ದೇಶ
ಚೆನಾಬ್ ನದಿಗೆ ಅಡ್ಡಲಾಗಿ ನಿರ್ಮಿಸಲಾದ ವಿಶ್ವದ ಅತಿ ಎತ್ತರದ ಕಮಾನು ರೈಲ್ವೆ ಸೇತುವೆ: ಪ್ರಧಾನಿ ಮೋದಿ ಉದ್ಘಾಟನೆ
ಜಮ್ಮು-ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ವಿಶ್ವದ ಅತಿ ಎತ್ತರದ ರೈಲ್ವೆ ಕಮಾನು ಸೇತುವೆಯಾದ ಚೆನಾಬ್ ಸೇತುವೆಯನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಸಿಎಂ ಒಮರ್ ಅಬ್ದುಲ್ಲಾ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಕೂಡ ಉಪಸ್ಥಿತರಿದ್ದರು.
ಚೆನಾಬ್ ಸೇತುವೆಯ ನಂತರ, ಜಮ್ಮು- ಕಾಶ್ಮೀರದಲ್ಲಿ ಅಂಜಿ ನದಿಯ ಮೇಲೆ ನಿರ್ಮಿಸಲಾದ ದೇಶದ ಮೊದಲ ಕೇಬಲ್-ಸ್ಟೇಡ್ ರೈಲು ಸೇತುವೆ ಇದಾಗಿದೆ. ಈ ಕಾರ್ಯಕ್ರಮ ನಂತರ ಪ್ರಧಾನಿಯವರು ಕತ್ರಾದಿಂದ ಶ್ರೀನಗರಕ್ಕೆ ಉಧಂಪುರ-ಶ್ರೀನಗರ-ಬಾರಾಮುಲ್ಲಾ ರೈಲು ಸಂಪರ್ಕ (USBRL) ದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಹಸಿರು ನಿಶಾನೆ ತೋರಲಿದ್ದಾರೆ.
ನದಿಯಿಂದ 359 ಮೀಟರ್ ಎತ್ತರದಲ್ಲಿರುವ ವಾಸ್ತುಶಿಲ್ಪದ ಅದ್ಭುತ ಚೆನಾಬ್ ರೈಲು ಸೇತುವೆಯು ವಿಶ್ವದ ಅತಿ ಎತ್ತರದ ರೈಲ್ವೆ ಕಮಾನು ಸೇತುವೆಯಾಗಿದೆ. ಇದು ಭೂಕಂಪ ಮತ್ತು ಪ್ರಬಲ ಗಾಳಿಯ ಪರಿಸ್ಥಿತಿಗಳನ್ನು ತಡೆದುಕೊಳ್ಳುವಂತೆ ವಿನ್ಯಾಸಗೊಳಿಸಲಾದ 1,315 ಮೀಟರ್ ಉದ್ದದ ಉಕ್ಕಿನ ಕಮಾನು ಸೇತುವೆಯಾಗಿದೆ. ಇದು ಜಮ್ಮು-ಶ್ರೀನಗರ ನಡುವಿನ ಸಂಪರ್ಕವನ್ನು ಹೆಚ್ಚಿಸುವುದು.
ಸೇತುವೆಯ ಮೇಲೆ ಚಲಿಸುವ ವಂದೇ ಭಾರತ್ ರೈಲು ಮೂಲಕ, ಕತ್ರಾ ಮತ್ತು ಶ್ರೀನಗರ ನಡುವೆ ಪ್ರಯಾಣಿಸಲು ಕೇವಲ 3 ಗಂಟೆಗಳು ಬೇಕಾಗುತ್ತದೆ, ಇದು ಈಗಿನ ಪ್ರಯಾಣದ ಸಮಯವನ್ನು 2-3 ಗಂಟೆಗಳಷ್ಟು ಕಡಿಮೆ ಮಾಡುತ್ತದೆ.
