಾಟ ಮತ್ತಷ್ಟು ತೀವ್ರಗೊಂಡಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಬಿಡದಿ ಹೋಬಳಿಯ ಬೈರಮಂಗಲ ಗ್ರಾಮದಲ್ಲಿ ಜಂಟಿ ಮಾರುಕಟ್ಟೆ ಸಮಿತಿ (JMC) ಅಧಿಕಾರಿಗಳ ಸರ್ವೇ ಕಾರ್ಯವನ್ನು ವಿರೋಧಿಸಿ ನೂರಾರು ರೈತರು ಹಾಗೂ ರೈತ ಮಹಿಳೆಯರು ಸೋಮವಾರ ರಸ್ತೆಗಿಳಿದು ಭಾರೀ ಪ್ರತಿಭಟನೆ ನಡೆಸಿದರು.

ಸರ್ವೇ ನಡೆಸಲು ಬಂದ ಅಧಿಕಾರಿಗಳ ವಾಹನವನ್ನು ತಡೆದ ಪ್ರತಿಭಟನಾಕಾರರು ಕಾರಿನ ಮೇಲೆ ಕಲ್ಲು ತೂರಿ ಆಕ್ರೋಶ ವ್ಯಕ್ತಪಡಿಸಿದರು. ಕೆಲ ಮಹಿಳೆಯರು ಕೈಯಲ್ಲಿ ಪೊರಕೆ ಹಿಡಿದು ವಾಹನದ ಮೇಲೆ ಹೊಡೆದು ಪ್ರತಿಭಟನೆ ನಡೆಸಿದರು. ಈ ವೇಳೆ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ರೈತ ಮಹಿಳೆಯರು, “ನಮ್ಮ ಜೀವ ಹೋದರೂ ತಲತಲಾಂತರಗಳಿಂದ ಬದುಕು ಕಟ್ಟಿಕೊಂಡಿರುವ ಕೃಷಿ ಭೂಮಿಯನ್ನು ಬಿಡುವುದಿಲ್ಲ. ಬಲವಂತದ ಸರ್ವೇ ಒಪ್ಪುವುದಿಲ್ಲ” ಎಂದು ಘೋಷಣೆಗಳನ್ನು ಕೂಗಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.

ರೈತರು ಟೌನ್‌ಶಿಪ್ ಹೆಸರಿನಲ್ಲಿ ಫಲವತ್ತಾದ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು. ಕೈಯಲ್ಲಿ ಪೊರಕೆಗಳನ್ನು ಹಿಡಿದು ಬಿಡದಿ–ಹಾರೋಹಳ್ಳಿ ಮುಖ್ಯರಸ್ತೆಯಲ್ಲಿ ಧರಣಿ ನಡೆಸಿದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡು ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಯಿತು.

ಪ್ರತಿಭಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಣಕ್ಕೆ ಮುಂದಾದರು. ರೈತರೊಂದಿಗೆ ಮಾತುಕತೆ ನಡೆಸಿ ಪ್ರತಿಭಟನೆ ಹಿಂಪಡೆಯುವಂತೆ ಮನವಿ ಮಾಡಿದರೂ, ಯೋಜನೆಯನ್ನು ಕೈಬಿಡುವವರೆಗೆ ಹೋರಾಟ ಮುಂದುವರಿಸುವುದಾಗಿ ರೈತರು ಸ್ಪಷ್ಟಪಡಿಸಿದರು.

ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದ ಈ ಬೆಳವಣಿಗೆ ರಾಜ್ಯದ ಗಮನ ಸೆಳೆದಿದ್ದು, ಮುಂದಿನ ದಿನಗಳಲ್ಲಿ ಸರ್ಕಾರ ಹಾಗೂ ರೈತರ ನಡುವಿನ ಮಾತುಕತೆ ಯಾವ ತಿರುವು ಪಡೆಯಲಿದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

Continue Reading

ದೇಶ

Aadhar Card ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಇಮೇಲ್ ಅಪ್‌ಡೇಟ್ ಮೊಬೈಲ್‌ನಲ್ಲೇ ಉಚಿತ!

Published

on

ನವದೆಹಲಿ: Aadhar Card ಹೊಂದಿರುವ ಕೋಟ್ಯಂತರ ನಾಗರಿಕರಿಗೆ ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ (UIDAI) ಮಹತ್ವದ ಸೌಲಭ್ಯವನ್ನು ಪರಿಚಯಿಸಿದೆ. ಇನ್ನು ಮುಂದೆ ಆಧಾರ್ ಕಾರ್ಡ್‌ಗೆ ಇಮೇಲ್ ಐಡಿಯನ್ನು ಸೇರಿಸಲು ಅಥವಾ ನವೀಕರಿಸಲು ಸೇವಾ ಕೇಂದ್ರಗಳಿಗೆ ತೆರಳುವ ಅಗತ್ಯವಿಲ್ಲ. ಅಧಿಕೃತ mAadhaar ಆ್ಯಪ್ ಮೂಲಕವೇ ಈ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಆನ್‌ಲೈನ್‌ನಲ್ಲಿ ಪೂರ್ಣಗೊಳಿಸಬಹುದಾಗಿದೆ.

