Connect with us

ರಾಜಕೀಯ

ಬಿಜೆಪಿ ನಾಯಕರು ಧರ್ಮಸ್ಥಳ ಭೇಟಿ; ಎಸ್‌ಐಟಿ ತನಿಖೆ ವರದಿ ಬಿಡುಗಡೆಗೆ ಒತ್ತಾಯ

Published

on

ಮಂಗಳೂರು, ಆಗಸ್ಟ್ 17: ಬಿಜೆಪಿ ನಾಯಕರು ಧರ್ಮಸ್ಥಳದ ಕುರಿತು ನಡೆಯುತ್ತಿರುವ ಅಪಪ್ರಚಾರವನ್ನು ಖಂಡಿಸಿ, ಎಸ್‌ಐಟಿ ತನಿಖೆಯ ಮಧ್ಯಂತರ ವರದಿಯನ್ನು ಬಿಡುಗಡೆ ಮಾಡಲು ಕರ್ನಾಟಕದ ಕಾಂಗ್ರೆಸ್ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ನಡುವೆ, ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ನಾಯಕರು ಧರ್ಮಸ್ಥಳಕ್ಕೆ ಭೇಟಿ ನೀಡಿದರು.

ಭೇಟಿಯ ವೇಳೆ ಅವರು ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದರು ಮತ್ತು ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿದ್ದಾರೆ. ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ನಲ್ಲಿ ತಿಳಿಸಿದ್ದು, “ಧರ್ಮಸ್ಥಳ ಕ್ಷೇತ್ರದ ಕುರಿತು ನಿರಂತರವಾಗಿ ಹರಡುತ್ತಿರುವ ಅಪಪ್ರಚಾರದ ಹಿನ್ನೆಲೆ, ರಾಜ್ಯಾಧ್ಯಕ್ಷರು ಶ್ರೀ ವಿಜಯೇಂದ್ರ ಯಡಿಯೂರಪ್ಪ ಮತ್ತು ವಿಧಾನ ಪರಿಷತ್ ವಿಪಕ್ಷ ನಾಯಕರು ಶ್ರೀ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಶಾಸಕರ ನಿಯೋಗವು ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದು, ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಶ್ರೀ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾದರು” ಎಂದು ಹೇಳಿದ್ದಾರೆ.

ಬಿಜೆಪಿ ಹೇಳಿಕೆಯಲ್ಲಿ, “ನಿಯೋಗದಲ್ಲಿ ಸಂಸದರಾದ ಶ್ರೀ ಕ್ಯಾಪ್ಟನ್ ಬ್ರಿಜೇಶ್ ಚೌಟ, ಸ್ಥಳೀಯ ಶಾಸಕರು ಶ್ರೀ ಹರೀಶ್ ಪೂಂಜಾ, ಪಕ್ಷದ ಶಾಸಕರು, ಪರಿಷತ್ ಸದಸ್ಯರು, ರಾಜ್ಯ ಪ್ರಧಾನ ಕಾರ್ಯದರ್ಶಿಗಳು, ಪದಾಧಿಕಾರಿಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು” ಎಂದು ಮಾಹಿತಿ ನೀಡಲಾಗಿದೆ.

