ಬೆಂಗಳೂರು
1% ಸಹ ಬೇಸರ, ಅಸಮಾಧಾನ ಇಲ್ಲ: ಎಸ್‌ಟಿ ಸೋಮಶೇಖರ್
ಬೆಂಗಳೂರು: ಬಿಜೆಪಿಯಲ್ಲಿ ರೇಪ್ ಮಾಡಿದವರನ್ನು ಉಚ್ಚಾಟನೆ ಮಾಡುವುದಿಲ್ಲ. ನಮ್ಮಂತವರನ್ನು ಉಚ್ಚಾಟನೆ ಮಾಡ್ತಾರೆ ಎಂದು ಯಶವಂತಪುರದ ಬಿಜೆಪಿಯ ಉಚ್ಚಾಟಿತ ಶಾಸಕ ಎಸ್‌ಟಿ ಸೋಮಶೇಖರ್ ಹೇಳಿದರು.
ಬಿಜೆಪಿಯ ಯಶವಂತಪುರದ ಶಾಸಕ ಎಸ್‌ಟಿ ಸೋಮಶೇಖರ್ ಹಾಗೂ ಯಲ್ಲಾಪುರದ ಶಾಸಕ ಶಿವರಾಂ ಹೆಬ್ಬಾರ್ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಎಸ್‌ಟಿ ಸೋಮಶೇಖರ್ ಅವರು, ಉಚ್ಚಾಟನೆಯನ್ನು ನಿರೀಕ್ಷಿಸಿದ್ದೆವು. ಒಳ್ಳೆಯದಾಯ್ತು ಎಂದರು.
1% ಸಹ ಬೇಸರ, ಅಸಮಾಧಾನ ಇಲ್ಲ. ಉಚ್ಚಾಟನೆ ಮಾಡಿದ್ದು ಖುಷಿ ಇದೆ. ಬಿಜೆಪಿಯಲ್ಲಿ ನನ್ನ ಪರವಾಗಿ ಮಾತನಾಡಲು ಯಾರಿಗೂ ಧೈರ್ಯ ಇಲ್ಲ. ಬಿಜೆಪಿಯಲ್ಲಿ ಮಾಡಬಾರದ್ದನ್ನ ಮಾಡಿರೋರು ಯರ‍್ಯಾರೋ ಇದ್ದಾರೆ. ಅತ್ಯಾಚಾರದ ಆರೋಪ ಹೊತ್ತಿರೋರು ಇದ್ದಾರೆ. ಅವರೆಲ್ಲರನ್ನೂ ಬಿಟ್ಟು ನನ್ನ ಉಚ್ಛಾಟನೆ ಮಾಡಿದ್ದಾರೆ ಎಂದು ಹೇಳಿದರು.
ಉಚ್ಚಾಟನೆ ಯಾಕೆ ಮಾಡಿದ್ದೀರಿ ಅಂತಾನೂ ಕೇಳೋದಿಲ್ಲ. ನಾನು ಈಗ ಫ್ರೀ ಬರ್ಡ್ ಆಗಿದ್ದೀನಿ. ಇನ್ನು ಫ್ರೀ ಬರ್ಡ್ ಆಗಿ ಓಡಾಡುತ್ತೇನೆ. ಕಾಂಗ್ರೆಸ್ ಇಲ್ಲ, ಬಿಜೆಪಿ ಇಲ್ಲ ಆರಾಮಾಗಿ ಇದ್ದೇವೆ. ಮುಂದಿನ ನಡೆ ಬಗ್ಗೆ ಈಗ ಯೋಚನೆ ಮಾಡಿಲ್ಲ ಎಂದರು.
ರಾಜ್ಯ
KRS ಡ್ಯಾಂಗೆ ಭಾರೀ ಶಾಕ್! ಒಳಹರಿವು ದಿಢೀರ್ ಕುಸಿತ; ಸದ್ಯದ ನೀರಿನ ಮಟ್ಟ ಎಷ್ಟು ಗೊತ್ತಾ?
