ದೇಶ
ಮಹದೇವಪುರದಲ್ಲಿ ಮತಗಳ್ಳತನ ಆರೋಪ: ರಾಹುಲ್ ಗಾಂಧಿ ಹೇಳಿಕೆಗೆ ತೀವ್ರತೆ, ಎಸ್‌ಐಟಿ ತನಿಖೆಗೆ ಸುಪ್ರೀಂಗೆ ಪಿಐಎಲ್
ನವದೆಹಲಿ: 2024ರ ಲೋಕಸಭಾ ಚುನಾವಣೆಯ ವೇಳೆ ಬೆಂಗಳೂರಿನ ಮಹದೇವಪುರ ವಿಧಾನಸಭಾ ಕ್ಷೇತ್ರದಂತೆ ಹಲವಾರು ಕ್ಷೇತ್ರಗಳಲ್ಲಿ ಮತಗಳ್ಳತನ ನಡೆದಿರುವ ಆರೋಪದ ಹಿನ್ನೆಲೆಯಲ್ಲಿ, ಮಾಜಿ ನ್ಯಾಯಾಧೀಶರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಬೇಕೆಂದು ಆಗ್ರಹಿಸಿ ವಕೀಲ ಹಾಗೂ ಕಾಂಗ್ರೆಸ್ ಸದಸ್ಯ ರೋಹಿತ್ ಪಾಂಡೆ ಸುಪ್ರೀಂ ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಿದ್ದಾರೆ.
ಅರ್ಜಿಯ ಪ್ರಮುಖ ಅಂಶಗಳು:
ಪಾಂಡೆ ಅವರು ಸಲ್ಲಿಸಿದ ಅರ್ಜಿಯಲ್ಲಿ, “ಅತ್ಯಂತ ಸೂಕ್ಷ್ಮ” ಹಾಗೂ ನಕಲಿ ಮತದಾರರ ಪಟ್ಟಿ ತಯಾರಿ ಕುರಿತಂತೆ ಸಾಕ್ಷ್ಯಗಳನ್ನು ನೀಡಿದ್ದು, ವಿಚಾರಣೆಗೆ ಅರ್ಜಿ ಶೀಘ್ರ ಒಳಪಡಿಸಬಹುದು ಎಂದು ಹೇಳಿದ್ದಾರೆ. ಅರ್ಜಿಯಲ್ಲಿ, ನ್ಯಾಯಾಲಯದ ಆದೇಶ ಹೊರಬೀಳುವವರೆಗೆ ಮತದಾರರ ಪಟ್ಟಿಗಳ ಯಾವುದೇ ಪರಿಷ್ಕರಣೆ ಅಥವಾ ಅಂತಿಮಗೊಳಿಸುವಿಕೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಬೇಕೆಂದು ಅವರು ಕೋರಿ, ಚುನಾವಣೆ ಆಯೋಗದ (ECI) ವಿರುದ್ಧ ನೇರವಾಗಿ ಪ್ರಶ್ನೆ ಎತ್ತಿದ್ದಾರೆ.
