ಬಿಬಿಎಂಪಿ
ಬೆಂಗಳೂರು ಬಂದ್ ಗೆ ಮಿಶ್ರ ಪ್ರತಿಕ್ರಿಯೆ:ಎಂದಿನಂತೆ ಬಸ್ ಗಳ ಓಡಾಟ!
ಬೆಂಗಳೂರು ಬಂದ್ ಗೆ ಆಟೋ, ಟ್ಯಾಕ್ಸಿ ಸಂಘಟನೆಗಳ ಬೆಂಬಲ ಇಲ್ಲದ ಪರಿಣಾಮ ಆಟೋಗಳು ರಸ್ತೆಗಿಳಿದಿವೆ. ನಗರದಲ್ಲಿ ಆಟೋ ಸಂಚಾರ ಎಂದಿನಂತೆ ಇವೆ. ಟ್ಯಾಕ್ಸಿಗಳು ಕೂಡಾ ಸಂಚಾರ ನಡೆಸುತ್ತಿವೆ.ಜನರ ಓಡಾಟ ಕೊಂಚ ಕಡಿಮೆ ಬಂದ್ ಬಿಸಿ ತೀವ್ರವಾಗಿ ಕಾಣಿಸುತ್ತಿಲ್ಲ.ನಗರದ ಪ್ರಮುಖ ಜಂಕ್ಷನ್ ಗಳು ಹಾಗೂ ಪ್ರಸಿದ್ದ ಕಟ್ಟಡಗಳು, ಸೂಕ್ಷ್ಮ ಪ್ರದೇಶಗಳಲ್ಲಿ ರಾತ್ರಿಯಿಂದಲೇ ಪೊಲೀಸರು ಗಸ್ತು ತಿರುಗುತ್ತಿದ್ದಾರೆ.ಬೆಂಗಳೂರು ಬಂದ್ ಕರೆ ಹಿನ್ನೆಲೆ ಎಲ್ಲಾ ಸಂಘಟನೆಗಳ ಮುಖಂಡರನ್ನು ಪೊಲೀಸರು ಸಂಪರ್ಕಿಸಿದ್ದಾರೆ. ಪ್ರತಿಭಟನೆಯಲ್ಲಿ ಭಾಗಿಯಾದ ವೇಳೆ ಸಂಘಟನೆಗಳ ವ್ಯಕ್ತಿಗಳು ಪ್ರಚೋದನಕಾರಿ ಹಾಗೂ ಸಮಸ್ಯೆ ಮಾಡಿದ್ದಲ್ಲಿ ಶಿಸ್ತುಕ್ರಮದ ಎಚ್ಚರಿಕೆ ನೀಡಿದ್ದಾರೆ. ಆಯಾ ಠಾಣಾ ವ್ಯಾಪ್ತಿಯಲ್ಲಿ ಸಂಘಟನೆಗಳ ಬಗ್ಗೆ ಎಚ್ಚರಿಕೆ ವಹಿಸಲು ಹಿರಿಯ ಅಧಿಕಾರಿಗಳ ಸೂಚನೆ ನೀಡಿದ್ದಾರೆ.ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ಮಧ್ಯರಾತ್ರಿ 12 ಗಂಟೆಯಿಂದಲೇ ನಿಷೇಧಾಜ್ಞೆ ಜಾರಿ ಮಾಡಲಾಗಿದ್ದು, ಮಂಗಳವಾರ ಮಧ್ಯೆ ರಾತ್ರಿ 12 ಗಂಟೆಯವರೆಗೆ ಇರಲಿದೆ.
