Connect with us

ದೇಶ

ಸಾಕ್ಷಿ ಕೇಳಿದ ಅಫ್ರಿಧಿ! ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಗಬ್ಬರ್

Published

on

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ (Pahalgam Attack) ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಅಮಾಯಕರು ಮೃತಪಟ್ಟಿದ್ದಾರೆ. ಈ ದುಷ್ಕೃತ್ಯ ಹಿನ್ನಲೆಯಲ್ಲಿ ಭಾರತವು ಪಾಕಿಸ್ತಾನ್ (India vs Pakistan) ನಡುವಣ ಎಲ್ಲಾ ರೀತಿಯ ಸಂಬಂಧಗಳನ್ನು ಕಡಿದುಕೊಂಡಿದೆ. ಇದರ ನಡುವೆ ಉಭಯ ದೇಶಗಳ ನಡುವಣ ಕ್ರಿಕೆಟ್ ಪಂದ್ಯಕ್ಕೂ ಬ್ರೇಕ್ ಬೀಳಬೇಕೆಂಬ ಅಭಿಪ್ರಾಯಗಳು ಕೂಡ ಕೇಳಿ ಬರುತ್ತಿದೆ. ಈ ನಡುವೆ ಪಾಕಿಸ್ತಾನದವರು ದಾಳಿ ಮಾಡಿದ್ದಾರೆ ಎಂಬುದಕ್ಕೆ ಏನು ಪುರಾವೆ ಇದೆ ಎಂದು ಪಾಕ್ ತಂಡದ ಮಾಜಿ ನಾಯಕ ಶಾಹಿದ್ ಅಫ್ರಿದಿ (Shahid Afridhi) ಕೇಳಿದ್ದಾರೆ. ಈ ಹೇಳಿಕೆಗೆ ಟೀಂ ಇಂಡಿಯಾ ಮಾಜಿ ಆಟಗಾರ ಶಿಖರ್ ಧವನ್ (Shikhar Dhawan) ಖಡಕ್ ತಿರುಗೇಟು ನೀಡಿದ್ದಾರೆ.

ಹೌದು, ಅಫ್ರಿಧಿ ಅವರನ್ನು ಗುರಿಯಾಗಿಸಿಕೊಂಡು ಎಕ್ಸ್ ಪೋಸ್ಟ್ ಮಾಡಿರುವ ಶಿಖರ್ ಧವನ್, ನೀವು ನಮ್ಮ ವಿರುದ್ಧ ಕಾರ್ಗಿಲ್‌ನಲ್ಲಿ ಸೋತಿದ್ಧೀರ. ಮಾತ್ರವಲ್ಲ, ನೀವು ಈಗಾಗಲೇ ತುಂಬಾ ಬಾರಿ ಸೋತಿದ್ದೀರಿ ಇನ್ನೂ ಎಷ್ಟು ಬಾರಿ ಸೋಲುತ್ತೀರಾ? ಇನ್ನೂ ಎಷ್ಟು ಬಾರಿ ಬೀಳುವಿರಿ. ನಿಷ್ಪ್ರಯೋಜಕ ಹೇಳಿಕೆಗಳನ್ನು ನೀಡುವ ಬದಲು ನಿಮ್ಮ ದೇಶದ ಪ್ರಗತಿಗೆ ನಿಮ್ಮ ಬುದ್ಧಿಯನ್ನು ಬಳಸುವುದು ಉತ್ತಮ. ಅಫ್ರಿಧಿ ನಮ್ಮ ಭಾರತೀಯ ಸೇನೆಯ ಬಗ್ಗೆ ನಮಗೆ ತುಂಬಾ ಹೆಮ್ಮೆ ಇದೆ. ಭಾರತ ಮಾತೆಗೆ ಜಯವಾಗಲಿ ಎಂದು ತಿರುಗೇಟು ನೀಡಿದರು.

ದೇಶ

PUC Result ಶಾಕ್: ಇಂದು ಇಲ್ಲ, ಏಪ್ರಿಲ್ 9ಕ್ಕೆ ಪ್ರಕಟ!

