Connect with us

ದೇಶ

ಶೀಘ್ರವೇ ಪಾಕಿಸ್ತಾನದ ಮೇಲೆ ಭಾರತ ದಾಳಿ-ಗೆಹ್ಲೋಟ್

Published

on

ಬೆಂಗಳೂರು: ಪಹಲ್ಗಾಮ್ ನಲ್ಲಿ ಉಗ್ರರ ಗುಂಡೇಟಿಗೆ ಬಲಿಯಾದ ಬೆಂಗಳೂರಿನ ಮತ್ತಿಕೆರೆಯ ಭರತ್ ಭೂಷಣ್ ಅವರ ಅಂತಿಮ ದರ್ಶನವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪಡೆದಿದ್ದಾರೆ,
ಭರತ್ ಭೂಷಣ್ ಅವರ ಅಂತಿಮ ದರ್ಶನದ ಬಳಿಕ ರಾಜ್ಯಪಾಲರು ಬರಿಗಾಲಿನಲ್ಲಿಯೇ ಬಂದು ಮಾಧ್ಯಮಗಳೊಂದಿಗೆ ಮಾತನಾಡಿದರು, ಇಂತಹ ಕ್ರೌರ್ಯ ಎಸಗಿದ ಪಾಕಿಸ್ತಾನಕ್ಕೆ ಭಾರತ ತಕ್ಕ ತಿರುಗೇಟು ನೀಡುವುದಂತೂ ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು,
ದೇಶದ ಜನರ ಆಕ್ರೋಶ ಅರ್ಥ ಮಾಡಿಕೊಂಡು ಕೇಂದ್ರ ಕಠಿಣ ಕ್ರಮಕ್ಕೆ ಕೇಂದ್ರ ಮುಂದಾಗುತ್ತದೆ, ಪಾಕಿಸ್ತಾನ ನಮ್ಮ ದೇಶದ ಮೇಲೆ ಉಗ್ರ ಚಟುವಟಿಕೆ ನಡೆಸಲು ಹೆದರಬೇಕು ಎಂದು ಗೆಹ್ಲೋಟ್ ಹೇಳಿಕೆ ನೀಡಿದರು,

ಆರೋಗ್ಯ

Meditation Benefits : ಮಾನಸಿಕ ಆರೋಗ್ಯ ಕಾಪಾಡಲು ಧ್ಯಾನ ಯಾಕೆ ಅಗತ್ಯ ಗೊತ್ತಾ?

Published

on

ಧ್ಯಾನ (Meditation) ಇತ್ತೀಚಿನ ದಿನಗಳಲ್ಲಿ ಕೇವಲ ಆಧ್ಯಾತ್ಮಿಕ ಅಭ್ಯಾಸವಾಗಿಯೇ ಉಳಿದಿಲ್ಲ, ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಅತ್ಯುತ್ತಮ ವಿಧಾನವಾಗಿಯೂ ಪರಿಗಣಿಸಲಾಗುತ್ತಿದೆ. ಇಂದಿನ ಬ್ಯುಸಿ ಜೀವನಶೈಲಿ, ಕೆಲಸದ ಒತ್ತಡ, ಕುಟುಂಬದ ಜವಾಬ್ದಾರಿ ಮತ್ತು ಹಣಕಾಸಿನ ಚಿಂತೆಗಳಿಂದ ಅನೇಕರು ಮಾನಸಿಕವಾಗಿ ಕುಗ್ಗುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಪ್ರತಿದಿನ ಕೇವಲ 10 ನಿಮಿಷ ಧ್ಯಾನ ಮಾಡುವ ಅಭ್ಯಾಸ ಜೀವನದಲ್ಲಿ ದೊಡ್ಡ ಬದಲಾವಣೆಯನ್ನು ತರಬಹುದು ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ.

ಧ್ಯಾನ ಮಾಡುವುದರಿಂದ ದೇಹದಲ್ಲಿ ಉತ್ಪತ್ತಿಯಾಗುವ ಕಾರ್ಟಿಸೋಲ್ ಹಾರ್ಮೋನ್ ಮಟ್ಟ ಕಡಿಮೆಯಾಗುತ್ತದೆ. ಇದರಿಂದ ಒತ್ತಡ, ಆತಂಕ ಮತ್ತು ಮಾನಸಿಕ ಅಶಾಂತಿ ಕಡಿಮೆಯಾಗಲು ಸಹಾಯವಾಗುತ್ತದೆ. ಜೊತೆಗೆ ಕೆಲಸದ ಮೇಲೆ ಏಕಾಗ್ರತೆ ಹೆಚ್ಚಾಗಿ, ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯವೂ ಉತ್ತಮಗೊಳ್ಳುತ್ತದೆ.

