Connect with us

ದೇಶ

ಮತ್ತೆ ಕೋವಿಡ್ ಹಾಟ್ ಸ್ಪಾಟ್ ಆದ ಬೆಂಗಳೂರು?

Published

on

ಬೆಂಗಳೂರು: ಕೊರೊನಾ ವೈರಸ್ ಸೋಂಕು ಮತ್ತೆ ತನ್ನ ಆಟ ಪ್ರರಂಭಿಸಿದೆ, 2020 ರ ಕೊನೆಯಲ್ಲಿ ಪತ್ತೆ ಯಾದ ವೈರಸ್ ಈ ಹಿಂದೆ ಎರಡು ಅಲೆಗಳ ಮೂಕ ಪ್ರಪಂಚದಾದ್ಯಂತ ಜನರನ್ನು ನಿದ್ದೆಗೆಡಿಸಿತ್ತು, ಲಕ್ಷಾಂತರ ಜನರ ಬಲಿ ಪಡೆದಿತ್ತು, ಇದೀಗ ಕೋವಿಡ್ ಸೋಂಕು ಮತ್ತೆ ಏರಿಕೆ ಯಾಗಿ ವಿಶ್ವವನ್ನು ಮತ್ತೆ ನಡುಗಿಸುತ್ತಿದೆ, ಕರ್ನಾಟಕದಲ್ಲೂ ಪ್ರಕರಣಗಳ ಏರಿಕೆ ಕಂಡುಬರುತ್ತಿದ್ದು, ರಾಜಧಾನಿ ಬೆಂಗಳೂರಿನಲ್ಲಿ 200 ಕ್ಕೂ ಹೆಚ್ಚು ಪ್ರಕರಣ ಈಗಾಗಲೇ ವರದಿಯಾಗಿದೆ,
ರಾಜ್ಯದಲ್ಲಿ ದಾಖಲಾಗುವ ಒಟ್ಟು ಕೊರೊನಾ ಪ್ರಕರಣಗಳಲ್ಲಿ 75 ಕ್ಕಿಂತ ಹೆಚ್ಚು ಬೆಂಗಳೂರಿನಲ್ಲಿಯೇ ಪತ್ತೆಯಾಗಿವೆ, ಕಳೆದ 20 ದಿನಗಳಲ್ಲಿ ರಾಜ್ಯದಲ್ಲಿ 171 ಕ್ಕಿಂತ ಹೆಚ್ಚು ಪ್ರಕರಣಗಳು ದೃಢಪಟ್ಟಿದ್ದು, ಪ್ರತಿ ದಿನ 36 ಕ್ಕೂ ಹೆಚ್ಚು ಹೊಸ ಕೋವಿಡ್ ಪ್ರಕರಣಗಳ ದಾಖಲಾಗುತ್ತಿವೆ, ಈ ಪೈಕಿ ಬೆಂಗಳೂರಿನಲ್ಲಿಯೇ 25 ಕ್ಕೂ ಹೆಚ್ಚು ಪ್ರಕರಣಗಳು ಕಂಡುಬರುತ್ತಿವೆ, ಇದೀಗ ರಾಜಧಾನಿಯಲ್ಲಿ ಕಟ್ಟುನಿಟ್ಟಾಗಿ ಮುನ್ನೆಚ್ಚರಿಕಾ ಕ್ರಮಗಳನ್ನು ಕ್ರಮಗಳನ್ನು ತೆಗೆದುಕೊಳ್ಳುವ ಅಗತ್ಯವಿದೆ,
ಬೆಂಗಳೂರಿನಲ್ಲಿಯೇ ಅತಿ ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿರುವ ಕಾರಣ ನಗರದ ಕೆಲವು ಆಸ್ಪತ್ರೆಗಳಲ್ಲಿ ಫಿವರ್ ಕ್ಲಿನಿಕ್ ಕೂಡಾ ಆರಂಭ ಮಾಡಲಾಗಿದೆ, ಶೀತ, ಕೆಮ್ಮು, ಜ್ವರ, ಮೈಕೈ ನೋವು ಇರುವವರಿಗೆ ಫಿವರ್ ಕ್ಲಿನಿಕಗಳಲ್ಲಿ ಚಿಕಿತ್ಸೆ ನೀಡಲು ವ್ಯವಸ್ಧೆ ಮಾಡಲಾಗಿದೆ,