ಬಿ.ವೈ. ವಿಜಯೇಂದ್ರ ತಮ್ಮ ಪೋಸ್ಟ್‌ನಲ್ಲಿ ಹೇಳಿದ್ದಾರೆ:
“ಸತ್ಯದ ಬಾಗಿಲು ತೆರೆಯಲಿದೆ, ಧರ್ಮದ ಬೆಳಕು ಬೆಳಗಲಿದೆ. ಕರಾವಳಿ ಭಾಗದ ಎಲ್ಲಾ ಶಾಸಕರೊಂದಿಗೆ ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀ ಮಂಜುನಾಥ ಸ್ವಾಮಿಯವರ ದರ್ಶನ ಹಾಗೂ ಧರ್ಮಾಧಿಕಾರಿಗಳಾದ ಮಾನ್ಯ ಶ್ರೀ ವೀರೇಂದ್ರ ಹೆಗ್ಗಡೆ ಅವರ ಆಶೀರ್ವಾದ ಪಡೆದಿದ್ದೇವೆ. ನಾಡಿನ ಕೋಟ್ಯಂತರ ಭಕ್ತರ ಧಾರ್ಮಿಕ ಶ್ರದ್ಧಾ ಕೇಂದ್ರದ ಗೌರವವನ್ನು ಉಳಿಸಲು ಪಕ್ಷ ಕಟ್ಟಿಬದ್ಧವಾಗಿದೆ.”

ವಿಜಯೇಂದ್ರ ತಿಳಿಸಿದ್ದಾರೆ, “SIT ತನಿಖೆಯನ್ನು ಯಾರು ವಿರೋಧಿಸಿಲ್ಲ, ಸತ್ಯದ ಬಾಗಿಲು ತೆರೆಯಲಿದೆ, ಧರ್ಮಸ್ಥಳದ ಧರ್ಮದ ಬೆಳಕು ಬೆಳಗಲಿದೆ. ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರಗಳ ವಿರುದ್ಧ ನಡೆಯುವ ಷಡ್ಯಂತ್ರಗಳಿಗೆ ಇನ್ನುಮುಂದೆ ತಕ್ಕ ಉತ್ತರ ಸಿಗಲಿದೆ. ರಾಜ್ಯ ಸರ್ಕಾರ ಧರ್ಮಸ್ಥಳದ ಹೆಸರಿನಲ್ಲಿ ಸೃಷ್ಟಿಸಿರುವ ಗೊಂದಲಕ್ಕೆ ಅಂತಿಮ ತೆರೆ ಎಳೆಯುವ ನಿಟ್ಟಿನಲ್ಲಿ ಈವರೆಗಿನ SIT ತನಿಖೆಯ ವರದಿಯನ್ನು ಬಿಡುಗಡೆ ಮಾಡಲಿ” ಎಂದು ಒತ್ತಾಯಿಸಿದ್ದಾರೆ.

ಕಳೆದ ಜುಲೈ 19ರಂದು, ಕರ್ನಾಟಕ ಸರ್ಕಾರ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ಮತ್ತು ಇತರ ಸಂಬಂಧಿತ ಪ್ರಕರಣಗಳ ಸಮಗ್ರ ತನಿಖೆಗೆ ವಿಶೇಷ ತನಿಖಾ ತಂಡ (SIT) ರಚಿಸಿತ್ತು. ಅನಾಮಿಕ ದೂರುದಾರನ ಮಾಹಿತಿ ಪ್ರಕಾರ, SIT ಧರ್ಮಸ್ಥಳದಲ್ಲಿ ತನಿಖೆ ನಡೆಸುತ್ತಿದೆ ಮತ್ತು ದೂರುದಾರ ತೋರಿಸಿದ ಸ್ಥಳದಲ್ಲಿ ಅಸ್ಥಿಪಂಜರಕ್ಕಾಗಿ ಹುಡುಕಾಟ ನಡೆಸುತ್ತಿದೆ.

ಗುರುವಾರ, ಕರ್ನಾಟಕ ವಿಧಾನಸಭೆ ಮುಂಗಾರು ಅಧಿವೇಶನದಲ್ಲಿ ಧರ್ಮಸ್ಥಳದ ವಿಚಾರದ ಕುರಿತು ಚರ್ಚೆ ನಡೆಯಿತು. ಬಿಜೆಪಿ ನಾಯಕರು SIT ತನಿಖೆ, ಯೂಟ್ಯೂಬ್ ವಿಡಿಯೋಗಳು ಮತ್ತು ಧರ್ಮಸ್ಥಳದ ವಿರುದ್ಧದ ಅಪಪ್ರಚಾರದ ಕುರಿತು ಸದನದಲ್ಲಿ ಮಾತನಾಡಿದರು ಮತ್ತು ಧರ್ಮಸ್ಥಳಕ್ಕೆ ಭೇಟಿ ನೀಡುವುದಾಗಿ ಘೋಷಣೆ ನೀಡಿದರು.