ಬಂದ್ ಹಿನ್ನೆಲೆಯಲ್ಲಿ ನಗರದಾದ್ಯಂತ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಎಲ್ಲೆಡೆ ಪೊಲೀಸರು ತೀವ್ರ ಕಟ್ಟೆಚ್ಚರ ವಹಿಸಿದ್ದು, ತಮಿಳು ಭಾಷಿಕರಿರುವ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಕೆಎಸ್ಆರ್ಪಿಯ 60 ತುಕಡಿ ಮತ್ತು ಸಿಎಆರ್ನ 40 ತುಕಡಿಗಳನ್ನು ಹೆಚ್ಚುವರಿಯಾಗಿ ಭದ್ರತಾ ಕಾರ್ಯಕ್ಕೆ ನಿಯೋಜಿಸಲಾಗಿದೆ. ಸಿವಿಲ್ ಪೊಲೀಸರೊಂದಿಗೆ ಸಿಐಡಿ, ಐಎಸ್ಡಿ ಅಧಿಕಾರಿಗಳೂ ಭದ್ರತಾ ಕರ್ತವ್ಯ ನಿರ್ವಹಿಸುತ್ತಿದ್ದಾರೆ.ಮಧ್ಯರಾತ್ರಿಯೇ ಪೊಲೀಸರು ನಗರದ ಪ್ರಮುಖ ಪ್ರದೇಶಗಳಲ್ಲಿ ಗಸ್ತು ಹೆಚ್ಚಿಸಿದ್ದರು. ಇನ್ನು ಮೆಜೆಸ್ಟಿಕ್, ರೈಲು ನಿಲ್ದಾಣಗಳಲ್ಲಿ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಿ ನಿಗಾವಹಿಸಲಾಗಿತ್ತು.ಯಾವುದೇ ಒಂದು ಪ್ರದೇಶಲ್ಲಿ ಸೆಕ್ಷನ್ 144 ಜಾರಿ ಮಾಡಿದರೆ ಸಂಬಂಧಿತ ಪ್ರದೇಶದಲ್ಲಿ ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ಜನರು ಸೇರುವುದನ್ನು ನಿಷೇಧವಾಗಿದೆ. ಒಂದು ವೇಳೆ ಆ ರೀತಿಯಲ್ಲಿ ಅನುಮತಿ ಇಲ್ಲದೆ ಗುಂಪು ಸೇರಿದರೆ ಪೊಲೀಸ್ ಪ್ರಕರಣ ದಾಖಲಿಸಲಿದ್ದಾರೆ.’ಬಂದ್ಗೆ ಕರೆ ಕೊಟ್ಟಿರುವ ಸಂಘಟನೆಗಳು ಟೌನ್ಹಾಲ್ನಿಂದ ಫ್ರೀಡಂ ಪಾರ್ಕ್ ವರೆರೆಗೆ ಜಾಥ ಮಾಡಲು ಅವಕಾಶ ಕೇಳಿವೆ. ಆದರೆ, ಕೋರ್ಟ್ನ ಆದೇಶದ ಕಾರಣಕ್ಕೆ ಜಾಥಾ ಅವಕಾಶ ಕೊಟ್ಟಿಲ್ಲ. ಬಂದ್ ವೇಳೆ ಯಾವುದೇ ಅಹಿತಕರ ಘಟನೆಗೆ ಅವಕಾಶ ನೀಡಬಾರದು. ಸರಕಾರಿ ಮತ್ತು ಸಾರ್ವಜನಿಕ ಆಸ್ತಿಗಳಿಗೆ ಹಾನಿಯುಂಟಾಗಬಾರದು, ಜನರಿಗೆ ತೊಂದರೆಯಾಗುವುದನ್ನೂ ಸಹಿಸುವುದಿಲ್ಲ ಎಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನಿಂದ ತಮಿಳುನಾಡಿಗೆ ಸಂಚರಿಸುತ್ತಿದ್ದ ರಾಜ್ಯದ ಸುಮಾರು 500 ಬಸ್ಗಳ ಸಂಚಾರ ಸ್ಥಗಿತಗೊಂಡಿದೆ. ಬೆರಳಣಿಕೆಯಷ್ಟು ತಮಿಳುನಾಡಿನ ಬಸ್ಗಳು ಸಂಚಾರ ನಡೆಸುತ್ತಿವೆ. ತುರ್ತು ಪರಿಸ್ಥಿತಿ ನಿರ್ಮಾಣವಾದ್ರೆ ತಮಿಳುನಾಡಿನ ಬಸ್ಗಳಿಗೆ ಎಸ್ಕಾರ್ಟ್ ನೀಡಲು ಪೊಲೀಸರು ಸಿದ್ಧರಾಗಿದ್ದಾರೆ.
