ಬೆಂಗಳೂರು
ಡಿಕೆಶಿ–ಖರ್ಗೆ ಮಧ್ಯೆ ರಹಸ್ಯ ಮಾತುಕತೆ: ನವೆಂಬರ್ ಕ್ರಾಂತಿ ಚರ್ಚೆಗೆ ಹೊಸ ತಿರುವು!
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ “ನವಂಬರ್ ಕ್ರಾಂತಿ” ಕುರಿತ ಚರ್ಚೆಗಳು ತೀವ್ರಗೊಂಡಿವೆ. ಪವರ್ ಶೇರಿಂಗ್, ಸಂಪುಟ ಪುನರ್ರಚನೆ ಸೇರಿದಂತೆ ಹಲವು ಅಂದಾಜುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ. ಈ ನಡುವೆ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ತಡರಾತ್ರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ.
ಸದಾಶಿವನಗರದಲ್ಲಿರುವ ಖರ್ಗೆ ಅವರ ನಿವಾಸದಲ್ಲಿ ನಡೆದ ಈ ಭೇಟಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ನಡೆದಿದ್ದು, ಸಂಪುಟ ಬದಲಾವಣೆ ಕುರಿತ ಹೈಕಮಾಂಡ್ ತಂತ್ರ, ಪಕ್ಷದ ಒಳಗಿನ ಅಸಮಾಧಾನ ಹಾಗೂ ಮುಂದಿನ ರಾಜಕೀಯ ಸಮೀಕರಣಗಳ ಬಗ್ಗೆ ಚರ್ಚೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.
ಚರ್ಚೆಯಲ್ಲಿ ಖರ್ಗೆ ಅವರು ಡಿಕೆಶಿಗೆ “ಪಕ್ಷ ನಿಷ್ಠೆ ಮತ್ತು ಹೈಕಮಾಂಡ್ ನಿಷ್ಠೆ ವ್ಯರ್ಥವಾಗುವುದಿಲ್ಲ, ಸೂಕ್ತ ಸಮಯದಲ್ಲಿ ಪ್ರತಿಫಲ ಸಿಗುತ್ತದೆ” ಎಂಬ ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಹೈಕಮಾಂಡ್ ಈಗಾಗಲೇ ರಾಜ್ಯದ ಬೆಳವಣಿಗೆಗಳನ್ನ ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಬಿಹಾರ ಚುನಾವಣೆಯ ನಂತರ ಪ್ರಮುಖ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ಸಂಪುಟ ಪುನರ್ರಚನೆಗೆ 17-18 ಸಚಿವರನ್ನು ಕೈಬಿಟ್ಟು ಪ್ರಾದೇಶಿಕ ಸಮಾನತೆ, ಶಾಸಕರ ಹಿರಿತನ, ಜಾತಿ ಲೆಕ್ಕಾಚಾರ ಮತ್ತು ಸ್ಥಳೀಯ ನಾಯಕತ್ವ ಆಧಾರದಲ್ಲಿ ಹೊಸ ಮುಖಗಳಿಗೆ ಅವಕಾಶ ನೀಡುವ ಯೋಜನೆಯೂ ಇದೆ ಎಂದು ತಿಳಿದುಬಂದಿದೆ.
ಹೀಗಾಗಿ ನವೆಂಬರ್ ಕ್ರಾಂತಿ ಚರ್ಚೆಗಿಂತ, ಈ ಖರ್ಗೆ–ಡಿಕೆಶಿ ಮಾತುಕತೆ ರಾಜ್ಯ ರಾಜಕೀಯದ ಭವಿಷ್ಯ ತೀರ್ಮಾನಿಸುವ ಪ್ರಮುಖ ಹಂತವಾಗಿ ಪರಿಗಣಿಸಲಾಗಿದೆ.
