Connect with us

ದೇಶ

ಉಗ್ರರನ್ನು ಕ್ಷಮಿಸುವುದು ದೇವರಿಗೆ ಬಿಟ್ಟದ್ದು, ಆದರೆ ಅವರನ್ನು ಆತನ ಬಳಿಗೆ ಕಳುಹಿಸುವುದು ನನಗೆ ಸೇರಿದ್ದು!

Published

on

ಉಗ್ರರು ನಡೆಸಿರುವ 26 ಮಂದಿಯ ನರಮೇಧಕ್ಕೆ ನಿಜವಾದ ಭಾರತೀಯರೆಲ್ಲರೂ ಕೊತಕೊತ ಕುದಿಯುತ್ತಿದ್ದಾರೆ. ಹಿಂದೂಗಳ ಮೇಲೆ ನಡೆದಿರುವ ಈ ಹತ್ಯಾಕಾಂಡಕ್ಕೆ ನಿಜವಾದ ದೇಶಪ್ರೇಮಿಗಳ ಮನದಲ್ಲಿ ಕಿಚ್ಚು ಹೊತ್ತಿ ಉರಿದಿದೆ.  ಉಗ್ರರನ್ನು, ಅವರಿಗೆ ರಕ್ಷಣೆ ನೀಡುತ್ತಿರುವವರನ್ನು ಮಟ್ಟ ಹಾಕುವವರೆಗೂ ನಿಜವಾದ ಭಾರತೀಯರಿಗೆ ನೆಮ್ಮದಿ ಇಲ್ಲ. ಹೆಂಡತಿ- ಮಕ್ಕಳ ಎದುರಿನಲ್ಲಿಯೇ ಹಿಂದೂ ಗಂಡಸರನ್ನು ಕೊಲೆ ಮಾಡಿರುವ ಪಾತಕಿಗಳಿಗೆ ಏಳೇಳು ಜನ್ಮದಲ್ಲಿಯೂ ನಡುಕು ಹುಟ್ಟಿಸುವಂಥ ಶಿಕ್ಷೆ ಆಗಬೇಕು ಎಂದೇ ಸಾಮಾಜಿಕ ಜಾಲತಾಣಗಳಲ್ಲಿ ಬಹುತೇಕರಿಂದ ಆಕ್ರೋಶ ವ್ಯಕ್ತವಾಗುತ್ತಿದೆ.  ಇದಾಗಲೇ ಭಾರತ ಮತ್ತು ಪಾಕಿಸ್ತಾನದ ನಡುವೆ ಕದನದ ಸೂಚನೆಯೂ ಸಿಕ್ಕಿದೆ. ಇದಾಗಲೇ ಭಾರತವು ಪಾಕಿಸ್ತಾನಕ್ಕೆ ಹಲವಾರು ರೀತಿಯಲ್ಲಿ ಪೆಟ್ಟು ಕೊಟ್ಟಿದ್ದು, ಇದರಿಂದ ಪಾಕಿಸ್ತಾನ ನಡುಕ ಅನುಭವಿಸುತ್ತಿದೆ.

