ರಾಜಕೀಯ
ಮನೆಮನೆಗೂ ಮದ್ಯಭಾಗ್ಯಎಚ್ ಡಿ ಕುಮಾರಸ್ವಾಮಿ ವಾಗ್ದಾಳಿ
ಬೆಂಗಳೂರು: ಕರ್ನಾಟಕ ರಾಜ್ಯವು ವಿಜ್ಞಾನ, ತಂತ್ರಜ್ಞಾನ, ಆವಿಷ್ಕಾರ ಐಟಿ-ಬಿಟಿಗೆ ಪ್ರಸಿದ್ಧಿ. ಇನ್ನು ಮುಂದೆ ಇದು ಬದಲಾಗಬಹುದು. ಕಾರಣವಿಷ್ಟೇ, ಕಾಂಗ್ರೆಸ್ ಸರಕಾರ ‘ಕರ್ನಾಟಕವನ್ನು ಕುಡುಕರ ತೋಟ’ವನ್ನಾಗಿ ಮಾಡಲಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಚುನಾವಣೆಗೆ ಮುನ್ನ ‘ಸರ್ವಜನಾಂಗದ ಶಾಂತಿಯ ತೋಟ’ ಎನ್ನುತ್ತಿದ್ದರು, ಗೆದ್ದ ನಂತರ ‘ಕರ್ನಾಟಕ ಕುಡುಕರ ತೋಟ’ ಎನ್ನುತ್ತಿದ್ದಾರೆ. ಇದು ಕಾಂಗ್ರೆಸ್ ಸರ್ಕಾರದ ಸಂಕಲ್ಪ ಎಂದು ಹೇಳಿದ್ದಾರೆ.
ಯೋಜನೆಗಳ ಹೆಸರಲ್ಲಿ ಕೊಳ್ಳೆ ಹೊಡೆಯುವ ಹುನ್ನಾರ ಕಾಂಗ್ರೆಸ್ ಸರಕಾರದ್ದು. ಒಂದೆಡೆ ಮನೆಮನೆಗೂ ಗೃಹಜ್ಯೋತಿ ಎಂದ್ಹೇಳಿ, ಈಗ ಮನೆಮನೆಗೂ ‘ಮದ್ಯಭಾಗ್ಯ’ ನೀಡಲು ಹೊರಟಿದೆ. ಸರಕಾರವು ಧನಪಿಶಾಚಿ ಅವತಾರವೆತ್ತಿ ಅಬಕಾರಿ ಆದಾಯ ಹೆಚ್ಚಿಸಿಕೊಳ್ಳಲು ಈಗ ಮದ್ಯ ಸಮಾರಾಧನೆಗೆ ಶ್ರೀಕಾರ ಹಾಡಿದೆ. ಇದು 6ನೇ ಗ್ಯಾರಂಟಿ.
ಗ್ಯಾರಂಟಿಗಳಿಂದ ಜನರನ್ನು ಯಾಮಾರಿಸಿದ್ದು ಸಾಲದೆಂಬಂತೆ ಪ್ರತೀ ಪಂಚಾಯಿತಿಯಲ್ಲೂ ಮದ್ಯದ ಅಂಗಡಿ ತೆರೆಯಲು ಸಿದ್ಧತೆ ನಡೆಸಿರುವುದು ನಾಚಿಕೆಗೇಡು. ಅಕ್ಕಿ, ಬೇಳೆ, ದವಸಧಾನ್ಯ, ಹಣ್ಣು ತರಕಾರಿ, ಹಾಲು-ಮೊಸರು ಸಿಗುವ ಸೂಪರ್ ಮಾರುಕಟ್ಟೆಗಳಲ್ಲೂ ಮುಕ್ತವಾಗಿ ಮದ್ಯ ಮಾರಾಟಕ್ಕೆ ಅವಕಾಶ ನೀಡುವುದು ಅಸಹ್ಯದ ಪರಮಾವಧಿ. ಇದಾ ಸಮಾಜವಾದ?
3,000 ಜನಸಂಖ್ಯೆಯುಳ್ಳ ಪ್ರತೀ ಪಂಚಾಯಿತಿ ವ್ಯಾಪ್ತಿಯಲ್ಲಿ ಬಾರ್ ತೆಗೆದು ಮನೆಹಾಳು ಮಾಡಲಿದೆ ಸರಕಾರ. ಸುಳ್ಳು ಗ್ಯಾರಂಟಿಗಳನ್ನು ನಂಬಿ ಮೋಸ ಹೋದ ಮಹಿಳೆಯರಿಗೆ ಕರ್ನಾಟಕದಲ್ಲಿ ಕೇಡುಗಾಲ ಶುರುವಾಗಿದೆ. ಅವರ ಸೌಭಾಗ್ಯಕ್ಕೆ ಎದುರಾಗಿದೆ ಸಂಚಕಾರ. ಇದು ಮನೆಹಾಳು ಸರಕಾರ.
ನಾರಿಯರಿಗೆ ‘ಶಕ್ತಿ’ ತುಂಬುತ್ತೇವೆ ಎಂದ ಸರಕಾರ, ಈಗ ಅವರ ಬಾಳಿಗೆ ಬೆಂಕಿ ಹಾಕುತ್ತಿದೆ. ‘ಗೃಹಲಕ್ಷ್ಮೀ’ ಎಂದ ಸರಕಾರ ಅವರ ಬಾಳಿಗೆ ಗ್ರಹಣವಾಗಿದೆ. ‘ಗೃಹಜ್ಯೋತಿ’ ಎಂದ ಸರಕಾರ ಅವರ ಬಾಳಜ್ಯೋತಿಯನ್ನೇ ನಂದಿಸುತ್ತಿದೆ. ‘ಅನ್ನಭಾಗ್ಯ’ ಎಂದ ಸರಕಾರ, ಈಗ ‘ಮದ್ಯಭಾಗ್ಯ’ ಎನ್ನುತ್ತಿದೆ ಎಂದು ಲೇವಡಿ ಮಾಡಿದ್ದಾರೆ.