ರಾಹುಲ್ ಗಾಂಧಿಯ ಹೇಳಿಕೆಯಿಂದ ಪ್ರೇರಣೆ:
ಅಗಸ್ಟ್ 7ರಂದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪತ್ರಿಕಾಗೋಷ್ಠಿಯಲ್ಲಿ ಮಹದೇವಪುರ ಸೇರಿದಂತೆ ಹಲವು ಪ್ರದೇಶಗಳಲ್ಲಿ ನಕಲಿ ಮತದಾರರ ಸೇರ್ಪಡೆ ಮತ್ತು ನೈಜ ಮತದಾರರ ಹೆಸರು ತೆಗೆದುಹಾಕಲಾಗಿದೆ ಎಂದು ಆರೋಪಿಸಿದ್ದರು. ಈ ಕುರಿತು ಪ್ರಸ್ತಾಪಿಸಿ, ಪಾಂಡೆ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ಪಾರದರ್ಶಕತೆಗಾಗಿ ಸೂಚನೆಗಳು:
ಅರ್ಜಿಯಲ್ಲಿ, ಪಾಂಡೆ ಅವರು ECIಗೆ ಈ ಕೆಳಕಂಡ ಸೂಚನೆಗಳನ್ನು ನೀಡುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದಾರೆ:
- ನಕಲಿ ಮತದಾರರನ್ನು ತಡೆಗಟ್ಟುವ ವ್ಯವಸ್ಥೆ ರೂಪಿಸಬೇಕು
- ಮತದಾರರ ಪಟ್ಟಿ ತಯಾರಿ, ನಿರ್ವಹಣೆ ಹಾಗೂ ಪ್ರಕಟಣೆಯಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆ ಇರಬೇಕು
- ಎಲ್ಲ ಮತದಾರರ ಪಟ್ಟಿ ಯಂತ್ರ-ಓದಬಹುದಾದ (machine-readable) ಮತ್ತು OCR ರೂಪದಲ್ಲಿ ಲಭ್ಯವಿರಬೇಕು
- ಸಾರ್ವಜನಿಕರು ಸುಲಭವಾಗಿ ಪರಿಶೀಲಿಸಬಹುದಾದ ರೀತಿಯಲ್ಲಿ ಲಭ್ಯವಿರಬೇಕು
ಸಂವಿಧಾನದ ಉಲ್ಲಂಘನೆ ಎಂದ ಪಾಂಡೆ:
“ಈ ಅಪರಾಧದಿಂದ صرف ಚುನಾವಣೆ ಫಲಿತಾಂಶವಲ್ಲ, ಮತದಾನದ ಮೂಲಭೂತ ನ್ಯಾಯದ ಮೇಲೆಯೂ ಕಪ್ಪುಚುಕ್ಕೆ ಬೀಳುತ್ತದೆ. ಇದು ಸಾಂವಿಧಾನಿಕ ಭರವಸೆಗಳಾದ ಸಮಾನತೆ, ನ್ಯಾಯ ಮತ್ತು ‘ಒಬ್ಬ ವ್ಯಕ್ತಿ – ಒಂದು ಮತ’ ತತ್ವಗಳನ್ನು ದುರ್ಬಲಗೊಳಿಸುತ್ತದೆ” ಎಂದು ಅವರು ವಾದಿಸಿದ್ದಾರೆ.
ದೇಶ
ಗಾನಕೋಗಿಲೆ ಎಸ್. ಜಾನಕಿ ಪಂಚಭೂತಗಳಲ್ಲಿ ಲೀನ; ಸರ್ಕಾರಿ ಗೌರವದೊಂದಿಗೆ ಮೈಸೂರಿನಲ್ಲಿ ಅಂತ್ಯಸಂಸ್ಕಾರ
ಮೈಸೂರು: ಗಾನಕೋಗಿಲೆ ಎಸ್. ಜಾನಕಿ ಅವರಿಗೆ ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ ತಾಲೂಕಿನ ಕಣಿಯನಹುಂಡಿ ಗ್ರಾಮದಲ್ಲಿ ಭಾನುವಾರ ಭಾವುಕ ವಿದಾಯ ನೀಡಲಾಯಿತು. ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಎಲ್ಲಾ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗಿದ್ದು, ಮೈಸೂರು ಜಿಲ್ಲಾಡಳಿತದಿಂದ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲಾಯಿತು.
ಎಸ್. ಜಾನಕಿ ಅವರ ಪತಿ ರಾಮಪ್ರಸಾದ್ ಅವರು 1997ರಲ್ಲೇ ನಿಧನರಾಗಿದ್ದರು. ಅವರ ಏಕೈಕ ಪುತ್ರ ಮುರಳಿ ಕೃಷ್ಣ ಕೂಡ 2026ರ ಜನವರಿಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದರು. ಕುಟುಂಬದಲ್ಲಿ ಪುರುಷ ವಾರಸುದಾರರಿಲ್ಲದ ಕಾರಣ, ಜಾನಕಿ ಅವರ ಮೊಮ್ಮಗಳು ಅಪ್ಸರಾ ಕುಟುಂಬದ ಪರವಾಗಿ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿ ಅಜ್ಜಿಯ ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಈ ಭಾವುಕ ಕ್ಷಣ ಕಂಡು ಸ್ಥಳದಲ್ಲಿದ್ದ ಅಭಿಮಾನಿಗಳು ಕಣ್ಣೀರಿಟ್ಟರು.
