ರಾಜಕೀಯ
ಬೆಳಗಾವಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಮೇಲೆ ದೂರು ದಾಖಲು!
ಬೆಳಗಾವಿ: ಕಳೆದ ಏಪ್ರಿಲ್ 28 ರಂದು ಕಾಂಗ್ರೆಸ್ ಸಮಾವೇಶದ ವೇಳೆ ಕರ್ತವ್ಯ ನಿರತ ಪೊಲೀಸ್ ಅಧಿಕಾರಿಯೊಬ್ಬರ ಮೇಲೆ ಅಧಿಕಾರದ ದರ್ಪ ಹಾಗೂ ವೇದಿಕೆಯಲ್ಲೇ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ದಾಖಲಾಗಿದೆ,
ಬೆಳಗಾವಿಯಲ್ಲಿ ನಡೆದಿದ್ದ ಕಾಂಗ್ರೆಸ್ ಸಮಾವೇಶದ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಭರಮನಿ ಅವರನ್ನು ಹೊಡೆಯಲೆಂದು ಕೈ ಎತ್ತಿದ್ದರು, ಈ ಘಟನೆ ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು ಇದೀಗ ಈ ಘಟನೆಗೆ ಸಂಬಂಧಪಟ್ಟಂತೆ ಆರ್ ಟಿ ಐ ಕಾರ್ಯಕರ್ತ ಭೀಮಪ್ಪ ಗಡಾ ಅವರು ದೂರ ದಾಖಲಿಸಿದ್ದಾರೆ,
ಸಿಎಂ ಸಿದ್ದರಾಮಯ್ಯ ಅವರು ನಾರಾಯಣ ಭರಮನಿ ಅವರ ಮೇಲೆ ದರ್ಪ ತೋರುವ ಮೂಲಕ ಕರ್ತವ್ಯನಿರತ ಅಧಿಕಾರಿಗೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿ ಭೀಮಪ್ಪ ಗಡಾ ಅವರು ಬೆಳಗಾವಿ ನಗರದ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ,
ಕಾನೂನು ಸಚಿವೆ ಹಾಗೂ ಇನ್ನಿತರ ಸಚಿವರ ಎದುರೇ ಸಿಎಂ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿಗೆ ಕೀಳು ಪದ ಬಳಸಿ ಹೊಡೆಯಲೆಂದು ಕೈ ಎತ್ತಿದ್ದು ಸದ್ಯ ಸಿಎಂ ವಿರುದ್ಧ ಭಾರತೀಯ ನ್ಯಾಯ ಸಂಹಿತೆ 2023-132 ರ ಅಡಿಯಲ್ಲಿ ದೂರು ದಾಖಲಿಸಲಾಗಿದೆ,
ಭಾರತೀಯ ನ್ಯಾಯ ಸಂಹಿತೆ 2023-132 ರ ಕರ್ತವ್ಯದಲ್ಲಿ ನಿರತರಾಗಿದ್ದ ಯಾವುದೇ ಅಧಿಕಾರಿಯ ಮೇಲೆ ಹಲ್ಲೆ ಅಥವಾ ಬಲ ಪ್ರಯೋಗ ಮಾಡುವ ಯಾವುದೇ ವ್ಯಕ್ತಿಗೆ ಎರಡು ವರ್ಷದ ವರೆಗೆ ಜೈಲು ಶಿಕ್ಷೆ ಅಥವಾ ದಂಡ ಅಥವಾ ಎರಡನ್ನು ವಿಧಿಸಬಹುದಾಗಿದೆ,
ದೇಶ
“ಉರ್ಕೆ ಉಂಡ್ರಾ?”: ಮಧುಗಿರಿಯಲ್ಲಿ ‘ಸಿಎಂ ಆಗಿ’ ಘೋಷಣೆಗೆ ಪರಮೇಶ್ವರ್ ತೆಲುಗಿನಲ್ಲಿ ತಿರುಗೇಟು
ತುಮಕೂರು: ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಪೊಲೀಸ್ ಠಾಣೆಯ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರಿಗೆ “ಸಿಎಂ ಆಗಬೇಕು” ಎಂಬ ಘೋಷಣೆ ಕೇಳಿಬಂದ ಘಟನೆ ಚರ್ಚೆಗೆ ಗ್ರಾಸವಾಗಿದೆ. ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿದ್ದ ವೇಳೆ ಅಭಿಮಾನಿಯೊಬ್ಬರು “ನೀವು ಸಿಎಂ ಆಗಬೇಕು” ಎಂದು ಕೂಗಿದ ಪ್ರಸಂಗ ನಡೆದಿದೆ.