ನಿತ್ಯ ಧ್ಯಾನ ಮಾಡುವವರು ಭಾವನಾತ್ಮಕವಾಗಿ ಹೆಚ್ಚು ಸಮತೋಲನದಲ್ಲಿರುತ್ತಾರೆ. ಮನೆಯ ಸಮಸ್ಯೆಗಳು, ಕೆಲಸದ ಒತ್ತಡ ಅಥವಾ ಹಣಕಾಸಿನ ಗೊಂದಲಗಳ ನಡುವೆಯೂ ಮನಸ್ಸನ್ನು ಶಾಂತವಾಗಿಟ್ಟುಕೊಳ್ಳಲು ಧ್ಯಾನ ಸಹಕಾರಿಯಾಗುತ್ತದೆ. ಕೋಪ ಕಡಿಮೆಯಾಗುವುದರ ಜೊತೆಗೆ ಸಕಾರಾತ್ಮಕ ಚಿಂತನೆಗಳು ಹೆಚ್ಚಾಗುತ್ತವೆ.

ಆರೋಗ್ಯದ ದೃಷ್ಟಿಯಿಂದಲೂ ಧ್ಯಾನ ಬಹಳ ಪ್ರಯೋಜನಕಾರಿ. ನಿಯಮಿತ ಧ್ಯಾನದಿಂದ ರಕ್ತದೊತ್ತಡ ನಿಯಂತ್ರಣದಲ್ಲಿರಲು ಸಹಾಯವಾಗುತ್ತದೆ. ಹೃದಯದ ರಕ್ತಪರಿಚಲನೆ ಸುಧಾರಿಸಿ ದೇಹದ ಶಕ್ತಿ ಕುಂದುವುದನ್ನು ತಡೆಯುತ್ತದೆ. ಹೀಗಾಗಿ ಪ್ರತಿದಿನ ಕೆಲ ನಿಮಿಷ ಧ್ಯಾನ ಮಾಡುವ ಅಭ್ಯಾಸ ಬೆಳೆಸಿಕೊಳ್ಳುವುದು ದೈಹಿಕ ಮತ್ತು ಮಾನಸಿಕ ಆರೋಗ್ಯ ಎರಡಕ್ಕೂ ಉತ್ತಮ ಎಂದು ವೈದ್ಯರು ಸಲಹೆ ನೀಡಿದ್ದಾರೆ.

Continue Reading

ದೇಶ

ಕೇವಲ ₹5ಕ್ಕೆ ಮೀನು-ಊಟ; ಪಶ್ಚಿಮ ಬಂಗಾಳ ಸರ್ಕಾರದ ಹೊಸ ಯೋಜನೆ

Published

on

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ Suvendu Adhikari ರಾಜ್ಯದಲ್ಲಿ ಹಲವು ಮಹತ್ವದ ಕಲ್ಯಾಣ ಯೋಜನೆಗಳು ಮತ್ತು ಕಠಿಣ ಸಾಮಾಜಿಕ ನಿಯಮಗಳನ್ನು ಘೋಷಿಸಿ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣರಾಗಿದ್ದಾರೆ.

ನಾಡಿಯಾ ಜಿಲ್ಲೆಯ ಕಲ್ಯಾಣಿಯಲ್ಲಿ ನಡೆದ ಆಡಳಿತಾತ್ಮಕ ಸಭೆಯ ಬಳಿಕ ಮಾತನಾಡಿದ ಸುವೇಂದು ಅಧಿಕಾರಿ, ರಾಜ್ಯದ ಯಾವುದೇ ಶಾಲೆ, ಕಾಲೇಜು, ಶಿಕ್ಷಣ ಸಂಸ್ಥೆ ಹಾಗೂ ದೇವಸ್ಥಾನ-ಧಾರ್ಮಿಕ ಕೇಂದ್ರಗಳ ಒಂದು ಕಿಲೋಮೀಟರ್ ವ್ಯಾಪ್ತಿಯಲ್ಲಿ ಮದ್ಯದ ಅಂಗಡಿಗಳಿಗೆ ಅವಕಾಶ ಇರುವುದಿಲ್ಲ ಎಂದು ಘೋಷಿಸಿದ್ದಾರೆ. ಹೊಸ ಪರವಾನಗಿಗಳಿಗೂ ನಿಷೇಧ ಹೇರಲಾಗಿದೆ.