ಸೋಮವಾರದ ವಿಧಾನಸಭೆ ಕಲಾಪದಲ್ಲಿ, ಗೃಹ ಸಚಿವ ಡಾ.ಜಿ. ಪರಮೇಶ್ವರ ಧರ್ಮಸ್ಥಳ ಪ್ರಕರಣದ SIT ತನಿಖೆ ಬಗ್ಗೆ ಉತ್ತರ ನೀಡುವ ನಿರೀಕ್ಷೆ ಇದೆ. ಈ ನಡುವೆ, ಸರ್ಕಾರವು SIT ತನಿಖೆಯನ್ನು ನಿಲ್ಲಿಸಲಿದೆ ಎಂಬ ಸುದ್ದಿಗಳು ಹಬ್ಬಿವೆ.

Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಬೆಂಗಳೂರು

Nice Company ಖರೀದಿಗೆ ಸಿಎಂ ಯತ್ನ? ಕುಮಾರಸ್ವಾಮಿ ಗಂಭೀರ ಆರೋಪ, ದಾಖಲೆ ಬಿಡುಗಡೆ ಘೋಷಣೆ

Published

on

ಬೆಂಗಳೂರು: ಬೆಂಗಳೂರು-ಮೈಸೂರು ಮೂಲಸೌಕರ್ಯ ಕಾರಿಡಾರ್ ಯೋಜನೆಗೆ ಸಂಬಂಧಿಸಿದ ರಾಜಕೀಯ ವಾಕ್ಸಮರ ಮತ್ತಷ್ಟು ತೀವ್ರಗೊಂಡಿದೆ. ರಾಜ್ಯದ ಹಾಲಿ ಮುಖ್ಯಮಂತ್ರಿ ಬೇನಾಮಿ ಕಂಪನಿಗಳ ಮೂಲಕ Nice Company ಯನ್ನು ಖರೀದಿಸಲು ಮುಂದಾಗಿದ್ದಾರೆ ಎಂದು ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಜೆಡಿಎಸ್ ರಾಜ್ಯ ಕಚೇರಿಯಲ್ಲಿ ಮಾತನಾಡಿದ ಅವರು, ಬಿಎಂಐಸಿ ಯೋಜನೆಯ ಹೆಸರಿನಲ್ಲಿ ಸಾವಿರಾರು ಎಕರೆ ಭೂಮಿಯನ್ನು ಲೂಟಿ ಮಾಡಲು ಸಂಚು ನಡೆಯುತ್ತಿದೆ ಎಂದು ಆರೋಪಿಸಿದರು. ಈ ಆರೋಪಕ್ಕೆ ಸಂಬಂಧಿಸಿದ ದಾಖಲೆಗಳನ್ನು ಮುಂದಿನ ವಾರ ಬಿಡುಗಡೆ ಮಾಡುವುದಾಗಿ ಕುಮಾರಸ್ವಾಮಿ ಹೇಳಿದ್ದಾರೆ.

ನೈಸ್ ಸಂಸ್ಥೆಯ ಅಕ್ರಮಗಳಲ್ಲಿ ರಾಜ್ಯದ ಹಾಲಿ ಮುಖ್ಯಮಂತ್ರಿ ನೇರವಾಗಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿದ ಅವರು, ನೈಸ್ ಕಂಪನಿಯನ್ನು ಯಾರು ಸ್ವಾಧೀನಪಡಿಸಿಕೊಳ್ಳುತ್ತಿದ್ದಾರೆ ಎಂಬುದನ್ನು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಜನತೆಯ ಮುಂದೆ ಬಹಿರಂಗಪಡಿಸಬೇಕು ಎಂದು ಸವಾಲು ಹಾಕಿದರು.