272 ಕಿಮೀ ಉದ್ದದ ಉಧಂಪುರ-ಶ್ರೀನಗರ-ಬಾರಾಮುಲ್ಲಾ ರೈಲು ಸಂಪರ್ಕ (USBRL) ಯೋಜನೆಯನ್ನು ಪ್ರಧಾನ ಮಂತ್ರಿಗಳು ರಾಷ್ಟ್ರಕ್ಕೆ ಅರ್ಪಿಸಲಿದ್ದು, ಇದರ ಜೊತೆಗೆ ಶ್ರೀ ಮಾತಾ ವೈಷ್ಣೋ ದೇವಿ ಕತ್ರಾದಿಂದ ಶ್ರೀನಗರಕ್ಕೆ ಮತ್ತು ಶ್ರೀನರದಿಂದ ಕತ್ರಾಗೆ ಎರಡು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳನ್ನು ಪ್ರಧಾನ ಮಂತ್ರಿಗಳು ಉದ್ಘಾಟಿಸಲಿದ್ದಾರೆ.
ದೇಶ
ಶೈಕ್ಷಣಿಕ ಜಾಗ ದುರ್ಬಳಕೆ ಆರೋಪ: ಕೆಂಗೇರಿ ಟ್ರಸ್ಟ್ ವಿರುದ್ಧ PIL ವಿಚಾರಣೆ
ಬೆಂಗಳೂರು: ಮೈಸೂರು ರಸ್ತೆಯ ಕೆಂಗೇರಿ ಎಜುಕೇಷನ್ ಟ್ರಸ್ಟ್‌ಗೆ ಸೇರಿದ ಜಾಗದಲ್ಲಿ ನಡೆಯುತ್ತಿರುವ ನಿರ್ಮಾಣ ಕಾಮಗಾರಿಗಳ ಕುರಿತು ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಹೈಕೋರ್ಟ್ ಸಂಬಂಧಪಟ್ಟ ಅಧಿಕಾರಿಗಳಿಗೆ ಮಹತ್ವದ ನಿರ್ದೇಶನ ನೀಡಿದೆ.
ಟ್ರಸ್ಟ್‌ನ ಪದಾಧಿಕಾರಿಗಳು ಹಾಗೂ ಖಾಸಗಿ ಕಂಪನಿಯು ಸಂಬಂಧಪಟ್ಟ ಅಧಿಕಾರಿಗಳ ಪೂರ್ವಾನುಮತಿ ಪಡೆದು ಉಗ್ರಾಣ ಮತ್ತು ಪಾರ್ಕಿಂಗ್ ಕಟ್ಟಡಗಳ ನಿರ್ಮಾಣ ನಡೆಸುತ್ತಿದ್ದಾರೆಯೇ ಎಂಬುದನ್ನು ಪರಿಶೀಲಿಸಿ ಖಚಿತಪಡಿಸಿಕೊಳ್ಳಬೇಕು ಎಂದು ನ್ಯಾಯಾಲಯ ತಿಳಿಸಿದೆ.
ಸ್ಥಳೀಯ ನಿವಾಸಿಗಳಾದ ಎಂ. ಶ್ರೀಕಾಂತ್ ಸೇರಿದಂತೆ ಮೂವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸುನೀಲ್ ದತ್ ಯಾದವ್ ಹಾಗೂ ಎಸ್. ರಾಚಯ್ಯ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ. ಜೊತೆಗೆ ಸರ್ಕಾರ, ಪ್ರಾಥಮಿಕ ಶಾಲಾ ಶಿಕ್ಷಣ ಇಲಾಖೆ, ಜಿಬಿಎ ಟ್ರಸ್ಟ್ ಅಧ್ಯಕ್ಷರು ಮತ್ತು ಟ್ರಸ್ಟಿಗಳಿಗೆ ನೋಟಿಸ್ ಜಾರಿಗೊಳಿಸಿದೆ.
ಅರ್ಜಿದಾರರ ಪ್ರಕಾರ, 1957ರಲ್ಲಿ ಸ್ಥಾಪನೆಯಾದ ಕೆಂಗೇರಿ ಎಜುಕೇಷನ್ ಟ್ರಸ್ಟ್‌ಗೆ ಸ್ಥಳೀಯ ನಿವಾಸಿಗಳು ಸುಮಾರು 12 ಎಕರೆ ಭೂಮಿಯನ್ನು ಶೈಕ್ಷಣಿಕ ಉದ್ದೇಶಕ್ಕಾಗಿ ದಾನವಾಗಿ ನೀಡಿದ್ದರು. ಈ ಜಾಗದಲ್ಲಿ ಸ್ಥಾಪನೆಯಾದ ಕನ್ನಡ ಮಾಧ್ಯಮ ಶಾಲೆಗೆ ಸರ್ಕಾರ ಅನುದಾನಿತ ಶಿಕ್ಷಣ ಸಂಸ್ಥೆಯ ಮಾನ್ಯತೆಯನ್ನೂ ನೀಡಿತ್ತು.