ಬೆಂಗಳೂರು
ಕ್ರಿಕೆಟ್ ದಿಗ್ಗಜನಾದರೂ ಇಷ್ಟೊಂದು ಸಿಂಪಲ್! Metro ದಲ್ಲಿ Javagal Srinath
ಬೆಂಗಳೂರು: ಭಾರತ ಕ್ರಿಕೆಟ್ ತಂಡದ ಮಾಜಿ ವೇಗದ ಬೌಲರ್ ಹಾಗೂ ಕರ್ನಾಟಕದ ಕ್ರಿಕೆಟ್ ದಿಗ್ಗಜ Javagal Srinath ಅವರ ಸರಳತೆ ಮತ್ತೊಮ್ಮೆ ಅಭಿಮಾನಿಗಳ ಗಮನ ಸೆಳೆದಿದೆ. ಬೆಂಗಳೂರಿನ ಮೆಟ್ರೋದಲ್ಲಿ ಸಾಮಾನ್ಯ ಪ್ರಯಾಣಿಕರಂತೆ ಟ್ರಾಲಿ ಬ್ಯಾಗ್ ಹಿಡಿದು ಪ್ರಯಾಣಿಸುತ್ತಿರುವ ಅವರ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

1990ರ ದಶಕದಲ್ಲಿ ತಮ್ಮ ವೇಗದ ಬೌಲಿಂಗ್ ಮೂಲಕ ಎದುರಾಳಿ ಬ್ಯಾಟರ್ಗಳಿಗೆ ಸವಾಲಾಗಿದ್ದ ಜಾವಗಲ್ ಶ್ರೀನಾಥ್, ಕ್ರಿಕೆಟ್ನಿಂದ ನಿವೃತ್ತಿಯಾದ ಬಳಿಕವೂ ಕ್ರಿಕೆಟ್ ಜಗತ್ತಿನೊಂದಿಗೆ ಸಕ್ರಿಯವಾಗಿ ಸಂಪರ್ಕದಲ್ಲಿದ್ದಾರೆ. ಅವರು ಪ್ರಸ್ತುತ ಐಸಿಸಿ ಮ್ಯಾಚ್ ರೆಫರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಮೆಟ್ರೋದಲ್ಲಿ ಸಾಮಾನ್ಯ ಪ್ರಯಾಣಿಕನಂತೆ ಶ್ರೀನಾಥ್
ವೈರಲ್ ಆಗಿರುವ ಫೋಟೋದಲ್ಲಿ ಜಾವಗಲ್ ಶ್ರೀನಾಥ್ ಅವರು ನೀಲಿ ಜೀನ್ಸ್ ಮತ್ತು ಆಕಾಶ ನೀಲಿ ಬಣ್ಣದ ಶರ್ಟ್ ಧರಿಸಿ, ತಮ್ಮ ಟ್ರಾಲಿ ಬ್ಯಾಗ್ನೊಂದಿಗೆ ಮೆಟ್ರೋದಲ್ಲಿ ನಿಂತಿರುವುದು ಕಂಡುಬಂದಿದೆ. ದೊಡ್ಡ ಕ್ರಿಕೆಟ್ ತಾರೆಯಾಗಿದ್ದರೂ ಯಾವುದೇ ಆಡಂಬರವಿಲ್ಲದೆ ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣಿಸಿರುವುದು ಅಭಿಮಾನಿಗಳ ಗಮನ ಸೆಳೆದಿದೆ.
ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆ ಹಲವರು ಶ್ರೀನಾಥ್ ಅವರ ಸರಳ ವ್ಯಕ್ತಿತ್ವವನ್ನು ಕೊಂಡಾಡಿದ್ದಾರೆ. ಬೆಂಗಳೂರಿನಲ್ಲಿ ಅವರನ್ನು ಹಲವು ಬಾರಿ ಸಾಮಾನ್ಯ ವ್ಯಕ್ತಿಯಂತೆ ತಮ್ಮ ಕೆಲಸಗಳಲ್ಲಿ ತೊಡಗಿಸಿಕೊಂಡಿರುವುದನ್ನು ನೋಡಿದ್ದೇವೆ ಎಂದು ಕೆಲವರು ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದಾರೆ.
ಕರ್ನಾಟಕದ ಕ್ರಿಕೆಟಿಗರ ಸರಳತೆಗೆ ಮೆಚ್ಚುಗೆ
ಜಾವಗಲ್ ಶ್ರೀನಾಥ್ ಅವರ ಈ ನಡೆ ಕರ್ನಾಟಕದ ಹಲವು ಕ್ರಿಕೆಟಿಗರ ಸರಳತೆಯನ್ನು ಅಭಿಮಾನಿಗಳಿಗೆ ನೆನಪಿಸಿದೆ. ರಾಹುಲ್ ದ್ರಾವಿಡ್ ಮತ್ತು ವೆಂಕಟೇಶ್ ಪ್ರಸಾದ್ ಅವರೂ ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಆಡಂಬರವಿಲ್ಲದೆ ಕಾಣಿಸಿಕೊಳ್ಳುತ್ತಾರೆ ಎಂದು ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಅಭಿಪ್ರಾಯಪಟ್ಟಿದ್ದಾರೆ.
