Connect with us

ರಾಜಕೀಯ

ಗಂಡಸರಿಗೂ ಫ್ರೀ….ಫ್ರೀ….ಫ್ರೀ ಗ್ಯಾರಂಟಿ ಯೋಜನೆ ಬಗ್ಗೆ ರಾಯರೆಡ್ಡಿ ಮತ್ತೊಂದು ಶಾಕಿಂಗ್ ಹೇಳಿಕೆ!

Published

on

ಕೊಪ್ಪಳ: ರಾಜ್ಯದಲ್ಲಿ ಗ್ಯಾರಂಟಿ ಯೋಜನೆಯ ಭಾಗವಾದ ಮಹಿಳೆಯರ ಫ್ರೀ ಬಸ್ ವ್ಯವಸ್ಧೆ ಜಾರಿಯಲ್ಲಿದೆ, ಈ ಉಚಿತ ಯೋಜನೆಯಿಂದ ಬೊಕ್ಕಸಕ್ಕೆ ಹೊರೆಯಾಗಿದೆ ಎಂಬೆಲ್ಲಾ ಮಾತುಗಳು ಸಹ ಒಂದು ಕಡೆ ಕೇಳಿ ಬಂದಿದೆ, ಇದೀಗ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಒಂದು ಹೊಸ ಭರವಸೆ ನೀಡಿದ್ದು, ಸದ್ಯ ಎಲ್ಲಡೆ ಚರ್ಚೆಗೆ ಗ್ರಾಸವಾಗಿದೆ,
ಹೌದು ಮೊನ್ನೆಯಷ್ಟೇ ರಸ್ತೆ ಬೇಕು, ಅಭಿವೃದ್ಧಿ ಮಡ್ಬೇಕು ಅಂದ್ರೆ ಗ್ರಾರಂಟಿ ಯೋಜನೆಗಳನ್ನು ನಿಲ್ಲಸಬೇಕಾಗುತ್ತೆ ಎಂದು ಹೇಳಿಕೆ ನೀಡಿ ಉಲ್ಟಾ ಹೊಡೆದಿದ್ದ ಶಾಸಕ ಬಸವರಾಜ ರಾಯರೆಡ್ಡಿ ಇದೀಗ ಹೊಸ ಮ್ಯಾಟರ್ ಹೇಳಿದ್ದಾರೆ, ಕೊಪ್ಪಳದ ಪ್ರೌಢಶಾಲಾ ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಆಕಸ್ಮಾತ್ ರಾಜ್ಯದಲ್ಲಿ ಆರ್ಥಿಕ ಪರಿಸ್ಧಿತಿ ಇನ್ನಷ್ಟು ಸುಧಾರಣೆ ಆದರೆ ಗಂಡು ಮಕ್ಕಳಿಗೂ ಉಚಿತ ಪ್ರಯಾಣ ವ್ಯವಸ್ಧೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ, ಅದಲ್ಲದೇ ವಿರೋಧ ಪಕ್ಷದ ವಿರುದ್ಧ ಕಿಡಿಕಾರಿರಿರುವ ಅವರು ನಾವು ಯಾವುದೇ ಗ್ಯಾರೆಂಟಿ ಯೋಜನೆಗಳಿಗೆ ವಿರೋಧ ಮಾಡುತ್ತಿಲ್ಲ, ಅಭಿವೃದ್ಧಿ ಕೆಲಸದ ಬಗ್ಗೆ ಮಾತನಾಡಿದರೆ ಏನೇನೋ ಮಾತನಾಡುತ್ತಾರೆ ಎಂದು ಟೀಕೆ ಮಾಡಿದ್ದಾರೆ,
ರಾಜ್ಯದಲ್ಲಿ ಖಜಾನೆ ಖಾಲಿ ಆಗಿದೆ, ಗ್ಯಾರಂಟಿ ಯೋಜನೆಗಳ ಕಾರಣದಿಂದ ಸರ್ಕಾರದ ಬಳಿ ಹಣ ಕಡಿಮೆ ಇದೆ ಎಂಬೆಲ್ಲಾ ಮಾತುಗಳು ರಾಜಕಾರಣದಲ್ಲಿ ಕೇಳಿ ಬರುತ್ತಿದೆ, ಇದಕ್ಕೆ ಸಹ ಉತ್ತರ ನೀಡಿರುವ ಅವರು ಸರ್ಕಾರದ ಬಳಿ ಹಣ ಇಲ ಅಂತ ಹೇಳಿದ್ದು ಯಾರು? ನಮ್ಮ ಮೇಲೆ ಬಿಜೆಪಿ ಅವರು 2 ಲಕ್ಷ ಕೋಟಿ ರೂಪಾಯಿ ಹಾಕಿ ಹೋಗಿದ್ದಾರೆ, ಅದರೂ ಸರ್ಕಾರ ಅಭಿವೃದ್ಧಿ ಮಾಡಲು ಸಾಧ್ಯವಾಗಿದೆ, ನಮ್ಮ ಸರ್ಕಾರ ಬಳಿ ಅನುದಾನ ಕೊಡಲು ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಿದ್ದಾರೆ,

Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ರಾಜಕೀಯ

KS Eshwarappa: 2028ರ ಚುನಾವಣೆಗೆ ಈಶ್ವರಪ್ಪ ಬಿಗ್ ಘೋಷಣೆ; ಶಿವಮೊಗ್ಗದಿಂದ ತಾವೋ, ಮಗನೋ ಸ್ಪರ್ಧೆ ಖಚಿತ!

Published

on

ಶಿವಮೊಗ್ಗ: ಬಿಜೆಪಿ ವಿರುದ್ಧದ ತಮ್ಮ ಅಸಮಾಧಾನವನ್ನು ಮತ್ತೊಮ್ಮೆ ಬಹಿರಂಗಪಡಿಸಿರುವ ಹಿರಿಯ ರಾಜಕಾರಣಿ KS Eshwarappa, 2028ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಶಿವಮೊಗ್ಗ ನಗರ ಕ್ಷೇತ್ರದಿಂದ ತಾವಾಗಲಿ ಅಥವಾ ತಮ್ಮ ಮಗನಾಗಲಿ ಸ್ಪರ್ಧಿಸುವುದು ಶೇ.100ರಷ್ಟು ಖಚಿತ ಎಂದು ಘೋಷಿಸಿದ್ದಾರೆ. ಈಶ್ವರಪ್ಪ ಅವರ ಹೇಳಿಕೆ ರಾಜ್ಯ ರಾಜಕೀಯ ವಲಯದಲ್ಲಿ ಮತ್ತೆ ಚರ್ಚೆಗೆ ಕಾರಣವಾಗಿದೆ.

ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಈಶ್ವರಪ್ಪ, ಲೋಕಸಭಾ ಚುನಾವಣೆಯಲ್ಲಿ ತಮ್ಮ ಮಗನಿಗೆ ಬಿಜೆಪಿ ಟಿಕೆಟ್ ನೀಡದ ವಿಚಾರದ ಬೇಸರ ಇನ್ನೂ ತಮ್ಮಲ್ಲಿದೆ ಎಂದು ಹೇಳಿದ್ದಾರೆ. ಪಕ್ಷದ ನಾಯಕರ ನಿರ್ಧಾರದಿಂದ ತಮ್ಮ ಕುಟುಂಬಕ್ಕೆ ಅನ್ಯಾಯವಾಗಿದೆ ಎಂಬ ಅಸಮಾಧಾನವನ್ನು ಅವರು ವ್ಯಕ್ತಪಡಿಸಿದ್ದಾರೆ.

ಮಗನಿಗೆ ಟಿಕೆಟ್ ನೀಡದಿದ್ದಕ್ಕೆ ಅಸಮಾಧಾನ

ಬಿ.ಎಸ್. ಯಡಿಯೂರಪ್ಪ ಅವರ ಪುತ್ರರಾದ ಬಿ.ವೈ. ವಿಜಯೇಂದ್ರ ಮತ್ತು ಬಿ.ವೈ. ರಾಘವೇಂದ್ರ ಅವರಿಗೆ ರಾಜಕೀಯದಲ್ಲಿ ಅವಕಾಶ ನೀಡಲಾಗಿದೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪುತ್ರನಿಗೂ ಟಿಕೆಟ್ ನೀಡಲಾಗಿದೆ. ಆದರೆ ತಮ್ಮ ಮಗನಿಗೆ ಮಾತ್ರ ಅವಕಾಶ ನೀಡದೆ ಅನ್ಯಾಯ ಮಾಡಲಾಗಿದೆ ಎಂದು ಈಶ್ವರಪ್ಪ ಆರೋಪಿಸಿದ್ದಾರೆ.