ಆದರೆ, ಪ್ರಸ್ತುತ ಟ್ರಸ್ಟ್‌ನ ಆಡಳಿತವು ಶಾಲೆಯ ಜಾಗವನ್ನು ಶೈಕ್ಷಣಿಕೇತರ ಚಟುವಟಿಕೆಗಳಿಗೆ ಬಳಸುತ್ತಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ. ಟ್ರಸ್ಟ್ ಭೂಮಿಯಲ್ಲಿ ವ್ಯಾಪಾರಿಗಳಿಗಾಗಿ ಉಗ್ರಾಣ ನಿರ್ಮಾಣ ಹಾಗೂ ಆಟದ ಮೈದಾನದಲ್ಲಿ ಸಾರಿಗೆ ಸಂಸ್ಥೆಗಳ ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ದೂರಲಾಗಿದೆ.
ಇದಲ್ಲದೆ, ಟ್ರಸ್ಟ್‌ನ ಹಣಕಾಸು ದುರ್ಬಳಕೆ ನಡೆಯುತ್ತಿದೆ ಎಂಬ ಆರೋಪವನ್ನೂ ಅರ್ಜಿದಾರರು ಮುಂದಿಟ್ಟಿದ್ದಾರೆ. ಶಿಕ್ಷಣಕ್ಕಾಗಿ ದಾನವಾಗಿ ದೊರೆತ ಭೂಮಿಯಲ್ಲಿ ವಾಣಿಜ್ಯ ಚಟುವಟಿಕೆ ನಡೆಯದಂತೆ ಸರ್ಕಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ಅವರು ನ್ಯಾಯಾಲಯವನ್ನು ಕೋರಿದ್ದಾರೆ.
ಪ್ರಕರಣದ ಮುಂದಿನ ವಿಚಾರಣೆ ವೇಳೆ ಸಂಬಂಧಪಟ್ಟ ಇಲಾಖೆಗಳಿಂದ ಸಲ್ಲಿಕೆಯಾಗುವ ವರದಿಯ ಆಧಾರದ ಮೇಲೆ ಹೈಕೋರ್ಟ್ ಮುಂದಿನ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.
ದೇಶ
ರಾಮಲಿಂಗಾರೆಡ್ಡಿ ಬಳಿಕ ಮುನಿಯಪ್ಪ ಬಂಡಾಯ! ಕಾಂಗ್ರೆಸ್ ಹೈಕಮಾಂಡ್ ತುರ್ತು ಸಭೆ
ದೇವನಹಳ್ಳಿ, ಜೂನ್ 5: ನೂತನ ಮುಖ್ಯಮಂತ್ರಿ D. K. Shivakumar ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಖಾತೆ ಹಂಚಿಕೆಯ ಬೆನ್ನಲ್ಲೇ ಅಸಮಾಧಾನದ ಹೊಗೆ ದಟ್ಟವಾಗುತ್ತಿದೆ. ಹಿರಿಯ ನಾಯಕ Ramalinga Reddy ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿದ ಬೆನ್ನಲ್ಲೇ ಆಹಾರ ಸಚಿವ K. H. Muniyappa ಕೂಡ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿರುವುದು ಕಾಂಗ್ರೆಸ್ ಹೈಕಮಾಂಡ್‌ಗೆ ತಲೆನೋವಾಗಿ ಪರಿಣಮಿಸಿದೆ.
ಈ ಬೆಳವಣಿಗೆಯಿಂದ ಎಚ್ಚೆತ್ತುಕೊಂಡಿರುವ ಕಾಂಗ್ರೆಸ್ ವರಿಷ್ಠರು, ಸರ್ಕಾರದ ಆರಂಭದಲ್ಲೇ ಉಂಟಾಗಿರುವ ಬಿಕ್ಕಟ್ಟನ್ನು ಶಮನಗೊಳಿಸಲು ದೇವನಹಳ್ಳಿ ಬಳಿಯ Kempegowda International Airport ಸಮೀಪದ ವಿಐಪಿ ಲಾಂಜ್ ಹಾಗೂ ತಾಜ್ ಹೋಟೆಲ್‌ನಲ್ಲಿ ಮಹತ್ವದ ಸಭೆ ನಡೆಸಿದ್ದಾರೆ.
