ಬೆಂಗಳೂರು
ಕಾಂಗ್ರೆಸ್ ಕಾರ್ಯಕ್ರಮಕ್ಕೆ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಹಾಕಿದವರ ವಿರುದ್ಧ ಕ್ರಮಕ್ಕೆ ಡಿಸಿಎಂ ಸೂಚನೆ – DCM D K SHIVAKUMAR
ಬೆಂಗಳೂರು : ಪ್ರದೇಶ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಅರಮನೆ ಮೈದಾನದ ಸುತ್ತಮುತ್ತ ಸೇರಿದಂತೆ ನಗರದಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಹಾಕಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.
ಮಾರ್ಚ್ 17ರಂದು ಸೋಮವಾರ ಅರಮನೆ ಮೈದಾನದಲ್ಲಿ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಹಾಕಿರುವ ಅನಧಿಕೃತ ಫ್ಲೆಕ್ಸ್, ಬ್ಯಾನರ್ಗಳನ್ನು ಕೂಡಲೇ ತೆರವುಗೊಳಿಸಬೇಕು ಎಂದು ಅದನ್ನು ಹಾಕಿರುವವರಿಗೆ ಡಿಸಿಎಂ ಸೂಚಿಸಿದ್ದಾರೆ.
ಒಂದೊಮ್ಮೆ ತೆರವು ಮಾಡದಿದ್ದರೆ ಸಂಬಂಧಪಟ್ಟವರ ವಿರುದ್ಧ ದಂಡ ಸೇರಿದಂತೆ ಕಟ್ಟುನಿಟ್ಟಿನ ಕ್ರಮ ಜರುಗಿಸುವಂತೆ ಬಿಬಿಎಂಪಿ ಆಯುಕ್ತರಾದ ತುಷಾರ್ ಗಿರಿನಾಥ್ ಅವರಿಗೆ ಡಿಸಿಎಂ ಸೂಚನೆ ನೀಡಿದ್ದಾರೆ. ಬೆಂಗಳೂರು ನಗರದ ಸೌಂದರ್ಯವನ್ನು ಹಾಳು ಮಾಡಬಾರದು ಎಂದು ಅನಧಿಕೃತ ಫ್ಲೆಕ್ಸ್, ಬ್ಯಾನರ್ ನಿಷೇಧಿಸಲಾಗಿದೆ. ಸರ್ಕಾರದ ಈ ಆದೇಶವನ್ನು ಪದೇ ಪದೆ ನಿರ್ಲಕ್ಷಿಸಲಾಗಿದೆ ಎಂದು ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಆದೇಶ ಉಲ್ಲಂಘಿಸಿರುವವರು ನಮ್ಮ ಪಕ್ಷದವರಾದರೂ ಸರಿ, ಬೇರೆ ಪಕ್ಷದವರಾದರೂ ಸರಿ ಅಂತಹವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿರುವುದಾಗಿ ಶಿವಕುಮಾರ್ ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ದೇಶ
“ಡಿಕೆಶಿ ಗುಂಪುಕಟ್ಟುವ ರಾಜಕಾರಣಿ ಅಲ್ಲ”; ಶಾಸಕ ಬಾಲಕೃಷ್ಣ
ನವದೆಹಲಿ: ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಚರ್ಚೆ ತೀವ್ರಗೊಂಡಿರುವ ನಡುವೆಯೇ, ಮಾಗಡಿ ಶಾಸಕ H. C. Balakrishna ಡಿಸಿಎಂ D. K. Shivakumar ಪರವಾಗಿ ಮಹತ್ವದ ಹೇಳಿಕೆ ನೀಡಿದ್ದಾರೆ. “ಡಿಕೆ ಶಿವಕುಮಾರ್ ಅವರು ಗುಂಪುಕಟ್ಟಿಕೊಂಡು ರಾಜಕೀಯ ಮಾಡುವವರಲ್ಲ. ಅವರು ಹೈಕಮಾಂಡ್‌ಗೆ ನಿಷ್ಠೆಯಿಂದ ಇರುವ ನಾಯಕ” ಎಂದು ಹೇಳಿದ್ದಾರೆ.