ದೇಶ

ಡಿಕೆಶಿಗೆ ಹೊಸ ಸವಾಲಾ? ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಜಾರಕಿಹೊಳಿ ಲಾಬಿ

Published

on

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಹಾಗೂ ಪವರ್‌ ಶೇರಿಂಗ್‌ ಚರ್ಚೆಗಳು ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ ಲೋಕೋಪಯೋಗಿ ಸಚಿವ Satish Jarkiholi ದಿಢೀರ್‌ ದೆಹಲಿಗೆ ತೆರಳಿರುವುದು ರಾಜಕೀಯ ವಲಯದಲ್ಲಿ ಭಾರಿ ಕುತೂಹಲ ಮೂಡಿಸಿದೆ.

ಮುಖ್ಯಮಂತ್ರಿ Siddaramaiah ಹಾಗೂ ಉಪ ಮುಖ್ಯಮಂತ್ರಿ D. K. Shivakumar ಅವರ ಇತ್ತೀಚಿನ ದೆಹಲಿ ಪ್ರವಾಸದ ಬೆನ್ನಲ್ಲೇ ಜಾರಕಿಹೊಳಿ ಹೈಕಮಾಂಡ್‌ ನಾಯಕರನ್ನು ಭೇಟಿಯಾಗಲು ಮುಂದಾಗಿರುವುದು ಕಾಂಗ್ರೆಸ್‌ನಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನ ಕುರಿತ ಚರ್ಚೆ ಮತ್ತೆ ವೇಗ ಪಡೆದುಕೊಂಡಿದ್ದು, ಪಕ್ಷದೊಳಗಿನ ಸಮೀಕರಣಗಳು ಬದಲಾಗುವ ಸಾಧ್ಯತೆಗಳ ಬಗ್ಗೆ ಮಾತುಕತೆ ಜೋರಾಗಿದೆ.

ಪ್ರಸ್ತುತ ಡಿ.ಕೆ. ಶಿವಕುಮಾರ್ ಅವರೇ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿದಿದ್ದರೂ, ಮುಂಬರುವ ಚುನಾವಣಾ ರಾಜಕಾರಣದ ದೃಷ್ಟಿಯಿಂದ ಪೂರ್ಣಾವಧಿ ಅಧ್ಯಕ್ಷರನ್ನು ನೇಮಕ ಮಾಡುವ ಅಗತ್ಯವಿದೆ ಎಂಬ ಅಭಿಪ್ರಾಯ ಕಾಂಗ್ರೆಸ್‌ ವಲಯದಲ್ಲಿ ಕೇಳಿಬರುತ್ತಿದೆ. ಇದೇ ಹಿನ್ನೆಲೆ ಅಹಿಂದ ಹಾಗೂ ವಾಲ್ಮೀಕಿ ಸಮುದಾಯದ ಪ್ರಭಾವಿ ನಾಯಕನಾಗಿ ಗುರುತಿಸಿಕೊಂಡಿರುವ ಸತೀಶ್ ಜಾರಕಿಹೊಳಿ ತಮ್ಮ ಪರ ಲಾಬಿ ಆರಂಭಿಸಿದ್ದಾರೆ ಎನ್ನಲಾಗಿದೆ.

ಸಿದ್ದರಾಮಯ್ಯ ಆಪ್ತ ವಲಯದ ಪ್ರಮುಖ ನಾಯಕರಲ್ಲಿ ಒಬ್ಬರಾಗಿರುವ ಜಾರಕಿಹೊಳಿ ಅವರ ದೆಹಲಿ ಭೇಟಿ, ಡಿಕೆಶಿ ಬಣಕ್ಕೆ ಹೊಸ ಸವಾಲು ತಂದೊಡ್ಡಿದೆ ಎಂಬ ರಾಜಕೀಯ ವಿಶ್ಲೇಷಣೆಗಳು ಕೇಳಿಬರುತ್ತಿವೆ. ಎಐಸಿಸಿ ಅಧ್ಯಕ್ಷ Mallikarjun Kharge ಸೇರಿದಂತೆ ಹಿರಿಯ ಕಾಂಗ್ರೆಸ್‌ ನಾಯಕರನ್ನು ಭೇಟಿಯಾಗಿ ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಲಿದ್ದಾರೆ ಎನ್ನಲಾಗಿದೆ.

