Connect with us

ಬೆಂಗಳೂರು

ರನ್ಯಾ ರಾವ್ ಪ್ರಕರಣದಲ್ಲಿ ನಮ್ಮ ಪಕ್ಷದವರ ಕೈವಾಡವೇ ಇರಬಹುದು- ಶಾಸಕ ಎಸ್ ಟಿ ಸೋಮಶೇಖರ್

Published

on

ಬೆಂಗಳೂರು: ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಹಿಂದೆ ಕಾಂಗ್ರೆಸ್ ಸಚಿವರು ಭಾಗಿಯಾಗಿದ್ದಾರೆ ಎಂದು ಬಿಜೆಪಿ ಆರೋಪಕ್ಕೆ ಇದೀಗ ಶಾಸಕರಾದ ಎಸ್ ಟಿ ಸೋಮಶೇಖರ್ ಪ್ರತಿಕ್ರಿಯಿಸಿದ್ದು, ಇದರಲ್ಲಿ ಬಿಜೆಪಿ ನಾಯಕರು ಯಾಕೆ ಭಾಗಿಯಾಗಿರಬಾರದು ಎಂದು ಪ್ರಶ್ನಿಸಿದ್ದಾರೆ,
ಈ ಬಗ್ಗೆ ಮಾತನಾಡಿದ ಅವರು ರನ್ಯಾ ರಾವ್ ಹಿಂದೆ ಕಾಂಗ್ರೆಸ್ ನ ಸಚಿವರು ಭಾಗಿಯಾಗಿದ್ದಾರೆ ಎಂದು ಆರೋಪಿಸುವ ಬಿಜೆಪಿ ನಾಯಕರು ಯಾಕೆ ಈ ಪ್ರಕರಣದಲ್ಲಿ ಭಾಗಿಯಾಗಿರಬಾರದು, ಕೇಂದ್ರದಲ್ಲಿ ನಿಮ್ಮದೇ ಸರ್ಕಾರ ಇರೋದು ಈ ಬಗ್ಗೆ ಚರ್ಚೆ ನಡೆಸಿ ಎಂದು ತಿಳಿಸಿದರು,
ಬಿಜೆಪಿ ಅವರು ಈ ಪ್ರಕರಣದಲ್ಲಿ ಊಹಾಪೋಹಗಳನ್ನು ಮಾಡೋದು ಬಿಟ್ಟು ಕೇಂದ್ರ ಸರ್ಕಾರದ ಜೊತೆ ಮಾತನಾಡಿ ತನಿಖೆ ಮಾಡಿಸಲಿ, ಈಡಿ, ಸಿಬಿಐ ಮೊದಲಾದ ತನಿಖಾ ಏಜೆನ್ಸಿಗಳು ಕೇಂದ್ರದ ಅಧೀನದಲ್ಲಿವೆ, ಕೇಂದ್ರ ಸಚಿವರ ಬಳಿ ಚರ್ಚಿಸಿ ತನಿಖೆ ನಡೆಸುವಂತೆ ಆಗ್ರಹಿಸಲಿ ಎಂದು ಕಿಡಿ ಕಾರಿದರು,
ಈಗಾಗಲೇ ಸದನದಲ್ಲಿ ಗೃಹ ಸಚಿವರು ಹಾಗೂ ಇನ್ನಿತರರು ತನಿಖೆಯನ್ನು ಕೇಂದ್ರದಿಂದಲೇ ನಡೆಸಲಿ ಎಂದು ತಿಳಿಸಿದ್ದಾರೆ,
ಅದರಂತೆ ಬಿಜೆಪಿಯ ನಾಯಕರು ಸಚಿವ ಅಮಿತ್ ಶಾ ಜೊತೆ ಮಾತನಾಡಿ ದಾಖಲೆಗಳನ್ನು ನೀಡಿ ತನಿಖೆ ನಡೆಸುವಂತೆ ಮನವಿ ಮಾಡಿ, ಅದು ಬಿಟ್ಟು ಕಾಂಗ್ರೆಸ್ ಕೈವಾಡವಿದೆ ಎಂದು ಸುಳ್ಳು ಹೇಳೋದು ಬೇಡ ಎಂದು ಸೋಮಶೇಖರ್ ಹೇಳಿದರು,

ಅಪರಾಧ

ಸಿಲಿಕಾನ್ ಸಿಟಿಯಲ್ಲಿ ಸೈಬರ್ ಅಟ್ಟಹಾಸ; ಪ್ಯಾರಾ ಅಥ್ಲೀಟ್ ಹಣ ಕಳವು ಪ್ರಕರಣ

Published

on

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸೈಬರ್ ವಂಚಕರ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ ಪದ್ಮಶ್ರೀ ಪುರಸ್ಕೃತ ಪ್ಯಾರಾ ಅಥ್ಲೀಟ್ K. Y. Venkatesh ಅವರೇ ಸೈಬರ್ ಕಳ್ಳರ ಜಾಲಕ್ಕೆ ಬಲಿಯಾಗಿದ್ದಾರೆ.

