Connect with us

ದೇಶ

ಪಾಕಿಸ್ತಾನದಲ್ಲಿ ಹೆಡ್‌ಲೈನ್ಸ್‌ ಆದ ಭಾರತದ ‘ಇಂಡಸ್‌’ ನಿರ್ಧಾರ, ಸೆಕ್ಯುರಿಟಿ ಕಮಿಟಿ ಸಭೆ ಕರೆದ ಪಾಕ್‌ ಪ್ರಧಾನಿ!

Published

on

 ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪೈಶಾಚಿಕ ದಾಳಿಯ ಬೆನ್ನಲ್ಲಿಯೇ ಭಾರತ ಸರ್ಕಾರ ಪಾಕಿಸ್ತಾನದ ವಿರುದ್ಧ ಮಹತ್ವದ ಕ್ರಮಗಳನ್ನು ಕೈಗೊಂಡಿದೆ. ಅದರಲ್ಲಿ ಪ್ರಮುಖವಾಗಿ ಇಲ್ಲಿಯವರೆಗೂ ಭಾರತಕ್ಕೆ ಆದ ಅನ್ಯಾಯದ ರೀತಿಯಲ್ಲೇ ಇದ್ದ ಇಂಡಸ್‌ ಜಲ ಒಪ್ಪಂದವನ್ನು ಭಾರತ ರದ್ದು ಮಾಡಿದೆ. 1960ರಿಂದಲೂ ಜಾರಿಯಲ್ಲಿದ್ದ ಈ ಇಂಡಸ್‌ ಜಲ ಒಪ್ಪಂದದ ಪ್ರಕಾರ ಭಾರತ ಕೇವಲ ಶೇ. 20ರಷ್ಟು ನೀರನ್ನು ಮಾತ್ರವೇ ಉಪಯೋಗಿಸಬಹುದಾಗಿತ್ತು. ಈಗ ಇಂಥ ಘೋರ ಒಪ್ಪಂದವನ್ನೇ ಭಾರತ ಅಮಾನತು ಮಾಡುವ ನಿರ್ಧಾರ ಮಾಡಿದೆ.

ಪಹಲ್ಗಾಮ್‌ನಲ್ಲಿ ದಾಳಿ ಪಾಕಿಸ್ತಾನದಲ್ಲಿ ಸುದ್ದಿಯಾಗದೇ ಇದ್ದರೂ, ಪಾಕಿಸ್ತಾನದ ಬಹುತೇಕ ವೆಬ್‌ಸೈಟ್‌ಗಳಲ್ಲಿ ಭಾರತದ ಇಂಡಸ್‌ ನಿರ್ಧಾರ ಹೆಡ್‌ಲೈನ್‌ ಆಗಿದೆ. ಪಾಕ್‌ನ ಪ್ರಮುಖ ಪತ್ರಿಕೆ ಡಾನ್‌, ‘Pahalgam attack: India suspends Indus Waters Treaty with immediate effect, closes Attari border check post’ ಎನ್ನುವ ಟೈಟಲ್‌ನಲ್ಲಿ ಪ್ರಧಾನ ಸುದ್ದಿಯಾಗಿ ಪೋಸ್ಟ್‌ ಮಾಡಿದೆ. ಡೇಲಿ ಟೈಮ್ಸ್‌ ಪತ್ರಿಕೆ, ‘India escalates tensions: ends water treaty, orders Pakistanis to leave’ ಎಂದು ಲೀಡ್‌ ಸುದ್ದಿಯಾಗಿ ಪ್ರಕಟಿಸಿದೆ.
ಅದರೊಂದಿಗೆ ಪಾಕಿಸ್ತಾನ ಅಬ್ಸರ್ವರ್‌ ಪತ್ರಿಕೆ, ‘India suspends Indus Water Treaty, expels Pakistani Diplomats after Pahalgam Attack’ ಎನ್ನುವ ಹೆಡ್‌ಲೈನ್‌ನಲ್ಲಿ ವಿಚಾರ ಪೋಸ್ಟ್‌ ಮಾಡಿದೆ.