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವ ಪರಿಣಾಮ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೃಷ್ಣರಾಜ ಸಾಗರ (KRS) ಜಲಾಶಯಕ್ಕೆ ಹರಿದುಬರುತ್ತಿರುವ ನೀರಿನ ಪ್ರಮಾಣದಲ್ಲಿ ದಿಢೀರ್ ಇಳಿಕೆಯಾಗಿದೆ. ಕೊಡಗು ಸೇರಿದಂತೆ ಕಾವೇರಿ ಕೊಳ್ಳದ ಪ್ರದೇಶಗಳಲ್ಲಿ ಮಳೆ ಕಡಿಮೆಯಾಗಿರುವುದರಿಂದ ಜಲಾಶಯದ ಒಳಹರಿವು ಗಣನೀಯವಾಗಿ ಕುಸಿದಿದೆ.
ಕಳೆದ ಕೆಲವು ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗಿದ್ದ ಹಿನ್ನೆಲೆಯಲ್ಲಿ ಕೆಆರ್‌ಎಸ್ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿದುಬರುತ್ತಿತ್ತು. ಇದರಿಂದ ಜಲಾಶಯದ ನೀರಿನ ಮಟ್ಟವೂ ವೇಗವಾಗಿ ಏರಿಕೆಯಾಗಿತ್ತು.
ಬುಧವಾರ ಬೆಳಿಗ್ಗೆ 9,438 ಕ್ಯೂಸೆಕ್ ಇದ್ದ ಕೆಆರ್‌ಎಸ್ ಜಲಾಶಯದ ಒಳಹರಿವು ಗುರುವಾರ ವೇಳೆಗೆ ಬರೋಬ್ಬರಿ 17,427 ಕ್ಯೂಸೆಕ್‌ಗೆ ಏರಿಕೆಯಾಗಿತ್ತು. ಆದರೆ ಇದೀಗ ಕಾವೇರಿ ಕೊಳ್ಳದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಶುಕ್ರವಾರದ ವೇಳೆಗೆ ಒಳಹರಿವು 10,028 ಕ್ಯೂಸೆಕ್‌ಗೆ ಕುಸಿದಿದೆ.
ಒಂದೇ ದಿನದಲ್ಲಿ ಒಳಹರಿವಿನಲ್ಲಿ ಗಮನಾರ್ಹ ಇಳಿಕೆ ಕಂಡುಬಂದಿರುವುದು ಜಲಾಶಯದ ನೀರಿನ ಲಭ್ಯತೆ ಕುರಿತು ಕುತೂಹಲ ಮೂಡಿಸಿದೆ. ಮುಂದಿನ ದಿನಗಳಲ್ಲಿ ಕೊಡಗು ಹಾಗೂ ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ಉತ್ತಮ ಮಳೆಯಾಗುತ್ತದೆಯೇ ಎಂಬುದರ ಮೇಲೆ ಕೆಆರ್‌ಎಸ್‌ಗೆ ಒಳಹರಿವಿನ ಪ್ರಮಾಣ ಅವಲಂಬಿತವಾಗಿರಲಿದೆ.
110 ಅಡಿ ದಾಟಿದ KRS ನೀರಿನ ಮಟ್ಟ
ಒಳಹರಿವು ಕಡಿಮೆಯಾಗಿದ್ದರೂ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ 110.20 ಅಡಿಗೆ ತಲುಪಿದೆ. ಜಲಾಶಯದ ಗರಿಷ್ಠ ನೀರಿನ ಸಂಗ್ರಹ ಸಾಮರ್ಥ್ಯದ ಮಟ್ಟ 124.80 ಅಡಿಯಾಗಿದೆ.
