ದೇಶ
ಪಾಕಿಸ್ತಾನ ಎಷ್ಟು ರಫೇಲ್ ಹೊಡೆದುರುಳಿಸಿದೆ? ವಿವಾದ ಸೃಷ್ಟಿಸಿದ ರೇವಂತ್ ರೆಡ್ಡಿ!
ಹೈದರಾಬಾದ್: ಭಾರತ ಆಪರೇಷನ್ ಸಿಂಧೂರ್ ನಡೆಸಿ ಪಾಕಿಸ್ತಾನವನ್ನು ಅಕ್ಷರಶಃ ಬೆಚ್ಚಿಬೀಳಿಸಿದೆ, ಅದರೆ ಭಾರತದ ಕಾರ್ಯಾಚರಣೆಯಲ್ಲಿ ಪಾಕಿಸ್ತಾನ ಸೇನೆ ಎಷ್ಟು ರಫೇಲ್ ಫೈಟರ್ ಜೆಟ್‍ಗಳನ್ನು ಹೊಡೆದುರುಳಿಸಿದೆ ಎಂಬುದನ್ನು ಪ್ರಧಾನಿ ನರೇಂದ್ರಮೋದಿ 140 ಕೋಟಿ ಭಾರತೀಯರಿಗೆ ತಿಳಿಸಬೇಕು ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಒತ್ತಾಯಿಸಿದ್ದಾರೆ, ಇದರೊಂದಿಗೆ ಕಾಂಗ್ರೆಸ್ ಮತ್ತೊಂದು ವಿವಾದ ಮೈಮೇಲೆ ಎಳೆದುಕೊಂಡಿದೆ,
ಮೋದಿಯವರ ಆಪ್ತರ ಜೊತೆ ಸಾವಿರಾರು ಕೋಟಿ ಮೌಲ್ಯದ ಒಪ್ಪಂದಗಳನ್ನು ಮಾಡಿಕೊಳ್ಳಲಾಯಿತು, ನಂತರ ಭಾರತ ರಫೇಲ್ ವಿಮಾನಗಳನ್ನು ಖರೀದಿಸಿತು, ನಾಲ್ಕು ದಿನಗಳ ಯುದ್ಧದ ನಂತರ ಯಾರು ಯಾರನ್ನು ಬೆದರಿಸಿದರು ಮತ್ತು ಯಾರು ಯಾರಿಗೆ ಶರಣಾದರು ಎಂಬುದು ನಮಗೆ ಗೊತ್ತೇ ಆಗಲಿಲ್ಲ, ಅದರೆ ಇದ್ದಕ್ಕಿಂದ್ದಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೊರಬಂದು ಭಾರತಕ್ಕೆ ಬೆದರಿಕೆ ಹಾಕಿ ಯುದ್ಧ ನಿಲ್ಲಿಸಿದ್ದೇನೆ ಎನ್ನುತ್ತಿದ್ದಾರೆ ಎಂದು ರೇವಂತ್ ರೆಡ್ಡಿ ಹೇಳಿದ್ರು,
ಹೈದರಾಬಾದ್ ನಲ್ಲಿ ಮಾತನಾಡಿದ ರೇವಂತ್ ರೆಡ್ಡಿ ಪಾಕಿಸ್ತಾನದ ವಿರುದ್ಧ ಯುದ್ಧಕ್ಕೆ ಹೋಗುವ ಮೊದಲು ಸರ್ವಪಕ್ಷ ಸಭೆಗೆ ಕರೆ ನೀಡಿದ್ದ ಪ್ರಧಾನಿ ನರೇಂದ್ರಮೋದಿ ನೆರೆಯ ದೇಶದೊಂದಿಗಿನ ಸಶಸ್ತ್ರ ಸಂಘರ್ಷವನ್ನು ನಿಲ್ಲಿಸುವ ಮೊದಲು ಯಾಕೆ ಸರ್ವಪಕ್ಷ ಸಭೆಗೆ ಕರೆಯಲಿಲ್ಲ? 140 ಕೋಟಿ ಭಾರತೀಯರ ಆಗ್ರಹದಂತೆ ಬಲೂಚಿಸ್ತಾನವನ್ನು ಪಾಕಿಸ್ತಾನದಿಂದ ಬೇರ್ಪಡಿಸಲು ಯಾಕೆ ಸಹಾಯ ಮಾಡುತ್ತಿಲ್ಲ? ಪಾಕ್ ಆಕ್ರಮಿತ ಕಾಶ್ಮೀರ ಮೇಲೆ ಹಿಡಿತ ಸಾಧಿಸಲು ಮೋದಿ ಮತ್ತೆ ವಿಫಲರಾಗಿದ್ದಾರೆ ಎಂದು ರೇವಂತ್ ರೆಡ್ಡಿ ಆರೋಪಿಸಿದ್ದಾರೆ.