ಹೊಸ ವ್ಯವಸ್ಥೆಯ ಮೂಲಕ ಬಳಕೆದಾರರು ತಮ್ಮ ಮೊಬೈಲ್‌ನಿಂದಲೇ ಇಮೇಲ್ ವಿಳಾಸವನ್ನು ಸೇರಿಸಬಹುದು ಅಥವಾ ಬದಲಾಯಿಸಬಹುದು. ಈ ಸೇವೆಯು ಆಧಾರ್ ನಿರ್ವಹಣೆಯನ್ನು ಇನ್ನಷ್ಟು ಸುಲಭಗೊಳಿಸುವುದರ ಜೊತೆಗೆ ಸೇವಾ ಕೇಂದ್ರಗಳಲ್ಲಿನ ಜನಸಂದಣಿಯನ್ನು ಕಡಿಮೆ ಮಾಡುವ ಉದ್ದೇಶ ಹೊಂದಿದೆ.

UIDAI ನೀಡಿರುವ ಮಾಹಿತಿಯಂತೆ, ಈ ಹೊಸ ಸೇವೆಯ ಆರಂಭಿಕ ಅವಧಿಯಲ್ಲಿ ಇಮೇಲ್ ಅಪ್‌ಡೇಟ್‌ಗೆ ವಿಧಿಸಲಾಗುತ್ತಿದ್ದ ₹75 ಶುಲ್ಕವನ್ನು ಆರು ತಿಂಗಳವರೆಗೆ ಸಂಪೂರ್ಣವಾಗಿ ಮನ್ನಾ ಮಾಡಲಾಗಿದೆ. ಹೀಗಾಗಿ ಅರ್ಹ ಬಳಕೆದಾರರು ಯಾವುದೇ ಶುಲ್ಕವಿಲ್ಲದೆ ತಮ್ಮ ಇಮೇಲ್ ಐಡಿಯನ್ನು ಆಧಾರ್‌ಗೆ ಲಿಂಕ್ ಮಾಡಿಕೊಳ್ಳಬಹುದು.

ಆಧಾರ್‌ಗೆ ಇಮೇಲ್ ಐಡಿ ಜೋಡಿಸುವುದರಿಂದ OTP, ಭದ್ರತಾ ಎಚ್ಚರಿಕೆಗಳು, ದೃಢೀಕರಣ ಮಾಹಿತಿ ಹಾಗೂ UIDAIಯ ಪ್ರಮುಖ ಸಂದೇಶಗಳನ್ನು ತ್ವರಿತವಾಗಿ ಪಡೆಯಲು ಅನುಕೂಲವಾಗುತ್ತದೆ. ಜೊತೆಗೆ ಖಾತೆ ಮರುಪಡೆಯುವಿಕೆ ಹಾಗೂ ಆಧಾರ್ ಭದ್ರತೆಯೂ ಮತ್ತಷ್ಟು ಬಲಗೊಳ್ಳಲಿದೆ.

ಇಮೇಲ್ ಅಪ್‌ಡೇಟ್ ಮಾಡಲು ಅಧಿಕೃತ mAadhaar ಆ್ಯಪ್‌ಗೆ ಲಾಗಿನ್ ಆಗಿ, ‘Email Update’ ಆಯ್ಕೆಯನ್ನು ಆರಿಸಿ ಹೊಸ ಇಮೇಲ್ ವಿಳಾಸವನ್ನು ನಮೂದಿಸಬೇಕು. ನಂತರ OTP ಪರಿಶೀಲನೆ ಪೂರ್ಣಗೊಂಡ ಬಳಿಕ ಅರ್ಜಿಯನ್ನು ಸಲ್ಲಿಸಿದರೆ ಇಮೇಲ್ ಯಶಸ್ವಿಯಾಗಿ ಲಿಂಕ್ ಆಗುತ್ತದೆ.

ಈ ಡಿಜಿಟಲ್ ಸೇವೆಯು ಡಿಜಿಟಲ್ ಇಂಡಿಯಾ ಅಭಿಯಾನದ ಭಾಗವಾಗಿದ್ದು, ನಾಗರಿಕರಿಗೆ ವೇಗವಾದ, ಸುಲಭ ಮತ್ತು ಪಾರದರ್ಶಕ ಆಧಾರ್ ಸೇವೆಗಳನ್ನು ಒದಗಿಸುವತ್ತ UIDAI ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ.

Continue Reading

Trending