Connect with us

ಬೆಂಗಳೂರು

ತಂದೆ ಹೆಸರಲ್ಲಿ ಸ್ವಂತ ಖರ್ಚಿನಲ್ಲಿ 101 ಜನರಿಗೆ ಕಾಶಿಯಾತ್ರೆ ಮಾಡಿಸುತ್ತಿರುವ ನಟ ಜಿಮ್ ರವಿ

Published

on

ಕೋಲಾರ ಮೂಲದ ಎ.ಕೆ‌.ರವಿ ಅವರು ಜಿಮ್ ರವಿ ಎಂದೇ ಖ್ಯಾತರು. ದೇಹದಾರ್ಢ್ಯ ಪಟುವಾಗಿ ದೇಶ, ವಿದೇಶಗಳಲ್ಲಿ ಜನಪ್ರಿಯರಾಗಿರುವ ಜಿಮ್ ರವಿ ಇತ್ತೀಚೆಗೆ “ಪುರುಷೋತ್ತಮ” ಎಂಬ ಚಿತ್ರದಲ್ಲಿ ನಾಯಕನಾಗಿಯೂ ಕಾಣಿಸಿಕೊಂಡಿದ್ದರು. ಅಲ್ಲದೇ, ಸಾಮಾಜಿಕ ಕಾರ್ಯಗಳ ಮೂಲಕವೂ ಹೆಸರು ಸಂಪಾದಿಸಿದ್ದಾರೆ.

ಆದರೆ, ತಾವು ಮಾಡುವ ಸಾಮಾಜಿಕ ಕೆಲಸಕ್ಕೆ ಸಂಬಂಧಿಸಿದಂತೆ ಒಂದು ದಿನವೂ ಪ್ರಚಾರ ಬಯಸಿದವರಲ್ಲ.‌ ಅವರೀಗ ಮತ್ತೊಂದು ಮಹತ್ತರ ಕಾರ್ಯಕ್ಕೆ ಮುಂದಾಗಿದ್ದಾರೆ. ಸ್ನೇಹಿತರ ಒತ್ತಾಯಕ್ಕೆ ಮಣಿದ ರವಿ ಅವರು ಈ ಕಾರ್ಯ ಇತರರಿಗೂ ಮಾದರಿಯಾಗಲಿ ಎಂಬ ಉದ್ದೇಶದಿಂದ ಇತ್ತೀಚೆಗೆ ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು

‌ಕೋಲಾರದಿಂದ ಬೆಂಗಳೂರಿಗೆ ಬಂದು ಟೌನ್ ಹಾಲ್​ನಲ್ಲಿ ನಡೆದ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಮೊದಲ ಬಹುಮಾನ ಗಳಿಸಿದ ವಿಷಯದೊಂದಿಗೆ ಮಾತು ಆರಂಭಿಸಿದ ಜಿಮ್ ರವಿ, ”ನಮ್ಮದು ಮಧ್ಯಮವರ್ಗ ಕುಟುಂಬ‌‌. ಪ್ರತಿದಿನ ಮುದ್ದೆ ತಿನ್ನುತ್ತಿದ್ದ ನಾವು ಹಬ್ಬಗಳಲ್ಲೇ ಅನ್ನ ಉಣ್ಣುತ್ತಿದ್ದದ್ದು. ನನ್ನ ತಾಯಿ ನನಗೆ ಆದರ್ಶ. ಜೀವನದ ಪಾಠ ಕಲಿಸಿದ ಮಹಾತಾಯಿ‌ ಅವರು. ಒಬ್ಬರ ಸುಖಕ್ಕೆ ನೀನು ಆಗದಿದ್ದರೂ ‌ಪರವಾಗಿಲ್ಲ, ಕಷ್ಟದಲ್ಲಿರುವವರ ಜೊತೆಗಿರು. ಹಿರಿಯರೆದುರು ಕೈಕಟ್ಟಿ ನಿಲ್ಲೆಂದು ಅಮ್ಮ ಹೇಳಿಕೊಟ್ಟಿದ್ದಾರೆ. ಹೀಗೆ ಜೀವನ ಸಾಗುತ್ತಿದ್ದಾಗ ಅಮ್ಮ ನಮ್ಮನ್ನು ಬಿಟ್ಟು ಹೋದರು. ಅಮ್ಮನ ನಿಧನದ ಕೆಲ ತಿಂಗಳ ನಂತರ ಅಪ್ಪ, ನನ್ನ ಹತ್ತಿರ ಬಂದು ನಿಮ್ಮ ಅಮ್ಮನ ಸಾವಿನಿಂದ ಬಹಳ ದುಖವಾಗಿದೆ. ಹಾಗಾಗಿ, ನನ್ನನ್ನು ಕಾಶಿ‌ಯಾತ್ರೆಗೆ ಕರೆದುಕೊಂಡು ಹೋಗು ಎಂದರು. ನನ್ನ ಹತ್ತಿರ ಆಗ ಹಣವಿರಲಿಲ್ಲ. ಅಪ್ಪನಿಗೆ ಏರುದನಿಯಲ್ಲಿ ಈಗ ಅದೆಲ್ಲ ಆಗಲ್ಲ ಎಂದುಬಿಟ್ಟೆ”.