ಸದ್ಯ ಜಲಾಶಯದಲ್ಲಿ 31.923 ಟಿಎಂಸಿ ನೀರು ಸಂಗ್ರಹವಾಗಿದೆ. 110 ಅಡಿಗೂ ಹೆಚ್ಚು ನೀರು ಸಂಗ್ರಹವಾಗಿರುವುದು ಕಾವೇರಿ ಅಚ್ಚುಕಟ್ಟು ಪ್ರದೇಶದ ರೈತರಿಗೆ ಹಾಗೂ ಮಂಡ್ಯ, ಮೈಸೂರು ಸೇರಿದಂತೆ ಹಲವು ಪ್ರದೇಶಗಳ ಕುಡಿಯುವ ನೀರಿನ ಅಗತ್ಯಗಳಿಗೆ ಸದ್ಯಕ್ಕೆ ಆಶಾದಾಯಕ ಬೆಳವಣಿಗೆಯಾಗಿದೆ.
ಕಳೆದ ಕೆಲವು ದಿನಗಳಲ್ಲಿ ಹೆಚ್ಚಾಗಿದ್ದ ಒಳಹರಿವು ಇದೀಗ ಇಳಿಕೆಯಾಗಿರುವುದರಿಂದ ಜಲಾಶಯದ ನೀರಿನ ಮಟ್ಟ ಮತ್ತು ಒಳಹರಿವಿನ ಮೇಲೆ ರೈತರು ಹಾಗೂ ಅಧಿಕಾರಿಗಳು ನಿಗಾ ಇರಿಸಿದ್ದಾರೆ. ಮುಂದಿನ ಮಳೆಯ ಪ್ರಮಾಣದ ಆಧಾರದ ಮೇಲೆ ಕೆಆರ್‌ಎಸ್ ಜಲಾಶಯದ ಒಳಹರಿವಿನಲ್ಲಿ ಮತ್ತೆ ಏರಿಳಿತವಾಗುವ ಸಾಧ್ಯತೆಯಿದೆ.
ದೇಶ
KPSC Recruitment Scam: ಕಾಂಗ್ರೆಸ್ ಸರ್ಕಾರದ ವಿರುದ್ಧ ಎಚ್‌ಡಿಕೆ ಗಂಭೀರ ಆರೋಪ; ನೇಮಕಾತಿ ದಂಧೆ ಬಯಲು ಎಂದ ಕೇಂದ್ರ ಸಚಿವ
ಬೆಂಗಳೂರು: ಕರ್ನಾಟಕ ಸಾರ್ವಜನಿಕ ಸೇವಾ ಆಯೋಗ KPSC ದಲ್ಲಿ ಅಕ್ರಮ ಹಾಗೂ ನೇಮಕಾತಿ ದಂಧೆ ನಡೆಯುತ್ತಿದೆ ಎಂದು ಆರೋಪಿಸಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. KPSC ಸೇರಿದಂತೆ ಹಲವು ವಿಚಾರಗಳನ್ನು ಪ್ರಸ್ತಾಪಿಸಿದ ಅವರು, ಸರ್ಕಾರದ ಕಾರ್ಯವೈಖರಿಯನ್ನು ಪ್ರಶ್ನಿಸಿದ್ದಾರೆ.
KPSC ಸಂಸ್ಥೆಯ ಮೇಲಿನ ಜನರ ವಿಶ್ವಾಸ ಕಡಿಮೆಯಾಗಿದೆ ಎಂದು ಆರೋಪಿಸಿದ ಎಚ್‌ಡಿಕೆ, ಉದ್ಯೋಗಾಕಾಂಕ್ಷಿಗಳಿಗೆ ಆಯೋಗದ ಬಗ್ಗೆ ಯಾವುದೇ ಭರವಸೆ ಉಳಿದಿಲ್ಲ ಎಂದು ಹೇಳಿದ್ದಾರೆ. KPSC ಸದಸ್ಯರ ನೇಮಕಾತಿಯಲ್ಲಿಯೇ ದೊಡ್ಡ ಮಟ್ಟದ ದಂಧೆ ನಡೆಯುತ್ತಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.