ಭಾಷಣದ ಅಂತ್ಯದಲ್ಲಿ ಈ ಘೋಷಣೆ ಕೇಳಿಬಂದಾಗ, ಪರಮೇಶ್ವರ್ ಅವರು ಕ್ಷಣಮಾತ್ರ ನಿಂತು ಕಾರ್ಯಕರ್ತನ ಮಾತಿಗೆ ತೆಲುಗಿನಲ್ಲಿ ಪ್ರತಿಕ್ರಿಯಿಸಿದರು. “ಉರ್ಕೆ ಉಂಡ್ರ… ನೀನು ಸಿಎಂ ಅಂಟ?” ಎಂದು ಹೇಳಿ, “ನಾನು ಸಿಎಂ ಆಗಬೇಕಂತೆ… ಸುಮ್ಮನಿರು” ಎಂದು ಹಾಸ್ಯಭರಿತವಾಗಿ ಹೇಳಿ ಕಾರ್ಯಕರ್ತನ ಬಾಯಿ ಮುಚ್ಚಿಸಿದರು.
ಈ ದೃಶ್ಯ ಅಲ್ಲಿದ್ದ ಜನರಲ್ಲಿ ನಗೆರಸ ಮೂಡಿಸಿದ್ದು, ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ರಾಜಕೀಯ ವಲಯದಲ್ಲೂ ಈ ಘಟನೆ ಚರ್ಚೆಗೆ ಕಾರಣವಾಗಿದ್ದು, ಪರಮೇಶ್ವರ್ ಅವರ ಪ್ರತಿಕ್ರಿಯೆ ಬಗ್ಗೆ ವಿಭಿನ್ನ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.
ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆಯ ಅಭಿವೃದ್ಧಿ, ಮೂಲಸೌಕರ್ಯ ಬಲಪಡಿಸುವುದು ಮತ್ತು ಸಾರ್ವಜನಿಕ ಸೇವೆ ಸುಧಾರಣೆ ಕುರಿತು ಗೃಹ ಸಚಿವರು ಮಾತನಾಡಿದರು. ಆದರೆ “ಸಿಎಂ ಆಗಿ” ಘೋಷಣೆಯ ಘಟನೆ ಸಮಾರಂಭದ ಪ್ರಮುಖ ಹೈಲೈಟ್ ಆಗಿದೆ.
ದೇಶ
638 ಕನ್ನಡ ಶಾಲೆ ಮುಚ್ಚಿದ ಸರ್ಕಾರದ ವಿರುದ್ಧ ಬೊಮ್ಮಾಯಿ ಆಕ್ರೋಶ
ನವದೆಹಲಿ: ರಾಜ್ಯದಾದ್ಯಂತ 638 ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚಿರುವುದು ಕನ್ನಡ ಮತ್ತು ಕನ್ನಡ ಶಿಕ್ಷಣದ ವಿರುದ್ಧದ ಕ್ರಮವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಸಂಸದ ಬಸವರಾಜ ಬೊಮ್ಮಾಯಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನವದೆಹಲಿಯಲ್ಲಿ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಆರ್ಥಿಕ ಸ್ಥಿತಿ ಗಂಭೀರವಾಗಿ ಹದಗೆಟ್ಟಿದೆ ಎಂದು ಆರೋಪಿಸಿದರು. “ಸರ್ಕಾರಿ ನೌಕರರಿಗೆ ಸರಿಯಾಗಿ ಸಂಬಳ ನೀಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಇದೇ ಕಾರಣದಿಂದ ಕನ್ನಡ ಶಾಲೆಗಳನ್ನು ಮುಚ್ಚಲಾಗುತ್ತಿದೆ” ಎಂದು ಹೇಳಿದರು. ಈ ನಿರ್ಧಾರದಿಂದ ಕನ್ನಡ ಭಾಷೆ, ಸಂಸ್ಕೃತಿ ಹಾಗೂ ಗ್ರಾಮೀಣ ವಿದ್ಯಾರ್ಥಿಗಳ ಶಿಕ್ಷಣಕ್ಕೆ ದೊಡ್ಡ ಹೊಡೆತ ಬಿದ್ದಿದೆ ಎಂದು ಅವರು ಅಭಿಪ್ರಾಯಪಟ್ಟರು.
