ರಾಜಕೀಯ
ಎಚ್ಡಿಕೆಗೆ ತಿರುಗೇಟು ಕೊಟ್ಟ ಡಿ.ಕೆ.ಸುರೇಶ್
ಬೆಂಗಳೂರು, ಮೇ 26– ರಾಜ್ಯದಿಂದ ವಸೂಲಿಯಾದ ತೆರಿಗೆಯಲ್ಲಿ ಉತ್ತರ ಭಾರತಕ್ಕೆ 5 ಲಕ್ಷ ಕೋಟಿ ರೂ. ಅನುದಾನ ಹರಿದುಹೋಗಿದೆ. ಅದರಲ್ಲಿ ಕರ್ನಾಟಕಕ್ಕೆ ನ್ಯಾಯೋಚಿತ ಪಾಲು ಕೊಡಿಸಿದರೆ ಚಿನ್ನದ ತಗಡು ಒಡೆಸಲು ಸಾಧ್ಯವಾಗುತ್ತದೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಅವರು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಯವರಿಗೆ ತಿರುಗೇಟು ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ರಾಮನಗರ ಜಿಲ್ಲೆಯ ಹೆಸರು ಬದಲಾದ ತಕ್ಷಣ ಚಿನ್ನದ ತಗಡು ಸಿಗುತ್ತದೆಯೇ? ಎಂದಿದ್ದಾರೆ. ಬೆಂಗಳೂರು ಜಿಲ್ಲೆ ಎಂದರೆ ಯುವಕರಿಗೆ ಉದ್ಯೋಗ ಸಿಗುತ್ತದೆ. ಹೆಸರು ಬದಲಾವಣೆಯಿಂದ ರೈತರು, ಯುವಕರು, ಜನಸಾಮಾನ್ಯರು ಖುಷಿಯಾಗಿದ್ದಾರೆ. ವಿರೋಧಪಕ್ಷಗಳು ಜಿಲ್ಲೆಯ ಹೆಸರಿನಲ್ಲಿ ರಾಜಕೀಯ ಮಾಡುತ್ತಿದೆ. ಇದು ಸರಿಯಲ್ಲ ಎಂದರು.
ಬಿಜೆಪಿಯ ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಇತಿಹಾಸ ಗೊತ್ತಿಲ್ಲ. ರಾಮನಗರಕ್ಕೆ ಈ ಮೊದಲು ವಿಲಾಸ್ಪೇಟೆ ಎಂದು ಹೆಸರಿತ್ತು. ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸಲು ವಿಳಂಬವಾಗುತ್ತಿದೆ. ಅವರಿಗೆ ಅದರ ಬಗ್ಗೆ ಮಾತನಾಡಲಾಗುತ್ತಿಲ್ಲ. ಕೃಷ್ಣ ಮೇಲ್ದಂಡೆ, ಕಳಸಾ ಬಂಡೂರಿ ಯೋಜನೆ ಬಾಕಿ ಇದೆ. ಆ ಬಗ್ಗೆ ಮಾತನಾಡಲಿ, ರಾಮನಗರದ ಬಗ್ಗೆ ಅನಗತ್ಯವಾಗಿ ಗೊಂದಲ ಸೃಷ್ಟಿಸುವುದು ಬೇಕಿಲ್ಲ ಎಂದು ಹೇಳಿದರು.
ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದವರು, ಈಗ ಕೇಂದ್ರ ಸಚಿವರಾಗಿದ್ದಾರೆ. ಉನ್ನತ ಹುದ್ದೆಯಲ್ಲಿದ್ದವರು ಅದಕ್ಕೆ ತಕ್ಕುದಾದ ಮಾತುಗಳನ್ನಾಡಬೇಕು. ಕನ್ನಡಿಗರ ತೆರಿಗೆ ಹಣದಲ್ಲಿ ಕೇಂದ್ರ ಸರ್ಕಾರ ಉತ್ತರ ಭಾರತದ ರಾಜ್ಯಗಳಿಗೆ 5 ಲಕ್ಷ ಕೋಟಿ ರೂ. ಅನುದಾನ ಕೊಟ್ಟಿದೆ. ಕರ್ನಾಟಕಕ್ಕೆ ಕೊಟ್ಟಿರುವ ದುಡ್ಡೆಷ್ಟು? ಎಂದು ಪ್ರಶ್ನಿಸಿದರು.