ಇದರ ನಡುವೆಯೇ, ಪಾಕಿಸ್ತಾನದ ಜೊತೆ ಯುದ್ಧದ ಅನಿರ್ವಾಯತೆ ಇಲ್ಲ. ನಾವು ಯಾವತ್ತೂ ಯುದ್ಧದ ಪರ ಇಲ್ಲ. ನಾವು ಯಾವಾಗಲೂ ಶಾಂತಿಯ ಪರ. ಯುದ್ಧದ ಬದಲು ಭದ್ರತೆಯನ್ನು ಬಿಗಿಗೊಳಿಸಬೇಕಿದೆ. ಯುದ್ಧದ ಬಗ್ಗೆ ಯೋಚನೆ ಬೇಡ. ಅದರ ಬದಲು ಭದ್ರತೆಯನ್ನು ಬಿಗಿ ಮಾಡಿ ಎಂದು ಸಲಹೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಇಲ್ಲಿ ಸಕತ್​ ಟ್ರೋಲ್​ಗೆ ಒಳಗಾಗುತ್ತಿದ್ದರೆ, ಅತ್ತ ಪಾಕಿಸ್ತಾನದ ಟಿವಿಯಲ್ಲಿ ಇವರ ಮಾತು ರಾಜಾಜಿಸುತ್ತಿದೆ. ಸಿದ್ದರಾಮಯ್ಯನವರ ಮಾತನ್ನು ಪಾಕ್​ ಟಿವಿಗಳಲ್ಲಿ ಪ್ರತಿನಿತ್ಯ ಹಲವಾರು ಬಾರಿ ಪ್ರಸಾರ ಮಾಡಲಾಗುತ್ತಿದ್ದು, ಭಾರತದಲ್ಲಿ ಯುದ್ಧದ ವಿರುದ್ಧ ಇದ್ದಾರೆ ಎಂದು ಹೇಳಲಾಗುತ್ತಿದೆ. ಇಷ್ಟಾದ ಬಳಿಕ ಸಿದ್ದರಾಮಯ್ಯನವರು ಉಲ್ಟಾ ಹೊಡೆದು, ನಾನು ಯುದ್ಧ ಬೇಡ ಎಂದು ಹೇಳಿಲ್ಲ ಎಂದಿದ್ದಾರೆ. ಅದೇನೇ ಇರಲಿ… ದಂಡಂ ದಶಗುಣಂ ಎನ್ನುವುದೇ ಈಗ ಉಳಿದಿರುವ ದಾರಿ ಎನ್ನುತ್ತಿರುವ ನಡುವೆಯೇ ಉಗ್ರರ ಕುರಿತಾಗಿ ರಷ್ಯಾ ಪ್ರಧಾನಿ ವ್ಲಾಡಿಮಿರ್​​ ಪುಟಿನ್​ ಅವರು ಹೇಳಿರುವ ಹೇಳಿಕೆಯಿಂದ ಈಗ ವೈರಲ್​ ಆಗುತ್ತಿದೆ.

ಕೆಲವು ವರ್ಷಗಳ ಹಿಂದೆ ಅವರು ಈ ಹೇಳಿಕೆ ನೀಡಿದ್ದರು. ಅದೇನೆಂದರೆ, ಉಗ್ರರನ್ನು ಕ್ಷಮಿಸುವುದು ದೇವರಿಗೆ ಬಿಟ್ಟದ್ದು, ಆದರೆ ಅವ್ರನ್ನ ಆತನ ಬಳಿಗೆ ಕಳುಹಿಸುವುದು ನನಗೆ ಸೇರಿದ್ದು ಎಂದಿದ್ದರು. ಇವರ ಈ ಮಾತು ಭಾರತಕ್ಕೆ ಈಗ ಅನ್ವಯ ಆಗುತ್ತದೆ. ಭಯೋತ್ಪಾದಕರು, ಅವರಿಗೆ ನೆರವು ಮಾಡುತ್ತಿರುವವರು, ಮಿತ್ರರ ರೂಪದಲ್ಲಿ ಇರುವ ಶತ್ರುಗಳು, ಪ್ರತ್ಯಕ್ಷ-ಪರೋಕ್ಷವಾಗಿ ವೋಟ್​ಬ್ಯಾಂಕ್​ಗಾಗಿ ಇಂಥವರ ಪರ ವಹಿಸಿಕೊಳ್ಳುತ್ತಿರುವವರು ಎಲ್ಲರನ್ನೂ ಮಟ್ಟ ಹಾಕಬೇಕು  ಎಂಬ ಕೂಗು ಜೋರಾಗುತ್ತಿರುವ ಈ ಹೊತ್ತಿನಲ್ಲಿ ಪುಟಿನ್​ ಅವರ ಮಾತು ವೈರಲ್​ ಆಗುತ್ತಿದ್ದು, ಇದನ್ನು ಪ್ರಧಾನಿ ನರೇಂದ್ರ  ಮೋದಿ ಅವರೂ ಅಳವಡಿಸಿಕೊಳ್ಳಬೇಕಿದೆ ಎನ್ನುತ್ತಿದ್ದಾರೆ. 