ಒಟ್ಟಿನಲ್ಲಿ ಜಾರಕಿಹೊಳಿ ಅವರ ದೆಹಲಿ ಪ್ರವಾಸ ಕಾಂಗ್ರೆಸ್‌ನೊಳಗಿನ ನಾಯಕತ್ವ ಚರ್ಚೆಗೆ ಮತ್ತಷ್ಟು ವೇಗ ನೀಡಿದ್ದು, ಮುಂದಿನ ದಿನಗಳಲ್ಲಿ ರಾಜ್ಯ ರಾಜಕಾರಣದಲ್ಲಿ ಹೊಸ ತಿರುವು ಸಿಗುವ ಸಾಧ್ಯತೆಗಳಿವೆ.

Continue Reading

ದೇಶ

ಕದನ ವಿರಾಮ ಮಾತುಕತೆ ಮಧ್ಯೆಯೇ US ಏರ್‌ಸ್ಟ್ರೈಕ್‌; ಬಂದರ್‌ ಅಬ್ಬಾಸ್‌ನಲ್ಲಿ ಸ್ಫೋಟ

Published

on

ಟೆಹ್ರಾನ್‌: ಇರಾನ್‌ ಜೊತೆಗಿನ ಕದನ ವಿರಾಮ ಹಾಗೂ ಉದ್ವಿಗ್ನತೆ ಶಮನಕ್ಕೆ ಸಂಬಂಧಿಸಿದ ಮಾತುಕತೆಗಳು ಅಂತಿಮ ಹಂತ ತಲುಪಿದ್ದಾಗಲೇ ಅಮೆರಿಕ ಮತ್ತೆ ಭಾರೀ ವೈಮಾನಿಕ ದಾಳಿ ನಡೆಸಿದ್ದು, ಮಧ್ಯಪ್ರಾಚ್ಯದಲ್ಲಿ ಆತಂಕ ಹೆಚ್ಚಿಸಿದೆ. ದಕ್ಷಿಣ ಇರಾನ್‌ನ ಮಿಲಿಟರಿ ನೆಲೆಗಳು, ಕ್ಷಿಪಣಿ ಉಡಾವಣಾ ತಾಣಗಳು ಹಾಗೂ ಹಾರ್ಮುಜ್‌ ಜಲಸಂಧಿಯಲ್ಲಿ ಜಲಬಾಂಬ್‌ಗಳನ್ನು ನಿಯೋಜಿಸುತ್ತಿದ್ದ ಬೋಟ್‌ಗಳನ್ನು ಗುರಿಯಾಗಿಸಿ ಅಮೆರಿಕ ಸೇನೆ ಕಾರ್ಯಾಚರಣೆ ನಡೆಸಿದೆ.

ಭಾರತೀಯ ಕಾಲಮಾನ ಮಂಗಳವಾರ ಮುಂಜಾನೆ ನಡೆದ ಈ ದಾಳಿಯಲ್ಲಿ ಇರಾನ್‌ನ ಕ್ರಾಂತಿಕಾರಿ ಗಾರ್ಡ್‌ ಕಾರ್ಪ್ಸ್‌ (IRGC) ಬಳಕೆ ಮಾಡುತ್ತಿದ್ದ ಎರಡು ಬೋಟ್‌ಗಳನ್ನು ಅಮೆರಿಕ ನಾಶಪಡಿಸಿದೆ ಎಂದು ವರದಿಯಾಗಿದೆ. ಹಾರ್ಮುಜ್‌ ಜಲಸಂಧಿಯಲ್ಲಿ ಗಣಿಗಳನ್ನು ಅಳವಡಿಸುತ್ತಿದ್ದ ಮಾಹಿತಿ ಲಭಿಸಿದ ತಕ್ಷಣ ಅಮೆರಿಕ ಪಡೆಗಳು ಕಾರ್ಯಾಚರಣೆ ಆರಂಭಿಸಿವೆ ಎಂದು ಯುಎಸ್‌ ಸೆಂಟ್ರಲ್ ಕಮಾಂಡ್‌ (CENTCOM) ತಿಳಿಸಿದೆ.