ದೇಶ
“ನಾನು ಮಗಳನ್ನು ಕಳೆದುಕೊಂಡೆ, ಮಮತಾ ಕುರ್ಚಿ ಕಳೆದುಕೊಂಡರು”; ವೈದ್ಯೆಯ ತಾಯಿ ಭಾವುಕ ಪೋಸ್ಟ್
ಕೋಲ್ಕತ್ತಾ: ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಮೃತಪಟ್ಟ ಟ್ರೈನಿ ವೈದ್ಯೆಯ ತಾಯಿ Ratna Debnath ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಭಾವುಕ ಪೋಸ್ಟ್ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. “ಇಂದು ನಾನು ಮತ್ತು Mamata Banerjee ಇಬ್ಬರೂ ದುಃಖಿತರಾಗಿದ್ದೇವೆ. ನಾನು ನನ್ನ ಮಗಳನ್ನು ಕಳೆದುಕೊಂಡಿದ್ದೇನೆ. ಅವರು ತಮ್ಮ ಸಿಎಂ ಕುರ್ಚಿಯನ್ನು ಕಳೆದುಕೊಂಡಿದ್ದಾರೆ” ಎಂದು ಬರೆದುಕೊಂಡಿದ್ದಾರೆ.
ಇತ್ತೀಚಿನ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ರತ್ನ ದೇಬನಾಥ್ ಭರ್ಜರಿ ಗೆಲುವು ಸಾಧಿಸಿದ್ದು, ಬಳಿಕ ತೃಣಮೂಲ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನ್ಯಾಯಕ್ಕಾಗಿ ಹೋರಾಡುವ ಉದ್ದೇಶದಿಂದಲೇ ರಾಜಕೀಯಕ್ಕೆ ಬಂದಿರುವುದಾಗಿ ಅವರು ತಿಳಿಸಿದ್ದಾರೆ.
ಸೋಶಿಯಲ್ ಮೀಡಿಯಾ ಪೋಸ್ಟ್‌ನಲ್ಲಿ ಅವರು, “ಇಂದು ನಬನ್ನಾದ 14ನೇ ಮಹಡಿಯಲ್ಲಿ ಮುಖ್ಯಮಂತ್ರಿ ಜೊತೆ ಸಭೆ ನಡೆಸುತ್ತಿರುವವರು Suvendu Adhikari. ಅನ್ಯಾಯದ ವಿರುದ್ಧ ತಾಳ್ಮೆಯಿಂದ ಹೋರಾಡಿದರೆ ಸತ್ಯ ಗೆಲ್ಲುತ್ತದೆ” ಎಂದು ಉಲ್ಲೇಖಿಸಿದ್ದಾರೆ.
ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಾಸಕಿಯಾಗಿರುವ ಸಂತೋಷಕ್ಕಿಂತ ಮಗಳ ಸಾವಿನ ನೋವೇ ದೊಡ್ಡದು ಎಂದು ಭಾವುಕರಾದರು. “ನನ್ನ ಏಕೈಕ ಗುರಿ ಮಗಳ ಸಾವಿಗೆ ನ್ಯಾಯ ದೊರಕಿಸುವುದು. ಮಹಿಳೆಯರ ಸುರಕ್ಷತೆಗಾಗಿ ಹೋರಾಡಲು ನಾನು ರಾಜಕೀಯಕ್ಕೆ ಬಂದಿದ್ದೇನೆ” ಎಂದು ಹೇಳಿದರು.