ಮಹಿಳೆಯರಿಗಾಗಿ ‘ಅನ್ನಪೂರ್ಣ ಯೋಜನೆ’ ಹೆಸರಿನ ಹೊಸ ಯೋಜನೆ ಘೋಷಿಸಿರುವ ಸರ್ಕಾರ, ಅರ್ಹ ಮಹಿಳೆಯರಿಗೆ ಪ್ರತಿ ತಿಂಗಳು ₹3,000 ಆರ್ಥಿಕ ನೆರವು ನೀಡುವುದಾಗಿ ತಿಳಿಸಿದೆ. ಮೇ 27ರಿಂದಲೇ ಅರ್ಜಿ ನಮೂನೆಗಳ ವಿತರಣೆ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. “ಬಂಗಾಳದಲ್ಲಿ ವಾಸಿಸುವ ಭಾರತೀಯ ಮಹಿಳೆಯರಿಗೆ ಮಾತ್ರ ಈ ಯೋಜನೆಯ ಲಾಭ ಸಿಗಲಿದೆ” ಎಂದು ಹೇಳುವ ಮೂಲಕ ಅಕ್ರಮ ವಲಸಿಗರಿಗೆ ಯೋಜನೆ ಅನ್ವಯವಾಗುವುದಿಲ್ಲ ಎಂಬ ಸಂದೇಶವನ್ನು ಸರ್ಕಾರ ನೀಡಿದೆ.

ಇದೇ ವೇಳೆ ಬಡವರು ಮತ್ತು ದಿನಗೂಲಿ ಕಾರ್ಮಿಕರಿಗಾಗಿ ರಾಜ್ಯಾದ್ಯಂತ 400 ಸಬ್ಸಿಡಿ ಕ್ಯಾಂಟೀನ್‌ಗಳನ್ನು ಆರಂಭಿಸುವುದಾಗಿ ಘೋಷಿಸಲಾಗಿದೆ. ಈ ಕ್ಯಾಂಟೀನ್‌ಗಳಲ್ಲಿ ಕೇವಲ ₹5ಕ್ಕೆ ಮೀನು ಮತ್ತು ಅನ್ನದ ಊಟ ದೊರೆಯಲಿದೆ ಎಂದು ಸರ್ಕಾರ ತಿಳಿಸಿದೆ.

ಆರೋಗ್ಯ ಕ್ಷೇತ್ರದಲ್ಲಿ ಮತ್ತೊಂದು ದೊಡ್ಡ ಬದಲಾವಣೆಯಾಗಿ ಆಯುಷ್ ವಿಭಾಗವನ್ನು ಆರೋಗ್ಯ ಇಲಾಖೆಯಿಂದ ಪ್ರತ್ಯೇಕಿಸಿ, ಪ್ರತ್ಯೇಕ ಆಯುಷ್ ಸಚಿವಾಲಯ ರಚಿಸಲು ಸರ್ಕಾರ ತೀರ್ಮಾನಿಸಿದೆ.

ಈ ಆಡಳಿತಾತ್ಮಕ ಸಭೆಯಲ್ಲಿ ತೃಣಮೂಲ ಕಾಂಗ್ರೆಸ್ ಸಂಸದೆ Kakoli Ghosh Dastidar ಭಾಗವಹಿಸಿರುವುದು ಮತ್ತಷ್ಟು ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ. ಇತ್ತೀಚೆಗಷ್ಟೇ ಪಕ್ಷದ ಹುದ್ದೆಗೆ ರಾಜೀನಾಮೆ ನೀಡಿದ್ದ ಅವರು, “ಸಾರ್ವಜನಿಕ ಅಭಿವೃದ್ಧಿಗಾಗಿ ಸರ್ಕಾರದ ಜೊತೆ ಕೆಲಸ ಮಾಡುವುದು ಅಗತ್ಯ” ಎಂದು ಪ್ರತಿಕ್ರಿಯಿಸಿದ್ದಾರೆ.

