ದೇಶ
ಪ್ರಧಾನ ಮಂತ್ರಿ ಮೋದಿ ಖರೀದಿಸಿದ ಮಣ್ಣಿನ ಹಣತೆಗಳು ಈಗ ರಾಜ್ಯಾದ್ಯಾಂತ ಪ್ರಸಿದ್ಧ
ಶಿವಮೊಗ್ಗ: ದೀಪಾವಳಿಯ ಹಬ್ಬದ ವೇಳೆ ಮನೆಗಳ ಒಳಹೊರಗೆ ದೀಪ ತೋರಣ ಮತ್ತು ಮಣ್ಣಿನ ಹಣತೆಗಳಿಂದ ಮನೆಗಳನ್ನು ಅಲಂಕರಿಸಲಾಗುತ್ತದೆ. ಆದರೆ ಕಾಲ ಬದಲಾದಂತೆ ಜನರ ಅಭಿರುಚಿ ಸಹ ಬದಲಾಗಿದೆ. ಈ ಸಂದರ್ಭ, ಹಾರನಹಳ್ಳಿ ಗ್ರಾಮದಲ್ಲಿ ವಾಸವಾಗಿರುವ ಶಿವರಾಜ್ ಹಾಗೂ ಜ್ಯೋತಿ ದಂಪತಿಯವರು ಮಣ್ಣಿನ ದೀಪಗಳಿಗೆ ಆಧುನಿಕ ಸ್ಪರ್ಶ ನೀಡಿ ಯಶಸ್ವಿಯಾಗಿ ಮಾರಾಟ ಮಾಡುತ್ತಿದ್ದಾರೆ.
ರಾಜ್ಯಾದ್ಯಾಂತ ಬೇಡಿಕೆಯು ಹೆಚ್ಚಿದ್ದು, ಅಷ್ಟ ಲಕ್ಷ್ಮೀ ದೀಪ, ಕಂಬದ ದೀಪ, ತುಳಸಿ ದೀಪ ಹಾಗೂ ‘ಮ್ಯಾಜಿಕ್ ದೀಪ’ ಸೇರಿದಂತೆ ವಿಭಿನ್ನ ರೀತಿಯ ಮಣ್ಣಿನ ದೀಪಗಳಿಗೆ ಬೇಡಿಕೆ ಇದೆ. ಮ್ಯಾಜಿಕ್ ದೀಪ ವಿಶಿಷ್ಟವಾಗಿದೆ; ಎಣ್ಣೆ ಕಡಿಮೆ ಬಳಸಿ ಕೆಳಭಾಗದಿಂದ ಎಣ್ಣೆ ಹಾಕುವ ವಿಧಾನದಿಂದ ದೀಪ ದೀರ್ಘ ಕಾಲ ಉರಿಯುತ್ತದೆ.
ಜಿಪಂ ಸಿಇಓ ಹೇಮಂತ ಕುಮಾರ್ ಅವರು ತಮ್ಮ ಸ್ವ ಸಹಾಯ ಸಂಘದ ಮೂಲಕ ದೀಪಗಳ ಮಾರಾಟಕ್ಕೆ ವಿಶೇಷ ಮಾರುಕಟ್ಟೆ ಒದಗಿಸಿದ್ದಾರೆ. 2023 ರಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ ವೇಳೆ ಇವರ ಮಣ್ಣಿನ ಹಣತೆ ಖರೀದಿಸಿದ್ದು ಗಮನಾರ್ಹವಾಗಿದೆ.