KPSC ಸದಸ್ಯರ ನೇಮಕಕ್ಕೂ ರೇಟ್ ಫಿಕ್ಸ್?
KPSC ಸದಸ್ಯರನ್ನು ನೇಮಕ ಮಾಡುವಾಗ ನಿರ್ದಿಷ್ಟ ದರ ನಿಗದಿಪಡಿಸಲಾಗುತ್ತಿದೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ. ಜಾತಿಯ ಹೆಸರಿನಲ್ಲಿ ಹಾಗೂ ಹಣದ ಆಧಾರದ ಮೇಲೆ ಸದಸ್ಯರ ನೇಮಕಾತಿ ನಡೆಯುತ್ತಿದೆ ಎಂದು ಅವರು ದೂರಿದ್ದಾರೆ.
KPSC ಮೇಲಿನ ಜನರ ನಂಬಿಕೆ ಕಳೆದುಹೋಗಲು ರಾಜ್ಯ ಸರ್ಕಾರವೇ ಕಾರಣ ಎಂದು ಟೀಕಿಸಿರುವ ಅವರು, ನೇಮಕಾತಿ ಪ್ರಕ್ರಿಯೆಯಲ್ಲಿನ ಅಕ್ರಮಗಳ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
73 ಸಾವಿರ ಉದ್ಯೋಗ ಭರವಸೆ ಏನಾಯಿತು?
ರಾಜ್ಯದ ನಾಲ್ಕು ಇಲಾಖೆಗಳ ನೇಮಕಾತಿ ಪ್ರಕ್ರಿಯೆಯನ್ನು ಉಲ್ಲೇಖಿಸಿದ ಎಚ್‌ಡಿಕೆ, ಕಾಂಗ್ರೆಸ್ ಸರ್ಕಾರ ನೀಡಿದ್ದ 73 ಸಾವಿರ ಉದ್ಯೋಗಗಳ ಭರವಸೆ ಏನಾಯಿತು ಎಂದು ಪ್ರಶ್ನಿಸಿದ್ದಾರೆ.
ಭ್ರಷ್ಟಾಚಾರಕ್ಕೆ ಅವಕಾಶವೇ ಇಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳುತ್ತಾರೆ. ಆದರೆ ನೇಮಕಾತಿ ಸೇರಿದಂತೆ ವಿವಿಧ ವಿಚಾರಗಳಲ್ಲಿ ಹೊಸ ತಿದ್ದುಪಡಿಗಳ ಹೆಸರಿನಲ್ಲಿ ಏನು ನಡೆಯುತ್ತಿದೆ ಎಂಬುದನ್ನು ಸರ್ಕಾರ ಗಮನಿಸಬೇಕು ಎಂದು ಅವರು ಹೇಳಿದ್ದಾರೆ.
ಎಂಜಿನಿಯರ್ ನೇಮಕಾತಿಯಲ್ಲೂ ಅಕ್ರಮ ಆರೋಪ
ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ನಾಲ್ವರು ಕಾರ್ಯನಿರ್ವಾಹಕ ಎಂಜಿನಿಯರ್‌ಗಳ ನೇಮಕಾತಿಗೆ ಸಂಬಂಧಿಸಿದಂತೆ ಅಕ್ರಮ ನಡೆದಿದೆ ಎಂದು ಆರೋಪಿಸಿರುವ ಕುಮಾರಸ್ವಾಮಿ, ಇದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಬಿಡುಗಡೆ ಮಾಡಿರುವುದಾಗಿ ತಿಳಿಸಿದ್ದಾರೆ.
