Connect with us

ರಾಜ್ಯ

ಜನರಿಗೆ ಹಿಂಸೆ ನೀಡದವನಿಗೆ ಬೆಸ್ಟ್ ಆಕ್ಟರ್ ಅವಾರ್ಡ್ ಕೊಡಬೇಕು-ದಾರಿ ತಪ್ಪಿದ ಮಗನಿಗೆ ಟಾಂಗ್ ಕೊಟ್ರಾ ಸುಮಕ್ಕ!

Published

on

ಬೆಂಗಳೂರು: ನಟ ದರ್ಶನ್ ತಮ್ಮನ್ನು ಇನ್ಸ್ ಟಾ ಗ್ರಾಂ ಖಾತೆಯಲ್ಲಿ ಅನ್ ಫಾಲೋ ಮಾಡುತ್ತಿದ್ದಂತೆಯೇ ಸುಮಲತಾ ಅವರ ಸ್ಟೇಟಸ್ ಒಂದು ವೈರಲ್ ಆಗಿದೆ, ತಮ್ಮಿಂದ ಅಂತರ ಕಾಯ್ದುಕೊಳ್ಳುತ್ತಿರುವ ನಡೆಗೆ ಸುಮಲತಾ ಅವರು ಪರೋಕ್ಷವಾಗಿ ಚಾಟಿ ಬೀಸಿದ್ದಾರೆಯೇ ಎಂಬ ಅನುಮಾನ ವ್ಯಕ್ತವಾಗಿದೆ.


ಸುಮಲತಾ ಅವರು ತಮ್ಮ ಸ್ಟೇಟಸ್ ನಲ್ಲಿ ಈ ರೀತಿ ಬರೆದುಕೊಂಇಡರುವು ಕಂಡು ಬಂದಿದೆ.

ಈ ಬಾರಿಯ ಅತ್ಯುತ್ತಮ ನಟ ಆಸ್ಕರ್ ಪ್ರಶಸ್ತಿ ಯಾರಿಗೆ ಸಿಗಲಿದೆ ಎಂದರೆ… ಸತ್ಯವನ್ನು ತಿರುಚಿದವರು, ವಿನಾಕಾರಣ ಜನರನ್ನು ಹಿಂಸಿದವರು, ತಮ್ಮ ಆರೋಪವನ್ನು ಬೇರೆಯವರ ಮೇಲೆ ಹೊರೆಸಿದವರು ಹಾಗೂ ಈಗಲೂ ಸಹ ತಮ್ಮನ್ನು ತಾವು ಹೀರೋ ಎಂದು ಕೊಂಡಿರುವವರು.
ಇದರಲ್ಲಿರುವ ಸತ್ಯವನ್ನು ನಿರಾಕರಿಸಿದವರು, ಜನರನ್ನು ಹಿಂಸಿಸಿದವರು, ತಮ್ಮನ್ನು ಹೀರೋ ಎಂದು ಭಾವಿಸಿದವರು ಎಂಬ ಪದಗಳನ್ನು ಗಮನಿಸಿದರೆ ಇದು ದರ್ಶನ್ ಗೆ ಸೂಟ್ ಆಗುತ್ತದೆ ಎಂದು ನೆಟ್ಟಿಗರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ,
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ಭೀಕರವಾಗಿ ಚಿತ್ರಹಿಂಸೆ ನೀಡಿ ಕೊಂಸ ಆರೋಪದ ಮೇಲೆ ಜೈಲು ಸೇರಿದ್ದ ದರ್ಶನ್ ಗೆ ಮಧ್ಯಂತರ ಜಾಮೀನು ದೊರೆತು ತಾತ್ಕಾಲಿ ರಿಲೀಫ್ ಸಿಕ್ಕಿದೆ, ಈಗ ತನಿಖೆ ನಡೆಯುತ್ತಿದ್ದರೂ ಶೂಟಿಂಗ್ ನಲ್ಲಿ ಭಾಗವಹಿಸಬಹುದಾಗಿದೆ,

ಅಪರಾಧ

ಸಿಲಿಕಾನ್ ಸಿಟಿಯಲ್ಲಿ ಸೈಬರ್ ಅಟ್ಟಹಾಸ; ಪ್ಯಾರಾ ಅಥ್ಲೀಟ್ ಹಣ ಕಳವು ಪ್ರಕರಣ

Published

on

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸೈಬರ್ ವಂಚಕರ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ ಪದ್ಮಶ್ರೀ ಪುರಸ್ಕೃತ ಪ್ಯಾರಾ ಅಥ್ಲೀಟ್ K. Y. Venkatesh ಅವರೇ ಸೈಬರ್ ಕಳ್ಳರ ಜಾಲಕ್ಕೆ ಬಲಿಯಾಗಿದ್ದಾರೆ.