ಕನ್ನಡ ಭಾಷೆಯ ಉಳಿವು ಮತ್ತು ಬೆಳವಣಿಗೆಗೆ ಸರ್ಕಾರ ಬದ್ಧವಾಗಿರಬೇಕು. ಆದರೆ ಪ್ರಸ್ತುತ ಸರ್ಕಾರದ ನಡೆ ಕನ್ನಡ ವಿರೋಧಿ ಧೋರಣೆಯಾಗಿದೆ ಎಂದು ಟೀಕಿಸಿದ ಬೊಮ್ಮಾಯಿ, ಕೂಡಲೇ ಮುಚ್ಚಿರುವ ಎಲ್ಲಾ ಕನ್ನಡ ಶಾಲೆಗಳನ್ನು ಪುನಾರಂಭಿಸಬೇಕು ಎಂದು ಒತ್ತಾಯಿಸಿದರು.
ಇದಕ್ಕೆ ಜೊತೆಗೆ, ಲೋಕಸಭೆ ಸ್ಪೀಕರ್ ವಿರುದ್ಧ ಕಾಂಗ್ರೆಸ್ ಪಕ್ಷ ಅವಿಶ್ವಾಸ ನಿರ್ಣಯ ಮಂಡಿಸಿರುವ ವಿಚಾರಕ್ಕೂ ಪ್ರತಿಕ್ರಿಯಿಸಿದ ಅವರು, “ನಿರಂತರ ಚುನಾವಣಾ ಸೋಲುಗಳಿಂದ ಕಾಂಗ್ರೆಸ್ ಹತಾಶಗೊಂಡಿದೆ” ಎಂದು ಹೇಳಿದರು. ಸಂಸತ್ತಿನಲ್ಲಿ ಬೆಂಚ್‌ಗಳ ಮೇಲೆ ನಿಂತು ಗದ್ದಲ ಮಾಡುವುದು, ಸ್ಪೀಕರ್ ವಿರುದ್ಧ ದಾಳಿ ನಡೆಸುವುದು ಹಾಗೂ ಪ್ರಧಾನಮಂತ್ರಿಯ ಆಸನದವರೆಗೆ ತೆರಳಿ ತಡೆ ಮಾಡುವ ಪ್ರಯತ್ನ ಮಿತಿಮೀರಿದ ವರ್ತನೆ ಎಂದು ಅವರು ಆರೋಪಿಸಿದರು.
ರಾಜಕೀಯದಲ್ಲಿ ಆರೋಗ್ಯಕರ ಚರ್ಚೆ ನಡೆಯಬೇಕು. ಗದ್ದಲ ಹಾಗೂ ಅಶಾಂತಿಯಿಂದ ಪ್ರಜಾಸತ್ತಾತ್ಮಕ ವ್ಯವಸ್ಥೆಗೆ ಧಕ್ಕೆ ಉಂಟಾಗುತ್ತದೆ ಎಂದು ಬೊಮ್ಮಾಯಿ ಎಚ್ಚರಿಸಿದರು.
ದೇಶ
ಅಧಿಕಾರ ಹಂಚಿಕೆ ವಿವಾದ: “ಹೈಕಮಾಂಡ್ ತೀರ್ಮಾನವೇ ಅಂತಿಮ” – ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ಬೆಂಗಳೂರು: ರಾಜ್ಯದಲ್ಲಿ ಅಧಿಕಾರ ಹಂಚಿಕೆ ಕುರಿತು ನಡೆಯುತ್ತಿರುವ ರಾಜಕೀಯ ಚರ್ಚೆಗೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಹೈಕಮಾಂಡ್ ತೀರ್ಮಾನವೇ ಅಂತಿಮವಾಗಿದ್ದು, ಅದಕ್ಕೆ ಅನುಗುಣವಾಗಿ ತಾವು ಹಾಗೂ ಡಿಕೆ ಶಿವಕುಮಾರ್ ನಡೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ.
ಡಿಕೆ ಸುರೇಶ್ ಅವರು “ಸಿಎಂ ಸಿದ್ದರಾಮಯ್ಯ ಕುರ್ಚಿ ಬಿಟ್ಟು ಕೊಡ್ತಾರೆ ಎಂಬ ವಿಶ್ವಾಸ ಇದೆ” ಎಂದು ಹೇಳಿದ ಹಿನ್ನೆಲೆಯಲ್ಲಿ ಮಾಧ್ಯಮಗಳು ಪ್ರಶ್ನೆ ಕೇಳಿದಾಗ ಸಿಎಂ ಅಸಮಾಧಾನ ವ್ಯಕ್ತಪಡಿಸಿದರು. “ಇನ್ನೇನು ಕೇಳೋದೇ ಇಲ್ಲವಾ ನಿಮಗೆ? ಮೂರು ತಿಂಗಳುಗಳಿಂದ ಇದೇ ವಿಚಾರ ಕೇಳ್ತಿದ್ದೀರಿ. ದಯವಿಟ್ಟು ಇನ್ನು ಮುಂದೆ ಈ ಪ್ರಶ್ನೆ ಕೇಳಬೇಡಿ” ಎಂದು ಅವರು ತಿರುಗೇಟು ನೀಡಿದರು.