ಈ ಇಲಾಖೆಯ ಸಚಿವರಾಗಿ ಹಿಂದೆ ಕಾರ್ಯನಿರ್ವಹಿಸಿದ್ದ ಪ್ರಿಯಾಂಕ್ ಖರ್ಗೆ ಅವರಿಗೆ ನೇಮಕಾತಿಯಲ್ಲಿನ ಅಕ್ರಮದ ಬಗ್ಗೆ ಮಾಹಿತಿ ಇದ್ದರೂ ನೇಮಕಾತಿ ಮಾಡಲಾಗಿದೆ ಎಂದು ಎಚ್‌ಡಿಕೆ ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಿಯಾಂಕ್ ಖರ್ಗೆ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಇದೇ ವೇಳೆ ರಾಜ್ಯದಲ್ಲಿ ಉದ್ಯೋಗ ನೇಮಕಾತಿ ಪ್ರಕ್ರಿಯೆ ಪಾರದರ್ಶಕವಾಗಿರಬೇಕು. ಉದ್ಯೋಗಕ್ಕಾಗಿ ಕಾಯುತ್ತಿರುವ ಸಾವಿರಾರು ಅಭ್ಯರ್ಥಿಗಳ ಭವಿಷ್ಯದೊಂದಿಗೆ ಯಾವುದೇ ರೀತಿಯ ರಾಜಿ ಮಾಡಿಕೊಳ್ಳಬಾರದು ಎಂದು ಅವರು ಹೇಳಿದ್ದಾರೆ.
ದೇಶ
Mangaluru Railway Division: 30 ವರ್ಷಗಳ ಹೋರಾಟಕ್ಕೆ ಜಯ; ರೈಲ್ವೆ ಮಂಡಳಿ ನಿರ್ಧಾರಕ್ಕೆ ಕನ್ನಡಪರ ಸಂಘಟನೆಗಳ ಒತ್ತಾಯ
ಬೆಂಗಳೂರು: Mangaluru ರನ್ನು ನೈಋತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಿ ರೈಲ್ವೆ ಮಂಡಳಿ ಹೊರಡಿಸಿರುವ ಅಧಿಸೂಚನೆಯನ್ನು ಯಾವುದೇ ಬದಲಾವಣೆ ಇಲ್ಲದೆ ಜಾರಿಗೆ ತರಬೇಕು ಎಂದು ಕನ್ನಡಪರ ಸಂಘಟನೆಗಳು ಹಾಗೂ ರೈಲ್ವೆ ಬಳಕೆದಾರರ ಸಮಿತಿ ಒತ್ತಾಯಿಸಿವೆ. ರೈಲ್ವೆ ಮಂಡಳಿಯ ನಿರ್ಧಾರವನ್ನು ಹಿಂಪಡೆಯುವ ಅಥವಾ ಬದಲಿಸುವ ಪ್ರಯತ್ನ ನಡೆದರೆ ತೀವ್ರ ಹೋರಾಟ ನಡೆಸುವುದಾಗಿ ಕರ್ನಾಟಕ ರಕ್ಷಣಾ ವೇದಿಕೆ ಎಚ್ಚರಿಕೆ ನೀಡಿದೆ.
ಮಂಗಳೂರನ್ನು ಕರ್ನಾಟಕದ ರೈಲ್ವೆ ವಲಯಕ್ಕೆ ಸೇರಿಸಬೇಕೆಂಬ ಬೇಡಿಕೆ ಹಲವು ವರ್ಷಗಳಿಂದ ನಡೆಯುತ್ತಿದ್ದು, ಸುಮಾರು 30 ವರ್ಷಗಳ ಹೋರಾಟ ಇದಾಗಿದೆ. ಅಕ್ಟೋಬರ್ 1ರಿಂದ ಜಾರಿಗೆ ಬರುವಂತೆ ಮಂಗಳೂರನ್ನು ನೈಋತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಸೇರಿಸಲು ರೈಲ್ವೆ ಇಲಾಖೆ ನಿರ್ಧರಿಸಿರುವುದು ಈ ಹೋರಾಟಕ್ಕೆ ದೊರೆತ ಪ್ರಮುಖ ಯಶಸ್ಸು ಎಂದು ಸಂಘಟನೆಗಳು ಹೇಳಿವೆ.