ಹಿಂದೂಗಳನ್ನು ಗುರಿಯಾಗಿಸಿಕೊಂಡು ಈ ನರಮೇಧ ನಡೆದೇ ಇಲ್ಲ ಎಂದು ಹೇಳಿಕೊಂಡು ವಿಡಿಯೋ ಹಾಕುತ್ತಿರುವುದು ಕೂಡ ತೀವ್ರ ಟೀಕೆಗೆ ಗುರಿಯಾಗುತ್ತಿದೆ. ಇದಾಗಲೇ,  26 ಮಂದಿ ಹಿಂದೂಗಳ ನರಮೇಧದ ಸಮಯದಲ್ಲಿ 20 ಮಂದಿಯ ಪ್ಯಾಂಟ್​ ಹಾಗೂ ಒಳ ಉಡುಪು ತೆಗೆದು ಖಾಸಗಿ ಅಂಗ ಪರೀಕ್ಷಿಸಿದ ಮೇಲೆ ಅವರು ಮುಸ್ಲಿಮರು ಅಲ್ಲ ಎಂದು ಕನ್​ಫರ್ಮ್​ ಮಾಡಿಕೊಂಡು  ಗುಂಡಿನ ದಾಳಿ ನಡೆಸಲಾಗಿದೆ ಎನ್ನುವ ವಿಷಯವನ್ನು ಸೇನಾ ಸಿಬ್ಬಂದಿ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಜಮ್ಮು ಮತ್ತು ಕೆ ಆಡಳಿತ ಅಧಿಕಾರಿಗಳ ತಂಡ ನಿನ್ನೆ ರಿವೀಲ್​ ಮಾಡಿದ್ದಾರೆ..  ಈ ಬಗ್ಗೆ ಇದಾಗಲೇ ಮೃತರ ಸಂಬಂಧಿಕರು ಹೇಳಿಕೆ ಕೂಡ ನೀಡಿದ್ದಾರೆ.  ತಾವು ಸ್ಥಳಕ್ಕೆ ಧಾವಿಸಿದಾಗ ಒಳ ಉಡುಪುಗಳು ತೆಗೆದಿರುವುದು ಕಾಣಿಸಿತ್ತು. ಕೆಲವು ಕುಟುಂಬಸ್ಥರು ಮೇಲು ಹೊದಿಕೆಯಿಂದ ಶವವನ್ನು ಮುಚ್ಚಿದ್ದರು, ಕೆಲವರು ಆಘಾತದಿಂದ ಹಾಗೆಯೇ ಅಲ್ಲಿಯೇ ಕುಸಿದು ಹೋಗಿದ್ದರು ಎಂದು ತನಿಖಾಧಿಕಾರಿಗಳು  ತಿಳಿಸಿದ್ದಾರೆ. 

ದೇಶ

K. Govindraj ಸೇರಿ ಗಣ್ಯರಿಗೆ ಗೌರವ ಡಾಕ್ಟರೇಟ್ – ಬಿಸಿಯು ಘಟಿಕೋತ್ಸವ ಸಂಭ್ರಮ

Published

on

By

ಬೆಂಗಳೂರು: Bengaluru City University (ಬಿಸಿಯು) 5ನೇ ಘಟಿಕೋತ್ಸವ ಅದ್ದೂರಿಯಾಗಿ ನಡೆಯಿತು. ಕಾರ್ಯಕ್ರಮಕ್ಕೆ ಕುಲಾಧಿಪತಿಗಳಾದ Thawar Chand Gehlot ಚಾಲನೆ ನೀಡಿದರು.

ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಈ ಘಟಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ Dr. Binay Kumar Das, Defence Research and Development Organisation (ಡಿಆರ್‌ಡಿಒ) ಮಹಾ ನಿರ್ದೇಶಕರು (ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಶನ್ ಸಿಸ್ಟಮ್ಸ್) ಭಾಗವಹಿಸಿದ್ದರು.

ಈ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 6 ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಸಂಗೀತ ನಿರ್ದೇಶಕ Arjun Janya, ಕ್ರಿಕೆಟರ್ Venkatesh Prasad, ಶಿಕ್ಷಣ ತಜ್ಞ T. K. Narayanappa, ಎಂಎಲ್ಸಿ K. Govindaraj, ಶಿಕ್ಷಣ ಕ್ಷೇತ್ರದ Mohan Alva ಹಾಗೂ ಕೈಗಾರಿಕೋದ್ಯಮಿ Bava Mohammed Farooq ಅವರಿಗೆ ರಾಜ್ಯಪಾಲರು ಗೌರವಿಸಿದರು.