ಈ ವಿಚಾರ ತಮ್ಮಲ್ಲಿ ಇನ್ನೂ ಬೇಸರ ಮೂಡಿಸಿದೆ ಎಂದು ಅವರು ಹೇಳಿದ್ದಾರೆ. ಇದೇ ಕಾರಣದಿಂದ ಬಿಜೆಪಿಯಲ್ಲಿನ ತಮ್ಮ ರಾಜಕೀಯ ಸಂಬಂಧಗಳ ಬಗ್ಗೆ ಈಶ್ವರಪ್ಪ ಅವರ ಹೇಳಿಕೆಗಳು ಮಹತ್ವ ಪಡೆದುಕೊಂಡಿವೆ.

‘ತಾವಾಗಲಿ, ಮಗನಾಗಲಿ ಸ್ಪರ್ಧೆ ಖಚಿತ’

2028ರ ವಿಧಾನಸಭಾ ಚುನಾವಣೆಯ ಕುರಿತು ತಮ್ಮ ನಿಲುವನ್ನು ಸ್ಪಷ್ಟಪಡಿಸಿರುವ ಈಶ್ವರಪ್ಪ, ಶಿವಮೊಗ್ಗ ನಗರ ಕ್ಷೇತ್ರದಿಂದ ತಾವಾಗಲಿ ಅಥವಾ ತಮ್ಮ ಮಗನಾಗಲಿ ಸ್ಪರ್ಧಿಸುವುದು ಖಚಿತ ಎಂದು ಹೇಳಿದ್ದಾರೆ.

ಈ ಮೂಲಕ ಮುಂದಿನ ವಿಧಾನಸಭಾ ಚುನಾವಣೆಯಲ್ಲೂ ಶಿವಮೊಗ್ಗ ನಗರ ಕ್ಷೇತ್ರದ ರಾಜಕೀಯದಲ್ಲಿ ತಮ್ಮ ಕುಟುಂಬದ ಪಾತ್ರ ಇರಲಿದೆ ಎಂಬ ಸ್ಪಷ್ಟ ಸಂದೇಶ ನೀಡಿದ್ದಾರೆ. ಆದರೆ ಅಭ್ಯರ್ಥಿಯಾಗಿ ತಾವೇ ಸ್ಪರ್ಧಿಸುತ್ತಾರೆಯೇ ಅಥವಾ ತಮ್ಮ ಮಗನನ್ನು ಕಣಕ್ಕಿಳಿಸುತ್ತಾರೆಯೇ ಎಂಬುದನ್ನು ಅವರು ಇನ್ನೂ ಅಂತಿಮವಾಗಿ ತಿಳಿಸಿಲ್ಲ.

ಬಿಜೆಪಿ ನಾಯಕರೊಂದಿಗೆ ಸಂಪರ್ಕ ಮುಂದುವರಿಕೆ

ಇದೇ ವೇಳೆ ಬಿಜೆಪಿ ನಾಯಕರೊಂದಿಗೆ ತಮ್ಮ ಸಂಪರ್ಕ ಇನ್ನೂ ಮುಂದುವರಿದಿದೆ ಎಂದು ಈಶ್ವರಪ್ಪ ಹೇಳಿದ್ದಾರೆ. ಪಕ್ಷದ ಹಲವು ನಾಯಕರು ತಮ್ಮೊಂದಿಗೆ ಮಾತನಾಡುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಬಿಜೆಪಿಯಲ್ಲಿ ಪ್ರಸ್ತುತ ಹಲವು ಗಂಭೀರ ಸಮಸ್ಯೆಗಳಿವೆ ಎಂದು ಅಭಿಪ್ರಾಯಪಟ್ಟಿರುವ ಈಶ್ವರಪ್ಪ, ಇದೇ ಪರಿಸ್ಥಿತಿಯಲ್ಲಿ ಪಕ್ಷ ಮುಂದಿನ ಚುನಾವಣೆಯನ್ನು ಎದುರಿಸಿದರೆ ನಿರೀಕ್ಷಿತ ಪ್ರಮಾಣದಲ್ಲಿ ಸ್ಥಾನಗಳನ್ನು ಗೆಲ್ಲುವುದು ಕಷ್ಟವಾಗಬಹುದು ಎಂದು ಹೇಳಿದ್ದಾರೆ.