ಹೈಕಮಾಂಡ್‌ಗೆ ಎಲ್ಲವೂ ತಿಳಿದಿದ್ದು, ಅಂತಿಮ ತೀರ್ಮಾನವನ್ನು ಅವರು ತೆಗೆದುಕೊಳ್ಳುತ್ತಾರೆ. “ಹೈಕಮಾಂಡ್ ಹೇಳಿದಂತೆ ನಾನು ನಡೆದುಕೊಳ್ಳಬೇಕು, ಡಿಕೆ ಶಿವಕುಮಾರ್ ಕೂಡ ನಡೆದುಕೊಳ್ಳಬೇಕು” ಎಂದು ಸಿಎಂ ಹೇಳಿದರು.
ಡಿಕೆ ಸುರೇಶ್ ಅವರ ಹೇಳಿಕೆ ಕುರಿತು ಪ್ರಶ್ನೆ ಕೇಳಿದಾಗ, “ಅವರು ಏನು ಹೇಳಿದ್ರು ಅಂದ್ರೆ ಅವರನ್ನೇ ಕೇಳಿ. ನನಗೆ ಯಾಕೆ ಕೇಳ್ತೀರಾ?” ಎಂದು ಅಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ವಿಚಾರವಾಗಿ ಚರ್ಚೆಗಳು ಜೋರಾಗಿರುವ ನಡುವೆಯೇ ಸಿಎಂ ನೀಡಿರುವ ಈ ಹೇಳಿಕೆ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.
-
ಬೆಂಗಳೂರು2 hours agoBENGALURU : ವಸಂತಪುರ ಶ್ರೀವಸಂತವಲ್ಲಭರಾಯ ಸ್ವಾಮಿಯ ಶಯನೋತ್ಸವ ವೈಭವ
-
ದೇಶ21 hours agoರಾಷ್ಟ್ರಗೀತೆಗೆ ಮುನ್ನ ವಂದೇ ಮಾತರಂ ಹಾಡುವುದು ಕಡ್ಡಾಯ
-
ದೇಶ20 hours agoBIG NEWS : ಫೆ.12 ರಾಷ್ಟ್ರವ್ಯಾಪಿ ಮುಷ್ಕರ: 30 ಕೋಟಿ ಕಾರ್ಮಿಕರು ಬೀದಿಗೆ? ಬ್ಯಾಂಕ್, ಸಾರಿಗೆ ಸೇವೆಗೆ ಹೊಡೆತ ಸಾಧ್ಯತೆ
-
ಕ್ರೀಡೆ20 hours agoT20 WORLD CUP : ಡಬಲ್ ಸೂಪರ್ ಓವರ್ನಲ್ಲಿ ದಕ್ಷಿಣ ಆಫ್ರಿಕಾದ ರೋಚಕ ಗೆಲುವು
-
ದೇಶ19 hours agoLATEST : ರಾಹುಲ್ ಗಾಂಧಿ ವಿರುದ್ಧ ಹಕ್ಕುಚ್ಯುತಿ ಪ್ರಸ್ತಾವನೆ? ರಿಜುಜು ಕಿಡಿ
-
ದೇಶ18 hours agoಎಪ್ಸ್ಟೀನ್ ಫೈಲ್ಸ್ನಲ್ಲಿ ಹರ್ದೀಪ್ ಪುರಿ ಹೆಸರು? ಸಂಸತ್ತಿನಲ್ಲಿ ಗದ್ದಲ, ಸಚಿವರ ಸ್ಪಷ್ಟನೆ
-
ಅಪರಾಧ20 hours agoBENGALURU : ಬೆಂಗಳೂರು ರಸ್ತೆ ಅಪಘಾತಕ್ಕೆ ಇಬ್ಬರು ಪುಟ್ಟ ಮಕ್ಕಳ ಬಲಿ
-
ದೇಶ21 hours agoPOK-ಅಕ್ಸಾಯ್ ಚಿನ್ ಭಾರತದ ಭಾಗ ಎಂದ US… ನಂತರ ಡಿಲೀಟ್!
