ರಾಜಕೀಯ
ಆಸ್ತಿ ಮೌಲ್ಯ ಹೆಚ್ಚಾಗುತ್ತದೆ, ಭೂಮಿ ಮಾರಾಟ ಮಾಡಬೇಡಿ: ಕನಕಪುರ ಕ್ಷೇತ್ರದ ಜನರಿಗೆ ಡಿಕೆಶಿ ಕರೆ – KANAKAPUR DEVELOPMENT

ರಾಮನಗರ: “ಕಾಯಕದಲ್ಲಿಯೇ ದೇವರನ್ನು ಕಾಣಬೇಕು. ನಮಗೆ ಅಭಿವೃದ್ಧಿಯೇ ತಂದೆ-ತಾಯಿ, ಗ್ಯಾರಂಟಿಗಳೇ ಬಂಧು-ಬಳಗ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
ಕನಕಪುರ ತಾಲೂಕಿನ ಭೂಹಳ್ಳಿ ಹೊಸಕೆರೆ ಬಳಿ ಭಾನುವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
“ನನ್ನ ಕ್ಷೇತ್ರಕ್ಕೆ ಸುಮಾರು 400 ಕೋಟಿ ರೂ.ಗಳಷ್ಟು ಅನುದಾನ ತಂದಿದ್ದೇನೆ. ಒಂದೇ ಸಲ ಅನುದಾನ ತಂದರೆ ಬೇರೆ ಕ್ಷೇತ್ರದವರು ಪ್ರಶ್ನೆ ಮಾಡುತ್ತಾರೆ. ಹಂತಹಂತವಾಗಿ ಅನುದಾನ ತಂದು ಅಭಿವೃದ್ಧಿ ಕೆಲಸದ ಮೂಲಕ ಜನರ ಋಣ ತೀರಿಸಲಾಗುವುದು. 250 ಕೋಟಿ ರೂ ಮೊತ್ತದ ಕಾಮಗಾರಿಗಳು ನೀರಾವರಿ ಇಲಾಖೆಯಿಂದಲೇ ನಡೆಯುತ್ತಿದೆ” ಎಂದರು.
“ಪಾದ್ದರೆಯಿಂದ ಭೂಹಳ್ಳಿ ಅರಣ್ಯ ತಪಾಸಣಾ ಕೇಂದ್ರದವರೆಗೆ ಸುಮಾರು 13 ಕೋಟಿ ರೂ ವೆಚ್ಚದಲ್ಲಿ ರಸ್ತೆ, ದೊಡ್ಡ ಆಲಹಳ್ಳಿಯಿಂದ ಕಬ್ಬಾಳಿನ ತನಕ 40 ಕೋಟಿ ರೂ ವೆಚ್ಚದಲ್ಲಿ 14.5 ಕಿ.ಮೀ ಉದ್ದದ ರಸ್ತೆ ಅಗಲೀಕರಣ ಮಾಡಲಾಗುತ್ತಿದೆ. ಇದರಿಂದ ನಮ್ಮ ಜನರ ಆಸ್ತಿ ಮೌಲ್ಯ ಹೆಚ್ಚಾಗಲಿದೆ. ಕನಕಪುರ, ಸಾತನೂರು, ದೊಡ್ಡ ಆಲಹಳ್ಳಿ ರಸ್ತೆಗಳನ್ನು ಅಗಲೀಕರಣ ಮಾಡಲು ಸಾಧ್ಯವಿಲ್ಲ ಎಂದು ಒಂದಷ್ಟು ಜನ ನಗುತ್ತಿದ್ದರು. ಆದರೆ ಇಂದು ಕೆಲಸ ಮಾಡಿ ತೋರಿಸಿದ್ದೇವೆ. ರಸ್ತೆ ಅಭಿವೃದ್ಧಿಗೆ 135 