2024ರ ಆಗಸ್ಟ್‌ನಲ್ಲಿ ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನ ಸೆಮಿನಾರ್ ಕೊಠಡಿಯಲ್ಲಿ ಟ್ರೈನಿ ವೈದ್ಯೆಯ ಮೃತದೇಹ ಪತ್ತೆಯಾಗಿತ್ತು. ಪ್ರಕರಣ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿತ್ತು. ಬಳಿಕ ಕಲ್ಕತ್ತಾ ಹೈಕೋರ್ಟ್ ಆದೇಶದಂತೆ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಲಾಗಿತ್ತು. ಪ್ರಮುಖ ಆರೋಪಿ Sanjay Roy ಗೆ 2025ರ ಜನವರಿಯಲ್ಲಿ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು.
ದೇಶ
‘ಕಾಕ್ರೋಚ್ ಜನತಾ ಪಾರ್ಟಿ’ಗೆ ಅಧಿಕೃತ ರೂಪ? ಚುನಾವಣಾ ಆಯೋಗಕ್ಕೆ ಅರ್ಜಿ
ಹರಿಯಾಣ: ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಇದೀಗ ಅಧಿಕೃತ ರಾಜಕೀಯ ಪಕ್ಷವಾಗಿ ರೂಪುಗೊಳ್ಳಲು ಸಿದ್ಧತೆ ಆರಂಭಿಸಿರುವುದು ದೇಶಾದ್ಯಂತ ಕುತೂಹಲ ಹುಟ್ಟಿಸಿದೆ. ಹರಿಯಾಣದ ಪಾಣಿಪತ್ ಮೂಲದ ವಕೀಲ Sudhir Jamir ಅವರು ಈ ವಿಶಿಷ್ಟ ಹೆಸರಿನ ಪಕ್ಷವನ್ನು ನೋಂದಾಯಿಸಲು ಭಾರತೀಯ ಚುನಾವಣಾ ಆಯೋಗಕ್ಕೆ ಅರ್ಜಿ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.
ಪಕ್ಷದ ಸಂವಿಧಾನ ಈಗಾಗಲೇ ಸಿದ್ಧಗೊಂಡಿದ್ದು, ಅಧ್ಯಕ್ಷ, ಕಾರ್ಯದರ್ಶಿ ಹಾಗೂ ಖಜಾಂಚಿ ಹುದ್ದೆಗಳಿಗೆ ಸಂಬಂಧಿಸಿದ ದಾಖಲೆಗಳ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ ಎಂದು ಜಮಿರ್ ಮಾಹಿತಿ ನೀಡಿದ್ದಾರೆ. ಮುಂದಿನ ಕೆಲವು ದಿನಗಳಲ್ಲಿ ಸಂಪೂರ್ಣ ದಾಖಲೆಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಕಳೆದ 10 ರಿಂದ 12 ದಿನಗಳಿಂದ ‘ಕಾಕ್ರೋಚ್ ಜನತಾ ಪಾರ್ಟಿ’ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಲಕ್ಷಾಂತರ ಯುವಕರು ಬೆಂಬಲ ಸೂಚಿಸಿದ್ದಾರೆ. ಯುವಕರ ನಿರುದ್ಯೋಗ, ವ್ಯವಸ್ಥೆಯ ವಿರುದ್ಧದ ಅಸಮಾಧಾನ ಹಾಗೂ ಪರ್ಯಾಯ ರಾಜಕೀಯದ ಚರ್ಚೆಗಳಿಗೆ ಈ ಚಳುವಳಿ ವೇದಿಕೆಯಾಗಿದೆ ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.
ಈ ಚಳುವಳಿಯನ್ನು ಮೊದಲು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡಿದ ಡಿಜಿಟಲ್ ಕಂಟೆಂಟ್ ಕ್ರಿಯೇಟರ್ Abhijeet Dipke ಅಮೆರಿಕದಿಂದ ಆನ್‌ಲೈನ್ ಅಭಿಯಾನ ನಡೆಸುತ್ತಿದ್ದು, ಇದನ್ನು ಕೇವಲ ಸೋಶಿಯಲ್ ಮೀಡಿಯಾದಲ್ಲೇ ಸೀಮಿತಗೊಳಿಸದೆ ನೆಲಮಟ್ಟದಲ್ಲಿ ಸಂಘಟನೆ ರೂಪಿಸಬೇಕು ಎಂದು ಜಮಿರ್ ಹೇಳಿದ್ದಾರೆ.
ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಈ ಪರಿಕಲ್ಪನೆ ಹುಟ್ಟಿಕೊಂಡಿತ್ತು. ಬಳಿಕ ಹಾಸ್ಯ, ವಿಡಂಬನೆ ಮತ್ತು ರಾಜಕೀಯ ಸಂದೇಶಗಳ ಮೂಲಕ ಇದು ವೈರಲ್ ಆಗಿ ಯುವಜನರಲ್ಲಿ ಹೊಸ ಚರ್ಚೆಗೆ ಕಾರಣವಾಯಿತು. ಇದೀಗ ಇದೇ ಹೆಸರಿನಲ್ಲಿ ರಾಜಕೀಯ ಪಕ್ಷ ಸ್ಥಾಪನೆಗೆ ಮುಂದಾಗಿರುವುದು ದೇಶದ ರಾಜಕೀಯದಲ್ಲಿ ಹೊಸ ಕುತೂಹಲ ಮೂಡಿಸಿದೆ.
ದೇಶ
ಡಿಕೆಶಿಗೆ ಹೊಸ ಸವಾಲಾ? ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಜಾರಕಿಹೊಳಿ ಲಾಬಿ
ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಹಾಗೂ ಪವರ್ ಶೇರಿಂಗ್ ಚರ್ಚೆಗಳು ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ ಲೋಕೋಪಯೋಗಿ ಸಚಿವ Satish Jarkiholi ದಿಢೀರ್ ದೆಹಲಿಗೆ ತೆರಳಿರುವುದು ರಾಜಕೀಯ ವಲಯದಲ್ಲಿ ಭಾರಿ ಕುತೂಹಲ ಮೂಡಿಸಿದೆ.
ಮುಖ್ಯಮಂತ್ರಿ Siddaramaiah ಹಾಗೂ ಉಪ ಮುಖ್ಯಮಂತ್ರಿ D. K. Shivakumar ಅವರ ಇತ್ತೀಚಿನ ದೆಹಲಿ ಪ್ರವಾಸದ ಬೆನ್ನಲ್ಲೇ ಜಾರಕಿಹೊಳಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಲು ಮುಂದಾಗಿರುವುದು ಕಾಂಗ್ರೆಸ್‌ನಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನ ಕುರಿತ ಚರ್ಚೆ ಮತ್ತೆ ವೇಗ ಪಡೆದುಕೊಂಡಿದ್ದು, ಪಕ್ಷದೊಳಗಿನ ಸಮೀಕರಣಗಳು ಬದಲಾಗುವ ಸಾಧ್ಯತೆಗಳ ಬಗ್ಗೆ ಮಾತುಕತೆ ಜೋರಾಗಿದೆ.
ಪ್ರಸ್ತುತ ಡಿ.ಕೆ. ಶಿವಕುಮಾರ್ ಅವರೇ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿದಿದ್ದರೂ, ಮುಂಬರುವ ಚುನಾವಣಾ ರಾಜಕಾರಣದ ದೃಷ್ಟಿಯಿಂದ ಪೂರ್ಣಾವಧಿ ಅಧ್ಯಕ್ಷರನ್ನು ನೇಮಕ ಮಾಡುವ ಅಗತ್ಯವಿದೆ ಎಂಬ ಅಭಿಪ್ರಾಯ ಕಾಂಗ್ರೆಸ್ ವಲಯದಲ್ಲಿ ಕೇಳಿಬರುತ್ತಿದೆ. ಇದೇ ಹಿನ್ನೆಲೆ ಅಹಿಂದ ಹಾಗೂ ವಾಲ್ಮೀಕಿ ಸಮುದಾಯದ ಪ್ರಭಾವಿ ನಾಯಕನಾಗಿ ಗುರುತಿಸಿಕೊಂಡಿರುವ ಸತೀಶ್ ಜಾರಕಿಹೊಳಿ ತಮ್ಮ ಪರ ಲಾಬಿ ಆರಂಭಿಸಿದ್ದಾರೆ ಎನ್ನಲಾಗಿದೆ.
