Connect with us

ರಾಜಕೀಯ

ರಾಜೀನಾಮೆ ಕೊಟ್ಟು, ಮತ್ತೆ ಸ್ಪರ್ಧಿಸಿ ಗೆದ್ದು ಬಂದರೆ ಹಿಂದೂ ಹುಲಿಗೆ ಸನ್ಮಾನ ಮಾಡುತ್ತೇವೆ: ಯತ್ನಾಳ್​ಗೆ ರೇಣುಕಾಚಾರ್ಯ ಸವಾಲು – M P RENUKACHARYA REACTION

Published

on

ದಾವಣಗೆರೆ: “ಯತ್ನಾಳ್ ಹಿಂದೂ ಹುಲಿ ಅಲ್ಲ, ನಕಲಿ ಹಿಂದೂ. ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು, ಹೊಸ ಪಕ್ಷ ಕಟ್ಟಿ ಗೆದ್ದು ಬಂದರೆ, ಹಿಂದೂ ಹುಲಿಗೆ ನಾವೇ ಸನ್ಮಾನ ಮಾಡುತ್ತೇವೆ” ಎಂದು ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಬಿಜೆಪಿ ಪಕ್ಷದ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ವಾಗ್ದಾಳಿ ನಡೆಸಿದರು.

ದಾವಣಗೆರೆ ನಗರದ ಹಳೇ ಪ್ರವಾಸಿ ಮಂದಿರ ಬಳಿ ಶಾಸಕ ಯತ್ನಾಳ್ ಹೊಸ ಪಕ್ಷ ಕಟ್ಟುವ ವಿಚಾರವಾಗಿ ಪ್ರತಿಕ್ರಿಯಿಸಿದರು.

“ಯತ್ನಾಳ್ ಪಕ್ಷ ಕಟ್ಟಿದ್ರೆ ಸಂತೋಷ, ಸ್ವಾಗತ. ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಟೀಕೆ ಮಾಡಿದ್ರೆ ಸಿಎಂ ಆಗುವ ಬಗ್ಗೆ ಹಗಲು ಕನಸು ಕಾಣುತ್ತಿದ್ದಾರೆ. ಸರ್ವಾಧಿಕಾರಿ ಧೋರಣೆ ಬಿಡಬೇಕು. ಸ್ವಯಂಘೋಷಿತ ನಾಯಕರಾಗಬಾರದು, ಜನ ಮೆಚ್ಚಿದ ನಾಯಕರಾಗಬೇಕು. ಭಾರತೀಯ ಜನತಾ ಪಕ್ಷದ ಚಿಹ್ನೆಯಡಿಯಲ್ಲಿ ನಿಂತು ಗೆದ್ದಿದ್ದೀರಿ. ನಿಮಗೆ ನಿಜವಾಗಿಯೂ ವರ್ಚಸ್ಸು ಇದ್ದರೆ, ನೀವು ನಿಜವಾಗಿಯೂ ಹಿಂದುತ್ವವಾದಿಯಾಗಿದ್ದರೆ, ಮೊದಲು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು, ಮರು ಚುನಾವಣೆಯಲ್ಲಿ ಗೆದ್ದು ಬಂದರೆ, ನಾವು ನಿಮ್ಮನ್ನು ಅಭಿನಂದಿಸುತ್ತೇವೆ. ಸನ್ಮಾನ ಮಾಡುತ್ತೇವೆ” ಎಂದು ಸವಾಲು ಹಾಕಿದರು.

ಯತ್ನಾಳ್​ ಅವರಿಗೆ ಠೇವಣಿಯೂ ಸಿಗಲ್ಲ. ಹೊಸ ಪಕ್ಷ ಕಟ್ಟಲಿ. 224 ಕ್ಷೇತ್ರಗಳಲ್ಲೂ ಅಡ್ರೆಸ್ ಇಲ್ಲದಂತೆ ಆಗ್ತಾರೆ. ಯತ್ನಾಳ್​ಗೆ ಅಭ್ಯರ್ಥಿಗಳೇ ಸಿಗಲ್ಲ. ಹಿಂದೂ ಪಕ್ಷ ಕಟ್ಟುತ್ತೇನೆ ಅಂತಾರೆ. ನಾವ್ಯಾರೂ ಹಿಂದೂಗಳಲ್ವಾ? ತಮ್ಮನ್ನು ತಾವು ರಕ್ಷಣೆ ಮಾಡೋಕೆ ಏಕಪಾತ್ರಾಭಿನಯ ಮಾಡುತ್ತಾರೆ. ಹಿಂದೂ ಹುಲಿ ಎಂದು ತಮ್ಮನ್ನು ತಾವು ಪ್ರಚಾರ ಮಾಡಿಕೊಂಡಿದ್ದಾರೆ. ಸಮಯ ಸಂದರ್ಭ ಬಂದಾಗ ಎಲ್ಲವೂ ತಿಳಿಯುತ್ತದೆ” ಎಂದು ಟೀಕಿಸಿದರು.