ಚುನಾವಣೆ
GBA ELECTION : ಜುಲೈ ಮೊದಲ ವಾರದಲ್ಲೇ ವೇಳಾಪಟ್ಟಿ? ಬೆಂಗಳೂರು ರಾಜಕೀಯ ಕಣ ರಂಗೇರಲು ಸಜ್ಜು
ಬೆಂಗಳೂರು: ಸುಪ್ರೀಂ ಕೋರ್ಟ್ ನೀಡಿರುವ ಕಟ್ಟುನಿಟ್ಟಿನ ಆದೇಶದ ಹಿನ್ನೆಲೆಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಐದು ನಗರಪಾಲಿಕೆಗಳ ಚುನಾವಣೆ ಆಗಸ್ಟ್ 31ರೊಳಗೆ ನಡೆಸುವುದು ಬಹುತೇಕ ಖಚಿತವಾಗಿದೆ. ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಚುನಾವಣಾ ಆಯೋಗವು ಈಗಾಗಲೇ ಅಗತ್ಯ ಸಿದ್ಧತೆಗಳನ್ನು ಆರಂಭಿಸಿದೆ.
ಮೂಲಗಳ ಪ್ರಕಾರ, ಜುಲೈ ಮೊದಲ ಅಥವಾ ಎರಡನೇ ವಾರದಲ್ಲಿ ಅಧಿಕೃತ ಚುನಾವಣಾ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ. ಜುಲೈ 10ರೊಳಗೆ ದಿನಾಂಕ ಘೋಷಣೆಯಾಗಬಹುದು ಎಂದು ಹೇಳಲಾಗುತ್ತಿದ್ದು, ವೇಳಾಪಟ್ಟಿ ಪ್ರಕಟವಾದ ತಕ್ಷಣವೇ ಬೆಂಗಳೂರು ನಗರದಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಬರಲಿದೆ. ಆಗಸ್ಟ್ ಮೂರನೇ ವಾರದಲ್ಲಿ ಮತದಾನ ನಡೆಸುವ ಬಗ್ಗೆ ಆಯೋಗ ಚಿಂತನೆ ನಡೆಸಿದೆ.
ಈ ಹಿಂದೆ ಜೂನ್ 30ರೊಳಗೆ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಗಡುವು ನೀಡಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಹಾಗೂ ಸಿಬ್ಬಂದಿ ಕೊರತೆಯನ್ನು ಪರಿಗಣಿಸಿ ನ್ಯಾಯಾಲಯವು ಗಡುವನ್ನು ಆಗಸ್ಟ್ 31ರವರೆಗೆ ವಿಸ್ತರಿಸಿತ್ತು. ಜೊತೆಗೆ, ಯಾವುದೇ ಕಾರಣಕ್ಕೂ ಮತ್ತೆ ಚುನಾವಣೆ ಮುಂದೂಡುವ ಪ್ರಸ್ತಾಪವನ್ನು ತನ್ನ ಮುಂದೆ ತರಬಾರದು ಎಂದು ರಾಜ್ಯ ಸರ್ಕಾರಕ್ಕೆ ಸ್ಪಷ್ಟ ಎಚ್ಚರಿಕೆ ನೀಡಿದೆ. ಸೆಪ್ಟೆಂಬರ್ ಅಂತ್ಯದವರೆಗೆ ಕಾಲಾವಕಾಶ ನೀಡುವಂತೆ ಸರ್ಕಾರ ಸಲ್ಲಿಸಿದ್ದ ಮನವಿಯನ್ನೂ ನ್ಯಾಯಾಲಯ ತಿರಸ್ಕರಿಸಿದೆ.