ಸಭೆಯಲ್ಲಿ ಕಾಂಗ್ರೆಸ್ ನಾಯಕ Rahul Gandhi, ಎಐಸಿಸಿ ಉಸ್ತುವಾರಿ Randeep Singh Surjewala, ಮಾಜಿ ಮುಖ್ಯಮಂತ್ರಿ Siddaramaiah ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗವಹಿಸಿದ್ದು, ಅಸಮಾಧಾನಗೊಂಡಿರುವ ನಾಯಕರನ್ನು ಮನವೊಲಿಸುವ ಪ್ರಯತ್ನ ನಡೆದಿದೆ.
ಖಾತೆ ಹಂಚಿಕೆಯಲ್ಲಿ ತಮ್ಮ ಹಿರಿತನಕ್ಕೆ ಸೂಕ್ತ ಗೌರವ ಸಿಕ್ಕಿಲ್ಲ ಎಂದು ಬೇಸರಗೊಂಡಿರುವ ಕೆ.ಎಚ್. ಮುನಿಯಪ್ಪ, ತಮಗೆ ಕೃಷಿ ಅಥವಾ ಸಮಾಜ ಕಲ್ಯಾಣ ಇಲಾಖೆಯನ್ನು ನೀಡುವಂತೆ ವರಿಷ್ಠರ ಮುಂದೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಅಲ್ಲದೆ, ತಮಗೆ ಹಂಚಿಕೆಯಾಗಿರುವ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜವಾಬ್ದಾರಿಯನ್ನು ಸ್ವೀಕರಿಸುವುದಿಲ್ಲ ಎಂದು ಅವರು ಹಠ ಹಿಡಿದಿರುವುದು ಸರ್ಕಾರಕ್ಕೆ ಮತ್ತಷ್ಟು ಮುಜುಗರ ಉಂಟುಮಾಡಿದೆ.
ಇದಕ್ಕೂ ಮುನ್ನ ಬೆಂಗಳೂರು ನಗರಾಭಿವೃದ್ಧಿ ಖಾತೆ ಕೈತಪ್ಪಿದ್ದರಿಂದ ಅಸಮಾಧಾನಗೊಂಡ ರಾಮಲಿಂಗಾರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದರು. ಇದರಿಂದ ಸರ್ಕಾರ ರಚನೆಯಾದ ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಒಳಗೆ ಭಿನ್ನಮತದ ಧ್ವನಿ ಜೋರಾಗಿದೆ.
ಈ ಬೆಳವಣಿಗೆಗಳು ಕಾಂಗ್ರೆಸ್ ಸರ್ಕಾರಕ್ಕೆ ಆರಂಭದಲ್ಲೇ ರಾಜಕೀಯ ಸವಾಲುಗಳನ್ನು ತಂದೊಡ್ಡಿದ್ದು, ಹೈಕಮಾಂಡ್ ನಡೆಸುತ್ತಿರುವ ಈ ಹೈವೋಲ್ಟೇಜ್ ಸಭೆಯ ಫಲಿತಾಂಶದ ಮೇಲೆ ರಾಜ್ಯ ರಾಜಕಾರಣದ ಮುಂದಿನ ಬೆಳವಣಿಗೆಗಳು ಅವಲಂಬಿತವಾಗಿವೆ.