‘ಬೇನಾಮಿ ಕಂಪನಿಗಳ ಮೂಲಕ ವ್ಯವಹಾರ’

ನೈಸ್ ಯೋಜನೆಯನ್ನು ಯಾರು ವಶಕ್ಕೆ ಪಡೆಯಲು ಮುಂದಾಗಿದ್ದಾರೆ ಮತ್ತು ಈ ವ್ಯವಹಾರದಲ್ಲಿ ಬೇನಾಮಿ ಕಂಪನಿಗಳ ಮೂಲಕ ಯಾರೆಲ್ಲ ಭಾಗಿಯಾಗಿದ್ದಾರೆ ಎಂಬ ಮಾಹಿತಿ ತಮ್ಮ ಬಳಿ ಇದೆ ಎಂದು ಕುಮಾರಸ್ವಾಮಿ ಹೇಳಿದರು.

ನೈಸ್ ಯೋಜನೆಗೂ ಮುಖ್ಯಮಂತ್ರಿಗೂ ಇರುವ ಸಂಬಂಧವೇನು? ನೈಸ್ ಸಂಸ್ಥೆಯೊಂದಿಗೆ ಯಾವುದೇ ಒಡಂಬಡಿಕೆ ಇದೆಯೇ? ಕಂಪನಿಯ ಮಾಲೀಕರೊಂದಿಗೆ ಯಾವ ರೀತಿಯ ಸಂಬಂಧ ಮತ್ತು ವ್ಯವಹಾರಗಳಿವೆ ಎಂಬುದನ್ನು ಮುಖ್ಯಮಂತ್ರಿ ಸ್ಪಷ್ಟಪಡಿಸಬೇಕು ಎಂದು ಅವರು ಒತ್ತಾಯಿಸಿದರು.

ತಮ್ಮ ವಿರುದ್ಧ ಬೇನಾಮಿ ಆಸ್ತಿ ಹೊಂದಿರುವ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುವುದಾಗಿ ಕುಮಾರಸ್ವಾಮಿ ಪುನರುಚ್ಚರಿಸಿದರು. ತಮ್ಮ ಬಳಿ ಯಾವುದೇ ಬೇನಾಮಿ ಆಸ್ತಿ ಇದ್ದರೆ ಅದನ್ನು ಬಹಿರಂಗಪಡಿಸುವಂತೆ ಅವರು ಸವಾಲು ಹಾಕಿದರು.

‘ಮುಂದಿನ ವಾರ ದಾಖಲೆ ಬಿಡುಗಡೆ’

ನೈಸ್ ಯೋಜನೆಗೆ ಸಂಬಂಧಿಸಿದಂತೆ ತಾವು ಕೇವಲ ರಾಜಕೀಯ ಆರೋಪ ಮಾಡುತ್ತಿಲ್ಲ. ತಮ್ಮ ಬಳಿ ದಾಖಲೆಗಳಿದ್ದು, ಮುಂದಿನ ವಾರ ಅವುಗಳನ್ನು ಜನರ ಮುಂದಿಡುವುದಾಗಿ ಕುಮಾರಸ್ವಾಮಿ ತಿಳಿಸಿದ್ದಾರೆ.

ನೈಸ್ ಯೋಜನೆಯಲ್ಲಿ ರೈತರ ಭೂಮಿ, ಒಪ್ಪಂದದ ನಿಯಮಗಳು ಹಾಗೂ ಸಂಸ್ಥೆಯ ವ್ಯವಹಾರಗಳ ಕುರಿತು ಈಗಾಗಲೇ ಜೆಡಿಎಸ್ ಸರ್ಕಾರದ ಗಮನ ಸೆಳೆದಿರುವ ಬೆನ್ನಲ್ಲೇ ಕುಮಾರಸ್ವಾಮಿ ಅವರ ಹೊಸ ಆರೋಪಗಳು ರಾಜಕೀಯ ವಲಯದಲ್ಲಿ ಮತ್ತಷ್ಟು ಚರ್ಚೆಗೆ ಕಾರಣವಾಗಿವೆ.