ಮಲ್ಲೇಶ್ವರಂ ನಿವಾಸಿಯಾಗಿರುವ ವೆಂಕಟೇಶ್ ಅವರ ಕರ್ನಾಟಕ ಬ್ಯಾಂಕ್ ಖಾತೆಯಿಂದ ಬರೋಬ್ಬರಿ ₹90 ಸಾವಿರ ಹಣ ನಿಗೂಢವಾಗಿ ಡ್ರಾ ಆಗಿರುವ ಘಟನೆ ಬೆಳಕಿಗೆ ಬಂದಿದೆ. ಮಧ್ಯರಾತ್ರಿ ಅವರ ಮೊಬೈಲ್‌ಗೆ ಸರಣಿ ಒಟಿಪಿ ಸಂದೇಶಗಳು ಬಂದಿದ್ದು, ಅನುಮಾನಗೊಂಡ ಅವರು ಮರುದಿನ ಬ್ಯಾಂಕ್‌ಗೆ ತೆರಳಿ ವಿಚಾರಣೆ ನಡೆಸಿದ್ದರು. ಈ ವೇಳೆ ಬ್ಯಾಂಕ್ ಅಧಿಕಾರಿಗಳು “ಖಾತೆ ಸುರಕ್ಷಿತವಾಗಿದೆ” ಎಂದು ತಿಳಿಸಿದ್ದರು ಎನ್ನಲಾಗಿದೆ.

ಆದರೆ ಮನೆಗೆ ಮರಳಿದ ಕೆಲವೇ ಗಂಟೆಗಳಲ್ಲಿ ಅವರ ಗಮನಕ್ಕೆ ಬಾರದೇ ಖಾತೆಯಿಂದ ₹90 ಸಾವಿರ ಹಣ ವರ್ಗಾವಣೆ ಆಗಿರುವುದು ಪತ್ತೆಯಾಗಿದೆ. ಯಾವುದೇ ಒಟಿಪಿ ಅಥವಾ ಬ್ಯಾಂಕ್ ಮಾಹಿತಿ ಹಂಚಿಕೊಳ್ಳದೇ ಇದ್ದರೂ ಹಣ ಕಳವಾಗಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

ಈ ಘಟನೆಗೆ ಸಂಬಂಧಿಸಿದಂತೆ ಬ್ಯಾಂಕ್ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ವೆಂಕಟೇಶ್, ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸೈಬರ್ ವಂಚಕರ ಪತ್ತೆಗೆ ತನಿಖೆ ಆರಂಭಿಸಿದ್ದಾರೆ.

ಹುಟ್ಟಿನಿಂದಲೇ ಅಕೊಂಡ್ರೊಪ್ಲಾಸಿಯಾ ಸಮಸ್ಯೆಯಿಂದ ಬಳಲುತ್ತಿದ್ದರೂ ಅದನ್ನೇ ಸವಾಲಾಗಿ ಸ್ವೀಕರಿಸಿ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿರುವ ವೆಂಕಟೇಶ್, 50ಕ್ಕೂ ಹೆಚ್ಚು ಕ್ರೀಡಾಕೂಟಗಳಲ್ಲಿ ಭಾಗವಹಿಸಿ ದೇಶಕ್ಕೆ ಕೀರ್ತಿ ತಂದಿದ್ದಾರೆ. ಅವರ ಸಾಧನೆಯನ್ನು ಗುರುತಿಸಿ ಕೇಂದ್ರ ಸರ್ಕಾರ 2021ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು.

ಈ ಘಟನೆ ಬೆಂಗಳೂರಿನಲ್ಲಿ ಸೈಬರ್ ಭದ್ರತೆ ಕುರಿತ ಆತಂಕವನ್ನು ಮತ್ತೊಮ್ಮೆ ಹೆಚ್ಚಿಸಿದೆ.

Continue Reading

ದೇಶ

“ಕೊಟ್ಟ ಮಾತು ಉಳಿಸಿಕೊಳ್ಳಿ”; DCM D K Shivkumar ಸಿಂಹಗರ್ಜನೆ

Published

on

ನವದೆಹಲಿ: ದೆಹಲಿಯ ಎಐಸಿಸಿ ಕಚೇರಿಯಲ್ಲಿ ನಡೆಯುತ್ತಿರುವ ಕರ್ನಾಟಕ ಕಾಂಗ್ರೆಸ್‌ನ ಹೈವೋಲ್ಟೇಜ್ ಸಭೆ ಕ್ಲೈಮ್ಯಾಕ್ಸ್ ಹಂತ ತಲುಪಿದ್ದು, ಉಪ ಮುಖ್ಯಮಂತ್ರಿ D. K. Shivakumar ಹೈಕಮಾಂಡ್ ನಾಯಕರ ಎದುರೇ ಖಡಕ್ ನಿಲುವು ತಾಳಿದ್ದಾರೆ ಎನ್ನಲಾಗಿದೆ.