ಹಿಂದು ಹುಲಿ ಎನ್ನುವ ನೀವು ಟಿಪ್ಪು ಅವತಾರ ತಾಳಿದ್ದೇಕೆ?: ”ಹಿಂದುತ್ವವಾದಿ ಎಂದು ಹೇಳಿಕೊಳ್ಳುವ ನೀವು ಈ ಹಿಂದೆ ಜೆಡಿಎಸ್​ಗೆ ಯಾಕೆ ಹೋಗಿದ್ದು? ಟಿಪ್ಪು ಅವತಾರ ಯಾಕೆ ತಾಳಿದ್ರಿ?. ಇಫ್ತಿಯಾರ್ ಕೂಟದಲ್ಲಿ ಯಾಕೆ ಭಾಗಿಯಾಗಿದ್ರಿ. ಹಿಂದೂ ಹುಲಿ ಅಲ್ಲ ಇಲಿ, ಆಚಾರದಲ್ಲಿ ಹಿಂದುತ್ವ ಇರಬೇಕು, ಪ್ರಚಾರದಲ್ಲಿ ಅಲ್ಲ. ಯತ್ನಾಳ್ ನಕಲಿ ಹಿಂದೂ, ವಿಜಯಪುರದಲ್ಲಿ ಹೊಂದಾಣಿಕೆ ಮಾಡಿಕೊಂಡಿದ್ದು ಗೊತ್ತಿದೆ. ಹರಕು ಬಾಯಿಯಿಂದ ಈ ಪರಿಸ್ಥಿತಿ ಬಂದಿದೆ. ಬಲಿಪಶು ಆಗುತ್ತೀರಿ ಎಂದಿದ್ದೆ, ಅದು ಸತ್ಯವಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬರೋಕೆ ಕಾರಣ ನೀವೇ. ಬಿಎಸ್​ವೈ ಮೀಸಲಾತಿ‌ ಕೊಡುತ್ತೇವೆ ಅಂದಾಗ ಬ್ರೇಕ್ ಹಾಕಿದ್ರು. ಬಿಎಸ್​ವೈ ಕೈಕಾಲು ಹಿಡಿದ ಆಡಿಯೋ ವಿಡಿಯೋ ಬಿಡುಗಡೆ ಮಾಡಬೇಕಾ?” ಎಂದು ಪ್ರಶ್ನಿಸಿದರು.

ದೇಶ

“ನಾನು ಮಗಳನ್ನು ಕಳೆದುಕೊಂಡೆ, ಮಮತಾ ಕುರ್ಚಿ ಕಳೆದುಕೊಂಡರು”; ವೈದ್ಯೆಯ ತಾಯಿ ಭಾವುಕ ಪೋಸ್ಟ್

Published

on

ಕೋಲ್ಕತ್ತಾ: ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಮೃತಪಟ್ಟ ಟ್ರೈನಿ ವೈದ್ಯೆಯ ತಾಯಿ Ratna Debnath ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಭಾವುಕ ಪೋಸ್ಟ್ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. “ಇಂದು ನಾನು ಮತ್ತು Mamata Banerjee ಇಬ್ಬರೂ ದುಃಖಿತರಾಗಿದ್ದೇವೆ. ನಾನು ನನ್ನ ಮಗಳನ್ನು ಕಳೆದುಕೊಂಡಿದ್ದೇನೆ. ಅವರು ತಮ್ಮ ಸಿಎಂ ಕುರ್ಚಿಯನ್ನು ಕಳೆದುಕೊಂಡಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಇತ್ತೀಚಿನ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ರತ್ನ ದೇಬನಾಥ್ ಭರ್ಜರಿ ಗೆಲುವು ಸಾಧಿಸಿದ್ದು, ಬಳಿಕ ತೃಣಮೂಲ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನ್ಯಾಯಕ್ಕಾಗಿ ಹೋರಾಡುವ ಉದ್ದೇಶದಿಂದಲೇ ರಾಜಕೀಯಕ್ಕೆ ಬಂದಿರುವುದಾಗಿ ಅವರು ತಿಳಿಸಿದ್ದಾರೆ.