ಆದರೆ ಕುಮಾರಸ್ವಾಮಿ ಮಾಡಿರುವ ಆರೋಪಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅಥವಾ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪ್ರತಿಕ್ರಿಯೆ ಈ ವರದಿ ವೇಳೆಗೆ ಲಭ್ಯವಾಗಿಲ್ಲ. ಮುಂದಿನ ವಾರ ದಾಖಲೆಗಳನ್ನು ಬಿಡುಗಡೆ ಮಾಡುವುದಾಗಿ ಕುಮಾರಸ್ವಾಮಿ ನೀಡಿರುವ ಹೇಳಿಕೆ ಇದೀಗ ಕುತೂಹಲ ಮೂಡಿಸಿದೆ.

Continue Reading

ಬೆಂಗಳೂರು

Nice ಯೋಜನೆ ವಿರುದ್ಧ JDS ಸಮರ: ಸರ್ಕಾರಕ್ಕೆ 554 ಎಕರೆ ಭೂಮಿ ಕುರಿತು ಮಹತ್ವದ ಮನವಿ

Published

on

ಬೆಂಗಳೂರು: ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆಗೆ ಸಂಬಂಧಿಸಿದ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. Nice ಸಂಸ್ಥೆಯ ವಿರುದ್ಧ ಕಾನೂನು ಉಲ್ಲಂಘನೆ, ಹೆಚ್ಚುವರಿ ಭೂಮಿ ಬಳಕೆ ಹಾಗೂ ಒಪ್ಪಂದದ ನಿಯಮಗಳನ್ನು ಉಲ್ಲಂಘಿಸಿರುವ ಆರೋಪಗಳನ್ನು ಮಾಡಿರುವ JDS, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮನವಿ ಸಲ್ಲಿಸಿ ಕಠಿಣ ಕ್ರಮಕ್ಕೆ ಆಗ್ರಹಿಸಿದೆ.

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ. ಸುರೇಶ್‌ಬಾಬು ನೇತೃತ್ವದ ನಿಯೋಗವು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ನೈಸ್ ಸಂಸ್ಥೆಯು ಯೋಜನೆಗೆ ಸಂಬಂಧಿಸಿದ ಒಪ್ಪಂದದ ನಿಯಮಗಳನ್ನು ಸಂಪೂರ್ಣವಾಗಿ ಉಲ್ಲಂಘಿಸಿದೆ ಎಂದು ಆರೋಪಿಸಿದೆ. ಯೋಜನೆಗೆ ಸಂಬಂಧಿಸಿದಂತೆ ನ್ಯಾಯಾಲಯದ ಹಿಂದಿನ ಅಭಿಪ್ರಾಯಗಳನ್ನೂ ನಿಯೋಗ ಸರ್ಕಾರದ ಗಮನಕ್ಕೆ ತಂದಿದೆ.

ನೈಸ್ ಸಂಸ್ಥೆ ಸಂಗ್ರಹಿಸುತ್ತಿರುವ ಟೋಲ್ ಕುರಿತು ಆಕ್ಷೇಪ ವ್ಯಕ್ತಪಡಿಸಿರುವ ಜೆಡಿಎಸ್, ಅನಧಿಕೃತ ಟೋಲ್ ಸಂಗ್ರಹವನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಒತ್ತಾಯಿಸಿದೆ. ಇದರ ಜೊತೆಗೆ ಹೆಚ್ಚುವರಿಯಾಗಿ ಒದಗಿಸಲಾಗಿದೆ ಎನ್ನಲಾದ 554 ಎಕರೆ ಜಮೀನು ಹಾಗೂ ಕೆರೆ-ಕಟ್ಟೆಗಳನ್ನು ಸರ್ಕಾರ ಕೂಡಲೇ ತನ್ನ ವಶಕ್ಕೆ ಪಡೆಯಬೇಕು ಎಂದು ಆಗ್ರಹಿಸಿದೆ.