ಕುಮಾರಸ್ವಾಮಿಯವರು ಕೆಂಗಲ್ ಹನುಮಂತಯ್ಯ ಅವರ ಹೆಸರನ್ನು ಪ್ರಸ್ತಾಪಿಸಿದ್ದಾರೆ. ಕೆಂಗಲ್ ಅವರ ಸೇವೆ ಸದಾ ಸರಣೀಯ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ರಾಮನಗರದಲ್ಲಿ ಕೆಂಗಲ್ ಅವರ ಪ್ರತಿಮೆಯನ್ನೂ ನೋಡಲಿಲ್ಲ. ಈಗ ಮಾತನಾಡುತ್ತಾರೆ. ರಾಜ್ಯಕ್ಕೆ ಕೇಂದ್ರದಿಂದ ಕಳೆದ ವರ್ಷ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಆಗಿದೆ. ನರೇಗಾ ಕೂಲಿ ಕಳೆದ 4 ತಿಂಗಳಿನಿಂದ ಬಂದಿಲ್ಲ. ಇದರ ಬಗ್ಗೆ ಕುಮಾರಸ್ವಾಮಿಯವರು ಗಮನ ಹರಿಸಬೇಕು ಎಂದರು.
ಸಿದ್ದರಾಮಯ್ಯ 5 ವರ್ಷ ಮುಖ್ಯಮಂತ್ರಿಯಾಗಿರುತ್ತಾರೆ, ಜಮೀರ್ ಅಹಮದ್ ಹೇಳಿರುವ ವಿಚಾರಕ್ಕೆ ಇಲ್ಲ ಎಂದು ಯಾರೂ ಹೇಳಿಲ್ಲ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರೇ ಇಂತಹ ಅನವಶ್ಯಕ ಚರ್ಚೆಗಳು ಬೇಡ ಎಂದಿದ್ದಾರೆ ಎಂದು ಸ್ಪಷ್ಟನೆ ನೀಡಿದರು.
ಕೋವಿಡ್ ಹೆಚ್ಚಾಗಿದೆ. ಆಂಧ್ರಪ್ರದೇಶದಲ್ಲಿ ಮಾಸ್ಕ್ ಕಡ್ಡಾಯ ಮಾಡಲಾಗಿದೆ. ಚೀನಾ, ಸಿಂಗಾಪೂರದಲ್ಲಿ ಪ್ರಕರಣಗಳು ಹೆಚ್ಚಾಗಿವೆ. ಕರ್ನಾಟಕಕ್ಕೆ ಕೇಂದ್ರ ಸರ್ಕಾರದಿಂದ ಯಾವ ನಿರ್ದೇಶನ ಬರುತ್ತದೆ ಎಂಬುದನ್ನು ಕಾದು ನೋಡುತ್ತೇವೆ ಎಂದರು.
ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಎಚ್ಎಎಲ್ ಅನ್ನು ಬೆಂಗಳೂರಿನಿಂದ ಆಂಧ್ರಪ್ರದೇಶಕ್ಕೆ ಸ್ಥಳಾಂತರ ಮಾಡಬೇಕು ಎಂದಿರುವುದು ಸರಿಯಲ್ಲ. ಎಚ್ಎಎಲ್ ಆಟದ ವಸ್ತುವಲ್ಲ. ಬಿಇಎಲ್, ಎಚ್ಎಎಲ್ ಕರ್ನಾಟಕದ ಹೆಮೆ. ಅದನ್ನು ಸ್ಥಳಾಂತರ ಮಾಡಲು ಸಾಧ್ಯವಿಲ್ಲ. 50 ವರ್ಷಗಳಿಂದ ಇಲ್ಲಿ ನೆಲೆನಿಂತು ಬೆಳೆದಿವೆ. ಅದಕ್ಕೆ ಪೂರಕವಾದ ವಾತಾವರಣವೂ ಇಲ್ಲಿದೆ. ಒಬ್ಬ ಮುಖ್ಯಮಂತ್ರಿ ಹೇಳಿದಾಕ್ಷಣ ಅದರ ಸ್ಥಳ ಬದಲಾವಣೆ ಸಾಧ್ಯವಿಲ್ಲ ಎಂದರು
ದೇಶ
ತಮಿಳುನಾಡು ಸರ್ಕಾರದ ಹೊಸ ಆದೇಶ: ಸರ್ಕಾರಿ ಶಾಲೆಗಳಲ್ಲಿ ರಾಜಕೀಯ ಚಟುವಟಿಕೆ ಸಂಪೂರ್ಣ ನಿಷೇಧ
ಚೆನ್ನೈ: ತಮಿಳುನಾಡು (Tamil Nadu) ಸರ್ಕಾರವು ಸರ್ಕಾರಿ ಶಾಲೆಗಳ ಶೈಕ್ಷಣಿಕ ವಾತಾವರಣವನ್ನು ಕಾಪಾಡುವ ಉದ್ದೇಶದಿಂದ ಮಹತ್ವದ ಆದೇಶ ಹೊರಡಿಸಿದೆ. ಇನ್ನು ಮುಂದೆ ರಾಜ್ಯದ ಸರ್ಕಾರಿ ಶಾಲೆಗಳು (Government Schools) ಹಾಗೂ ತರಗತಿ ಕೊಠಡಿಗಳಲ್ಲಿ (Classrooms) ರಾಜಕೀಯ ಪಕ್ಷಗಳ ಕಾರ್ಯಕರ್ತರು ಮತ್ತು ಖಾಸಗಿ ವ್ಯಕ್ತಿಗಳ ಪ್ರವೇಶವನ್ನು ಕಟ್ಟುನಿಟ್ಟಾಗಿ ನಿಯಂತ್ರಿಸಲಾಗುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ.
ತಮಿಳುನಾಡು ಶಾಲಾ ಶಿಕ್ಷಣ ಸಚಿವ ರಾಜ್ ಮೋಹನ್ (Raj Mohan) ಹೊರಡಿಸಿರುವ ಸುತ್ತೋಲೆಯ ಪ್ರಕಾರ, ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಜನಪ್ರತಿನಿಧಿಗಳಿಗೆ ಮಾತ್ರ ಶಾಲಾ ಆವರಣ ಪ್ರವೇಶಕ್ಕೆ ಅನುಮತಿ ನೀಡಲಾಗುತ್ತದೆ. ಉಳಿದ ಯಾವುದೇ ರಾಜಕೀಯ ಚಟುವಟಿಕೆ ಅಥವಾ ಖಾಸಗಿ ಕಾರ್ಯಕ್ರಮಗಳಿಗೆ ಶಾಲಾ ಆವರಣವನ್ನು ಬಳಸಲು ಅವಕಾಶ ಇರುವುದಿಲ್ಲ.