ಇದೇ ವೇಳೆ ಬಂದರ್‌ ಅಬ್ಬಾಸ್‌ನಲ್ಲಿರುವ ಕ್ಷಿಪಣಿ ಉಡಾವಣಾ ತಾಣಗಳ ಮೇಲೂ ಅಮೆರಿಕದ ಫೈಟರ್‌ ಜೆಟ್‌ಗಳು ದಾಳಿ ನಡೆಸಿವೆ. ಈ ಕಾರ್ಯಾಚರಣೆಯಲ್ಲಿ ಕ್ಷಿಪಣಿ ಲಾಂಚರ್‌ಗಳು ಹಾಗೂ ಮಿಲಿಟರಿ ಮೂಲಸೌಕರ್ಯಗಳಿಗೆ ಭಾರೀ ಹಾನಿಯಾಗಿದೆ. ಸ್ಫೋಟಗಳ ಪರಿಣಾಮ ದಟ್ಟ ಹೊಗೆ ಆಕಾಶಕ್ಕೆ ಚಿಮ್ಮಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿವೆ.

ಈ ದಾಳಿ ಆತ್ಮರಕ್ಷಣೆಯ ಭಾಗವಾಗಿದ್ದು, ಯುದ್ಧವನ್ನು ವಿಸ್ತರಿಸುವ ಉದ್ದೇಶ ನಮ್ಮದಲ್ಲ ಎಂದು CENTCOM ಸ್ಪಷ್ಟಪಡಿಸಿದೆ. ಆದರೆ ಅಮೆರಿಕದ ಕ್ರಮ ಇರಾನ್‌ನನ್ನು ಮತ್ತಷ್ಟು ಕೆರಳಿಸಿದ್ದು, ಮತ್ತೆ ಯುದ್ಧ ಪ್ರಾರಂಭವಾಗಬಹುದೇ ಎಂಬ ಆತಂಕ ಜಾಗತಿಕ ಮಟ್ಟದಲ್ಲಿ ಹೆಚ್ಚಾಗಿದೆ.

ಈ ನಡುವೆ ಅಮೆರಿಕ ಅಧ್ಯಕ್ಷ Donald Trump ತಮ್ಮ ‘ಟ್ರುಥ್‌’ ಸಾಮಾಜಿಕ ಜಾಲತಾಣದಲ್ಲಿ ದಾಳಿಯ ಚಿತ್ರ ಹಂಚಿಕೊಂಡು “ಇದು ಟ್ರಂಪ್‌ ನೀತಿ” ಎಂದು ಪೋಸ್ಟ್‌ ಮಾಡಿರುವುದು ಮತ್ತಷ್ಟು ಚರ್ಚೆಗೆ ಕಾರಣವಾಗಿದೆ.

Continue Reading

ಕ್ರೀಡೆ

ಕೊಹ್ಲಿಗೆ ಜೊತೆಯಾಗೋದು ಯಾರು? ಆರ್ಸಿಬಿ ಪ್ಲೇಯಿಂಗ್ ಇಲೆವೆನ್ ಗೊಂದಲ

Published

on

ಐಪಿಎಲ್ 2026ರ ಮೊದಲ ಕ್ವಾಲಿಫೈಯರ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಧರ್ಮಶಾಲಾದ ಹೆಚ್‌ಪಿಸಿಎ ಮೈದಾನದಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿವೆ. ಈ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಆರ್ಸಿಬಿ ತಂಡದಲ್ಲಿ ಆರಂಭಿಕ ಬ್ಯಾಟರ್ ಆಯ್ಕೆಯೇ ದೊಡ್ಡ ಚರ್ಚೆಯ ವಿಷಯವಾಗಿದೆ.