ಸೋಶಿಯಲ್ ಮೀಡಿಯಾ ಪೋಸ್ಟ್‌ನಲ್ಲಿ ಅವರು, “ಇಂದು ನಬನ್ನಾದ 14ನೇ ಮಹಡಿಯಲ್ಲಿ ಮುಖ್ಯಮಂತ್ರಿ ಜೊತೆ ಸಭೆ ನಡೆಸುತ್ತಿರುವವರು Suvendu Adhikari. ಅನ್ಯಾಯದ ವಿರುದ್ಧ ತಾಳ್ಮೆಯಿಂದ ಹೋರಾಡಿದರೆ ಸತ್ಯ ಗೆಲ್ಲುತ್ತದೆ” ಎಂದು ಉಲ್ಲೇಖಿಸಿದ್ದಾರೆ.

ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಾಸಕಿಯಾಗಿರುವ ಸಂತೋಷಕ್ಕಿಂತ ಮಗಳ ಸಾವಿನ ನೋವೇ ದೊಡ್ಡದು ಎಂದು ಭಾವುಕರಾದರು. “ನನ್ನ ಏಕೈಕ ಗುರಿ ಮಗಳ ಸಾವಿಗೆ ನ್ಯಾಯ ದೊರಕಿಸುವುದು. ಮಹಿಳೆಯರ ಸುರಕ್ಷತೆಗಾಗಿ ಹೋರಾಡಲು ನಾನು ರಾಜಕೀಯಕ್ಕೆ ಬಂದಿದ್ದೇನೆ” ಎಂದು ಹೇಳಿದರು.

2024ರ ಆಗಸ್ಟ್‌ನಲ್ಲಿ ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನ ಸೆಮಿನಾರ್ ಕೊಠಡಿಯಲ್ಲಿ ಟ್ರೈನಿ ವೈದ್ಯೆಯ ಮೃತದೇಹ ಪತ್ತೆಯಾಗಿತ್ತು. ಪ್ರಕರಣ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿತ್ತು. ಬಳಿಕ ಕಲ್ಕತ್ತಾ ಹೈಕೋರ್ಟ್ ಆದೇಶದಂತೆ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಲಾಗಿತ್ತು. ಪ್ರಮುಖ ಆರೋಪಿ Sanjay Roy ಗೆ 2025ರ ಜನವರಿಯಲ್ಲಿ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು.

Continue Reading

ದೇಶ

‘ಕಾಕ್ರೋಚ್ ಜನತಾ ಪಾರ್ಟಿ’ಗೆ ಅಧಿಕೃತ ರೂಪ? ಚುನಾವಣಾ ಆಯೋಗಕ್ಕೆ ಅರ್ಜಿ

Published

on

ಹರಿಯಾಣ: ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಇದೀಗ ಅಧಿಕೃತ ರಾಜಕೀಯ ಪಕ್ಷವಾಗಿ ರೂಪುಗೊಳ್ಳಲು ಸಿದ್ಧತೆ ಆರಂಭಿಸಿರುವುದು ದೇಶಾದ್ಯಂತ ಕುತೂಹಲ ಹುಟ್ಟಿಸಿದೆ. ಹರಿಯಾಣದ ಪಾಣಿಪತ್ ಮೂಲದ ವಕೀಲ Sudhir Jamir ಅವರು ಈ ವಿಶಿಷ್ಟ ಹೆಸರಿನ ಪಕ್ಷವನ್ನು ನೋಂದಾಯಿಸಲು ಭಾರತೀಯ ಚುನಾವಣಾ ಆಯೋಗಕ್ಕೆ ಅರ್ಜಿ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.