ಬೆಂಗಳೂರು
CM D K Shiv Kumar 100 ದಿನಗಳ ಸಂವಾದ: ‘ಗಟ್ಟಿ ತೀರ್ಮಾನ ಮಾಡದಿದ್ದರೆ ನನ್ನನ್ನು ಕಾಲಿ ಡಬ್ಬಿ ಅಂತಾರೆ’!
ಬೆಂಗಳೂರು: CM D K Shiv Kumar ಅವರು ಮುಖ್ಯಮಂತ್ರಿಯಾಗಿ 100 ದಿನಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಸುದ್ದಿಮಾಧ್ಯಮಗಳ ಸಂಪಾದಕರೊಂದಿಗೆ ಸಂವಾದ ನಡೆಸಿ, ತಮ್ಮ ಸರ್ಕಾರದ ನೂರು ದಿನಗಳ ಹೆಜ್ಜೆಗುರುತು, ಮುಂದಿನ ಯೋಜನೆಗಳು ಹಾಗೂ ಎದುರಿಸುತ್ತಿರುವ ಸವಾಲುಗಳ ಕುರಿತು ಮನಬಿಚ್ಚಿ ಮಾತನಾಡಿದ್ದಾರೆ. ಈ ವೇಳೆ ಆರೋಗ್ಯ ಸಹಕರಿಸಿದರೆ ಇನ್ನೂ 15 ವರ್ಷ ರಾಜಕೀಯದಲ್ಲಿ ಸಕ್ರಿಯವಾಗಿರುವ ಇಂಗಿತವನ್ನೂ ವ್ಯಕ್ತಪಡಿಸಿದ್ದಾರೆ.

ಆರ್ಥಿಕ ಪರಿಸ್ಥಿತಿ ಅರಿತೇ ಯೋಜನೆಗಳ ಘೋಷಣೆ
ಕಳೆದ ನೂರು ದಿನಗಳಲ್ಲಿ ಹಲವು ಯೋಜನೆಗಳನ್ನು ಘೋಷಿಸಲಾಗಿದೆ. ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡೇ ಅನುಷ್ಠಾನ ಮಾಡಲು ಸಾಧ್ಯವಿರುವ ಯೋಜನೆಗಳನ್ನು ಮಾತ್ರ ಘೋಷಿಸಲಾಗಿದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ನುಡಿದಂತೆ ನಡೆಯಬೇಕು ಎಂಬ ಅರಿವು ತಮ್ಮಲ್ಲಿದೆ. ಇಲ್ಲವಾದರೆ ಎಲ್ಲರ ಎದುರು ನಗೆಪಾಟಲಿಗೀಡಾಗಬೇಕಾಗುತ್ತದೆ. ಹೀಗಾಗಿ ವಿವಿಧ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಒಸಿ, ಸಿಸಿ ವಿಚಾರದಲ್ಲಿಯೂ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ವಸತಿ ಕಟ್ಟಡಗಳ ಕುರಿತು ತೀರ್ಮಾನ ತೆಗೆದುಕೊಳ್ಳಲಾಗಿದ್ದು, ವಾಣಿಜ್ಯ ಕಟ್ಟಡಗಳ ವಿಚಾರವನ್ನು ಪರಿಗಣಿಸಿದರೆ ಬೇರೆ ರೀತಿಯ ನಿರ್ಧಾರವಾಗುತ್ತದೆ. ಭೂ ಗ್ಯಾರಂಟಿಯನ್ನೂ ನೀಡಲಾಗಿದೆ ಎಂದು ಹೇಳಿದ್ದಾರೆ.
ಹೊರರಾಜ್ಯದವರಿಗೆ ಉಚಿತ ಸೌಲಭ್ಯ ಯಾಕೆ?
ಶಕ್ತಿ ಯೋಜನೆಯಡಿ ಫಲಾನುಭವಿಗಳಿಗೆ ಕಾರ್ಡ್ ನೀಡಲು ತೀರ್ಮಾನಿಸಲಾಗಿದ್ದು, ಕಾರ್ಡ್ ಸ್ಕ್ಯಾನ್ ಮಾಡಿ ಪ್ರಯಾಣಿಸುವ ವ್ಯವಸ್ಥೆ ಜಾರಿಗೆ ಬರಲಿದೆ ಎಂದು ಡಿಕೆಶಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಸುಮಾರು 14 ಲಕ್ಷದಷ್ಟು ಹೊರರಾಜ್ಯದವರು ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ. ಹಾಗಿದ್ದಾಗ ಹೊರರಾಜ್ಯದವರಿಗೆ ಏಕೆ ಉಚಿತ ಅವಕಾಶ ನೀಡಬೇಕು ಎಂಬ ಪ್ರಶ್ನೆ ಇದೆ. ಇದೇ ರೀತಿ ಹೊರರಾಜ್ಯದವರಿಗೆ ಉಚಿತ ವಿದ್ಯುತ್ ನೀಡುವ ವಿಚಾರದಲ್ಲಿಯೂ ಪರಿಷ್ಕರಣೆ ನಡೆಯುತ್ತಿದೆ ಎಂದು ಹೇಳಿದ್ದಾರೆ.