Published

on

By

ಬೆಂಗಳೂರು, ಏಪ್ರಿಲ್ 07: 2026ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶಕ್ಕಾಗಿ ಕಾಯುತ್ತಿದ್ದ ವಿದ್ಯಾರ್ಥಿಗಳಿಗೆ ನಿರಾಸೆ ಉಂಟಾಗಿದೆ. ಇಂದು (ಏಪ್ರಿಲ್ 07) ಫಲಿತಾಂಶ ಪ್ರಕಟವಾಗಬಹುದು ಎಂದು ನಿರೀಕ್ಷಿಸಲಾಗಿದ್ದರೂ, ತಾಂತ್ರಿಕ ಕಾರಣಗಳಿಂದಾಗಿ ಪ್ರಕಟಣೆ ಮುಂದೂಡಲಾಗಿದೆ ಎಂದು ತಿಳಿದುಬಂದಿದೆ. Karnataka School Examination and Assessment Board (KSEAB) ಈಗ ಹೊಸ ದಿನಾಂಕವಾಗಿ ಏಪ್ರಿಲ್ 9ರಂದು ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಗೆ ರಾಜ್ಯದಾದ್ಯಂತ 7.10 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಹಾಜರಾಗಿದ್ದರು. ಫಲಿತಾಂಶ ಇಂದು ಪ್ರಕಟವಾಗಲಿದೆ ಎಂಬ ನಿರೀಕ್ಷೆ ಇದ್ದರೂ, ಅಧಿಕೃತ ಘೋಷಣೆ ಇಲ್ಲದ ಕಾರಣ ವಿದ್ಯಾರ್ಥಿಗಳಲ್ಲಿ ಗೊಂದಲ ಮತ್ತು ಆತಂಕ ಉಂಟಾಯಿತು.

ಇದೀಗ ಲಭ್ಯವಾಗಿರುವ ಮಾಹಿತಿಯ ಪ್ರಕಾರ, ಏಪ್ರಿಲ್ 9ರಂದು ಫಲಿತಾಂಶ ಆನ್‌ಲೈನ್‌ನಲ್ಲಿ ಪ್ರಕಟವಾಗಲಿದೆ. ವಿದ್ಯಾರ್ಥಿಗಳು ತಮ್ಮ Registration Number ಹಾಗೂ Date of Birth ನಮೂದಿಸಿ ಫಲಿತಾಂಶ ಪರಿಶೀಲಿಸಬಹುದು.

ಇನ್ನೊಂದೆಡೆ, ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆ ಏಪ್ರಿಲ್ 9ರಂದು ಮತದಾನ ನಡೆಯಲಿದೆ. ಈ ಕಾರಣದಿಂದ ಕೆಲವು ಪ್ರದೇಶಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು, ಶಿಕ್ಷಣ ಸಚಿವರ ಉಪಸ್ಥಿತಿಯಲ್ಲಿ ಫಲಿತಾಂಶ ಪ್ರಕಟಿಸಲು ಅಡಚಣೆ ಎದುರಾಗಿದೆ.

ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ಅನುಮತಿ ಪಡೆಯಬೇಕಿರುವುದರಿಂದ ಫಲಿತಾಂಶ ಪ್ರಕಟಣೆಯಲ್ಲಿ ವಿಳಂಬವಾಗಿದೆ ಎಂದು ಮೂಲಗಳು ತಿಳಿಸಿವೆ.

ಒಟ್ಟಿನಲ್ಲಿ, ತಾಂತ್ರಿಕ ಹಾಗೂ ಆಡಳಿತಾತ್ಮಕ ಕಾರಣಗಳಿಂದ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಣೆ ಮುಂದೂಡಲ್ಪಟ್ಟಿದ್ದು, ವಿದ್ಯಾರ್ಥಿಗಳು ಇನ್ನೂ ಎರಡು ದಿನ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