ಕೋಟಿ ರೂ, ಹೊಸಕೆರೆ ತುಂಬಿಸಲು 108 ಕೋಟಿ ರೂ ಖರ್ಚು ಮಾಡಲಾಗುತ್ತಿದೆ. ನಲ್ಲಳ್ಳಿ- ಮುಲ್ಲಳ್ಳಿ ಸಂಪರ್ಕ ಸೇತುವೆಗೆ 11 ಕೋಟಿ, ಅರ್ಕಾವತಿಯಿಂದ ನೀರನ್ನು ಎತ್ತಿ ದೊಡ್ಡ ಆಲಹಳ್ಳಿ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಿಗೆ ಸೂಕ್ಷ್ಮ ನೀರಾವರಿ ಕಲ್ಪಿಸಲು 70 ಕೋಟಿಯ ಕಾಮಗಾರಿ ನಡೆಸಲಾಗುತ್ತಿದೆ. ಇದರಿಂದ 8 ಗ್ರಾಮಗಳ 2 ಸಾವಿರ ಎಕರೆ ಭೂಮಿಗೆ ಉಪಯೋಗವಾಗಲಿದೆ. ಅರ್ಕಾವತಿ ನದಿಗೆ ಅಡ್ಡಲಾಗಿ ಕೊಕ್ಕರೆ ಹೊಸಹಳ್ಳಿ ಬಳಿ ಸಂಪರ್ಕ ಸೇತುವೆ ನಿರ್ಮಾಣಕ್ಕೆ 10 ಕೋಟಿ ರೂ ವೆಚ್ಚ ಮಾಡಲಾಗುತ್ತಿದೆ” ಎಂದು ಡಿಕೆಶಿ ಮಾಹಿತಿ ನೀಡಿದರು.
ಕ್ಷೇತ್ರದ ಎಲ್ಲಾ ಕೆರೆಗಳನ್ನು ತುಂಬಿಸಲು ಕ್ರಮ: “ನನ್ನ ಕ್ಷೇತ್ರದಲ್ಲಿ ಎಷ್ಟು ಕೆರೆಗಳನ್ನು ತುಂಬಿಸಲು ಸಾಧ್ಯವೋ ಅಷ್ಟು ಕೆರೆಗಳನ್ನು ತುಂಬಿಸುತ್ತೇನೆ. ಹಂತ ಹಂತವಾಗಿ ಕೆಲಸಗಳನ್ನು ಮಾಡುತ್ತೇನೆ. ಅಧಿಕಾರ ಅವಧಿಯಲ್ಲಿ ಎಲ್ಲಾ ಕಡೆ ನೀರು ತುಂಬಿ ಹರಿಯಬೇಕು. ಚನ್ನಪಟ್ಟಣ, ರಾಮನಗರ, ಮಾಗಡಿಗೆ ಅನೇಕ ಕಾರ್ಯಕ್ರಮಗಳನ್ನು ನೀಡಲಾಗಿದೆ. ಅಲ್ಲಿನ ಜನಕ್ಕೂ ನಾನು ಕೆಲಸ ಮಾಡಿಸುವುದಾಗಿ ಮಾತು ಕೊಟ್ಟಿದ್ದೇನೆ. ಮೇಕೆದಾಟು ಕಚೇರಿ ಪ್ರಾರಂಭ ಮಾಡಲಾಗಿದ್ದು, ಎಷ್ಟು ಜಮೀನು ಮುಳುಗಡೆಯಾಗುತ್ತದೆ ಎಂದು ಅಂದಾಜು ಮಾಡಲು ಕಂದಾಯ ಹಾಗೂ ಅರಣ್ಯ ಅಧಿಕಾರಿಗಳು ಕೆಲಸ ಪ್ರಾರಂಭ ಮಾಡಿದ್ದಾರೆ. ಕಾವೇರಿ ನದಿಯಿಂದ ನೀರನ್ನು ತಂದು ಜನರ ಬದುಕನ್ನು ಬದಲಾವಣೆ ಮಾಡುವ ದೊಡ್ಡ ಕೆಲಸ ನಡೆಯುತ್ತಿದೆ” ಎಂದರು.