ಸಣ್ಣಪುಟ್ಟ ವಿಚಾರಗಳಲ್ಲಿಯೂ ಗಟ್ಟಿ ತೀರ್ಮಾನಗಳನ್ನು ಕೈಗೊಳ್ಳಲಾಗುತ್ತಿದೆ. ಇಲ್ಲವಾದರೆ ತಮ್ಮನ್ನು ‘ಕಾಲಿ ಡಬ್ಬ’ ಎಂದು ಕರೆಯುತ್ತಾರೆ ಎಂಬ ಅರಿವು ಇದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಟನಲ್ ರಸ್ತೆ ಯಾರಿಗಾಗಿ?
ಬೆಂಗಳೂರಿನ ಸಂಚಾರ ದಟ್ಟಣೆಗೆ ಪರಿಹಾರ ನೀಡಲು ಉದ್ದೇಶಿಸಿರುವ ಟನಲ್ ರಸ್ತೆ ಯೋಜನೆಗೆ ಹಲವು ಅಡೆತಡೆಗಳಿವೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
ಪಾರ್ಕ್‌ನ ಒಂದು ಮೂಲೆಯ ಜಾಗವನ್ನು ಬಳಸಿಕೊಳ್ಳುವುದಕ್ಕೂ ಆಕ್ಷೇಪ ವ್ಯಕ್ತವಾಗುತ್ತಿದೆ. ಸಣ್ಣ ಬಂಡೆಯೊಂದನ್ನು ತೆಗೆಯಬೇಕಾದ ಪರಿಸ್ಥಿತಿಯನ್ನೂ ದೊಡ್ಡ ವಿಚಾರವನ್ನಾಗಿ ಮಾಡಲಾಗುತ್ತಿದೆ. ಬೇರೆ ಕಟ್ಟಡಗಳನ್ನು ಒಡೆಯಲು ಸಾಧ್ಯವಿಲ್ಲ. ಹಾಗಾದರೆ ಈ ಟನಲ್ ರಸ್ತೆ ಯಾರಿಗಾಗಿ ಎಂಬ ಪ್ರಶ್ನೆಯನ್ನು ಡಿಕೆಶಿ ಮುಂದಿಟ್ಟಿದ್ದಾರೆ.
ಮಹಾರಾಷ್ಟ್ರದಲ್ಲಿ ಏಳು ಟನಲ್ ರಸ್ತೆಗಳನ್ನು ನಿರ್ಮಿಸಲು ಮುಂದಾಗಿದ್ದಾರೆ. ಕರ್ನಾಟಕದ ದಾಖಲೆಗಳನ್ನು ತೆಗೆದುಕೊಂಡು ಕೆಲವು ರಾಜ್ಯಗಳಲ್ಲಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಟನಲ್ ರಸ್ತೆಯನ್ನು ನಿರ್ಮಿಸಲು ಸರ್ಕಾರ ಸುಮಾರು ₹4,000 ಕೋಟಿ ಮಾತ್ರ ನೀಡಲಿದೆ. ಉಳಿದ ಹಣವನ್ನು ಖಾಸಗಿ ಸಂಸ್ಥೆಗಳು ಹೂಡಿಕೆ ಮಾಡಿ, 25ರಿಂದ 30 ವರ್ಷಗಳ ಕಾಲ ನಿರ್ವಹಣೆ ಮಾಡುವ ರೀತಿಯಲ್ಲಿ ಬಿಲ್ಡ್-ಆಪರೇಟ್-ಟ್ರಾನ್ಸ್‌ಫರ್ ಮಾದರಿಯಲ್ಲಿ ಯೋಜನೆ ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.
ಹಣ ಪಾವತಿಸಲು ಸಿದ್ಧರಿರುವವರು ಟನಲ್ ರಸ್ತೆಯಲ್ಲಿ ಸಂಚರಿಸಿ ಸಮಯ ಉಳಿಸಿಕೊಳ್ಳಬಹುದು. ಹಣ ನೀಡಲು ಸಾಧ್ಯವಾಗದವರು ಮೇಲಿನ ಸಾಮಾನ್ಯ ರಸ್ತೆಯಲ್ಲಿ ಸಂಚರಿಸಬಹುದು. ಟನಲ್ ರಸ್ತೆಯಿಂದ ಕನಿಷ್ಠ ಒಂದು ಗಂಟೆ ಸಮಯ ಉಳಿಯಬಹುದು ಎಂದು ಡಿಕೆಶಿ ಹೇಳಿದ್ದಾರೆ.
ನಿದ್ದೆಗೆ ಕಡಿಮೆ ಸಮಯ: ‘ರಾಜಕೀಯವೇ ನನ್ನ ದೊಡ್ಡ ಅಭ್ಯಾಸ’
ತಮ್ಮ ನಿದ್ದೆಯ ಅವಧಿ ಕಳೆದ ಐದಾರು ವರ್ಷಗಳಿಂದ ಬಹಳ ಕಡಿಮೆಯಾಗಿದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಎರಡು ದಿನಗಳ ಹಿಂದೆ ರಾತ್ರಿ 2 ಗಂಟೆಗೆ ಮಲಗಿ, ಬೆಳಗ್ಗೆ 5.15ಕ್ಕೆ ಎದ್ದು ಎಪಿಎಂಸಿ ಭೇಟಿ ನೀಡಿದ್ದೆ. ಬೆಳಗ್ಗೆ 9.45ರ ವೇಳೆಗೆ ವಾಪಸ್ ಬಂದಿದ್ದೆ. ಮೊದಲ ಬಾರಿಗೆ ಮಧ್ಯಾಹ್ನ ದೈಹಿಕವಾಗಿ ವ್ಯತ್ಯಾಸ ಕಂಡುಬಂತು ಎಂದು ತಿಳಿಸಿದ್ದಾರೆ.