Continue Reading

ದೇಶ

“ಬ್ರೆಡ್ ಇಲ್ಲ ಅಂದ್ರೆ ಕೇಕ್ ತಿನ್ನಿ!” – ಜೋಶಿಗೆ ತಿರುಗೇಟು

Published

on

By

ಬಾಗಲಕೋಟೆ: ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ವಿಚಾರ ರಾಜಕೀಯ ಕಾಳಗಕ್ಕೆ ತಿರುಗಿದೆ. ಕೇಂದ್ರ ಸಚಿವ Pralhad Joshi ಅವರು “ಗ್ಯಾಸ್ ಇಲ್ಲದಿದ್ದರೆ ಪೆಟ್ರೋಲ್ ಬಳಸಿ” ಎಂಬ ಸಲಹೆ ನೀಡಿದ್ದಕ್ಕೆ ಕೆಪಿಸಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಕೆಪಿಸಿಸಿ ವಕ್ತಾರ A. N. Nataraj Gowda ಅವರು ಈ ಹೇಳಿಕೆಯನ್ನು ಫ್ರೆಂಚ್ ಕ್ರಾಂತಿಯ “ಬ್ರೆಡ್ ಇಲ್ಲದಿದ್ದರೆ ಕೇಕ್ ತಿನ್ನಿ” ಎಂಬ ಮನೋಭಾವಕ್ಕೆ ಹೋಲಿಸಿ ಕಿಡಿಕಾರಿದ್ದಾರೆ. “ದಿನಗೂಲಿ ನಂಬಿ ಬದುಕುವ ಆಟೋ ಚಾಲಕರಿಗೆ ಪೆಟ್ರೋಲ್ ಬಳಸುವಂತೆ ಹೇಳುವುದು ಆರ್ಥಿಕ ವಾಸ್ತವತೆ ತಿಳಿಯದ ಮಾತು” ಎಂದು ಆರೋಪಿಸಿದರು.

ಕೇಂದ್ರ ಸಚಿವರ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಕೆಪಿಸಿಸಿ ಮೂರು ಪ್ರಮುಖ ಪ್ರಶ್ನೆಗಳನ್ನು ಎತ್ತಿದೆ. ಪೆಟ್ರೋಲ್ ದರ ಗ್ಯಾಸ್‌ಗಿಂತ ಬಹಳ ಹೆಚ್ಚಿದ್ದು, ಅದರಿಂದ ಬಡ ಚಾಲಕರ ಜೀವನ ಸಾಗುವುದೇ ಹೇಗೆ ಎಂದು ಪ್ರಶ್ನಿಸಿದೆ. ಜೊತೆಗೆ, ಹೆಚ್ಚಿನ ಆಟೋಗಳು Dedicated LPG/CNG ಎಂಜಿನ್ ಹೊಂದಿರುವುದರಿಂದ ಪೆಟ್ರೋಲ್ ಬಳಸುವುದು ತಾಂತ್ರಿಕವಾಗಿ ಸಾಧ್ಯವಿಲ್ಲ ಎಂದು ಹೇಳಿದೆ.

ಇನ್ನು, ಇಂಧನ ಪೂರೈಕೆಯನ್ನು ನಿಯಂತ್ರಿಸುವ ಹೊಣೆಗಾರಿಕೆ ಕೇಂದ್ರ ಸರ್ಕಾರದ್ದೇ ಆಗಿದ್ದು, ಖಾಸಗಿ ಕಂಪನಿಗಳಿಂದ ಉಂಟಾಗಿರುವ ಕೃತಕ ಅಭಾವದ ಮೇಲೆ ಕ್ರಮ ಕೈಗೊಳ್ಳದಿರುವುದೇಕೆ ಎಂದು ಪ್ರಶ್ನಿಸಿದೆ. “ಅಂತಾರಾಷ್ಟ್ರೀಯ ಬಿಕ್ಕಟ್ಟು” ನೆಪವೊಡ್ಡಿ ಸರ್ಕಾರ ತನ್ನ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುತ್ತಿದೆ ಎಂದು ಆರೋಪಿಸಲಾಗಿದೆ.

ಈ ನಡುವೆ, ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಟೀಕೆ ನಡೆಸಿದ ಕೆಪಿಸಿಸಿ, ಸಚಿವರು ತಕ್ಷಣವೇ ಆಟೋ ಚಾಲಕರಲ್ಲಿ ಕ್ಷಮೆ ಕೇಳಬೇಕು ಮತ್ತು ಎಲ್‌ಪಿಜಿ ಪೂರೈಕೆಯನ್ನು ಸುಧಾರಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದೆ.

ಒಟ್ಟಿನಲ್ಲಿ, ಎಲ್‌ಪಿಜಿ ಕೊರತೆ ಸಮಸ್ಯೆ ಇದೀಗ ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದ್ದು, ಬಡ ಆಟೋ ಚಾಲಕರ ಸಂಕಷ್ಟ ಮತ್ತಷ್ಟು ಗಂಭೀರವಾಗಿದೆ.