ಉಪ ಚುನಾವಣೆ ಪ್ರಚಾರದ ಹಿನ್ನೆಲೆ, ಉನ್ನತ ಶಿಕ್ಷಣ ಸಚಿವ Dr. C. N. Ashwath Narayan ಗೈರಾಗಿದ್ದರು.

ಘಟಿಕೋತ್ಸವದಲ್ಲಿ 73 ಪ್ರಥಮ ರ‍್ಯಾಂಕ್ ವಿದ್ಯಾರ್ಥಿಗಳಿಗೆ ಚಿನ್ನದ ಪದಕ, ಪ್ರಮಾಣಪತ್ರ ಮತ್ತು ನಗದು ಬಹುಮಾನ ವಿತರಿಸಲಾಯಿತು. ಒಟ್ಟು 37,370 ವಿದ್ಯಾರ್ಥಿಗಳಿಗೆ ಪದವಿ ಮತ್ತು ಸ್ನಾತಕೋತ್ತರ ಪದವಿ ಪ್ರದಾನವಾಗಿದ್ದು, 23 ವಿದ್ಯಾರ್ಥಿಗಳಿಗೆ ಪಿಎಚ್‌ಡಿ ಪದವಿ ನೀಡಲಾಯಿತು.

ವಿಶೇಷವಾಗಿ, ಸ್ನೇಹಾ ಟಿ (ಎಂಎಸ್‌ಸಿ ರಸಾಯನಶಾಸ್ತ್ರ) 4 ಚಿನ್ನದ ಪದಕಗಳನ್ನು ಪಡೆದು ಸಾಧನೆ ಮಾಡಿದ್ದು, ಅಭಿಷೇಕ್ ಶ್ರೀರಾಮ್ (ಬಿಕಾಂ) 3 ಚಿನ್ನದ ಪದಕ, ದಿವ್ಯಶ್ರೀ ಎಸ್ (ಬಿಬಿಎ) 3 ಚಿನ್ನದ ಪದಕ ಪಡೆದು ಗಮನಸೆಳೆದಿದ್ದಾರೆ.

ಗೌರವ ಡಾಕ್ಟರೇಟ್ ಪಡೆದ ಬಳಿಕ Arjun Janya ಅವರು ಮಾತನಾಡಿ, ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಕೃತಜ್ಞತೆ ಸಲ್ಲಿಸಿದರು.

Continue Reading

ಚುನಾವಣೆ

TN 2026 ಟೀಸರ್‌ಗೆ ರಾಜಕೀಯ ಕಿಚ್ಚು! ವಿಜಯ್ ಟಾರ್ಗೆಟ್ ಆರೋಪ – ತಮಿಳುನಾಡಿನಲ್ಲಿ ಬಿಗುವಿನ ವಾತಾವರಣ

Published

on

By

ಚೆನ್ನೈ: ಮುಂದಿನ ವಾರ ಬಿಡುಗಡೆಯಾಗಲಿರುವ ತಮಿಳು ಸಿನಿಮಾ TN 2026 – ತಂಗೈ ನಚ್ಚಥಿರಂ ಟೀಸರ್ ಏಪ್ರಿಲ್ 2ರಂದು ಬಿಡುಗಡೆಯಾದ ಬಳಿಕ ಭಾರೀ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಟೀಸರ್‌ನಲ್ಲಿ ನಟ Nataraj (Natti) ಅಭಿನಯಿಸಿರುವ “ಗೋಲ್ಡನ್ ಸ್ಟಾರ್ ಗುಲ್ಕಂದ್ ಕುಮಾರ್” ಎಂಬ ಪಾತ್ರ ರಾಜಕೀಯಕ್ಕೆ ಪ್ರವೇಶಿಸುವುದನ್ನು ತೋರಿಸಲಾಗಿದ್ದು, ಇದು ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್ ಆಗಿದೆ.