ಪಕ್ಷದ ಅಧ್ಯಕ್ಷನಾಗಿ ಜವಾಬ್ದಾರಿ ವಹಿಸಿಕೊಂಡ ಬಳಿಕ ಕನಿಷ್ಠ ಐದಾರು ಗಂಟೆಗಳ ವಿಶ್ರಾಂತಿಯೂ ಸಿಗುತ್ತಿಲ್ಲ. ಗುರಿ ಮುಟ್ಟಬೇಕು ಎಂಬ ಪ್ರಯತ್ನದಿಂದ ಪ್ರತಿದಿನ ರಾತ್ರಿ 2 ಗಂಟೆಯವರೆಗೂ ಯಾರಾದರೂ ಭೇಟಿಯಾಗುತ್ತಿರುತ್ತಾರೆ. ಹಲವು ತೀರ್ಮಾನಗಳನ್ನು ಕೈಗೊಳ್ಳಬೇಕಾಗುತ್ತದೆ ಎಂದು ಹೇಳಿದ್ದಾರೆ.
ತಮ್ಮ ಕುಟುಂಬ ಸಂಪೂರ್ಣ ಸಹಕಾರ ನೀಡುತ್ತಿದೆ. ಅದೇ ತಮ್ಮ ದೊಡ್ಡ ಶಕ್ತಿ. ಬೇರೆ ಯಾವುದೇ ಅಭ್ಯಾಸವಿಲ್ಲ, ರಾಜಕೀಯವೇ ತಮ್ಮ ದೊಡ್ಡ ಅಭ್ಯಾಸ ಎಂದು ಡಿಕೆಶಿ ಹೇಳಿದ್ದಾರೆ.
ಸರ್ಕಾರದ ಮುಂದೆ ಹಲವು ಸವಾಲುಗಳು
ತಮ್ಮ ಸರ್ಕಾರದ ಕಾಲಾವಧಿ ಕಡಿಮೆ ಇದೆ ಎಂಬ ಅರಿವಿದೆ. ಆದರೆ ಇದು ಡಿಕ್ಟೇಟರ್‌ಶಿಪ್ ಸರ್ಕಾರವಲ್ಲ, ಪ್ರಜಾಪ್ರಭುತ್ವದ ಸರ್ಕಾರ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಕಾರ್ಯಾಂಗ, ನ್ಯಾಯಾಂಗ ಹಾಗೂ ಮಾಧ್ಯಮ ಸೇರಿದಂತೆ ಹಲವು ಹಂತಗಳಲ್ಲಿ ಸರ್ಕಾರದ ಪ್ರತಿಯೊಂದು ತೀರ್ಮಾನವೂ ಪ್ರಶ್ನೆಗೆ ಒಳಗಾಗುತ್ತದೆ. ಅಧಿಕಾರಿಗಳು ಕೂಡ ಎಲ್ಲ ನಿರ್ಧಾರಗಳನ್ನು ಸುಲಭವಾಗಿ ಒಪ್ಪಿಕೊಳ್ಳುವುದಿಲ್ಲ. ಯಾರೂ ಅಪಾಯ ತೆಗೆದುಕೊಳ್ಳಲು ಸಿದ್ಧರಿರುವುದಿಲ್ಲ ಎಂದು ತಿಳಿಸಿದ್ದಾರೆ.
ರಾಜಕೀಯದಲ್ಲಿ ಮೇಲೇರಲು ಪ್ರಯತ್ನಿಸುವವರ ಕಾಲೆಳೆಯುವುದು ಸಹಜ. ನ್ಯಾಯಾಲಯಕ್ಕೆ ಯಾರಾದರೂ ಹೋಗಿ ತಡೆಯಾಜ್ಞೆ ತಂದರೂ ಯೋಜನೆಗಳು ಸ್ಥಗಿತಗೊಳ್ಳುವ ಪರಿಸ್ಥಿತಿ ಇದೆ. ಶಿವರಾಮ ಕಾರಂತ ಬಡಾವಣೆ ವಿಚಾರವೇ ಇದಕ್ಕೆ ಉದಾಹರಣೆ. ಈ ಎಲ್ಲ ಕಾರಣಗಳಿಂದ ಸಾಕಷ್ಟು ಸವಾಲುಗಳಿವೆ ಎಂದು ಡಿಕೆಶಿ ಹೇಳಿದ್ದಾರೆ.
ಪ್ರಧಾನಿ ಮೋದಿ ಜತೆಗಿನ ಮಾತುಕತೆ ಬಹಿರಂಗಪಡಿಸುವುದಿಲ್ಲ
ಮೈಸೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮನ್ನು ಕರೆದು ಮಾತನಾಡಿದ್ದರು. ಅದು ಅವರ ಹೃದಯಶ್ರೀಮಂತಿಕೆ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಜನರು, ದೇಶ ಹಾಗೂ ಸ್ವಾಮಿ ವಿವೇಕಾನಂದರ ಬಗ್ಗೆ ಚರ್ಚೆ ನಡೆಸಿದ್ದೇವೆ. ಪ್ರಧಾನಿ ಮತ್ತು ಮುಖ್ಯಮಂತ್ರಿ ನಡುವೆ ನಡೆದ ಮಾತುಕತೆಯ ವಿವರಗಳನ್ನು ಬಹಿರಂಗಪಡಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಅದಾನಿ ಭೇಟಿ ಬಗ್ಗೆ ರಾಹುಲ್ ಗಾಂಧಿ ಕೇಳಿಲ್ಲ
ಉದ್ಯಮಿ ಗೌತಮ್ ಅದಾನಿ ಬಹಳ ದಿನಗಳಿಂದ ಪರಿಚಯವಿರುವವರು. ವಿದ್ಯುತ್, ಸಿಮೆಂಟ್ ಸೇರಿದಂತೆ ವಿವಿಧ ಯೋಜನೆಗಳಲ್ಲಿ ಅವರು ತೊಡಗಿಸಿಕೊಂಡಿದ್ದಾರೆ ಎಂದು ಡಿಕೆಶಿ ಹೇಳಿದ್ದಾರೆ.