ಒಬ್ಬ ವ್ಯಕ್ತಿಯ ಹಿಂದೆ ಎಷ್ಟು ಜನ ಇದ್ದಾರೆ ಎನ್ನುವುದಕ್ಕಿಂತ ಆತ ಎಷ್ಟು ಜನರ ಬದುಕನ್ನು ಬದಲಾವಣೆ ಮಾಡಿದ ಎನ್ನುವುದು ಮುಖ್ಯ. ಕೆರೆ ತುಂಬಿಸುವ ಯೋಜನೆಯಿಂದ ಸಾವಿರಾರು ರೈತರಿಗೆ ಉಪಯೋಗವಾಗುತ್ತದೆ. ಅಂತರ್ಜಲ ಹೆಚ್ಚುತ್ತದೆ, ಭೂಮಿ ಸದಾ ಹಸಿರಾಗಿರುತ್ತದೆ. ಕೆರೆ ತುಂಬಿಸುವ ಯೋಜನೆ ಅನುಷ್ಠಾನಕ್ಕೆ ಸಾಕಷ್ಟು ಕಷ್ಟ ಪಟ್ಟಿದ್ದೇವೆ. ಎಲ್ಲಿ ಶ್ರಮ ಇದೆಯೋ ಅಲ್ಲಿ ಫಲವಿದೆ” ಎಂದು ತಿಳಿಸಿದರು.
“ಚೀನಾದಿಂದ ರೇಷ್ಮೆ ಆಮದು ಕಡಿಮೆಯಾಗಿದೆ. ಆದ ಕಾರಣಕ್ಕೆ ರೇಷ್ಮೆಗೆ ಉತ್ತಮ ಬೆಲೆ ಬಂದಿದೆ. ಅದಕ್ಕೆ ಯಾರೂ ಸಹ ಭೂಮಿಯನ್ನು ಮಾರಾಟ ಮಾಡಲು ಹೋಗಬೇಡಿ. ಮುಂದಕ್ಕೆ ನಿಮ್ಮ ಭೂಮಿಯ ಬೆಲೆ ಹೆಚ್ಚಲಿದೆ. ಶಿಡ್ಲಘಟ್ಟ ಭಾಗದಲ್ಲಿ ನಮಗಿಂತ ಹೆಚ್ಚು ರೇಷ್ಮೆ ಬೆಳೆಯುತ್ತಿದ್ದಾರೆ. ಸಿಲ್ಕ್ ಮತ್ತು ಮಿಲ್ಕ್ ಅನ್ನು ಕೋಲಾರ ಭಾಗದಲ್ಲಿ ಹೆಚ್ಚು ಉತ್ಪಾದನೆ ಮಾಡುತ್ತಿದ್ದಾರೆ” ಎಂದರು.
“ದೇವೆಗೌಡರು ಹಾಗೂ ಕುಮಾರಸ್ವಾಮಿ ಅವರು ಸಾತನೂರು ಹೋಬಳಿಯನ್ನು ರಾಮನಗರಕ್ಕೆ ಸೇರಿಸಲು ಹೊರಟಿದ್ದರು. ಕನಕಪುರದಲ್ಲಿಯೇ ಸಾತನೂರನ್ನು ಉಳಿಸಿಕೊಳ್ಳಬೇಕು ಎಂದು ಸ್ಥಳೀಯ ಮುಖಂಡರಿಂದ ದೊಡ್ಡ ಹೋರಾಟ ನಡೆದ ಕಾರಣಕ್ಕೆ ನನಗೆ ನಿಮ್ಮ ಸೇವೆ ಮಾಡುವ ಅವಕಾಶ ಸಿಕ್ಕಿದೆ. ಕ್ಷೇತ್ರ ಪುನರ್ ವಿಂಗಡಣೆ ವೇಳೆ ಎಸ್.ಎಂ.ಕೃಷ್ಣ ಅವರು ಹಾಗೂ ಕುಲದೀಪ್ ಸಿಂಗ್ ಅವರ ಪ್ರಯತ್ನದ ಫಲವಾಗಿ ಈ ಹೋಬಳಿ ಕನಕಪುರದಲ್ಲಿಯೇ ಉಳಿಯಿತು. ಕಾವೇರಿ ಸಂಗಮದಿಂದ ನೀರು ತಂದು ಈ ಭಾಗದ 21 ಕೆರೆಗಳಿಗೆ ತುಂಬಿಸುವ ಯೋಜನೆ ನನಗೆ ತೃಪ್ತಿ ನೀಡುತ್ತಿದೆ” ಎಂದು ಡಿಕೆಶಿ ಹೇಳಿದರು.