ದೆಹಲಿಯಲ್ಲಿ https://hosasuddi.in/ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ Siddaramaiah ಹಾಗೂ ಡಿಕೆ ಶಿವಕುಮಾರ್ ಇಬ್ಬರನ್ನೂ ಚರ್ಚೆಗೆ ಕರೆದಿರುವುದರಿಂದ ಇಂದು ಏನಾದರೂ ಸ್ಪಷ್ಟ ತೀರ್ಮಾನ ಹೊರಬರುವ ಸಾಧ್ಯತೆ ಇದೆ ಎಂದು ತಿಳಿಸಿದರು.
“ರಾಜ್ಯದಲ್ಲಿ ಉಂಟಾಗಿರುವ ಗೊಂದಲಕ್ಕೆ ಹೈಕಮಾಂಡ್ ತೆರೆ ಎಳೆಯಬೇಕು. ಎಲ್ಲವೂ ಸ್ಪಷ್ಟವಾಗಬೇಕು. ಮುಂದಿನ ಚುನಾವಣೆಯ ದೃಷ್ಟಿಯಿಂದ ಇದು ಅಗತ್ಯ” ಎಂದು ಬಾಲಕೃಷ್ಣ ಅಭಿಪ್ರಾಯಪಟ್ಟರು.
ಸಿಎಂ ಜೊತೆ ಕೆಲವು ಸಚಿವರು ದೆಹಲಿಗೆ ತೆರಳಿರುವ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, “ಇದರಲ್ಲಿ ವಿಶೇಷ ಏನೂ ಇಲ್ಲ. ಈ ಹಿಂದೆಯೂ ಸಿಎಂ ದೆಹಲಿಗೆ ಹೋಗುವಾಗ ಸಚಿವರು ಜೊತೆಯಾಗುತ್ತಿದ್ದರು. ಕುತೂಹಲದಿಂದ 3-4 ಸಚಿವರು ಹೋಗಿರಬಹುದು” ಎಂದು ಹೇಳಿದರು.
ಇದಲ್ಲದೆ, “2028ರ ವಿಧಾನಸಭೆ ಚುನಾವಣೆ ಕಾಂಗ್ರೆಸ್‌ಗೆ ಬಹಳ ಮುಖ್ಯ. ಈಗಿನ ಗೊಂದಲ ಪರಿಹಾರವಾದರೆ ಮುಂದಿನ ಚುನಾವಣೆಗೆ ಅನುಕೂಲವಾಗಲಿದೆ. ಆದರೆ ನಾವು ಮಾತನಾಡಿದ ಕೂಡಲೇ ಏನೂ ಆಗುವುದಿಲ್ಲ. ಹೈಕಮಾಂಡ್‌ಗೆ ಎಲ್ಲವೂ ಗೊತ್ತಿದೆ. ಅವರ ತೀರ್ಮಾನವೇ ಅಂತಿಮ” ಎಂದು ಸ್ಪಷ್ಟಪಡಿಸಿದರು.
ಕರ್ನಾಟಕ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಪವರ್ ಶೇರಿಂಗ್ ಹಾಗೂ ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಬಾಲಕೃಷ್ಣ ಅವರ ಹೇಳಿಕೆ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.
ದೇಶ
ಡಿಕೆಶಿಗೆ ಹೊಸ ಸವಾಲಾ? ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಜಾರಕಿಹೊಳಿ ಲಾಬಿ
ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಹಾಗೂ ಪವರ್ ಶೇರಿಂಗ್ ಚರ್ಚೆಗಳು ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ ಲೋಕೋಪಯೋಗಿ ಸಚಿವ Satish Jarkiholi ದಿಢೀರ್ ದೆಹಲಿಗೆ ತೆರಳಿರುವುದು ರಾಜಕೀಯ ವಲಯದಲ್ಲಿ ಭಾರಿ ಕುತೂಹಲ ಮೂಡಿಸಿದೆ.
ಮುಖ್ಯಮಂತ್ರಿ Siddaramaiah ಹಾಗೂ ಉಪ ಮುಖ್ಯಮಂತ್ರಿ D. K. Shivakumar ಅವರ ಇತ್ತೀಚಿನ ದೆಹಲಿ ಪ್ರವಾಸದ ಬೆನ್ನಲ್ಲೇ ಜಾರಕಿಹೊಳಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಲು ಮುಂದಾಗಿರುವುದು ಕಾಂಗ್ರೆಸ್‌ನಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನ ಕುರಿತ ಚರ್ಚೆ ಮತ್ತೆ ವೇಗ ಪಡೆದುಕೊಂಡಿದ್ದು, ಪಕ್ಷದೊಳಗಿನ ಸಮೀಕರಣಗಳು ಬದಲಾಗುವ ಸಾಧ್ಯತೆಗಳ ಬಗ್ಗೆ ಮಾತುಕತೆ ಜೋರಾಗಿದೆ.
