Connect with us

ಬೆಂಗಳೂರು

ದೊಡ್ಡಮಟ್ಟದ ಸಮಾರಂಭಗಳಿಗೆ ಹೊಸ ಎಸ್‌ಒಪಿ ರೂಪಿಸುತ್ತೇವೆ: ಗೃಹ ಸಚಿವ ಜಿ. ಪರಮೇಶ್ವರ್​

ಬೆಂಗಳೂರು: “ದೊಡ್ಡಮಟ್ಟದ ಸಭೆ, ಸಮಾರಂಭ ಮತ್ತು ವಿಜಯೋತ್ಸವ ಕಾರ್ಯಕ್ರಮಗಳಿಗೆ ಹೊಸ ಎಸ್‌ಒಪಿ (ಸ್ಟ್ಯಾಂಡರ್ಡ್ ಆಪರೇಟಿವ್ ಪ್ರೊಸಿಜರ್) ಮಾಡಲಾಗುವುದು” ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್​ ಹೇಳಿದರು.

ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ನಿನ್ನೆ ನಡೆದ ಘಟನೆ ರಾಜ್ಯದ ಕ್ರಿಕೆಟ್ ಇತಿಹಾಸದಲ್ಲೇ ಆಗಿರಲಿಲ್ಲ. ಸಾವನ್ನಪ್ಪಿರುವವರ ಆತ್ಮಕ್ಕೆ ಶಾಂತಿ ಕೊರುತ್ತೇನೆ. ಕುಟುಂಬ ವರ್ಗದವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ. ಸಿಎಂ ಅ‌ವರು ನಿನ್ನೆ ಸಭೆ ನಡೆಸಿ, ಅನೇಕ ಮಾಹಿತಿ ಪಡೆದು ಮಾತನಾಡಿದ್ದಾರೆ. ಈ ಬಗ್ಗೆ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶ ಮಾಡಿದ್ದಾರೆ. ಬೆಂಗಳೂರು ನಗರ ಜಿಲ್ಲಾಧಿಕಾರಿ ನೇತೃತ್ವದಲ್ಲಿ ತನಿಖೆಯಾಗಬೇಕೆಂದು ಆದೇಶಿಸಲಾಗಿದೆ. ಅವರು ಯಾರೇ ಆಗಿರಲಿ, ಕಠಿಣವಾದ ಕ್ರಮ ತೆಗೆದುಕೊಳ್ಳುತ್ತೇವೆ. ಈಗ ವಿವರಣೆ ಮಾಡಲು ಹೋಗುವುದಿಲ್ಲ. ತನಿಖೆಯ ವರದಿ ಬರುವವರೆಗೆ ಹೇಳಲು ಸಾಧ್ಯವಿಲ್ಲ” ಎಂದರು.

“ದುರ್ಘಟನೆಯಲ್ಲಿ 11 ಜನ ಸಾವನ್ನಪ್ಪಿದ್ದು, 56 ಜನ ಗಾಯಗೊಂಡಿದ್ದಾರೆ. 46 ಜನ ಚಿಕಿತ್ಸೆ ಪಡೆದು ಮನೆಗಳಿಗೆ ಹೋಗಿದ್ದಾರೆ. 10 ಜನ ಆಸ್ಪತ್ರೆಯಲ್ಲಿ‌ ಚಿಕಿತ್ಸೆ ಪಡೆಯುತ್ತಿದ್ದು, ಗಂಭೀರವಾಗಿ ಗಾಯಗೊಂಡಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಂತಹ ಘಟನೆಗಳು ಆಗಬಾರದು ಎಂಬ ವಿಚಾರದಲ್ಲಿ ಗೃಹ ಇಲಾಖೆಯಿಂದ ಒಂದು ಹೊಸ ಎಸ್‌ಒಪಿ (ಸ್ಟ್ಯಾಂಡರ್ಡ್ ಆಪರೇಟಿವ್ ಪ್ರೊಸಿಜರ್) ಮಾಡುತ್ತೇವೆ.‌ ಇನ್ನು ಮುಂದೆ ಯಾವುದೇ ದೊಡ್ಡ ಸಮಾರಂಭ, ಸಭೆ, ವಿಜಯೋತ್ಸವ ನಡೆಯುವಾಗ ಪೊಲೀಸ್ ಇಲಾಖೆಯ ನಿರ್ದೇಶನ ಏನು ಬರುತ್ತದೆ, ಅದರ ಚೌಕಟ್ಟಿನಲ್ಲಿ ಕಾರ್ಯಕ್ರಮಗಳನ್ನು ಮಾಡಬೇಕು” ಎಂದು ಹೇಳಿದರು.