ರಾಜಕೀಯ
ಮಾಜಿ ಡಿಸಿಎಂ ಈಶ್ವರಪ್ಪ ಮತ್ತೆ ಭಾರೀ ವಾಗ್ದಾಳಿ: ಯಡಿಯೂರಪ್ಪ ಕುಟುಂಬ, ಬಿಜೆಪಿಗೆ ತೀವ್ರ ಕಿಡಿ

ಬಳ್ಳಾರಿ:
ಬಿಜೆಪಿಯಿಂದ ಉಚ್ಚಾಟನೆಯಾದ ನಂತರ ಸೈಲೆಂಟ್ ಆಗಿದ್ದ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಇದೀಗ ಮತ್ತೆ ಸುದ್ದಿಯಲ್ಲಿ ಮೂಡಿದ್ದಾರೆ. ಬಳ್ಳಾರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನನ್ನದು ಭಾರತೀಯ ಬಿಜೆಪಿಯ ಟೀಮ್, ಯಾವುದೇ ಗುಂಪಿನೊಂದಿಗೆ ನಾನು ಹೋಗುವುದಿಲ್ಲ. ಆದರೆ ಬಿಜೆಪಿ ಶುದ್ಧೀಕರಣಗೊಳ್ಳಬೇಕು ಎಂಬುದು ಎಲ್ಲರ ಅಭಿಪ್ರಾಯ. ಅದು ನನ್ನದು ಸಹ ಆಗಿದೆ,” ಎಂದು ಪರೋಕ್ಷವಾಗಿ ಯಡಿಯೂರಪ್ಪ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈಶ್ವರಪ್ಪನ ಈ ಹೇಳಿಕೆ ಕೇಸರಿಪಾಳ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿದೆ. ಅನೇಕ ನಾಯಕರು ಈಶ್ವರಪ್ಪನ ನೇರ ಭಾಷೆಯ ವಿರುದ್ಧ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ.
ಯಡಿಯೂರಪ್ಪನ ಕುಟುಂಬದ ಮದುವೆಯಲ್ಲಿ ಭಾಗವಹಿಸಿದ ಈಶ್ವರಪ್ಪ:
ಇತ್ತೀಚೆಗೆ ಈಶ್ವರಪ್ಪ ಯಡಿಯೂರಪ್ಪನ ಮೊಮ್ಮಗನ ಮದುವೆಯಲ್ಲಿ ಭಾಗವಹಿಸಿ ಎಲ್ಲರಿಗೂ ಆಶ್ಚರ್ಯ ತಂದಿದ್ದರು. ಈ ಘಟನೆಯ ಬಳಿಕ ಅವರು ಮತ್ತೆ ಪಕ್ಷದ ಪರ ನಿಂತು ಮಾತನಾಡಿದ್ದಾರೆ.
ಎಫ್‌ಐಆರ್ ದಾಖಲು:
ಇದಕ್ಕೂ ಮಿಕ್ಕಿ, ಮಾಜಿ ಡಿಸಿಎಂ ಈಶ್ವರಪ್ಪ ಪುತ್ರ ಕಾಂತೇಶ್ ಮತ್ತು ಸೊಸೆ ಶಾಲಿನಿ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲಾಗಿದೆ. ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದ್ದು, ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿಯಲ್ಲಿ ಕೇಸ್ ದಾಖಲಾಗಿದೆ.
ಅದಕ್ಕೂ ಹಿಂದಿನ ಘಟನೆಗಳು:
ಈ ಪ್ರಕರಣ ಸಂಬಂಧ ಕಳೆದ ಏಪ್ರಿಲ್‌ನಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಲೋಕಾಯುಕ್ತರಿಗೆ ವರದಿ ಸಲ್ಲಿಸಲು ಸೂಚಿಸಿತ್ತು. ಇದೀಗ ಖಾಸಗಿ ವಕೀಲ ವಿನೋದ್ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ.