ಶ್ರೀನಾಥ್ ಅವರ ಸರಳತೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ ಮೈಸೂರಿನ ರೈಲು ನಿಲ್ದಾಣದಲ್ಲಿ ಬೆನ್ನಿಗೆ ಬ್ಯಾಗ್ ಹಾಕಿಕೊಂಡು ರೈಲಿಗಾಗಿ ಕಾಯುತ್ತಿದ್ದ ಅವರ ಫೋಟೋ ಕೂಡ ವೈರಲ್ ಆಗಿತ್ತು. ಆಗಲೂ ಅಭಿಮಾನಿಗಳು ಅವರ ಸರಳ ಜೀವನಶೈಲಿಯನ್ನು ಮೆಚ್ಚಿಕೊಂಡಿದ್ದರು.
67 ಟೆಸ್ಟ್, 229 ಏಕದಿನ ಪಂದ್ಯ
ಜಾವಗಲ್ ಶ್ರೀನಾಥ್ ಭಾರತ ಪರ 67 ಟೆಸ್ಟ್ ಪಂದ್ಯಗಳು ಮತ್ತು 229 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ವೇಗದ ಬೌಲರ್ ಆಗಿ ಭಾರತ ತಂಡದ ಪ್ರಮುಖ ಆಟಗಾರರಾಗಿದ್ದ ಅವರು, ತಮ್ಮ ಕ್ರಿಕೆಟ್ ವೃತ್ತಿಜೀವನದ ಬಳಿಕ ಐಸಿಸಿ ಮ್ಯಾಚ್ ರೆಫರಿಯಾಗಿ ಹೊಸ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ.
ಇದೀಗ ಬೆಂಗಳೂರಿನ ಮೆಟ್ರೋದಲ್ಲಿನ ಅವರ ಫೋಟೋ ವೈರಲ್ ಆಗಿದ್ದು, ಪ್ರಸಿದ್ಧಿ ಮತ್ತು ಹುದ್ದೆಗಿಂತ ಸರಳತೆ ಹಾಗೂ ವಿನಯವೇ ವ್ಯಕ್ತಿಯ ನಿಜವಾದ ಗುಣವನ್ನು ತೋರಿಸುತ್ತದೆ ಎಂದು ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
ಅಪರಾಧ
KPSC ನೇಮಕಾತಿ ಹಗರಣ: IAS ಅಧಿಕಾರಿ ಜ್ಞಾನೇಂದ್ರ ಕುಮಾರ್ಗೆ ಜೈಲು, ಕೋರ್ಟ್ನಿಂದ ಮಹತ್ವದ ಆದೇಶ
ಬೆಂಗಳೂರು, ಆಗಸ್ಟ್ 30: ಕರ್ನಾಟಕ ಲೋಕಸೇವಾ ಆಯೋಗದಿಂದ ನಡೆದ ಪಶು ವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಾಗಿದೆ. ಪ್ರಕರಣದಲ್ಲಿ ಕೆಪಿಎಸ್ಸಿ ಪರೀಕ್ಷಾ ನಿಯಂತ್ರಕರಾಗಿ ಕಾರ್ಯನಿರ್ವಹಿಸಿದ್ದ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅವರನ್ನು ಸಿಐಡಿ ಬಂಧಿಸಿದ್ದು, ಇದೀಗ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.

ಎರಡು ದಿನ ವಿಚಾರಣೆ ಬಳಿಕ ಬಂಧನ
ಕೆಪಿಎಸ್ಸಿ ನೇಮಕಾತಿ ಹಗರಣದ ತನಿಖೆಯನ್ನು ಚುರುಕುಗೊಳಿಸಿರುವ ಸಿಐಡಿ ಅಧಿಕಾರಿಗಳು ಜ್ಞಾನೇಂದ್ರ ಕುಮಾರ್ ಅವರನ್ನು ಎರಡು ದಿನಗಳ ಕಾಲ ವಿಚಾರಣೆ ನಡೆಸಿದ್ದಾರೆ. ವಿಚಾರಣೆಯ ಬಳಿಕ ಅವರನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು.