ಪಕ್ಷ ಸಂಘಟನೆ ಬಲಪಡಿಸಬೇಕು

ಬಿಜೆಪಿಯನ್ನು ಮತ್ತಷ್ಟು ಸಂಘಟಿಸುವ ಅಗತ್ಯವಿದೆ ಎಂದು ಈಶ್ವರಪ್ಪ ಅಭಿಪ್ರಾಯಪಟ್ಟಿದ್ದಾರೆ. ಪಕ್ಷದ ಹೈಕಮಾಂಡ್ ಮುಂದಿನ ದಿನಗಳಲ್ಲಿ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡುತ್ತಿರುವುದಾಗಿ ಅವರು ತಿಳಿಸಿದ್ದಾರೆ.

ತಮ್ಮ ಮುಂದಿನ ರಾಜಕೀಯ ನಡೆ ಕುರಿತು ಸದ್ಯಕ್ಕೆ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಹೈಕಮಾಂಡ್‌ನ ನಿರ್ಧಾರವನ್ನು ಗಮನಿಸುತ್ತಿರುವುದಾಗಿ ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ.

ಈಶ್ವರಪ್ಪ ಅವರ ‘ತಾವಾಗಲಿ ಅಥವಾ ಮಗನಾಗಲಿ 2028ರಲ್ಲಿ ಶಿವಮೊಗ್ಗ ನಗರದಿಂದ ಸ್ಪರ್ಧೆ ಖಚಿತ’ ಎಂಬ ಹೇಳಿಕೆ, ಮುಂದಿನ ವಿಧಾನಸಭಾ ಚುನಾವಣೆಗೆ ಇನ್ನೂ ಸಮಯವಿದ್ದರೂ ಶಿವಮೊಗ್ಗದ ರಾಜಕೀಯದಲ್ಲಿ ಹೊಸ ಚರ್ಚೆಗೆ ನಾಂದಿ ಹಾಡಿದೆ.

Continue Reading

ರಾಜ್ಯ

ಮೈಸೂರಿ ನಲ್ಲಿ Siddaramaiah ಕಾರಿಗೆ ಮುತ್ತಿಗೆ; 165 ಎಕರೆ ಭೂಮಿಗಾಗಿ ರೈತರ ಪ್ರತಿಭಟನೆ

Published

on

ಮೈಸೂರು: ಮಾಜಿ ಮುಖ್ಯಮಂತ್ರಿ Siddaramaiah ಹಾಗೂ ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಕೃಷಿ ಭೂಮಿ ಸ್ವಾಧೀನ ವಿರೋಧಿಸಿ ರೈತರು ದಿಢೀರ್ ಪ್ರತಿಭಟನೆ ನಡೆಸಿದ ಘಟನೆ ಮೈಸೂರಿನಲ್ಲಿ ನಡೆದಿದೆ. ತಮ್ಮ ಜೀವನಾಧಾರವಾಗಿರುವ 165 ಎಕರೆ ಫಲವತ್ತಾದ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಬಾರದು ಎಂದು ಆಗ್ರಹಿಸಿದ ರೈತರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಕೆಎಸ್‌ಒಯು ಬಡಾವಣೆಯಲ್ಲಿ ಆಯೋಜಿಸಿದ್ದ ಪತ್ರಕರ್ತರ ನೂತನ ಭವನದ ಕಾಮಗಾರಿಗೆ ಚಾಲನೆ, ಪತ್ರಿಕಾ ದಿನಾಚರಣೆ, ಹಿರಿಯ ಪತ್ರಕರ್ತರಿಗೆ ಅಭಿನಂದನೆ ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯ ಮತ್ತು ಡಾ. ಯತೀಂದ್ರ ಸಿದ್ದರಾಮಯ್ಯ ಆಗಮಿಸಿದ್ದರು. ಈ ವೇಳೆ ಸ್ಥಳದಲ್ಲಿದ್ದ ರೈತರು ಏಕಾಏಕಿ ಪ್ರತಿಭಟನೆ ಆರಂಭಿಸಿದರು.

ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (KIADB) ಕೈಗೊಂಡಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು ಕೂಡಲೇ ಕೈಬಿಡಬೇಕು ಎಂದು ರೈತರು ಒತ್ತಾಯಿಸಿದರು.

ಸಿದ್ದರಾಮಯ್ಯ ಕಾರಿಗೆ ಮುತ್ತಿಗೆ ಹಾಕಿದ ರೈತರು

ಕಾರ್ಯಕ್ರಮ ಮುಗಿಸಿ ಸಿದ್ದರಾಮಯ್ಯ ಅವರು ಹೊರಟ ಸಂದರ್ಭದಲ್ಲಿ ಪ್ರತಿಭಟನಾಕಾರರು ಅವರ ಕಾರನ್ನು ಸುತ್ತುವರಿದು ಘೋಷಣೆಗಳನ್ನು ಕೂಗಿದರು. ರೈತರ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದರು. ಬಳಿಕ ಸಿದ್ದರಾಮಯ್ಯ ಅವರ ವಾಹನ ಸುಗಮವಾಗಿ ತೆರಳಲು ಪೊಲೀಸರು ಅನುವು ಮಾಡಿಕೊಟ್ಟರು.

ಇದಾದ ಬಳಿಕ ರೈತರು ಕಾರ್ಯಕ್ರಮದ ವೇದಿಕೆಯಲ್ಲಿದ್ದ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಲು ಮುಂದಾದರು. ರೈತರ ಪರವಾಗಿ ಬಿಜೆಪಿ ಮುಖಂಡ ಡಾ. ಶುಶ್ರುತ್ ಗೌಡ ಕೂಡ ಸಚಿವರನ್ನು ಭೇಟಿ ಮಾಡಿ, ಭೂಸ್ವಾಧೀನದಿಂದ ರೈತರಿಗೆ ಆಗುತ್ತಿರುವ ಸಮಸ್ಯೆಯನ್ನು ಪರಿಹರಿಸುವಂತೆ ಒತ್ತಾಯಿಸಿದರು.

ಈ ವೇಳೆ ಯತೀಂದ್ರ ಸಿದ್ದರಾಮಯ್ಯ ಹಾಗೂ ಶುಶ್ರುತ್ ಗೌಡ ನಡುವೆ ಮಾತಿನ ಚಕಮಕಿ ನಡೆಯಿತು. “ನೀವ್ಯಾಕೆ ಈ ವಿಚಾರದಲ್ಲಿ ರಾಜಕೀಯ ಮಾಡಲು ಇಲ್ಲಿದ್ದೀರಿ?” ಎಂದು ಯತೀಂದ್ರ ಪ್ರಶ್ನಿಸಿದರು. ಪರಿಸ್ಥಿತಿ ಬಿಗಡಾಯಿಸುತ್ತಿದ್ದಂತೆ ಶಾಸಕರಾದ ಡಿ. ರವಿಶಂಕರ್ ಮತ್ತು ದರ್ಶನ್ ಧ್ರುವನಾರಾಯಣ್ ಮಧ್ಯಪ್ರವೇಶಿಸಿ ಸಚಿವರನ್ನು ಸಮಾಧಾನಪಡಿಸಿದರು.

165 ಎಕರೆ ಕೃಷಿ ಭೂಮಿ ಸ್ವಾಧೀನಕ್ಕೆ ವಿರೋಧ

ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣದ ಸಮೀಪದ ವರುಣಾ ವಿಧಾನಸಭಾ ಕ್ಷೇತ್ರದ ಮರಸೆ ಹಾಗೂ ಮುದರಗಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗ ನಿರ್ಮಾಣ ಹಾಗೂ ಕೈಗಾರಿಕಾ ಯೋಜನೆಗಳಿಗಾಗಿ 165 ಎಕರೆ ಜಮೀನನ್ನು ಸ್ವಾಧೀನಪಡಿಸಿಕೊಳ್ಳಲು KIADB ಮುಂದಾಗಿದೆ ಎನ್ನಲಾಗಿದೆ.