ಪಕ್ಷದ ಸಂವಿಧಾನ ಈಗಾಗಲೇ ಸಿದ್ಧಗೊಂಡಿದ್ದು, ಅಧ್ಯಕ್ಷ, ಕಾರ್ಯದರ್ಶಿ ಹಾಗೂ ಖಜಾಂಚಿ ಹುದ್ದೆಗಳಿಗೆ ಸಂಬಂಧಿಸಿದ ದಾಖಲೆಗಳ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ ಎಂದು ಜಮಿರ್ ಮಾಹಿತಿ ನೀಡಿದ್ದಾರೆ. ಮುಂದಿನ ಕೆಲವು ದಿನಗಳಲ್ಲಿ ಸಂಪೂರ್ಣ ದಾಖಲೆಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಕಳೆದ 10 ರಿಂದ 12 ದಿನಗಳಿಂದ ‘ಕಾಕ್ರೋಚ್ ಜನತಾ ಪಾರ್ಟಿ’ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಲಕ್ಷಾಂತರ ಯುವಕರು ಬೆಂಬಲ ಸೂಚಿಸಿದ್ದಾರೆ. ಯುವಕರ ನಿರುದ್ಯೋಗ, ವ್ಯವಸ್ಥೆಯ ವಿರುದ್ಧದ ಅಸಮಾಧಾನ ಹಾಗೂ ಪರ್ಯಾಯ ರಾಜಕೀಯದ ಚರ್ಚೆಗಳಿಗೆ ಈ ಚಳುವಳಿ ವೇದಿಕೆಯಾಗಿದೆ ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

ಈ ಚಳುವಳಿಯನ್ನು ಮೊದಲು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡಿದ ಡಿಜಿಟಲ್ ಕಂಟೆಂಟ್ ಕ್ರಿಯೇಟರ್ Abhijeet Dipke ಅಮೆರಿಕದಿಂದ ಆನ್‌ಲೈನ್ ಅಭಿಯಾನ ನಡೆಸುತ್ತಿದ್ದು, ಇದನ್ನು ಕೇವಲ ಸೋಶಿಯಲ್ ಮೀಡಿಯಾದಲ್ಲೇ ಸೀಮಿತಗೊಳಿಸದೆ ನೆಲಮಟ್ಟದಲ್ಲಿ ಸಂಘಟನೆ ರೂಪಿಸಬೇಕು ಎಂದು ಜಮಿರ್ ಹೇಳಿದ್ದಾರೆ.

ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಈ ಪರಿಕಲ್ಪನೆ ಹುಟ್ಟಿಕೊಂಡಿತ್ತು. ಬಳಿಕ ಹಾಸ್ಯ, ವಿಡಂಬನೆ ಮತ್ತು ರಾಜಕೀಯ ಸಂದೇಶಗಳ ಮೂಲಕ ಇದು ವೈರಲ್ ಆಗಿ ಯುವಜನರಲ್ಲಿ ಹೊಸ ಚರ್ಚೆಗೆ ಕಾರಣವಾಯಿತು. ಇದೀಗ ಇದೇ ಹೆಸರಿನಲ್ಲಿ ರಾಜಕೀಯ ಪಕ್ಷ ಸ್ಥಾಪನೆಗೆ ಮುಂದಾಗಿರುವುದು ದೇಶದ ರಾಜಕೀಯದಲ್ಲಿ ಹೊಸ ಕುತೂಹಲ ಮೂಡಿಸಿದೆ.

Continue Reading

ದೇಶ

ಡಿಕೆಶಿಗೆ ಹೊಸ ಸವಾಲಾ? ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಜಾರಕಿಹೊಳಿ ಲಾಬಿ

Published

on

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಹಾಗೂ ಪವರ್‌ ಶೇರಿಂಗ್‌ ಚರ್ಚೆಗಳು ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ ಲೋಕೋಪಯೋಗಿ ಸಚಿವ Satish Jarkiholi ದಿಢೀರ್‌ ದೆಹಲಿಗೆ ತೆರಳಿರುವುದು ರಾಜಕೀಯ ವಲಯದಲ್ಲಿ ಭಾರಿ ಕುತೂಹಲ ಮೂಡಿಸಿದೆ.