ಸೆಕ್ಯುರಿಟಿ ಕಮಿಟಿ ಸಭೆ ಕರೆದ ಪಾಕ್‌ ಪ್ರಧಾನಿ: ಭಾರತದ ಇಂಡಸ್ ನಿರ್ಧಾರದ ಬೆನ್ನಲ್ಲಿಯೇ ಪಾಕಿಸ್ತಾನದ ಪ್ರಧಾನಿ ಶೆಹಬಾಜ್‌ ಷರೀಫ್‌ ಗುರುವಾರ ಬೆಳಿಗ್ಗೆ ರಾಷ್ಟ್ರೀಯ ಭದ್ರತಾ ಸಮಿತಿಯ (NSC) ತುರ್ತು ಸಭೆ ಕರೆದಿದ್ದಾರೆ. ಈ ಪ್ರಕಟಣೆಯನ್ನು ವಿದೇಶಾಂಗ ಸಚಿವ ಇಶಾಕ್ ದಾರ್ ಅವರು X ನಲ್ಲಿ ತಡರಾತ್ರಿ ಪೋಸ್ಟ್ ಮಾಡುವ ಮೂಲಕ ದೃಢಪಡಿಸಿದ್ದಾರೆ.

ಪಾಕಿಸ್ತಾನದ ಭದ್ರತೆ ಮತ್ತು ವಿದೇಶಾಂಗ ನೀತಿ ವಿಷಯಗಳಿಗೆ ಸಂಬಂಧಿಸಿದ ಅತ್ಯುನ್ನತ ವೇದಿಕೆಯಾದ NSC, ಅಧಿಕೃತ ಪ್ರತಿಕ್ರಿಯೆಯನ್ನು ರೂಪಿಸಲು ಸಭೆ ಸೇರಲಿದೆ. NSC ಸೇನಾ ಮುಖ್ಯಸ್ಥರು, ಗುಪ್ತಚರ ಮುಖ್ಯಸ್ಥರು ಮತ್ತು ಪ್ರಮುಖ ಕ್ಯಾಬಿನೆಟ್ ಮಂತ್ರಿಗಳನ್ನು ಒಳಗೊಂಡಿದೆ.

ಆರೋಗ್ಯ

WHO ಎಚ್ಚರಿಕೆ ಬಳಿಕ ಭಾರತದಲ್ಲೂ ಮುನ್ನೆಚ್ಚರಿಕೆ ಕ್ರಮ; ವಿಜಯವಾಡದಲ್ಲಿ ಕ್ಯಾಂಪ್

Published

on

ವಿಜಯವಾಡ: ಜಾಗತಿಕ ಮಟ್ಟದಲ್ಲಿ ಎಬೋಲಾ ವೈರಸ್‌ ಕುರಿತ ಆತಂಕ ಹೆಚ್ಚುತ್ತಿರುವ ಬೆನ್ನಲ್ಲೇ, ಆಂಧ್ರ ಪ್ರದೇಶ ಆರೋಗ್ಯ ಇಲಾಖೆ ವಿಜಯವಾಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಶೇಷ ಎಬೋಲಾ ತಪಾಸಣಾ ಶಿಬಿರ ಆರಂಭಿಸಿದೆ. ಸಿಂಗಾಪುರದಿಂದ ಆಗಮಿಸುವ ಪ್ರಯಾಣಿಕರ ಮೇಲೆ ಕಟ್ಟುನಿಟ್ಟಿನ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ.

ಆಂಧ್ರ ಸರ್ಕಾರ ನಿಯೋಜಿಸಿರುವ ವೈದ್ಯಕೀಯ ತಂಡಗಳು ಪ್ರಯಾಣಿಕರ ದೇಹದ ಉಷ್ಣಾಂಶ ಪರೀಕ್ಷೆ, ಆರೋಗ್ಯ ಲಕ್ಷಣಗಳ ಪರಿಶೀಲನೆ ಹಾಗೂ ಶಂಕಿತ ಸೋಂಕಿನ ಗುರುತು ಪತ್ತೆ ಕಾರ್ಯ ನಡೆಸುತ್ತಿವೆ. ಜ್ವರ, ವಾಂತಿ, ದೌರ್ಬಲ್ಯ ಅಥವಾ ರಕ್ತಸ್ರಾವದಂತಹ ಲಕ್ಷಣಗಳು ಕಂಡುಬಂದರೆ ತಕ್ಷಣ ಮಾಹಿತಿ ನೀಡುವಂತೆ ಪ್ರಯಾಣಿಕರಿಗೆ ಸೂಚಿಸಲಾಗಿದೆ.