ರಾಜಕೀಯ
ಮತಗಳ್ಳತನದ ದಾಖಲೆ ಬಿಡುಗಡೆಗೆ ರಾಹುಲ್ ಗಾಂಧಿ ಸಜ್ಜು: ಪ್ರಿಯಾಂಕ್ ಖರ್ಗೆ ಸ್ಪಷ್ಟನೆ

ಬೆಂಗಳೂರು: ಕಾಂಗ್ರೆಸ್ ಯಾವತ್ತೂ “ಹಿಟ್ ಅಂಡ್ ರನ್” ರಾಜಕೀಯ ಮಾಡಲ್ಲ, ಎಲ್ಲದಕ್ಕೂ ದಾಖಲಾತಿಗಳಿವೆ. ಕರ್ನಾಟಕದಲ್ಲಿ ನಡೆದ ಮತಗಳ್ಳತನದ ಬಗ್ಗೆ ದಾಖಲೆಗಳನ್ನು ರಾಹುಲ್ ಗಾಂಧಿ ಬಹಿರಂಗಪಡಿಸುತ್ತಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಶುಕ್ರವಾರ ವಿಧಾನಸೌಧದಲ್ಲಿ ಮಾತನಾಡಿದ ಅವರು, “ಇಂದು ದೆಹಲಿಯಲ್ಲಿ ರಾಹುಲ್ ಗಾಂಧಿ ಸುದ್ದಿಗೋಷ್ಠಿ ಮೂಲಕ ಮತಗಳ್ಳತನದ ದಾಖಲೆಗಳನ್ನು ಬಿಡುಗಡೆ ಮಾಡಲಿದ್ದಾರೆ. ಆ.8 ರಂದು ಇದೇ ಕುರಿತು ಕರ್ನಾಟಕದಲ್ಲಿಯೂ ಸಾಕ್ಷ್ಯ ಬಿಡುಗಡೆ ಮಾಡಲಾಗುತ್ತದೆ” ಎಂದು ಹೇಳಿದರು.
ಇದೊಂದು ತೀವ್ರ ರಾಜಕೀಯ ಚರ್ಚೆಗೆ ಕಾರಣವಾಗಿದ್ದು, ಚುನಾವಣಾ ಆಯೋಗ ಯಾರ ನಿಯಂತ್ರಣದಲ್ಲಿದೆ ಎಂಬುದನ್ನು ಜನತೆಯೇ ನಿರ್ಧರಿಸಬೇಕಿದೆ ಎಂದು ಅವರು ಹೇಳಿದ್ದಾರೆ.
BJP ಪ್ರತಿಕ್ರಿಯೆ ಬಗ್ಗೆ ಖರ್ಗೆ ಪ್ರತಿಸ್ಪಂದನೆ:
“ನಾವು ಆರೋಪವನ್ನೇ ಮಾಡಿಲ್ಲ. documentation ಇದೆ, ಅದನ್ನೇ ತೋರಿಸುತ್ತಿದ್ದೇವೆ. ಬಿಜೆಪಿಯವರು ಏಕೆ ಎಲ್ಲಾ ಸಂಸ್ಥೆಗಳ ವಕ್ತಾರರಂತೆ ಮಾತನಾಡುತ್ತಿದ್ದಾರೆ? ಆಯಾ ಸಂಸ್ಥೆಗಳಿಗೆ ತಮ್ಮದೇ ಆದ ವಕ್ತಾರರು ಇದ್ದಾರೆ, ಅವರು ಸ್ಪಷ್ಟನೆ ನೀಡಲಿ,” ಎಂದು ತೀವ್ರ ಟೀಕೆ ಮಾಡಿದರು.
ಅಪರಾಧ
Breaking News ಚಾಲಕ ಆತ್ಮಹತ್ಯೆ – ಡೆತ್ ನೋಟ್‌ನಲ್ಲಿ ಸಂಸದ ಡಾ. ಸುಧಾಕರ್ ಹೆಸರು ಉಲ್ಲೇಖ!

ಚಿಕ್ಕಬಳ್ಳಾಪುರ, ಆಗಸ್ಟ್ 7 – ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ದೈನಂದಿನ ಶಾಂತಿಯನ್ನು ಬೆಚ್ಚಿಬೀಳಿಸುವ ಘಟನೆ ಇಂದು ಬೆಳಗಿನ ಜಾವ ನಡೆದಿದೆ. ಜಿಲ್ಲಾ ಪಂಚಾಯತ್ ಕಚೇರಿಯ ಆವರಣದಲ್ಲಿ 33 ವರ್ಷದ ಗುತ್ತಿಗೆ ಚಾಲಕ ಬಾಬು ಎಂ. ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶೋಕಾಂತರವಾಗಿದೆ.