ಒಬ್ಬ ಉದ್ಯಮಿಯಾಗಿ ಅದಾನಿ ರಾಜ್ಯದ ಮುಖ್ಯಮಂತ್ರಿಯನ್ನು ಭೇಟಿ ಮಾಡಲು ಬಂದಾಗ ಬೇಡ ಎಂದು ಹೇಳಲು ಸಾಧ್ಯವಿಲ್ಲ. ರಾಹುಲ್ ಗಾಂಧಿಯವರು ಅದಾನಿ ಜತೆಗಿನ ತಮ್ಮ ಭೇಟಿಯ ಬಗ್ಗೆ ಯಾವುದೇ ಪ್ರಶ್ನೆ ಕೇಳಿಲ್ಲ ಎಂದು ತಿಳಿಸಿದ್ದಾರೆ.
‘ಜನರನ್ನು ಗೊಂದಲಕ್ಕೆ ಸಿಲುಕಿಸುವುದಿಲ್ಲ’
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಯಶಸ್ವಿಯಾಗಿ ನಡೆದಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಹಲವು ರಾಜ್ಯಗಳಲ್ಲಿ ಯೋಜನೆಗಳನ್ನು ಘೋಷಿಸಿದರೂ ಮುಂದುವರಿಸಲು ಸಾಧ್ಯವಾಗದೆ ನಿಲ್ಲಿಸಲಾಗಿದೆ. ಆದರೆ ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳ ಜತೆಗೆ ಅಭಿವೃದ್ಧಿಯನ್ನೂ ಮುಂದುವರಿಸಲಾಗಿದೆ ಎಂದು ತಿಳಿಸಿದ್ದಾರೆ.
‘ವಿ ವಿಲ್ ಕನ್ವಿನ್ಸ್ಡ್ ದಿ ಪೀಪಲ್, ವಿ ವಿಲ್ ನಾಟ್ ಕನ್ಫ್ಯೂಸ್ಡ್ ದಿ ಪೀಪಲ್’ ಎಂದು ಹೇಳಿರುವ ಡಿಕೆಶಿ, ಜನರಲ್ಲಿ ಸರ್ಕಾರದ ಬಗ್ಗೆ ವಿಶ್ವಾಸ ಮೂಡಿದೆ ಎಂದು ಹೇಳಿದ್ದಾರೆ.
‘ಜನರ ಬಗ್ಗೆ ಕಾಳಜಿಯಷ್ಟೇ’
ಪಾರ್ಕ್ ಜಾಗ ಬಳಕೆ ಸೇರಿದಂತೆ ಯಾವುದೇ ವಿಚಾರದಲ್ಲಿಯೂ ಸರ್ಕಾರ ಯುಟರ್ನ್ ಹೊಡೆದಿಲ್ಲ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ನಾಡಿನ ಜನರ ಕುರಿತು ಕಾಳಜಿ ಮತ್ತು ಗೌರವ ಮಾತ್ರ ಸರ್ಕಾರದ ಉದ್ದೇಶ. ಜನರ ಭಾವನೆಗಳಿಗೆ ಗೌರವ ನೀಡಬೇಕು ಮತ್ತು ಅದನ್ನು ನೀಡಿದ್ದೇವೆ ಎಂದು ತಿಳಿಸಿದ್ದಾರೆ.
ಬೆಂಗಳೂರಿನ ಕಸ: ‘ದೊಡ್ಡ ಮಾಫಿಯಾ’
ಬೆಂಗಳೂರು ಕಸ ನಿರ್ವಹಣೆ ವಿಚಾರವೂ ಸರ್ಕಾರದ ಮುಂದಿರುವ ಪ್ರಮುಖ ಸವಾಲುಗಳಲ್ಲಿ ಒಂದಾಗಿದೆ ಎಂದು ಡಿಕೆಶಿ ಹೇಳಿದ್ದಾರೆ.
ಕಳೆದ 15 ವರ್ಷಗಳಿಂದ ಬೆಂಗಳೂರಿನ ಕಸದ ಟೆಂಡರ್ ಅಂತಿಮಗೊಳಿಸಲು ಸಾಧ್ಯವಾಗಿರಲಿಲ್ಲ. ಕಾಂಗ್ರೆಸ್, ಬಿಜೆಪಿ ಅಥವಾ ಜೆಡಿಎಸ್ ಸರ್ಕಾರವಿದ್ದರೂ ಈ ಸಮಸ್ಯೆಗೆ ಸಂಪೂರ್ಣ ಪರಿಹಾರ ಸಿಕ್ಕಿರಲಿಲ್ಲ. ಇದು ದೊಡ್ಡ ಮಾಫಿಯಾ ಆಗಿದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಈಗ ಕಸ ನಿರ್ವಹಣೆಗೆ ಪ್ಯಾಕೇಜ್‌ಗಳನ್ನು ರೂಪಿಸಿ ಟೆಂಡರ್ ನೀಡಲಾಗಿದೆ. ನ್ಯಾಯಾಲಯದ ಮಧ್ಯಪ್ರವೇಶ ಸೇರಿದಂತೆ ಹಲವು ವಿಚಾರಗಳು ಇದರಲ್ಲಿವೆ. ಈ ಸಮಸ್ಯೆಯನ್ನು ಒಂದು ಹಂತಕ್ಕೆ ತರುವ ಪ್ರಯತ್ನ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯ
ED ಕಾರ್ಯಾಚರಣೆಗೆ ರಾಜಕೀಯ ಬಣ್ಣ ಬೇಡ; ಸಿದ್ದರಾಮಯ್ಯ ವಿರುದ್ಧ ಪ್ರತಾಪ್ ಸಿಂಹ ಮಾಡಿದ್ದ ಟೀಕೆ ಏನು?