ಹೊಸ ಎಸ್‌ಒಪಿ ಮಾಡುತ್ತೇವೆ. ನಾವು ಕೆಲವು ಸೂಚನೆಗಳನ್ನು ಕೊಡುತ್ತೇವೆ. ಯಾವತ್ತು ಕೂಡ ಇಂತಹ ಘಟನೆಗಳಾಗಬಾರದು. ಅಮಾಯಕರ ಸಾವುಗಳು ಆಗಬಾರದು. ಇದೆಲ್ಲವನ್ನು ನೋಡಿದಾಗ ನೋವಾಗುತ್ತದೆ. ನಿನ್ನೆ ಶವಗಾರದಲ್ಲಿ ನೋಡಿದಾಗ ದುಃಖವಾಯಿತು. 20-25 ವರ್ಷ ವಯಸ್ಸಿನವರು ಸಂತೋಷದಿಂದ ಆಚರಣೆಗೆ ಬಂದಾಗ ಜೀವವನ್ನೇ‌ ಕಳೆದುಕೊಂಡಿದ್ದಾರೆ. ಇದೆಲ್ಲವನ್ನು ಯಾರು ಊಹೆ ಮಾಡಿರಲಿಲ್ಲ” ಎಂದು ತಿಳಿಸಿದರು.

ಘಟನೆಗೆ ಸಂಬಂಧಿಸಿದಂತೆ ಕಠಿಣವಾದ ಕ್ರಮ ತೆಗೆದುಕೊಳ್ಳುತ್ತೇವೆ. ಎಲ್ಲಿ ಲೋಪವಾಗಿದೆ ಎಂಬುದನ್ನು ಪರಿಶೀಲಿಸುತ್ತೇವೆ. ಒಬ್ಬ ವ್ಯಕ್ತಿ ತನಗಿದ್ದ ಒಬ್ಬ ಮಗನನ್ನು ಕಳೆದಕೊಂಡ ಬಗ್ಗೆ ವೈದೇಹಿ ಆಸ್ಪತ್ರೆಯಲ್ಲಿ ಹೇಳಿಕೊಂಡರು. ಮಗ ಕಾಲೇಜಿಗೆ ಹೋಗುವುದಾಗಿ ಬೆಳಗ್ಗೆ 6 ಗಂಟೆಗೆ ಮನೆ ಬಿಟ್ಟಿದ್ದ. ಈ ರೀತಿಯಾಗಿದೆ. ಇದನ್ನು ಯಾರೂ ಕೂಡ ಊಹಿಸಿರಲಿಲ್ಲ. 34 ಸಾವಿರ ಸೀಟುಗಳ ಸಾಮರ್ಥ್ಯ ಇರುವ ಸ್ಟೇಡಿಯಂಗೆ 3 ಲಕ್ಷ‌ ಜನ ಬಂದಿದ್ದರು” ಎಂದು ವಿವರಿಸಿದರು.

“ಮೆಟ್ರೋ ಸಂಸ್ಥೆಯವರು ನೀಡಿರುವ ಮಾಹಿತಿ ಪ್ರಕಾರ ಬೆಳಗ್ಗೆ 9 ಗಂಟೆಯಿಂದ ರಾತ್ರಿ 11 ಗಂಟೆವರೆಗೆ 8.7 ಲಕ್ಷ ಜನ ಮೆಟ್ರೋದಲ್ಲಿ ಪ್ರಯಾಣ‌ ಮಾಡಿದ್ದಾರೆ. ತನಿಖೆಯ ವರದಿ ಬರುವವರೆಗೂ ಏನನ್ನು ಹೇಳುವುದಿಲ್ಲ‌. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಘಟನೆ ನಡೆದ ಸ್ಥಳ‌ ಪರಿಶೀಲನೆ ಮಾಡುತ್ತೇನೆ. ಆರ್‌ಸಿಬಿ, ಕೆಎಸ್‌ಸಿಎ ಅವರೊಂದಿಗೆ ಸಭೆ ಮಾಡುತ್ತೇನೆ. ತಾಂತ್ರಿಕವಾಗಿ ಏನೇ ಇದ್ದರು ಸಹ ಡಿಜಿಪಿ ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತರು ನೋಡಿಕೊಳ್ಳುತ್ತಾರೆ” ಎಂದು ಹೇಳಿದರು.