ಆದರೆ ಕೇವಲ ರೈಲ್ವೆ ನಕ್ಷೆಯಲ್ಲಿ ಮಂಗಳೂರಿನ ವಿಭಾಗವನ್ನು ಬದಲಾಯಿಸುವುದರಿಂದ ಪ್ರಯೋಜನವಿಲ್ಲ. ಮಂಗಳೂರಿನ ರೈಲ್ವೆ ಮಹತ್ವವನ್ನು ಯಾವುದೇ ರೀತಿಯಲ್ಲಿ ಕಡಿಮೆ ಮಾಡಬಾರದು ಎಂದು ಸಂಘಟನೆಗಳು ಆಗ್ರಹಿಸಿವೆ. ರೈಲು ಸೇವೆಗಳನ್ನು ಕೇರಳ ಅಥವಾ ಕೊಂಕಣ ಭಾಗಕ್ಕೆ ವಿಸ್ತರಿಸುವ ಮೂಲಕ ಮಂಗಳೂರಿನ ಪ್ರಾಮುಖ್ಯತೆ ಕುಗ್ಗಿಸುವ ಪ್ರಯತ್ನ ನಡೆಯಬಾರದು ಎಂದು ಎಚ್ಚರಿಕೆ ನೀಡಲಾಗಿದೆ.
ಕೇರಳದ ಒತ್ತಡಕ್ಕೆ ಮಣಿಯಬೇಡಿ
ಈ ಕುರಿತು ಮಾತನಾಡಿರುವ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ, ಕೇಂದ್ರ ಸರ್ಕಾರದ ಈ ಮಹತ್ವದ ನಿರ್ಧಾರಕ್ಕೆ ರಾಜ್ಯದ ಜನಪ್ರತಿನಿಧಿಗಳು ಕನಿಷ್ಠ ಅಭಿನಂದನೆ ಸಲ್ಲಿಸದಿರುವುದು ದುರದೃಷ್ಟಕರ ಎಂದು ಹೇಳಿದ್ದಾರೆ.
ಕೇರಳದಲ್ಲಿ ಕರ್ನಾಟಕದ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿದ್ದರೂ ರಾಜ್ಯದ ರಾಜಕಾರಣಿಗಳು ಮೌನ ವಹಿಸಿರುವುದು ಖಂಡನೀಯ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರೈಲ್ವೆ ಮಂಡಳಿ ಕೈಗೊಂಡಿರುವ ನಿರ್ಧಾರವನ್ನು ಹಿಂಪಡೆಯಲು ಪ್ರಯತ್ನಿಸಿದರೆ ಕನ್ನಡಿಗರು ಸುಮ್ಮನಿರುವುದಿಲ್ಲ ಎಂದು ನಾರಾಯಣಗೌಡ ಎಚ್ಚರಿಕೆ ನೀಡಿದ್ದಾರೆ. ಮಂಗಳೂರಿನ ಒಂದೇ ಒಂದು ರೈಲು ನಿಲ್ದಾಣವನ್ನೂ ಪಾಲಕ್ಕಾಡ್ ವಿಭಾಗದಲ್ಲಿ ಉಳಿಸುವ ಪ್ರಯತ್ನ ನಡೆದರೂ, ದೆಹಲಿಯ ಜಂತರ್ ಮಂತರ್‌ನಲ್ಲಿ ಕನ್ನಡಿಗರ ಪರವಾಗಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಒಟ್ಟಿನಲ್ಲಿ, ಮಂಗಳೂರಿನ ರೈಲ್ವೆ ವಿಭಾಗಕ್ಕೆ ಸಂಬಂಧಿಸಿದಂತೆ ರೈಲ್ವೆ ಮಂಡಳಿ ಕೈಗೊಂಡಿರುವ ನಿರ್ಧಾರ ಇದೀಗ ಕರ್ನಾಟಕ ಮತ್ತು ಕೇರಳದ ನಡುವೆ ಮತ್ತೊಂದು ಚರ್ಚೆಗೆ ಕಾರಣವಾಗಿದ್ದು, ಮುಂದಿನ ಬೆಳವಣಿಗೆಗಳತ್ತ ರೈಲ್ವೆ ಬಳಕೆದಾರರು ಹಾಗೂ ಕನ್ನಡಪರ ಸಂಘಟನೆಗಳು ಗಮನಹರಿಸಿವೆ.