ಪ್ರಸ್ತುತ ಡಿ.ಕೆ. ಶಿವಕುಮಾರ್ ಅವರೇ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿದಿದ್ದರೂ, ಮುಂಬರುವ ಚುನಾವಣಾ ರಾಜಕಾರಣದ ದೃಷ್ಟಿಯಿಂದ ಪೂರ್ಣಾವಧಿ ಅಧ್ಯಕ್ಷರನ್ನು ನೇಮಕ ಮಾಡುವ ಅಗತ್ಯವಿದೆ ಎಂಬ ಅಭಿಪ್ರಾಯ ಕಾಂಗ್ರೆಸ್ ವಲಯದಲ್ಲಿ ಕೇಳಿಬರುತ್ತಿದೆ. ಇದೇ ಹಿನ್ನೆಲೆ ಅಹಿಂದ ಹಾಗೂ ವಾಲ್ಮೀಕಿ ಸಮುದಾಯದ ಪ್ರಭಾವಿ ನಾಯಕನಾಗಿ ಗುರುತಿಸಿಕೊಂಡಿರುವ ಸತೀಶ್ ಜಾರಕಿಹೊಳಿ ತಮ್ಮ ಪರ ಲಾಬಿ ಆರಂಭಿಸಿದ್ದಾರೆ ಎನ್ನಲಾಗಿದೆ.
ಸಿದ್ದರಾಮಯ್ಯ ಆಪ್ತ ವಲಯದ ಪ್ರಮುಖ ನಾಯಕರಲ್ಲಿ ಒಬ್ಬರಾಗಿರುವ ಜಾರಕಿಹೊಳಿ ಅವರ ದೆಹಲಿ ಭೇಟಿ, ಡಿಕೆಶಿ ಬಣಕ್ಕೆ ಹೊಸ ಸವಾಲು ತಂದೊಡ್ಡಿದೆ ಎಂಬ ರಾಜಕೀಯ ವಿಶ್ಲೇಷಣೆಗಳು ಕೇಳಿಬರುತ್ತಿವೆ. ಎಐಸಿಸಿ ಅಧ್ಯಕ್ಷ Mallikarjun Kharge ಸೇರಿದಂತೆ ಹಿರಿಯ ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿ ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಲಿದ್ದಾರೆ ಎನ್ನಲಾಗಿದೆ.
ಒಟ್ಟಿನಲ್ಲಿ ಜಾರಕಿಹೊಳಿ ಅವರ ದೆಹಲಿ ಪ್ರವಾಸ ಕಾಂಗ್ರೆಸ್‌ನೊಳಗಿನ ನಾಯಕತ್ವ ಚರ್ಚೆಗೆ ಮತ್ತಷ್ಟು ವೇಗ ನೀಡಿದ್ದು, ಮುಂದಿನ ದಿನಗಳಲ್ಲಿ ರಾಜ್ಯ ರಾಜಕಾರಣದಲ್ಲಿ ಹೊಸ ತಿರುವು ಸಿಗುವ ಸಾಧ್ಯತೆಗಳಿವೆ.
ದೇಶ
16 ವರ್ಷದ ಸೂಪರ್‌ಹಿಟ್ ಜೋಡಿಗೆ ಭವ್ಯ ಗೌರವ: ‘ಕ್ರೇಜಿ-ಬ್ರಹ್ಮ’ ಕಾರ್ಯಕ್ರಮ
ಬೆಂಗಳೂರು: ಕನ್ನಡ ಚಿತ್ರರಂಗದ ಅದ್ಭುತ ಜೋಡಿಯಾದ V. Ravichandran ಹಾಗೂ Hamsalekha ಅವರ ಸಿನಿ ಪಯಣವನ್ನು ಸಂಭ್ರಮಿಸುವ ಸಲುವಾಗಿ ಮೇ 30ರಂದು ‘ಕ್ರೇಜಿ-ಬ್ರಹ್ಮ’ ರೀಯೂನಿಯನ್ ಮೆಗಾ ಈವೆಂಟ್ ಆಯೋಜಿಸಲಾಗಿದೆ.