Continue Reading
Click to comment

Leave a Reply

Your email address will not be published. Required fields are marked *

ಅಪರಾಧ

Breaking News ಚಾಲಕ ಆತ್ಮಹತ್ಯೆ – ಡೆತ್ ನೋಟ್‌ನಲ್ಲಿ ಸಂಸದ ಡಾ. ಸುಧಾಕರ್ ಹೆಸರು ಉಲ್ಲೇಖ!

ಚಿಕ್ಕಬಳ್ಳಾಪುರ, ಆಗಸ್ಟ್ 7 – ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ದೈನಂದಿನ ಶಾಂತಿಯನ್ನು ಬೆಚ್ಚಿಬೀಳಿಸುವ ಘಟನೆ ಇಂದು ಬೆಳಗಿನ ಜಾವ ನಡೆದಿದೆ. ಜಿಲ್ಲಾ ಪಂಚಾಯತ್ ಕಚೇರಿಯ ಆವರಣದಲ್ಲಿ 33 ವರ್ಷದ ಗುತ್ತಿಗೆ ಚಾಲಕ ಬಾಬು ಎಂ. ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶೋಕಾಂತರವಾಗಿದೆ.

ಡೆತ್ ನೋಟ್‌ನಲ್ಲಿ ಸಂಸದ ಡಾ. ಕೆ. ಸುಧಾಕರ್ ಹೆಸರು:
8 ವರ್ಷಗಳಿಂದ ಲೆಕ್ಕಪರಿಶೋಧನೆ ವಿಭಾಗದಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದ ಬಾಬು, ಬಿಜೆಪಿ ಸಂಸದ ಡಾ. ಕೆ. ಸುಧಾಕರ್ ಹಾಗೂ ಅವರ ಬೆಂಬಲಿಗರಾದ ನಾಗೇಶ್ ಮತ್ತು ಮಂಜುನಾಥ್ ವಿರುದ್ಧ ಗಂಭೀರ ಆರೋಪಗಳನ್ನು ಡೆತ್ ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಆತ್ಮಹತ್ಯೆಗೆ ಕಾರಣವೆನಿಸಿದ ಹಣಕಾಸು ವಂಚನೆ:
ಬಾಬು ಅವರು ಡೆತ್ ನೋಟ್‌ನಲ್ಲಿ, ಸರ್ಕಾರಿ ಕೆಲಸ ಕೊಡಿಸುತ್ತೇವೆಂದು ಹಣ ಪಡೆದು ವಂಚನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಇದರಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ ಬಾಬು, ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಕಚೇರಿಯ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಪೊಲೀಸರು ಸ್ಥಳಕ್ಕೆ ದೌಡಾಯಿಸಿದರು:
ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ತಕ್ಷಣವೇ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ FIR ದಾಖಲಾತಿ ನಡೆಯುವ ಸಾಧ್ಯತೆ ಇದ್ದು, ತನಿಖೆ ಮುಂದುವರಿದಿದೆ.

Continue Reading

ಬೆಂಗಳೂರು

ಬೆಂಗಳೂರಿನಲ್ಲಿ ವಸತಿ ಯೋಜನೆಗಳ ಅವ್ಯವಸ್ಥೆ: ಹೊಸ ಯೋಜನೆಗಳ ಬಗ್ಗೆ ಶಾಸಕ ಎಸ್.ಟಿ. ಸೋಮಶೇಖರ್ ಅಸಮಾಧಾನ

ಬೆಂಗಳೂರು, ಆಗಸ್ಟ್ 7 – ನಗರದಲ್ಲಿ ಈಗಿನ ವಸತಿ ಯೋಜನೆಗಳು ಪೂರ್ಣವಾಗಿಲ್ಲದಿರುವಾಗ ಹೊಸ ಭೂಸ್ವಾಧೀನ ಅಧಿಸೂಚನೆಗಳನ್ನು ನೀಡುವುದು ಅರ್ಥವಿಲ್ಲ ಎಂದು ಶಾಸಕ ಎಸ್.ಟಿ. ಸೋಮಶೇಖರ್ ಕಿಡಿಕಾರಿದರು.