ನಮ್ಮ ಯೋಜನೆ ಒಂದಾದರೆ, ವಿಧಿ ಮತ್ತೊಂದು: ”ಅದಾದ ಕೆಲ ತಿಂಗಳ ಬಳಿಕ ಮತ್ತೆ ಕೇಳಿದರು. ಆಗ ನಾನು ಅವರಿಗೆ ವಿಮಾನದಲ್ಲಿ ಕರೆದುಕೊಂಡು ಹೋಗುತ್ತೇನೆಂದು ಹೇಳಿ ಸಮಾಧಾನಪಡಿದೆ.‌ ಕೆಲ ದಿನಗಳ ನಂತರ ಗೆಳೆಯರ ಹತ್ತಿರ ಸಾಲ ಮಾಡಿ ಅಪ್ಪನ ಕಾಶಿಯಾತ್ರೆಗೆ ವಿಮಾನದ ಟಿಕೆಟ್ ಬುಕ್ ಮಾಡಿದೆ.‌ ಆ ವಿಷಯವನ್ನು ಅಪ್ಪನಿಗೆ ಫೋನ್ ಮಾಡಿ ತಿಳಿಸಿದೆ. ಅವರು ಖುಷಿಯಾಗುತ್ತಾರೆ‌. ಆದರೆ ವಿಧಿ ಬೇರೆಯದ್ದಾಗಿತ್ತು,

ಅಪ್ಪನ ಹೆಸರಿನಲ್ಲಿ ಕಾಶಿಯಾತ್ರೆ: ”ನಾನು ಈ ವಿಷಯ ತಿಳಿಸಿದ ಕೆಲವೇ ಗಂಟೆಗಳಲ್ಲೇ ಅಪ್ಪ ನಮ್ಮನ್ನು ಬಿಟ್ಟು ಹೋದರು. ಅವರ ಕಾಶಿಯಾತ್ರೆಯ ಆಸೆಯೂ ಅವರ ಜೊತೆಗೆ ಹೋಗಿ ಬಿಡ್ತು. ಅದೇ ದಿನ ನಾನು ನಿರ್ಧಾರ ಮಾಡಿದೆ. ನಮ್ಮ ಅಪ್ಪನ ಆಸೆ ಈಡೇರಿಸಲು, ಕಾಶಿಯಾತ್ರೆ ಮಾಡಲು ಸಾಧ್ಯವಿಲ್ಲದ ಕೆಲ ಅಶಕ್ತರಿಗೆ ಅಪ್ಪನ ಹೆಸರಿನಲ್ಲಿ ಕಾಶಿಯಾತ್ರೆ ಮಾಡಿಸಬೇಕು ಎಂದು ನಿರ್ಧರಿಸಿದೆ” ಎಂದು ತಿಳಿಸಿದರು.