ಯೋಜನೆಯಲ್ಲಿ ನಡೆದಿರುವ ಆರ್ಥಿಕ ವ್ಯವಹಾರಗಳು ಮತ್ತು ಅಕ್ರಮಗಳನ್ನು ಪರಿಶೀಲಿಸಲು ವಿಶೇಷ ತನಿಖಾ ತಂಡ ರಚಿಸಬೇಕು. ಸಂಸ್ಥೆಯ ಆರ್ಥಿಕ ವ್ಯವಹಾರಗಳ ಕುರಿತು ಸಮಗ್ರ ಲೆಕ್ಕಪರಿಶೋಧನೆ ನಡೆಸಬೇಕು. ಬೆಂಗಳೂರು-ಮೈಸೂರು ಮೂಲಸೌಕರ್ಯ ಕಾರಿಡಾರ್ ಯೋಜನೆಯನ್ನು ಸರ್ಕಾರದ ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಹೊಸ ಕಾನೂನು ರೂಪಿಸಬೇಕು ಎಂಬುದು ಜೆಡಿಎಸ್‌ನ ಪ್ರಮುಖ ಬೇಡಿಕೆಗಳಾಗಿವೆ.

ಕುಮಾರಸ್ವಾಮಿ ಆರೋಪಕ್ಕೆ ಮತ್ತಷ್ಟು ಕಾವು

ಈ ನಡುವೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಕೂಡ ನೈಸ್ ಯೋಜನೆ ವಿಚಾರದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ನೈಸ್ ಯೋಜನೆ ಹೆಸರಿನಲ್ಲಿ ರೈತರ ಸಾವಿರಾರು ಎಕರೆ ಭೂಮಿಯನ್ನು ಕಬಳಿಸುವ ಪ್ರಯತ್ನ ನಡೆದಿದೆ ಎಂದು ಅವರು ಆರೋಪಿಸಿದ್ದಾರೆ.

ಮುಖ್ಯಮಂತ್ರಿ ನೈಸ್ ಅಕ್ರಮಗಳಲ್ಲಿ ನೇರವಾಗಿ ಭಾಗಿಯಾಗಿದ್ದಾರೆ ಎಂಬ ಗಂಭೀರ ಆರೋಪವನ್ನೂ ಕುಮಾರಸ್ವಾಮಿ ಮಾಡಿದ್ದಾರೆ. ಬೇನಾಮಿ ಸಂಸ್ಥೆಗಳ ಮೂಲಕ ನೈಸ್ ಕಂಪನಿಯನ್ನು ಖರೀದಿಸುವ ಪ್ರಯತ್ನ ನಡೆಯುತ್ತಿದೆ ಎಂಬ ಆರೋಪವನ್ನು ಮಾಡಿರುವ ಅವರು, ಮುಂದಿನ ದಿನಗಳಲ್ಲಿ ದಾಖಲೆಗಳೊಂದಿಗೆ ಮಾಹಿತಿ ಬಹಿರಂಗಪಡಿಸುವುದಾಗಿ ಹೇಳಿದ್ದಾರೆ.