ಇದರ ಬೆನ್ನಲ್ಲೇ ರಾಜ್ಯ ಚುನಾವಣಾ ಆಯೋಗವು ಮತದಾರರ ಪಟ್ಟಿ ಅಂತಿಮಗೊಳಿಸುವುದು, ಮತಗಟ್ಟೆಗಳ ಸಿದ್ಧತೆ ಹಾಗೂ ಸಿಬ್ಬಂದಿ ನಿಯೋಜನೆ ಸೇರಿದಂತೆ ಹಲವು ಕಾರ್ಯಗಳಲ್ಲಿ ತೊಡಗಿದೆ. ರಾಜಕೀಯ ಪಕ್ಷಗಳೂ ಚುನಾವಣೆಗೆ ಸಜ್ಜಾಗಿವೆ. ಕಾಂಗ್ರೆಸ್ ತನ್ನ ಗ್ಯಾರಂಟಿ ಯೋಜನೆಗಳು ಮತ್ತು ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸಲು ಕಾರ್ಯಕರ್ತರಿಗೆ ಸೂಚನೆ ನೀಡಿದೆ. ಬಿಜೆಪಿ, ಕಳೆದ ಆರು ವರ್ಷಗಳಿಂದ ಚುನಾವಣೆ ನಡೆಯದ ಪರಿಣಾಮ ಅಭಿವೃದ್ಧಿಗೆ ಹಿನ್ನಡೆಯಾಗಿದೆ ಎಂದು ಆರೋಪಿಸುತ್ತಿದೆ. ಇತ್ತ ಬಿಜೆಪಿ-ಜೆಡಿಎಸ್ ಮೈತ್ರಿಯೂ ಚುನಾವಣಾ ಅಖಾಡಕ್ಕೆ ಸಜ್ಜಾಗಿದ್ದು, ಪಂಚ ಪಾಲಿಕೆ ಚುನಾವಣೆ ಭಾರೀ ಪೈಪೋಟಿಗೆ ಸಾಕ್ಷಿಯಾಗುವ ನಿರೀಕ್ಷೆ ಮೂಡಿದೆ.
ದೇಶ
ರಾಮಲಿಂಗಾರೆಡ್ಡಿ ಬಳಿಕ ಮುನಿಯಪ್ಪ ಬಂಡಾಯ! ಕಾಂಗ್ರೆಸ್ ಹೈಕಮಾಂಡ್ ತುರ್ತು ಸಭೆ
ದೇವನಹಳ್ಳಿ, ಜೂನ್ 5: ನೂತನ ಮುಖ್ಯಮಂತ್ರಿ D. K. Shivakumar ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಖಾತೆ ಹಂಚಿಕೆಯ ಬೆನ್ನಲ್ಲೇ ಅಸಮಾಧಾನದ ಹೊಗೆ ದಟ್ಟವಾಗುತ್ತಿದೆ. ಹಿರಿಯ ನಾಯಕ Ramalinga Reddy ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿದ ಬೆನ್ನಲ್ಲೇ ಆಹಾರ ಸಚಿವ K. H. Muniyappa ಕೂಡ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿರುವುದು ಕಾಂಗ್ರೆಸ್ ಹೈಕಮಾಂಡ್ಗೆ ತಲೆನೋವಾಗಿ ಪರಿಣಮಿಸಿದೆ.
ಈ ಬೆಳವಣಿಗೆಯಿಂದ ಎಚ್ಚೆತ್ತುಕೊಂಡಿರುವ ಕಾಂಗ್ರೆಸ್ ವರಿಷ್ಠರು, ಸರ್ಕಾರದ ಆರಂಭದಲ್ಲೇ ಉಂಟಾಗಿರುವ ಬಿಕ್ಕಟ್ಟನ್ನು ಶಮನಗೊಳಿಸಲು ದೇವನಹಳ್ಳಿ ಬಳಿಯ Kempegowda International Airport ಸಮೀಪದ ವಿಐಪಿ ಲಾಂಜ್ ಹಾಗೂ ತಾಜ್ ಹೋಟೆಲ್ನಲ್ಲಿ ಮಹತ್ವದ ಸಭೆ ನಡೆಸಿದ್ದಾರೆ.