ಅಪ್ಪ ನಿಧನರಾಗಿ 14 ವರ್ಷಗಳಾಯಿತು. ಅಂದಿನಿಂದ ಈವರೆಗೂ ಅದಕ್ಕೋಸ್ಕರ ಹುಂಡಿ ಇಟ್ಟು ಹಣ ಕೂಡಿಸುತ್ತಿದ್ದೆ. ಯಾವುದೇ ದುಂದು ವೆಚ್ವ‌‌ ಮಾಡದೇ ಹತ್ತು, ಇಪ್ಪತ್ತು ರೂಪಾಯಿಯಿಂದ ಹಿಡಿದು ಸಾವಿರ ರೂಪಾಯಿಗಳವರೆಗೂ ಹುಂಡಿಯಲ್ಲಿ ಹಾಕುತ್ತಿದ್ದೆ. ಈಗದಕ್ಕೆ ಕಾಲ ಕೂಡಿ ಬಂದಿದೆ. ವಾಣಿಜ್ಯ ತೆರೆಗೆ ಅಧಿಕಾರಿಗಳಾದ ಜಗನ್ನಾಥ್ ಹಾಗೂ ಕುಟುಂಬದವರ ಮಾರ್ಗದರ್ಶನದಲ್ಲಿ ರಾಜ್ಯದ ವಿವಿಧ ಕಡೆಗಳಿಂದ ಸುಮಾರು 80 ಜನ ಅಸಕ್ತರನ್ನು ನಾನೇ ಖುದ್ದಾಗಿ ಭೇಟಿ ಮಾಡಿದ್ದು, ಅವರ ಜೊತೆ 101 ಜನರ ತಂಡ ಜುಲೈ 2ರಂದು ಪಯಣ ಬೆಳೆಸುತ್ತಿದ್ದೇವೆ” ಎಂದು ತಿಳಿಸಿದರು.

ಅವರ ಊರಿನಿಂದ ಬರುವ ಪ್ರಯಾಣದ ವೆಚ್ಚದಿಂದ ಹಿಡಿದು ಎಲ್ಲ ವ್ಯವಸ್ಥೆಯನ್ನೂ ನಾವೇ ಮಾಡುತ್ತಿದ್ದೇವೆ‌. ಜುಲೈ 2ರ ಬೆಳಗ್ಗೆ ಬೆಂಗಳೂರು ವಿಮಾನ ನಿಲ್ದಾಣದಿಂದ ರಾಮ ಜನ್ಮಭೂಮಿ ಅಯೋಧ್ಯೆಗೆ ಪಯಣ ಕೈಗೊಳ್ಳಲಿದ್ದೇವೆ. ಅಲ್ಲಿಂದ ಪ್ರಯಾಗರಾಜ. ಅಲ್ಲಿಂದ ಕಾಶಿ. ಒಟ್ಟು 3 ದಿನಗಳ ಯಾತ್ರೆ. ಎಲ್ಲಾ ಕಡೆ ಎಸಿ ವಾಹನ ಹಾಗೂ ಎಸಿ ಕೊಠಡಿ ವ್ಯವಸ್ಥೆ ಮಾಡಲಾಗಿದೆ‌. ನಮ್ಮ ಜೊತೆ ವೈದ್ಯರು ಹಾಗೂ ಸ್ವಯಂ ಸೇವಕರಿರುತ್ತಾರೆ. ಆಹ್ವಾನಿಸಿದ ಅತಿಥಿಗಳಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮದು. ನನಗೆ ಈ ವಿಚಾರ‌ ಪ್ರಚಾರ ಮಾಡುವ ಉದ್ದೇಶವಿರಲಿಲ್ಲ. ಸ್ನೇಹಿತರೋರ್ವರು, ನೀವು ಈ ವಿಷಯ ಜನರಿಗೆ ತಿಳಿಸಿ, ಅದು ಎಷ್ಟೋ ಜನರಿಗೆ ಆದರ್ಶವಾಗಬಹುದು ಎಂದರು. ಹಾಗಾಗಿ, ನಿಮ್ಮ ಮುಂದೆ ಈ ವಿಷಯ ತಿಳಿಸಿದ್ದೇನೆ. ದೇವರು ಅನುಕೂಲ ಮಾಡಿಕೊಟ್ಟರೆ ಮುಂದೆಯೂ ಇದೇ ರೀತಿಯ ಕಾರ್ಯಕ್ರಮ ಹಮ್ಮಿಕೊಳ್ಳುವ ಯೋಜನೆ ಇದೆ ಎಂದು ಮಾಹಿತಿ ನೀಡಿದರು