ನೈಸ್ ಯೋಜನೆಗೆ ಸಂಬಂಧಿಸಿದಂತೆ ಜೆಡಿಎಸ್ ಮಾಡಿರುವ ಆರೋಪಗಳು ಮತ್ತು ಸರ್ಕಾರಕ್ಕೆ ಸಲ್ಲಿಸಿರುವ ಮನವಿಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮುಂದಿನ ಕ್ರಮ ಕೈಗೊಳ್ಳುತ್ತದೆಯೇ ಎಂಬುದು ಈಗ ಕುತೂಹಲಕ್ಕೆ ಕಾರಣವಾಗಿದೆ. ಸದ್ಯ ನೈಸ್ ಯೋಜನೆಗೆ ಸಂಬಂಧಿಸಿದ ಭೂಮಿ, ಟೋಲ್ ಹಾಗೂ ಆರ್ಥಿಕ ವ್ಯವಹಾರಗಳ ಕುರಿತು ರಾಜಕೀಯ ವಾಕ್ಸಮರ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಯಿದೆ.

Continue Reading

ರಾಜ್ಯ

Court ಗೆ ಗೈರಾದ ಬಿಜೆಪಿ ಎಂಎಲ್‌ಸಿಗೆ ಬಿಗ್ ಶಾಕ್! N Ravi Kumar ವಿರುದ್ಧ ಜಾಮೀನು ರಹಿತ ವಾರಂಟ್

Published

on

ಬೆಂಗಳೂರು: ಕಲಬುರಗಿ ಜಿಲ್ಲಾಧಿಕಾರಿ ವಿರುದ್ಧ ಅವಹೇಳನಕಾರಿ ಹಾಗೂ ಕೋಮು ಪ್ರಚೋದಕ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ವಿಚಾರಣೆಗೆ ಗೈರಾದ ಬಿಜೆಪಿ ವಿಧಾನ ಪರಿಷತ್ ಸದಸ್ಯ N Ravi Kumar ಅವರಿಗೆ ಕಾನೂನು ಸಂಕಷ್ಟ ಎದುರಾಗಿದೆ. ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಬೆಂಗಳೂರಿನ 42ನೇ ಹೆಚ್ಚುವರಿ ಮುಖ್ಯ ಮಹಾನಗರ ದಂಡಾಧಿಕಾರಿ ನ್ಯಾಯಾಲಯವು ಅವರ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿದೆ.

ವಿಚಾರಣೆಗೆ ಹಾಜರಾಗದಿದ್ದಕ್ಕೆ ಕೋರ್ಟ್‌ ಕಠಿಣ ಕ್ರಮ

ಬೆಂಗಳೂರಿನ 42ನೇ ಹೆಚ್ಚುವರಿ ಮುಖ್ಯ ಮಹಾನಗರ ದಂಡಾಧಿಕಾರಿ ಸಂದೀಪ್ ಪಾಟೀಲ್ ಅವರ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಈ ಹಿಂದೆ ನ್ಯಾಯಾಲಯದಿಂದ ರವಿಕುಮಾರ್ ಅವರಿಗೆ ಸಮನ್ಸ್ ಜಾರಿಯಾಗಿತ್ತು. ಆದರೆ ನಿಗದಿತ ವಿಚಾರಣೆಗೆ ಅವರು ಹಾಜರಾಗದ ಹಿನ್ನೆಲೆಯಲ್ಲಿ ನ್ಯಾಯಾಲಯ ಇದೀಗ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರಗಿಯ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕಳೆದ ವರ್ಷ ಕಲಬುರಗಿಯಲ್ಲಿ ನಡೆದ ಪ್ರತಿಭಟನೆ ವೇಳೆ ಅಂದಿನ ಜಿಲ್ಲಾಧಿಕಾರಿ ಫೌಜಿಯಾ ತರನ್ನಮ್ ಅವರ ವಿರುದ್ಧ ರವಿಕುಮಾರ್ ವಿವಾದಾತ್ಮಕ ಹೇಳಿಕೆ ನೀಡಿದ್ದರು ಎಂಬ ಆರೋಪ ಕೇಳಿಬಂದಿತ್ತು.