ಹೊಸ ನಿಯಮಗಳ ಅನ್ವಯ, ಶಾಲಾ ತರಗತಿ ಕೊಠಡಿಗಳನ್ನು ಯಾವುದೇ ರಾಜಕೀಯ ನಾಯಕರು ಅಥವಾ ನಿರ್ದಿಷ್ಟ ವ್ಯಕ್ತಿಗಳ ಸನ್ಮಾನ, ಹೊಗಳಿಕೆ, ಪ್ರಶಂಸಾ ಕಾರ್ಯಕ್ರಮಗಳು ಅಥವಾ ಹುಟ್ಟುಹಬ್ಬದ ಆಚರಣೆಗಳಿಗೆ ಬಳಸುವುದನ್ನು ನಿಷೇಧಿಸಲಾಗಿದೆ. ಶಿಕ್ಷಣ ಸಂಸ್ಥೆಗಳು ಸಂಪೂರ್ಣವಾಗಿ ವಿದ್ಯಾರ್ಥಿಗಳ ಕಲಿಕೆ ಮತ್ತು ಶೈಕ್ಷಣಿಕ ಚಟುವಟಿಕೆಗಳಿಗೆ ಮಾತ್ರ ಸೀಮಿತವಾಗಿರಬೇಕು ಎಂಬುದನ್ನು ಸರ್ಕಾರ ಪುನರುಚ್ಚರಿಸಿದೆ.
ಇದಲ್ಲದೆ, ಸರ್ಕಾರಿ ಶಾಲೆಗಳಲ್ಲಿ ನಡೆಯುವ ಎಲ್ಲಾ ಕಾರ್ಯಕ್ರಮಗಳು ರಾಜಕೀಯ ತಟಸ್ಥತೆಯನ್ನು ಕಾಯ್ದುಕೊಂಡು, ಶಿಕ್ಷಣ ಮತ್ತು ವಿದ್ಯಾರ್ಥಿಗಳ ಅಭಿವೃದ್ಧಿಗೆ ಸಂಬಂಧಿಸಿದ ವಿಷಯಗಳನ್ನಷ್ಟೇ ಒಳಗೊಂಡಿರಬೇಕು ಎಂದು ಸೂಚಿಸಲಾಗಿದೆ. ಈ ಆದೇಶದ ಅನುಷ್ಠಾನಕ್ಕಾಗಿ ಪಾಲಿಸಬೇಕಾದ ವಿವರವಾದ ಮಾರ್ಗಸೂಚಿಗಳನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಶಿಕ್ಷಣ ಇಲಾಖೆ ತಿಳಿಸಿದೆ.
ಸರ್ಕಾರದ ಈ ಕ್ರಮವು ಶಾಲಾ ಆವರಣದಲ್ಲಿ ರಾಜಕೀಯ ಪ್ರಭಾವವನ್ನು ತಡೆಯುವ ಜೊತೆಗೆ, ವಿದ್ಯಾರ್ಥಿಗಳಿಗೆ ಶಾಂತ ಹಾಗೂ ತಟಸ್ಥ ಶೈಕ್ಷಣಿಕ ವಾತಾವರಣ ಒದಗಿಸುವ ಉದ್ದೇಶ ಹೊಂದಿದೆ.
ದೇಶ
GBA ಚುನಾವಣೆ, ಒತ್ತುವರಿ ತೆರವು, ಮೋಡ ಬಿತ್ತನೆ: CM ಡಿಕೆ ಶಿವಕುಮಾರ್ ಮಹತ್ವದ ಹೇಳಿಕೆ
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಹೊಸ ಮಹಾನಗರ ಪಾಲಿಕೆಗಳ ಚುನಾವಣೆಯನ್ನು ಆಗಸ್ಟ್ ತಿಂಗಳೊಳಗೆ ನಡೆಸುವ ವಿಚಾರದಲ್ಲಿ ಕೆಲವು ತಾಂತ್ರಿಕ ಸವಾಲುಗಳಿದ್ದು, ಸರ್ಕಾರವು ಸುಪ್ರೀಂ ಕೋರ್ಟ್ (Supreme Court) ನೀಡುವ ನಿರ್ದೇಶನಗಳಿಗೆ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (D.K. Shivakumar) ತಿಳಿಸಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಿಬಿಎ ವ್ಯಾಪ್ತಿಯ ಪಾಲಿಕೆ ಚುನಾವಣೆಗಳಿಗೆ ಸರ್ಕಾರ ಅಗತ್ಯ ಸಿದ್ಧತೆ ನಡೆಸಿದೆ. ಆದರೆ ಚುನಾವಣಾ ಆಯೋಗ (Election Commission) ರಾಜ್ಯಾದ್ಯಂತ ನಡೆಸುತ್ತಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಕಾರ್ಯದಿಂದಾಗಿ ಚುನಾವಣಾ ಪ್ರಕ್ರಿಯೆಯಲ್ಲಿ ಸ್ವಲ್ಪ ವಿಳಂಬ ಉಂಟಾಗಿದೆ ಎಂದು ವಿವರಿಸಿದರು.