ಸಭೆಯಲ್ಲಿ ಕಾಂಗ್ರೆಸ್ ನಾಯಕ Rahul Gandhi, ಎಐಸಿಸಿ ಉಸ್ತುವಾರಿ Randeep Singh Surjewala, ಮಾಜಿ ಮುಖ್ಯಮಂತ್ರಿ Siddaramaiah ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗವಹಿಸಿದ್ದು, ಅಸಮಾಧಾನಗೊಂಡಿರುವ ನಾಯಕರನ್ನು ಮನವೊಲಿಸುವ ಪ್ರಯತ್ನ ನಡೆದಿದೆ.
ಖಾತೆ ಹಂಚಿಕೆಯಲ್ಲಿ ತಮ್ಮ ಹಿರಿತನಕ್ಕೆ ಸೂಕ್ತ ಗೌರವ ಸಿಕ್ಕಿಲ್ಲ ಎಂದು ಬೇಸರಗೊಂಡಿರುವ ಕೆ.ಎಚ್. ಮುನಿಯಪ್ಪ, ತಮಗೆ ಕೃಷಿ ಅಥವಾ ಸಮಾಜ ಕಲ್ಯಾಣ ಇಲಾಖೆಯನ್ನು ನೀಡುವಂತೆ ವರಿಷ್ಠರ ಮುಂದೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಅಲ್ಲದೆ, ತಮಗೆ ಹಂಚಿಕೆಯಾಗಿರುವ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜವಾಬ್ದಾರಿಯನ್ನು ಸ್ವೀಕರಿಸುವುದಿಲ್ಲ ಎಂದು ಅವರು ಹಠ ಹಿಡಿದಿರುವುದು ಸರ್ಕಾರಕ್ಕೆ ಮತ್ತಷ್ಟು ಮುಜುಗರ ಉಂಟುಮಾಡಿದೆ.
ಇದಕ್ಕೂ ಮುನ್ನ ಬೆಂಗಳೂರು ನಗರಾಭಿವೃದ್ಧಿ ಖಾತೆ ಕೈತಪ್ಪಿದ್ದರಿಂದ ಅಸಮಾಧಾನಗೊಂಡ ರಾಮಲಿಂಗಾರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದರು. ಇದರಿಂದ ಸರ್ಕಾರ ರಚನೆಯಾದ ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಒಳಗೆ ಭಿನ್ನಮತದ ಧ್ವನಿ ಜೋರಾಗಿದೆ.
ಈ ಬೆಳವಣಿಗೆಗಳು ಕಾಂಗ್ರೆಸ್ ಸರ್ಕಾರಕ್ಕೆ ಆರಂಭದಲ್ಲೇ ರಾಜಕೀಯ ಸವಾಲುಗಳನ್ನು ತಂದೊಡ್ಡಿದ್ದು, ಹೈಕಮಾಂಡ್ ನಡೆಸುತ್ತಿರುವ ಈ ಹೈವೋಲ್ಟೇಜ್ ಸಭೆಯ ಫಲಿತಾಂಶದ ಮೇಲೆ ರಾಜ್ಯ ರಾಜಕಾರಣದ ಮುಂದಿನ ಬೆಳವಣಿಗೆಗಳು ಅವಲಂಬಿತವಾಗಿವೆ.