ದೇಶ

ಜಿ. ಪರಮೇಶ್ವರ್‌ಗೆ ‘ಗೊತ್ತಿಲ್ಲ ಸಚಿವ’ ಬಿರುದು; ಬಿಜೆಪಿ ನಾಯಕಿಯ ತೀವ್ರ ಟೀಕೆ

Published

on

ಬೆಂಗಳೂರು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು “ಆರ್‌ಎಸ್‌ಎಸ್ ಸಚಿವ” ಎಂದು ಹಾಗೂ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಅವರನ್ನು “ಗೊತ್ತಿಲ್ಲ ಸಚಿವ” ಎಂದು ವ್ಯಂಗ್ಯವಾಡುವ ಮೂಲಕ ರಾಜ್ಯ ಸರ್ಕಾರದ ಕಾರ್ಯವೈಖರಿಯನ್ನು ಟೀಕಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶೋಭಾ ಕರಂದ್ಲಾಜೆ, ಪ್ರಿಯಾಂಕ್ ಖರ್ಗೆ ತಮ್ಮ ಇಲಾಖೆಯ ಜವಾಬ್ದಾರಿಗಳಿಗಿಂತ ಆರ್‌ಎಸ್‌ಎಸ್ ಸಂಘಟನೆಯನ್ನು ಟೀಕಿಸುವುದರಲ್ಲೇ ಹೆಚ್ಚು ಸಮಯ ಕಳೆಯುತ್ತಿದ್ದಾರೆ ಎಂದು ಆರೋಪಿಸಿದರು. ಅವರಿಗೆ ವಹಿಸಿರುವ ಸಚಿವ ಖಾತೆಯ ಕೆಲಸಗಳನ್ನು ಬದಿಗೊತ್ತಿ ಪ್ರತಿದಿನ ಆರ್‌ಎಸ್‌ಎಸ್ ಕುರಿತು ಮಾತನಾಡುತ್ತಿರುವ ಕಾರಣ, ಅವರು ಕಾಂಗ್ರೆಸ್ ಸರ್ಕಾರದ **”ಆರ್‌ಎಸ್‌ಎಸ್ ಸಚಿವ”**ರಂತೆ ವರ್ತಿಸುತ್ತಿದ್ದಾರೆ ಎಂದು ಹೇಳಿದರು.

ಇದೇ ವೇಳೆ, ಉಪ ಮುಖ್ಯಮಂತ್ರಿ ಹಾಗೂ ಗೃಹ ಇಲಾಖೆಯ ಜವಾಬ್ದಾರಿ ನಿರ್ವಹಿಸುತ್ತಿರುವ ಜಿ. ಪರಮೇಶ್ವರ್ ಅವರ ಮೇಲೂ ಶೋಭಾ ಕರಂದ್ಲಾಜೆ ಟೀಕಾ ಪ್ರಹಾರ ನಡೆಸಿದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಅಥವಾ ಗಂಭೀರ ಘಟನೆಗಳ ಕುರಿತು ಮಾಧ್ಯಮಗಳು ಪ್ರಶ್ನಿಸಿದಾಗಲೆಲ್ಲಾ “ಗೊತ್ತಿಲ್ಲ”, “ಮಾಹಿತಿ ಇಲ್ಲ” ಎಂಬ ಉತ್ತರ ನೀಡುತ್ತಾರೆ ಎಂದು ಆರೋಪಿಸಿದರು. ಇದೇ ಕಾರಣಕ್ಕೆ ಅವರನ್ನು “ಗೊತ್ತಿಲ್ಲ ಸಚಿವ” ಎಂದು ಕರೆಯಬೇಕಾಗಿದೆ ಎಂದು ವ್ಯಂಗ್ಯವಾಡಿದರು.