ದೇಶ
ಬೆಂಗಳೂರು ಟ್ರಾಫಿಕ್ ಪೊಲೀಸರಿಗೆ ಎಸಿ ಹೆಲ್ಮೆಟ್! ಬಿಸಿಲಿನ ತಾಪದಿಂದ ರಕ್ಷಿಸಲು ಬಿಎನ್‌ಸಿಸಿಯ ಹೊಸ ಪ್ರಯೋಗ
ಬೆಂಗಳೂರು, ಜೂನ್ 05: ನಗರದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ತಾಪಮಾನ ಮತ್ತು ಬಿಸಿಲಿನ ತೀವ್ರತೆಯಿಂದ ರಸ್ತೆಗಳಲ್ಲಿ ಕರ್ತವ್ಯ ನಿರ್ವಹಿಸುವ ಸಂಚಾರಿ ಪೊಲೀಸ್ ಸಿಬ್ಬಂದಿಯ ಆರೋಗ್ಯ ರಕ್ಷಣೆಗಾಗಿ ಬೆಂಗಳೂರು ಉತ್ತರ ಮಹಾನಗರ ಪಾಲಿಕೆ (BNCC) ಮಹತ್ವದ ಹೆಜ್ಜೆ ಇಟ್ಟಿದೆ. ಪೈಲಟ್ ಯೋಜನೆಯ ಭಾಗವಾಗಿ ಸಂಚಾರಿ ಪೊಲೀಸರಿಗೆ ಅತ್ಯಾಧುನಿಕ ಎಸಿ (AC) ಹೆಲ್ಮೆಟ್‌ಗಳನ್ನು ವಿತರಿಸಲಾಗಿದೆ.
ಹೊರಾಂಗಣದಲ್ಲಿ ಹಾಗೂ ಟ್ರಾಫಿಕ್ ಸಿಗ್ನಲ್‌ಗಳಲ್ಲಿ ಗಂಟೆಗಟ್ಟಲೆ ನಿಂತು ಕಾರ್ಯನಿರ್ವಹಿಸುವ ಸಿಬ್ಬಂದಿಗೆ ಬಿಸಿಲಿನ ತಾಪದಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟುವ ಉದ್ದೇಶದಿಂದ ಮೊದಲ ಹಂತದಲ್ಲಿ 20 ಎಸಿ ಹೆಲ್ಮೆಟ್‌ಗಳನ್ನು ನೀಡಲಾಗಿದೆ. ಈ ಯೋಜನೆ ‘ಹೀಟ್-ಹೆಲ್ತ್ ಪ್ರೊಟೊಕಾಲ್’ (Heat-Health Protocol) ಅಡಿಯಲ್ಲಿ ಜಾರಿಗೊಂಡಿದ್ದು, ಬೆಂಗಳೂರು ಉತ್ತರ ಮಹಾನಗರ ಪಾಲಿಕೆ, C40 Cities, Sensing Local ಹಾಗೂ ಹಸಿರು ದಳ ಸಂಸ್ಥೆಗಳ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಯಿತು.
ಈ ಎಸಿ ಹೆಲ್ಮೆಟ್‌ಗಳು ಹೆಚ್ಚಿನ ಉಷ್ಣಾಂಶದ ಪರಿಸ್ಥಿತಿಯಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ತಂಪಾದ ವಾತಾವರಣ ಒದಗಿಸುವ ಮೂಲಕ ಹೀಟ್ ಸ್ಟ್ರೆಸ್, ನಿರ್ಜಲೀಕರಣ ಹಾಗೂ ಇತರ ಆರೋಗ್ಯ ಸಮಸ್ಯೆಗಳಿಂದ ರಕ್ಷಣೆ ನೀಡಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಬಿಎನ್‌ಸಿಸಿ ಆಯುಕ್ತ ಪೊಮ್ಮಲ ಸುನಿಲ್ ಕುಮಾರ್, “ಹವಾಮಾನ ಬದಲಾವಣೆ ಮತ್ತು ಉಷ್ಣಾಂಶ ಏರಿಕೆಯಿಂದ ಹೊರಾಂಗಣದಲ್ಲಿ ಕೆಲಸ ಮಾಡುವ ಸಿಬ್ಬಂದಿಯ ಆರೋಗ್ಯ ರಕ್ಷಣೆ ಅತ್ಯಗತ್ಯವಾಗಿದೆ. ಈ ಹಿಂದೆ ಪೌರಕಾರ್ಮಿಕರು, ಆಶಾ ಕಾರ್ಯಕರ್ತೆಯರು ಹಾಗೂ ಒಣ ಕಸ ಸಂಗ್ರಹಣಾ ಕೇಂದ್ರದ ಸಿಬ್ಬಂದಿಗೆ ಕೂಲಿಂಗ್ ಕಿಟ್‌ಗಳನ್ನು ನೀಡಲಾಗಿತ್ತು. ಇದೀಗ ಅದನ್ನು ಸಂಚಾರಿ ಪೊಲೀಸರಿಗೂ ವಿಸ್ತರಿಸಲಾಗಿದೆ” ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಈ ಯೋಜನೆಯನ್ನು ಇಂದಿರಾ ಕ್ಯಾಂಟೀನ್ ಸಿಬ್ಬಂದಿ ಹಾಗೂ ಇತರೆ ಸರ್ಕಾರಿ ಇಲಾಖೆಗಳಿಗೂ ವಿಸ್ತರಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ. ಕಾರ್ಯಕ್ರಮದಲ್ಲಿ ಹೀಟ್ ಸ್ಟ್ರೆಸ್ ಲಕ್ಷಣಗಳು, ಮುನ್ನೆಚ್ಚರಿಕಾ ಕ್ರಮಗಳು ಹಾಗೂ ತುರ್ತು ಪರಿಸ್ಥಿತಿಗಳ ನಿರ್ವಹಣೆ ಕುರಿತು ಸಂಚಾರಿ ಪೊಲೀಸರಿಗೆ ವಿಶೇಷ ಜಾಗೃತಿ ಮೂಡಿಸಲಾಯಿತು.