ಧರ್ಮಸ್ಥಳ ಸಂಘದಿಂದ ಜ್ಯೋತಿ ಅವರಿಗೆ ಮಹಿಳಾ ಸಾಧಕಿ ಪ್ರಶಸ್ತಿ ನೀಡಲಾಗಿದೆ. ಜ್ಯೋತಿ ಅವರು ಹೇಳಿದ್ದು, “ನಾನು ನನ್ನ ಪತಿ ಮನೆಯಲ್ಲಿ ಗುಡಿ ಕೈಗಾರಿಕೆ ಆರಂಭಿಸಿ 18 ವರ್ಷಗಳಿಂದ ಕೆಲಸ ಮಾಡುತ್ತಿದ್ದೇವೆ. ಮ್ಯಾಜಿಕ್ ಲ್ಯಾಂಪ್, ಅಷ್ಟ ಲಕ್ಷ್ಮೀ ದೀಪ, ಗಣೇಶ ದೀಪ, ಹಂಸದೀಪ, ಪಿಲ್ಲರ್ ದೀಪಗಳನ್ನು ಕೈಯಲ್ಲಿ ತಯಾರಿಸುತ್ತೇವೆ. ಸ್ವದೇಶಿ ವಸ್ತು ಬಳಸಿ, ಓಕಲ್ ಫಾರ್ ಲೋಕಲ್ ಪ್ರೋತ್ಸಾಹ ಪಡೆಯುತ್ತಿದ್ದೇವೆ.”
ಶಿವರಾಜ್ ಹೇಳುತ್ತಾರೆ, “ಸಾಂಪ್ರದಾಯಿಕ ಕಲೆಯನ್ನು ಆಧುನಿಕತೆಗೆ ತರುವ ಉದ್ದೇಶದಿಂದ ಮಣ್ಣು ಕಲೆ ಮಾಡುತ್ತೇವೆ. ದೀಪಾವಳಿಯಲ್ಲಿ ನಮ್ಮ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಾಗುತ್ತದೆ. ನಂತರ, ಅಡುಗೆ ಪಾತ್ರೆ, ಹೋಂ ಡೆಕೋರ್ ವಸ್ತುಗಳನ್ನು ತಯಾರಿಸುತ್ತೇವೆ. ನಮ್ಮ ವಸ್ತುಗಳಿಗೆ ಉತ್ತರ ಕರ್ನಾಟಕ ಮತ್ತು ಕರಾವಳಿ ಸೇರಿದಂತೆ ಬೇಡಿಕೆ ಇದೆ.”
ಇವರ ದೀಪಗಳು ಪ್ರತಿವರ್ಷ ವಿವಿಧ ವಸ್ತು ಪ್ರದರ್ಶನಗಳಲ್ಲಿ ಪ್ರಸಿದ್ಧವಾಗುತ್ತಿದ್ದು, ಗ್ರಾಹಕರು ಕಡಿಮೆ ಬೆಲೆಗೆ ಉತ್ತಮ ಗುಣಮಟ್ಟದ ವಸ್ತು ಪಡೆಯುತ್ತಾರೆ ಎಂದು ತೀರ ಸಂತೋಷ ವ್ಯಕ್ತಪಡಿಸಿದ್ದಾರೆ.
ದೇಶ
ಎಪ್ಸ್ಟೀನ್ ಫೈಲ್ಸ್ನಲ್ಲಿ ಹರ್ದೀಪ್ ಪುರಿ ಹೆಸರು? ಸಂಸತ್ತಿನಲ್ಲಿ ಗದ್ದಲ, ಸಚಿವರ ಸ್ಪಷ್ಟನೆ
ಹೊಸದಿಲ್ಲಿ: ಜಗತ್ತಿನಾದ್ಯಂತ ಸಂಚಲನ ಮೂಡಿಸಿರುವ ಜೆಫ್ರಿ ಎಪ್ಸ್ಟೀನ್ (Jeffrey Epstein) ಲೈಂಗಿಕ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೆರಿಕದ ನ್ಯಾಯಾಂಗ ಇಲಾಖೆ ಬಿಡುಗಡೆಗೊಳಿಸಿರುವ ಮಿಲಿಯನ್ಗಟ್ಟಲೆ ಇಮೇಲ್ಗಳು ಮತ್ತು ದಾಖಲೆಗಳು ಹೊಸ ರಾಜಕೀಯ ಚರ್ಚೆಗೆ ಕಾರಣವಾಗಿವೆ. ಈ ದಾಖಲೆಗಳಲ್ಲಿ ಕೆಲವು ಭಾರತೀಯರ ಹೆಸರುಗಳು ಕಾಣಿಸಿಕೊಂಡಿರುವುದು ಸಂಸತ್ತಿನಲ್ಲೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಈ ಪಟ್ಟಿಯಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ (Hardeep Singh Puri) ಅವರ ಹೆಸರು ಉಲ್ಲೇಖವಾಗಿರುವುದಾಗಿ ವರದಿಯಾಗುತ್ತಿದ್ದಂತೆಯೇ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಸಂಸತ್ತಿನೊಳಗೂ ಹೊರಗೂ ಮಾತನಾಡಿದ ಅವರು, ಎಪ್ಸ್ಟೀನ್ ಪ್ರಕರಣದ ಉಲ್ಲೇಖದೊಂದಿಗೆ ಕೇಂದ್ರ ಸರ್ಕಾರವನ್ನು ಟೀಕಿಸಿದರು.
ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಹರ್ದೀಪ್ ಪುರಿ, “ನಾನು ಜೆಫ್ರಿ ಎಪ್ಸ್ಟೀನ್ ಅವರನ್ನು ಕೆಲವೇ ಬಾರಿ, ಅದೂ ಔಪಚಾರಿಕ ಸಂದರ್ಭಗಳಲ್ಲಿ ಮಾತ್ರ ಭೇಟಿ ಮಾಡಿದ್ದೇನೆ. ಅವರ ಅಕ್ರಮ ಚಟುವಟಿಕೆಗಳಿಗೆ ನನ್ನೊಂದಿಗೆ ಯಾವುದೇ ಸಂಬಂಧವಿಲ್ಲ” ಎಂದು ಸ್ಪಷ್ಟಪಡಿಸಿದರು.
ಮೂರು ಮಿಲಿಯನ್ ಇಮೇಲ್ಗಳಲ್ಲಿ ತಮ್ಮ ಹೆಸರು ಕೇವಲ 3-4 ಬಾರಿ ಮಾತ್ರ ಉಲ್ಲೇಖವಾಗಿದೆ. ನಿಯೋಗದ ಭಾಗವಾಗಿ ಕೆಲ ಸಂದರ್ಭಗಳಲ್ಲಿ ಭೇಟಿಯಾಗಿದ್ದು, ಕೇವಲ ಒಂದು ಇಮೇಲ್ ವಿನಿಮಯ ಮಾಡಿಕೊಂಡಿದ್ದೇನೆ ಅಷ್ಟೇ ಹೊರತು, ಯಾವುದೇ ಅಕ್ರಮ ಸಂಬಂಧ ಇಲ್ಲ ಎಂದು ಹೇಳಿದರು.
ಇದೇ ವೇಳೆ, 2017ರಲ್ಲಿ ಪ್ರಧಾನಿ ನರೇಂದ್ರ ಮೋದಿ ಇಸ್ರೇಲ್ ಭೇಟಿ ಕುರಿತ ಉಲ್ಲೇಖಗಳನ್ನೂ ವಿದೇಶಾಂಗ ಸಚಿವಾಲಯ ತಳ್ಳಿಹಾಕಿದೆ. “ಇದು ಅಧಿಕೃತ ಭೇಟಿಯೇ ಹೊರತು, ಉಳಿದ ಉಲ್ಲೇಖಗಳು ಶಿಕ್ಷೆಗೊಳಗಾದ ಅಪರಾಧಿಯ ವ್ಯರ್ಥ ಕಲ್ಪನೆಗಳಾಗಿವೆ” ಎಂದು ವಕ್ತಾರ ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ.
ಎಪ್ಸ್ಟೀನ್ ಫೈಲ್ಸ್ ಪ್ರಕರಣ ಇದೀಗ ಭಾರತೀಯ ರಾಜಕೀಯದಲ್ಲೂ ಚರ್ಚೆಯ ಕೇಂದ್ರಬಿಂದುವಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ರಾಜಕೀಯ ಪ್ರತಿಕ್ರಿಯೆಗಳು ಎದುರಾಗುವ ಸಾಧ್ಯತೆ ಇದೆ.