ಚುನಾವಣೆ
ಪೆರಂಬೂರ್ ಕಣಕ್ಕೆ ನಟ ವಿಜಯ್ ಎಂಟ್ರಿ: ತಮಿಳುನಾಡು ರಾಜಕೀಯದಲ್ಲಿ ಸಂಚಲನ
ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುನ್ನ ನಟ Vijay ನೇತೃತ್ವದ Tamilaga Vettri Kazhagam (TVK) ಪಕ್ಷದ ರಾಜಕೀಯ ಪ್ರವೇಶ ರಾಜ್ಯ ರಾಜಕೀಯ ಸಮೀಕರಣಗಳಲ್ಲಿ ಭಾರೀ ಬದಲಾವಣೆ ತಂದಿದೆ. ವಿಶೇಷವಾಗಿ, ವಿಜಯ್ ಅವರು ಪೆರಂಬೂರ್ ವಿಧಾನಸಭಾ ಕ್ಷೇತ್ರವನ್ನು ತಮ್ಮ ಚೊಚ್ಚಲ ಚುನಾವಣಾ ಕಣವಾಗಿ ಆರಿಸಿಕೊಂಡಿರುವುದು ದೊಡ್ಡ ಚರ್ಚೆಗೆ ಕಾರಣವಾಗಿದೆ.
Perambur ಕ್ಷೇತ್ರವು ಸಾಂಪ್ರದಾಯಿಕವಾಗಿ ದ್ರಾವಿಡ ಪಕ್ಷಗಳ ಭದ್ರಕೋಟೆಯಾಗಿದ್ದರೂ, ಈ ಬಾರಿ ವಿಜಯ್ ಪ್ರವೇಶದಿಂದಾಗಿ ಹೈ-ಪ್ರೊಫೈಲ್ ಕಣವಾಗಿ ಪರಿಣಮಿಸಿದೆ. Dravida Munnetra Kazhagam (DMK) ಮತ್ತು All India Anna Dravida Munnetra Kazhagam (AIADMK) ಪಕ್ಷಗಳಿಗೆ ಇದು ಹೊಸ ಸವಾಲಾಗಿ ಪರಿಣಮಿಸಿದೆ.
ಈ ಕ್ಷೇತ್ರದಲ್ಲಿ ಡಿಎಂಕೆ ಒಂಬತ್ತು ಬಾರಿ ಗೆಲುವು ಸಾಧಿಸಿದ್ದು, ಸತ್ಯವಾಣಿ ಮುತ್ತು ಮತ್ತು ಪರಿಥಿ ಇಲಂವಝುತಿ ಅವರಂತಹ ನಾಯಕರಿಂದ ರಾಜಕೀಯ ಇತಿಹಾಸ ರೂಪುಗೊಂಡಿದೆ. 2016ರಲ್ಲಿ ಎಐಎಡಿಎಂಕೆ ಅಲ್ಪ ಅಂತರದಲ್ಲಿ ಗೆಲುವು ಸಾಧಿಸಿದರೂ, 2019ರ ಉಪಚುನಾವಣೆ ಮತ್ತು 2021ರ ಚುನಾವಣೆಯಲ್ಲಿ ಡಿಎಂಕೆ ಮತ್ತೆ ತನ್ನ ಪ್ರಾಬಲ್ಯವನ್ನು ಸ್ಥಾಪಿಸಿತ್ತು.
ಸುಮಾರು 2.22 ಲಕ್ಷಕ್ಕೂ ಹೆಚ್ಚು ಮತದಾರರನ್ನು ಹೊಂದಿರುವ ಪೆರಂಬೂರ್ ಕ್ಷೇತ್ರದಲ್ಲಿ ಮಹಿಳಾ ಮತದಾರರ ಸಂಖ್ಯೆ ಹೆಚ್ಚಿರುವುದು ಗಮನಾರ್ಹ. ಯುವಕರು ಮತ್ತು ಕಾರ್ಮಿಕ ವರ್ಗದ ಪ್ರಭಾವ ಹೆಚ್ಚಿರುವ ಈ ಪ್ರದೇಶದಲ್ಲಿ ಉದ್ಯೋಗ, ಹಣದುಬ್ಬರ ನಿಯಂತ್ರಣ, ವಸತಿ ಮತ್ತು ಮೂಲಸೌಕರ್ಯ ಪ್ರಮುಖ ಚುನಾವಣಾ ವಿಷಯಗಳಾಗಿವೆ.