ಪ್ರಕರಣದಲ್ಲಿ ಜ್ಞಾನೇಂದ್ರ ಕುಮಾರ್ ಅವರ ಪಾತ್ರದ ಕುರಿತು ಸಿಐಡಿ ಅಧಿಕಾರಿಗಳು ಹಲವು ವಿಚಾರಗಳ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ ಎನ್ನಲಾಗಿದೆ. ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿರುವ ಅಕ್ರಮಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳಿಂದ ವಿವರಗಳನ್ನು ಪಡೆಯಲಾಗುತ್ತಿದೆ.
ನ್ಯಾಯಾಂಗ ಬಂಧನಕ್ಕೆ ಆದೇಶ
ಜ್ಞಾನೇಂದ್ರ ಕುಮಾರ್ ಅವರನ್ನು ಬೆಂಗಳೂರಿನ 1ನೇ ಎಸಿಜೆಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯವು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದೆ.
ಇದರಿಂದಾಗಿ ಕೆಪಿಎಸ್ಸಿ ಪಶು ವೈದ್ಯಾಧಿಕಾರಿ ನೇಮಕಾತಿ ಹಗರಣ ಪ್ರಕರಣ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದೆ. ಪ್ರಕರಣದ ತನಿಖೆಯಲ್ಲಿ ಮುಂದಿನ ದಿನಗಳಲ್ಲಿ ಇನ್ನಷ್ಟು ಅಧಿಕಾರಿಗಳು ಹಾಗೂ ಇತರರ ವಿಚಾರಣೆ ನಡೆಯುವ ಸಾಧ್ಯತೆಯಿದೆ.
ನಾಳೆ ತೆರೆದ ಕೋರ್ಟ್ಗೆ ಹಾಜರು
ಜ್ಞಾನೇಂದ್ರ ಕುಮಾರ್ ಅವರನ್ನು ಆಗಸ್ಟ್ 31ರಂದು ತೆರೆದ ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ಕೋರ್ಟ್ ಸೂಚನೆ ನೀಡಿದೆ. ಹೀಗಾಗಿ ನಾಳಿನ ವಿಚಾರಣೆ ಪ್ರಕರಣದ ತನಿಖೆಯ ದೃಷ್ಟಿಯಿಂದ ಮಹತ್ವ ಪಡೆದುಕೊಂಡಿದೆ.
ಕೆಪಿಎಸ್ಸಿ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಈಗಾಗಲೇ ಸಿಐಡಿ ತನಿಖೆ ನಡೆಸುತ್ತಿದೆ. ಪ್ರಕರಣದಲ್ಲಿ ಪರೀಕ್ಷಾ ಪ್ರಕ್ರಿಯೆ, ಅಭ್ಯರ್ಥಿಗಳ ಆಯ್ಕೆ ಸೇರಿದಂತೆ ವಿವಿಧ ಹಂತಗಳ ಕುರಿತು ತನಿಖಾಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಬಂಧನದ ಬಳಿಕ ಪ್ರಕರಣದ ತನಿಖೆ ಮತ್ತಷ್ಟು ವೇಗ ಪಡೆಯುವ ನಿರೀಕ್ಷೆ ಇದೆ. ಅಕ್ರಮದ ಹಿಂದೆ ಯಾರ ಪಾತ್ರವಿದೆ ಮತ್ತು ನೇಮಕಾತಿ ಪ್ರಕ್ರಿಯೆಯಲ್ಲಿ ಯಾವ ರೀತಿಯ ಲೋಪಗಳು ನಡೆದಿವೆ ಎಂಬುದು ಮುಂದಿನ ತನಿಖೆಯಿಂದ ಸ್ಪಷ್ಟವಾಗಬೇಕಿದೆ.