ಈ ಪ್ರದೇಶದಲ್ಲಿ ಭತ್ತ, ತೆಂಗು, ಬಾಳೆ ಸೇರಿದಂತೆ ವಿವಿಧ ಬೆಳೆಗಳನ್ನು ರೈತರು ಬೆಳೆಯುತ್ತಿದ್ದಾರೆ. ನೂರಾರು ಕುಟುಂಬಗಳು ಈ ಕೃಷಿ ಭೂಮಿಯನ್ನೇ ತಮ್ಮ ಜೀವನೋಪಾಯಕ್ಕೆ ಅವಲಂಬಿಸಿವೆ. ಹೀಗಾಗಿ ಭೂಮಿ ಸ್ವಾಧೀನವಾದರೆ ತಮ್ಮ ಕುಟುಂಬಗಳ ಜೀವನ ಸಂಕಷ್ಟಕ್ಕೆ ಸಿಲುಕಲಿದೆ ಎಂದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ.

ಪರಿಹಾರ ಬೇಡ, ಭೂಮಿಯೇ ಬೇಕು ಎಂದ ರೈತರು

ಭೂಮಿಗೆ ಪರಿಹಾರ ನೀಡುವುದಕ್ಕಿಂತ ತಮ್ಮ ಕೃಷಿ ಜಮೀನನ್ನು ಉಳಿಸಿಕೊಡುವುದೇ ತಮ್ಮ ಪ್ರಮುಖ ಬೇಡಿಕೆ ಎಂದು ರೈತರು ಸ್ಪಷ್ಟಪಡಿಸಿದ್ದಾರೆ. ಸರ್ಕಾರ ಪರ್ಯಾಯ ವ್ಯವಸ್ಥೆ ಅಥವಾ ಪರಿಹಾರ ನೀಡಿದರೂ ತಮ್ಮ ಜೀವನಾಧಾರವಾಗಿರುವ ಜಮೀನನ್ನು ಬಿಟ್ಟುಕೊಡಲು ಸಿದ್ಧರಿಲ್ಲ ಎಂದು ತಿಳಿಸಿದ್ದಾರೆ.

ತಮ್ಮ ಬೇಡಿಕೆಗೆ ಸರ್ಕಾರ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ರೈತ ಸಂಘಟನೆಗಳು ಎಚ್ಚರಿಕೆ ನೀಡಿವೆ. ಮೈಸೂರಿನಲ್ಲಿ ನಡೆದ ಈ ಪ್ರತಿಭಟನೆ ಇದೀಗ KIADB ಭೂಸ್ವಾಧೀನ ಪ್ರಕ್ರಿಯೆ ಮತ್ತು ರೈತರ ಹಕ್ಕುಗಳ ವಿಚಾರವನ್ನು ಮತ್ತೆ ಮುನ್ನೆಲೆಗೆ ತಂದಿದೆ.

Continue Reading

ರಾಜ್ಯ

ST Leaders ನ್ನೇ ಗುರಿಯಾಗಿಸಲಾಗುತ್ತಿದೆ: B Nagendra ರಾಜೀನಾಮೆ ಕುರಿತು K N Rajanna ಸ್ಫೋಟಕ ಹೇಳಿಕೆ