ಮೈಸೂರು: ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲಿನ ಜಾರಿ ನಿರ್ದೇಶನಾಲಯದ (ED) ಪರಿಶೀಲನೆಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಯಾವುದೇ ಸಂಬಂಧವಿಲ್ಲ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಈ ಆರೋಪಗಳು ಕೇವಲ ರಾಜಕೀಯ ತಂತ್ರ ಎಂದು ಅವರು ಟೀಕಿಸಿದ್ದಾರೆ.

ಇಡಿ ಸೇರಿದಂತೆ ಪ್ರತಿಯೊಂದು ತನಿಖಾ ಸಂಸ್ಥೆಯ ಕ್ರಮಕ್ಕೂ ರಾಜಕೀಯ ಬಣ್ಣ ಬಳಿಯುವುದು ಸರಿಯಲ್ಲ ಎಂದು ಪ್ರತಾಪ್ ಸಿಂಹ ಅಭಿಪ್ರಾಯಪಟ್ಟಿದ್ದಾರೆ.
‘ತನಿಖಾ ಸಂಸ್ಥೆಗಳ ಕಾರ್ಯಕ್ಕೆ ರಾಜಕೀಯ ಬಣ್ಣ ಬೇಡ’
ತನಿಖಾ ಸಂಸ್ಥೆಗಳ ಪರಿಶೀಲನೆ ಕೇವಲ ಒಂದು ಪಕ್ಷಕ್ಕೆ ಸೀಮಿತವಾಗಿಲ್ಲ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ. ಇತ್ತೀಚಿನ ದಿನಗಳಲ್ಲಿ ಬಿಜೆಪಿ ಮುಖಂಡರು ಹಾಗೂ ಚಿತ್ರರಂಗದ ಪ್ರಮುಖರ ನಿವಾಸಗಳ ಮೇಲೆಯೂ ಇಡಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ ಎಂದು ಅವರು ಉಲ್ಲೇಖಿಸಿದ್ದಾರೆ.
ಹೀಗಾಗಿ ಕೇಂದ್ರ ತನಿಖಾ ಸಂಸ್ಥೆಗಳ ಕಾರ್ಯವೈಖರಿಯನ್ನು ಉದ್ದೇಶಪೂರ್ವಕವಾಗಿ ರಾಜಕೀಯಕ್ಕೆ ಎಳೆದು ತರುವುದು ಸೂಕ್ತವಲ್ಲ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.
ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲಿನ ಇಡಿ ಪರಿಶೀಲನೆಗೂ ಸಿದ್ದರಾಮಯ್ಯ ಅವರಿಗೂ ಯಾವುದೇ ಸಂಬಂಧವಿಲ್ಲ. ಈ ವಿಚಾರದಲ್ಲಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ಮಾಡಲಾಗುತ್ತಿರುವ ಆರೋಪಗಳು ರಾಜಕೀಯ ತಂತ್ರ ಎಂದು ಅವರು ಹೇಳಿದ್ದಾರೆ.
ಸಿದ್ದರಾಮಯ್ಯ ವಿರುದ್ಧ ಪ್ರತಾಪ್ ಸಿಂಹ ಟೀಕೆ
ಇದೇ ವೇಳೆ ಸಿದ್ದರಾಮಯ್ಯ ಅವರ ರಾಜಕೀಯ ಪ್ರಭಾವದ ಕುರಿತು ಮಾತನಾಡಿದ ಪ್ರತಾಪ್ ಸಿಂಹ, ಮಾಜಿ ಮುಖ್ಯಮಂತ್ರಿ ತಮ್ಮ ಪ್ರಭಾವವನ್ನು ಬಳಸಿರುವುದು ಕೇವಲ ಮಾಜಿ ಸಚಿವ ಮಹದೇವಪ್ಪ ಅವರ ನಿವಾಸ ಖಾಲಿ ಮಾಡಿಸಿದ ಪ್ರಕರಣದಲ್ಲಿ ಮಾತ್ರ ಎಂದು ಟೀಕಿಸಿದ್ದಾರೆ.
ಈ ಹೇಳಿಕೆಯ ಮೂಲಕ ಸಿದ್ದರಾಮಯ್ಯ ಅವರ ರಾಜಕೀಯ ಪ್ರಭಾವದ ಬಗ್ಗೆ ಪ್ರತಾಪ್ ಸಿಂಹ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದು, ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಕಾರಣವಾಗಿದೆ.
ದೇಶ
‘School Thik Karo’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ; CJPಗೆ ಕೇಜ್ರಿವಾಲ್ ಧನ್ಯವಾದ, ಮುಂದೇನು?