ಗಾಯದ ಕಾರಣ ಕಳೆದ ಕೆಲವು ಪಂದ್ಯಗಳಿಂದ ಹೊರಗುಳಿದಿದ್ದ ಇಂಗ್ಲೆಂಡ್ ಆಟಗಾರ ಫಿಲ್ ಸಾಲ್ಟ್ ಇದೀಗ ತಂಡಕ್ಕೆ ಮರಳಿದ್ದಾರೆ. ಆದರೆ ಅವರು ಗುಜರಾತ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವರೇ ಎಂಬುದರ ಬಗ್ಗೆ ಇನ್ನೂ ಅಂತಿಮ ನಿರ್ಧಾರವಾಗಿಲ್ಲ. ಈ ಬಗ್ಗೆ ಮಾತನಾಡಿರುವ ಆರ್ಸಿಬಿ ನಾಯಕ Rajat Patidar, “ಫಿಲ್ ಸಾಲ್ಟ್ ಗಾಯದಿಂದ ಚೇತರಿಸಿಕೊಂಡಿದ್ದಾರೆ. ಅವರು ನೆಟ್ಸ್‌ನಲ್ಲಿ ಅಭ್ಯಾಸ ನಡೆಸುತ್ತಿದ್ದಾರೆ. ಆದರೆ ವೈದ್ಯಕೀಯ ತಂಡದ ನಿಗಾದಲ್ಲಿದ್ದು, ಪಿಚ್ ಪರಿಸ್ಥಿತಿ ನೋಡಿ ಅಂತಿಮ ತೀರ್ಮಾನ ಕೈಗೊಳ್ಳುತ್ತೇವೆ” ಎಂದು ತಿಳಿಸಿದ್ದಾರೆ.

ಆರ್ಸಿಬಿ ಪರ ಆರಂಭಿಕನಾಗಿ Virat Kohli ಕಣಕ್ಕಿಳಿಯುವುದು ಖಚಿತವಾಗಿದೆ. ಆದರೆ ಅವರ ಜೊತೆಗೆ ಫಿಲ್ ಸಾಲ್ಟ್ ಅಥವಾ ವೆಂಕಟೇಶ್ ಅಯ್ಯರ್ ಯಾರಿಗೆ ಅವಕಾಶ ಸಿಗಲಿದೆ ಎಂಬ ಕುತೂಹಲ ಹೆಚ್ಚಾಗಿದೆ. ಜೇಕಬ್ ಬೆಥೆಲ್ ಗಾಯಗೊಂಡು ಹೊರಗುಳಿದ ಹಿನ್ನೆಲೆ, ಕಳೆದ ಪಂದ್ಯದಲ್ಲಿ ವೆಂಕಟೇಶ್ ಅಯ್ಯರ್ ಉತ್ತಮ ಆರಂಭ ಒದಗಿಸಿದ್ದರು.

ಇದೀಗ ಸಾಲ್ಟ್‌ಗೆ ಅವಕಾಶ ನೀಡಬೇಕಾದರೆ ಇನ್‌ಫಾರ್ಮ್‌ನಲ್ಲಿರುವ ಅಯ್ಯರ್ ಅವರನ್ನು ಕೈಬಿಡಬೇಕಾಗಬಹುದು ಅಥವಾ ಇಂಪ್ಯಾಕ್ಟ್ ಪ್ಲೇಯರ್ ಪಟ್ಟಿಗೆ ಸೇರಿಸಬೇಕಾಗಬಹುದು. ಹೀಗಾಗಿ ಆರಂಭಿಕರ ಆಯ್ಕೆಯೇ ಆರ್ಸಿಬಿ ಮ್ಯಾನೇಜ್ಮೆಂಟ್‌ಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ಧರ್ಮಶಾಲಾ ಪಿಚ್ ಪರಿಸ್ಥಿತಿಯನ್ನಾಧರಿಸಿ ಅಂತಿಮ ಪ್ಲೇಯಿಂಗ್ ಇಲೆವೆನ್ ಪ್ರಕಟವಾಗಲಿದ್ದು, ಆರ್ಸಿಬಿ ಪರ ಕೊಹ್ಲಿ ಜೊತೆ ಇನಿಂಗ್ಸ್ ಆರಂಭಿಸುವ ಆಟಗಾರ ಯಾರು ಎಂಬುದೇ ಈಗ ಅಭಿಮಾನಿಗಳಲ್ಲಿ ಭಾರೀ ಕುತೂಹಲ ಮೂಡಿಸಿದೆ.

Continue Reading

Trending