ವಿಜಯ್ ಅವರ ಯುವಜನಪ್ರಿಯತೆ ಈ ಬಾರಿ ದ್ರಾವಿಡ ಪಕ್ಷಗಳ ದೀರ್ಘಕಾಲದ ಹಿಡಿತವನ್ನು ಸವಾಲು ಮಾಡಬಹುದು ಎಂದು ರಾಜಕೀಯ ವೀಕ್ಷಕರು ಅಭಿಪ್ರಾಯಪಟ್ಟಿದ್ದಾರೆ. ಪೆರಂಬೂರ್ ಕಣ ಇದೀಗ ಸಾಮಾನ್ಯ ಚುನಾವಣೆ ಮಾತ್ರವಲ್ಲ, ಹೊಸ ರಾಜಕೀಯ ಶಕ್ತಿಯ ಪರೀಕ್ಷೆಯಾಗಿ ಪರಿಣಮಿಸಿದೆ.
-
ದೇಶ13 hours agoಅಲಿ ಖಮೇನಿ ಅಂತಿಮಯಾತ್ರೆ ಆರಂಭ: ತೆಹ್ರಾನ್ ಬೀದಿಗಳಲ್ಲಿ ಲಕ್ಷಾಂತರ ಜನರ ಅಂತಿಮ ನಮನ
-
ದೇಶ19 hours agoSakkath Santhe 2026: ಗೃಹ ಉತ್ಪನ್ನಗಳಿಗೆ ವೇದಿಕೆ, ಇಂದಿರಾನಗರದಲ್ಲಿ ಜನಸಾಗರ
-
ದೇಶ16 hours agoಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ! ಜುಲೈ 6ರ ಬೆಂಗಳೂರು ಗೋಲ್ಡ್ ರೇಟ್ ಇಲ್ಲಿದೆ
-
ದೇಶ17 hours agoರಾಜಾಜಿನಗರ ಶಾಸಕರ ಕಚೇರಿ ಮುಂದೆ ಹೈಡ್ರಾಮಾ: ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ವಾಗ್ವಾದ
-
ದೇಶ15 hours ago“ಇನ್ನೆಷ್ಟು ಜನ ಸತ್ತರೆ ಕ್ರಮ?” ಸರ್ಕಾರವನ್ನು ನೇರವಾಗಿ ಪ್ರಶ್ನಿಸಿದ ಎಸ್.ಟಿ. ಸೋಮಶೇಖರ್
-
ದೇಶ14 hours ago‘ಮಸೀದಿ, ಚೌಲ್ಟ್ರಿಗಳಲ್ಲಿ ಸಾಮೂಹಿಕ SIR’ – ಚುನಾವಣಾ ಆಯೋಗದ ಮೆಟ್ಟಿಲೇರಿದ ಬಿಜೆಪಿ-ಜೆಡಿಎಸ್
-
ದೇಶ17 hours agoPoK ಪ್ರತಿಭಟನೆ ತೀವ್ರ: ‘ಗಡಿ ತೆರೆಯಿರಿ, ಮಾನವೀಯ ನೆರವು ನೀಡಿ’ ಎಂದು ಭಾರತದತ್ತ ಮೊರೆ
-
ದೇಶ14 hours agoಚೀನಾ-ಪಾಕ್ ಜಲಾಂತರ್ಗಾಮಿಗಳಿಗೆ ಭಾರತದ ಹೈಟೆಕ್ ಬ್ರಹ್ಮಾಸ್ತ್ರ! ಸಮುದ್ರದಾಳದಲ್ಲಿ ‘ಸೀಕ್ರೆಟ್ ಸೆನ್ಸಾರ್ ನೆಟ್ವರ್ಕ್’