ಕೆಂಗೇರಿ ಬಳಿಯ ಜೆ.ಕೆ. ಗ್ರ್ಯಾಂಡ್ ಅರೆನಾದಲ್ಲಿ ಸಂಜೆ 6 ಗಂಟೆಗೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಸುಮಾರು 8 ಸಾವಿರಕ್ಕೂ ಹೆಚ್ಚು ಅಭಿಮಾನಿಗಳು ಭಾಗಿಯಾಗುವ ನಿರೀಕ್ಷೆಯಿದೆ. ಪ್ರಸ್ತುತ್ ಇನ್ನೋವೇಟಿವ್ ಕ್ರಿಯೇಷನ್ಸ್ ಮತ್ತು ಸೊಲ್ಯೂಷನ್ಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ವಿನಯ್ ಹಾಗೂ ಕಲಾಲೂಹ ಸಂಸ್ಥಾಪಕಿ ಡಾ. ಚೇತನಾ ಆರ್.ಎಸ್. ಈ ಅದ್ಧೂರಿ ಸಮಾರಂಭವನ್ನು ಆಯೋಜಿಸಿದ್ದಾರೆ.
1980 ಮತ್ತು 90ರ ದಶಕದಲ್ಲಿ ರವಿಚಂದ್ರನ್ ನಟನೆಯ ಹಾಗೂ ನಿರ್ದೇಶನದ ಸಿನಿಮಾಗಳಿಗೆ ಹಂಸಲೇಖ ಸಂಗೀತ ನೀಡಿದ್ದ ಹಾಡುಗಳು ಭಾರೀ ಜನಪ್ರಿಯತೆ ಪಡೆದಿದ್ದವು. ಸುಮಾರು 16 ವರ್ಷಗಳ ಕಾಲ ಈ ಜೋಡಿ ಕನ್ನಡ ಸಿನಿರಂಗದಲ್ಲಿ ಅಚ್ಚಳಿಯದ ಗುರುತು ಮೂಡಿಸಿತ್ತು.
ಕಾರ್ಯಕ್ರಮಕ್ಕೆ ಸಾಮಾನ್ಯ ಹಾಗೂ ವಿ.ಐ.ಪಿ ಟಿಕೆಟ್ ವ್ಯವಸ್ಥೆ ಮಾಡಲಾಗಿದ್ದು, ಬುಕ್ ಮೈ ಶೋ ಮೂಲಕ ಟಿಕೆಟ್ ಖರೀದಿಸಲು ಅವಕಾಶ ಕಲ್ಪಿಸಲಾಗಿದೆ. ಪ್ರೇಕ್ಷಕರಿಗೆ ಯಾವುದೇ ತೊಂದರೆ ಆಗದಂತೆ ಪಾರ್ಕಿಂಗ್ ಸೇರಿದಂತೆ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.
ಸಮಾರಂಭದ ಕುರಿತು ಮಾತನಾಡಿದ ಹಂಸಲೇಖ, “ಇದು ಎಲ್ಲರಿಗೂ ಒಂದು ಈವೆಂಟ್ ಆಗಿರಬಹುದು. ಆದರೆ ನಮ್ಮಿಬ್ಬರಿಗೆ ಇದೊಂದು ವಿಶೇಷ ವಿದ್ಯಮಾನ. ರವಿಚಂದ್ರನ್ ಅವರ ಕಟೌಟ್ ನೋಡಿ ತುಂಬಾ ಖುಷಿಯಾಯಿತು. ಪಕ್ಕದಲ್ಲೇ ನನ್ನ ಕಟೌಟ್ ಕೂಡ ಹಾಕಿದ್ದಾರೆ. ಕಾರ್ಯಕ್ರಮ ಇನ್ನೂ ಅದ್ಭುತವಾಗಿರುತ್ತದೆ” ಎಂದು ಹೇಳಿದರು.