ರಾಜ್ಯ
Kichcha Sudeep ರ ಮಾನವೀಯತೆ: 4 ಕುಟುಂಬಗಳಿಗೆ ಆಟೋ ನೀಡಿ ಸ್ವಾವಲಂಬಿ ಬದುಕಿಗೆ ದಾರಿ ತೋರಿದ ನಟ
ಬೆಂಗಳೂರು: ‘ಅಭಿನಯ ಚಕ್ರವರ್ತಿ’ Kichcha Sudeep ಅವರು ಸಿನಿಮಾಗಳ ಮೂಲಕ ಮಾತ್ರವಲ್ಲ, ಸಮಾಜಮುಖಿ ಕಾರ್ಯಗಳ ಮೂಲಕವೂ ಅಭಿಮಾನಿಗಳ ಮನ ಗೆಲ್ಲುತ್ತಿದ್ದಾರೆ. ತಮ್ಮ ತಾಯಿ ಸರೋಜಾ ಸಂಜೀವ್ ಅವರ ಸ್ಮರಣಾರ್ಥವಾಗಿ ಸುದೀಪ್ ಕೈಗೊಂಡಿರುವ ವಿಶೇಷ ಕಾರ್ಯವೊಂದು ಇದೀಗ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ. ತೀವ್ರ ಆರ್ಥಿಕ ಸಂಕಷ್ಟದಲ್ಲಿದ್ದ ನಾಲ್ಕು ಕುಟುಂಬಗಳಿಗೆ ಉಚಿತ ಆಟೋ ರಿಕ್ಷಾಗಳನ್ನು ವಿತರಿಸುವ ಮೂಲಕ ಅವರು ಸ್ವಾವಲಂಬಿ ಬದುಕಿಗೆ ನೆರವಾಗಿದ್ದಾರೆ.

ತಾಯಿಯ ಸ್ಮರಣಾರ್ಥವಾಗಿ ಆಡಂಬರದ ಕಾರ್ಯಕ್ರಮಗಳನ್ನು ಆಯೋಜಿಸುವ ಬದಲು, ಕಷ್ಟದಲ್ಲಿರುವ ಕುಟುಂಬಗಳಿಗೆ ಶಾಶ್ವತ ಜೀವನಾಧಾರ ಒದಗಿಸುವ ಪ್ರಯತ್ನವನ್ನು ಸುದೀಪ್ ಮಾಡಿದ್ದಾರೆ. ಕೇವಲ ಹಣಕಾಸಿನ ನೆರವು ನೀಡುವ ಬದಲು ಸ್ವತಃ ದುಡಿದು ಜೀವನ ನಡೆಸಲು ಸಾಧ್ಯವಾಗುವಂತಹ ಸಾಧನವನ್ನು ಒದಗಿಸಿರುವುದು ಈ ಕಾರ್ಯದ ವಿಶೇಷತೆಯಾಗಿದೆ.
ಪವಿತ್ರಾ ಕುಟುಂಬಕ್ಕೆ ನೆರವು
2017ರಲ್ಲಿ ಪತಿಯನ್ನು ಕಳೆದುಕೊಂಡಿರುವ ಪವಿತ್ರಾ ಅವರು ಇಬ್ಬರು ಮಕ್ಕಳ ಜವಾಬ್ದಾರಿಯನ್ನು ಏಕಾಂಗಿಯಾಗಿ ಹೊತ್ತು ಜೀವನ ಸಾಗಿಸುತ್ತಿದ್ದಾರೆ. ಅವರ ಮಗಳು ಹತ್ತನೇ ತರಗತಿಯಲ್ಲಿ ಓದುತ್ತಿದ್ದು, ಮಗನಿಗೆ ನಾಲ್ಕು ವರ್ಷ. ಕುಟುಂಬಕ್ಕೆ ಸ್ಥಿರ ಆದಾಯದ ಮೂಲವಿಲ್ಲದ ಕಾರಣ ಮಕ್ಕಳ ವಿದ್ಯಾಭ್ಯಾಸ ಸೇರಿದಂತೆ ದೈನಂದಿನ ಜೀವನ ನಿರ್ವಹಣೆ ಕಷ್ಟಕರವಾಗಿತ್ತು. ಇದೀಗ ಸುದೀಪ್ ನೀಡಿರುವ ಆಟೋ ರಿಕ್ಷಾ ಪವಿತ್ರಾ ಅವರ ಕುಟುಂಬಕ್ಕೆ ಸ್ವಾವಲಂಬಿ ಬದುಕಿನ ಹೊಸ ದಾರಿ ತೋರಿಸಿದೆ.