1956ರಲ್ಲಿ ರಾಮಪ್ರಸಾದ್ ಅವರನ್ನು ವಿವಾಹವಾಗಿದ್ದ ಎಸ್. ಜಾನಕಿ, ತಮ್ಮ ಪತಿಯನ್ನು ಪ್ರೀತಿಯಿಂದ ‘ರಾಮು’ ಎಂದು ಕರೆಯುತ್ತಿದ್ದರು. ಜಾನಕಿ ಅವರ ಸಂಗೀತ ಪಯಣದಲ್ಲಿ ರಾಮಪ್ರಸಾದ್ ಸದಾ ಬೆಂಬಲವಾಗಿ ನಿಂತಿದ್ದು, ಅವರ ಯಶಸ್ಸಿನ ಹಿಂದಿನ ಪ್ರಮುಖ ಶಕ್ತಿಯಾಗಿದ್ದರು ಎಂದು ಕುಟುಂಬದವರು ನೆನಪಿಸಿಕೊಂಡರು.
ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳಲ್ಲಿ ಸಾವಿರಾರು ಅಮರ ಗೀತೆಗಳಿಗೆ ಧ್ವನಿಯಾಗಿದ್ದ ಎಸ್. ಜಾನಕಿ, 2017ರ ಅಕ್ಟೋಬರ್ 28ರಂದು ಮೈಸೂರಿನಲ್ಲಿ ನಡೆದ ಸಂಗೀತ ಕಾರ್ಯಕ್ರಮದಲ್ಲಿ ಸಾರ್ವಜನಿಕ ಗಾಯನಕ್ಕೆ ವಿದಾಯ ಹೇಳಿದ್ದರು. ಮಲಯಾಳಂ ಚಿತ್ರದ ‘ಅಮ್ಮ ಪೂವಿನುಂ’ ಜೋಗುಳ ಗೀತೆ ಅವರ ಗಾಯನ ಬದುಕಿನ ಕೊನೆಯ ದಾಖಲಾದ ಹಾಡಾಗಿ ಉಳಿದಿದೆ.
ಗಾನಕೋಗಿಲೆ ಎಸ್. ಜಾನಕಿ ಭೌತಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಮಧುರ ಕಂಠ, ಅಮರ ಗೀತೆಗಳು ಮತ್ತು ಅಪಾರ ಸಂಗೀತ ಸೇವೆ ಭಾರತೀಯ ಸಂಗೀತ ಲೋಕದಲ್ಲಿ ಸದಾಕಾಲ ಜೀವಂತವಾಗಿರಲಿವೆ.
ದೇಶ
ಜಮ್ಮು-ಕಾಶ್ಮೀರದಲ್ಲಿ ಉಗ್ರರ ವೈಭವೀಕರಣ ಆರೋಪ; ಪುಸ್ತಕ ಪ್ರಕಟಿಸಿದ ಮೂವರು ಪ್ರಕಾಶಕರು ಬಂಧನ
ಜಮ್ಮು: ಜಮ್ಮು-ಕಾಶ್ಮೀರದಲ್ಲಿ ಉಗ್ರಗಾಮಿಗಳು ಹಾಗೂ ಪ್ರತ್ಯೇಕತಾವಾದಿಗಳನ್ನು ವೈಭವೀಕರಿಸುವ ವಿಷಯಗಳನ್ನು ಒಳಗೊಂಡಿದೆ ಎನ್ನಲಾದ ‘Legends and Personalities of Jammu and Kashmir’ ಪುಸ್ತಕದ ಪ್ರಕಟಣೆ ಭಾರೀ ವಿವಾದಕ್ಕೆ ಕಾರಣವಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮ್ಮು-ಕಾಶ್ಮೀರ ಕೌಂಟರ್ ಇಂಟೆಲಿಜೆನ್ಸ್ ವಿಂಗ್ (CIK) ಮೂವರು ಪ್ರಕಾಶಕರನ್ನು ಬಂಧಿಸಿ ತನಿಖೆಯನ್ನು ತೀವ್ರಗೊಳಿಸಿದೆ.