ಸುಪ್ರೀಂ ಕೋರ್ಟ್ ಈ ಹಿಂದೆ ಆಗಸ್ಟ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ಸೂಚನೆ ನೀಡಿತ್ತು. ಆದರೆ ತಾಂತ್ರಿಕ ಕಾರಣಗಳಿಂದ ಗಡುವನ್ನು ಡಿಸೆಂಬರ್ವರೆಗೆ ವಿಸ್ತರಿಸುವಂತೆ ಅಧಿಕಾರಿಗಳು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಸಿಎಂ, “ನಾನು ಈ ವಿಚಾರದಲ್ಲಿ ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ. ಅಧಿಕಾರಿಗಳು ಮತ್ತು ನ್ಯಾಯಾಲಯದ ಪ್ರಕ್ರಿಯೆಯಂತೆ ಮುಂದಿನ ಕ್ರಮ ನಡೆಯಲಿದೆ” ಎಂದು ಹೇಳಿದರು.
ಇದೇ ವೇಳೆ, ಬೆಂಗಳೂರಿನಲ್ಲಿ ಸಂಚಾರಕ್ಕೆ ಅಡ್ಡಿಯಾಗಿರುವ ಒತ್ತುವರಿಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ತಿಳಿಸಿದರು. ನಗರದಲ್ಲಿ ಸುಮಾರು 60,000 ಬೀದಿಬದಿ ವ್ಯಾಪಾರಿಗಳನ್ನು ಗುರುತಿಸಲಾಗಿದ್ದು, ಅವರಲ್ಲಿ 30,000 ಮಂದಿಗೆ ತಳ್ಳುಗಾಡಿ ಹಾಗೂ ವ್ಯಾಪಾರಕ್ಕೆ ಅಗತ್ಯ ವಾಹನಗಳನ್ನು ವಿತರಿಸಲು ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ಮಾಹಿತಿ ನೀಡಿದರು.
ಮುಖ್ಯ ರಸ್ತೆಗಳಲ್ಲಿ ಶಾಶ್ವತ ಶೆಡ್ ಅಥವಾ ಟೆಂಟ್ಗಳನ್ನು ನಿರ್ಮಿಸಲು ಸುಪ್ರೀಂ ಕೋರ್ಟ್ ನಿರ್ಬಂಧವಿದ್ದು, ಸರ್ಕಾರ ನಿಗದಿಪಡಿಸಿದ ಸ್ಥಳಗಳಲ್ಲಿ ಮಾತ್ರ ವ್ಯಾಪಾರ ನಡೆಸಬೇಕು ಎಂದು ಸಿಎಂ ಸ್ಪಷ್ಟಪಡಿಸಿದರು. ಜೊತೆಗೆ, ಮೋಡ ಬಿತ್ತನೆ, ಬೆಳಗಾವಿಗೆ ವಿಶೇಷ ಪ್ಯಾಕೇಜ್ ಹಾಗೂ ಮುಜರಾಯಿ ದೇವಸ್ಥಾನಗಳ ಹುಂಡಿ ಹಣದ ಭದ್ರತೆ ಕುರಿತು ಸರ್ಕಾರ ಪರಿಶೀಲನೆ ನಡೆಸುತ್ತಿದೆ ಎಂದರು.