Published

on

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದ ಹಿನ್ನೆಲೆಯಲ್ಲಿ B Nagendra ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ಚರ್ಚೆ ತೀವ್ರಗೊಂಡಿದೆ. ಈ ಬೆಳವಣಿಗೆಯ ಕುರಿತು ಮಾಜಿ ಸಚಿವ K N Rajanna ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಪರಿಶಿಷ್ಟ ಪಂಗಡ ಸಮುದಾಯದ ಪ್ರಮುಖ ನಾಯಕರನ್ನೇ ಸಾಲು ಸಾಲಾಗಿ ಗುರಿಯಾಗಿಸಲಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ನಾಗೇಂದ್ರ ಅವರ ರಾಜೀನಾಮೆ ರಾಜಕೀಯ ವಲಯದಲ್ಲಿ ಹಲವು ಚರ್ಚೆಗಳಿಗೆ ಕಾರಣವಾಗಿರುವ ಸಂದರ್ಭದಲ್ಲೇ ರಾಜಣ್ಣ ಅವರ ಹೇಳಿಕೆ ಮಹತ್ವ ಪಡೆದುಕೊಂಡಿದೆ. ತಪ್ಪು ಯಾರೇ ಮಾಡಿದ್ದರೂ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು ಎಂಬ ನಿಲುವನ್ನು ಅವರು ವ್ಯಕ್ತಪಡಿಸಿದ್ದಾರೆ. ಆದರೆ, ಪ್ರಕರಣವನ್ನು ಮುಂದಿಟ್ಟುಕೊಂಡು ಎಸ್‌ಟಿ ಸಮುದಾಯದ ನಾಯಕರನ್ನೇ ಉದ್ದೇಶಪೂರ್ವಕವಾಗಿ ಗುರಿಯಾಗಿಸಲಾಗುತ್ತಿದೆ ಎಂಬ ಭಾವನೆ ಸಾರ್ವಜನಿಕರಲ್ಲಿ ಮೂಡಿದೆ ಎಂದು ಅವರು ಹೇಳಿದ್ದಾರೆ.

ಎಸ್‌ಟಿ ನಾಯಕರ ಟಾರ್ಗೆಟ್ ಆರೋಪ

ರಾಜ್ಯದಲ್ಲಿ ಪರಿಶಿಷ್ಟ ಪಂಗಡ ಸಮುದಾಯದ ನಾಯಕರು ರಾಜಕೀಯವಾಗಿ ಎದುರಿಸುತ್ತಿರುವ ಬೆಳವಣಿಗೆಗಳ ಬಗ್ಗೆ ಮಾತನಾಡಿದ ರಾಜಣ್ಣ, ಪ್ರಕರಣದಲ್ಲಿ ತಪ್ಪು ಕಂಡುಬಂದರೆ ತನಿಖೆ ನಡೆಸಿ ಕಾನೂನು ಕ್ರಮ ಜರುಗಿಸುವುದಕ್ಕೆ ತಮ್ಮ ವಿರೋಧವಿಲ್ಲ ಎಂದು ತಿಳಿಸಿದ್ದಾರೆ.

ಆದರೆ, ಒಂದು ಪ್ರಕರಣದ ಹಿನ್ನೆಲೆಯಲ್ಲಿ ಇಡೀ ಸಮುದಾಯದ ಪ್ರಮುಖ ನಾಯಕರನ್ನು ರಾಜಕೀಯವಾಗಿ ಗುರಿಯಾಗಿಸುವ ಪ್ರಯತ್ನ ನಡೆಯಬಾರದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ನಾಗೇಂದ್ರ ಅವರ ರಾಜೀನಾಮೆಯ ನಂತರ ಈ ವಿಚಾರ ಮತ್ತಷ್ಟು ರಾಜಕೀಯ ಚರ್ಚೆಗೆ ಕಾರಣವಾಗಿದೆ.

ಬಿಜೆಪಿ ಪಾದಯಾತ್ರೆ ವಿರುದ್ಧ ರಾಜಣ್ಣ ವಾಗ್ದಾಳಿ

ಇದೇ ವೇಳೆ ಬಿಜೆಪಿ ನಡೆಸುತ್ತಿರುವ ಪಾದಯಾತ್ರೆ ಕುರಿತು ಕೂಡ ಕೆ.ಎನ್. ರಾಜಣ್ಣ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಬೆಂಬಲಿಸಿರುವ ಎಸ್‌ಟಿ ಪ್ರಾಬಲ್ಯದ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಬಿಜೆಪಿ ರಾಜಕೀಯ ಲಾಭ ಪಡೆಯುವ ಉದ್ದೇಶದಿಂದ ಪಾದಯಾತ್ರೆ ನಡೆಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ವಾಲ್ಮೀಕಿ ನಿಗಮದ ಪ್ರಕರಣವನ್ನು ರಾಜಕೀಯವಾಗಿ ಬಳಸಿಕೊಳ್ಳುವ ಪ್ರಯತ್ನ ನಡೆಯುತ್ತಿದೆ ಎಂಬ ರೀತಿಯಲ್ಲಿ ರಾಜಣ್ಣ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಪ್ರಕರಣದ ತನಿಖೆ ತನ್ನದೇ ಆದ ರೀತಿಯಲ್ಲಿ ನಡೆಯಬೇಕು ಮತ್ತು ಅದನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಬಾರದು ಎಂಬ ಸಂದೇಶವನ್ನು ಅವರು ನೀಡಿದ್ದಾರೆ.