ಯಶವಂತಪುರ ಕ್ಷೇತ್ರದ ಚುಂಚನಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಬ್ಬರಾಯನಪಾಳ್ಯ ಎ ಹಾಗೂ ಬಿ ಗ್ರಾಮಗಳಲ್ಲಿ ಹೊಸ ಅಂಗನವಾಡಿ ಕಟ್ಟಡ ಮತ್ತು ಕಿರಿಯ ಪ್ರಾಥಮಿಕ ಶಾಲೆಯ ಲೋಕಾರ್ಪಣೆ ವೇಳೆ ಅವರು ಮಾತನಾಡಿದರು.

ಅವರು ಅಭಿಪ್ರಾಯಪಟ್ಟ ಪ್ರಮುಖ ವಿಷಯಗಳು:

  • ಬೆಂಗಳೂರಿನ ಜನಸಂಖ್ಯೆ ಈಗಾಗಲೇ 1.5 ಕೋಟಿಗೂ ಮೀರುತ್ತಿದೆ.
  • ವಸತಿ ಸಮುಚ್ಛಯಗಳಲ್ಲಿ ಇನ್ನೂ ಅನೇಕ ಅಭಿವೃದ್ಧಿ ಕೆಲಸಗಳು ಬಾಕಿಯಿವೆ.
  • ಕುಡಿಯುವ ನೀರಿನ ಕೊರತೆ, ಒಳಚರಂಡಿ ಸಮಸ್ಯೆ, ರಾಜಕಾಲುವೆಗಳ ಉಕ್ಕಿಹರಿವು ನಗರದ ಮುಖ್ಯ ಸಮಸ್ಯೆಗಳಾಗಿವೆ.
  • ಕೆಲ ಕಟ್ಟಡಗಳು ಕಳಪೆ ಗುಣಮಟ್ಟದಿಂದ ನಿರ್ಮಾಣವಾಗಿದ್ದು, ಸೋರಿಕೆ ಸಮಸ್ಯೆ ಜನರನ್ನು ಕಾಡುತ್ತಿದೆ.
  • “ಕಟ್ಟಡ ಕುಸಿದು ಅನಾಹುತವಾದರೆ ಹೊಣೆ ಯಾರು?” ಎಂದು ಅವರು ಪ್ರಶ್ನಿಸಿದರು.

ಬೇರೆ ಪ್ರಮುಖ ಅಂಶಗಳು:
ನಗರದ ವಾಹನ ಸಂಚಾರ ದಟ್ಟಣೆ, ನಿಯಂತ್ರಣ ತಪ್ಪಿದ ನಗರ ವಿಸ್ತರಣೆ, ಮೂಲಸೌಕರ್ಯದ ಕೊರತೆ ಇವುಗಳಿಂದ ನಾಗರಿಕರು ಪರದಾಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಬೆಂಗಳೂರಿನಿಂದ ಹೊರಗೆ ಹೊಸ ವಸತಿ ಯೋಜನೆಗಳನ್ನು ರೂಪಿಸಿ ಮೂಲಸೌಕರ್ಯ ಒದಗಿಸಿದರೆ ಜನಸಂದಣಿ ನಿಯಂತ್ರಣ ಸಾಧ್ಯವೆಂದು ಶಾಸಕ ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಹಾಜರಿದ್ದವರು:
ಪಂಚಾಯತ್ ಅಧ್ಯಕ್ಷೆ ಹೇಮಾ ನಾರಾಯಣ್, ಸದಸ್ಯರು ಸದಾನಂದ.ಡಿ, ಎನ್.ಕುಮಾರ್, ರೇವಣಸಿದ್ದಯ್ಯ, ಅಶ್ವತ್, ವೆಂಕಟಾಚಲ, ಸುನಿಲ್, ಪುಟ್ಟಮಲ್ಲು, ತಾತಪ್ಪ, ಶಿವಣ್ಣ, ಹನುಮಂತ ಹಾಗೂ ಗ್ರಾಮಸ್ಥರು, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Continue Reading