ಕ್ರೇಜಿಸ್ಟಾರ್ ರವಿಚಂದ್ರನ್ ಮಾತನಾಡಿ, “ನನ್ನ ಹಾಗೂ ಹಂಸಲೇಖ ಅವರ ಕಾಂಬಿನೇಶನ್‌ನಲ್ಲಿ ನೂರಾರು ಸೂಪರ್ ಹಿಟ್ ಹಾಡುಗಳು ಬಂದಿವೆ. ‘ಪ್ರೇಮಲೋಕ’ದಿಂದ ಆರಂಭವಾದ ನಮ್ಮ ಜೋಡಿ ಇಂದಿಗೂ ಜನಮನದಲ್ಲಿ ಜೀವಂತವಾಗಿದೆ. ನಾವು ಸಿನಿಮಾಗಳಲ್ಲಿ ಒಟ್ಟಿಗೆ ಕೆಲಸ ಮಾಡದೇ ಇರಬಹುದು. ಆದರೆ ನನ್ನ ಮನಸ್ಸಿನಲ್ಲಿ ಅವರು, ಅವರ ಮನಸ್ಸಿನಲ್ಲಿ ನಾನು ಸದಾ ಇರುತ್ತೇವೆ. ಒಂದೇ ದೇಹ ಎರಡು ಜೀವ ಇದ್ದ ಹಾಗೆ” ಎಂದು ಭಾವುಕರಾದರು.
ಇದೇ ವೇಳೆ, ಮೇ 30ರಂದು ತಮ್ಮ ಹುಟ್ಟುಹಬ್ಬ ಇರುವ ಹಿನ್ನೆಲೆಯಲ್ಲಿ ಅಭಿಮಾನಿಗಳು ಶಾಲು, ಕೇಕ್ ಹಾಗೂ ಹಾರಗಳನ್ನು ತರಬಾರದು ಎಂದು ರವಿಚಂದ್ರನ್ ಮನವಿ ಮಾಡಿದ್ದಾರೆ. ಕಾರ್ಯಕ್ರಮದ ಪೂರ್ವಭಾವಿಯಾಗಿ ರವಿಚಂದ್ರನ್ ಮತ್ತು ಹಂಸಲೇಖ ಅವರ 80 ಅಡಿ ಕಟೌಟ್‌ಗಳನ್ನು ಅನಾವರಣಗೊಳಿಸಲಾಗಿದೆ.
-
ದೇಶ4 hours ago‘ಕಾಕ್ರೋಚ್ ಜನತಾ ಪಾರ್ಟಿ’ಗೆ ಅಧಿಕೃತ ರೂಪ? ಚುನಾವಣಾ ಆಯೋಗಕ್ಕೆ ಅರ್ಜಿ
-
ದೇಶ2 hours agoದೆಹಲಿಯಲ್ಲಿ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ; ಕನ್ನಡ ಭವನದಲ್ಲಿ ಸಚಿವರ ಉಪಹಾರ ಸಭೆ
-
ದೇಶ4 hours agoಡಿಕೆಶಿಗೆ ಹೊಸ ಸವಾಲಾ? ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಜಾರಕಿಹೊಳಿ ಲಾಬಿ
-
ದೇಶ3 hours agoಸಿದ್ದರಾಮಯ್ಯ ರಾಜೀನಾಮೆ ಊಹಾಪೋಹಕ್ಕೆ ಹೊಸ ತಿರುವು; ಡಿಕೆಶಿಗೆ ಮತ್ತೆ ನಿರಾಸೆಯೇ?
-
ದೇಶ3 hours agoಇಂದಿರಾ ಭವನದಲ್ಲಿ ಮೂರು ಸುತ್ತಿನ ಸಭೆ; ಕರ್ನಾಟಕ ಸಿಎಂ ಬದಲಾವಣೆ ಚರ್ಚೆ ತೀವ್ರ
-
ಆರೋಗ್ಯ3 hours agoWHO ಎಚ್ಚರಿಕೆ ಬಳಿಕ ಭಾರತದಲ್ಲೂ ಮುನ್ನೆಚ್ಚರಿಕೆ ಕ್ರಮ; ವಿಜಯವಾಡದಲ್ಲಿ ಕ್ಯಾಂಪ್
-
ದೇಶ4 hours agoಕದನ ವಿರಾಮ ಮಾತುಕತೆ ಮಧ್ಯೆಯೇ US ಏರ್ಸ್ಟ್ರೈಕ್; ಬಂದರ್ ಅಬ್ಬಾಸ್ನಲ್ಲಿ ಸ್ಫೋಟ
-
ಕ್ರೀಡೆ5 hours agoಕೊಹ್ಲಿಗೆ ಜೊತೆಯಾಗೋದು ಯಾರು? ಆರ್ಸಿಬಿ ಪ್ಲೇಯಿಂಗ್ ಇಲೆವೆನ್ ಗೊಂದಲ
