ದೇಶ
ಪ್ರಧಾನಿ ಮೋದಿಯವರು ಹೇಳಿದ್ದೆಲ್ಲಾ ಎಲ್ಲರೂ ನಂಬಬೇಕಾ? ದಿನೇಶ್ ಗುಂಡೂರಾವ್
ಮಂಗಳೂರು: ಸುಳ್ಳಿನ ಆಧಾರದಲ್ಲಿ ದಂತ ಕಥೆ ಹೇಳುವುದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನಿಸ್ಸೀಮರು ಎಂದು ಸಚಿವ ದಿನೇಶ್ ಗುಂಡೂರಾವ್ ಅವರು ಟೀಕಿಸಿದರು,
ಇಂದು ಮಂಗಳೂರಿನ ಕದ್ರಿ ಉದ್ಯಾನವನದಲ್ಲಿ ತೋಟಗಾರಿಕೆ ಇಲಾಖೆ ಆಯೋಜಿಸಿರುವ ಮೂರು ದಿನಗಳ ಮಾವು ಮೇಳವನ್ನು ಉದ್ಘಾಟಿಸಿದ ಬಳಿಕ ಮಾಧ್ಯಮಗಳಿಗೆ ಪಹಲ್ಗಾಮ್ ದಾಳಿ ನಂತರದ ಬೆಳವಣಿಗೆ ಭಾರತ ಪಾಕ್ ನಡುವಿನ ಕದನ ವಿರಾಮ ಒಪ್ಪಂದ ಬಗ್ಗೆ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಘೋಷಣೆ ವಿಚಾರವನ್ನು ಸಚಿವರು ಉಲ್ಲೇಖಿಸಿದರು,
ದೇಶದ ಜನರು ಈ ಬಗ್ಗೆ ಸ್ಪಷ್ಟ ಉತ್ತರವನ್ನು ಬಯಸುತ್ತಿದ್ದಾರೆ,
ಪಾಕಿಸ್ತಾನದವರು ನಮ್ಮ ಐದು ಜೆಟ್ ಗಳನ್ನು ಹೊಡೆದು ಹಾಕಿದ್ದೇವೆ ಎಂದಿದ್ದಾರೆ, ಇದಕ್ಕೆ ನಮ್ಮ ಪ್ರಧಾನಿಯವರು ಸ್ಪಷ್ಟವಾಗಿ ಉತ್ತರಿಸಲು ತಯಾರಿಲ್ಲ ಎಂದರು,
ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿ ವಿಚಾರದಲ್ಲಿ ಅಮಾಯಕರನ್ನು ಕೊಂದ ಭಯೋತ್ಪಾದಕರನ್ನು ಹುಡಕಿ ಮಣ್ಣುಪಾಲು ಮಾಡುತ್ತೇವೆ ಎಂದು ಪ್ರಧಾನಿ ಹೇಳಿದ್ದು ಏನಾಯಿತು? ನಾವೆಲ್ಲರೂ ಕೇಂದ್ರಕ್ಕೆ ಬೆಂಬಲ ಸೂಚಿಸಿ ಪಾಕ್ ಉಗ್ರರ ವಿರುದ್ಧ ಹೋರಾಡಲು ಸಹಮತ ಸೂಚಿಸಿದ್ದೇವೆ
ಅತ್ತ ನೋಡಿದರೆ ಭಾರತ-ಪಾಕ್ ನಡುವಿನ ಕದನ ವಿರಾಮದ ಬಗ್ಗೆ ಟ್ರಂಪ್ ಬಾರಿ ಮಾಧ್ಯಮಗಳ ಎದುರು ಬಂದು ಮಾತನಾಡಿದುತ್ತಾರೆ, ಅದರೆ ನಮ್ಮ ಪ್ರಧಾನಿಗಳಿಗೆ ಯಾರೂ ಪ್ರಶ್ನೆಗಳನ್ನು ಕೇಳಲು ಆಗಲ್ಲ, ಸರ್ವ ಪಕ್ಷ ಸಭೆ ಕರೆದು ನಮ್ಮೆಲ್ಲ ಪ್ರಶ್ನೆಗಳಿಗೆ ಪ್ರಧಾನಿಯವರು ಉತ್ತರ ನೀಡಬೇಕು, ಮೋದಿಯವರು ಹೇಳಿದ್ದೆಲ್ಲಾ ಎಲ್ಲರೂ ನಂಬಬೇಕಾ? ಇಡೀ ದೇಶದಲ್ಲಿ ಅತೀ ದೊಡ್ಡ ಸುಳ್ಳುಗಾರ ಎಂದರೆ ಅದು ಮೋದಿ ಎಂದು ದಿನೇಶ್ ಗುಂಡೂರಾವ್ ಜರಿದರು..