ಮೂಲಗಳ ಪ್ರಕಾರ, ಸರ್ಕಾರ ರಚನೆಯ ವೇಳೆ ನಡೆದಿದ್ದ ಅಧಿಕಾರ ಹಂಚಿಕೆ ಒಪ್ಪಂದವನ್ನು ಜಾರಿಗೆ ತರಬೇಕು ಎಂದು ಡಿಕೆ ಶಿವಕುಮಾರ್ ಒತ್ತಾಯಿಸಿದ್ದು, ಈ ಸಂಬಂಧ ಮೂರು ಮಹತ್ವದ ಷರತ್ತುಗಳನ್ನು ಕಾಂಗ್ರೆಸ್ ಹೈಕಮಾಂಡ್ ಮುಂದೆ ಇಟ್ಟಿದ್ದಾರೆ.

ಮೊದಲ ಷರತ್ತಾಗಿ, “ಸರ್ಕಾರ ರಚನೆಯಾಗುವಾಗ ನಡೆದ ಮಾತುಕತೆಯಂತೆ ಅಧಿಕಾರ ಹಂಚಿಕೆ ಜಾರಿಯಾಗಬೇಕು. ಮುಖ್ಯಮಂತ್ರಿ Siddaramaiah ಹಾಗೂ ಹೈಕಮಾಂಡ್ ಕೊಟ್ಟ ಮಾತು ಉಳಿಸಿಕೊಳ್ಳಬೇಕು. ಕಾಲಮಿತಿ ಮುಗಿದಿರುವುದರಿಂದ ಇದೀಗ ನಾಯಕತ್ವ ಬದಲಾವಣೆ ಆಗಲೇಬೇಕು” ಎಂದು ಡಿಕೆಶಿ ಹೇಳಿದ್ದಾರೆ ಎನ್ನಲಾಗಿದೆ.

ಎರಡನೇ ಷರತ್ತಿನಲ್ಲಿ, ಒಂದು ವೇಳೆ ಸಿದ್ದರಾಮಯ್ಯ ಅವರನ್ನೇ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಸಲು ತೀರ್ಮಾನಿಸಿದ್ದರೆ, ಅದನ್ನು ಹೈಕಮಾಂಡ್ ಹಾಗೂ ಸಿಎಂ ಜಂಟಿಯಾಗಿ ಬಹಿರಂಗವಾಗಿ ಘೋಷಿಸಬೇಕು. ಕಾರ್ಯಕರ್ತರಲ್ಲಿ ಉಂಟಾಗಿರುವ ಗೊಂದಲ ಹಾಗೂ ಊಹಾಪೋಹಗಳಿಗೆ ತೆರೆ ಎಳೆಯಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಮೂರನೇ ಮತ್ತು ಅತ್ಯಂತ ಸ್ಫೋಟಕ ಷರತ್ತಾಗಿ, “ಕೊಟ್ಟ ಮಾತು ಉಳಿಸಿಕೊಳ್ಳದಿದ್ದರೆ ನನಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನವೂ ಬೇಡ, ಉಪ ಮುಖ್ಯಮಂತ್ರಿ ಹುದ್ದೆಯೂ ಬೇಡ. ಎರಡಕ್ಕೂ ರಾಜೀನಾಮೆ ನೀಡಿ ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ” ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ ಎನ್ನಲಾಗಿದೆ.

ಈ ಬೆಳವಣಿಗೆಗಳು ಕಾಂಗ್ರೆಸ್ ಹೈಕಮಾಂಡ್‌ಗೆ ಧರ್ಮಸಂಕಟ ಉಂಟುಮಾಡಿದ್ದು, ದೆಹಲಿಯ ಸಭೆಯಲ್ಲಿ ಕೈಗೊಳ್ಳುವ ಅಂತಿಮ ನಿರ್ಧಾರ ರಾಜ್ಯ ರಾಜಕಾರಣದಲ್ಲಿ ದೊಡ್ಡ ಪರಿಣಾಮ ಬೀರುವ ಸಾಧ್ಯತೆ ಇದೆ.

ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ Mallikarjun Kharge, Rahul Gandhi ಹಾಗೂ ಹಿರಿಯ ನಾಯಕರು ಭಾಗವಹಿಸಿದ್ದಾರೆ.