-
ಬೆಂಗಳೂರು23 ಗಂಟೆಗಳು agoBengaluru ನಲ್ಲಿ ಖಾಲಿ ಸೈಟ್ ಮಾಲೀಕರಿಗೆ ಬಿಗ್ ಶಾಕ್: ಕಸ ತೆರವು ಮಾಡದಿದ್ದರೆ ₹38,400 ದಂಡ, ದೊಡ್ಡ ಸೈಟ್ಗೆ ಲಕ್ಷಕ್ಕೂ ಹೆಚ್ಚು!
-
ಬೆಂಗಳೂರು21 ಗಂಟೆಗಳು agoLiver ಚಿಕಿತ್ಸೆಗೆ ಗುಡ್ ನ್ಯೂಸ್: ಹಲವು ತಜ್ಞರು ಒಂದೇ ಕಡೆ, ರೋಗಿಗಳಿಗೆ ಸುಲಭ ಚಿಕಿತ್ಸೆ
-
ಬೆಂಗಳೂರು2 ಗಂಟೆಗಳು agoMake My Propertyz ಟೈಟಲ್ ಸ್ಪಾನ್ಸರ್; ಮೋಹನ್, ಆಂಜನಪ್ಪ, ಹರೀಶ್, ಸಂತೋಷ್, ಗೌರೀಶ್, Hosa Suddi, ಶಿವಕುಮಾರ್ರಿಂದ ಕ್ರೀಡೆಗೆ ಬೆಂಬಲ!
-
ದೇಶ4 ಗಂಟೆಗಳು agoPM Narendra Modi Foreign Visit: ಮೋದಿ 4 ದಿನಗಳ ವಿದೇಶ ಪ್ರವಾಸ, ಎಸ್ಸಿಒ ಶೃಂಗಸಭೆಯಲ್ಲಿ ಭಾಗಿ
-
ದೇಶ4 ಗಂಟೆಗಳು agoNepal ಭೀಕರ ಪ್ರವಾಹ: ಸಾವಿನ ಸಂಖ್ಯೆ 469ಕ್ಕೆ ಏರಿಕೆ, ಸಾವಿರಕ್ಕೂ ಹೆಚ್ಚು ಮಂದಿ ನಾಪತ್ತೆ!
-
ದೇಶ55 ನಿಮಿಷಗಳು agoNepal Flood Horror: ಮಹಿಳೆಯ ಮೃತದೇಹದಿಂದ ಆಭರಣ ಕಳವು; ವೈರಲ್ ವಿಡಿಯೋ ಆಧರಿಸಿ ಇಬ್ಬರ ಬಂಧನ
-
ಸಿನಿಮಾ3 ಗಂಟೆಗಳು ago‘Toxic’ ವಿರುದ್ಧ ಮಾತನಾಡಿದವರಿಗೆ ಕಾನೂನು ನೋಟಿಸ್? ಚಿತ್ರತಂಡದ ನಡೆಗೆ ಕಾರಣವೇನು?
-
ದೇಶ4 ಗಂಟೆಗಳು agoMantralaya ದಲ್ಲಿ ಭಕ್ತಿಯ ವೈಭವ: ರಾಯರ ಆರಾಧನೆಗೆ ಚಾಲನೆ, ಆಗಸ್ಟ್ 31ಕ್ಕೆ ಮಹಾರಥೋತ್ಸವ