ಕ್ರೀಡೆ
JAIN UNIVERSITY : ಜೈನ್ ಯುನಿವರ್ಸಿಟಿಯಲ್ಲಿ ಮಹಿಳಾ ಬಾಸ್ಕೆಟ್ಬಾಲ್ ಹಬ್ಬ
ಬೆಂಗಳೂರು, ಫೆ.11: ಕನಕಪುರ ರಸ್ತೆಯ ಜೈನ್ ಯುನಿವರ್ಸಿಟಿ ಗ್ಲೋಬಲ್ ಕ್ಯಾಂಪಸ್ನಲ್ಲಿ ನಡೆಯುತ್ತಿರುವ ಆಲ್ ಇಂಡಿಯಾ ಅಂತರ್ ವಿಶ್ವವಿದ್ಯಾಲಯ ಮಹಿಳಾ ಬಾಸ್ಕೆಟ್ಬಾಲ್ ಚಾಂಪಿಯನ್ಶಿಪ್ನಲ್ಲಿ (All India Inter University Women’s Basketball Championship) ಎರಡನೇ ದಿನದ ಲೀಗ್ ಪಂದ್ಯಗಳು ರೋಚಕತೆಯಿಂದ ಸಾಗಿದವು.
ಮೊದಲ ಪಂದ್ಯದಲ್ಲಿ ಚಂಡೀಗಢ ವಿಶ್ವವಿದ್ಯಾಲಯ 70-59 ಅಂತರದಲ್ಲಿ ಡಿಎವಿ ಇಂಡೋರ್ ತಂಡವನ್ನು ಮಣಿಸಿತು. ಕುಸುಭು (25) ಮತ್ತು ದೀಪ್ಷಿಖಾ (19) ಚಂಡೀಗಢ ತಂಡದ ಪರ ಮಿಂಚಿದರು.
ಎರಡನೇ ಪಂದ್ಯದಲ್ಲಿ ಆತಿಥೇಯ ಜೈನ್ ವಿಶ್ವವಿದ್ಯಾಲಯ 65-25 ಅಂತರದಲ್ಲಿ ಯುನಿವರ್ಸಿಟಿ ಆಫ್ ಕಲ್ಕತ್ತಾ ವಿರುದ್ಧ ಭರ್ಜರಿ ಗೆಲುವು ದಾಖಲಿಸಿತು. ಹರ್ಷಿತಾ (13) ಮತ್ತು ಆದ್ಯಾ ಗೌಡ (10) ಗಮನಾರ್ಹ ಆಟವಾಡಿದರು.
ಮೂರನೇ ಪಂದ್ಯದಲ್ಲಿ ಎಸ್ಆರ್ಎಂ ವಿಶ್ವವಿದ್ಯಾಲಯ 58-15 ಅಂತರದಲ್ಲಿ ಎಂಭಿಎಸ್ಪಿಎಸ್ಯು ಪಟಿಯಾಲಾ ವಿರುದ್ಧ ಜಯ ಸಾಧಿಸಿತು.
ನಾಲ್ಕನೇ ಪಂದ್ಯದಲ್ಲಿ ಲವ್ಲಿ ಪ್ರೊಫೆಷನಲ್ ಯುನಿವರ್ಸಿಟಿ 63-58 ಅಂತರದಲ್ಲಿ ಕ್ರೈಸ್ಟ್ ವಿಶ್ವವಿದ್ಯಾಲಯವನ್ನು ರೋಚಕವಾಗಿ ಸೋಲಿಸಿತು.
ಐದನೇ ಪಂದ್ಯದಲ್ಲಿ ಐಟಿಎಂ ವಿಶ್ವವಿದ್ಯಾಲಯ 65-30 ಅಂತರದಲ್ಲಿ ಎಸ್ಜಿಜಿವಿಎ ಯುನಿವರ್ಸಿಟಿಯನ್ನು ಮಣಿಸಿತು.
ಆರನೇ ಪಂದ್ಯದಲ್ಲಿ ಎಲ್ಎನ್ಐಪಿಇ ವಿಶ್ವವಿದ್ಯಾಲಯ 68-28 ಅಂತರದಲ್ಲಿ ಪಂಡಿತ್ ರವಿ ಶಂಕರ್ ವಿಶ್ವವಿದ್ಯಾಲಯವನ್ನು ಸೋಲಿಸಿತು.
