Connect with us

ರಾಜ್ಯ

ಆರ್‍ಸಿಬಿ ಫ್ಯಾನ್ಸ್ ಬನ್ನಿ ಬಾಯಿ ಸಿಹಿ ಮಾಡೋಣ: ಕಪ್ ಗೆದ್ರೆ ಇಂದಿರಾ ಕ್ಯಾಂಟೀನ್ ನಲ್ಲಿ ಫ್ರೀ ಹೋಳಿಗೆ ಊಟ ಫಿಕ್ಸ್

ಮೈಸೂರು: ನಾಳೆ ಐಪಿಎಲ್ ಫೈನಲ್ ಪಂದ್ಯದಲ್ಲಿ ನಮ್ಮ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ಮುಖಾಮುಖಿಯಾಗಲಿವೆ, ಆರ್ ಸಿ ಬಿ 9 ವರ್ಷಗಳ ಬಳಿಕ ಫೈನಲ್ ಪಂದ್ಯಕ್ಕೆ ಹೆಜ್ಜೆಯಿಟ್ಟಿದ್ದು, ಪಂಜಾಬ್ 11 ವರ್ಷಗಳ ಬಳಿಕ ಫೈನಲ್ ಪಂದ್ಯವಾಡಲು ಸಜ್ಜಾಗುತ್ತಿದೆ, ಈ ಬಾರಿ ಕಪ್ ನಮ್ಮದೇ ಎನ್ನುವ ಭರವಸೆಯಲ್ಲಿರುವ ಮೈಸೂರಿನ ಆರ್ ಸಿ ಬಿ ಅಭಿಮಾನಿಗಳು ತಮ್ಮ ವತಿಯಿಂದ ಬಂಪರ್ ಗಿಫ್ಟ್ ವೊಂದರನ್ನು ನೀಡುತ್ತಿದ್ದಾರೆ,
ಆರ್‍ಸಿಬಿ ಕಪ್ ಗೆದ್ದರೆ ಮೈಸೂರಿನ ಎಲ್ಲಾ ಇಂದಿರಾ ಕ್ಯಾಂಟೀನ್ ಗಳಲ್ಲಿ ಉಚಿತ ಹೋಳಿಗೆ ಊಟ ಹಾಕಲಾಗುತ್ತದೆ, ಮೈಸೂರಿನ 16 ಕ್ಯಾಂಟೀನ್ ಗಳಲ್ಲೂ ಉಚಿತ ಹೋಳಿಗೆ ಊಟ ನೀಡಲಾಗುತ್ತದೆ ಎಂದು ಮೈಸೂರಿನ ಆರ್‍ಸಿಬಿ ಅಭಿಮಾನಿ ಬಸವರಾಜ ಬಸಪ್ಪ ಘೋಷಣೆ ಮಾಡಿದ್ದಾರೆ,
ಈ ಬಾರಿ ಆರ್‍ಸಿಬಿ ಕಪ್ ಗೆದ್ದೇ ಗೆಲ್ಲುತ್ತದೆ ಎನ್ನುವ ವಿಶ್ವಾಸದಲ್ಲಿ ಇಂದು ಮೈಸೂರಿನ ಗನ್ ಹೌಸ್ ವೃತ್ತದಲ್ಲಿ ಉಚಿತವಾಗಿ ಹೋಳಿಗೆ ಊಟ ಹಂಚಿಕೆ ಮಾಡಲಾಗಿದ್ದು, ಆರ್‍ಸಿಬಿ ಕಪ್ ಗೆದ್ದ ಬಳಿಕ ಮೈಸೂರಿನ 16 ಕ್ಯಾಂಟೀನ್ ಗಳಲ್ಲೂ ಉಚಿತ ಹೋಳಿಗೆ ಊಟ ನೀಡಲಾಗುತ್ತಿದೆ ಎಂದು ಮೈಸೂರಿನ ಆರ್‍ಸಿಬಿ ಅಭಿಮಾನಿಗಳು ತಿಳಿಸಿದ್ದಾರೆ,

ಅಪರಾಧ

ಧರ್ಮಸ್ಥಳ ಶವ ಹೂತು ಪ್ರಕರಣ: ಮೂರು ಅಸ್ಥಿಪಂಜರ ಪತ್ತೆ, ಎಸ್‌ಐಟಿ ತನಿಖೆಗೆ ಹೊಸ ತಿರುವು!