ದೇಶ
ಕರ್ನಾಟಕ PRC ಆದೇಶ ಸಂವಿಧಾನ ವಿರೋಧಿ? ಕೇಂದ್ರಕ್ಕೆ ಶೋಭಾ ಕರಂದ್ಲಾಜೆ ಮನವಿ
ಬೆಂಗಳೂರು: ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ‘ಕರ್ನಾಟಕ ಶಾಶ್ವತ ವಸತಿ ಪ್ರಮಾಣಪತ್ರ (Permanent Residence Certificate – PRC) 2026’ ನಿಯಮಾವಳಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರಿಗೆ ಪತ್ರ ಬರೆದಿರುವ ಅವರು, ರಾಜ್ಯ ಸರ್ಕಾರದ ಆದೇಶದ ಸಾಂವಿಧಾನಿಕ ಮಾನ್ಯತೆಯನ್ನು ಪರಿಶೀಲಿಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.
ಶೋಭಾ ಕರಂದ್ಲಾಜೆ ಅವರ ಪತ್ರದ ಪ್ರಕಾರ, ಭಾರತದ ಸಂವಿಧಾನವು ದೇಶದ ಎಲ್ಲ ನಾಗರಿಕರಿಗೆ ಒಂದೇ ಪೌರತ್ವವನ್ನು ನೀಡಿದ್ದು, ರಾಜ್ಯ ಸರ್ಕಾರವು ಪ್ರತ್ಯೇಕವಾಗಿ ‘ಶಾಶ್ವತ ನಿವಾಸಿ’ ಎಂಬ ವರ್ಗವನ್ನು ರೂಪಿಸುವುದು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಸಂವಿಧಾನದ ಸಮಾನತೆಯ ಹಕ್ಕನ್ನು ಪ್ರತಿಪಾದಿಸುವ 14ನೇ ವಿಧಿಗೆ ಈ ನಿಯಮ ಧಕ್ಕೆ ತರುವ ಸಾಧ್ಯತೆ ಇದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ರಾಜ್ಯ ಸರ್ಕಾರ ಹೊರಡಿಸಿರುವ ಅಧಿಸೂಚನೆಯಲ್ಲಿ ಸ್ಥಳೀಯ ಕಂದಾಯ ಅಧಿಕಾರಿಗಳ ಪರಿಶೀಲನೆ ಹಾಗೂ ಸ್ಥಳೀಯ ದಾಖಲೆಗಳ ಆಧಾರದ ಮೇಲೆ ಪ್ರಮಾಣಪತ್ರ ನೀಡಲು ಅವಕಾಶವಿರುವುದರಿಂದ, ಭಾರತೀಯ ಪೌರತ್ವದ ಕಡ್ಡಾಯ ಪರಿಶೀಲನೆಗೆ ಸ್ಪಷ್ಟ ವ್ಯವಸ್ಥೆ ಇಲ್ಲ ಎಂಬ ಆತಂಕವನ್ನೂ ಅವರು ವ್ಯಕ್ತಪಡಿಸಿದ್ದಾರೆ. ಇದರಿಂದ ಅಕ್ರಮ ವಲಸಿಗರು ಅಥವಾ ನಕಲಿ ದಾಖಲೆಗಳನ್ನು ಹೊಂದಿರುವವರು ಸರ್ಕಾರಿ ಸೌಲಭ್ಯಗಳು, ಶಿಕ್ಷಣ ಮತ್ತು ಉದ್ಯೋಗದ ಅವಕಾಶಗಳನ್ನು ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ, PRC ಅಧಿಸೂಚನೆಯ ಸಾಂವಿಧಾನಿಕ ಸಿಂಧುತ್ವವನ್ನು ಪರಿಶೀಲಿಸುವವರೆಗೆ ಅದರ ಅನುಷ್ಠಾನಕ್ಕೆ ತಾತ್ಕಾಲಿಕ ತಡೆ ನೀಡುವಂತೆ ಕೇಂದ್ರ ಗೃಹ ಸಚಿವಾಲಯಕ್ಕೆ ಅವರು ಮನವಿ ಮಾಡಿದ್ದಾರೆ. ಜೊತೆಗೆ, ಈ ನಿಯಮವನ್ನು ಯಾವ ಕಾನೂನು ಅಧಿಕಾರದ ಅಡಿಯಲ್ಲಿ ಜಾರಿಗೆ ತರಲಾಗಿದೆ ಎಂಬ ಬಗ್ಗೆ ಕರ್ನಾಟಕ ಸರ್ಕಾರದಿಂದ ವರದಿ ಪಡೆಯಬೇಕು ಹಾಗೂ ಕೇಂದ್ರ ಏಜೆನ್ಸಿಗಳಿಂದ ಪೌರತ್ವ ಪರಿಶೀಲನೆ ಆಗುವವರೆಗೆ ಯಾವುದೇ ಪ್ರಮಾಣಪತ್ರ ವಿತರಿಸದಂತೆ ಕ್ರಮ ಕೈಗೊಳ್ಳಬೇಕು ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.