ಮಲ್ಲೇಶ್ವರಂ ನಿವಾಸಿಯಾಗಿರುವ ವೆಂಕಟೇಶ್ ಅವರ ಕರ್ನಾಟಕ ಬ್ಯಾಂಕ್ ಖಾತೆಯಿಂದ ಬರೋಬ್ಬರಿ ₹90 ಸಾವಿರ ಹಣ ನಿಗೂಢವಾಗಿ ಡ್ರಾ ಆಗಿರುವ ಘಟನೆ ಬೆಳಕಿಗೆ ಬಂದಿದೆ. ಮಧ್ಯರಾತ್ರಿ ಅವರ ಮೊಬೈಲ್‌ಗೆ ಸರಣಿ ಒಟಿಪಿ ಸಂದೇಶಗಳು ಬಂದಿದ್ದು, ಅನುಮಾನಗೊಂಡ ಅವರು ಮರುದಿನ ಬ್ಯಾಂಕ್‌ಗೆ ತೆರಳಿ ವಿಚಾರಣೆ ನಡೆಸಿದ್ದರು. ಈ ವೇಳೆ ಬ್ಯಾಂಕ್ ಅಧಿಕಾರಿಗಳು “ಖಾತೆ ಸುರಕ್ಷಿತವಾಗಿದೆ” ಎಂದು ತಿಳಿಸಿದ್ದರು ಎನ್ನಲಾಗಿದೆ.

ಆದರೆ ಮನೆಗೆ ಮರಳಿದ ಕೆಲವೇ ಗಂಟೆಗಳಲ್ಲಿ ಅವರ ಗಮನಕ್ಕೆ ಬಾರದೇ ಖಾತೆಯಿಂದ ₹90 ಸಾವಿರ ಹಣ ವರ್ಗಾವಣೆ ಆಗಿರುವುದು ಪತ್ತೆಯಾಗಿದೆ. ಯಾವುದೇ ಒಟಿಪಿ ಅಥವಾ ಬ್ಯಾಂಕ್ ಮಾಹಿತಿ ಹಂಚಿಕೊಳ್ಳದೇ ಇದ್ದರೂ ಹಣ ಕಳವಾಗಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

ಈ ಘಟನೆಗೆ ಸಂಬಂಧಿಸಿದಂತೆ ಬ್ಯಾಂಕ್ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ವೆಂಕಟೇಶ್, ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸೈಬರ್ ವಂಚಕರ ಪತ್ತೆಗೆ ತನಿಖೆ ಆರಂಭಿಸಿದ್ದಾರೆ.

ಹುಟ್ಟಿನಿಂದಲೇ ಅಕೊಂಡ್ರೊಪ್ಲಾಸಿಯಾ ಸಮಸ್ಯೆಯಿಂದ ಬಳಲುತ್ತಿದ್ದರೂ ಅದನ್ನೇ ಸವಾಲಾಗಿ ಸ್ವೀಕರಿಸಿ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿರುವ ವೆಂಕಟೇಶ್, 50ಕ್ಕೂ ಹೆಚ್ಚು ಕ್ರೀಡಾಕೂಟಗಳಲ್ಲಿ ಭಾಗವಹಿಸಿ ದೇಶಕ್ಕೆ ಕೀರ್ತಿ ತಂದಿದ್ದಾರೆ. ಅವರ ಸಾಧನೆಯನ್ನು ಗುರುತಿಸಿ ಕೇಂದ್ರ ಸರ್ಕಾರ 2021ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು.

ಈ ಘಟನೆ ಬೆಂಗಳೂರಿನಲ್ಲಿ ಸೈಬರ್ ಭದ್ರತೆ ಕುರಿತ ಆತಂಕವನ್ನು ಮತ್ತೊಮ್ಮೆ ಹೆಚ್ಚಿಸಿದೆ.