ಬಿಜೆಪಿ, ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಮತ್ತು ಆರ್‌ಎಸ್‌ಎಸ್ ಕುರಿತು ಕಾಂಗ್ರೆಸ್ ನಾಯಕರು ಮಾಡುತ್ತಿರುವ ಹೇಳಿಕೆಗಳನ್ನು ವಿರೋಧಿಸಿ ರಾಜ್ಯಾದ್ಯಂತ ರಾಜಕೀಯ ಹೋರಾಟ ನಡೆಸುತ್ತಿರುವ ಹಿನ್ನೆಲೆಯಲ್ಲೇ ಶೋಭಾ ಕರಂದ್ಲಾಜೆ ಈ ಹೇಳಿಕೆ ನೀಡಿದ್ದಾರೆ. ಅವರ ಈ ಟೀಕೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಆಡಳಿತ ಮತ್ತು ಪ್ರತಿಪಕ್ಷಗಳ ನಡುವಿನ ವಾಕ್ಸಮರ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.

ಸೂಚನೆ: ಈ ವರದಿಯಲ್ಲಿ ಉಲ್ಲೇಖಿಸಿರುವ ಆರೋಪಗಳು ಮತ್ತು ಹೇಳಿಕೆಗಳು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಸಾರ್ವಜನಿಕವಾಗಿ ವ್ಯಕ್ತಪಡಿಸಿದ ಅಭಿಪ್ರಾಯಗಳಾಗಿವೆ. ಸಂಬಂಧಪಟ್ಟ ಸಚಿವರ ಪ್ರತಿಕ್ರಿಯೆ ಈ ವರದಿಯಲ್ಲಿ ಲಭ್ಯವಿಲ್ಲ.

Continue Reading

ದೇಶ

ಸಾರ್ವಜನಿಕರಿಗೆ ಗುಡ್ ನ್ಯೂಸ್! ಭಾನುವಾರವೂ ಸಿಗಲಿವೆ ನೋಂದಣಿ ಸೇವೆಗಳು

Published

on

ಬೆಂಗಳೂರು: ರಾಜ್ಯದಾದ್ಯಂತ ಇರುವ ಎಲ್ಲಾ ಉಪ ನೋಂದಣಿ ಕಚೇರಿಗಳು ಜುಲೈ 12ರ ಭಾನುವಾರ ರಜಾ ದಿನವಾಗಿದ್ದರೂ ಸಾರ್ವಜನಿಕರ ಅನುಕೂಲಕ್ಕಾಗಿ ಎಂದಿನಂತೆ ಕಾರ್ಯನಿರ್ವಹಿಸಲಿವೆ ಎಂದು ನೋಂದಣಿ ಮತ್ತು ಮುದ್ರಾಂಕಗಳ ಇಲಾಖೆ ಮಹತ್ವದ ಪ್ರಕಟಣೆ ಹೊರಡಿಸಿದೆ.

ಸಾಮಾನ್ಯವಾಗಿ ಭಾನುವಾರ ಸರ್ಕಾರಿ ಕಚೇರಿಗಳಿಗೆ ರಜೆ ಇರುತ್ತದೆ. ಆದರೆ ಇಲಾಖೆಯಲ್ಲಿ ಹೆಚ್ಚುತ್ತಿರುವ ಕಾರ್ಯದೊತ್ತಡವನ್ನು ಕಡಿಮೆ ಮಾಡುವ ಜೊತೆಗೆ ಸಾರ್ವಜನಿಕರಿಗೆ ತ್ವರಿತ ಸೇವೆ ಒದಗಿಸುವ ಉದ್ದೇಶದಿಂದ ಈ ವಿಶೇಷ ನಿರ್ಧಾರ ಕೈಗೊಳ್ಳಲಾಗಿದೆ. ಇದರಿಂದ ಆಸ್ತಿ ನೋಂದಣಿ ಸೇರಿದಂತೆ ವಿವಿಧ ಸೇವೆಗಳನ್ನು ಪಡೆಯಲು ಕಾಯುತ್ತಿದ್ದವರಿಗೆ ಅನುಕೂಲವಾಗಲಿದೆ.