ವಿಷ್ಣುವರ್ಧನ್ ಅಭಿಮಾನಿಗೂ ಸುದೀಪ್ ಆಸರೆ
ಹುಬ್ಬಳ್ಳಿಯ ಮೃತ್ಯುಂಜಯ ಅವರು ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಕಟ್ಟಾ ಅಭಿಮಾನಿಯಾಗಿದ್ದು, ಅವರ ಹೆಸರಿನಲ್ಲಿ ಹಲವು ಜನಪರ ಕಾರ್ಯಕ್ರಮಗಳನ್ನು ಆಯೋಜಿಸಿ ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ಸುಮಾರು 50ಕ್ಕೂ ಹೆಚ್ಚು ಜನಪರ ಕಾರ್ಯಕ್ರಮಗಳನ್ನು ಸಂಘಟಿಸಿದ್ದ ಮೃತ್ಯುಂಜಯ ಅವರ ಕುಟುಂಬ ಇತ್ತೀಚೆಗೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿತ್ತು. ಈ ಪರಿಸ್ಥಿತಿಯನ್ನು ಅರಿತ ಸುದೀಪ್, ಮೃತ್ಯುಂಜಯ ಅವರಿಗೆ ಆಟೋ ರಿಕ್ಷಾ ನೀಡಿ ನೆರವಾಗಿದ್ದಾರೆ.
ಫೈಟರ್ ಬಸವರಾಜ್ಗೂ ಹೊಸ ಆಸರೆ
ಕನ್ನಡ ಚಿತ್ರರಂಗದಲ್ಲಿ ಸಾಹಸ ಕಲಾವಿದರಾಗಿ ದೀರ್ಘಕಾಲ ಸೇವೆ ಸಲ್ಲಿಸಿರುವ ಫೈಟರ್ ಬಸವರಾಜ್ ಅವರನ್ನೂ ಸುದೀಪ್ ಈ ನೆರವಿಗೆ ಆಯ್ಕೆ ಮಾಡಿದ್ದಾರೆ. ಸುಮಾರು 900ಕ್ಕೂ ಅಧಿಕ ಸಿನಿಮಾಗಳಲ್ಲಿ ಫೈಟರ್ ಆಗಿ ಕೆಲಸ ಮಾಡಿರುವ ಬಸವರಾಜ್, ಸುದೀಪ್ ಅವರೊಂದಿಗೆ 30ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ ಎನ್ನಲಾಗಿದೆ.
ಚಿತ್ರರಂಗದಲ್ಲಿ ಹಲವು ವರ್ಷಗಳ ಅನುಭವವಿದ್ದರೂ ಸದ್ಯ ಸ್ಥಿರ ಆದಾಯದ ಕೊರತೆಯಿಂದ ಸಂಕಷ್ಟದಲ್ಲಿದ್ದ ಬಸವರಾಜ್ ಅವರಿಗೆ ಆಟೋ ರಿಕ್ಷಾ ಹೊಸ ಜೀವನಾಧಾರವಾಗಿದೆ.
ಸಾಯಿ ಮಧು ಕುಟುಂಬಕ್ಕೆ ನೆರವಿನ ಹಸ್ತ
ಸುದೀಪ್ ಅವರ ತಾಯಿಗೆ ಆಪ್ತರಾಗಿದ್ದ ಸಾಯಿ ಮಧು ಅವರು ಒಂದು ವರ್ಷದ ಹಿಂದೆ ಮಿದುಳಿನ ಪಾರ್ಶ್ವವಾಯುವಿನಿಂದ ನಿಧನರಾಗಿದ್ದರು. ಅವರಿಗೆ 3ನೇ ಮತ್ತು 6ನೇ ತರಗತಿಯಲ್ಲಿ ಓದುತ್ತಿರುವ ಇಬ್ಬರು ಹೆಣ್ಣುಮಕ್ಕಳಿದ್ದಾರೆ. ಮಗನನ್ನು ಕಳೆದುಕೊಂಡಿದ್ದ ವೃದ್ಧ ತಂದೆ ಬಾಡಿಗೆ ಆಟೋ ಓಡಿಸಿ ಕುಟುಂಬವನ್ನು ನೋಡಿಕೊಳ್ಳುತ್ತಿದ್ದರು.
ಕುಟುಂಬದ ಪರಿಸ್ಥಿತಿಯನ್ನು ತಿಳಿದ ಸುದೀಪ್, ಅವರಿಗೆ ಸ್ವಂತ ಆಟೋ ರಿಕ್ಷಾ ನೀಡಿ ನೆರವಾಗಿದ್ದಾರೆ. ಇದರಿಂದ ಕುಟುಂಬದ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವ ಜೊತೆಗೆ ಭವಿಷ್ಯದಲ್ಲಿ ಸ್ವತಃ ದುಡಿದು ಜೀವನ ನಡೆಸಲು ಅವಕಾಶ ಸಿಕ್ಕಿದೆ.