Continue Reading

ದೇಶ

“ಡಿಕೆಶಿ ಗುಂಪುಕಟ್ಟುವ ರಾಜಕಾರಣಿ ಅಲ್ಲ”; ಶಾಸಕ ಬಾಲಕೃಷ್ಣ

Published

on

ನವದೆಹಲಿ: ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಚರ್ಚೆ ತೀವ್ರಗೊಂಡಿರುವ ನಡುವೆಯೇ, ಮಾಗಡಿ ಶಾಸಕ H. C. Balakrishna ಡಿಸಿಎಂ D. K. Shivakumar ಪರವಾಗಿ ಮಹತ್ವದ ಹೇಳಿಕೆ ನೀಡಿದ್ದಾರೆ. “ಡಿಕೆ ಶಿವಕುಮಾರ್ ಅವರು ಗುಂಪುಕಟ್ಟಿಕೊಂಡು ರಾಜಕೀಯ ಮಾಡುವವರಲ್ಲ. ಅವರು ಹೈಕಮಾಂಡ್‌ಗೆ ನಿಷ್ಠೆಯಿಂದ ಇರುವ ನಾಯಕ” ಎಂದು ಹೇಳಿದ್ದಾರೆ.

ದೆಹಲಿಯಲ್ಲಿ https://hosasuddi.in/ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ Siddaramaiah ಹಾಗೂ ಡಿಕೆ ಶಿವಕುಮಾರ್ ಇಬ್ಬರನ್ನೂ ಚರ್ಚೆಗೆ ಕರೆದಿರುವುದರಿಂದ ಇಂದು ಏನಾದರೂ ಸ್ಪಷ್ಟ ತೀರ್ಮಾನ ಹೊರಬರುವ ಸಾಧ್ಯತೆ ಇದೆ ಎಂದು ತಿಳಿಸಿದರು.

“ರಾಜ್ಯದಲ್ಲಿ ಉಂಟಾಗಿರುವ ಗೊಂದಲಕ್ಕೆ ಹೈಕಮಾಂಡ್ ತೆರೆ ಎಳೆಯಬೇಕು. ಎಲ್ಲವೂ ಸ್ಪಷ್ಟವಾಗಬೇಕು. ಮುಂದಿನ ಚುನಾವಣೆಯ ದೃಷ್ಟಿಯಿಂದ ಇದು ಅಗತ್ಯ” ಎಂದು ಬಾಲಕೃಷ್ಣ ಅಭಿಪ್ರಾಯಪಟ್ಟರು.

ಸಿಎಂ ಜೊತೆ ಕೆಲವು ಸಚಿವರು ದೆಹಲಿಗೆ ತೆರಳಿರುವ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, “ಇದರಲ್ಲಿ ವಿಶೇಷ ಏನೂ ಇಲ್ಲ. ಈ ಹಿಂದೆಯೂ ಸಿಎಂ ದೆಹಲಿಗೆ ಹೋಗುವಾಗ ಸಚಿವರು ಜೊತೆಯಾಗುತ್ತಿದ್ದರು. ಕುತೂಹಲದಿಂದ 3-4 ಸಚಿವರು ಹೋಗಿರಬಹುದು” ಎಂದು ಹೇಳಿದರು.

ಇದಲ್ಲದೆ, “2028ರ ವಿಧಾನಸಭೆ ಚುನಾವಣೆ ಕಾಂಗ್ರೆಸ್‌ಗೆ ಬಹಳ ಮುಖ್ಯ. ಈಗಿನ ಗೊಂದಲ ಪರಿಹಾರವಾದರೆ ಮುಂದಿನ ಚುನಾವಣೆಗೆ ಅನುಕೂಲವಾಗಲಿದೆ. ಆದರೆ ನಾವು ಮಾತನಾಡಿದ ಕೂಡಲೇ ಏನೂ ಆಗುವುದಿಲ್ಲ. ಹೈಕಮಾಂಡ್‌ಗೆ ಎಲ್ಲವೂ ಗೊತ್ತಿದೆ. ಅವರ ತೀರ್ಮಾನವೇ ಅಂತಿಮ” ಎಂದು ಸ್ಪಷ್ಟಪಡಿಸಿದರು.

ಕರ್ನಾಟಕ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಪವರ್ ಶೇರಿಂಗ್ ಹಾಗೂ ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಬಾಲಕೃಷ್ಣ ಅವರ ಹೇಳಿಕೆ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

Continue Reading

ದೇಶ

ಡಿಕೆಶಿಗೆ ಹೊಸ ಸವಾಲಾ? ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಜಾರಕಿಹೊಳಿ ಲಾಬಿ

Published

on

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಹಾಗೂ ಪವರ್‌ ಶೇರಿಂಗ್‌ ಚರ್ಚೆಗಳು ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ ಲೋಕೋಪಯೋಗಿ ಸಚಿವ Satish Jarkiholi ದಿಢೀರ್‌ ದೆಹಲಿಗೆ ತೆರಳಿರುವುದು ರಾಜಕೀಯ ವಲಯದಲ್ಲಿ ಭಾರಿ ಕುತೂಹಲ ಮೂಡಿಸಿದೆ.