ಆರೋಗ್ಯ ಇಲಾಖೆ ಅಧಿಕಾರಿಗಳ ಪ್ರಕಾರ, ಇದು ಕೇವಲ ಮುನ್ನೆಚ್ಚರಿಕಾ ಕ್ರಮವಾಗಿದ್ದು ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ. ವಿಶ್ವ ಆರೋಗ್ಯ ಸಂಸ್ಥೆ (WHO) ಹೊರಡಿಸಿರುವ ಆರೋಗ್ಯ ಎಚ್ಚರಿಕೆ ಹಿನ್ನೆಲೆಯಲ್ಲಿ ನಿಗಾ ಕ್ರಮ ಬಲಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ನಡುವೆ ಮಾಜಿ WHO ಮುಖ್ಯ ವಿಜ್ಞಾನಿ Soumya Swaminathan ಭಾರತವು ಎಬೋಲಾ ವಿರುದ್ಧದ ಸಂಶೋಧನೆ, ಲಸಿಕೆ ಅಭಿವೃದ್ಧಿ ಹಾಗೂ ರೋಗ ಪತ್ತೆ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಮಹತ್ವದ ಪಾತ್ರ ವಹಿಸಬಹುದು ಎಂದು ಹೇಳಿದ್ದಾರೆ. WHO ಹಾಗೂ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಸಹಯೋಗದೊಂದಿಗೆ ಭಾರತ ಹೆಚ್ಚಿನ ಸಂಶೋಧನೆ ಕೈಗೊಳ್ಳಬಹುದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಪ್ರಸ್ತುತ ಕಾಂಗೋ ಪ್ರಜಾಸತ್ತಾತ್ಮಕ ಗಣರಾಜ್ಯ ಹಾಗೂ ಉಗಾಂಡಾದ ಕೆಲವು ಭಾಗಗಳಲ್ಲಿ ಎಬೋಲಾ ಸೋಂಕು ಹೆಚ್ಚಳ ಕಂಡುಬಂದಿದೆ. WHO ಮಹಾನಿರ್ದೇಶಕ Tedros Adhanom Ghebreyesus ನೀಡಿರುವ ಮಾಹಿತಿಯಂತೆ, ಕಾಂಗೋದಲ್ಲಿ ಈಗಾಗಲೇ 101 ಪ್ರಕರಣಗಳು ದೃಢಪಟ್ಟಿದ್ದು, 10 ಮಂದಿ ಮೃತಪಟ್ಟಿದ್ದಾರೆ. ಇನ್ನೂ ನೂರಾರು ಶಂಕಿತ ಪ್ರಕರಣಗಳ ತನಿಖೆ ನಡೆಯುತ್ತಿದೆ.

ಎಬೋಲಾ ವೈರಸ್‌ನ ‘ಬುಂಡಿಬುಗ್ಯೋ’ ರೂಪಾಂತರಿ ತಳಿಯು ಪತ್ತೆ ಹಾಗೂ ಚಿಕಿತ್ಸೆ ಕಾರ್ಯಕ್ಕೆ ಸವಾಲು ಎಸೆದಿರುವುದರಿಂದ ಜಾಗತಿಕ ಆರೋಗ್ಯ ಸಂಸ್ಥೆಗಳು ಎಚ್ಚರಿಕೆಯಿಂದ ಪರಿಸ್ಥಿತಿಯನ್ನು ಗಮನಿಸುತ್ತಿವೆ.

Continue Reading

ದೇಶ

ಇಂದಿರಾ ಭವನದಲ್ಲಿ ಮೂರು ಸುತ್ತಿನ ಸಭೆ; ಕರ್ನಾಟಕ ಸಿಎಂ ಬದಲಾವಣೆ ಚರ್ಚೆ ತೀವ್ರ

Published

on

ನವದೆಹಲಿ: ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆ ತೀವ್ರಗೊಂಡಿರುವ ಬೆನ್ನಲ್ಲೇ, ಇಂದು ಕಾಂಗ್ರೆಸ್ ಹೈಕಮಾಂಡ್ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಮುಖ್ಯಮಂತ್ರಿ Siddaramaiah ಹಾಗೂ ಉಪ ಮುಖ್ಯಮಂತ್ರಿ D. K. Shivakumar ಅವರೊಂದಿಗೆ ನೇರ ಮಾತುಕತೆ ನಡೆಸಲು ದೆಹಲಿಯ ಇಂದಿರಾ ಭವನದಲ್ಲಿ ವಿಶೇಷ ಸಭೆ ಆಯೋಜಿಸಲಾಗಿದೆ.