ತನಿಖಾಧಿಕಾರಿಗಳ ಪ್ರಕಾರ, ಪುಸ್ತಕದಲ್ಲಿ ಭಾರತ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಕೆಲವು ಉಗ್ರರು ಮತ್ತು ಪ್ರತ್ಯೇಕತಾವಾದಿ ನಾಯಕರನ್ನು ಜಮ್ಮು-ಕಾಶ್ಮೀರದ ಪ್ರಮುಖ ವ್ಯಕ್ತಿಗಳಂತೆ ಬಿಂಬಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಇದೇ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿ ಪ್ರಕಾಶಕರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.
ಬಂಧಿತರಲ್ಲಿ ಇಬ್ಬರು ದೆಹಲಿ ಮೂಲದವರಾಗಿದ್ದು, ಮತ್ತೊಬ್ಬರು ಜಮ್ಮುವಿನ ನಿವಾಸಿಯಾಗಿದ್ದಾರೆ. ಈ ಹಿಂದೆ ದೆಹಲಿ ಮತ್ತು ಜಮ್ಮುವಿನ ವಿವಿಧ ಪ್ರಕಾಶನ ಸಂಸ್ಥೆಗಳ ಮೇಲೆ ದಾಳಿ ನಡೆಸಿದ್ದ ಅಧಿಕಾರಿಗಳು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದರು. ತನಿಖೆ ವೇಳೆ ಡಿಜಿಟಲ್ ಸಾಕ್ಷ್ಯಗಳನ್ನು ಅಳಿಸಲು ಯತ್ನಿಸಿದ ಆರೋಪವೂ ಕೇಳಿಬಂದಿದ್ದು, ತನಿಖಾ ತಂಡ ಡೇಟಾವನ್ನು ಮರುಪಡೆದಿದೆ ಎಂದು ತಿಳಿದುಬಂದಿದೆ.
ಪ್ರಕರಣದ ತನಿಖೆಯ ಭಾಗವಾಗಿ ಪುಸ್ತಕದ ಲೇಖಕರೊಬ್ಬರನ್ನು ರಾಜಸ್ಥಾನದಲ್ಲಿ ವಿಚಾರಣೆ ನಡೆಸಲಾಗಿದೆ. ಮತ್ತೊಬ್ಬ ಲೇಖಕರಿಗಾಗಿ ಶೋಧ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದೇ ವೇಳೆ, ಪುಸ್ತಕದ ಪ್ರಕಟಣೆಗೆ ಸಂಬಂಧಿಸಿದ ಅನುಮೋದನೆ ಪ್ರಕ್ರಿಯೆಯಲ್ಲಿದ್ದ ಶಿಕ್ಷಣ ಇಲಾಖೆಯ ಅಧಿಕಾರಿಗಳ ಪಾತ್ರದ ಕುರಿತೂ ತನಿಖೆ ನಡೆಯುತ್ತಿದೆ. ಈಗಾಗಲೇ ಒಬ್ಬ ಪ್ರಾಂಶುಪಾಲರು ಸೇರಿದಂತೆ ಎಂಟು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಪುಸ್ತಕದ ಪ್ರಕಟಣೆ, ಮುದ್ರಣ ಹಾಗೂ ಪ್ರಚಾರಕ್ಕೆ ಸಂಬಂಧಿಸಿದವರ ವಿರುದ್ಧ ಯುಎಪಿಎ (UAPA) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಬಂಧನಗಳ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಬೆಂಗಳೂರು
Shakthi Scheme ಬಳಿಕ BMTC ಸೇವೆ ಹೇಗಿದೆ? ಬಸ್‌ನಲ್ಲಿ ಪ್ರಯಾಣಿಸಿದ ಸಚಿವರಿಗೆ ಸಿಕ್ಕ ಉತ್ತರ