ಬೆಂಗಳೂರು ನಗರದಲ್ಲಿ ತಾಪಮಾನ ಏರಿಕೆಗೆ ಹೊಂದಿಕೊಳ್ಳುವ ನಿಟ್ಟಿನಲ್ಲಿ ಈ ಎಸಿ ಹೆಲ್ಮೆಟ್ ಯೋಜನೆ ಮಹತ್ವದ ಮಾದರಿಯಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
-
ದೇಶ8 hours agoBig News : ಸಂಪುಟದಲ್ಲಿ ಮೊದಲ ವಿಕೆಟ್ ಪತನ? ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ ಘೋಷಣೆ
-
ಬೆಂಗಳೂರು6 hours agoವಾಹನ ಸವಾರರಿಗೆ ಬಂಪರ್ ಆಫರ್! ಟ್ರಾಫಿಕ್ ಫೈನ್ಗೆ 50% ರಿಯಾಯಿತಿ
-
ದೇಶ5 hours agoಡಿಕೆಶಿ ಸರ್ಕಾರಕ್ಕೆ ಮತ್ತೊಂದು ಶಾಕ್! ರಾಮಲಿಂಗಾ ರೆಡ್ಡಿ ಬಳಿಕ ಕೆ.ಹೆಚ್. ಮುನಿಯಪ್ಪ ಅಸಮಾಧಾನ ಸ್ಫೋಟ
-
ಕ್ರೀಡೆ4 hours agoಮುಂಬೈ ಗಲ್ಲಿಯಲ್ಲಿ ಕ್ರಿಕೆಟ್ ಆಡಿದ ಎಬಿ ಡಿ ವಿಲಿಯರ್ಸ್! ಅಭಿಮಾನಿಗಳ ಹೃದಯ ಗೆದ್ದ RCB ದಿಗ್ಗಜ
-
ದೇಶ5 hours agoಹೊಸ ಪಕ್ಷ, ಹೊಸ ಹೋರಾಟ! ತಮಿಳುನಾಡಿನಲ್ಲಿ ಅಣ್ಣಾಮಲೈ ರಾಜಕೀಯ ಕ್ರಾಂತಿ
-
ದೇಶ6 hours agoರಾಮಲಿಂಗಾರೆಡ್ಡಿ ರಾಜೀನಾಮೆ: ಕಾರಿನ ಚಕ್ರದಡಿ ಮಲಗಿ ಅಭಿಮಾನಿಗಳ ಕಣ್ಣೀರು!
-
ದೇಶ7 hours agoತಮಿಳುನಾಡು ಬಿಜೆಪಿಯಲ್ಲಿ ಭೂಕಂಪ: ಕೆ. ಅಣ್ಣಾಮಲೈ ಪಕ್ಷಕ್ಕೆ ಗುಡ್ಬೈ
-
ದೇಶ8 hours agoಬೋಯಿಂಗ್ 787 ಮತ್ತೊಮ್ಮೆ ಸುದ್ದಿಯಲ್ಲಿ; ಜರ್ಮನಿಯಲ್ಲಿ ನಡೆದ ಘಟನೆ ಸಂಚಲನ