ಡೆತ್ ನೋಟ್‌ನಲ್ಲಿ ಸಂಸದ ಡಾ. ಕೆ. ಸುಧಾಕರ್ ಹೆಸರು:
8 ವರ್ಷಗಳಿಂದ ಲೆಕ್ಕಪರಿಶೋಧನೆ ವಿಭಾಗದಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದ ಬಾಬು, ಬಿಜೆಪಿ ಸಂಸದ ಡಾ. ಕೆ. ಸುಧಾಕರ್ ಹಾಗೂ ಅವರ ಬೆಂಬಲಿಗರಾದ ನಾಗೇಶ್ ಮತ್ತು ಮಂಜುನಾಥ್ ವಿರುದ್ಧ ಗಂಭೀರ ಆರೋಪಗಳನ್ನು ಡೆತ್ ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ.
ಆತ್ಮಹತ್ಯೆಗೆ ಕಾರಣವೆನಿಸಿದ ಹಣಕಾಸು ವಂಚನೆ:
ಬಾಬು ಅವರು ಡೆತ್ ನೋಟ್‌ನಲ್ಲಿ, ಸರ್ಕಾರಿ ಕೆಲಸ ಕೊಡಿಸುತ್ತೇವೆಂದು ಹಣ ಪಡೆದು ವಂಚನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಇದರಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ ಬಾಬು, ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಕಚೇರಿಯ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಪೊಲೀಸರು ಸ್ಥಳಕ್ಕೆ ದೌಡಾಯಿಸಿದರು:
ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ತಕ್ಷಣವೇ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ FIR ದಾಖಲಾತಿ ನಡೆಯುವ ಸಾಧ್ಯತೆ ಇದ್ದು, ತನಿಖೆ ಮುಂದುವರಿದಿದೆ.
-
ಬಿಬಿಎಂಪಿ3 months ago
ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ಗ್ರೇಟರ್ ಬೆಂಗಳೂರು ಪ್ರದೇಶಕ್ಕೆ
-
ಬೆಂಗಳೂರು2 years ago
ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಮುಖ್ಯ – ಡಾ. ಕೆ.ಸಿ ರೋಹಿತ್
-
ದೇಶ2 years ago
ಫೀನಿಕ್ಸ್ ನಲ್ಲಿ ವೈಭವದ ರಥೋತ್ಸವದೊಂದಿಗೆ ಹತ್ತು ದಿನಗಳ ಉತ್ಸವಕ್ಕೆ ತೆರೆ
-
ಚುನಾವಣೆ2 years ago
ಬಿಬಿಎಂಪಿ ಚುನಾವಣೆ ಡಿಸೆಂಬರ್ನಲ್ಲಿ ನಡೆಯುವ ಸಾಧ್ಯತೆ: ಸಚಿವರಾಮಲಿಂಗಾರೆಡ್ಡಿ
-
ರಾಜಕೀಯ2 years ago
Gruhalaxmi ಗೃಹಲಕ್ಷಿö್ಮ ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಹೀಗೆ ಚೆಕ್ ಮಾಡಿ
-
ಬೆಂಗಳೂರು1 year ago
ನೀರಿಲ್ಲ ನೀರಿಲ್ಲ ನಾಳೆ ನಲ್ಲಿಯಲ್ಲಿ ನೀರು ಬರೋದಿಲ್ಲ
-
ಬೆಂಗಳೂರು9 months ago
ಯಶವಂತಪುರ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಖ್ಯ ಉದ್ದೇಶ -ಎಸ್ ಟಿ ಸೋಮಶೇಖರ್
-
ರಾಜ್ಯ2 years ago
ದೇಶದ ಎಲ್ಲಾ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ನೀಡಲು ಮುಂದಾದ ಸರ್ಕಾರ! ಇಂದೇ ಅರ್ಜಿ ಸಲ್ಲಿಸಿ