ಮುಖ್ಯಮಂತ್ರಿ Siddaramaiah ಹಾಗೂ ಉಪ ಮುಖ್ಯಮಂತ್ರಿ D. K. Shivakumar ಅವರ ಇತ್ತೀಚಿನ ದೆಹಲಿ ಪ್ರವಾಸದ ಬೆನ್ನಲ್ಲೇ ಜಾರಕಿಹೊಳಿ ಹೈಕಮಾಂಡ್‌ ನಾಯಕರನ್ನು ಭೇಟಿಯಾಗಲು ಮುಂದಾಗಿರುವುದು ಕಾಂಗ್ರೆಸ್‌ನಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನ ಕುರಿತ ಚರ್ಚೆ ಮತ್ತೆ ವೇಗ ಪಡೆದುಕೊಂಡಿದ್ದು, ಪಕ್ಷದೊಳಗಿನ ಸಮೀಕರಣಗಳು ಬದಲಾಗುವ ಸಾಧ್ಯತೆಗಳ ಬಗ್ಗೆ ಮಾತುಕತೆ ಜೋರಾಗಿದೆ.

ಪ್ರಸ್ತುತ ಡಿ.ಕೆ. ಶಿವಕುಮಾರ್ ಅವರೇ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿದಿದ್ದರೂ, ಮುಂಬರುವ ಚುನಾವಣಾ ರಾಜಕಾರಣದ ದೃಷ್ಟಿಯಿಂದ ಪೂರ್ಣಾವಧಿ ಅಧ್ಯಕ್ಷರನ್ನು ನೇಮಕ ಮಾಡುವ ಅಗತ್ಯವಿದೆ ಎಂಬ ಅಭಿಪ್ರಾಯ ಕಾಂಗ್ರೆಸ್‌ ವಲಯದಲ್ಲಿ ಕೇಳಿಬರುತ್ತಿದೆ. ಇದೇ ಹಿನ್ನೆಲೆ ಅಹಿಂದ ಹಾಗೂ ವಾಲ್ಮೀಕಿ ಸಮುದಾಯದ ಪ್ರಭಾವಿ ನಾಯಕನಾಗಿ ಗುರುತಿಸಿಕೊಂಡಿರುವ ಸತೀಶ್ ಜಾರಕಿಹೊಳಿ ತಮ್ಮ ಪರ ಲಾಬಿ ಆರಂಭಿಸಿದ್ದಾರೆ ಎನ್ನಲಾಗಿದೆ.

ಸಿದ್ದರಾಮಯ್ಯ ಆಪ್ತ ವಲಯದ ಪ್ರಮುಖ ನಾಯಕರಲ್ಲಿ ಒಬ್ಬರಾಗಿರುವ ಜಾರಕಿಹೊಳಿ ಅವರ ದೆಹಲಿ ಭೇಟಿ, ಡಿಕೆಶಿ ಬಣಕ್ಕೆ ಹೊಸ ಸವಾಲು ತಂದೊಡ್ಡಿದೆ ಎಂಬ ರಾಜಕೀಯ ವಿಶ್ಲೇಷಣೆಗಳು ಕೇಳಿಬರುತ್ತಿವೆ. ಎಐಸಿಸಿ ಅಧ್ಯಕ್ಷ Mallikarjun Kharge ಸೇರಿದಂತೆ ಹಿರಿಯ ಕಾಂಗ್ರೆಸ್‌ ನಾಯಕರನ್ನು ಭೇಟಿಯಾಗಿ ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಲಿದ್ದಾರೆ ಎನ್ನಲಾಗಿದೆ.

ಒಟ್ಟಿನಲ್ಲಿ ಜಾರಕಿಹೊಳಿ ಅವರ ದೆಹಲಿ ಪ್ರವಾಸ ಕಾಂಗ್ರೆಸ್‌ನೊಳಗಿನ ನಾಯಕತ್ವ ಚರ್ಚೆಗೆ ಮತ್ತಷ್ಟು ವೇಗ ನೀಡಿದ್ದು, ಮುಂದಿನ ದಿನಗಳಲ್ಲಿ ರಾಜ್ಯ ರಾಜಕಾರಣದಲ್ಲಿ ಹೊಸ ತಿರುವು ಸಿಗುವ ಸಾಧ್ಯತೆಗಳಿವೆ.

Continue Reading

Trending