Continue Reading

ದೇಶ

“ಮೌನ ಏಕೆ?” – ಮೋದಿ ಸರ್ಕಾರದ ವಿರುದ್ಧ ಟಿಎಂಸಿ ಆಕ್ರೋಶ

Published

on

By

Bengal election news

ನವದೆಹಲಿ: ಕೋಲ್ಕತ್ತಾಗೆ ಪಾಕಿಸ್ತಾನ ನೀಡಿರುವ ಬೆದರಿಕೆ ವಿಚಾರ ರಾಜಕೀಯವಾಗಿ ಮತ್ತಷ್ಟು ಕಾವು ಪಡೆದಿದೆ. ತೃಣಮೂಲ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ Abhishek Banerjee ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಸಿಲಿಗುರಿಯಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, ಪಾಕಿಸ್ತಾನದ ರಕ್ಷಣಾ ಸಚಿವ Khawaja Asif ಕೊಲ್ಕತ್ತಾವನ್ನು ಗುರಿಯಾಗಿಸುವುದಾಗಿ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಆಕ್ರೋಶ ವ್ಯಕ್ತಪಡಿಸಿದರು. “ನೆರೆ ರಾಷ್ಟ್ರದಿಂದ ಇಂತಹ ಬೆದರಿಕೆ ಬಂದರೂ ಪ್ರಧಾನಿ Narendra Modi, ಗೃಹ ಸಚಿವ Amit Shah ಮತ್ತು ರಕ್ಷಣಾ ಸಚಿವ Rajnath Singh ಮೌನವಾಗಿರುವುದು ಅಚ್ಚರಿಯ ಸಂಗತಿ” ಎಂದು ಟೀಕಿಸಿದರು.

ಅಭಿಷೇಕ್ ಬ್ಯಾನರ್ಜಿ ತಮ್ಮ ಭಾಷಣದಲ್ಲಿ, “ನಮ್ಮ ‘ಇಂಡಿಯಾ’ ಮೈತ್ರಿಕೂಟ ಅಧಿಕಾರಕ್ಕೆ ಬಂದ ದಿನ ಪಾಕಿಸ್ತಾನಕ್ಕೆ ತಕ್ಕ ಪ್ರತಿಕ್ರಿಯೆ ನೀಡುತ್ತೇವೆ” ಎಂದು ಎಚ್ಚರಿಕೆಯ ಮಾತುಗಳನ್ನೂ ಆಡಿದರು. ಪಾಕಿಸ್ತಾನದ ಬೆದರಿಕೆಗೆ ಗಟ್ಟಿಯಾದ ಪ್ರತಿಕ್ರಿಯೆ ನೀಡದ ಕೇಂದ್ರ ಸರ್ಕಾರದ ನಡೆ ಪ್ರಶ್ನಾರ್ಹ ಎಂದು ಹೇಳಿದರು.

ಇನ್ನೂ ಮುಂದೆ, ಕೇಂದ್ರ ನಾಯಕರು ಪಶ್ಚಿಮ ಬಂಗಾಳಕ್ಕೆ ಬಂದು ಟಿಎಂಸಿ ವಿರುದ್ಧ ಪ್ರಚಾರ ಮಾಡುವುದರಲ್ಲಿ ನಿರತರಾಗಿದ್ದು, ನಮ್ಮನ್ನು ಬಾಂಗ್ಲಾದೇಶಿಗಳು ಅಥವಾ ಪಾಕಿಸ್ತಾನಿಗಳು ಎಂದು ಕರೆಯುತ್ತಿದ್ದಾರೆ. ಆದರೆ ನೇರ ಬೆದರಿಕೆ ಎದುರಾದಾಗ ಅವರು ಮೌನಕ್ಕೆ ಶರಣಾಗಿದ್ದಾರೆ ಎಂದು ಆರೋಪಿಸಿದರು.

ಈ ಹೇಳಿಕೆಗಳು ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ರಾಜಕೀಯ ಕಾವು ಹೆಚ್ಚಿಸಿದ್ದು, ಬಿಜೆಪಿ-ಟಿಎಂಸಿ ನಡುವೆ ವಾಗ್ವಾದ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.

Continue Reading

Trending