ಟೀಸರ್ ವೈರಲ್ ಆದ ತಕ್ಷಣ, Tamilaga Vettri Kazhagam (ಟಿವಿಕೆ) ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ನಟ Vijay ಅವರನ್ನು ಗುರಿಯಾಗಿಸಿಕೊಂಡು ಟೀಸರ್ ರೂಪಿಸಲಾಗಿದೆ ಎಂಬುದು ಅವರ ಆರೋಪವಾಗಿದೆ.

ಟೀಸರ್‌ನಲ್ಲಿ ಗುಲ್ಕಂದ್ ಕುಮಾರ್ ಪಾತ್ರವು ಬಿಳಿ ಶರ್ಟ್ ಮತ್ತು ಖಾಕಿ ಪ್ಯಾಂಟ್ ಧರಿಸಿ, ವಿಜಯ್ ಅವರಂತೆಯೇ ‘ಸಾಲ್ಟ್ ಅಂಡ್ ಪೆಪ್ಪರ್’ ಲುಕ್‌ನಲ್ಲಿ ಕಾಣಿಸಿಕೊಂಡಿದ್ದು, ಜೊತೆಗೆ ಅವರ ನಡಿಗೆ ಮತ್ತು ಜನರತ್ತ ಕೈ ಬೀಸುವ ಶೈಲಿಯನ್ನು ಅನುಕರಿಸಿರುವುದು ವಿವಾದಕ್ಕೆ ಪ್ರಮುಖ ಕಾರಣವಾಗಿದೆ. ಅಲ್ಲದೆ, ನಟ Redin Kingsley ಅವರ ಪಾತ್ರವೊಂದು ವೇದಿಕೆಯಲ್ಲಿ “ಹೇ ಮೂವಿ-ಬಾಯ್…” ಎಂದು ಗೇಲಿ ಮಾಡುವ ಸಂಭಾಷಣೆ ಕೂಡ ಟೀಕೆಗೆ ಗುರಿಯಾಗಿದೆ.

ಟೀಸರ್ ಕೊನೆಯಲ್ಲಿ ಕೇಳಿಬರುವ “ಓಂ ಶಕ್ತಿ ಪರಾಶಕ್ತಿ” ಘೋಷಣೆ ಕೂಡ ವಿಜಯ್ ಇತ್ತೀಚೆಗೆ ರಾಜಕೀಯ ವೇದಿಕೆಯಲ್ಲಿ ಬಳಸಿದ ನುಡಿಗಟ್ಟನ್ನು ಹೋಲುತ್ತದೆ ಎನ್ನಲಾಗುತ್ತಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಟಿವಿಕೆ ನಾಯಕ Aadhav Arjun, “ಇದು ವಿಜಯ್ ವರ್ಚಸ್ಸಿಗೆ ಧಕ್ಕೆ ತರಲು Dravida Munnetra Kazhagam (ಡಿಎಂಕೆ) ಮತ್ತು ಬಿಜೆಪಿ ಜಂಟಿಯಾಗಿ ನಡೆಸಿದ ಪಿತೂರಿ” ಎಂದು ಆರೋಪಿಸಿದ್ದಾರೆ. ಜನರು ಇಂತಹ ಚಿತ್ರಗಳನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ ಎಂದೂ ಅವರು ಕಿಡಿಕಾರಿದ್ದಾರೆ.

Umapathy Ramaiah ನಿರ್ದೇಶನದ ಈ ಚಿತ್ರದಲ್ಲಿ Thambi Ramaiah, M. S. Bhaskar, Ilavarasu, Yashika Aannand ಸೇರಿದಂತೆ ಹಲವು ನಟರು ಅಭಿನಯಿಸಿದ್ದಾರೆ. ಏಪ್ರಿಲ್ 10ರಂದು ಬಿಡುಗಡೆಯಾಗಲಿರುವ ಈ ಚಿತ್ರ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡುತ್ತದೆಯೇ ಎಂಬ ಕುತೂಹಲ ಹೆಚ್ಚಾಗಿದೆ.

Continue Reading

ದೇಶ

ಹಳೆಯ ವಾಹನಗಳಿಗೆ HSRP ಕಡ್ಡಾಯವೇ? ಸಾರಿಗೆ ಇಲಾಖೆಯ ಸ್ಪಷ್ಟನೆ ಏನು ಗೊತ್ತಾ?