ಇದಕ್ಕೂ ಮೊದಲು ಫೆ.10ರ ಸಂಜೆ ನಡೆದ ಲೀಗ್ ಪಂದ್ಯಗಳಲ್ಲಿ ಚಂಡೀಗಢ ವಿಶ್ವವಿದ್ಯಾಲಯ, ಲವ್ಲಿ ಪ್ರೊಫೆಷನಲ್ ಯುನಿವರ್ಸಿಟಿ ಹಾಗೂ ಎಂಜಿ ಯುನಿವರ್ಸಿಟಿ ಕೊಟ್ಟಾಯಂ ಜಯಗಳಿಸಿದ್ದವು.
ಟೂರ್ನಿಯ ಮುಂದಿನ ಲೀಗ್ ಪಂದ್ಯಗಳು ಹಾಗೂ ನಾಕೌಟ್ ಹಂತದ ಪಂದ್ಯಗಳಿಗೆ ಕ್ರೀಡಾಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.
ದೇಶ
LATEST : ರಾಹುಲ್ ಗಾಂಧಿ ವಿರುದ್ಧ ಹಕ್ಕುಚ್ಯುತಿ ಪ್ರಸ್ತಾವನೆ? ರಿಜುಜು ಕಿಡಿ
ನವದೆಹಲಿ: ಸದನಕ್ಕೆ ತಪ್ಪು ಮಾಹಿತಿ ನೀಡಿದ್ದು ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿರುವ ಹಿನ್ನೆಲೆಯಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ವಿರುದ್ಧ ಹಕ್ಕುಚ್ಯುತಿ (Breach of Privilege) ಪ್ರಸ್ತಾವನೆ ಮಂಡಿಸಲಾಗುವುದು ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜುಜು (Kiren Rijiju) ತಿಳಿಸಿದ್ದಾರೆ.
ಬಜೆಟ್ ಮೇಲಿನ ಚರ್ಚೆ ವೇಳೆ ರಾಹುಲ್ ಗಾಂಧಿ ಕೇಂದ್ರ ಸರ್ಕಾರವು ‘ಭಾರತ ಮಾತೆಯನ್ನು ಮಾರಿಬಿಟ್ಟಿದೆ’ ಎಂದು ಆರೋಪಿಸಿದ್ದರು. ಭಾರತ–ಅಮೆರಿಕ ವಾಣಿಜ್ಯ ಒಪ್ಪಂದವನ್ನು ‘ಸಂಪೂರ್ಣ ಶರಣಾಗತಿ’ ಎಂದು ಟೀಕಿಸಿದ ಅವರು, ದೇಶದ ಶಕ್ತಿ ಸುರಕ್ಷತೆ ಅಮೆರಿಕಕ್ಕೆ ಒಪ್ಪಿಸಲಾಗಿದೆ ಹಾಗೂ ರೈತರ ಹಿತಾಸಕ್ತಿಗಳನ್ನು ರಾಜಿ ಮಾಡಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಈ ಹೇಳಿಕೆಗಳಿಗೆ ತೀವ್ರ ಪ್ರತಿಕ್ರಿಯೆ ನೀಡಿದ ಕಿರಣ್ ರಿಜುಜು, ರಾಹುಲ್ ಗಾಂಧಿ ಸರ್ಕಾರ ಮತ್ತು ಪ್ರಧಾನಮಂತ್ರಿ ವಿರುದ್ಧ ಸುಳ್ಳು ಹಾಗೂ ಆಧಾರರಹಿತ ಆರೋಪ ಮಾಡಿದ್ದಾರೆ ಎಂದು ಆರೋಪಿಸಿದರು. “ಭಾರತವನ್ನು ಯಾರೂ ಮಾರಲಾರರು, ಖರೀದಿಸಲಾರರು. ಗಂಭೀರ ಆರೋಪ ಮಾಡಲು ನಿಯಮಾನುಸಾರ ಮುಂಚಿತ ನೋಟಿಸ್ ನೀಡಬೇಕು ಮತ್ತು ಪುರಾವೆ ಸಲ್ಲಿಸಬೇಕು. ಆದರೆ ರಾಹುಲ್ ಗಾಂಧಿ ಯಾವುದೇ ಪುರಾವೆ ಇಲ್ಲದೆ ಆರೋಪ ಮಾಡಿದ್ದಾರೆ,” ಎಂದು ರಿಜುಜು ಹೇಳಿದರು.