ದೇಶ
ಯುದ್ಧ ಮಧ್ಯೆ ಸಾಹಸ ಕಾರ್ಯಾಚರಣೆ: ಅಮೆರಿಕಾ ಪೈಲಟ್ ರಕ್ಷಣೆ ಘೋಷಣೆ
ಚುನಾವಣೆ
“ಟ್ರಂಪ್ ಅನುಮತಿ ಇಲ್ಲದೆ ತೈಲ ಖರೀದಿ ಸಾಧ್ಯವಿಲ್ಲ”: ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ
ಅಸ್ಸಾಂ ರಾಜ್ಯದ ಗೋಲಾಘಾಟ್‌ನಲ್ಲಿ ನಡೆದ ರ‍್ಯಾಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕುರಿತು ಉಲ್ಲೇಖಿಸಿದ ಅವರು, “ಟ್ರಂಪ್ ಅನುಮತಿ ಇಲ್ಲದೆ ಭಾರತ ಯಾವುದೇ ದೇಶದಿಂದ ತೈಲ ಖರೀದಿಸಲು ಸಾಧ್ಯವಿಲ್ಲ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದು ಆರೋಪಿಸಿದರು.
ರ‍್ಯಾಲಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, “ಟ್ರಂಪ್ ಬಹಿರಂಗವಾಗಿ ಮೋದಿ ಬಗ್ಗೆ ಹೇಳಿಕೆ ನೀಡಿದ್ದಾರೆ. ನರೇಂದ್ರ ಮೋದಿ ಭಾರತದ ಇಂಧನ ಭದ್ರತೆ ಮತ್ತು ಪ್ರಮುಖ ಮಾಹಿತಿಯನ್ನು ಅಮೆರಿಕದ ಕೈಗೆ ಒಪ್ಪಿಸಿದ್ದಾರೆ,” ಎಂದು ಗಂಭೀರ ಆರೋಪ ಮಾಡಿದರು.
ಇದೇ ವೇಳೆ ಅವರು ಎಪ್ಸ್ಟೀನ್ ಫೈಲ್ ಕುರಿತು ಉಲ್ಲೇಖಿಸಿ, ಟ್ರಂಪ್ ಬಳಿ ಮೋದಿ ಬಗ್ಗೆ ಮಾಹಿತಿಯಿದೆ ಎಂದು ಹೇಳಿರುವುದು ಹೊಸ ವಿವಾದಕ್ಕೆ ಕಾರಣವಾಗಿದೆ. ಜೊತೆಗೆ, ಉದ್ಯಮಿ ಅದಾನಿ ವಿರುದ್ಧ ಅಮೆರಿಕದಲ್ಲಿ ಪ್ರಕರಣ ದಾಖಲಾಗಿರುವುದನ್ನೂ ಅವರು ಪ್ರಸ್ತಾಪಿಸಿದರು.