ನವದೆಹಲಿ: ಪಂಜಾಬ್‌ನ ಸರ್ಕಾರಿ ಶಾಲೆಗಳಲ್ಲಿ ಕಂಡುಬಂದಿರುವ ವಿವಿಧ ಕೊರತೆಗಳು ಹಾಗೂ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದಿರುವ ಸಿಟಿಜನ್ಸ್ ಫಾರ್ ಜಸ್ಟಿಸ್ ಅಂಡ್ ಪೀಸ್ (CJP) ಸಂಸ್ಥೆಗೆ ಆಮ್ ಆದ್ಮಿ ಪಾರ್ಟಿಯ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಧನ್ಯವಾದ ತಿಳಿಸಿದ್ದಾರೆ. ಶಾಲೆಗಳಲ್ಲಿ ಕಂಡುಬಂದಿರುವ ಸಮಸ್ಯೆಗಳ ಕುರಿತು ಪಂಜಾಬ್ ಸರ್ಕಾರದೊಂದಿಗೆ ಚರ್ಚಿಸಿ, ಅವುಗಳನ್ನು ಶೀಘ್ರದಲ್ಲೇ ಪರಿಹರಿಸುವುದಾಗಿ ಅವರು ಭರವಸೆ ನೀಡಿದ್ದಾರೆ.

‘ಸ್ಕೂಲ್ ಠೀಕ್ ಕರೋ’ ಅಭಿಯಾನದಡಿ ಶಾಲೆಗಳ ಪರಿಶೀಲನೆ
CJP ಸಂಸ್ಥೆಯ ಸೌರವ್ ದಾಸ್ ನೇತೃತ್ವದ ನಿಯೋಗವು ಪಂಜಾಬ್‌ನಲ್ಲಿ ‘ಸ್ಕೂಲ್ ಠೀಕ್ ಕರೋ’ ಅಭಿಯಾನದ ಭಾಗವಾಗಿ ವಿವಿಧ ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
ವಿಶೇಷವಾಗಿ ಲುಧಿಯಾನದಲ್ಲಿರುವ ಸರ್ಕಾರಿ ಶಾಲೆಗಳನ್ನು ಪರಿಶೀಲಿಸಿದ ತಂಡವು ಶಾಲೆಗಳ ಮೂಲಸೌಕರ್ಯ, ಶೈಕ್ಷಣಿಕ ವ್ಯವಸ್ಥೆ ಸೇರಿದಂತೆ ಹಲವು ಪ್ರಮುಖ ಅಂಶಗಳನ್ನು ಪರಿಶೀಲಿಸಿ ಸಮಗ್ರ ವರದಿಯನ್ನು ಸಿದ್ಧಪಡಿಸಿದೆ.
‘ಸ್ಕೂಲ್ ಆಫ್ ಎಮಿನೆನ್ಸ್’ ಕುರಿತು ಏನಿದೆ ವರದಿ?
ಪಂಜಾಬ್‌ನ ‘ಸ್ಕೂಲ್ ಆಫ್ ಎಮಿನೆನ್ಸ್’ ಶಾಲೆಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಸೌರವ್ ದಾಸ್ ತಿಳಿಸಿದ್ದಾರೆ. ಪರಿಶೀಲನೆ ನಡೆಸಿದ 20 ಪ್ರಮುಖ ಅಂಶಗಳ ಪೈಕಿ ಹೆಚ್ಚಿನವು ಧನಾತ್ಮಕವಾಗಿವೆ ಎಂಬ ಮಾಹಿತಿಯನ್ನು ಅವರು ನೀಡಿದ್ದಾರೆ.
ಆದರೆ, ಕೆಲವು ಶಾಲೆಗಳಲ್ಲಿ ಇನ್ನೂ ಮೂಲಭೂತ ಸಮಸ್ಯೆಗಳು ಹಾಗೂ ಕೊರತೆಗಳು ಮುಂದುವರಿದಿರುವುದು ಪರಿಶೀಲನೆಯ ವೇಳೆ ಕಂಡುಬಂದಿದೆ. ಈ ಸಮಸ್ಯೆಗಳನ್ನು ಸಿಜೆಪಿ ನಿಯೋಗವು ಪಂಜಾಬ್ ಶಿಕ್ಷಣ ಸಚಿವ ಹರ್ಜೋತ್ ಸಿಂಗ್ ಬೈನ್ಸ್ ಅವರ ಗಮನಕ್ಕೆ ತಂದಿದೆ.
ಶಿಕ್ಷಣ ಸಚಿವರಿಂದ ತಕ್ಷಣದ ಕ್ರಮದ ಭರವಸೆ
CJP ನಿಯೋಗವು ಮುಂದಿಟ್ಟಿರುವ ಶಾಲೆಗಳ ಸಮಸ್ಯೆಗಳ ಕುರಿತು ಶಿಕ್ಷಣ ಸಚಿವರು ಸ್ಪಂದಿಸಿದ್ದಾರೆ. ಈ ಸಂಬಂಧ ತಕ್ಷಣ ಸಭೆ ನಡೆಸಿ, ಶಾಲೆಗಳಲ್ಲಿ ಕಂಡುಬಂದಿರುವ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸುವುದಾಗಿ ಭರವಸೆ ನೀಡಿದ್ದಾರೆ.
ಇದರಿಂದ ಪರಿಶೀಲನಾ ವರದಿಯ ಆಧಾರದ ಮೇಲೆ ಶಾಲೆಗಳಲ್ಲಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿರೀಕ್ಷೆ ಮೂಡಿದೆ.
CJPಗೆ ಕೇಜ್ರಿವಾಲ್ ಧನ್ಯವಾದ
ಈ ಬೆಳವಣಿಗೆಯ ಕುರಿತು ಅರವಿಂದ್ ಕೇಜ್ರಿವಾಲ್ ಎಕ್ಸ್ ಜಾಲತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ. ಸಾರ್ವಜನಿಕ ಹಿತಾಸಕ್ತಿಯಿಂದ ಸರ್ಕಾರಿ ಶಾಲೆಗಳ ವಾಸ್ತವ ಸ್ಥಿತಿಯನ್ನು ಪರಿಶೀಲಿಸಿ ವರದಿ ನೀಡಿದ CJP ಮತ್ತು ಸೌರವ್ ದಾಸ್ ಅವರಿಗೆ ಅವರು ಧನ್ಯವಾದ ತಿಳಿಸಿದ್ದಾರೆ.