ಬಿಬಿಎಂಪಿ

ಜಿಬಿಎ ಚುನಾವಣೆ ಪೂರ್ವಸಿದ್ಧತೆ: ನವೆಂಬರ್ 1ರೊಳಗೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ – ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ಪಾಲಿಕೆಗಳ ಚುನಾವಣೆಗೆ ಸಂಬಂಧಿಸಿದ ಪೂರ್ವಸಿದ್ಧತೆಗಳನ್ನು ನವೆಂಬರ್ 1ರೊಳಗೆ ಪೂರ್ಣಗೊಳಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಹಿರಿಯ ಮುಖಂಡರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು, “ಚುನಾವಣೆಗಾಗಿ ಮತದಾರರ ನೋಂದಣಿ ನಿಯಮಗಳನ್ನು ಹೇಗೆ ರೂಪಿಸಬೇಕು ಎಂಬ ಕುರಿತು ಚುನಾವಣಾ ಆಯೋಗದ ಅಭಿಪ್ರಾಯವನ್ನು ಕೇಳಲಾಗುವುದು,” ಎಂದು ಸ್ಪಷ್ಟಪಡಿಸಿದರು.

ಚುನಾವಣೆ ಹಕ್ಕು ಕಾಪಾಡುವ ಕುರಿತು ಮಾರ್ಗದರ್ಶನ:
ಪಕ್ಷದ ಕಾರ್ಯಕರ್ತರು ಮತ್ತು ಬ್ಲಾಕ್ ಅಧ್ಯಕ್ಷರಿಗೆ, ತಮ್ಮ ಮತದಾನದ ಹಕ್ಕನ್ನು ಕಾಪಾಡಿಕೊಳ್ಳುವ ಕುರಿತು ಮಾರ್ಗದರ್ಶನ ನೀಡಲಾಗಿದೆ. “ಶಾಸಕರನ್ನು ಹಾಗೂ ಬ್ಲಾಕ್ ಲೆವಲ್ ನಾಯಕರನ್ನು ಮತ್ತೊಮ್ಮೆ ಸಭೆಗೆ ಕರೆದು ಸಿದ್ಧತೆ ಕುರಿತ ಚರ್ಚೆ ನಡೆಯಲಿದೆ,” ಎಂದರು.

ಇಂಡಿಯಾ ಒಕ್ಕೂಟ ಮತ್ತು ಪ್ರತಿಭಟನೆ ಕುರಿತು ಸ್ಪಷ್ಟನೆ:
ಮುಖ್ಯಮಂತ್ರಿಗಳಿಗೆ ಇಂಡಿಯಾ ಒಕ್ಕೂಟದ ಸಭೆಗೆ ಆಹ್ವಾನ ಇದೆ. ನಾನು ಇಲ್ಲಿ ಪ್ರತಿಭಟನಾ ಸಭೆಗಾಗಿ ಸಿದ್ಧತೆಗಳನ್ನು ನೋಡಿಕೊಳ್ಳುತ್ತಿದ್ದೇನೆ,” ಎಂದು ಡಿಸಿಎಂ ಹೇಳಿದರು. “ಸ್ವಾತಂತ್ರ ಉದ್ಯಾನದಲ್ಲಿ ಮತಚೂರಿ ವಿರುದ್ಧsymbolic ಪ್ರತಿಭಟನೆ ನಡೆಯಲಿದ್ದು, ಇದು ನ್ಯಾಯಾಲಯದ ಆದೇಶದಂತೆ ಹಮ್ಮಿಕೊಳ್ಳಲಾಗಿದೆ,” ಎಂದು ಹೇಳಿದರು.

ರಾಜ್ಯಮಟ್ಟದ ಪ್ರತಿಭಟನೆ:
ಪ್ರತಿಯೊಬ್ಬ ಜಿಲ್ಲೆಯಿಂದ ಕನಿಷ್ಠ 50 ನಾಯಕರು, ಕಾರ್ಯಕರ್ತರು, ಪರಾಜಿತ ಅಭ್ಯರ್ಥಿಗಳು ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕೆಂದು ಸೂಚಿಸಲಾಗಿದೆ. “ಬೆಂಗಳೂರು ಮಾತ್ರವಲ್ಲ, ಇಡೀ ಕರ್ನಾಟಕದಿಂದ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ,” ಎಂದು ಅವರು ಹೇಳಿದ್ದಾರೆ.

Continue Reading

Trending