Published

on

ಬೆಂಗಳೂರು: ಹಳೆಯ ವಾಹನಗಳಿಗೆ ಹೈ ಸಿಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ (HSRP) ಅಳವಡಿಕೆ ಕಡ್ಡಾಯವಲ್ಲ ಎಂಬ ಸುದ್ದಿಗಳು ಇತ್ತೀಚೆಗೆ ಕೆಲವು ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದರೂ, ಇದಕ್ಕೆ ಸಾರಿಗೆ ಇಲಾಖೆ ಸ್ಪಷ್ಟನೆ ನೀಡಿದೆ. ಇಂತಹ ಸುದ್ದಿಗಳು ಸುಳ್ಳು ಎಂದು ಹೇಳಿ ಸಾರ್ವಜನಿಕರು ಯಾವುದೇ ವದಂತಿಗಳನ್ನು ನಂಬಬಾರದು ಎಂದು ಮನವಿ ಮಾಡಿದೆ.

ಕೇಂದ್ರ ಮೋಟಾರು ವಾಹನಗಳ ನಿಯಮಗಳು 1989ರ ನಿಯಮ 50ರಡಿ, ಕೇಂದ್ರ ಸರ್ಕಾರವು 2018 ಡಿಸೆಂಬರ್ 4ರಂದು ಅಧಿಸೂಚನೆ ಹೊರಡಿಸಿದ್ದು, 2019 ಏಪ್ರಿಲ್ 1ಕ್ಕಿಂತ ಮುಂಚಿತವಾಗಿ ನೋಂದಾಯಿತವಾಗಿರುವ ಎಲ್ಲಾ ವಾಹನಗಳಿಗೆ HSRP ಅಳವಡಿಕೆ ಕಡ್ಡಾಯಗೊಳಿಸಲಾಗಿದೆ. ಈ ನಿಯಮವನ್ನು ಅನುಸರಿಸಿ, ಕರ್ನಾಟಕ ಸರ್ಕಾರವು 2023 ಆಗಸ್ಟ್ 17ರಂದು ಅಧಿಸೂಚನೆ ಹೊರಡಿಸಿ ರಾಜ್ಯದಲ್ಲಿಯೂ ಇದೇ ನಿಯಮವನ್ನು ಜಾರಿಗೆ ತಂದಿದೆ.

ಇದಕ್ಕೂ ನಡುವೆ, HSRP ಅಳವಡಿಕೆ ಸಂಬಂಧ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ಸರ್ಕಾರವು ಯಾವುದೇ ತರಾತುರಿ ಕ್ರಮ ಕೈಗೊಳ್ಳಬಾರದು ಎಂದು ಸೂಚಿಸಿದೆ. ಆದರೆ, ಈ ಆದೇಶವು HSRP ಕಡ್ಡಾಯ ಆದೇಶವನ್ನು ರದ್ದುಪಡಿಸುವುದಿಲ್ಲ ಎಂಬುದು ಮುಖ್ಯ.

ಸಾರಿಗೆ ಇಲಾಖೆಯ ಪ್ರಕಾರ, ಹೈಕೋರ್ಟ್ ಆದೇಶದಿಂದ ಹೊಸ ಕ್ರಮಗಳನ್ನು ಕೈಗೊಳ್ಳಲು ಅಡ್ಡಿಯಿದ್ದರೂ, HSRP ಅಳವಡಿಕೆ ಕುರಿತ ಅಧಿಸೂಚನೆ ಇನ್ನೂ ಜಾರಿಯಲ್ಲಿಯೇ ಇದೆ. ಆದ್ದರಿಂದ, ಸಾರ್ವಜನಿಕರು ತಮ್ಮ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳುವುದು ಕಡ್ಡಾಯವಾಗಿದೆ.

ವದಂತಿಗಳಿಂದ ಗೊಂದಲಕ್ಕೀಡಾಗಬಾರದು ಎಂದು ಸಾರಿಗೆ ಇಲಾಖೆ ಮತ್ತೊಮ್ಮೆ ಸ್ಪಷ್ಟಪಡಿಸಿದೆ.

Continue Reading

Trending