Continue Reading

ದೇಶ

“ಗೋಹತ್ಯೆ ನಿಲ್ಲಿಸಿ, ಗೋವಿಗೆ ರಾಷ್ಟ್ರೀಯ ಸ್ಥಾನಮಾನ ನೀಡಿ”; ಇಕ್ಬಾಲ್ ಅನ್ಸಾರಿ ಮನವಿ

Published

on

ಧಾರವಾಡ: ಹಸುವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಬೇಕು ಹಾಗೂ ದೇಶಾದ್ಯಂತ ಗೋಹತ್ಯೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಎಂದು ಒತ್ತಾಯಿಸಿ ಉತ್ತರ ಕರ್ನಾಟಕದ ಅಂಜುಮನ್ ಎ ಇಸ್ಲಾಮ್ ಸಂಘಟನೆಯ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಧಾರವಾಡದಲ್ಲಿ ಮಹತ್ವದ ಪ್ರತಿಭಟನೆ ನಡೆಸಿದರು.

ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು, ಗೋ ಸಂರಕ್ಷಣೆ ಕುರಿತ ಘೋಷಣೆಗಳನ್ನು ಕೂಗಿ ಸರ್ಕಾರದ ಗಮನ ಸೆಳೆಯಲು ಪ್ರಯತ್ನಿಸಿದರು. ಗೋವಿಗೆ ರಾಷ್ಟ್ರೀಯ ಪ್ರಾಣಿಯ ಸ್ಥಾನಮಾನ ನೀಡಬೇಕು ಹಾಗೂ ದೇಶದಲ್ಲಿ ಗೋಹತ್ಯೆಗೆ ಸಂಪೂರ್ಣ ಬ್ರೇಕ್ ಹಾಕಬೇಕು ಎಂದು ಆಗ್ರಹಿಸಿದರು.

ಸಂಘಟನೆಯ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಗಿದ್ದು, ಈ ಹೋರಾಟಕ್ಕೆ ವಿವಿಧ ಹಿಂದೂಪರ ಸಂಘಟನೆಗಳು ಮತ್ತು ಮುಖಂಡರು ಸಹ ಬೆಂಬಲ ನೀಡಬೇಕು ಎಂದು ಮನವಿ ಮಾಡಲಾಗಿದೆ. ಸಮಾಜದಲ್ಲಿ ಸೌಹಾರ್ದತೆ ಮತ್ತು ಪರಸ್ಪರ ಗೌರವ ಕಾಪಾಡುವ ಉದ್ದೇಶದಿಂದಲೇ ಈ ಅಭಿಯಾನ ಕೈಗೊಳ್ಳಲಾಗಿದೆ ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.

ಇದಕ್ಕೂ ಮೊದಲು ರಾಮ ಜನ್ಮಭೂಮಿ-ಬಾಬರಿ ಮಸೀದಿ ವಿವಾದ ಪ್ರಕರಣದ ಮಾಜಿ ಅರ್ಜಿದಾರ Iqbal Ansari ಕೂಡ ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದರು. ದೇಶದಲ್ಲಿ ಕೋಮು ಸೌಹಾರ್ದತೆ ಉಳಿಯಬೇಕಾದರೆ ಮುಸ್ಲಿಮರು ಸ್ವಯಂಪ್ರೇರಿತವಾಗಿ ಗೋಹತ್ಯೆ ನಿಲ್ಲಿಸಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದರು.

ಭಾರತದಲ್ಲಿ ಹಸುವಿಗೆ ವಿಶೇಷ ಸಾಂಸ್ಕೃತಿಕ ಹಾಗೂ ಧಾರ್ಮಿಕ ಮಹತ್ವವಿದೆ. ಹಿಂದೂ ಸಮುದಾಯ ಗೋವನ್ನು ಗೋಮಾತೆ ಎಂದು ಪೂಜಿಸುತ್ತದೆ. ಹೀಗಾಗಿ ಬಹುಸಂಖ್ಯಾತ ಸಮುದಾಯದ ಭಾವನೆಗಳಿಗೆ ಗೌರವ ನೀಡಬೇಕು ಎಂದು ಇಕ್ಬಾಲ್ ಅನ್ಸಾರಿ ಹೇಳಿದ್ದರು. ಇಸ್ಲಾಂ ಧರ್ಮದಲ್ಲಿ ಗೋಮಾಂಸ ಸೇವನೆಯನ್ನು ಕಡ್ಡಾಯಗೊಳಿಸಿಲ್ಲ ಎಂದು ಕೂಡ ಅವರು ಸ್ಪಷ್ಟಪಡಿಸಿದ್ದರು.

ಧಾರವಾಡದಲ್ಲಿ ನಡೆದ ಈ ಪ್ರತಿಭಟನೆ ಇದೀಗ ರಾಜ್ಯಾದ್ಯಂತ ಚರ್ಚೆಗೆ ಕಾರಣವಾಗಿದ್ದು, ಸಾಮಾಜಿಕ ಸೌಹಾರ್ದತೆ ಮತ್ತು ಧಾರ್ಮಿಕ ಭಾವನೆಗಳ ಕುರಿತ ಹೊಸ ಚರ್ಚೆಗೆ ವೇದಿಕೆಯಾಗಿದೆ.

Continue Reading

Trending