ಇಲಾಖೆಯ ಪ್ರಕಟಣೆಯ ಪ್ರಕಾರ, ಜುಲೈ 12ರಂದು ಎಲ್ಲಾ ಉಪ ನೋಂದಣಿ ಕಚೇರಿಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲಿವೆ. ಸಾರ್ವಜನಿಕರು ಎಂದಿನಂತೆ ಆಸ್ತಿ ನೋಂದಣಿ, ಮುದ್ರಾಂಕ (Stamp) ಖರೀದಿ ಹಾಗೂ ಇಲಾಖೆಗೆ ಸಂಬಂಧಿಸಿದ ಇತರ ಸೇವೆಗಳನ್ನು ಯಾವುದೇ ಅಡಚಣೆಯಿಲ್ಲದೆ ಪಡೆಯಬಹುದಾಗಿದೆ.

ಈ ವಿಶೇಷ ವ್ಯವಸ್ಥೆಯಿಂದ ವಾರದ ಕೆಲಸದ ದಿನಗಳಲ್ಲಿ ಕಚೇರಿಗೆ ತೆರಳಲು ಸಾಧ್ಯವಾಗದ ಉದ್ಯೋಗಿಗಳು, ವ್ಯಾಪಾರಸ್ಥರು ಹಾಗೂ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ. ಈಗಾಗಲೇ ನೋಂದಣಿ ಪ್ರಕ್ರಿಯೆಗೆ ಸಮಯ ನಿಗದಿಪಡಿಸಿಕೊಂಡಿರುವವರು ಕೂಡ ಈ ಅವಕಾಶವನ್ನು ಬಳಸಿಕೊಳ್ಳಬಹುದು.

ನೋಂದಣಿ ಮತ್ತು ಮುದ್ರಾಂಕಗಳ ಇಲಾಖೆ ಸಾರ್ವಜನಿಕರು ಈ ವಿಶೇಷ ಸೇವೆಯ ಸದುಪಯೋಗ ಪಡೆದು ತಮ್ಮ ನೋಂದಣಿ ಸಂಬಂಧಿತ ಕೆಲಸಗಳನ್ನು ಪೂರ್ಣಗೊಳಿಸಿಕೊಳ್ಳುವಂತೆ ಮನವಿ ಮಾಡಿದೆ. ಭಾನುವಾರವೂ ಸೇವೆ ಲಭ್ಯವಿರುವುದರಿಂದ ನೋಂದಣಿ ಪ್ರಕ್ರಿಯೆಯಲ್ಲಿ ಉಂಟಾಗುವ ವಿಳಂಬವೂ ಕಡಿಮೆಯಾಗುವ ನಿರೀಕ್ಷೆಯಿದೆ.

Continue Reading

ದೇಶ

14 ಗಂಟೆಯಲ್ಲಿ 265 ಕಿ.ಮೀ ಪಯಣ; MLA ಸುರೇಶ್ ಕುಮಾರ್ ಅವರ ಫಿಟ್ನೆಸ್‌ಗೆ ಜನ ಫಿದಾ

Published

on

ಬೆಂಗಳೂರು: ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಸ್. ಸುರೇಶ್ ಕುಮಾರ್ ಅವರು ಮತ್ತೊಮ್ಮೆ ತಮ್ಮ ಫಿಟ್ನೆಸ್ ಮತ್ತು ಆರೋಗ್ಯದ ಬಗ್ಗೆ ಇರುವ ಬದ್ಧತೆಯನ್ನು ಸಾಬೀತುಪಡಿಸಿದ್ದಾರೆ. 70 ವರ್ಷದ ವಯಸ್ಸಿನಲ್ಲಿಯೂ ಯುವಕರಿಗೆ ಮಾದರಿಯಾಗುವಂತೆ ಅವರು ಬೆಂಗಳೂರುದಿಂದ ತಿರುಪತಿವರೆಗೆ 265 ಕಿಲೋಮೀಟರ್‌ಗಳನ್ನು ಸೈಕಲ್‌ನಲ್ಲಿ ಕ್ರಮಿಸಿ ಗಮನ ಸೆಳೆದಿದ್ದಾರೆ.