ಈ ನಡುವೆ ದೇಶದ ವಿವಿಧ ರಾಜ್ಯಗಳಲ್ಲಿ ಚುನಾವಣೆ ಸನ್ನಾಹಗಳು ಜೋರಾಗಿದ್ದು, ಅಸ್ಸಾಂ ಸೇರಿದಂತೆ ಹಲವೆಡೆ ರಾಜಕೀಯ ತಾಪಮಾನ ಏರಿಕೆಯಾಗಿದೆ. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ಟಿಎಂಸಿ ಪ್ರಚಾರ ತೀವ್ರಗೊಳಿಸಿದ್ದು, ಬಿಜೆಪಿ ಕೂಡ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ತೀವ್ರ ಪ್ರಚಾರ ನಡೆಸುತ್ತಿದೆ.
ಒಟ್ಟಿನಲ್ಲಿ, ಈ ಹೇಳಿಕೆ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಬಿಜೆಪಿ-ಕಾಂಗ್ರೆಸ್ ನಡುವಿನ ಮಾತಿನ ಸಮರ ಮತ್ತಷ್ಟು ತೀವ್ರಗೊಳ್ಳುವ ಸೂಚನೆ ನೀಡಿದೆ.
ಕ್ರೀಡೆ
ಐಪಿಎಲ್ ಟಿಕೆಟ್ ದುರ್ಬಳಕೆ: ಶಾಸಕರ ಪಾಸ್ ಸ್ನೇಹಿತರ ಕೈಗೆ!
ಬೆಂಗಳೂರುದಲ್ಲಿ ಐಪಿಎಲ್ ಕ್ರೇಜ್ ಗರಿಷ್ಠ ಮಟ್ಟಕ್ಕೆ ಏರಿರುವ ನಡುವೆಯೇ, ಶಾಸಕರಿಗೆ ನೀಡಲಾದ ಉಚಿತ ಟಿಕೆಟ್ ಪಾಸ್‌ಗಳ ದುರ್ಬಳಕೆಯ ಆರೋಪ ದೊಡ್ಡ ವಿವಾದಕ್ಕೆ ಕಾರಣವಾಗಿದೆ. Indian Premier League ಪಂದ್ಯಗಳಿಗೆ ಸಂಬಂಧಿಸಿದ ಈ ಘಟನೆ ರಾಜಕೀಯ ವಲಯದಲ್ಲೂ ಚರ್ಚೆಗೆ ಗ್ರಾಸವಾಗಿದೆ.
ಈ ಬಾರಿಯ ಐಪಿಎಲ್ ಆರಂಭಕ್ಕೂ ಮುನ್ನ ಕೆಲವು ಶಾಸಕರು ತಮ್ಮ ಹಾಗೂ ಕುಟುಂಬ ಸದಸ್ಯರಿಗೆ ಉಚಿತ ಟಿಕೆಟ್ ನೀಡುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ Karnataka State Cricket Association ವಿಶೇಷ ಅಕ್ರೆಡೆಷನ್ ಕಾರ್ಡ್ ಮಾದರಿಯ ಪಾಸ್‌ಗಳನ್ನು ವಿತರಿಸಿತ್ತು.
ಆದರೆ, ಈ ಪಾಸ್‌ಗಳು ಈಗ ಶಾಸಕರ ಕುಟುಂಬದವರಿಗಷ್ಟೇ ಸೀಮಿತವಾಗದೆ, ಅವರ ಮಕ್ಕಳ ಸ್ನೇಹಿತರ ಕೈಗೆ ಸೇರಿರುವುದು ಬೆಳಕಿಗೆ ಬಂದಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಪೊಲೀಸರು ತಪಾಸಣೆ ನಡೆಸಿದ ವೇಳೆ, ಶಾಸಕರ ಕುಟುಂಬದ ಹೆಸರಿನ ಪಾಸ್ ಹಿಡಿದು ಬಂದಿದ್ದ ಕೆಲ ಯುವಕರ ಮೇಲೆ ಅನುಮಾನ ಮೂಡಿದೆ.
ಪರಿಶೀಲನೆ ವೇಳೆ ಯುವಕರು ತಡಬಡಾಯಿಸಿದ್ದು, ಕೊನೆಯಲ್ಲಿ ತಾವು ಶಾಸಕರ ಮಗನ ಸ್ನೇಹಿತರು ಎಂದು ಒಪ್ಪಿಕೊಂಡಿದ್ದಾರೆ. ಈ ಹಿನ್ನೆಲೆ ಪೊಲೀಸರು ಅವರನ್ನು ಎಚ್ಚರಿಕೆ ನೀಡಿ ಕಳಿಸಿದ್ದಾರೆ.