ಇದಲ್ಲದೆ, ರಾಹುಲ್ ಗಾಂಧಿ ಅವರ ಭಾಷಣದಲ್ಲಿ ದಾಖಲಾಗಿರುವ ತಪ್ಪು ಹೇಳಿಕೆಗಳು ಮತ್ತು ಅಸಭ್ಯ ಪದಗಳನ್ನು ಸದನದ ದಾಖಲೆಗಳಿಂದ ತೆಗೆದುಹಾಕಬೇಕು ಎಂದು ಅವರು ಒತ್ತಾಯಿಸಿದರು. ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ವಿರುದ್ಧವೂ ನೋಟಿಸ್ ಇಲ್ಲದೆ ಗಂಭೀರ ಆರೋಪ ಮಾಡಲಾಗಿದೆ ಎಂದು ರಿಜುಜು ತಿಳಿಸಿದರು.
ಈ ಬೆಳವಣಿಗೆಗಳ ನಡುವೆ ಸಂಸತ್ ಕಲಾಪದಲ್ಲಿ ಮತ್ತಷ್ಟು ರಾಜಕೀಯ ಉದ್ವಿಗ್ನತೆ ಉಂಟಾಗುವ ಸಾಧ್ಯತೆ ಇದೆ.
-
ದೇಶ17 hours agoರಾಷ್ಟ್ರಗೀತೆಗೆ ಮುನ್ನ ವಂದೇ ಮಾತರಂ ಹಾಡುವುದು ಕಡ್ಡಾಯ
-
ದೇಶ23 hours agoಬಿ.ಕೆ. ಹರಿಪ್ರಸಾದ್ ಅವರನ್ನು ತಕ್ಷಣವೇ ರಾಜ್ಯ ಸಂಪುಟಕ್ಕೆ ಸೇರಿಸಿ ಉಪ ಮುಖ್ಯಮಂತ್ರಿ ಮಾಡಬೇಕು: ರಾಷ್ಟ್ರೀಯ ಅಹಿಂದ ಸಂಘಟನೆ ಆಗ್ರಹ
-
ಚುನಾವಣೆ23 hours agoBENGALURU : ವಾರ್ಡ್ ಮರುವಿಂಗಡಣೆ ವಿರೋಧಿಸಿ ಶಾಸಕ ಎಂ. ಕೃಷ್ಣಪ್ಪ ಹೈಕೋರ್ಟ್ ಅರ್ಜಿ
-
ದೇಶ15 hours agoBIG NEWS : ಫೆ.12 ರಾಷ್ಟ್ರವ್ಯಾಪಿ ಮುಷ್ಕರ: 30 ಕೋಟಿ ಕಾರ್ಮಿಕರು ಬೀದಿಗೆ? ಬ್ಯಾಂಕ್, ಸಾರಿಗೆ ಸೇವೆಗೆ ಹೊಡೆತ ಸಾಧ್ಯತೆ
-
ದೇಶ24 hours agoDigital Services Tax: ಡಿಜಿಟಲ್ ತೆರಿಗೆಗೆ ಅಮೆರಿಕದ ವಿರೋಧ ಏಕೆ?
-
ಕ್ರೀಡೆ16 hours agoT20 WORLD CUP : ಡಬಲ್ ಸೂಪರ್ ಓವರ್ನಲ್ಲಿ ದಕ್ಷಿಣ ಆಫ್ರಿಕಾದ ರೋಚಕ ಗೆಲುವು
-
ದೇಶ23 hours agoಚರ್ಚೆ ಮುಗಿಯುವವರೆಗೆ ಸದನಕ್ಕೆ ಹಾಜರಾಗಲ್ಲ ಎಂದ ಲೋಕಸಭಾ ಸ್ಪೀಕರ್
-
ದೇಶ14 hours agoLATEST : ರಾಹುಲ್ ಗಾಂಧಿ ವಿರುದ್ಧ ಹಕ್ಕುಚ್ಯುತಿ ಪ್ರಸ್ತಾವನೆ? ರಿಜುಜು ಕಿಡಿ