ಮೂಲಗಳ ಪ್ರಕಾರ, ಇಂದು ಬೆಳಿಗ್ಗೆ 11 ಗಂಟೆಯ ಬಳಿಕ ಮೊದಲ ಸುತ್ತಿನ ಸಭೆಯಲ್ಲಿ ಸಿದ್ದರಾಮಯ್ಯ ಅವರೊಂದಿಗೆ ಕಾಂಗ್ರೆಸ್ ಹೈಕಮಾಂಡ್ ನಾಯಕರು ಚರ್ಚೆ ನಡೆಸಲಿದ್ದಾರೆ. ನಂತರ ಎರಡನೇ ಹಂತದಲ್ಲಿ ಡಿಕೆ ಶಿವಕುಮಾರ್ ಜೊತೆ ಪ್ರತ್ಯೇಕ ಮಾತುಕತೆ ನಡೆಯಲಿದೆ. ಕೊನೆಯ ಹಂತದಲ್ಲಿ ಇಬ್ಬರು ನಾಯಕರನ್ನೂ ಒಟ್ಟಿಗೆ ಕೂರಿಸಿ ಅಂತಿಮ ಚರ್ಚೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ಸಭೆಯಲ್ಲಿ ಸಂಪುಟ ಪುನಾರಚನೆ ವಿಚಾರ ಮಾತ್ರ ಚರ್ಚೆಯಾಗುತ್ತದೆಯೇ ಅಥವಾ ರಾಜ್ಯ ನಾಯಕತ್ವ ಬದಲಾವಣೆಯ ಕುರಿತೂ ಅಂತಿಮ ನಿರ್ಧಾರ ಹೊರಬೀಳುತ್ತದೆಯೇ ಎಂಬುದು ಈಗ ತೀವ್ರ ಕುತೂಹಲ ಮೂಡಿಸಿದೆ. ಡಿಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ಸಿಗಬಹುದೇ ಎಂಬ ಪ್ರಶ್ನೆ ಕಾಂಗ್ರೆಸ್ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

2023ರ ವಿಧಾನಸಭೆ ಚುನಾವಣೆಯ ಬಳಿಕ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಕುರಿತು ಅನೌಪಚಾರಿಕ ಒಪ್ಪಂದವಿತ್ತು ಎನ್ನುವ ಮಾತುಗಳು ಹಲವು ಬಾರಿ ಕೇಳಿಬಂದಿದ್ದವು. ಇದೀಗ ಹೈಕಮಾಂಡ್ ನೇರವಾಗಿ ಮಧ್ಯಪ್ರವೇಶಿಸಿರುವುದು ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಯಾಗಿ ಪರಿಗಣಿಸಲಾಗಿದೆ.

ಈ ನಡುವೆ ಕಾಂಗ್ರೆಸ್ ಅಧ್ಯಕ್ಷ Mallikarjun Kharge ಸೇರಿದಂತೆ ಹಲವು ಹಿರಿಯ ನಾಯಕರು ಸಭೆಯಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಹೀಗಾಗಿ ದೆಹಲಿಯ ಈ ಸಭೆ ಕರ್ನಾಟಕ ರಾಜಕೀಯದ ಭವಿಷ್ಯ ನಿರ್ಧರಿಸುವ ವೇದಿಕೆಯಾಗುವ ಸಾಧ್ಯತೆ ಇದೆ.

Continue Reading

ದೇಶ

ಸಿದ್ದರಾಮಯ್ಯ ರಾಜೀನಾಮೆ ಊಹಾಪೋಹಕ್ಕೆ ಹೊಸ ತಿರುವು; ಡಿಕೆಶಿಗೆ ಮತ್ತೆ ನಿರಾಸೆಯೇ?

Published

on

ಬೆಂಗಳೂರು/ನವದೆಹಲಿ: ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆ ಮತ್ತೆ ತೀವ್ರಗೊಂಡಿದ್ದು, ಮುಖ್ಯಮಂತ್ರಿ Siddaramaiah ಹಾಗೂ ಉಪ ಮುಖ್ಯಮಂತ್ರಿ D. K. Shivakumar ದೆಹಲಿಗೆ ಭೇಟಿ ನೀಡಿರುವುದು ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಹುಟ್ಟಿಸಿದೆ.