ಶಾಲೆಗಳಲ್ಲಿ ಗುರುತಿಸಲಾಗಿರುವ ಸಮಸ್ಯೆಗಳ ಕುರಿತು ಪಂಜಾಬ್ ಸರ್ಕಾರದೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸಿ, ಅವುಗಳಿಗೆ ಶೀಘ್ರ ಪರಿಹಾರ ಕಂಡುಕೊಳ್ಳುವುದಾಗಿ ಕೇಜ್ರಿವಾಲ್ ಹೇಳಿದ್ದಾರೆ.
ಶಾಲೆಗಳ ಸಮಸ್ಯೆಗಳಿಗೆ ಪರಿಹಾರ ಸಿಗುತ್ತಾ?
CJP ನಡೆಸಿದ ಪರಿಶೀಲನೆಯಿಂದ ಪಂಜಾಬ್‌ನ ಸರ್ಕಾರಿ ಶಾಲೆಗಳಲ್ಲಿನ ಕೆಲವು ಸಮಸ್ಯೆಗಳು ಸರ್ಕಾರದ ಗಮನಕ್ಕೆ ಬಂದಿವೆ. ‘ಸ್ಕೂಲ್ ಆಫ್ ಎಮಿನೆನ್ಸ್’ ಶಾಲೆಗಳಲ್ಲಿ ಹೆಚ್ಚಿನ ಅಂಶಗಳು ಉತ್ತಮವಾಗಿದ್ದರೂ, ಉಳಿದಿರುವ ಸಮಸ್ಯೆಗಳನ್ನು ಪರಿಹರಿಸುವುದಾಗಿ ಸರ್ಕಾರ ಭರವಸೆ ನೀಡಿದೆ.
ಹೀಗಾಗಿ ಶಿಕ್ಷಣ ಸಚಿವರ ಮುಂದಿನ ಸಭೆ ಹಾಗೂ ಸರ್ಕಾರದ ಕ್ರಮಗಳತ್ತ ಇದೀಗ ಗಮನ ನೆಟ್ಟಿದೆ.
-
ಬೆಂಗಳೂರು5 ಗಂಟೆಗಳು agoAPMC ಯಲ್ಲಿ ಬಾಲಕಾರ್ಮಿಕ ಸಿಕ್ಕಿದ್ದೇ ತಡ; ಬೆಂಗಳೂರಿನಾದ್ಯಂತ ಪೊಲೀಸರ ಸ್ಪೆಷಲ್ ಡ್ರೈವ್, 17 ಮಕ್ಕಳು ರಕ್ಷಣೆ
-
ರಾಜ್ಯ9 ಗಂಟೆಗಳು agoBIG NEWS Gram Panchayati ಚುನಾವಣೆ: ರಾಜ್ಯ ಸರ್ಕಾರದಿಂದ ಮಹತ್ವದ ಘೋಷಣೆ; ಚುನಾವಣೆ ಯಾವಾಗ?
-
ಬೆಂಗಳೂರು6 ಗಂಟೆಗಳು agoBengaluru ಟ್ರಾಫಿಕ್ಗೆ ಬಿಗ್ ರಿಲೀಫ್! ₹16,980 ಕೋಟಿ ಯೋಜನೆಗೆ ಗ್ರೀನ್ ಸಿಗ್ನಲ್; ಸುರಂಗ ರಸ್ತೆ ನಿರ್ಮಾಣಕ್ಕೆ ಚಾಲನೆ
-
ಬೆಂಗಳೂರು5 ಗಂಟೆಗಳು agoತಾಯಂದಿರ ಕನಸುಗಳಿಗೆ ಮತ್ತೆ ರೆಕ್ಕೆ; ಜೀ ಕನ್ನಡದಲ್ಲಿ ‘Dance Karnataka Dance – ಸೂಪರ್ ಮಾಮ್’!
-
ದೇಶ3 ಗಂಟೆಗಳು agoBRICS ಘೋಷಣೆಯಲ್ಲಿ ಡಾಲರ್ಗೆ ದೊಡ್ಡ ಸವಾಲು? ಸ್ಥಳೀಯ ಕರೆನ್ಸಿ ವಹಿವಾಟಿಗೆ ಮಹತ್ವದ ನಿರ್ಧಾರ
-
ದೇಶ8 ಗಂಟೆಗಳು agoNational News BRICS Summit 2026: ದೆಹಲಿಯ ಭಾರತ್ ಮಂಟಪಂ ಹೇಗಿದೆ? ಜಾಗತಿಕ ನಾಯಕರ ಸ್ವಾಗತಕ್ಕೆ ಅದ್ಧೂರಿ ಸಿದ್ಧತೆ!
-
ದೇಶ4 ಗಂಟೆಗಳು agoBRICS ಶೃಂಗಸಭೆಯಲ್ಲಿ PM MODI ಮಾಸ್ಟರ್ ಪ್ಲ್ಯಾನ್; ವಿಶ್ವ ಆಡಳಿತ ಬದಲಿಸಲು 10 ಅಂಶಗಳ ರೋಡ್ಮ್ಯಾಪ್!
-
ದೇಶ6 ಗಂಟೆಗಳು agoIRCTC ದಾಖಲೆ: ಒಂದೇ ದಿನ 20 ಲಕ್ಷಕ್ಕೂ ಹೆಚ್ಚು ರೈಲು ಟಿಕೆಟ್ ಬುಕಿಂಗ್; ಹೊಸ ದಾಖಲೆ ಸೃಷ್ಟಿ!