ನಾಗೇಂದ್ರ ಸ್ಥಾನಕ್ಕೆ ಎಸ್‌ಟಿ ನಾಯಕನಿಗೆ ಅವಕಾಶ

ಬಿ. ನಾಗೇಂದ್ರ ಅವರ ರಾಜೀನಾಮೆಯಿಂದ ತೆರವಾಗಿರುವ ಸಚಿವ ಸ್ಥಾನಕ್ಕೆ ಸಂಬಂಧಿಸಿದಂತೆ ಕೆ.ಎನ್. ರಾಜಣ್ಣ ಸರ್ಕಾರದ ಮುಂದೆ ಮಹತ್ವದ ಬೇಡಿಕೆಯನ್ನೂ ಇಟ್ಟಿದ್ದಾರೆ.

ತೆರವಾಗಿರುವ ಸಚಿವ ಸ್ಥಾನವನ್ನು ಮತ್ತೊಬ್ಬ ಪರಿಶಿಷ್ಟ ಪಂಗಡ ಸಮುದಾಯದ ನಾಯಕನಿಗೆ ನೀಡಬೇಕು ಎಂದು ಅವರು ಸರ್ಕಾರವನ್ನು ಬಲವಾಗಿ ಆಗ್ರಹಿಸಿದ್ದಾರೆ. ಈ ಮೂಲಕ ಎಸ್‌ಟಿ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ಮುಂದುವರಿಯಬೇಕು ಎಂಬ ಅಭಿಪ್ರಾಯವನ್ನು ರಾಜಣ್ಣ ವ್ಯಕ್ತಪಡಿಸಿದ್ದಾರೆ.

ರಾಜಕೀಯ ವಲಯದಲ್ಲಿ ಕುತೂಹಲ

ಬಿ. ನಾಗೇಂದ್ರ ಅವರ ರಾಜೀನಾಮೆ ಹಾಗೂ ವಾಲ್ಮೀಕಿ ನಿಗಮದ ಪ್ರಕರಣ ಈಗಾಗಲೇ ರಾಜ್ಯ ರಾಜಕೀಯದಲ್ಲಿ ಪ್ರಮುಖ ಚರ್ಚೆಯ ವಿಷಯವಾಗಿದೆ. ಇದರ ಬೆನ್ನಲ್ಲೇ ಕೆ.ಎನ್. ರಾಜಣ್ಣ ಅವರ ಹೇಳಿಕೆ ಕಾಂಗ್ರೆಸ್‌ನೊಳಗಿನ ಮತ್ತು ರಾಜ್ಯ ರಾಜಕೀಯದಲ್ಲಿನ ಮುಂದಿನ ಬೆಳವಣಿಗೆಗಳ ಬಗ್ಗೆ ಕುತೂಹಲ ಮೂಡಿಸಿದೆ.

ನಾಗೇಂದ್ರ ಅವರ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಲಾಗುತ್ತದೆ ಎಂಬುದು ಇದೀಗ ಪ್ರಮುಖ ಪ್ರಶ್ನೆಯಾಗಿದೆ. ರಾಜಣ್ಣ ಅವರು ಎಸ್‌ಟಿ ಸಮುದಾಯದ ನಾಯಕರನ್ನೇ ಸಚಿವ ಸ್ಥಾನಕ್ಕೆ ಪರಿಗಣಿಸಬೇಕು ಎಂದು ಒತ್ತಾಯಿಸಿರುವುದರಿಂದ ಮುಂದಿನ ಸಚಿವ ಸಂಪುಟದ ನಿರ್ಧಾರ ಕುತೂಹಲಕ್ಕೆ ಕಾರಣವಾಗಿದೆ.

Continue Reading

Trending