Continue Reading

ದೇಶ

ತಮಿಳುನಾಡು ರೈತರ ಪರ ದಳಪತಿ ವಿಜಯ್ ಬ್ಯಾಟಿಂಗ್; ಕೇಂದ್ರಕ್ಕೆ ಮಹತ್ವದ ಮನವಿ

Published

on

ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿಸಿರುವ ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಅಧ್ಯಕ್ಷ ಹಾಗೂ ನಟ Vijay ದೆಹಲಿ ಪ್ರವಾಸಕ್ಕೂ ಮುನ್ನ ಪ್ರಧಾನಿ Narendra Modi ಅವರಿಗೆ ಮೇಕೆದಾಟು ಯೋಜನೆ ಕುರಿತು ಮಹತ್ವದ ಪತ್ರ ಬರೆದಿದ್ದಾರೆ.

ಕರ್ನಾಟಕ ಮತ್ತು ತಮಿಳುನಾಡು ನಡುವಿನ ಬಹುಕಾಲದ ಕಾವೇರಿ-ಮೇಕೆದಾಟು ವಿವಾದವನ್ನು ತಮ್ಮ ಪತ್ರದಲ್ಲಿ ಪ್ರಸ್ತಾಪಿಸಿರುವ ವಿಜಯ್, ತಮಿಳುನಾಡಿನ ಹಿತಾಸಕ್ತಿ ಕಾಪಾಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕರ್ನಾಟಕ ಸರ್ಕಾರ ಮೇಕೆದಾಟು ಬಳಿ ಕಾವೇರಿ ನದಿಗೆ ಅಡ್ಡಲಾಗಿ ಅಣೆಕಟ್ಟು ನಿರ್ಮಿಸಲು ಮುಂದಾಗಿರುವ ವಿಚಾರವನ್ನು ಉಲ್ಲೇಖಿಸಿರುವ ಅವರು, ಈ ಯೋಜನೆ ಜಾರಿಯಾದರೆ ತಮಿಳುನಾಡಿನ ಡೆಲ್ಟಾ ಭಾಗದ ರೈತರಿಗೆ ಗಂಭೀರ ಪರಿಣಾಮ ಉಂಟಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ತಮಿಳುನಾಡಿನ ಲಕ್ಷಾಂತರ ರೈತರ ಕೃಷಿ ಮತ್ತು ಬದುಕಿಗೆ ಹಾನಿಯಾಗುವ ಸಾಧ್ಯತೆ ಇರುವುದರಿಂದ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ರಾಜ್ಯಕ್ಕೆ ಅನ್ಯಾಯವಾಗದಂತೆ ನೋಡಿಕೊಳ್ಳಬೇಕು ಎಂದು ವಿಜಯ್ ಮನವಿ ಮಾಡಿದ್ದಾರೆ.

ಪ್ರಧಾನಿ ಮೋದಿ ಅವರನ್ನು ಭೇಟಿಯಾಗಲು ದೆಹಲಿಗೆ ತೆರಳುವ ಮುನ್ನವೇ ಈ ಪತ್ರ ಬರೆದಿರುವುದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಸಿನಿಮಾ ರಂಗಕ್ಕೆ ಗುಡ್ ಬೈ ಹೇಳಿ ಪೂರ್ಣ ಪ್ರಮಾಣದ ರಾಜಕೀಯಕ್ಕೆ ಕಾಲಿಟ್ಟಿರುವ ವಿಜಯ್, ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪ್ರಾದೇಶಿಕ ಹಾಗೂ ಜನಪರ ವಿಷಯಗಳನ್ನು ಪ್ರಮುಖ ಅಸ್ತ್ರವಾಗಿಸಿಕೊಳ್ಳುತ್ತಿದ್ದಾರೆ.

ಮೇಕೆದಾಟು ಯೋಜನೆ ತಮಿಳುನಾಡಿನಲ್ಲಿ ಅತ್ಯಂತ ಸೂಕ್ಷ್ಮ ಹಾಗೂ ಭಾವನಾತ್ಮಕ ವಿಷಯವಾಗಿದ್ದು, ಇದೇ ವಿಚಾರವನ್ನು ಮುಂದಿಟ್ಟುಕೊಂಡು ವಿಜಯ್ ರಾಜಕೀಯವಾಗಿ ಭದ್ರ ನೆಲೆ ನಿರ್ಮಿಸಲು ಯತ್ನಿಸುತ್ತಿದ್ದಾರೆ ಎನ್ನಲಾಗುತ್ತಿದೆ. ಅವರ ಈ ನಡೆ ದಕ್ಷಿಣ ಭಾರತದ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

Continue Reading

Trending