ದಕ್ಷಿಣ ಕನ್ನಡ, ಆಗಸ್ಟ್ 5 – ಧರ್ಮಸ್ಥಳದ ಸುತ್ತಮುತ್ತಲ ಶವ ಹೂತು ಪ್ರಕರಣಕ್ಕೆ ದಿನೇ ದಿನೆ ನ್ಯೂ ಟ್ವಿಸ್ಟ್ ಸಿಗುತ್ತಿದ್ದು, ಇದೀಗ ಮೂರು ಅಸ್ಥಿಪಂಜರಗಳು ಪತ್ತೆಯಾಗಿವೆ ಎಂಬ ಸುದ್ದಿ ಚಕ್ಕರಿಗೊಳ್ಳುತ್ತಿದೆ. ಈ ಕುರಿತು ದೂರುದಾರ ಸುಜಾತಾ ಭಟ್ ಪರ ವಕೀಲ ಮಂಜುನಾಥ್ ಗೌಡ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಎಸ್‌ಐಟಿ ತಂಡದ ಶೋಧ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ನಿನ್ನೆ ನಡೆದ ಉತ್ಖನನದ ವೇಳೆ:

  • ಸ್ಟಾಟ್ ನಂಬರ್ 12ರ ಬಳಿ ಕಾರ್ಮಿಕರಿಂದ ಅಗೆಸಿದಾಗ, ಮೂರು ಅಸ್ಥಿಪಂಜರಗಳು ಹಾಗೂ ಮಹಿಳೆಯ ಸೀರೆ ಪತ್ತೆಯಾಗಿವೆ.
  • ಸುಮಾರು 140 ಮೂಳೆಗಳ ತುಂಡುಗಳು ಪತ್ತೆಯಾದ ಕುರಿತು ವರದಿ ಇದೆ.
  • ಅಸ್ಥಿಪಂಜರಗಳನ್ನು ತಕ್ಷಣವೇ ಕೆಎಂಸಿ ಮಣಿಪಾಲ್ ಆಸ್ಪತ್ರೆಗೆ ರವಾನಿಸಲಾಗಿದೆ.

ಇಂದಿನ ಉತ್ಖನನ:

  • ನೇತ್ರಾವತಿ ನದಿಯ ದಡದ ಬಳಿ 11ನೇ ಪಾಯಿಂಟ್‌ನಲ್ಲಿ ಅಗೆತ ಕೆಲಸ ನಡೆಯುತ್ತಿದೆ.
  • 6 ಅಡಿಯವರೆಗೆ ಶೋಧ ನಡೆದ ಬಳಿಕ ಸಾಕ್ಷ್ಯ ಸಿಕ್ಕದರೆ ಮುಂದಿನ ಪಾಯಿಂಟ್‌ಗೆ ಹೋಗುವುದಾಗಿ ಅಧಿಕಾರಿಗಳು ಹೇಳಿದ್ದಾರೆ.

ಪೂರ್ವ ಘಟನೆ:

  • ಜುಲೈ 31ರಂದು 6ನೇ ಗುರುತುಸ್ಥಳದಲ್ಲಿ ಅಸ್ಥಿಪಂಜರ ಪತ್ತೆಯಾದ ಹಿನ್ನೆಲೆ, ಎಸ್‌ಐಟಿ ಅಧಿಕಾರಿಗಳಾದ ಐಪಿಎಸ್ ಜಿತೇಂದ್ರ ಕುಮಾರ್ ದಯಾಮ ಅವರು ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದು, ಆಧಾರದ ಮೇಲೆ UDR ಪ್ರಕರಣ ದಾಖಲಾಗಿದೆ.
Continue Reading

ಬೆಂಗಳೂರು

ಸು ಫ್ರಮ್ ಸೋ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಕಲೆಕ್ಷನ್ ಸೆನ್ಸೇಷನ್: ಶ್ರಾವಣದ ಹಬ್ಬಕ್ಕೂ ಮುನ್ನ ಧನಲಕ್ಷ್ಮೀ ವರ!

ಬೆಂಗಳೂರು: ಶ್ರಾವಣ ತಿಂಗಳು ಅಂದ್ರೆ ಬಂಗಾರದ ತಿಂಗಳು. ಮನೆಮಾಲೀಕರಿಗೆ ವರಮಹಾಲಕ್ಷ್ಮೀ ಹಬ್ಬ, ಕನ್ನಡ ಚಿತ್ರರಂಗಕ್ಕೆ “ಸು ಫ್ರಮ್ ಸೋ” ಚಿತ್ರದ ಯಶಸ್ಸು! ರಾಜ್ ಬಿ.ಶೆಟ್ಟಿ ಅಭಿನಯದ ಈ ಹಾರರ್-ಕಾಮಿಡಿ ಸಿನಿಮಾ ಇದೀಗ ಮೂರನೇ ವಾರದಲ್ಲೂ ಭರ್ಜರಿಯಾಗಿ ಓಡುತ್ತಿದ್ದು, ಬಾಕ್ಸ್ ಆಫೀಸ್‌ನಲ್ಲಿ ಹವಾ ಸೃಷ್ಟಿಸಿದೆ.