ರಾಜಾಜಿನಗರ ಪೆಡಲ್ ಪವರ್-ಸೈಕ್ಲಿಂಗ್‘ ತಂಡದ ಸದಸ್ಯರೊಂದಿಗೆ ಅವರು ಜುಲೈ 10ರಂದು ಆರಂಭವಾದ ಈ ಸೈಕ್ಲಿಂಗ್ ಯಾತ್ರೆಯಲ್ಲಿ ಭಾಗವಹಿಸಿದ್ದರು. ಜುಲೈ 9ರಂದು ಬೆಳಗ್ಗೆ 4:30ಕ್ಕೆ ಬಸವೇಶ್ವರನಗರದಿಂದ ಹೊರಟ ತಂಡವು ಶುಕ್ರವಾರ ಮಧ್ಯಾಹ್ನ ಸುಮಾರು 2 ಗಂಟೆಗೆ ತಿರುಪತಿ ತಲುಪಿತು. ಮಧ್ಯದಲ್ಲಿ ಮದನಪಲ್ಲಿಯಲ್ಲಿ ರಾತ್ರಿ ವಾಸ್ತವ್ಯ ಮಾಡಿದ್ದ ತಂಡ ಒಟ್ಟು 265 ಕಿಲೋಮೀಟರ್‌ಗಳನ್ನು ಸುಮಾರು 14 ಗಂಟೆ 10 ನಿಮಿಷಗಳಲ್ಲಿ ಪೂರ್ಣಗೊಳಿಸಿದೆ.

ವಿಶೇಷವೆಂದರೆ, ಇದು ಸುರೇಶ್ ಕುಮಾರ್ ಅವರ ಮೊದಲ ತಿರುಪತಿ ಸೈಕಲ್ ಯಾತ್ರೆಯಲ್ಲ. 2024 ಮತ್ತು 2025ರಲ್ಲೂ ಇದೇ ರೀತಿಯಲ್ಲಿ ಸೈಕಲ್ ಮೂಲಕ ತಿರುಪತಿಗೆ ತೆರಳಿ ಆರೋಗ್ಯಕರ ಜೀವನಶೈಲಿಯ ಮಹತ್ವವನ್ನು ಸಾರಿದ್ದರು. ಈ ವರ್ಷವೂ ತಮ್ಮ ತಂಡದೊಂದಿಗೆ ಪೆಡಲ್ ಹೊಡೆದು ಯಶಸ್ವಿಯಾಗಿ ಗುರಿ ತಲುಪಿದ್ದಾರೆ.

ಪ್ರಯಾಣದ ಬಳಿಕ ಮಾತನಾಡಿದ ಶಾಸಕ ಎಸ್. ಸುರೇಶ್ ಕುಮಾರ್, “ಈ ಯಾತ್ರೆ ನಮ್ಮ ತಂಡಕ್ಕೆ ಹೊಸ ಉತ್ಸಾಹ ಮತ್ತು ಆತ್ಮವಿಶ್ವಾಸ ನೀಡಿದೆ. ಇಂತಹ ಸೈಕ್ಲಿಂಗ್ ಚಟುವಟಿಕೆಗಳು ಆರೋಗ್ಯ ಕಾಪಾಡಿಕೊಳ್ಳಲು ಅತ್ಯುತ್ತಮ ಮಾರ್ಗ” ಎಂದು ಹೇಳಿದರು.

ಸಾರ್ವಜನಿಕ ಜೀವನದ ಜೊತೆಗೆ ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡಿರುವ ಸುರೇಶ್ ಕುಮಾರ್ ಅವರ ಈ ಸಾಧನೆ ಸಾಮಾಜಿಕ ಜಾಲತಾಣಗಳಲ್ಲೂ ಮೆಚ್ಚುಗೆಗೆ ಪಾತ್ರವಾಗಿದ್ದು, ಯುವಜನತೆಗೆ ಮಾತ್ರವಲ್ಲದೆ ಎಲ್ಲ ವಯೋಮಾನದವರಿಗೂ ಫಿಟ್ನೆಸ್ ಬಗ್ಗೆ ಜಾಗೃತಿ ಮೂಡಿಸುವ ಸಂದೇಶವಾಗಿದೆ.

Continue Reading

Trending