-
ದೇಶ21 hours agoGBA ELECTION : ಪಾಲಿಕೆ ಚುನಾವಣೆಗೆ ಮತ್ತೊಂದು ಟ್ವಿಸ್ಟ್! ಆಗಸ್ಟ್ 31 ಗಡುವು ಮೀರುವ ಸಾಧ್ಯತೆ
-
ದೇಶ18 hours ago7 ದಿನದಲ್ಲಿ ವಾಹನ ತೆರವುಗೊಳಿಸಿ, ಇಲ್ಲದಿದ್ದರೆ ಹರಾಜು! ಬೆಂಗಳೂರು ಪೊಲೀಸರ ಖಡಕ್ ಎಚ್ಚರಿಕೆ
-
ದೇಶ16 hours agoಮೈಸೂರು ದಸರಾ ದಿನಾಂಕ ಘೋಷಣೆ: ಸಿಎಂ ನೇತೃತ್ವದ ಸಭೆಯಲ್ಲಿ ಮಹತ್ವದ ನಿರ್ಧಾರ
-
ದೇಶ16 hours agoತಮಿಳುನಾಡು ಸರ್ಕಾರದ ಹೊಸ ಆದೇಶ: ಸರ್ಕಾರಿ ಶಾಲೆಗಳಲ್ಲಿ ರಾಜಕೀಯ ಚಟುವಟಿಕೆ ಸಂಪೂರ್ಣ ನಿಷೇಧ
-
ಕ್ರೀಡೆ21 hours agoಚೆನ್ನೈನಲ್ಲಿ BBL 2026-27 KICK OFF : ಮೆಲ್ಬೋರ್ನ್ ರೆನೆಗೇಡ್ಸ್ vs ಪರ್ತ್ ಸ್ಕಾರ್ಚರ್ಸ್
-
ಅಪರಾಧ22 hours agoಅಪರಾಧಿಗಳಿಗೆ ನಡುಕ ಹುಟ್ಟಿಸಿದ ಬೆಂಗಳೂರು ಪೊಲೀಸರ ತಡರಾತ್ರಿ ಸ್ಪೆಷಲ್ ಆಪರೇಷನ್
-
ಆರೋಗ್ಯ20 hours agoಮೆಡಿಕಲ್ ಶಾಪ್ಗಳಿಗೆ ಹೊಸ ಮಾರ್ಗಸೂಚಿ: ಔಷಧ ಮಾರಾಟದ ದಾಖಲೆ 3 ವರ್ಷ ಕಡ್ಡಾಯ
-
ದೇಶ18 hours agoಕರ್ನಾಟಕ PRC ಆದೇಶ ಸಂವಿಧಾನ ವಿರೋಧಿ? ಕೇಂದ್ರಕ್ಕೆ ಶೋಭಾ ಕರಂದ್ಲಾಜೆ ಮನವಿ