ಹೈಕೋರ್ಟ್‌ನಲ್ಲೂ ಅರ್ಜಿ ಸಲ್ಲಿಸಿದ್ದ ರವಿಕುಮಾರ್

ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಎನ್. ರವಿಕುಮಾರ್ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಪ್ರಕರಣದ ವಿಚಾರಣೆ ನಡೆಸಿದ್ದ ಹೈಕೋರ್ಟ್, ಪ್ರಕರಣಕ್ಕೆ ಮಧ್ಯಂತರ ತಡೆ ನೀಡಲು ನಿರಾಕರಿಸಿತ್ತು.

ಅಧೀನ ನ್ಯಾಯಾಲಯದಿಂದ ಸಮನ್ಸ್ ಜಾರಿಯಾಗಿದ್ದರೂ ವಿಚಾರಣೆಗೆ ಗೈರಾಗಿರುವ ಹಿನ್ನೆಲೆಯಲ್ಲಿ ಇದೀಗ ಕೆಳ ನ್ಯಾಯಾಲಯದಿಂದಲೇ ಕಠಿಣ ಕ್ರಮ ಎದುರಿಸಬೇಕಾಗಿದೆ.

ಹೇಳಿಕೆ ಬಗ್ಗೆ ಹೈಕೋರ್ಟ್ ಅಸಮಾಧಾನ

ಫೌಜಿಯಾ ತರನ್ನಮ್ ಅವರನ್ನು ಪಾಕಿಸ್ತಾನದಿಂದ ಬಂದವರು ಎಂಬ ರೀತಿಯಲ್ಲಿ ಬಿಂಬಿಸುವಂತೆ ರವಿಕುಮಾರ್ ಹೇಳಿಕೆ ನೀಡಿದ್ದರು ಎಂಬ ಆರೋಪದ ಹಿನ್ನೆಲೆಯಲ್ಲಿ ಹೈಕೋರ್ಟ್ ಕೂಡ ಈ ಹಿಂದೆ ತೀವ್ರ ಅಸಮಾಧಾನ ವ್ಯಕ್ತಪಡಿಸಿತ್ತು.

ಮುಸ್ಲಿಂ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕೆ ಒಬ್ಬ ಐಎಎಸ್ ಅಧಿಕಾರಿಯ ವಿರುದ್ಧ ಈ ರೀತಿಯ ಹೇಳಿಕೆ ನೀಡುವುದನ್ನು ಕ್ಷಮಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತ್ತು. ಪ್ರತಿಯೊಬ್ಬರಿಗೂ ಸ್ವಾಭಿಮಾನವಿದ್ದು, ರಾಜಕೀಯ ನಾಯಕರು ತಮಗೆ ಬೇಕಾದಂತೆ ಮಾತನಾಡಲು ಅವಕಾಶವಿಲ್ಲ ಎಂದು ನ್ಯಾಯಾಲಯ ಹೇಳಿತ್ತು.

ರಾಜಕೀಯ ನಾಯಕರು ಸಾರ್ವಜನಿಕರ ಕಲ್ಯಾಣಕ್ಕಾಗಿ ಅಗತ್ಯವಿರುವ ವಿಚಾರಗಳ ಕುರಿತು ಮಾತನಾಡಬೇಕು. ತಮ್ಮ ಮಾತಿನ ಮೇಲೆ ಹಿಡಿತ ಹೊಂದಿರಬೇಕು. ಏನು ಬೇಕಾದರೂ ಮಾತನಾಡಬಹುದು ಎಂಬ ಮನೋಭಾವ ಸರಿಯಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತ್ತು.

ಇದೀಗ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ಜಾಮೀನು ರಹಿತ ಬಂಧನ ವಾರಂಟ್ ಹೊರಬಿದ್ದಿರುವುದು ಪ್ರಕರಣಕ್ಕೆ ಮತ್ತೊಂದು ಮಹತ್ವದ ತಿರುವು ನೀಡಿದೆ.

Continue Reading

Trending