ಬೆಂಗಳೂರು: Shakthi Scheme ಜಾರಿಯಾದ ಬಳಿಕ ಬಿಎಂಟಿಸಿ ಸೇವೆಗಳ ನೈಜ ಸ್ಥಿತಿ ತಿಳಿಯಲು ಸಾರಿಗೆ ಸಚಿವ ಬೈರತಿ ಸುರೇಶ್ ಸಾಮಾನ್ಯ ಪ್ರಯಾಣಿಕರಂತೆ ಬಸ್‌ನಲ್ಲಿ ಸಂಚರಿಸಿ ರಿಯಾಲಿಟಿ ಚೆಕ್ ನಡೆಸಿದರು. ಜಯಮಹಲ್, ಆರ್.ಟಿ.ನಗರ, ಸಿಬಿಐ ರಸ್ತೆ, ಹೆಬ್ಬಾಳ ಹಾಗೂ ನಾಗವಾರ ಮಾರ್ಗಗಳಲ್ಲಿ ಪ್ರಯಾಣಿಸಿದ ಸಚಿವರು, ಸಾರ್ವಜನಿಕರು ಪ್ರತಿದಿನ ಎದುರಿಸುವ ಸಮಸ್ಯೆಗಳನ್ನು ಖುದ್ದಾಗಿ ಗಮನಿಸಿದರು.
ಈ ವೇಳೆ ಹೆಬ್ಬಾಳ ಮಾರ್ಗದ ಬಸ್‌ನಲ್ಲಿ ಸಚಿವರಿಗೆ ಅಚ್ಚರಿಯ ಅನುಭವ ಎದುರಾಯಿತು. ಟಿಕೆಟ್ ಪಡೆಯಲು ಅವರು ₹100 ಮುಖಬೆಲೆಯ ನೋಟು ನೀಡಿದಾಗ, ಅವರನ್ನು ಗುರುತಿಸದ ಕಂಡಕ್ಟರ್ ತನ್ನ ಬಳಿ ಚಿಲ್ಲರೆ ಇಲ್ಲ ಎಂದು ಹೇಳಿ ಬಸ್‌ನಿಂದ ಕೆಳಗೆ ಇಳಿಯುವಂತೆ ಸೂಚಿಸಿದ್ದಾನೆ. ಸಚಿವರು ಯಾವುದೇ ವಾಗ್ವಾದ ನಡೆಸದೆ ಬಸ್‌ನಿಂದ ಇಳಿದು, ಬಳಿಕ ಚಿಲ್ಲರೆ ಹಣ ಹೊಂದಿಸಿಕೊಂಡು ಮತ್ತೊಂದು ಬಸ್‌ನಲ್ಲಿ ಪ್ರಯಾಣ ಮುಂದುವರಿಸಿದರು. ಈ ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಪರಿಶೀಲನೆ ವೇಳೆ ಮತ್ತೊಂದು ಗಂಭೀರ ಲೋಪವೂ ಸಚಿವರ ಗಮನಕ್ಕೆ ಬಂತು. ಫನ್ ವರ್ಲ್ಡ್ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರು ಕೈ ತೋರಿಸಿದರೂ ಬಸ್ ನಿಲ್ಲಿಸದೇ ಚಾಲಕ ಮುಂದಕ್ಕೆ ಚಲಿಸಿದ್ದನ್ನು ಅವರು ಖುದ್ದಾಗಿ ವೀಕ್ಷಿಸಿದರು. ಪ್ರಯಾಣಿಕರಿಗೆ ಆಗಿರುವ ತೊಂದರೆಯನ್ನು ಗಂಭೀರವಾಗಿ ಪರಿಗಣಿಸಿದ ಸಚಿವರು ಸಂಬಂಧಿಸಿದ ಚಾಲಕ ಮತ್ತು ನಿರ್ವಾಹಕರ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಚಿವರ ಆದೇಶದಂತೆ ಸಂಬಂಧಪಟ್ಟ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಪ್ರಯಾಣಿಕರಿಗೆ ಉತ್ತಮ ಸೇವೆ ನೀಡುವುದು ಸಾರಿಗೆ ಇಲಾಖೆಯ ಮೊದಲ ಆದ್ಯತೆಯಾಗಿದ್ದು, ನಿರ್ಲಕ್ಷ್ಯ ತೋರಿಸುವ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಮುಂದುವರಿಯಲಿದೆ ಎಂಬ ಸ್ಪಷ್ಟ ಸಂದೇಶವನ್ನು ಬೈರತಿ ಸುರೇಶ್ ನೀಡಿದ್ದಾರೆ.