ಮುಖ್ಯಮಂತ್ರಿ Siddaramaiah ಹಾಗೂ ಉಪ ಮುಖ್ಯಮಂತ್ರಿ D. K. Shivakumar ಅವರ ಇತ್ತೀಚಿನ ದೆಹಲಿ ಪ್ರವಾಸದ ಬೆನ್ನಲ್ಲೇ ಜಾರಕಿಹೊಳಿ ಹೈಕಮಾಂಡ್‌ ನಾಯಕರನ್ನು ಭೇಟಿಯಾಗಲು ಮುಂದಾಗಿರುವುದು ಕಾಂಗ್ರೆಸ್‌ನಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನ ಕುರಿತ ಚರ್ಚೆ ಮತ್ತೆ ವೇಗ ಪಡೆದುಕೊಂಡಿದ್ದು, ಪಕ್ಷದೊಳಗಿನ ಸಮೀಕರಣಗಳು ಬದಲಾಗುವ ಸಾಧ್ಯತೆಗಳ ಬಗ್ಗೆ ಮಾತುಕತೆ ಜೋರಾಗಿದೆ.

ಪ್ರಸ್ತುತ ಡಿ.ಕೆ. ಶಿವಕುಮಾರ್ ಅವರೇ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿದಿದ್ದರೂ, ಮುಂಬರುವ ಚುನಾವಣಾ ರಾಜಕಾರಣದ ದೃಷ್ಟಿಯಿಂದ ಪೂರ್ಣಾವಧಿ ಅಧ್ಯಕ್ಷರನ್ನು ನೇಮಕ ಮಾಡುವ ಅಗತ್ಯವಿದೆ ಎಂಬ ಅಭಿಪ್ರಾಯ ಕಾಂಗ್ರೆಸ್‌ ವಲಯದಲ್ಲಿ ಕೇಳಿಬರುತ್ತಿದೆ. ಇದೇ ಹಿನ್ನೆಲೆ ಅಹಿಂದ ಹಾಗೂ ವಾಲ್ಮೀಕಿ ಸಮುದಾಯದ ಪ್ರಭಾವಿ ನಾಯಕನಾಗಿ ಗುರುತಿಸಿಕೊಂಡಿರುವ ಸತೀಶ್ ಜಾರಕಿಹೊಳಿ ತಮ್ಮ ಪರ ಲಾಬಿ ಆರಂಭಿಸಿದ್ದಾರೆ ಎನ್ನಲಾಗಿದೆ.

ಸಿದ್ದರಾಮಯ್ಯ ಆಪ್ತ ವಲಯದ ಪ್ರಮುಖ ನಾಯಕರಲ್ಲಿ ಒಬ್ಬರಾಗಿರುವ ಜಾರಕಿಹೊಳಿ ಅವರ ದೆಹಲಿ ಭೇಟಿ, ಡಿಕೆಶಿ ಬಣಕ್ಕೆ ಹೊಸ ಸವಾಲು ತಂದೊಡ್ಡಿದೆ ಎಂಬ ರಾಜಕೀಯ ವಿಶ್ಲೇಷಣೆಗಳು ಕೇಳಿಬರುತ್ತಿವೆ. ಎಐಸಿಸಿ ಅಧ್ಯಕ್ಷ Mallikarjun Kharge ಸೇರಿದಂತೆ ಹಿರಿಯ ಕಾಂಗ್ರೆಸ್‌ ನಾಯಕರನ್ನು ಭೇಟಿಯಾಗಿ ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಲಿದ್ದಾರೆ ಎನ್ನಲಾಗಿದೆ.

ಒಟ್ಟಿನಲ್ಲಿ ಜಾರಕಿಹೊಳಿ ಅವರ ದೆಹಲಿ ಪ್ರವಾಸ ಕಾಂಗ್ರೆಸ್‌ನೊಳಗಿನ ನಾಯಕತ್ವ ಚರ್ಚೆಗೆ ಮತ್ತಷ್ಟು ವೇಗ ನೀಡಿದ್ದು, ಮುಂದಿನ ದಿನಗಳಲ್ಲಿ ರಾಜ್ಯ ರಾಜಕಾರಣದಲ್ಲಿ ಹೊಸ ತಿರುವು ಸಿಗುವ ಸಾಧ್ಯತೆಗಳಿವೆ.

Continue Reading

Trending