ಈ ಘಟನೆ ಹಲವಾರು ಪ್ರಶ್ನೆಗಳನ್ನು ಎಬ್ಬಿಸಿದೆ. ಜನಪ್ರತಿನಿಧಿಗಳಿಗಾಗಿ ನೀಡಲಾದ ಸೌಲಭ್ಯವನ್ನು ಅನರ್ಹರು ಬಳಸುವುದು ಸರಿಯೇ? ಎಂಬ ಪ್ರಶ್ನೆ ಕೇಳಿಬರುತ್ತಿದೆ.
ಸಾಮಾನ್ಯ ಜನರು ಟಿಕೆಟ್‌ಗಾಗಿ ಪರದಾಡುತ್ತಿರುವಾಗ, ಉಚಿತ ಪಾಸ್‌ಗಳು ದುರ್ಬಳಕೆಯಾಗುತ್ತಿರುವುದು ಜನರಲ್ಲಿ ಆಕ್ರೋಶಕ್ಕೂ ಕಾರಣವಾಗಿದೆ. ಇದೀಗ KSCA ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂಬ ಒತ್ತಡ ಹೆಚ್ಚಾಗಿದೆ.
-
ದೇಶ1 hour ago“ಚಾಮರಾಜಪೇಟೆಗೆ ಬಂದ್ರೆ ಸುಮ್ಮನೆ ಇರ್ತಿನಾ?”: ಜಮೀರ್ ಟಾಂಗ್, ದಾವಣಗೆರೆ ರಾಜಕೀಯ ಕುತೂಹಲ
-
ದೇಶ1 hour agoಕಾಗದ-ಇಂಕ್ ಬೆಲೆ ಏರಿಕೆ: ಪ್ರಿಂಟಿಂಗ್ ಪ್ರೆಸ್ಗಳಿಗೆ ಶಾಕ್
-
ದೇಶ44 minutes agoಎನ್ಎಂಎಸಿಸಿ ವೇದಿಕೆಯಲ್ಲಿ ನೀತಾ ಅಂಬಾನಿ ಸೀರೆ ಸದ್ದು: ಐವರಿ-ಗೋಲ್ಡ್ ಲುಕ್ ವೈರಲ್
-
ದೇಶ1 hour agoIndian Railways: ರೈಲಲ್ಲೇ ಮದುವೆ ಸಂಭ್ರಮ: Indian Railwaysನಲ್ಲಿ ಹೊಸ ಟ್ರೆಂಡ್!
-
ದೇಶ1 hour ago‘I Love My Daughter’ ಟೀ ಶರ್ಟ್ನಲ್ಲಿ ಸಂಭ್ರಮ: ವಿಚ್ಛೇದನಕ್ಕೆ ಹೊಸ ಅರ್ಥ ನೀಡಿದ ಕುಟುಂಬ
-
ದೇಶ1 hour agoಟ್ರಂಪ್ ದೇಶದಲ್ಲಿ ಭಾರತೀಯರ ಸದ್ದು: ಮೇಯರ್ ರೇಸ್ನಲ್ಲಿ ತಮಿಳುನಾಡಿನ ಕುವರಿ
-
ಚುನಾವಣೆ7 minutes ago“ಟ್ರಂಪ್ ಅನುಮತಿ ಇಲ್ಲದೆ ತೈಲ ಖರೀದಿ ಸಾಧ್ಯವಿಲ್ಲ”: ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ
-
ಕ್ರೀಡೆ30 minutes agoಐಪಿಎಲ್ ಟಿಕೆಟ್ ದುರ್ಬಳಕೆ: ಶಾಸಕರ ಪಾಸ್ ಸ್ನೇಹಿತರ ಕೈಗೆ!