ಇತ್ತೀಚೆಗೆ ಕನ್ನಡ ಚಿತ್ರರಂಗದಲ್ಲಿ ಉತ್ತಮ ಕಂಟೆಂಟ್ ಹೊಂದಿರುವ ಸಿನಿಮಾಗಳಿಗೆ ಅಭಿಮಾನಿಗಳ ಮೆಚ್ಚುಗೆ ಹೆಚ್ಚಾಗುತ್ತಿದೆ. ‘ಎಕ್ಕ’, ‘ಜೂನಿಯರ್’ ನಂತರ ‘ಸು ಫ್ರಮ್ ಸೋ’ ಕೂಡ ಜನಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ.
75 ಲಕ್ಷ ಬಜೆಟ್‌ನಲ್ಲಿ ತಯಾರಾದ ಈ ಸಿನಿಮಾ ಈಗಾಗಲೇ ₹25 ಕೋಟಿ ಕಲೆಕ್ಷನ್ ಮಾಡಿದ್ದು, ಶೀಘ್ರದಲ್ಲೇ ₹50 ಕೋಟಿ ಕ್ಲಬ್ ಸೇರುವ ಲಕ್ಷಣವಿದೆ.

ಮುಂಬೈ, ದೆಹಲಿ, ಚೆನ್ನೈ, ಹೈದರಾಬಾದ್, ಕೇರಳ ಹಾಗೂ ವಿದೇಶಗಳಲ್ಲೂ ರಿಲೀಸ್ ಆದ ಈ ಸಿನಿಮಾ ಎಲ್ಲೆಡೆ ಹೌಸ್‌ಫುಲ್ ಪ್ರದರ್ಶನ ಪಡೆಯುತ್ತಿದೆ. ರಾಜ್ ಬಿ.ಶೆಟ್ಟಿ ಹಾಗೂ ನಿರ್ದೇಶಕ ಜೆ.ಪಿ. ತುಮಿನಾಡ್ ಅವರ ಶ್ರದ್ಧೆ ಫಲ ನೀಡಿದ್ದು, “ಬಂದರೋ ಬಂದರು.. ಬಾವ ಬಂದರು” ಹಾಡು ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್ ಆಗುತ್ತಿದೆ.

ಇನ್ನು ಮಲಯಾಳಂ ಡಬ್ಬಿಂಗ್ ಆಗಿ ಆಗಸ್ಟ್ 1ರಂದು ಬಿಡುಗಡೆಗೊಂಡ ‘ಸು ಫ್ರಮ್ ಸೋ’ ಚಿತ್ರ, ಕೊಚ್ಚಿಯಲ್ಲಿ ಒಂದೇ ದಿನ 8 ಸಾವಿರ ಟಿಕೆಟ್ ಮಾರಾಟ ಮಾಡಿದ ದಾಖಲೆ ಸ್ಥಾಪಿಸಿದೆ. ಆದುದರಿಂದ, ಚಿತ್ರದ ಬಯೋಪಿಕ್ ಮತ್ತಷ್ಟು ಭಾಷೆಗಳಿಗೆ ವಿಸ್ತರಿಸುವ ಸಾಧ್ಯತೆ ಇದೆ.

Continue Reading

ಬೆಂಗಳೂರು

ವೇತನ ವಿವಾದದಲ್ಲಿ ಸಿಎಂ ಸ್ಪಷ್ಟನೆ: 14 ತಿಂಗಳ ಹಿಂಬಾಕಿಗೆ ಮಾತ್ರ ಸರ್ಕಾರ ಸಿದ್ಧ

ಬೆಂಗಳೂರು: ಸಾರಿಗೆ ನೌಕರರ 38 ತಿಂಗಳ ವೇತನ ಹಿಂಬಾಕಿ ಪಾವತಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. “ಈ ಬೇಡಿಕೆ ಸಮಂಜಸವಲ್ಲ. ಸರ್ಕಾರ ಕೇವಲ 14 ತಿಂಗಳ ಹಿಂಬಾಕಿಗೆ ಸಿದ್ಧ” ಎಂದು ಅವರು ಮಂಗಳವಾರ ವಿಧಾನಸೌಧದಲ್ಲಿ ನಡೆದ ಸಂಧಾನ ಸಭೆಯಲ್ಲಿ ತಿಳಿಸಿದ್ದಾರೆ.