ಸುದೀಪ್ ಅವರ ಈ ಸಮಾಜಮುಖಿ ಕಾರ್ಯವು ತಾಯಿಯ ಮೇಲಿನ ಪ್ರೀತಿಯನ್ನು ಅರ್ಥಪೂರ್ಣ ರೀತಿಯಲ್ಲಿ ವ್ಯಕ್ತಪಡಿಸಿರುವ ಉದಾಹರಣೆಯಾಗಿದೆ. ಕೇವಲ ತಾತ್ಕಾಲಿಕ ಆರ್ಥಿಕ ನೆರವಿನ ಬದಲು ನಾಲ್ಕು ಕುಟುಂಬಗಳಿಗೆ ಜೀವನೋಪಾಯದ ಸಾಧನ ಒದಗಿಸಿರುವುದು ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಕಾರಣವಾಗಿದೆ.
-
ಅಪರಾಧ9 ಗಂಟೆಗಳು agoKPSC ನೇಮಕಾತಿ ಹಗರಣ: IAS ಅಧಿಕಾರಿ ಜ್ಞಾನೇಂದ್ರ ಕುಮಾರ್ಗೆ ಜೈಲು, ಕೋರ್ಟ್ನಿಂದ ಮಹತ್ವದ ಆದೇಶ
-
ಬೆಂಗಳೂರು21 ಗಂಟೆಗಳು agoGruha Lakshmi ಯೋಜನೆ: ಫಲಾನುಭವಿಗಳಿಗೆ ಹೊಸ ನಿಯಮ, ಆಗಸ್ಟ್ 30ರಿಂದ ಬಯೋಮೆಟ್ರಿಕ್ ಪರಿಶೀಲನೆ
-
ಬೆಂಗಳೂರು12 ಗಂಟೆಗಳು agoKPSC ಅಕ್ರಮಕ್ಕೆ ಬಿಜೆಪಿ ಸರ್ಕಾರವೇ ಕಾರಣ? ಜ್ಞಾನೇಂದ್ರ ಕುಮಾರ್ ನೇಮಕದ ಬಗ್ಗೆ ಬಿ.ಕೆ. ಹರಿಪ್ರಸಾದ್ ಗಂಭೀರ ಆರೋಪ
-
ಬೆಂಗಳೂರು8 ಗಂಟೆಗಳು agoಕ್ರಿಕೆಟ್ ದಿಗ್ಗಜನಾದರೂ ಇಷ್ಟೊಂದು ಸಿಂಪಲ್! Metro ದಲ್ಲಿ Javagal Srinath
-
ದೇಶ10 ಗಂಟೆಗಳು agoPM Narendra Modi ಮೆಚ್ಚಿದ ಬೆಂಗಳೂರಿನ ನಿಂಗಮ್ಮ ಯಾರು? ₹50 ಸಾವಿರ ಸಾಲ ಪಡೆದು ಕಟ್ಟಿಕೊಂಡ ಸ್ವಾವಲಂಬಿ ಬದುಕಿನ ಕಥೆ
-
ಬೆಂಗಳೂರು14 ಗಂಟೆಗಳು agoKPSC ರದ್ದು ಮಾಡುತ್ತೇನೆ ಎಂದಿದ್ದ ಪ್ರಿಯಾಂಕ್ ಖರ್ಗೆ ಈಗ ಏಕೆ ಸುಮ್ಮನಿದ್ದಾರೆ? ಹೆಚ್ಡಿಕೆ ಕಿಡಿ
-
ರಾಜ್ಯ9 ಗಂಟೆಗಳು agoಬಿಜೆಪಿ ಪಾದಯಾತ್ರೆ ಬಗ್ಗೆ ನನಗೆ ಮಾಹಿತಿಯೇ ಇಲ್ಲ: ಕೇಂದ್ರ ಸಚಿವ V Somanna ಹೇಳಿದ್ದೇನು?
-
ರಾಜ್ಯ16 ಗಂಟೆಗಳು agoಮೈಸೂರಿ ನಲ್ಲಿ Siddaramaiah ಕಾರಿಗೆ ಮುತ್ತಿಗೆ; 165 ಎಕರೆ ಭೂಮಿಗಾಗಿ ರೈತರ ಪ್ರತಿಭಟನೆ