ಕಾಂಗ್ರೆಸ್ ಹೈಕಮಾಂಡ್ ಈ ಸಭೆಯನ್ನು “ಸಾಮಾನ್ಯ ಚರ್ಚೆ” ಎಂದು ಹೇಳುತ್ತಿದ್ದರೂ, ಪಕ್ಷದೊಳಗೆ ‘ಪವರ್ ಟ್ರಾನ್ಸ್‌ಫರ್’ ಬಗ್ಗೆ ಗಂಭೀರ ಚಿಂತನೆ ನಡೆಯುತ್ತಿದೆ ಎನ್ನಲಾಗುತ್ತಿದೆ. 2023ರಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದಾಗಲೇ ಅಧಿಕಾರ ಹಂಚಿಕೆ ಕುರಿತ ಅನೌಪಚಾರಿಕ ಒಪ್ಪಂದವಾಗಿತ್ತು ಎಂಬ ಮಾತುಗಳು ಕೇಳಿಬಂದಿದ್ದವು. ಅದರಂತೆ ಅರ್ಧಾವಧಿ ಬಳಿಕ ಡಿಕೆ ಶಿವಕುಮಾರ್‌ಗೆ ಮುಖ್ಯಮಂತ್ರಿ ಸ್ಥಾನ ಸಿಗಲಿದೆ ಎಂಬ ನಿರೀಕ್ಷೆ ಇತ್ತು.

ಆದರೆ ಇದೀಗ ಹೊಸ ರಾಜಕೀಯ ಲೆಕ್ಕಾಚಾರ ಶುರುವಾಗಿದೆ. ಸಿದ್ದರಾಮಯ್ಯ ಅವರಿಗೆ ರಾಜ್ಯಸಭೆ ಸ್ಥಾನ ನೀಡುವ ಸಾಧ್ಯತೆ ಹಾಗೂ ಅವರ ಪುತ್ರ ಯತೀಂದ್ರ ಅವರಿಗೆ ಸಚಿವ ಸ್ಥಾನ ನೀಡುವ ಚರ್ಚೆ ನಡೆದಿದೆ ಎನ್ನಲಾಗಿದೆ. ಇತ್ತೀಚೆಗೆ ಬಿಹಾರದಲ್ಲಿ ನಡೆದ ನಾಯಕತ್ವ ಬದಲಾವಣೆಯ ಮಾದರಿಯಲ್ಲೇ ಕರ್ನಾಟಕದಲ್ಲೂ ರಾಜಕೀಯ ತಂತ್ರ ರೂಪುಗೊಳ್ಳುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಆದರೆ ಸಿದ್ದರಾಮಯ್ಯ ರಾಜ್ಯಸಭೆಗೆ ತೆರಳಿದರೂ, ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುವ ವಿಚಾರ ಇನ್ನೂ ಸ್ಪಷ್ಟವಾಗಿಲ್ಲ. ಕೆಲವು ಕಾಂಗ್ರೆಸ್ ನಾಯಕರು Mallikarjun Kharge ಅವರನ್ನು ಸಮಾಧಾನಕರ ಅಭ್ಯರ್ಥಿಯಾಗಿ ಮುಂದಿರಿಸುವ ಸಾಧ್ಯತೆಯನ್ನೂ ಚರ್ಚಿಸುತ್ತಿದ್ದಾರೆ ಎನ್ನಲಾಗಿದೆ. ಇದೇ ವೇಳೆ K. C. Venugopal ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ತರಲು ರಾಹುಲ್ ಗಾಂಧಿ ಬಯಸಿದ್ದಾರೆ ಎಂಬ ಮಾತುಗಳು ಹರಿದಾಡುತ್ತಿವೆ.

ದೆಹಲಿಗೆ ಆಗಮಿಸಿದ ಬಳಿಕ ಮಾಧ್ಯಮಗಳು ಸಿಎಂ ಸ್ಥಾನ ಕುರಿತು ಕೇಳಿದ ಪ್ರಶ್ನೆಗೆ ಡಿಕೆ ಶಿವಕುಮಾರ್ ಯಾವುದೇ ಪ್ರತಿಕ್ರಿಯೆ ನೀಡದೆ ಕೇವಲ ನಗುಮುಖ ತೋರಿರುವುದು ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ.

Continue Reading

Trending