2020ರಿಂದ 2023ರ ಫೆಬ್ರವರಿವರೆಗಿನ ಬಾಕಿ ವೇತನ ಪಾವತಿಗೆ ನೌಕರ ಸಂಘಗಳು ಒತ್ತಾಯಿಸಿದ್ದರೊಂದಿಗೆ, 2024ರಿಂದ ನೂತನ ವೇತನವನ್ನೂ ಜಾರಿಗೆ ತರುವಂತೆ ಒತ್ತಾಯಿಸಲಾಗಿದೆ. ಈ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, “ನಿಗಮಗಳ ಆರ್ಥಿಕ ಪರಿಸ್ಥಿತಿ ಮತ್ತು ಹಿಂದಿನ ಸರ್ಕಾರದ ಆದೇಶಗಳ ದೋಷಗಳನ್ನು ಪರಿಗಣಿಸಿ 14 ತಿಂಗಳ ವೇತನ ಹಿಂಬಾಕಿಗೆ ಸಮ್ಮತಿಯಿದೆ,” ಎಂದು ಸ್ಪಷ್ಟಪಡಿಸಿದರು.

ವೇತನ ಪರಿಷ್ಕರಣೆ ಪಶ್ಚಾತ್ಪಟ
2016ರಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ 12.5% ವೇತನ ಹೆಚ್ಚಳ ಜಾರಿಗೆ ಬಂದಿತ್ತು. ಆದರೆ 2020ರ ಕೋವಿಡ್ ಕಾರಣದಿಂದ ಆ ವೇಳೆಗೆ ಯಾವುದೇ ಪರಿಷ್ಕರಣೆ ಆಗಿರಲಿಲ್ಲ. ನಂತರದ ಕಾಂಗ್ರೆಸ್ ಸರ್ಕಾರದಲ್ಲಿ ಶ್ರೀನಿವಾಸ ಮೂರ್ತಿ ಸಮಿತಿ ಶಿಫಾರಸ್ಸಿನಂತೆ 2022ರ ಜೂನ್‌ 01ರಿಂದ 2023ರ ಫೆಬ್ರವರಿವರೆಗೆ ಹಿಂಬಾಕಿ ಪಾವತಿ ಮಾಡಲು ತೀರ್ಮಾನಿಸಲಾಗಿತ್ತು.

ಸರ್ಕಾರದ ಆರ್ಥಿಕ ಹೊಣೆಗಾರಿಕೆ
ಸಿದ್ದರಾಮಯ್ಯ ಅವರು ಹೇಳಿದ್ದಾರೆ: “ನಾವು ಅಧಿಕಾರಕ್ಕೆ ಬಂದಾಗ ನಿಗಮಗಳಿಗೆ ಒಟ್ಟಾರೆ ₹4000 ಕೋಟಿ ಸಾಲ ಇತ್ತು. 2018 ರಲ್ಲಿ ಈ ಮೊತ್ತ ಕೇವಲ ₹14 ಕೋಟಿ ಮಾತ್ರ ಇತ್ತು. ಯಾವುದೇ ನಿಗಮ ಲಾಭದಲ್ಲಿ ಇಲ್ಲ.” ಅಂತಹ ಪರಿಸ್ಥಿತಿಯಲ್ಲಿ ಎಲ್ಲಾ ನೌಕರರ ಬೇಡಿಕೆಗಳನ್ನು ಈಡೇರಿಸಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.

ಸಂಘದ ಚುನಾವಣೆ ಮತ್ತು ಮುಂದಿನ ಕ್ರಮ
ಸಾರಿಗೆ ನೌಕರರ ಸಂಘದ ಚುನಾವಣೆ ಹಾಗೂ ಬೇಡಿಕೆಗಳ ಕುರಿತಂತೆ ಸರ್ಕಾರ ಪರಿಶೀಲನೆ ನಡೆಸಲಿದ್ದು, ಮಾತುಕತೆ ಮೂಲಕ ಎಲ್ಲ ಅಹವಾಲುಗಳನ್ನು ಬಗೆಹರಿಸಲು ಸಿದ್ಧವಾಗಿದೆ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.

Continue Reading

Trending