ಸಿದ್ದರಾಮಯ್ಯ ಆಪ್ತ ವಲಯದ ಪ್ರಮುಖ ನಾಯಕರಲ್ಲಿ ಒಬ್ಬರಾಗಿರುವ ಜಾರಕಿಹೊಳಿ ಅವರ ದೆಹಲಿ ಭೇಟಿ, ಡಿಕೆಶಿ ಬಣಕ್ಕೆ ಹೊಸ ಸವಾಲು ತಂದೊಡ್ಡಿದೆ ಎಂಬ ರಾಜಕೀಯ ವಿಶ್ಲೇಷಣೆಗಳು ಕೇಳಿಬರುತ್ತಿವೆ. ಎಐಸಿಸಿ ಅಧ್ಯಕ್ಷ Mallikarjun Kharge ಸೇರಿದಂತೆ ಹಿರಿಯ ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿ ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಲಿದ್ದಾರೆ ಎನ್ನಲಾಗಿದೆ.
ಒಟ್ಟಿನಲ್ಲಿ ಜಾರಕಿಹೊಳಿ ಅವರ ದೆಹಲಿ ಪ್ರವಾಸ ಕಾಂಗ್ರೆಸ್‌ನೊಳಗಿನ ನಾಯಕತ್ವ ಚರ್ಚೆಗೆ ಮತ್ತಷ್ಟು ವೇಗ ನೀಡಿದ್ದು, ಮುಂದಿನ ದಿನಗಳಲ್ಲಿ ರಾಜ್ಯ ರಾಜಕಾರಣದಲ್ಲಿ ಹೊಸ ತಿರುವು ಸಿಗುವ ಸಾಧ್ಯತೆಗಳಿವೆ.
-
ದೇಶ49 minutes ago‘ಕಾಕ್ರೋಚ್ ಜನತಾ ಪಾರ್ಟಿ’ಗೆ ಅಧಿಕೃತ ರೂಪ? ಚುನಾವಣಾ ಆಯೋಗಕ್ಕೆ ಅರ್ಜಿ
-
ಕ್ರೀಡೆ2 hours agoಕೊಹ್ಲಿಗೆ ಜೊತೆಯಾಗೋದು ಯಾರು? ಆರ್ಸಿಬಿ ಪ್ಲೇಯಿಂಗ್ ಇಲೆವೆನ್ ಗೊಂದಲ
-
ದೇಶ57 minutes agoಡಿಕೆಶಿಗೆ ಹೊಸ ಸವಾಲಾ? ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಜಾರಕಿಹೊಳಿ ಲಾಬಿ
-
ದೇಶ4 hours ago‘ಡಾನ್ 3’ ತೊರೆದ ರಣವೀರ್ ಸಿಂಗ್ಗೆ ಸಂಕಷ್ಟ; FWICEನಿಂದ ಪರೋಕ್ಷ ಬ್ಯಾನ್?
-
ದೇಶ1 hour agoಕದನ ವಿರಾಮ ಮಾತುಕತೆ ಮಧ್ಯೆಯೇ US ಏರ್ಸ್ಟ್ರೈಕ್; ಬಂದರ್ ಅಬ್ಬಾಸ್ನಲ್ಲಿ ಸ್ಫೋಟ
-
ದೇಶ5 hours ago16 ವರ್ಷದ ಸೂಪರ್ಹಿಟ್ ಜೋಡಿಗೆ ಭವ್ಯ ಗೌರವ: ‘ಕ್ರೇಜಿ-ಬ್ರಹ್ಮ’ ಕಾರ್ಯಕ್ರಮ
-
ದೇಶ5 hours ago“ತಮಿಳುನಾಡಿಗೆ ತಡೆಯುವ ಹಕ್ಕಿಲ್ಲ”: ಮೇಕೆದಾಟು ಬಗ್ಗೆ ಡಿಕೆ ಸ್ಪಷ್ಟನೆ
-
ದೇಶ5 hours agoದಿವಂಗತ ಧರ್ಮೇಂದ್ರರಿಗೆ ಪದ್ಮವಿಭೂಷಣ; ರಾಷ್ಟ್ರಪತಿಯಿಂದ ಹೇಮಾ ಮಾಲಿನಿಗೆ ಪ್ರಶಸ್ತಿ ಪ್ರದಾನ