-
ಬೆಂಗಳೂರು15 hours agoಬೇಡ ಬ್ರೋ: ಡ್ರಗ್ಸ್ ವಿರುದ್ಧ MLA ಎಸ್.ಟಿ. ಸೋಮಶೇಖರ್ ಖಡಕ್ ಎಚ್ಚರಿಕೆ; ಯುವಕರಿಗೆ ಮಹತ್ವದ ಸಂದೇಶ
-
ಸುತ್ತ ಮುತ್ತ17 hours agoBorivali Railway Station Viral Video ಪ್ರೇಮಿಗಳ ಹಂಗಾಮಾ? 60 ಲಕ್ಷಕ್ಕೂ ಹೆಚ್ಚು ಬಾರಿ ವೀಕ್ಷಿಸಿದ ವೈರಲ್ ವಿಡಿಯೋ
-
ದೇಶ14 hours agoಗಾನಕೋಗಿಲೆ ಎಸ್. ಜಾನಕಿ ಪಂಚಭೂತಗಳಲ್ಲಿ ಲೀನ; ಸರ್ಕಾರಿ ಗೌರವದೊಂದಿಗೆ ಮೈಸೂರಿನಲ್ಲಿ ಅಂತ್ಯಸಂಸ್ಕಾರ
-
ದೇಶ15 hours agoManmohan Singh ಕುರಿತು ಮಾಜಿ ಮುಖ್ಯ ಚುನಾವಣಾ ಆಯುಕ್ತರ ಪುಸ್ತಕದಲ್ಲಿ ಹೊಸ ಬಹಿರಂಗ; ರಾಜಕೀಯ ವಲಯದಲ್ಲಿ ಚರ್ಚೆ
-
ರಾಜ್ಯ17 hours agoS Janaki ಹೆಸರನ್ನು ಮೈಸೂರಿನ ಗದ್ದಿಗೆ ರಸ್ತೆಗೆ ನಾಮಕರಣ ಮಾಡಿ: ಕೇರ್ಟೇಕರ್ ನವೀನ್ ಮನವಿ
-
ದೇಶ14 hours agoಜಮ್ಮು-ಕಾಶ್ಮೀರದಲ್ಲಿ ಉಗ್ರರ ವೈಭವೀಕರಣ ಆರೋಪ; ಪುಸ್ತಕ ಪ್ರಕಟಿಸಿದ ಮೂವರು ಪ್ರಕಾಶಕರು ಬಂಧನ
-
ರಾಜ್ಯ21 hours agoಮಹಾರಾಜ ಕಾಲೇಜು ಮೈದಾನದಲ್ಲಿ ಎಸ್. ಜಾನಕಿಗೆ ಅಂತಿಮ ನಮನ; ಅಭಿಮಾನಿಗಳ ಕಣ್ಣೀರಿನ ಸಾಗರ
-
ಕ್ರೀಡೆ15 hours agoSouth Africa ಫುಟ್ಬಾಲ್ಗೆ ಆಘಾತ; ಜೇಡನ್ ಆಡಮ್ಸ್ ಅಕಾಲಿಕ ನಿಧನ
